Tag: ಮಗು ಮಾರಾಟ

  • 14,000 ರೂ. ಹಣಕ್ಕೆ ಹೆಣ್ಣು ಮಗು ಮಾರಾಟಕ್ಕೆ ಯತ್ನ

    14,000 ರೂ. ಹಣಕ್ಕೆ ಹೆಣ್ಣು ಮಗು ಮಾರಾಟಕ್ಕೆ ಯತ್ನ

    ಮೈಸೂರು: ಹೆಣ್ಣು ಮಗುವನ್ನು 14,000 ರೂ.ಗೆ ಮಾರಾಟ ಮಾಡಿರುವ ಆರೋಪವೊಂದು ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠ ನಗರದಲ್ಲಿ ಕೇಳಿಬಂದಿದೆ.

    ದಂಪತಿಗೆ ಹುಟ್ಟಿದ ಮೂರು ಮಕ್ಕಳೂ ಕೂಡ ಹೆಣ್ಣಾದ ಕಾರಣ ಮೂರನೇ ಮಗುವನ್ನ ಮಾರಾಟ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮತ್ತೆ ದರ ಏರಿಕೆ ಶಾಕ್‌ – ಎಸ್ಕಾಂ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಕತ್ತರಿ

    ಗುಂಡ್ಲುಪೇಟೆ ನಿವಾಸಿಯೊಬ್ಬರಿಗೆ ಹೆಣ್ಣು ಮಗು ಮಾರಾಟ ಮಾಡಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯೊಬ್ಬರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಬಿಕಿನಿ ಧರಿಸಿ ಹಾಟ್ ಅವತಾರ ತಾಳಿದ ‘ಬಿಗ್‌ ಬಾಸ್‌’ ಖ್ಯಾತಿಯ ಇಶಾನಿ

    ಮಗುವನ್ನ ಖರೀದಿ ಮಾಡಿದವರನ್ನು ಸಂಪರ್ಕಿಸಿದಾಗ 14,000 ರೂ.ಗೆ ಮಗು ಮಾರಾಟ ಮಾಡಿರುವುರು ಬೆಳಕಿಗೆ ಬಂದಿದೆ. ನಾವು ನೀಡಿದ ಹಣವನ್ನು ಹಿಂದಿರುಗಿಸಿದರೆ ಮಗು ಕೊಡುವುದಾಗಿ ಮಗು ಖರೀದಿ ಮಾಡಿದವರು ಹೇಳಿದ್ದರು. ಮೊದಲು ಮಗುವನ್ನ ತಂದು ಕೊಡಿ ನಂತರ ಹಣದ ವಿಚಾರ ಮಾತನಾಡೋಣ ಎಂದು ಹೇಳಿ ಮಗುವನ್ನು ವಾಪಸ್ ಪಡೆದುಕೊಂಡಿದ್ದರು. ಇದನ್ನೂ ಓದಿ: 2023-24ನೇ ಸಾಲಿನಲ್ಲಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

    ಈವರೆಗೂ ಯಾರ ವಿರುದ್ಧವೂ ಪ್ರಕರಣ ದಾಖಲಾಗಿಲ್ಲ. ಮಗುವನ್ನ ಮಾರಾಟ ಮಾಡಿದವರಾಗಲಿ, ಮಧ್ಯವರ್ತಿಯಾಗಲಿ ಅಥವಾ ಖರೀದಿಸಿದವರನ್ನಾಗಲಿ ವಶಕ್ಕೆ ಪಡೆದಿಲ್ಲ. ಕೇವಲ ಮಧ್ಯವರ್ತಿಗಳಂತೆ ವರ್ತಿಸಿ ಮಗುವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

  • Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    ರಾಮನಗರ: ಹಣದ (Money) ಆಸೆಗೆ ಬಿದ್ದ ತಾಯಿಯೋರ್ವಳು ತನ್ನ ಗಂಡನಿಗೂ ತಿಳಿಸದೇ ಹೆತ್ತ ಮಗುವನ್ನೇ (Child) ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ. ಈ ಸಂಬಂಧ ಪತ್ನಿಯ ವಿರುದ್ಧ ಪತಿಯೇ ದೂರು ನೀಡಿದ್ದು, ಪತ್ನಿ ಹಾಗೂ ಇತರೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ರಾಮನಗರದ ಯಾರಬ್ ನಗರ ನಿವಾಸಿ ಸದ್ದಾಂ ಪಾಷಾ ಹಾಗೂ ನಸ್ರೀನ್ ತಾಜ್ ಕಳೆದ 6 ವರ್ಷಗಳ ಹಿಂದೆ ಮದುವೆ ಆಗಿದ್ದರು. ಅವಳಿ ಮಕ್ಕಳು ಸೇರಿ ಒಟ್ಟು 4 ಮಕ್ಕಳಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಸದ್ದಾಂ ಬಡತನದಲ್ಲಿ ಜೀವನ ನಡೆಸುತ್ತಿದ್ದರು. ಕಳೆದ 30 ದಿನಗಳ ಹಿಂದೆ ದಂಪತಿಗೆ ಗಂಡು ಮಗು ಜನಿಸಿತ್ತು. ಸದ್ದಾಂ ಕೆಲ ಕೈಸಾಲ ಕೂಡಾ ಮಾಡಿಕೊಂಡಿದ್ದ ಹಿನ್ನೆಲೆ ಈ ಸಾಲ ತೀರಿಸುವ ಸಂಬಂಧ ಕೊನೆಯ ಮಗುವನ್ನು ಮಾರಾಟ ಮಾಡುವಂತೆ ನಸ್ರೀನ್, ಸದ್ದಾಂಗೆ ಪೀಡಿಸುತ್ತಲೇ ಬಂದಿದ್ದಳು. ಆದರೆ, ಸದ್ದಾಂ ಪತ್ನಿಯ ಮಾತನ್ನು ತಿರಸ್ಕರಿಸಿದ್ದ. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಸಿಎಂ

    ಕೊನೆಗೆ ಡಿ.5ಕ್ಕೆ ಪತಿ ಕೆಲಸಕ್ಕೆ ಹೋಗಿದ್ದನ್ನು ಬಳಸಿಕೊಂಡ ನಸ್ರೀನ್ ಸ್ಥಳೀಯ ಅಸ್ಲಾಂ ಹಾಗೂ ಫಾಹಿಮಾ ಸಹಾಯದೊಂದಿಗೆ ಬೆಂಗಳೂರಿನ ನಿವಾಸಿ ತರ್ನಮ್ ಸುಲ್ತಾನ್ ಎಂಬವರಿಗೆ ಗಂಡು ಮಗುವನ್ನು 1.5 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಇನ್ನು ಪತಿ ಸದ್ದಾಂ ಪಾಷಾ ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭದಲ್ಲಿ ಮಗುವಿನ ಕುರಿತು ವಿಚಾರಿಸಿದ್ದಾನೆ. ಈ ವೇಳೆ ನಸ್ರೀನ್ ಮಗುವಿಗೆ ಹುಷಾರಿಲ್ಲ ಸಂಬಂಧಿಕರು ಕರೆದುಕೊಂಡು ಹೋಗಿದ್ದು, ಬೆಳಗ್ಗೆ ವಾಪಸ್ ಬಿಡುತ್ತಾರೆ ಎಂದು ಸಮಜಾಯಿಷಿ ನೀಡಿದ್ಧಾಳೆ. ಪತ್ನಿಯ ಮಾತನ್ನು ನಂಬಿದ್ದ ಸದ್ದಾಂ ಪಾಷಾ ಊಟ ಮುಗಿಸಿ ಮಲಗಿದ್ದ. ಮಾರನೆಯ ದಿನವೂ ಮಗುವಿಗಾಗಿ ದಂಪತಿಗಳ ನಡುವೆ ಗಲಾಟೆಯಾಗಿದ್ದು, ಇದರಿಂದ ಸದ್ದಾಂ ತಲೆಗೆ ಪೆಟ್ಟು ಬಿದ್ದಿದೆ. ಇದನ್ನೂ ಓದಿ: ಪ್ರಧಾನಿಯಾಗುವ ಅವಕಾಶವಿದೆ ಅಂದಿದ್ದಕ್ಕೆ ನಕ್ಕಿದ್ದರು – ಮಾಜಿ ಸಚಿವ ಎಂ.ಸಿ ನಾಣಯ್ಯ

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಡಿ.7ರಂದು ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಸದ್ದಾಂ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ರಾಮನಗರ ಟೌನ್ ಪೊಲೀಸರು, ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ತಾಯಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

  • ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    ಭುವನೇಶ್ವರ: ಹಣಕಾಸಿನ ಸಮಸ್ಯೆಯಿಂದಾಗಿ ಪೋಷಕರು ತಮ್ಮ 4 ವರ್ಷದ ಹೆಣ್ಣು ಮಗುವನ್ನು 40,000 ರೂ.ಗಳಿಗೆ ಮಾರಾಟ (Daughter Selling) ಮಾಡಿರುವ ಆಘಾತಕಾರಿ ಘಟನೆ ಒಡಿಶಾದಲ್ಲಿ (Odisha) ನಡೆದಿದೆ.

    ಘಟನೆ ತಿಳಿದ ಕೂಡಲೇ ಮಗುವನ್ನು ರಕ್ಷಣೆ ಮಾಡಿರುವ ಬಡಗಡ ಪೊಲೀಸರು (Badagada Police), ಪೋಷಕರು ಹಾಗೂ ಮಗು ಮಾರಾಟಕ್ಕೆ ಸಹಾಯ ಮಾಡಿದ ನಾಲ್ವರು ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಆರೋಪಿ ದಂಪತಿ ಬಿಹಾರ ಮೂಲದವರಾಗಿದ್ದು, ಬಡಗಡದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕುಟುಂಬದಲ್ಲಿ ತುಂಬಾ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರು. ಹಾಗಾಗಿ ತಮ್ಮ ನಾಲ್ಕು ವರ್ಷದ ಮಗುವನ್ನು ಪಿಪಿಲಿಯಲ್ಲಿರುವ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದರು ಎಂದು ಬಡಗಡ ಪೊಲೀಸ್ ಠಾಣೆಯ ಪ್ರಭಾರಿ ತೃಪ್ತಿ ರಂಜನ್ ನಾಯಕ್ ತಿಳಿಸಿದ್ದಾರೆ.

    ಘಟನೆ ಬೆಳಕಿಗೆ ಬಂದ ನಂತರ ಬಡಗಡ ಪೊಲೀಸರು ಮಗುವನ್ನು ರಕ್ಷಿಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಧ್ಯವರ್ತಿಗಳು ಮತ್ತು ಮಗುವಿನ ಪೋಷಕರು ಸೇರಿದಂತೆ ಒಟ್ಟು 6 ಜನರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಧನುಷ್, ಐಶ್ವರ್ಯಾಗೆ ಡಿವೋರ್ಸ್ ಮಂಜೂರು ಮಾಡಿದ ಕೋರ್ಟ್- 18 ವರ್ಷಗಳ ದಾಂಪತ್ಯ ಅಂತ್ಯ

    ಘಟನೆ ಕುರಿತು ಮಾತನಾಡಿದ ತೃಪ್ತಿ ರಂಜನ್ ನಾಯಕ್, ಸಾರ್ಥಕ್ ಮಹಾದಿಕ್ ಎಂಬಾತನಿಂದ ಬಿಹಾರದ ದಂಪತಿಗಳು ತಮ್ಮ ಮಗುವನ್ನು ಮಾರಾಟ ಮಾಡಿರುವ ಮಾಹಿತಿ ಗೊತ್ತಾಯಿತು. ತಕ್ಷಣ ಕಾರ್ಯಾಚರಣೆ ನಡೆಸಿ, ಮಗುವನ್ನು ರಕ್ಷಿಸಿದ್ದೇವೆ. ಪೋಷಕರು ಸೇರಿ 6 ಜನರನ್ನ ಬಂಧಿಸಿ ತನಿಖೆ ನಡೆಸುತ್ತಿದ್ದೇವೆ. ಪೋಷಕರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕಾರ

  • ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!

    ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!

    ಕೋಲಾರ: ಸಾಲ ತೀರಿಸುವ ಸಲುವಾಗಿ ತಂದೆಯೊಬ್ಬ ತನ್ನ ಗಂಡು ಮಗುವನ್ನೇ ಮಾರಿದ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಯ ಮೂರು ತಿಂಗಳ ಮಗು ಇದಾಗಿದೆ. ಬಂಗಾರಪೇಟೆಯ ಕೆರೆಕೋಡಿ ನಿವಾಸಿಯಾದ ವಲ್ಲಿ ಎನ್ನುವ ಮಹಿಳೆ ಮೂಲಕ ಮುನಿರಾಜು, ಮಗು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ.

    ಹಣದಾಸೆಗೆ ಬಿದ್ದ ಪತಿ ಮುನಿರಾಜು 3 ತಿಂಗಳ ಗಂಡು ಮಗು ಮಾರಾಟ ಮಾಡಿದ್ದಾನೆ. ತನಗೆ ಮಗು ಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಆಯೋಗ ಹಾಗೂ ಬಂಗಾರಪೇಟೆ ಪೊಲೀಸ್ ಠಾಣೆಗೆ ಪತ್ನಿ ಪವಿತ್ರ ದೂರು ನೀಡಿದ್ದಾರೆ. ಮಗು ಅಪಹರಣ ಮಾಡಿದ್ದಾರೆಂದು ಪತಿ ಮುನಿರಾಜು ಹಾಗೂ ವಲ್ಲಿ ವಿರುದ್ದ ದೂರು ನೀಡಿರುವ ಪವಿತ್ರಾ, ಮಗುವನ್ನ ವಾಪಾಸ್ ಕೊಡಿಸುವಂತೆ  ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • 4.5 ಲಕ್ಷ ಹಣದಾಸೆಗೆ ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು ಮಾರಿದ್ಲು

    4.5 ಲಕ್ಷ ಹಣದಾಸೆಗೆ ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು ಮಾರಿದ್ಲು

    – ತಾಯಿ ಸೇರಿ 11 ಜನ ಅರೆಸ್ಟ್

    ರಾಂಚಿ: ಮಹಿಳೆಯೊಬ್ಬಳು (Woman) 4.5 ಲಕ್ಷ ರೂ. ಹಣದ (Money) ಆಸೆಗೆ ಮಗುವಿಗೆ (Baby) ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಮಾರಾಟ (Sale) ಮಾಡಿರುವ ಘಟನೆ ಜಾರ್ಖಂಡ್‌ನ (Jharkhand) ಛತ್ರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಮಗುವಿನ ತಾಯಿ ಸೇರಿದಂತೆ 11 ಜನರನ್ನು ಬಂಧಿಸಿದ್ದಾರೆ.

    ನವಜಾತ ಶಿಶುವನ್ನು (Newborn Baby) ಮಾರಾಟ ಮಾಡಿದ ಮಹಿಳೆಯನ್ನು ಆಶಾ ದೇವಿ ಎಂದು ಗುರುತಿಸಲಾಗಿದೆ. ಆಕೆಗೆ ಹುಟ್ಟಿದ ಗಂಡು ಮಗುವನ್ನು 4.5 ಲಕ್ಷ ರೂ.ಗಾಗಿ ಮಾರಾಟ ಮಾಡಿದ್ದಾಳೆ. ಘಟನೆ ಬಗ್ಗೆ ವೈದ್ಯರೊಬ್ಬರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಕೇವಲ 24 ಗಂಟೆಗಳೊಳಗಾಗಿ ಮಗುವನ್ನು ರಕ್ಷಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್, ಆಶಾ ದೇವಿಯಿಂದ 1 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಾಗಿದೆ ಎಂದು ತಿಳಿಸಿದ್ದಾರೆ. ಮೊದಲಿಗೆ ಮಗುವಿನ ತಾಯಿಯನ್ನು ಬಂಧಿಸಲಾಗಿದ್ದು, ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಮಗುವನ್ನು ಡಿಂಪಲ್ ದೇವಿ ಎಂಬವರಿಗೆ ಮಾರಿರುವುದಾಗಿ ತಿಳಿಸಿದ್ದಾಳೆ. ಬಳಿಕ ಡಿಂಪಲ್ ದೇವಿಯನ್ನು ಪೊಲೀಸರು ಬಂಧಿಸಿ, ಇತರ ಆರೋಪಿಗಳ ಬಗ್ಗೆ ಮಾಹಿತಿ ಪಡೆದು, ಮಗುವನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ವರದಿಗಳ ಪ್ರಕಾರ ಆಶಾ ದೇವಿ ಹಾಗೂ ಆಕೆಯ ಪತಿ 4.5 ಲಕ್ಷ ರೂ. ಹಣಕ್ಕಾಗಿ ಮಗುವನ್ನು ಮಾರಾಟ ಮಾಡಲು ಛತ್ರ ಹಾಗೂ ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆಶಾ ದೇವಿ ಮಗುವಿಗೆ ಜನ್ಮ ನೀಡಿದ ಬಳಿಕ ಅದನ್ನು ಮಾರಿ 1 ಲಕ್ಷ ರೂ. ಹಣವನ್ನು ಪಡೆದುಕೊಂಡಿದ್ದಾಳೆ. ಉಳಿದ 3.5 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಬ್ಬರು ಹೆಂಡಿರನ್ನು ಮ್ಯಾನೇಜ್ ಮಾಡಲು ಹೋದ ಪೇದೆ – ಪತ್ನಿಯಿಂದಲೇ ಬರ್ಬರ ಹತ್ಯೆ

  • ಹಣಕ್ಕಾಗಿ ಹೆಣ್ಣುಮಗು ಮಾರಾಟ ಮಾಡಿದ ತಾಯಿ – ಐವರ ಬಂಧನ

    ಹಣಕ್ಕಾಗಿ ಹೆಣ್ಣುಮಗು ಮಾರಾಟ ಮಾಡಿದ ತಾಯಿ – ಐವರ ಬಂಧನ

    ಕಾರವಾರ: ನವಜಾತ ಹೆಣ್ಣು ಶಿಶುವನ್ನು ಅಕ್ರಮವಾಗಿ ಅನ್ಯ ಕೋಮಿನ ದಂಪತಿಗೆ ಮಾರಾಟ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    6 ದಿನಗಳ ಹಿಂದೆ ಜನಿಸಿದ ನವಜಾತ ಶಿಶುವಿನ ಲಾಲನೆ ಪಾಲನೆ ಮಾಡಲು ನನ್ನ ಕೈಯಿಂದ ಸಾಧ್ಯವಿಲ್ಲ ಎಂದು ತಾಯಿಯೇ 25 ಸಾವಿರ ರೂ.ಗೆ ಮಾರಾಟ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಹಳಿಯಾಳ ತಾಲೂಕಿನ ತಟ್ಟಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗೌಳಿವಾಡಾ ಗ್ರಾಮದಲ್ಲಿ ನಡೆದಿದೆ.

    ಘಟನೆ ಏನು?
    ಗೌಳಿವಾಡಾ ಗ್ರಾಮದ ಸಾವಿತ್ರಿ ದೊಂಡು ಡೊಯಿಪಡೆ(26) ಗಂಡನನ್ನು ತೊರೆದು ತಾಯಿಯ ಮನೆಯಲ್ಲಿ ವಾಸವಾಗಿದ್ದಳು. ಬಳಿಕ ಅನೈತಿಕ ಸಂಬಂಧದಿಂದ ಮಹಿಳೆ ಗರ್ಭಿಣಿಯಾಗಿದ್ದು ಏಪ್ರಿಲ್ 20ರಂದು ತಾಲೂಕು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ.

    ಏಪ್ರಿಲ್ 22 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಗ್ರಾಮಕ್ಕೆ ಮರಳುತ್ತಿರುವ ಸಂದರ್ಭದಲ್ಲಿ 25 ಸಾವಿರ ರೂ.ಗೆ ಪಕ್ಕದ ಯಲ್ಲಾಪುರ ತಾಲೂಕಿನ ಕಿರುವತ್ತಿ ಗ್ರಾಮದ ರಾಹತ ಪಟೇಲ್ ಹಾಗೂ ಅಬ್ದುಲ್ ರಹಿಮಾನ್ ಪಟೇಲ್ ಎಂಬ ದಂಪತಿಗೆ ಮಾರಾಟ ಮಾಡಿ ಸ್ವಗ್ರಾಮಕ್ಕೆ ತೆರಳಿದ್ದಾಳೆ. ಮಗುವಿನ ಕುರಿತು ಮೇಲ್ವಿಚಾರಣೆ ಮಾಡಲು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ನವಜಾತ ಶಿಶುವಿನ ಮನೆಗೆ ತೆರಳಿದಾಗ ವಿಷಯ ಹೊರಬಿದ್ದಿದೆ. ಇದನ್ನೂ ಓದಿ: ರಾಗಿ ಖರೀದಿ ಕೇಂದ್ರದಲ್ಲಿ ಗೋಲ್‌ಮಾಲ್ – ಕೇಂದ್ರಕ್ಕೆ ಬೀಗ ಜಡಿದ ರೈತರು

    ವಿಷಯ ತಿಳಿದ ತಕ್ಷಣ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಘಟನಾ ಸ್ಥಳಕ್ಕೆ ಸಿಡಿಪಿಒ ಡಾ. ಲಕ್ಷ್ಮೀದೇವಿ, ಪಿಎಸ್‌ಐ ಶಿವಾನಂದ್ ನಾವದಗಿ, ಪಿಡಿಒ ಮಹಾಂತೇಶ್ ಹುರಕಡ್ಡಿ, ವಲಯ ಮೇಲ್ವಿಚಾರಕಿ ರಾಜೇಶ್ವರಿ ಕಟ್ಟಿಮನಿ, ಮಹಿಳಾ ಪೇದೆ ರಮ್ಯಾ ವಿಚಾರಣೆ ನಡೆಸಿದಾಗ ಮಗು ಮಾರಾಟವಾದ ವಿಷಯ ತಿಳಿದುಬಂದಿದೆ. ಇದನ್ನೂ ಓದಿ: ರಾಜಕಾರಣಿಗಳಿಗೆ ದಿವ್ಯಾ ಜಾಲ – ಘಟಾನುಘಟಿಗಳೊಂದಿಗಿನ ಫೋಟೋಸ್ ವೈರಲ್

    POLICE JEEP

    ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿ, ಯಲ್ಲಾಪುರಕ್ಕೆ ತೆರಳಿ ನವಜಾತ ಶಿಶುವನ್ನು ರಕ್ಷಿಸಿದ್ದಾರೆ. ಮಗುವನ್ನು ಅಕ್ರಮ ಹಾಗೂ ಅನೈತಿಕವಾಗಿ ಸಾಗಾಣಿಕೆ ಮಾಡಲು ಸಹಕರಿಸಿದ ಮಹಿಳೆಯ ಅಣ್ಣ ಭಯ್ಯಾಜಾನು ಪಟಕಾರೆ, ಅಗಸಲಕಟ್ಟಾ ಗ್ರಾಮದ ಆಶಾ ಕಾರ್ಯಕರ್ತೆ ರೋಜಿ ಲೂಯಿಸ್ ದಬಾಲಿ, ಮಮ್ತಾಜ್ ಸರ್ದಾರ್ ಹಳಬ, ಶಿಶುವನ್ನು ಪಡೆದ ರಾಹತ ಪಟೇಲ್ ಹಾಗೂ ಅಬ್ದುಲ್ ರಹಿಮಾನ್ ಪಟೇಲ್ ದಂಪತಿ ವಿರುದ್ಧಸೂಕ್ತ ಕ್ರಮ ಕೈಗೊಳ್ಳುವಂತೆ ಡಾ. ಲಕ್ಷ್ಮೀದೇವಿ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಮಗು ಮಾರಾಟ ಮಾಡಿದ ಕೆಲವೇ ನಿಮಿಷದಲ್ಲಿ ಹಣ ಕಳೆದುಕೊಂಡ ತಾಯಿ!

    ಮಗು ಮಾರಾಟ ಮಾಡಿದ ಕೆಲವೇ ನಿಮಿಷದಲ್ಲಿ ಹಣ ಕಳೆದುಕೊಂಡ ತಾಯಿ!

    ಚೆನ್ನೈ: ಮಹಿಳೆಯೊಬ್ಬಳು ತನ್ನ ಮಗುವನ್ನು ಮಾರಾಟ ಮಾಡಿ ಹಿಂದಿರುಗುತ್ತಿದ್ದಾಗ ದರೋಡೆಕೋರರಿಬ್ಬರು ಮಾರಾಟದ ಹಣವನ್ನು ದೋಚಿಕೊಂಡು ಹೋದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಯಾಸ್ಮಿನ್ (28) ಹಣ ಕಳೆದುಕೊಂಡ ಮಹಿಳೆ. ಪತಿ ಬಿಟ್ಟು ಹೋಗಿದ್ದರಿಂದ ಯಾಸ್ಮಿನ್ ಆರ್ಥಿಕವಾಗಿ ಕಷ್ಟದಲ್ಲಿದ್ದಳು. ಇದರಿಂದಾಗಿ ಗರ್ಭಪಾತ ಮಾಡಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ಬಂದಿದ್ದಳು. ಆ ಸಂದರ್ಭದಲ್ಲಿ ಎನ್ನೂರಿನ ನಿವಾಸಿ ಜಯಗೀತಾ ಪರಿಚಯವಾದರು. ಜಯಗೀತಾ ತನಗೆ ಪರಿಚಯವಿರುವ ಒಬ್ಬರಿಗೆ ಮಗು ಮಾರಾಟ ಮಾಡಿದರೆ ಸಾಕಷ್ಟು ಹಣ ನೀಡುವುದಾಗಿ ತಿಳಿಸಿದ್ದಳು.

    ಇತ್ತ ಮೊದಲೇ ಆರ್ಥಿಕ ಸಂಕಷ್ಟದಲ್ಲಿದ್ದ ಯಾಸ್ಮಿನ್ ಹಣದಾಸೆಯಿಂದ ಇದಕ್ಕೆ ಒಪ್ಪಿಗೆ ಸೂಚಿಸಿದ್ದಳು. ಅಂತೆಯೇ ಮಗು ಜನಿಸಿದ ಹತ್ತು ದಿನದ ನಂತರ ಅವರು ಹೇಳಿದ ಸ್ಥಳಕ್ಕೆ ಯಾಸ್ಮಿನ್ ತೆರಳಿದ್ದಳು. ಅಲ್ಲಿ ಧನಮ್ ಮತ್ತು ಇಬ್ಬರು ಪುರುಷರನ್ನು ಜಯಗೀತಾ ಪರಿಚಯಿಸಿದ್ದಾಳೆ. ಯಾಸ್ಮಿನ್ ತನ್ನ ಗಂಡು ಮಗುವನ್ನು ಧನಮ್‍ಗೆ ನೀಡಿ, ಅವರಿಂದ 2.5 ಲಕ್ಷ ರೂ.ಗಳನ್ನು ಪಡೆದಳು. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

    ಇದಾದ ಕೆಲವು ನಿಮಿಷಗಳ ನಂತರ ಅವಳು ತನ್ನ ಹಿರಿಯ ಮಗಳು ಶರ್ಮಿಳಾಳೊಂದಿಗೆ ಆಟೋದಲ್ಲಿ ಹೋಗುತ್ತಿದ್ದಾಗ ಇಬ್ಬರು ಪುರುಷರು ದ್ವಿಚಕ್ರ ವಾಹನದಲ್ಲಿ ಅವಳನ್ನು ಹಿಂಬಾಲಿಸಿದ್ದಾರೆ. ಪುರಸಾವಲ್ಕಮ್‍ನಲ್ಲಿ ಇಬ್ಬರು ವ್ಯಕ್ತಿಗಳು ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹಣ ಮತ್ತು ಮಗುವನ್ನು ಕಳೆದುಕೊಂಡು ಮಹಿಳೆ ಕಂಗಾಲಾಗಿದ್ದಾಳೆ. ಈ ಬಗ್ಗೆ ವೆಪೇರಿ ಪೊಲೀಸರಿಗೆ ದೂರು ನೀಡಿದ ಮಹಿಳೆ ತಾನು ಯಾರಿಗೆ ಮಗು ಮಾರಾಟ ಮಾಡಿದ್ದೇನೊ, ಅವರೇ ಹಣವನ್ನು ಕದಿದ್ದಾರೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ:  ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್

     

  • 1 ಲಕ್ಷ ಸಾಲ ತೀರಿಸಲು 20 ಸಾವಿರ ರೂ.ಗೆ ಮಗನನ್ನೇ ಮಾರಾಟ ಮಾಡಿದ!

    1 ಲಕ್ಷ ಸಾಲ ತೀರಿಸಲು 20 ಸಾವಿರ ರೂ.ಗೆ ಮಗನನ್ನೇ ಮಾರಾಟ ಮಾಡಿದ!

    ಮುಂಬೈ: ನವಜಾತ ಶಿಶುಗಳ ಮಾರಾಟ ಜಾಲಗಳ ವಿರುದ್ಧದ ಪೊಲೀಸ್ ತನಿಖೆಮಾಡುತ್ತಿದ್ದ ಸಂದರ್ಭದಲ್ಲಿ ವಡಾಲಾದಲ್ಲಿ ತಂದೆಯೇ ಒಂದು ಲಕ್ಷ ರೂ. ಸಾಲ ತೀರಿಸಲು ನವಜಾತ ಗಂಡು ಶಿಶುವನ್ನು 20 ಸಾವಿರ ರೂಪಾಯಿಗೆ ಮಾರಾಟ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.

    ಮಗುವಿನ ಫೋಷಕರನ್ನು ಮುನ್ನಾ ಶೇಖ್ ಮತ್ತು ಶಾಜಿಯಾ ಎಂದು ಗುರುತಿಸಲಾಗಿದ್ದು, ಮಗುವನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಸೂತ್ರಧಾರಿ ಮಹಿಳೆ ಜುಲಿಯಾ ಫೆರ್ನಾಂಡಿಸ್‍ನನ್ನು (29) ಪೊಲೀಸರು ಬಂಧಿಸಿದ್ದಾರೆ

    ಶೇಖ್ 1 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಕೊಟ್ಟವರು ಸಾಲ ತೀರಿಸುವಂತೆ ಒತ್ತಡ ಹಾಕುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಗಂಡು ಮಗನನ್ನು 20 ಸಾವಿರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ವಡಾಲಾದಲ್ಲಿದ್ದ ಅವರ ಮನೆಯನ್ನು ಪರಿಶೀಲನೆ ಮಾಡಿದಾಗ ಶಾಜಿಯಾ ಆಸ್ಪತ್ರೆಗೆ ದಾಖಲಾದ ದಿನಾಂಕ ಮತ್ತು ಡಿಸ್ಚಾರ್ಜ್ ಆದ ದಿನದ ದಾಖಲಾತಿಗಳು ದೊರೆತಿವೆ.

    ನರ್ಸಿಂಗ್ ಓದುತ್ತಿದ್ದ ಜೂಲಿಯಾ ಫೆರ್ನಾಂಡಿಸ್ ಮಗುವನ್ನು 20 ಸಾವಿರ ರೂಪಾಯಿಗೆ ಖರೀದಿಸಿ, ಮಕ್ಕಳಿಲ್ಲದ ದಂಪತಿ 1.5 ಲಕ್ಷ ರೂ.ಗೆ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಳು. ಈ ವಿಚಾರದ ಬಗ್ಗೆ ಮತ್ತಷ್ಟು ಪ್ರಶ್ನೆ ಕೇಳಿದಾಗ ಜೂಲಿಯಾ, ನನಗೆ ಅಪಘಾತವಾಗಿ ಕಾಲುಗಳು ನೋವಾಗಿತ್ತು. ಅದಕ್ಕೆ ಆಪರೇಷನ್ ಮಾಡಿಸಬೇಕಿತ್ತು. ಹೀಗಾಗಿ ನಾನು ಮಗುವನ್ನು ಮಾರಾಟ ಮಾಡಲು ಮುಂದಾಗಿದ್ದೆ ಎಂದು ತಿಳಿಸಿದ್ದಾಳೆ ಎಂಬುದಾಗಿ ಅಧಿಕಾರಿ ವಿವರಿಸಿದ್ದಾರೆ.

    ಕೋರ್ಟ್ ಆ ಮಗುವಿಗೆ ಅಧಿರಾಜ್ ಎಂದು ಹೆಸರು ಇಟ್ಟಿದ್ದು, ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಮಗುವನ್ನು ಸೇರಿಸಲಾಗಿದೆ ಎಂದು ತಿಳಿಸಿದರು.