Tag: ಮಕ್ಕಳ ಕಳ್ಳಸಾಗಣೆ

  • ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳ ಕಳ್ಳಸಾಗಣೆ (Child Trafficking) ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು (License) ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಅಲ್ಲದೇ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್ ನಿಗದಿಪಡಿಸಿದೆ.

    ಉತ್ತರಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾ.ಜೆ.ಬಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನಗಳನ್ನು ನೀಡಿದೆ. ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ಅಲಹಾಬಾದ್ ಹೈಕೋರ್ಟ್ ಮತ್ತು ಉತ್ತರಪ್ರದೇಶ ಸರ್ಕಾರ ಎರಡನ್ನೂ ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: Gadag | ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

    ಬಳಿಕ ಈ ಬಗ್ಗೆ ನಿರ್ದೇಶನಗಳನ್ನು ನೀಡಿದ ಪೀಠ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಲು ಕೆಳ ನ್ಯಾಯಾಲಯಗಳಿಗೆ ನಿರ್ದೇಶನಗಳನ್ನು ನೀಡುವಂತೆ ದೇಶಾದ್ಯಂತದ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಿತು. ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಲಯದ ತಿರಸ್ಕಾರವೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತಿಳಿಸಿದೆ. ಇದನ್ನೂ ಓದಿ: ವರದಿಯೇ ಹೊರಗೆ ಬಾರದೇ ಜಾತಿಗಣತಿ ವಿರೋಧ ಮಾಡೋದು ಸರಿಯಲ್ಲ: ಸಂತೋಷ್ ಲಾಡ್

    ರಾಜ್ಯ ಸರ್ಕಾರಗಳು ನಮ್ಮ ವಿವರವಾದ ಶಿಫಾರಸುಗಳನ್ನು ಪರಿಶೀಲಿಸಿ, ಭಾರತೀಯ ಸಂಸ್ಥೆ ಸಲ್ಲಿಸಿದ ವರದಿಯನ್ನು ಅಧ್ಯಯನ ಮಾಡಿ, ಆದಷ್ಟು ಬೇಗ ಅದನ್ನು ಜಾರಿಗೆ ತರಬೇಕು. ಮಕ್ಕಳ ಕಳ್ಳಸಾಗಣೆ ಪ್ರಕರಣಗಳಲ್ಲಿ ಬಾಕಿ ಇರುವ ವಿಚಾರಣೆಯ ಸ್ಥಿತಿಗತಿಯನ್ನು ತಿಳಿಸಲು ದೇಶಾದ್ಯಂತದ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಲಾಗಿದೆ. 6 ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ದಿನನಿತ್ಯದ ವಿಚಾರಣೆಯನ್ನು ನಡೆಸಲು ನಿರ್ದೇಶನಗಳನ್ನು ನೀಡಬೇಕು ಎಂದು ಪೀಠ ಆದೇಶಿಸಿತು. ಇದನ್ನೂ ಓದಿ: Chitradurga | ಗಂಜಲಗುಂಟೆ ಗ್ರಾಮದಲ್ಲಿ 3 ತಿಂಗಳಿಂದ ನೀಗದ ನೀರಿನ ಬವಣೆ – ಗ್ರಾಮಸ್ಥರು ಕಂಗಾಲು

    ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. 2020ರಿಂದ ಸುಮಾರು 36,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸ್

  • ನಾಲ್ಕೈದು ಲಕ್ಷಕ್ಕೆ ಮಾರಾಟ- ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

    ನಾಲ್ಕೈದು ಲಕ್ಷಕ್ಕೆ ಮಾರಾಟ- ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

    ನವದೆಹಲಿ: ಮಕ್ಕಳ ಕಳ್ಳಸಾಗಣೆ (Child Trafficking) ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

    ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.

    ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ: ಸಿಬಿಐ (CBI) ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ.

    ದೆಹಲಿಯ ಕೆಲವು ದೊಡ್ಡ ಆಸ್ಪತ್ರೆಗಳಿಂದ ಮಕ್ಕಳು ಕಾಣೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ನಂತರ ಸಿಬಿಐ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮಕ್ಕಳ ವ್ಯಾಪಾರದ ಬಗ್ಗೆ ಮಾಹಿತಿ ಪಡೆದ ಸಿಬಿಐ, ನಾಪತ್ತೆಯಾದ ಮಕ್ಕಳೊಂದಿಗೆ ಸಂಪರ್ಕ ಸಾಧಿಸಿ ದಾಳಿ ನಡೆಸಿತು.