Tag: ಮಂಡ್ಯ

  • ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

    ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

    – ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

    ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

    ಗಡ್ಕರಿ ಅವರ ದೆಹಲಿ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜೊತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

    ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

    ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದಸರಗುಪ್ಪೆ ನೀರು ಸಂಸ್ಕರಣ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.  ಇದನ್ನೂ ಓದಿ: ಎಎಸ್ಪಿ ಕಾರಿಗೆ ಡಿಕ್ಕಿ – ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್

  • ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

    ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

    ಮಂಡ್ಯ: ನನ್ನ ಪತಿ ಹೇಳುತ್ತಿರುವುದು ಬರೀ ಸುಳ್ಳು. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರಬಹುದು ಎಂದು ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ಸಾಕ್ಷಿದಾರ ಅನಾಮಿಕನ ಮೊದಲ ಪತ್ನಿ (Mask Man Wife) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, 1999ರಲ್ಲಿ ಮದುವೆ, 7 ವರ್ಷ ಸಂಸಾರ ಮಾಡಿದ್ದೆವು‌. ಆತನ ಗುಣ ಸರಿ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದ. ನನಗೆ ಹೊಡೆಯುವುದು, ಕೆಟ್ಟ ಮಾತುಗಳಿಂದ ಬೈಯುತ್ತಿದ್ದ. ದೇವಸ್ಥಾನಕ್ಕೆ ಆ ರೀತಿ ಮೋಸ ಮಾಡಬಾರದು. ಆತ ಬೇರೊಬ್ಬಳ ಜೊತೆ ಸಂಸಾರ ಮಾಡಲು ನನ್ನನ್ನೇ ಓಡಿಸಿದ್ದ ಎಂದು ತಿಳಿಸಿದರು.

    ಮೊದಲ ಪತ್ನಿ ಹೇಳಿದ್ದೇನು?
    1999 ರಲ್ಲಿ ನಮಗೆ ಮದುವೆಯಾಗಿತ್ತು. 7 ವರ್ಷ ನಾನು ಆತನ ಜೊತೆ ಸಂಸಾರ ಮಾಡಿದ್ದೆ. ನಮಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ವಿಚ್ಚೇದನ ವೇಳೆ ಜೀವನಾಂಶ ಕೊಡಲು ನಾನು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಸುಳ್ಳು ಹೇಳಿದ್ದ. ನನಗೆ ಅಲ್ಲೂ ನನಗೆ ನ್ಯಾಯ ಸಿಗಲಿಲ್ಲ. ನನ್ನ ತಾಯಿಯೇ ನನ್ನ ಮಕ್ಕಳನ್ನ ಸಾಕಿದ್ದರು. ಇದನ್ನೂ ಓದಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

     

    ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಅವರ ಜೊತೆಗಿದ್ದೆ. ಧರ್ಮಸ್ಥಳದಲ್ಲಿ ಕಸ ಗುಡಿಸುವುದು, ಬಾತ್‌ರೂಂ ತೊಳೆಯುವುದು ಮಾಡುತ್ತಿದ್ದರು. ಧರ್ಮಸ್ಥಳ ಎಂದರೆ ನಮ್ಮ ತವರು ಮನೆಯವರಿಗೆ ಬಹಳ ಪ್ರೀತಿ. ಗುಂಡಿ ತೋಡಿದರೂ ಏನು ಸಿಕ್ಕಿಲ್ಲ ಅಂದರೆ ಏನೋ‌ ಕಿತಾಪತಿ ಮಾಡ್ತಿದ್ದಾನೆ ಎನಿಸುತ್ತದೆ. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ನನ್ನ ಬಳಿ ಅತ್ಯಾಚಾರ, ಕೊಲೆಯಾದ ಶವಗಳನ್ನು ಹೂತ ಬಗ್ಗೆ ಯಾವತ್ತೂ ಹೇಳಿಲ್ಲ. ಯಾವಾಗಲೂ ಅಹಂಕಾರದಲ್ಲೇ ಮರೆಯುತ್ತಿದ್ದ. ಅವನ ಸ್ವಂತ ಅಣ್ಣ, ತಮ್ಮಂದಿರಿಗೂ ಬಾಯಿಗೆ ಬಂದಹಾಗೇ ಬೈಯ್ಯುತ್ತಿದ್ದ. ಅವನು ಮೋಸಗಾರ, ಸುಳ್ಳುಗಾರ. ಅವನನ್ನು ಬಿಟ್ಟು ಬಂದದ್ದು ಒಳ್ಳೆಯದಾಯಿತು. ಇಟ್ಟುಕೊಂಡವಳನ್ನು ಮದುವೆ ಮಾಡಿಕೊಳ್ಳಲು ನನಗೆ ಚಿತ್ರಹಿಂಸೆ ಕೊಟ್ಟು ಓಡಿಸಿದ್ದ.

    ವೀರೇಂದ್ರ ಹೆಗ್ಗಡೆಯವರು (Veerendra Heggade) ತುಂಬಾ ಒಳ್ಳೆಯವರು. ಕೆಲಸ‌ಕೊಟ್ಟ, ಅನ್ನ ಕೊಟ್ಟ ಜಾಗಕ್ಕೆ ಅನ್ಯಾಯ ಮಾಡಬಾರದು. ಮದುವೆ ಮಾಡಿಕೊಂಡು ನಮಗೆ ಏನ್ ಮಾಡಿದ್ಯ ಎಂದು 2ನೇ ಹೆಂಡ್ತಿ ಬೈತ್ತಿದ್ದಳಂತೆ. ಅವಳ ಒತ್ತಡಕ್ಕೆ, ಆಮಿಷಕ್ಕೆ ಒಳಗಾಗಿ ಹೀಗೆ ಮಾಡುತ್ತಿರಬೇಕು. ದೇವಸ್ಥಾನದ ಹೆಸರು ಕೆಡಿಸುತ್ತಿರುವ ಅವನು ಹಾಳಾಗಬೇಕು. ಅವನು ಸತ್ತು, ಹೆಣ ಆದರೂ ನಾನು ಹೋಗಿ ನೋಡುವುದಿಲ್ಲ.

    ಅನಾಮಿಕನ ಅಣ್ಣ ಮತ್ತು ಮನೆಯವರೆಲ್ಲ ಒಳ್ಳೆಯವರು. ಆತ ತನಗೆ ಹೊಡೆದಾಗಲೂ ಅವರು ತನ್ನ ಪರವಾಗಿ ನಿಂತಿದ್ದರು. ಅವನನ್ನು ನೋಡಿದ ತಕ್ಷಣವೇ ಅವನ ದೇಹದ ಆಕಾರ ಮತ್ತು ನೇತ್ರಾವತಿಯಲ್ಲಿ ಕೆಲಸ ಮಾಡಿದ್ದನ್ನು ಹೇಳಿದಾಗ ಆತ ತನ್ನ ಮಾಜಿ ಪತಿ ಎನ್ನುವುದು ಖಚಿತವಾಯಿತು.

  • Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಒಂದೂವರೆ ಲಕ್ಷ ಸಾಲ ಪಡೆದು ಎಸ್ಕೇಪ್‌ ಆಗಿದ್ದ ಮಾಸ್ಕ್‌ ಮ್ಯಾನ್‌

    Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಒಂದೂವರೆ ಲಕ್ಷ ಸಾಲ ಪಡೆದು ಎಸ್ಕೇಪ್‌ ಆಗಿದ್ದ ಮಾಸ್ಕ್‌ ಮ್ಯಾನ್‌

    – ಮಂಡ್ಯದ ಈ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೂ ಕಿರಿಕ್‌ ಮಾಡ್ಕೊಂಡಿದ್ದ ಮಾಸ್ಕ್‌ ಮ್ಯಾನ್‌
    – ಚಿಕ್ಕ ವಯಸ್ಸಿನಲ್ಲೇ ಮದ್ವೆ, ಕೆಲಸವಿಲ್ಲದೇ ಉಂಡಾಣಿ ಗುಂಡನಂತಿದ್ದ ದೂರುದಾರ

    ಮಂಡ್ಯ: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸ್ಫೋಟಕ ವಿಚಾರಗಳನ್ನು ಬಯಲಿಗೆಳೆಯುತ್ತಿರುವ ನಿಮ್ಮ ʻಪಬ್ಲಿಕ್‌ ಟಿವಿʼ ಬುರುಡೆ ಪ್ರಕರಣದ ಮಾಸ್ಕ್‌ ಮ್ಯಾನ್‌ ಕುರಿತು ಇನ್ನಷ್ಟು ಎಕ್ಸ್‌ಕ್ಲೂಸಿವ್‌ ಮಾಹಿತಿಗಳನ್ನ ಬಯಲಿಗೆಳೆದಿದೆ. ಮಾಸ್ಕ್‌ ಮ್ಯಾನ್‌ನ ಹುಟ್ಟೂರು ಯಾವುದು? ಆತ ಓದಿದ್ದೇನು? ಊರಲ್ಲಿ ಏನು ಕೆಲಸ ಮಾಡಿಕೊಂಡಿದ್ದ? ಎಂಬೆಲ್ಲ ಮಾಹಿತಿಗಳನ್ನ ಬಹಿರಂಗಪಡಿಸಿದೆ.

    ಹೌದು. ಬುರುಡೆ ಪ್ರಕರಣದ ಮಾಸ್ಕ್‌ ಮ್ಯಾನ್‌ (Mask Man) ಮೂಲತಃ ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ಹುಟ್ಟಿ ಬೆಳದವನಂತೆ. 1ನೇ ತರಗತಿಯಿಂದ 3ನೇ ತರಗತಿವರೆಗೆ ಇದೇ ಗ್ರಾಮದಲ್ಲಿ ವಿದ್ಯಾಭ್ಯಾಸ ಕೂಡ ಮಾಡಿಕೊಂಡಿದ್ದ. ಈತನ ತಂದೆ-ತಾಯಿಗೂ ಒಳ್ಳೆಯ ಹೆಸರಿದೆ. 1994ರ ವರೆಗೆ ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮದಲ್ಲಿಲ್ಲೇ ಇದ್ದ. ಇಲ್ಲಿದ್ದಾಗ ಉಂಡಾಣಿ ಗುಂಡನ ರೀತಿ ಇದ್ದ. ಏನು ಕೆಲಸ ಮಾಡದೇ ಬೀದಿ ಬೀದಿ ತಿರುಗುತ್ತಿದ್ದ. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿದ್ದ ಅಂತ ಖುದ್ದು ಅಲ್ಲಿನ ಗ್ರಾಮಸ್ಥರೇ ಪಬ್ಲಿಕ್‌ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ಸರ್ಕಾರಿ ಜಾಗ ಬರೆದುಕೊಡುವಂತೆ ಕೇಳಿದ್ದ
    ಮೊದಲು ಮುಸುಕುದಾರಿ ಅಣ್ಣ ತನ್ಯಾಸಿ ಧರ್ಮಸ್ಥಳಕ್ಕೆ ಹೋಗಿದ್ದ. ಬಳಿಕ ಈ ಅನಾಮಿಕ ಕೂಡ 1994ರಲ್ಲಿ ಧರ್ಮಸ್ಥಳಕ್ಕೆ ಹೋದ. 2014ರಲ್ಲಿ ಇದೇ ಗ್ರಾಮಕ್ಕೆ ಅನಾಮಿಕ ಮೂರನೇ ಹೆಂಡತಿಯ ಜೊತೆ ಗ್ರಾಮಕ್ಕೆ ವಾಪಸ್ಸಾಗಿದ್ದ. ಈ ವೇಳೆ ಒಂದು ವರ್ಷ ಇದೇ ಗ್ರಾಮದಲ್ಲಿ ವಾಸವಿದ್ದ. ಈ ವೇಳೆ ಸರ್ಕಾರಿ ಜಾಗದಲ್ಲಿ ಗ್ರಾ.ಪಂ ನಿಂದ ಮಾಸ್ಕ್‌ ಮ್ಯಾನ್‌ಗೆ ಶೆಡ್‌ ಕೂಡ ಹಾಕಿಕೊಡಲಾಗಿತ್ತು. ಕೆಲ ದಿನಗಳ ನಂತರ ಗ್ರಾಮಸ್ಥರೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಶೆಡ್ ಜಾಗವನ್ನು ನನ್ನ ಹೆಸರಿಗೆ ಬರೆದುಕೊಡಿ ಎಂದು ಗಲಾಟೆ ಕೂಡ ಮಾಡಿಕೊಂಡಿದ್ದ. ಆಗ ಗ್ರಾಮಸ್ಥರೊಂದಿಗೆ ಗಲಾಟೆ ಮಾಡಿಕೊಂಡು ಊರಿಂದ ಹೋರಟುಹೋಗಿದ್ದ. ಕಳೆದ ವರ್ಷದ ಪಿತೃಪಕ್ಷದ ವೇಳೆ ಇದೇ ಗ್ರಾಮಕ್ಕೆ ಮತ್ತೆ ಬಂದಿದ್ದ. ಈಗ ಧರ್ಮಸ್ಥಳದಲ್ಲಿ ಪ್ರತ್ಯಕ್ಷವಾಗಿ ಈ ರೀತಿ ಮಾತನಾಡ್ತಿರೋದು ತಪ್ಪು ಅಂತ ಗ್ರಾಮಸ್ಥರು ಎಳೆಎಳೆಯಾಗಿ ಮಾಸ್ಕ್‌ ಮ್ಯಾನ್‌ ಬಗೆಗಿನ ರಹಸ್ಯಗಳನ್ನ ಬಿಚ್ಚಿಟ್ಟಿದ್ದಾರೆ.

    ಧರ್ಮಸ್ಥಳದ ಬಗ್ಗೆ ಸುಳ್ಳುಗಳನ್ನೇ ಆತ ಹೇಳ್ತಿದ್ದಾನೆ. ದುಡ್ಡಿಗಾಗಿ ಈ ರೀತಿಯ ಕೆಲಸ ಮಾಡ್ತಾ ಇದ್ದಾನೇನೋ ಅನಿಸ್ತಿದೆ ಅಂತ ಅನಾಮಿಕನ ವಿರುದ್ಧ ಗ್ರಾಮಸ್ಥರ ಆಕ್ರೋಶದ ನುಡಿಗಳನ್ನಾಡಿದ್ದಾರೆ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

    ಗ್ರಾಮದ ಮುಖಂಡನಿಗೆ ಒಂದೂವರೆ ಲಕ್ಷ ಪಂಗನಾಮ
    2014ರಲ್ಲಿ ಗ್ರಾಮಕ್ಕೆ ವಾಪಸ್ಸಾದಾಗ ಹಸು ಸಾಕಬೇಕು ಎಂದಿದ್ದ. ಈ ವೇಳೆ ಬ್ಯಾಂಕ್‌ವೊಂದರಲ್ಲಿ ಗ್ರಾಮದ ಮುಖಂಡರು ಒಂದೂವರೆ ಲಕ್ಷ ಸಾಲ ಕೊಡಿಸಿದ್ದರು. ನಂತರ ಹಸುಗಳನ್ನು ಮಾರಿ ಎಸ್ಕೇಪ್‌ ಆದ. ಸಾಲಕೊಡಿಸಿದವರು ಸಾಲ ಕಟ್ಟುವ ಸ್ಥಿತಿ ಬಂತು. ಕಳೆದ ಒಂದೂವರೆ ವರ್ಷದ ಹಿಂದೆ ಮತ್ತೆ ಗ್ರಾಮದ ಒಬ್ಬರಿಗೆ ಕರೆ ಮಾಡಿ, ಲೋನ್ ತೆಗೆದುಕೊಳ್ಳಲು ಡಾಕ್ಯುಮೆಂಟ್ ಕೇಳಿದ್ದ. ನಂತರ ಡಾಕ್ಯುಮೆಂಟ್ ಕೊಡಲು ಆಗಲ್ಲ ಅಂತ ಗ್ರಾಮಸ್ಥರು ಹೇಳಿದ್ದರು ಎಂದು ಗ್ರಾಮದ ಮುಖಂಡರು ಹೇಳಿದ್ದಾರೆ.

  • ಕೆಆರ್‌ಎಸ್‌ನಿಂದ 91 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ಮುಳುಗಡೆ ಭೀತಿಯಲ್ಲಿ ವೆಲ್ಲೆಸ್ಲಿ ಸೇತುವೆ

    ಕೆಆರ್‌ಎಸ್‌ನಿಂದ 91 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ಮುಳುಗಡೆ ಭೀತಿಯಲ್ಲಿ ವೆಲ್ಲೆಸ್ಲಿ ಸೇತುವೆ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery River’s Catchment Area) ಭಾರೀ ಮಳೆ ಬೀಳುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯದಿಂದ (KRS Dam) 91 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

    ಮಳೆ ಮತ್ತೆ ಜಾಸ್ತಿಯಾದರೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹೊರ ಬಿಡುವ ಸಾಧ್ಯತೆಯಿದೆ. 124.80 ಅಡಿ ಎತ್ತರದ ಜಲಾಶಯಕ್ಕೆ ಸದ್ಯ 70 ಸಾವಿರ ಕ್ಯೂಸೆಕ್‌ ನೀರು ಒಳ ಹರಿವಿದೆ.  ಇದನ್ನೂ ಓದಿ: ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

    ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವ ಕಾರಣ ಜಲಾಶಯದ ಕೆಳ ಭಾಗದಲ್ಲಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಶ್ರೀರಂಗಪಟ್ಟಣದಲ್ಲಿರುವ 221 ವರ್ಷ ಹಳೆಯದಾದ ಬ್ರಿಟಿಷರ ಕಾಲದ ವೆಲ್ಲೆಸ್ಲಿ ಸೇತುವೆ (Wellesley Bridge) ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಸಾಧ್ಯತೆಯಿದೆ.

    ಸದ್ಯ ಭಾರೀ ಪ್ರಮಾಣ ನೀರು ಬಿಟ್ಟಿರುವ ಕಾರಣ ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿಂದೆ ಈ ಸೇತುವೆ ಮೈಸೂರು- ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತಿತ್ತು.

    ಕ್ಯೂಸೆಕ್‌ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್‌ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್‌ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್‌ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

  • ಉತ್ತಮ ಮಳೆಯಿಂದ KRSಗೆ ಒಳ ಹರಿವು ಹೆಚ್ಚಳ – 80,000 ಕ್ಯೂಸೆಕ್ ನೀರು ನದಿಗೆ

    ಉತ್ತಮ ಮಳೆಯಿಂದ KRSಗೆ ಒಳ ಹರಿವು ಹೆಚ್ಚಳ – 80,000 ಕ್ಯೂಸೆಕ್ ನೀರು ನದಿಗೆ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಮುಂದಿವರಿದಿರುವ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವು ಏರಿಕೆ ಕಂಡಿದೆ.

    ಹಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಮಳೆಯ ಪ್ರಮಾಣ ಕಡಿಮೆ ಇದ್ದ ಪರಿಣಾಮ ಹೆಚ್ಚು ನೀರು ಬರುತ್ತಿರಲಿಲ್ಲ. ನಿನ್ನೆಯಿಂದ ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆ 33,052 ಕ್ಯೂಸೆಕ್‌ಗೂ ಅಧಿಕ ನೀರು ಒಳಹರಿವು ಬರುತ್ತಿದೆ. ಜೂನ್ ಅಂತ್ಯದಲ್ಲಿಯೇ ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಡ್ಯಾಂನಿಂದ‌ ಬೆಳಗ್ಗೆ 10 ವರೆಗೆ 31,550 ಕ್ಯೂಸೆಕ್‌ ನೀರನ್ನ ನದಿಗೆ ಹರಿಸಲಾಗುತ್ತಿತ್ತು. 10 ಗಂಟೆಯ ನಂತರ 80,000 ಕ್ಯೂಸೆಕ್‌ ನೀರನ್ನ ನದಿಗೆ ಹರಿಸಲಾಗುತ್ತಿದೆ.

    ಈ ಕುರಿತು ಮಂಡ್ಯದ ಜಿಲ್ಲಾಧಿಕಾರಿ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

    ಕೆಆರ್‌ಎಸ್ ಡ್ಯಾಂ‌ನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಡ್ಯಾಂ ಮುಂಭಾಗ ಹಾಲ್ನೊರೆಯಂತೆ ಕಾವೇರಿ ನದಿಯ ಸೌಂದರ್ಯ ಕಂಗೊಳಿಸುತ್ತಿದೆ. ಸದ್ಯ 124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 124.54 ಅಡಿಗಳಷ್ಟು ಭರ್ತಿಯಾಗಿದ್ರೆ, 49.452 ಟಿಎಂಸಿ ಗರಿಷ್ಠ ಸಾಮರ್ಥ್ಯವಿರುವ ಡ್ಯಾಂನಲ್ಲಿ 49.089 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

  • ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

    ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

    ಮಂಡ್ಯ: ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ (KR Pete) ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ.

    ಕರೋಟಿ ಗ್ರಾಮದ ನವೀನ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನವೀನ್ ಬೆಂಗಳೂರಿನ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ರಜೆ ಇದ್ದ ಹಿನ್ನೆಲೆ ಮನೆಗೆ ಬಂದಿದ್ದ. ಇಂದು ಮನೆಯಲ್ಲಿ ಇರುವಾಗ ಹಠಾತ್ ಹೃದಯಾಘಾತವಾಗಿ ನವೀನ್ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

    ತಕ್ಷಣ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕಿಕ್ಕೇರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ಬಳಿಕ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ನವೀನ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

    ಕಿಕ್ಕೇರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಉಳಿಯುತ್ತಿದ್ದ, ಆಸ್ಪತ್ರೆಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೇ ಇರುವುದು ಮಗನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

  • ಪ್ರವಾಸಿಗರಿಗೆ ದರ ಏರಿಕೆ ಶಾಕ್‌ – ರಂಗನತಿಟ್ಟು ಪಕ್ಷಿಧಾಮದಲ್ಲಿ ಟಿಕೆಟ್‌ ದರ ಹೆಚ್ಚಳ

    ಪ್ರವಾಸಿಗರಿಗೆ ದರ ಏರಿಕೆ ಶಾಕ್‌ – ರಂಗನತಿಟ್ಟು ಪಕ್ಷಿಧಾಮದಲ್ಲಿ ಟಿಕೆಟ್‌ ದರ ಹೆಚ್ಚಳ

    – ವಿದೇಶಿಗರ ಟಿಕೆಟ್‌ ದರ 600 ರೂ.ಗೆ ಏರಿಕೆ

    ಮಂಡ್ಯ: ವಿಶ್ವವಿಖ್ಯಾತ ಕೃಷ್ಣರಾಜ ಸಾಗರ (KRS) ಬೃಂದಾವನದ ದರ ಹೆಚ್ಚಳ ಬೆನ್ನಲ್ಲೇ, ಪಕ್ಷಿ ಕಾಶಿ ಎಂದೇ ಹೆಸರುವಾಸಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ (Ranganathittu Bird Sanctuary) ಪ್ರವೇಶ ದರ ಹಾಗೂ ಬೋಟಿಂಗ್ ದರ ಹೆಚ್ಚಳ ಮಾಡಿ ಪ್ರವಾಸಿಗರಿಗೆ ಮತ್ತೊಂದು ಬರೆ ಎಳೆದಿದೆ.

    ರಂಗನತಿಟ್ಟು ಪಕ್ಷಿಧಾಮವನ್ನ ಮೈಸೂರು ವನ್ಯಜೀವಿ ವಿಭಾಗ (Mysuru Wiledlife Department) ನಿರ್ವಹಣೆ ಮಾಡುತ್ತಿದ್ದು, ಆಗಸ್ಟ್ 1ರಿಂದ ದರ ಹೆಚ್ಚಿಸಿ ಪ್ರವಾಸಿಗರ ಜೇಬಿಗೆ ಕತ್ತರಿ ಹಾಕಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಿದ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿಂದ ಪಕ್ಷಿಧಾಮಕ್ಕೆ ಪ್ರವೇಶ ಹಾಗೂ ಬೋಟಿಂಗ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮಳೆ (Rain) ಪ್ರಮಾಣ ಕಡಿಮೆಯಾಗಿದ್ದು, ನಿರ್ಬಂಧ ತೆರವುಗೊಳಿಸಲಾಗಿದೆ. ಇದನ್ನೂ ಓದಿ: RCB ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ – ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

    ಕಾವೇರಿ ನದಿಯಿಂದ ಸುತ್ತುವರಿಯಲ್ಪಟ್ಟಿರುವ ಶ್ರೀರಂಗಪಟ್ಟಣ (Srirangapatna) ದ್ವೀಪ ನಗರ ಎಂದೇ ಹೆಸರಾಗಿದೆ. ಪ್ರವಾಸಿಗರ ನೆಚ್ಚಿನ ತಾಣ ವಿಶ್ವವಿಖ್ಯಾತ ಕೃಷ್ಣರಾಜ ಸಾಗರ ಸೇರಿದಂತೆ ಚಾರಿತ್ರಿಕ ಮಹತ್ವ ಹೊಂದಿರುವ ಪ್ರಸಿದ್ಧ ಸ್ಥಳಗಳು ಇಲ್ಲಿವೆ. ಆದ್ದರಿಂದ ಇಲ್ಲಿಗೆ ನೆರೆ ರಾಜ್ಯಗಳಿಂದಷ್ಟೇ ಅಲ್ಲದೇ ನಿತ್ಯ ದೇಶ ವಿದೇಶಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇದನ್ನೂ ಓದಿ: ಆ.17ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಮೈಸೂರು ದಸರಾ ಸಮೀಪಿಸುತ್ತಿದ್ದಂತೆ ಪಕ್ಷಿಧಾಮದ ಪ್ರವೇಶ ದರ ಹಾಗೂ ಬೋಟಿಂಗ್ ದರ ಹೆಚ್ಚಳ ಮಾಡಿರುವುದು ಪ್ರವಾಸಿಗರನ್ನ ಕೆರಳಿಸಿದೆ. ಮೈಸೂರು ದಸರಾಕ್ಕೆ ಬರುವ ಬಹುತೇಕರು ನೆಚ್ಚಿನ ಪ್ರವಾಸಿ ಸ್ಥಳಗಳಾದ ಶ್ರೀರಂಗಪಟ್ಟಣ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಕಟುಂಬದ ಜತೆ ಒಂದಷ್ಟು ಸಮಯ ಕಳೆಯಲು ಬರುವವರಿಗೆ ದರ ಹೆಚ್ಚಳವಾಗಿರುವುದು ತಮ್ಮ ಕಿಸಿಗೆ ಕತ್ತರಿ ಬೀಳಲಿದೆ.

    ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೃಷ್ಣರಾಜ ಸಾಗರ (ಕೆಆರ್‌ಎಸ್) ಬೃಂದಾವನ ಪ್ರವೇಶ ದರ ಹೆಚ್ಚಳ ಮಾಡಿ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ನಡುವೆಯೇ ಪ್ರಸಿದ್ದ ಪಕ್ಷಿಧಾಮ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ದರ ಹಾಗೂ ಬೋಟಿಂಗ್ ದರವನ್ನ ಹೆಚ್ಚಳ ಮಾಡಿದೆ. ಇದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಇದನ್ನೂ ಓದಿ: ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಎಂಟ್ರಿ ಟಿಕೆಟ್‌ ದರ ಯಾರಿಗೆ ಎಷ್ಟು?
    ವಯಸ್ಕರಿಗೆ 75 ರೂ. ಇದ್ದ ಪ್ರವೇಶ ದರವನ್ನ 80 ರೂ. ಗಳಿಗೆ ಹೆಚ್ಚಿಸಲಾಗಿದೆ. ಇನ್ನೂ ವಿದ್ಯಾರ್ಥಿಗಳು ಹಾಗೂ ಮಕ್ಕಳಿಗೆ 25 ರೂ. ಇದ್ದ ಪ್ರವೇಶ ದರವನ್ನು 40 ರೂ.ಗೆ ಹೆಚ್ಚಳ ಮಾಡಲಾಗಿದೆ. ವಿದೇಶಿಗರಿಗೆ 500 ರೂ. ಇದ್ದ ಪ್ರವೇಶ ದರವನ್ನು ಪ್ರಸ್ತುತ 600 ರೂ.ಗೆ ಹೆಚ್ಚಳ ಮಾಡಲಾಗಿದೆ. ವಿದೇಶಿ ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ 250 ರೂ. ಇದ್ದ ಪ್ರವೇಶ ದರವನ್ನು 300ಕ್ಕೆ ಹೆಚ್ಚಳ ಮಾಡಿ ಆದೇಶಿಸಿದೆ. ಬ್ಯಾಟರಿ ಆಪರೇಟೆಡ್ ವಾಹನದ ದರವನ್ನು 75 ರಿಂದ 100 ಮಕ್ಕಳಿಗೆ 35 ರಿಂದ 50 ರೂ. ಹೆಚ್ಚಿಸಲಾಗಿದೆ. ಮೋಟಾರ್ ಸೈಕಲ್ 15 ರಿಂದ 20, ಆಟೋ ರಿಕ್ಷಾ ದರವನ್ನ ಮಾತ್ರ ಯತಾವತ್ತಾಗಿರಿಸಿದೆ. ಕಾರು, ಜೀಪು 60 ರಿಂದ 70ರೂ.ಗೆ ಹೆಚ್ಚಿಸಿದೆ.

  • ಮಂಡ್ಯ| ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ‌ ಅಧಿಕ ಮಕ್ಕಳು ಬೇರೆ ಶಾಲೆಗೆ ಸೇರ್ಪಡೆ

    ಮಂಡ್ಯ| ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ‌ ಅಧಿಕ ಮಕ್ಕಳು ಬೇರೆ ಶಾಲೆಗೆ ಸೇರ್ಪಡೆ

    ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ನೀಡುತ್ತಾ ಬರುಲಾಗುತ್ತಿದೆ. ಸಕ್ಕರೆ ನಾಡು ಮಂಡ್ಯದ ಆಲಕೆರೆ ಗ್ರಾಮದಲ್ಲಿ ಇದೀಗ ಮೊಟ್ಟೆಯ ತಕರಾರು ಎದ್ದಿದೆ.

    ಆಲಕೆರೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸರ್ಕಾರ ಸರ್ಕಾರಿ ಶಾಲೆಗಳಿಗೆ ಮೊಟ್ಟೆ ಕೊಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದಾಗಿನಿಂದ ಈ ಗ್ರಾಮದ ಜನರು, ಶಾಲೆಯಲ್ಲಿ ಮೊಟ್ಟೆ ಕೊಡುವುದು ಬೇಡಾ ಎಂದು ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದರು. ಏಕೆಂದರೆ ಈ ಶಾಲೆ ಇರುವ 100 ಮೀಟರ್ ಅಂತರದಲ್ಲಿ ವೀರಭದ್ರಸ್ವಾಮಿ‌ ದೇವಸ್ಥಾನವಿದೆ. ಹೀಗಾಗಿ, ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಹಾಗೂ ಮೊಟ್ಟೆಯನ್ನು ಸೇವನೆ ಮಾಡಲ್ಲ. ಶಾಲೆಯಲ್ಲೂ ಮೊಟ್ಟೆಯ ಬದಲಿಗೆ ಇಷ್ಟು ದಿನ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ಕೊಡಲಾಗುತ್ತಿತ್ತು. ಇದನ್ನೂ ಓದಿ: ವಿದೇಶಕ್ಕೂ ಹರಡಿದೆ ಬೆಗ್ಗರ್‌ ಜಾಲ – ಪಾಕ್‌ ಭಿಕ್ಷುಕರ ವಾರ್ಷಿಕ ಆದಾಯ ಕೇಳಿದ್ರೆ ಬೆಚ್ಚಿ ಬೀಳ್ತೀರಿ…

    ಕಳೆದ 20 ದಿನಗಳ ಹಿಂದೆ ಈ ಶಾಲೆಯಲ್ಲಿ ಓದುವ ಕೆಲ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಮೊಟ್ಟೆ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ, ಅಧಿಕಾರಿಗಳು ಕಾನೂನಿನ ಪ್ರಕಾರ ಮೊಟ್ಟೆ ಕೊಡಲೇಬೇಕೆಂದು, ಮೊಟ್ಟೆ ತಿನ್ನುವ ಮಕ್ಕಳಿಗೆ ಮೊಟ್ಟೆಯನ್ನು ನೀಡಿದ್ದಾರೆ.

    ಅಧಿಕಾರಿಗಳ ಈ ನಿರ್ಧಾರ ಇದೀಗ ಇಲ್ಲಿನ ಗ್ರಾಮಸ್ಥರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ, 124 ಮಕ್ಕಳ ಪೈಕಿ 70ಕ್ಕೂ‌ ಅಧಿಕ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಆಲಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಬಿಡಿಸಿದ್ದಾರೆ. ಇದೀಗ 70ಕ್ಕೂ ಅಧಿಕ ಮಕ್ಕಳನ್ನು ಆಲಕೆರೆಯ ಪಕ್ಕದ ಊರಾದ ಕೀಲಾರ ಗ್ರಾಮದ ಸರ್ಕಾರಿ ಶಾಲೆ‌ ಹಾಗೂ ಇತರ ಶಾಲೆಗಳಿಗೆ ದಾಖಲು ಮಾಡಿದ್ದಾರೆ. ಇದನ್ನೂ ಓದಿ: 354ನೇ ಆರಾಧನಾ ಮಹೋತ್ಸವದ ಕೊನೆಯ ಘಟ್ಟ – ಮಂತ್ರಾಲಯ ರಾಜಬೀದಿಯಲ್ಲಿಂದು ಮಹಾರಥೋತ್ಸವ

  • ಜೀವ ತೆಗೆಯಿತು ವೈಟ್ ಶರ್ಟ್ – ಟಾರ್ಗೆಟ್ ಮಾಡಿದವನನ್ನ ಬಿಟ್ಟು ಮತ್ತೊಬ್ಬನ ಹತ್ಯೆ

    ಜೀವ ತೆಗೆಯಿತು ವೈಟ್ ಶರ್ಟ್ – ಟಾರ್ಗೆಟ್ ಮಾಡಿದವನನ್ನ ಬಿಟ್ಟು ಮತ್ತೊಬ್ಬನ ಹತ್ಯೆ

    ಮಂಡ್ಯ: ವ್ಯಕ್ತಿಯೊಬ್ಬ ಧರಿಸಿದ್ದ ವೈಟ್‌ ಶರ್ಟ್‌ನಿಂದ (White Shirt) ಟಾರ್ಗೆಟ್‌ ಮಾಡಿದವನನ್ನ ಬಿಟ್ಟು ಹಂತಕರ ಗ್ಯಾಂಗ್‌ ಮತ್ತೊಬ್ಬನನ್ನು ಹತ್ಯೆಗೈದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆ ಬಳಿ ನಡೆದಿದೆ.

    ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ದುರ್ದೈವಿ. ಬೆಂಗಳೂರಿನಲ್ಲಿ ಕ್ಯಾಬ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಅರುಣ್‌ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಶುಕ್ರವಾರ ರಾತ್ರಿ ಊರಿಗೆ ಬಂದಿದ್ದ. ಈ ವೇಳೆ 8-10 ಮಂದಿ ದುಷ್ಕರ್ಮಿಗಳು ಸೇರಿ ಲಾಂಗು, ಮಚ್ಚು, ಡ್ರ್ಯಾಗರ್‌ನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ

    ಅಷ್ಟಕ್ಕೂ ಕರಾಳ ರಾತ್ರಿಯಲ್ಲಿ ನಡೆದಿದ್ದೇನು?
    ಶುಕ್ರವಾರ (ಆ.8) ರಾತ್ರಿ ಮೃತ ಅರುಣ್‌ ಸ್ನೇಹಿತ ಸೂರ್ಯ, ಸಹೋದರ ಉಮೇಶ್‌ ಹಾಗೂ ಸಂಬಂಧಿ ದೇವರಾಜ್‌ ಜೊತೆಗೆ ಬಾರ್‌ನಲ್ಲಿ ಪಾರ್ಟಿ ಮಾಡ್ತಿದ್ದ. ಬಾರ್‌ ಮುಂಭಾಗ ಸಿಕ್ಕ ವಿಕಾಸ್‌ ಎಂಬಾತನೊಂದಿಗೆ ಹಳೇ ದ್ವೇಷದ ಹಿನ್ನೆಲೆ ಸೂರ್ಯ ಕಿರಿಕ್‌ ತೆಗೆದಿದ್ದ. 2 ವರ್ಷಗಳ ಹಿಂದಿನ ಜಗಳದ ವಿಚಾರ ತೆಗದು ಸೂರ್ಯ ವಿಕಾಸ್‌ ಮೇಲೆ ಹಲ್ಲೆ ಮಾಡಿದ್ದ. ಆದ್ರೆ ಅರುಣ್‌ ಇವರಿಬ್ಬರ ಜಗಳ ಬಿಡಿಸಿ ಮತ್ತೆ ಪಾರ್ಟಿ ಮುಂದುವರಿಸಿದ್ದ. ಇದನ್ನೂ ಓದಿ: ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

    ಕೆಲಹೊತ್ತಿನ ಬಳಿಕ ತಂಡ ಕಟ್ಟಿಕೊಂಡು ಬಂದ ವಿಕ್ರಮ್, ಪಾರ್ಟಿ ಮಾಡ್ತಿದ್ದ ಸೂರ್ಯ ಹಾಗೂ ಸ್ನೇಹಿತರ ಮೇಲೆ ಅಟ್ಯಾಕ್ ಮಾಡಿದ್ದಾನೆ. ಸೂರ್ಯ ಮತ್ತು ಉಮೇಶ್ ಒಂದಕಡೆ ಓಡಿದ್ರೆ, ಅರುಣ್ ಮತ್ತು ದೇವರಾಜು ಮತ್ತೊಂದು ದಿಕ್ಕಿಗೆ ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಸೂರ್ಯ ಬಿಳಿಬಣ್ಣದ ಅಂಗಿ ಹಾಕಿರುವುದಾಗಿ ಸುಳಿವು ಹಿಡಿದು ಬಂದಿದ್ದ ಹಂತಕರು ಅರುಣ್ ಕೂಡ ವೈಟ್ ಶರ್ಟ್ ಧರಿಸಿದ್ದರಿಂದ ಅರುಣ್‌ನನ್ನ ಫಾಲೋ ಮಾಡಲು ಶುರುಮಾಡಿದ್ರು. ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದ ಬಳಿ ಅರುಣ್‌ ಲಾಕ್ ಆಗ್ತಿದ್ದಂತೆ ಜೊತೆಯಲ್ಲಿದ್ದ ದೇವರಾಜು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಅರುಣ್‌ಗೆ ಮನಸ್ಸೋ‌ ಇಚ್ಛೆ ಥಳಿಸಿದ ದುಷ್ಕರ್ಮಿಗಳು, ಡ್ರಾಗರ್, ಮಚ್ಚು, ಲಾಂಗುಗಳಿಂದ ಕೊಚ್ಚಿ ಕೊಲೆಗೈದಿದ್ರು. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

  • ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

    ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

    ಮಂಡ್ಯ: ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಫೈನಾನ್ಸ್ ಸಿಬ್ಬಂದಿ ಕಿರುಕುಳ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

    ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆಯಾದ ನಕ್ಷತ್ರ ಹಾಗೂ ಅರ್ಧ ಚಂದ್ರವನ್ನು ಬಿಡಿಸಿದ್ದಾರೆ. ಇದಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ಕೂಡ ನುಗ್ಗಿದ್ದರು. ಆದರೆ ಅಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿದು ಬಂದಿದೆ.

    ಸ್ಥಳೀಯರೊಬ್ಬರು ದೇವಸ್ಥಾನದ ಕಡೆ ಹೋದಾಗ ದುಷ್ಕರ್ಮಿಗಳು ಪರಾರಿಯಾಗಿರುವುದು ಕಾಣಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ