Tag: ಮಂಥರ್ ಗೌಡ

  • ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಪರಮೇಶ್ವರ್

    ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಪರಮೇಶ್ವರ್

    – ಬಿಜೆಪಿಯರು ಎಲ್ಲದ್ರಲ್ಲೂ ರಾಜಕೀಯ ಮಾಡ್ತಾರೆ; ಗೃಹಸಚಿವ ಕಿಡಿ

    ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ(Ponnanna) ಒಂದೇ, ಮಂಥರ್ ಗೌಡನಿಗೂ(Manthar Gowda) ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್(G Parameshwar) ಸ್ಪಷ್ಟನೆ ನೀಡಿದರು.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ವಿನಯ್ ಸೋಮಯ್ಯ(Vinay Somaiah) ಡೆತ್‌ನೋಟ್‌ನಲ್ಲಿ ಪೊನ್ನಣ್ಣ, ಮಂಥರ್ ಗೌಡ ಹೆಸರು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದರು. ಕಾನೂನು ಎಲ್ಲರಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ. ಸಿಬಿಐಗೆ(CBI) ನೀಡುವ ವಿಚಾರದ ಬಗ್ಗೆ ನಿರ್ಧಾರ ಇಲ್ಲ. ಅಗತ್ಯವಿದ್ದರೆ ನೋಡೋಣ ಎಂದರು. ಇದನ್ನೂ ಓದಿ: ಪೊನ್ನಣ್ಣ ನೀನು ಕಾಂಪ್ಲಿಮೆಂಟರಿ ಎಂಎಲ್‌ಎ, ನಮ್ಮ ಸಿಟ್ಟು ಜಾಸ್ತಿ ಮಾಡಬೇಡ: ಪ್ರತಾಪ್ ಸಿಂಹ ವಾಗ್ದಾಳಿ

    ʻ

    ಈ ಹಿಂದೆ ಫೆಬ್ರವರಿಯಲ್ಲಿ ನಡೆದಿರುವ ಘಟನೆಯಿಂದ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ತನಿಖೆ ಮಾಡಲಾಗುತ್ತದೆ. ವಾಟ್ಸಪ್‌ನಲ್ಲಿ ಹಾಕಿರುವ ಸಂದೇಶದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲೂ ಎಫ್‌ಐಆರ್ ಆಗಿದೆ. ಇಲ್ಲೂ ಎಫ್‌ಐಆರ್ ಆಗಿದೆ. ಎಲ್ಲವೂ ಸಮಗ್ರ ತನಿಖೆ ಆಗುತ್ತದೆ. ತನಿಖೆ ಆದಮೇಲೆ ಇವರಿಬ್ಬರೂ, ವಿನಯ್ ಆತ್ಮಹತ್ಯೆಗೆ ಕಾರಣರಾಗಿದ್ರಾ ಎಂದು ತಿಳಿದುಬಂದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್ – ಡಿವೈಎಸ್‌ಪಿ ಕಚೇರಿಗೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನ

    ಡೆತ್‌ನೋಟ್ ಎನ್ನುವುದೇ ಇಲ್ಲ ಎಂದು ಹೇಳುತ್ತಾರೆ. ವಾಟ್ಸಪ್‌ನಲ್ಲಿ ಅವರು ಮಾಡಿದ್ದಾರೆ ಎಂದು ಮೊದಲು ಸಾಬೀತು ಆಗಬೇಕಲ್ಲ. ಡೆತ್‌ನೋಟ್ ಅಥವಾ ವಾಟ್ಸಪ್ ಡೆತ್‌ನೋಟ್ ಎಂದು ತಗೆದುಕೊಳ್ಳಬಹುದಾ ಎಂದು ಗೊಂದಲವಿದೆ. ಇದರಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡೋಕೆ ಅವಕಾಶ ಇಲ್ಲ. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಅವರ ಮೇಲೆ ಕ್ರಮ ಆಗುತ್ತದೆ. ಹಾಗಾಗಿ ಸಂಪೂರ್ಣ ತನಿಖೆ ಮಾಡಿ ವರದಿ ಕೊಡಬೇಕು ಎಂದು ನಾನು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

    ಸೋಶಿಯಲ್ ಮೀಡಿಯಾವನ್ನು ಸಾಕ್ಷಿಯಾಗಿ ಗಣನೆಗೆ ತೆಗೆದುಕೊಳ್ಳಬಹುದು ಎಂದು ಕಾನೂನಿನಲ್ಲಿ ಇದ್ದರೆ ಅದನ್ನ ಕನ್ಸಿಡರ್ ಮಾಡುತ್ತೇವೆ. ಹಿಂದೆ ವೀಡಿಯೊ ರೆಕಾರ್ಡ್ ಮಾಡಿದ್ದನ್ನ ಗಣನೆಗೆ ತೆಗೆದುಕೊಂಡಿದ್ದರು. ಈಗ ವಾಟ್ಸಪ್ ಅನ್ನು ಗಣನೆಗೆ ತಗೆದುಕೊಳ್ಳಬಹುದು ಎಂದರೆ ಗಣನೆಗೆ ತಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್‌ – ಶಾಸಕ ಪೊನ್ನಣ್ಣ & ವಿನಯ್‌ ಸೋಮಯ್ಯ ವಾಟ್ಸಪ್‌ ಚಾಟ್‌ನಲ್ಲೇನಿದೆ?

    ಶಾಸಕರ ಹೆಸರು ಹೇಳಿದ ಕೂಡಲೇ ಅದನ್ನ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ವಾಟ್ಸಪ್ ಅನ್ನು ಪರಿಶೀಲನೆ ಮಾಡಿದಾಗ ಏನಾದರು ಪಾತ್ರ ಇದೆ ಎಂದು ಕಂಡರೆ ಕ್ರಮ ತಗೆದುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

    ಬಿಜೆಪಿಯವರು ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾರೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ಅವರು ಸತ್ತ ಮೇಲೆ ಬೆಳಕಿಗೆ ಬಂದಿದೆ. ಅದರ ತನಿಖೆಯಾದರೂ ಆಗಬೇಕಲ್ಲ. ಅದಕ್ಕೂ ರಾಜಕಾರಣ ಬೆರೆಸುವುದು ಸರಿ ಕಾಣಿಸಲ್ಲ ಎಂದು ಕಿಡಿಕಾರಿದರು.

  • ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

    ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

    ಮಡಿಕೇರಿ: ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ಗುರುವಾರ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ನಾಡಿನ ಜನರಿಗೆ ದರ್ಶನ ನೀಡಿದ ಬಳಿಕ ಶುಕ್ರವಾರ ಹಾರಂಗಿ ಜಲಾಶಯಕ್ಕೆ ಅರಕಲಗೂಡು ಶಾಸಕ ಎ.ಮಂಜು (A Manju) ಹಾಗೂ ಮಡಿಕೇರಿ ಶಾಸಕ ಮಂಥರ್ ಗೌಡ (Manthar Gowda) ಬಾಗಿನ ಅರ್ಪಿಸಿದರು.

    ಕೊಡಗಿನ ಹಾರಂಗಿ ಜಲಾಶಯ (Harangi Dam) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕರಿಬ್ಬರೂ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ. ಜಲಾಶಯದ ಆವರಣದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಶಾಸಕರು ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮೊದಲಿಗೆ ಪೂಜೆ ಸಲ್ಲಿಸಿದರು. ನಂತರ ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ವಾದ್ಯಗೋಷ್ಠಿಗಳ ಜೊತೆ ಆಗಮಿಸಿ ಅಣೆಕಟ್ಟೆ ಮೇಲೆ ವ್ಯವಸ್ಥೆ ಮಾಡಿದ್ದ ಮಂಟಪದಲ್ಲಿ ನಿಂತು ಬಾಗಿನ ಸಮರ್ಪಿಸಿದರು.

    ಬಳಿಕ ಮಾತನಾಡಿದ ಶಾಸಕ ಮಂಥರ್ ಗೌಡ, ಕಾವೇರಿ ತೀಥೋದ್ಭವ ಅದ ಬಳಿಕ ಅಲ್ಲಿಂದ ತೀರ್ಥ ತೆಗೆದುಕೊಂಡು ಹಾರಂಗಿಯಲ್ಲಿರೋ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಬರುತ್ತಿದ್ದಾರೆ. ಅರಂತೆ ಇಂದು ಪೂಜೆ ಸಲ್ಲಿಸಿದ್ದೇವೆ. ಕಾವೇರಿ ನದಿಯನ್ನೇ ಅವಲಂಬಿಸಿರುವ ಹಾಸನ ಕೆ.ಆರ್ ನಗರ, ಪಿರಿಯಾಪಟ್ಟಣ, ಮೈಸೂರು ಸೇರಿದಂತೆ ಈ ಭಾಗದ ರೈತರಿಗೆ ಒಳ್ಳೆಯದಾಗಲಿ ಅಂತ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

    ಇನ್ನೂ 17 ಕಿಮೀ ವರೆಗೆ ಅಷ್ಟೇ ಹಾರಂಗಿ ನೀರು ಕೊಡಗಿನ ಜನರಿಗೆ ಬಳಕೆಯಾಗಿದೆ. ಹೆಚ್ಚಾಗಿ ಮೈಸೂರು, ಹಾಸನ ಭಾಗದ ಜನರಿಗೆ ವರದಾನ ಅಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

  • ಮಡಿಕೇರಿ ದಸರಾಕ್ಕೆ ವೈಭವೋಪೇತ ಚಾಲನೆ – ಕಣ್ಮನ ಸೆಳೆದ ಕರಗ

    ಮಡಿಕೇರಿ ದಸರಾಕ್ಕೆ ವೈಭವೋಪೇತ ಚಾಲನೆ – ಕಣ್ಮನ ಸೆಳೆದ ಕರಗ

    ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ (Madikeri Dasara) ಇಂದಿನಿಂದ ಚಾಲನೆ ಸಿಕ್ಕಿದೆ. ಒಂಬತ್ತು ದಿನಗಳ ದಸರಾ ಉತ್ಸವ ಇಂದು ಕರಗ ಹೊರುವ ಮೂಲಕ ಪ್ರಾರಂಭಗೊಂಡಿದ್ದು, ಮುಂದಿನ ಒಂದು ವಾರಗಳ ಕಾಲ ನಗರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿವೆ. ದಸರಾ ಪ್ರಯುಕ್ತ ಮಂಜಿನ ನಗರಿ ನವವಧುವಿನಂತೆ ಸಿಂಗಾರಗೊಂಡಿದ್ದು ಇಡೀ ನಗರವೇ ಹೊಸ ಕಳೆಯೊಂದಿಗೆ ಕಂಗೊಳಿಸುತ್ತಿದೆ.

    ಎಲ್ಲೆಡೆ ಈಗ ನಾಡ ಹಬ್ಬ ದಸರಾ ಸಂಭ್ರಮ ಶುರುವಾಗಿದೆ. ಜಗತ್ ಪ್ರಸಿದ್ಧ ಮೈಸೂರು ದಸರಾಕ್ಕೆ (Mysuru Dasara) ಇಂದು ವಿದ್ಯುಕ್ತ ಚಾಲನೆ ಸಿಕ್ಕಿದ್ದು, ಇತ್ತ ಐತಿಹಾಸಿಕ ಮಡಿಕೇರಿ ದಸರಾಕ್ಕೂ ಚಾಲನೆ ನೀಡಲಾಗಿದೆ. ನೂರಾರು ವರ್ಷಗಳ ಇತಿಹಾಸವುಳ್ಳ ಮಂಜಿನ ನಗರಿ ಮಡಿಕೇರಿ ದಸರಾ ಇಂದು ನಗರದ ನಾಲ್ಕು ಶಕ್ತಿದೇವತೆಗಳ ಕರಗಾಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಲಭಿಸಿದೆ. ನಗರದ ಪಂಪಿನ ಕೆರೆಬಳಿಯಲ್ಲಿ ನಾಲ್ಕೂ ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಮಡಿಕೇರಿ ಶಾಸಕ ಮಂಥರ್ ಗೌಡ (Manthar Gowda) ಜಿಲ್ಲಾಧಿಕಾರಿ ವೆಂಕಟರಾಜು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಕರಗ ಹೊರುವ ಮೂಲಕ ದಸರಾ ಪ್ರಾರಂಭಗೊಂಡಿದ್ದು ನಾಳೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳು ಕಲಾಸಕ್ತರ ಮನತಣಿಸಲು ಸಿದ್ಧವಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಶರನ್ನವರಾತ್ರಿ ಅದ್ಧೂರಿ ಆಚರಣೆ; ಗೌಳಿ ಸಮಾಜದಿಂದ ಅಂಬಾಭವಾನಿ ಮೆರವಣಿಗೆ

    ಇಂದು ಸಂಜೆ ಕರಗಗಳಿಗೆ (Karaga) ಪೂಜೆಸಲ್ಲಿಸಿದ ದಸರಾ ಸಮಿತಿ ಸದಸ್ಯರು ದಸರಾ ಯಶಸ್ಸಿಗೆ ದೇವರಿಗೆ ಮೊರೆಯಿಟ್ಟಿದ್ದಾರೆ. ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿಮ್ಮ ದೇವಾಲಯಗಳ ಕರಗಗಳನ್ನು ಹೊತ್ತ ವ್ರತದಾರಿಗಳು ನವರಾತ್ರಿಯ ಒಂಬತ್ತು ದಿನಗಳು ನಗರದ ಬೀದಿ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಇದನ್ನೂ ಓದಿ: ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

    ಶತಮಾನಗಳ ಹಿಂದೆ ಬರಗಾಲದಿಂದ ಮಡಿಕೇರಿಯಲ್ಲಿ ಭೀಕರ ಕಾಲರಾ ಆವರಿಸಿದ್ದ ಸಂದರ್ಭ ನಗರದ ದೇವತೆಗಳನ್ನು ಕರಗದ ಮೂಲಕ ನಗರದಲ್ಲಿ ಪ್ರದಕ್ಷಿಣೆ ಮಾಡಿ ಪೂಜೆಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ವರ್ಷಕ್ಕೆ ಒಂದು ಬಾರಿ ದಸರಾ ಸಂದರ್ಭದಲ್ಲಿ ಕರಗ ಉತ್ಸವ (Karaga Utsav) ನಡೆಸಲಾಗುತ್ತದೆ. ಮಡಿಕೇರಿಯ ಶಕ್ತಿದೇವತೆಗಳೆಂದು ಕರೆಸಿಕೊಳ್ಳುವ ನಾಲ್ಕೂ ದೇವಿಯರನ್ನು ಆರಾಧಿಸಿ ಜನರು ಪೂಜಿಸುತ್ತಾರೆ. ನಗರದಲ್ಲಿ ಕರಗ ಸಂಚರಿಸುವ ವೇಳೆ ಪ್ರತಿ ಮನೆ ಮುಂದೆಯೂ ಬಣ್ಣ ಬಣ್ಣದ ಚಿತ್ತಾರದ ರಂಗೋಲಿ ಬಿಡಿಸಿ ದೇವರನ್ನು ಸ್ವಾಗತಿಸಲಾಗುತ್ತದೆ. ನಾಡಿಗೆ ಶುಭವಾಗಲಿ ಎಂದು ಹಾರೈಸಿ ಪೂಜೆ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಶಿವಮೊಗ್ಗ ದಸರಾಗೆ ವೈಭವದ ಚಾಲನೆ

    ಒಟ್ಟಿನಲ್ಲಿ ನಾಡ ಹಬ್ಬ ಎಂದೇ ಖ್ಯಾತವಾದ ದಸರಾ ಉತ್ಸವಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ. ಶಕ್ತಿದೇವತೆಗಳ ಆರಾಧನೆಗೆ ಹೆಸರಾದ ಈ ನವರಾತ್ರಿ ಉತ್ಸವದ ವೇಳೆ ನಾನಾ ವೈವಿಧ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿದ್ದು, ಕೊನೆಯ ದಿನ ಮಡಿಕೇರಿ ದಸರಾದ ವಿಷೇಶ ದಶಮಂಟಪಗಳ ಉತ್ಸವ ಎಲ್ಲರನ್ನು ಬೆರಗುಗೊಳಿಸಲು ಸಜ್ಜಾಗುತ್ತಿದೆ. ಇದನ್ನೂ ಓದಿ: 1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

  • ಕಾವೇರಿಯ ಹುಟ್ಟೂರಿನಲ್ಲೇ ನೀರಿನ ಸಮಸ್ಯೆ – 5 ದಿನಗಳಿಂದ ಮಡಿಕೇರಿಯಲ್ಲಿ ನೀರಿಲ್ಲ

    ಕಾವೇರಿಯ ಹುಟ್ಟೂರಿನಲ್ಲೇ ನೀರಿನ ಸಮಸ್ಯೆ – 5 ದಿನಗಳಿಂದ ಮಡಿಕೇರಿಯಲ್ಲಿ ನೀರಿಲ್ಲ

    ಮಡಿಕೇರಿ: ರಾಜ್ಯಕ್ಕೆ ನೀರುಣಿಸುವ ಕಾವೇರಿಯ ಹುಟ್ಟೂರಿನಲ್ಲಿ ಇದೀಗ ನೀರಿನ ಸಮಸ್ಯೆ ಜಾಸ್ತಿಯಾಗಿದೆ. ಕೊಡಗಿನಲ್ಲಿ (Kodagu) ಹುಟ್ಟುವ ಜೀವನದಿ ಕಾವೇರಿ ರೈತರ ಜೀವನಾಡಿ. ಕೊಡಗಿನಲ್ಲಿ ಹುಟ್ಟಿ ನಾಡಿನ ಜನರ ದಣಿವಾರಿಸುವ ಕಾವೇರಿಯ ತವರಿನ ಜನರಿಗೆ ನೀರಿನ ಬವಣೆ ಈಗಾಗಲೇ ಆರಂಭವಾಗಿದೆ. ಈ ನಡುವೆ ಸ್ಥಳೀಯ ಆಡಳಿತ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಸಾಮರಸ್ಯದ ಕೊರತೆಯಿಂದ ಮಡಿಕೇರಿಯ ಜನರು ಕಳೆದ ಐದು ದಿನಗಳಿಂದ ಕುಡಿಯುವ ನೀರು ಬಾರದೇ ಸಮಸ್ಯೆಗೆ ಸಿಲುಕಿದ್ದಾರೆ.

    ಮಂಜಿನ ನಗರಿ ಮಡಿಕೇರಿ (Madikeri) ನಗರದಲ್ಲಿ ಕಳೆದ 5 ದಿನಗಳಿಂದ ನೀರಿನ ಸಮಸ್ಯೆ (Wtaer Problem) ಎದುರಾಗಿದ್ದು, ಜನತೆ ಪ್ರತಿನಿತ್ಯ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮಡಿಕೇರಿ ಸಮೀಪದ ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿರುವುದು ಇದಕ್ಕೆ ಮುಖ್ಯ ಕಾರಣ. ಆದರೆ ಕೂಟುಹೊಳೆಯಿಂದ ನೀರು ಪಂಪ್ ಮಾಡುವ 300 ಹೆಚ್‌ಪಿಯ 2 ನೀರೆತ್ತುವ ಪಂಪ್ ಹಾಳಾಗಿದೆ. ಇದರಿಂದ ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ಈ ಸಮಸ್ಯೆ ಸರಿದೂಗಿಸಲು ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಆದರೆ ಕೆಲವೊಂದು ಗುಡ್ಡಗಾಡು ಪ್ರದೇಶಗಳಿಗೆ ನೀರಿನ ಟ್ಯಾಂಕರ್‌ಗಳು ಹೋಗದೇ ಇರುವುದರಿಂದ ನಗರದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಈ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ನೀರಿನ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿಯವರೆಗೆ ಪಂಪ್ ಅನ್ನು ಸರಿಯಾಗಿ ನಗರಸಭೆ ಅಧಿಕಾರಿಗಳು ನಿರ್ವಹಣೆ ಮಾಡಿಲ್ಲ. 15 ದಿನಗಳ ಹಿಂದೆ ಒಂದು ಪಂಪ್ (Pump) ಕೆಟ್ಟುಹೋಗಿದ್ದು, ಇಲ್ಲಿಯವರೆಗೂ ಅದನ್ನು ಸರಿಪಡಿಸಲು ಯಾರೂ ಮುಂದಾಗಿಲ್ಲ. ಇದನ್ನೂ ಓದಿ: ಬಹುಕೋಟಿ ವೆಚ್ಚದ BRTS ಬಸ್‌ಗಳಲ್ಲಿ ಇಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ

    ಮತ್ತೊಂದು ಪಂಪ್‌ನಿಂದ ನೀರನ್ನು ಮೇಲಕ್ಕೆ ಎತ್ತಲಾಗುತ್ತಿತ್ತು. ಈಗ ಪಂಪ್ ಕೂಡ ಕೆಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೋ ಇಲ್ಲ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಅಥವಾ ಆಡಳಿತ ಹಾಗೂ ನಗರಸಭೆಯ ಜನಪ್ರತಿನಿಧಿಗಳ ಸಾಮರಸ್ಯದ ಕೊರತೆಯೋ ತಿಳಿಯುತ್ತಿಲ್ಲ. ಆದರೆ ಮಡಿಕೇರಿ ನಗರದ ಜನರು ದಿನನಿತ್ಯ ನೀರಿಗಾಗಿ ಬವಣೆ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ನಾನು ಭವಿಷ್ಯ ನುಡಿದಂತೆ ರೈಲು ದುರಂತ ಆಗಿದೆ; ದೇಶಕ್ಕೆ ಇನ್ನೊಂದು ಗಂಡಾಂತರ ಕಾದಿದೆ – ಕೋಡಿ ಮಠ ಶ್ರೀ ಭವಿಷ್ಯ

    ಈ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ (Manthar Gowda) ಕೂಟುಹೊಳೆಗೆ ಭೇಟಿ ನೀಡಿ ಮೋಟರು ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಇನ್ನೂ 6 ಗಂಟೆ ಒಳಗೆ ಸಮಸ್ಯೆ ಬಗ್ಗೆಹರಿಯದೇ ಇದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರಸಭೆಯಲ್ಲಿ ಬಿಜೆಪಿ ಆಡಳಿತವಿದ್ದು, ಜನರ ಬವಣೆ ಅರ್ಥ ಮಾಡಿಕೊಳ್ಳದೇ ಇರುವುದರಿಂದ ಈ ಸಮಸ್ಯೆಗೆ ಇನ್ನೂ ಪರಿಹಾರ ದೊರೆತಿಲ್ಲ ಎಂದು ದೂರಿದರು. ಇದನ್ನೂ ಓದಿ: 500 ರೂ. ನೋಟ್ ಬ್ಯಾನ್ ಮಾಡಲ್ಲ – 1,000 ರೂ. ನೋಟ್ ಪರಿಚಯಿಸುವ ಉದ್ದೇಶ ಇಲ್ಲ: RBI

  • ನನಗೆ ಅವಮಾನ ಮಾಡಿದ್ದಾರೆ, ಈಗ ಅನುಭವಿಸಲಿ – ಬಿಜಿಪಿ ನಾಯಕರ ವಿರುದ್ಧವೇ ಎ.ಮಂಜು ಕಿಡಿ

    ನನಗೆ ಅವಮಾನ ಮಾಡಿದ್ದಾರೆ, ಈಗ ಅನುಭವಿಸಲಿ – ಬಿಜಿಪಿ ನಾಯಕರ ವಿರುದ್ಧವೇ ಎ.ಮಂಜು ಕಿಡಿ

    ಹಾಸನ: ನನ್ನ ಕ್ಷೇತ್ರದ ಮತದಾರರು ಯಾವ ಪಕ್ಷಕ್ಕೆ ಹೋಗಿ ಎನ್ನುವರೋ ಅಲ್ಲಿಗೆ ಹೋಗುತ್ತೇನೆ. ನನಗೆ ಬಿಜೆಪಿ ಅವರು ಅವಮಾನ ಮಾಡಿದ್ದಾರೆ ಅದಕ್ಕೆ ಅನುಭವಿಸಿದ್ದಾರೆ ಎ.ಮಂಜು ನಾಯಕರ ವಿರುದ್ಧವೇ ಮಾಜಿ ಸಚಿವ ಎ.ಮಂಜು ಕಿಡಿ ಕಾರಿದ್ದಾರೆ.

    ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಾಸನದಲ್ಲಿ ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ನಾವು ಕೇಳಿರಲಿಲ್ಲ. ಆದರೆ ಬಿಜೆಪಿ ಅವರೇ ಬಂದು ಮಂಥರ್ ಗೌಡಗೆ ಟಿಕೆಟ್ ನೀಡುವ ವಿಚಾರ ಮಾತನಾಡಿದ್ದರು. ಜೊತೆಗೆ ನಾನು ಐದು ಕೋಟಿ ರೂ. ಬಂಡವಾಳ ಹಾಕುತ್ತೇನೆ ಎಂದು ಹಾಸನದ ಶಾಸಕರು ಪಾರ್ಟಿ ಮೀಟಿಂಗ್‌ನಲ್ಲಿ ಹೇಳಿದ್ದರು ಎಂದರು.

    ಈ ಮಾತುಕತೆಯ ಬಳಿಕ ಶಾಸಕ ಪ್ರೀತಂ ಗೌಡ ಹಾಗೂ ಅವರ ಬೆಂಬಲಿಗರು ನಂತರದಲ್ಲಿ ಕ್ವಾಲಿಟಿ ಬಾರ್ ಶರತ್ ಅವರನ್ನು ಮಂಥರ್ ಬಳಿ ಕಳುಹಿಸಿ, ಚುನಾವಣೆಗೆ ನಿಲ್ಲಬಾರದು ಎಂದು ಹೇಳಿಸಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಮಂಥರ್ ಗೌಡನನ್ನು ಗುರುತಿಸಿ ಕೊಡಗಿನಲ್ಲಿ ಟಿಕೆಟ್ ನೀಡಿದ್ದಾರೆ ಎಂದು ತಿಳಿಸಿದರು.

    ಒಳ ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ಹಾಸನದ ಕೆಲವು ನಾಯಕರಲ್ಲಿ ಇದೆ. ಮತದಾರರ ಮನವೊಲಿಸುವಲ್ಲಿ ಮುಖಂಡರು ವಿಫಲರಾಗಿದ್ದಾರೆ. ಅವರವರ ಸ್ವಾರ್ಥಕ್ಕೆ, ಸ್ವಹಿತಾಸಕ್ತಿಗೆ ಪಕ್ಷ ಬಲಿ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಶಾಸಕರ ವಿರುದ್ಧ ಹರಿಹಾಯದ್ದರು.

    ಮತದಾರರು ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಸರ್ಕಾರದ ಪರ ಮತ ಹಾಕಿದ್ದಾರೆ. ಆದ್ದರಿಂದ ಕೊಡಗಿನಲ್ಲಿ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪೈಪೋಟಿ ಕೊಟ್ಟಿದೆ. ಕೇವಲ ಹದಿನೈದು ದಿನದಲ್ಲಿ ಅಷ್ಟು ಮತ ನೀಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎನ್ನುವುದನ್ನು ಕೊಡಗು ವಿಧಾನ ಪರಿಷತ್ ಚುನಾವಣೆಯಿಂದ ಸಾಬೀತಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಲು ಅಣ್ಣ-ತಂಗಿಯನ್ನೇ ಮದುವೆಯಾದ!

    ಇದೇ ವೇಳೆ ಕಾಂಗ್ರೆಸ್ ಬೆಂಬಲ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಮಗನಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದೇನೆ ಹೊರತು ಬಿಜೆಪಿ ವಿರುದ್ಧ ಹೇಳಿಕೆ ನೀಡಿಲ್ಲ. ಹಾಸನದ ಎಂಎಲ್‌ಸಿ ಚುನಾವಣೆಯಲ್ಲಿ ನಾಯಕರ ಕೊರತೆಯೇ ಎರಡು ಪಕ್ಷಗಳು ಹೀನಾಯವಾಗಿ ಸೋಲಲು ಕಾರಣವಾಗಿದೆ ಎಂದರು. ಇದನ್ನೂ ಓದಿ: ಕೊಡಗಿನ ಗ್ರಾಮವೊಂದರಲ್ಲಿ ಪುರಾತನ ಈಶ್ವರ ಕೆತ್ತನೆ ಕಲ್ಲುಗಳು ಪತ್ತೆ

    ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ತಟಸ್ಥವಾಗಿದ್ದೆ, ಯಾರನ್ನೂ ಬೆಂಬಲಿಸಿಲ್ಲ. ನಾನು ಬಿಜೆಪಿಯಲ್ಲಿದ್ದೇನೆ ಅಂಥಾ ನನಗೆ ಅನ್ನಿಸುತ್ತದೆ. ಆದರೆ ಪಕ್ಷ ಏನು ಹೇಳುತ್ತದೆ ಎನ್ನುವುದು ಗೊತ್ತಿಲ್ಲ. ಅಧಿಕೃತವಾಗಿ ಬಿಜೆಪಿ ಪಕ್ಷದಲ್ಲಿದ್ದೇನೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್‌ ಮೇಲೆ ಅಧಿಕಾರಿಗಳ ದಾಳಿ

  • ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ: ಮಂಥರ್ ಗೌಡ ವಾಗ್ದಾಳಿ

    ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ: ಮಂಥರ್ ಗೌಡ ವಾಗ್ದಾಳಿ

    ಮಡಿಕೇರಿ: ಕೊಡಗಿನಲ್ಲಿ ಮೂರು ದಶಕಗಳಿಂದ ಬಿಜೆಪಿಯ ಶಾಸಕರು ಇದ್ದಾರೆ. ಅವರಿಂದ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳನ್ನು ಎದುರಿಸಿ ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ. ಗೆದ್ದಿರುವ ಸುಜಾ ಕುಶಾಲಪ್ಪ ಅವರು ಇನ್ನಾದರೂ ಪಂಚಾಯಿತಿ ಸದಸ್ಯರನ್ನು ಗೌರವದಿಂದ ನಡೆಸಿಕೊಳ್ಳಲಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ವಾಗ್ದಾಳಿ ನಡೆಸಿದರು.

    ಚುನಾವಣೆ ಫಲಿತಾಂಶ ಘೋಷಣೆ ಆಗಿ ಸೋಲು ಅನುಭವಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮತಗಳು 400 ಮತಗಳಿದ್ದರೂ, ನಾವು 602 ಮತಗಳನ್ನು ಪಡೆದಿದ್ದೇವೆ. ಬಿಜೆಪಿಗೆ 800 ಮತಗಳಿದ್ದವು ಅವರ 200 ಮತಗಳು ಕಾಂಗ್ರೆಸ್ಸಿಗೆ ಬಂದಿವೆ ಎಂದರೆ ಅದು ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಅಂತಲೇ ಅರ್ಥ. ಚುನಾವಣೆ ಹತ್ತಿರ ಬಂದಾಗ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಾಗಿರುವ ಮತದಾರರನ್ನು ಕುರಿಗಳಂತೆ ರೆಸಾರ್ಟ್‍ಗಳಲ್ಲಿ ಕೂಡಿ ಹಾಕಿ ಬೆದರಿಸಿ ಮತ ಹಾಕಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ ಮತ್ತೆ ಅರಳಿದ ಬಿಜೆಪಿ

    BJP - CONGRESS

    ಮತ ಎಣಿಕೆ ವೇಳೆ ಮೂರ್ನಾಲ್ಕು ಟೇಬಲ್ ನಲ್ಲಿ ನನಗೆ ಹೆಚ್ಚು ಮತಗಳು ಬಂದವು. ಆಗ ಬಿಜೆಪಿಯ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ನಡುಗುತ್ತಿದ್ದರು. ಅಂತು ನಾವು ಈ ಚುನಾವಣೆಯಲ್ಲಿ ಬಿಜೆಪಿಯನ್ನು ನಡುಗಿಸಿದ್ದೇವೆ. ಮುಂದಿನ ಚುನಾವಣೆಯಲ್ಲಿ ಅವರನ್ನು ಸೋಲಿಸಿ ನಮ್ಮ ಗೆಲುವಿಗಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಚುನಾವಣೆಯಲ್ಲಿ ಗೆಲುವು ಸೋಲು ಎನ್ನೋದು ಇದ್ದದ್ದೇ. ಇದರಿಂದ ನನಗೇನು ಬೇಸರವಿಲ್ಲ. 37 ವರ್ಷದ ನನಗೆ ಟಿಕೆಟ್ ನೀಡಿದ್ದಕ್ಕೆ ನಾನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಂದನೆ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ: ಡಿಕೆಶಿ