Tag: ಮಕ್ಕಳ ಆಯೋಗ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

    ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಕಾಲ್ತುಳಿತದಿಂದ (Chinnaswamy Stampede) ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ (CID) ಮಕ್ಕಳ ಹಕ್ಕುಗಳ ಆಯೋಗ (Child Rights Panel) ನೋಟಿಸ್ ಜಾರಿ ಮಾಡಿದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಕಷ್ಟು ಜನ ಮಕ್ಕಳು ತೊಂದರೆಗೆ ಒಳಗಾಗಿರುವ ಬಗ್ಗೆ ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ನೋಟಿಸ್ ನೀಡಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು KSCA, RCB: ಸಿದ್ದರಾಮಯ್ಯ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು. ಅವಘಡದಲ್ಲಿ ಸಾಕಷ್ಟು ಜನ ಮಕ್ಕಳಿಗೆ ತೊಂದರೆಯಾಗಿರುವ ಮಾಹಿತಿ ಇದೆ. ಆದರೆ ನಿಖರವಾಗಿ ಎಷ್ಟು ಮಕ್ಕಳಿಗೆ ಸಮಸ್ಯೆಯಾಗಿದೆ ಏನಾಗಿದೆ ಎಂಬುದರ ವಿವರ ಸಿಕ್ಕಿಲ್ಲ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಸಿಐಡಿಗೆ ವಿವರ ಕೋರಿ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಜೂ. 4ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

  • ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌ – ಮಕ್ಕಳ ಆಯೋಗದಿಂದ ಮಾಹಿತಿ

    ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌ – ಮಕ್ಕಳ ಆಯೋಗದಿಂದ ಮಾಹಿತಿ

    ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮಠದ ಹಾಸ್ಟೆಲ್‌ ವಿದ್ಯಾರ್ಥಿನಿಯರ ಭವಿಷ್ಯದ ಬಗ್ಗೆ ಚಿಂತೆ ಎದುರಾಗಿದೆ. ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್‌ ಮಾಡುವ ಕುರಿತು ಮಕ್ಕಳ ಹಕ್ಕು ಆಯೋಗ ಚಿಂತಿಸಿದೆ.

    ಸ್ವಾಮೀಜಿ ಬಂಧನದ ಬೆನ್ನಲ್ಲೆ ಮಠದ ವಿದ್ಯಾರ್ಥಿನಿಯರ ಭವಿಷ್ಯದತ್ತ ಮಕ್ಕಳ ಆಯೋಗ ಚಿಂತನೆ ನಡೆಸಿದೆ. ಸದ್ಯಕ್ಕೆ ವಿದ್ಯಾರ್ಥಿನಿಯರನ್ನು ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್‌ ಮಾಡುವ ನಿರ್ಧಾರ ಕೈಗೊಂಡಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ʼಪಬ್ಲಿಕ್‌ ಟಿವಿʼಗೆ ಆಯೋಗ ತಿಳಿಸಿದೆ. ಇದನ್ನೂ ಓದಿ: ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

    125 ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ ಇದ್ದರು. ಅವರ ಪೈಕಿ ಸುಮಾರು ಅರ್ಧಕ್ಕರ್ಧ ವಿದ್ಯಾರ್ಥಿನಿಯರು ಹಬ್ಬಕ್ಕೆಂದು ಊರಿಗೆ ಹೋಗಿದ್ದು, ವಾಪಸ್ಸಾಗಿಲ್ಲ. ಹೀಗಾಗಿ ಅವರು ಬಂದ ಬಳಿಕ ಎಲ್ಲಾ ವಿದ್ಯಾರ್ಥಿನಿಯರನ್ನು ಆಯಾಯಾ ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್ ಮಾಡಲಾಗುವುದು ಎಂದು ಆಯೋಗ ಮಾಹಿತಿ ನೀಡಿದೆ.

    ವಿವಿಧ ಜಿಲ್ಲೆಗಳಿಂದ ಮಕ್ಕಳು ಬಂದಿದ್ದಾರೆ. ಆದ್ದರಿಂದ ಆಯಾಯ ಜಿಲ್ಲೆಯ ಮಕ್ಕಳಿಗೆ ಅವರವರ ಜಿಲ್ಲೆಯಲ್ಲಿಯೇ ವ್ಯವಸ್ಥೆ ಮಾಡಲಾಗುವುದು. ಮಕ್ಕಳಿಗೆ ಆತಂಕದ ವಾತಾವರಣ ಇರಬಾರದು ಎನ್ನುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಮುರುಘಾ ಶ್ರೀಗಳ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಎಚ್ಚರಿಕೆಯ ಹೆಜ್ಜೆ

    Live Tv
    [brid partner=56869869 player=32851 video=960834 autoplay=true]

  • ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ – ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗದಿಂದ ಪತ್ರ

    ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ – ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗದಿಂದ ಪತ್ರ

    ಬೆಂಗಳೂರು: ಬೇಸಿಗೆ ರಜೆ ಎಂದು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗ ಪತ್ರ ಬರೆದಿದೆ.

    ಚುನಾವಣಾ ಸಂದರ್ಭದಲ್ಲಿ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಈಗ ಮಕ್ಕಳಿಗೆ ಬೇಸಿಗೆ ರಜೆಯೂ ಇದೆ. ಆದರಿಂದ ಮಕ್ಕಳನ್ನು ಪ್ರಚಾರಕ್ಕೆ ಬಳಸುತ್ತಿರೋದು ಕಂಡುಬಂದರೆ ದೂರು ದಾಖಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಕ್ಕಳ ಬಳಕೆ ಕಂಡು ಬಂದರೆ ಮಕ್ಕಳ ಆಯೋಗದ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್ಲ ಪಕ್ಷದವರು ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಮಾಡುತ್ತಿರುವ ಹಿನ್ನಲೆ ಆಯೋಗಕ್ಕೆ ಪತ್ರ ಬರೆಯಲಾಗಿದೆ.

    ಪತ್ರದಲ್ಲಿ ಏನಿದೆ?
    ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ 2005ರ ಸೆಕ್ಷನ್ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ 14ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿರುತ್ತದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವ-ಪ್ರೇರಣೆಯಿಂದ (ಸುಮೊಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.

    ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳಿಗೆ ಬೇಸಿಗೆಯ ನಿಮಿತ್ತ ಶಾಲೆಗಳಿಗೆ ರಜೆ ಘೋಷಿಸಿರುವುದರಿಂದ ಈ ಮಕ್ಕಳನ್ನು ವಿವಿಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಕ್ಕಳನ್ನು ಈ ರೀತಿಯ ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ.

    ಈ ಬಗ್ಗೆ ತಾವುಗಳು ವೈಯಕ್ತಿಕ ಗಮನ ಹರಿಸಿ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ/ ಚುನಾವಣಾ ಅಧಿಕಾರಿಗಳಿಗೆ ಯಾವುದೇ ರೀತಿಯಲ್ಲಿ ಮಕ್ಕಳಿಂದ ದುಡಿಮೆಯನ್ನು ಮಾಡಿಸುವಂತಿಲ್ಲ ಹಾಗೂ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಕ್ಕಳ ಹಿತದೃಷ್ಟಿಯಿಂದ ಸೂಕ್ತ ನಿರ್ದೇಶನ ನೀಡುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • ಅಣ್ಣಾಮಲೈ ವಿರುದ್ಧವೇ ದೂರು ಕೊಟ್ಟ ವಿಜಿ ಪುತ್ರಿ: ಸ್ಪಷ್ಟನೆ ಕೊಟ್ಟ ಡಿಸಿಪಿ

    ಅಣ್ಣಾಮಲೈ ವಿರುದ್ಧವೇ ದೂರು ಕೊಟ್ಟ ವಿಜಿ ಪುತ್ರಿ: ಸ್ಪಷ್ಟನೆ ಕೊಟ್ಟ ಡಿಸಿಪಿ

    ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ವಿರುದ್ಧವೇ ದುನಿಯಾ ವಿಜಿ ದ್ವಿತೀಯಾ ಪುತ್ರಿ ಮೋನಿಷಾ ಮಕ್ಕಳ ಆಯೋಗಕ್ಕೆ ದೂರು ನೀಡಿದ್ದಾರೆ.

    ದುನಿಯಾ ವಿಜಿ ಕೌಟುಂಬಿಕ ಕಲಹ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ವಿಜಿ ಅವರ ಎರಡನೇ ಪತ್ನಿ ಕೀರ್ತಿ ಗೌಡರ ಮೇಲೆ ಹಲ್ಲೆ ನಡೆಸಿದ್ದ, ಮೊದಲ ಪತ್ನಿ ನಾಗರತ್ನರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಅಲ್ಲದೇ ದುನಿಯಾ ವಿಜಿ ಮಕ್ಕಳನ್ನು ಸಹ ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರ ವಿಚಾರಣೆಯಿಂದ ಮಾನಸಿಕವಾಗಿ ನೊಂದಿದ್ದ ದ್ವಿತೀಯಾ ಪುತ್ರಿ ಮೋನಿಷಾ ಈಗ ಅಣ್ಣಾಮಲೈ ವಿರುದ್ಧವೇ ಮಕ್ಕಳ ಆಯೋಗಕ್ಕೆ ದೂರು ನೀಡಿದ್ದಾರೆ.

    ದೂರಿನಲ್ಲಿ ಗಿರಿನಗರ ಪೊಲೀಸರು ನಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಪದೇ ಪದೇ ಮನಗೆ ಬಂದು ತಾಯಿ ಎಲ್ಲಿ ಎಂದು ಪ್ರಶ್ನಿಸುತ್ತಾರೆ. ಮನೆಗೆ ಬಂದಾಗ ಏಕಾಏಕಿ ಫೋನ್ ಕಿತ್ತುಕೊಂಡು, ಅಮ್ಮನಿಂದ ಕರೆ ಬಂದಿದ್ಯಾ ಎಂದು ಪರಿಶೀಲಿಸುತ್ತಾರೆ. ಪೊಲೀಸರ ವರ್ತನೆಯಿಂದಾಗಿ ನಮಗೆ ತುಂಬಾ ಹಿಂಸೆಯಾಗುತ್ತಿದೆ. ಇದರಿಂದಾಗಿ ನಾವು ನೆಮ್ಮದಿಯಾಗಿ ಓದಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಅಪ್ಪನಿಂದ ಕಿರುಕುಳ, ಇನ್ನೊಂದು ಕಡೆ ಪೊಲೀಸರ ಟಾರ್ಚರ್ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಮೋನಿಕಾ ದೂರು ಆಧರಿಸಿ ಅಣ್ಣಾಮಲೈಗೆ ಕರೆ ಮಾಡಿ ಮಾಹಿತಿ ಪಡೆದ ಮಕ್ಕಳ ಆಯೋಗ, ಮೋನಿಕಾಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಮಕ್ಕಳನ್ನು ಈ ಪ್ರಕರಣದಿಂದ ದೂರವಿಡಿ. ನಟ ವಿಜಯ್ ಕೂಡ ಮಕ್ಕಳ ಬಗ್ಗೆ ಮಾತನಾಡದಂತೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ಆಯೋಗದಿಂದ ಸೂಚನಾ ಪತ್ರ ರವಾನೆಯಾಗಿರುವ ಮಾಹಿತಿ ಲಭ್ಯವಾಗಿದೆ.

    ವಿಜಿ ಪುತ್ರಿ ದೂರು ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅಣ್ಣಾಮಲೈ, ನಟ ದುನಿಯಾ ವಿಜಿ ಪ್ರಕರಣದಲ್ಲಿ ಮಕ್ಕಳ ಆಯೋಗದಿಂದ ನಮಗೆ ನೋಟಿಸ್ ಬಂದಿದ್ದು, ಈಗಾಗಲೇ ನಾನು ಅದಕ್ಕೆ ಉತ್ತರಿಸಿದ್ದೇನೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯನ್ನು ಕೊಟ್ಟಿಲ್ಲ. ತನಿಖಾ ಸಂದರ್ಭದಲ್ಲಿ ನಾಗರತ್ನ ಅವರ ಬಗ್ಗೆ ವಿಚಾರಣೆ ಮಾಡಬೇಕಿತ್ತು. ಹೀಗಾಗಿ ಘಟನಾವಳಿಯ ಬಗ್ಗೆ ಪುತ್ರಿ ಮೋನಿಕಾರಿಂದ ಹೇಳಿಕೆಯನ್ನು ಪಡೆದುಕೊಂಡಿದ್ದೇವೆ. ಆದರೆ ದ್ವಿತೀಯಾ ಪುತ್ರಿ ಮೋನಿಷಾರಿಂದ ಯಾವುದೇ ಮಾಹಿತಿಯನ್ನು ಕೇಳಿಲ್ಲ. ಪೊಲೀಸರು ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವ ಹಾಗೆ ನಡೆದುಕೊಂಡಿಲ್ಲ ಎಂದು ಸ್ಪಷ್ಟ ಪಡಿಸಿದರು.

    ಮೋನಿಷಾ ಆರೋಪ ಮಾಡಿದ ಹಾಗೆ, ಪೊಲೀಸರು ಅವರ ಮೊಬೈಲ್ ತಪಾಸಣೆ ಮಾಡಿಲ್ಲ. ತನಿಖಾ ಸಂದರ್ಭಗಳಲ್ಲಿ ಕೆಲವೊಂದು ಈ ರೀತಿಯ ತೊಂದರೆ ಆಗುತ್ತದೆ. ತೊಂದರೆ ಆಗಿದ್ದರೆ ಕ್ಷಮೆ ಇರಲಿ. ಆದರೆ ನಮ್ಮ ಗಮನಕ್ಕೆ ಬಂದ ಹಾಗೆ, ನಾವು ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ. ಮಕ್ಕಳ ಆಯೋಗಕ್ಕೆ ಈಗಾಗಲೇ ಮೌಖಿಕವಾದ ಹೇಳಿಕೆಯನ್ನು ನೀಡಿದ್ದೇನೆ. ಅವರು ಲಿಖಿತ ರೂಪದಲ್ಲಿ ತಿಳಿಸುವಂತೆ ಹೇಳಿದ್ದಾರೆ. ಹೀಗಾಗಿ ಗುರುವಾರ ಲಿಖಿತ ರೂಪದಲ್ಲಿ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv