Tag: ಮಠ

  • ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ: ಬೊಮ್ಮಾಯಿ

    ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ: ಬೊಮ್ಮಾಯಿ

    ಬೆಳಗಾವಿ: ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ರೂ. ನೀಡಿದ್ದು, ಕೆಲಸ ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ (Karnataka Bhavan) ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದರು.

    ಮಹಾರಾಷ್ಟ್ರದ (Maharashtra) ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡ್ತಿದೆ. ಹೀಗಾಗಿ ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಹಣವನ್ನು ಕೊಡಲಾಗುತ್ತಿದೆ ಎಂದು ಹೇಳಿದರು.

    ಇಂದು ಸಹೃದಯಿ ಸಂತರ ಸಮಾವೇಶ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇಲ್ಲಿ ಪ್ರಥಮ ಬಾರಿ ಬರುತಿದ್ದೇನೆ, ಭಕ್ತಿ ಭಾವ ಕಾರ್ಯಕ್ರಮ, ಮಠದ ಸೇವೆಯನ್ನು ನೋಡಿದಾಗ ಇದು ಆದರ್ಶ ಮಠ ಅನಿಸುತ್ತದೆ. ಆದರ್ಶ ಮಠ ಆಗಲು ತನ್ನದೇ ಆದ ಆದರ್ಶ ಇರಬೇಕು. ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕನ್ನೇರಿಮಠ ಮಾಡುತ್ತಿದೆ ಎಂದರು.

    ಬೇರೆ ದೇಶಕ್ಕೂ ನಮಗೂ ಇರುವ ವ್ಯತ್ಯಾಸ ನಮ್ಮ ಸಂಸ್ಕೃತಿ, ಸಂಸ್ಕಾರ. ಅದು ನಮ್ಮ ದೇಶದ ಮಠ ಮಂದಿರಗಳಲ್ಲಿ ಸಿಗುತ್ತದೆ. ನಾಗರಿಕತೆ ಮತ್ತು ಸಂಸ್ಕೃತಿ ಮಧ್ಯದ ವ್ಯತ್ಯಾಸ ಮರೆತಿದ್ದೇವೆ. ನಾಗರಿಕತೆಯನ್ನೇ ನಾವು ಸಂಸ್ಕೃತಿ ಅಂದುಕೊಂಡಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಭಾರತ ಸಂಸ್ಕಾರ, ಸಂಸ್ಕೃತಿಯಿಂದ ಕೂಡಿದ ದೇಶ. ನಿರಂತರ ಭಕ್ತಿಯ ಚಳವಳಿ ಆದ ದೇಶ ಭಾರತ. ಇಲ್ಲಿ ಆಧ್ಯಾತ್ಮದ ಚಿಂತನೆ, ಆಧ್ಯಾತ್ಮರು ನಮ್ಮ ದೇಶದಲ್ಲಿ ಇದ್ದಾರೆ. ಕನ್ನೇರಿಮಠದ ದೊಡ್ಡ ಮಠ ಕರ್ನಾಟಕದಲ್ಲಿಯೂ ಸ್ಥಾಪನೆ ಮಾಡಬೇಕು. ಅದಕ್ಕೆ ಸಂಪೂರ್ಣ ಸಹಕಾರ, ಜಾಗ ಸರ್ಕಾರದ ವತಿಯಿಂದ ಒದಗಿಸುತ್ತೇವೆ.ಭೌತಿಕವಾಗಿ ಕೆಲಸ ಮಾಡಲು ಸಾಧ್ಯ. ಬೌದ್ಧಿಕವಾಗಿ ಮಾಡಲು ಗುರುಗಳು ಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಟಿಷರನ್ನ ದೇಶದಿಂದ ಓಡಿಸಿದ ಹಾಗೇ ಕಾಂಗ್ರೆಸ್‍ನವರನ್ನು ಓಡಿಸುತ್ತಿದ್ದಾರೆ: ಸುಧಾಕರ್

    ನಮ್ಮ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆ ಮಾಡಿದ್ದೇವೆ. ನೂರು ಕೋಟಿ ರೂಪಾಯಿ ಇದೇ ತಿಂಗಳು ಕಲೆಕ್ಟ್ ಆಗ್ತಿದೆ. ಒಂದು ಲಕ್ಷ ಗೋವುಗಳನ್ನು ಜನರ ದುಡ್ಡಿನಿಂದ ರಕ್ಷಣೆ ಮಾಡಿದ್ದೇವೆ. ಎಕಾನಾಮಿ ಅಂದ್ರೆ ಹಣ ಅಲ್ಲ ದುಡಿಮೆ. ಈ ಮಠದಲ್ಲಿ ಇದು ಕಾರ್ಯಗತವಾಗುತ್ತಿದೆ ಎಂದರು. ಇದನ್ನೂ ಓದಿ: ಮತಾಂತರ ನಿಷೇಧ ಮಾಡದಿದ್ದರೆ ಮಠಗಳ ಮುಂಭಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣವಾಗುತ್ತಿತ್ತು: ಕಾಡಸಿದ್ದೇಶ್ವರ ಶ್ರೀ

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ಕೇಸ್ – ಮಠಕ್ಕೆ ಅಪಚಾರವಾಗದೇ ಇರಲಿ, ಸತ್ಯ ಹೊರ ಬರಲಿ: ಸಿ.ಎಂ ಇಬ್ರಾಹಿಂ

    ಮುರುಘಾ ಶ್ರೀ ಕೇಸ್ – ಮಠಕ್ಕೆ ಅಪಚಾರವಾಗದೇ ಇರಲಿ, ಸತ್ಯ ಹೊರ ಬರಲಿ: ಸಿ.ಎಂ ಇಬ್ರಾಹಿಂ

    ಬೆಂಗಳೂರು: ಮುರುಘಾ ಶ್ರೀಗಳ ವಿಚಾರದಲ್ಲಿ ನ್ಯಾಯಯುತ ತನಿಖೆ ಆಗಿ ಸತ್ಯ ಹೊರಗೆ ಬರಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.

    ಶ್ರೀಗಳ ಬಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುರುಘಾ ಶ್ರೀ ಬಂಧನ ಆಗಿದೆ. ಸತ್ಯಾಸತ್ಯತೆ ಹೊರಗಡೆ ಬರಲಿ. ವಿಚಾರ ಏನಿದೆ, ಮಕ್ಕಳು ಏನು ಹೇಳಿಕೆ ಕೊಟ್ಟಿದ್ದಾರೆ ವಿಚಾರಣೆ ಆಗಲಿ. ಬಸವರಾಜ್ ಮತ್ತು ಅವರ ಪತ್ನಿಯ ಪಾತ್ರ ಏನಿದೆ ಎಂಬುದರ ತನಿಖೆ ಆಗಲಿ. ಇದೆಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಲಿ ಎಂದರು.

    ಬಾಲಕಿಯರ ಬಗ್ಗೆ ಮಾತನಾಡುವುದಕ್ಕೂ, ಮುರುಘಾ ಶ್ರೀಗಳ ಬಗ್ಗೆ ಮಾತನಾಡುವುದಕ್ಕೂ ವ್ಯತ್ಯಾಸ ಇದೆ. ಇವರು ಇಂದು ಪರಿವರ್ತನೆ ಮಾಡುತ್ತಾ, ಅಡ್ಡಪಲ್ಲಕಿ ಮಾಡಿಸಿಕೊಳ್ಳದೆ ಇರುವ ಸ್ವಾಮೀಜಿಯವರು. ದಲಿತರು, ಹಿಂದುಳಿದವರ ಸ್ವಾಮಿಗಳನ್ನಾಗಿ ಮಾಡಿದವರು. ಹೀಗಾಗಿ ಸತ್ಯಾಸತ್ಯತೆ ಹೊರಗಡೆ ಬರಬೇಕು. ತಪ್ಪು ಮಾಡಿದ್ದಾರೋ ಇಲ್ಲವೋ ಕೂಲಂಕುಶವಾಗಿ ತನಿಖೆ ಆಗಬೇಕು ಎಂದು ಹೇಳಿದರು. ಇದನ್ನೂ ಓದಿ: ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ

    ಸರ್ಕಾರ ವಿಚಾರಣೆ ಮಾಡಿದೆ. ಸತ್ಯಾಸತ್ಯತೆ ಜನರ ಮುಂದೆ ತರುವುದು ಅವಶ್ಯಕತೆ ಇದೆ. 3 ವರ್ಷಗಳಿಂದ ಹೀಗೆ ಆಗ್ತಾ ಇದೆ ಅಂತ ಮಾಹಿತಿ ಇದೆ. ತುಂಬಾ ಹಳೆ ಇತಿಹಾಸ ಇರುವ ಮಠ ಇದು. 3 ಸಾವಿರ ಶಾಖೆ ಮಠಗಳು ಇವೆ. ಈ ಮಠಕ್ಕೆ ಪರಂಪರೆಗೆ ಕಳಂಕ ಬರಬಾರದು. ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ಆಗಲಿ ಎಂದರು.

    ಲೆಹರ್ ಸಿಂಗ್ ಅವರು ಹೊರ ರಾಜ್ಯದವರಿಗೆ ತನಿಖೆ ನಡೆಸಲು ನೀಡಿ ಎಂದು ಹೇಳಿದ್ದಾರೆ. ನಿಮಗೆ ಅಷ್ಟು ಅನುಮಾನ ಇದ್ದರೆ ಸಿಬಿಐಗೆ ಕೊಡಿ. ಇಲ್ಲಿ ಯಾರನ್ನೂ ಉಳಿಸಬೇಕಿಲ್ಲ. ಸತ್ಯ ಗೊತ್ತಾಗಬೇಕು ಎಂದು ಆಗ್ರಹಿಸಿದರು.

    ಬಸವರಾಜ್ ಅಲ್ಲಿ ಇದ್ದು, ಪೀಠಾಧಿಪತಿ ಆಗಬೇಕಿದ್ದವರು. ಆದರೆ ಅವರು ಲವ್ ಮ್ಯಾರೇಜ್ ಆಗಿ ಹೋದರು. ಆಡಳಿತ ಅಧಿಕಾರಿ ಆದರು. ಅಲ್ಲಿ ಹೋಗಿ ಎಂಎಲ್‌ಎ ಆದರು. ಮತ್ತೆ ಪುನಃ ಮಠದಲ್ಲಿ ಸೇರಿಕೊಂಡರು. ಮೊನ್ನೆ ರಾಹುಲ್ ಗಾಂಧಿ ಹೋಗಿದ್ದು ನೋಡಿದ್ದೆ, ಬೇರೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: 60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದ್ರಿಂದ ಪ್ರಾಬ್ಲಂ ಬರೋದು ಸಹಜ: ಡಾ. ರಂಗನಾಥ್

    ನಮಗೆ ಸ್ವಾಮಿಗಳಿಗಿಂತ ಪೀಠ ದೊಡ್ಡದು. ಆ ಪೀಠ ಭಾರೀ ದೊಡ್ಡದು. ಸುಮಾರು ವರ್ಷಗಳ ಇತಿಹಾಸ ಇರುವ ಪೀಠ. ಬಸವ ತತ್ವ ಸಾರಿರುವ ಪೀಠ. ಪೀಠಕ್ಕೆ ಕಳಂಕ ಬರಬಾರದು ಅಷ್ಟೆ ಅಂತ ಮನವಿ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

    ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್‍ನಿಂದ ಚಿತ್ರದುರ್ಗದ ಬೃಹನ್ಮಠದಲ್ಲಿ ಟೆನ್ಶನ್ ಮನೆ ಮಾಡಿದೆ.

    ಸಂತ್ರಸ್ತ ವಿದ್ಯಾರ್ಥಿನಿಯರು ನೀಡಿದ ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆ ಆಧಾರದ ಮೇಲೆ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ನಾಳೆ ಪೊಲೀಸರು ನೊಟೀಸ್ ಜಾರಿ ಮಾಡಬಹುದು ಎಂಬ ಮಾತು ಕೇಳಿಬರುತ್ತಿವೆ. ಜೊತೆಗೆ ಗುರುವಾರ ಚಿತ್ರದುರ್ಗದ ಕೋರ್ಟ್‍ನಲ್ಲಿ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಬೇರೆ ವಿಚಾರಣೆಗೆ ಬರಲಿದೆ. ಈ ಮಧ್ಯೆ, ಶ್ರೀಮಠದಲ್ಲೇ ಶರಣರು ಇದ್ದು ದೈನಂದಿನ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆಯರು- ಶ್ರೀಗಳಿಗೆ ನೋಟಿಸ್ ಸಾಧ್ಯತೆ

    ಇಂದು ಹಲವು ನಾಯಕರು ಬಂದು ಶ್ರೀಗಳನ್ನು ಭೇಟಿ ಮಾಡಿ ತೆರಳಿದ್ದಾರೆ. ಪ್ರಕರಣದಲ್ಲಿ ಶ್ರೀಗಳು ಪಾರಾಗಿ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಠಕ್ಕೆ ಪೊಲೀಸ್ ಕಣ್ಗಾವಲಿದೆ. ಈ ಮಧ್ಯೆ, ಮಠದ ಆಡಳಿತಾಧಿಕಾರಿ ಎಸ್‍.ಕೆ ಬಸವರಾಜನ್ ವಿರುದ್ಧ ಹಾಸ್ಟೆಲ್ ವಾರ್ಡನ್ ರಶ್ಮಿ ನೀಡಿರುವ ದೂರಿನ ಮೇಲೆ ತನಿಖೆ ಮುಂದುವರಿದಿದೆ. ಇಂದು ಮುರುಘಾ ಮಠದ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ ಕುಮಾರ್, ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ರು. ಈ ವೇಳೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಅಧಿಕಾರಿ ಲೋಕೇಶ್ವರಪ್ಪ ಉಪಸ್ಥಿತರಿದ್ರು. ಸದ್ಯ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿನಿಯರನ್ನು ಮಠದ ಹಾಸ್ಟೆಲ್‍ನಿಂದ ಗೂಳೇನಹಟ್ಟಿಯ ಮೊರಾರ್ಜಿ ಶಾಲೆಯ ಹಾಸ್ಟೆಲ್‍ಗೆ ಶಿಫ್ಟ್ ಮಾಡಲಾಗಿದೆ. ಈ ಪ್ರಕರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರದಿರಲು ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಗಣೇಶೋತ್ಸವವನ್ನು ಸ್ವಾಗತಿಸಲ್ಲ, ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ : ಅಂಜುಮನ್ ಸಂಸ್ಥೆ

    Live Tv
    [brid partner=56869869 player=32851 video=960834 autoplay=true]

  • ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಧಾರವಾಡ: ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು.

    ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ ಎಂದು ಹೇಳುತ್ತಿದ್ದರು. ಅದಕ್ಕಾಗಿ ಗೋ ಹತ್ಯೆ ಕಾನೂನು ತಂದಿದ್ದಾರೆ. ಆದರೂ ಗೋಹತ್ಯೆ ನಡೆಯುತ್ತಿದೆ. ಆದರೆ ಒಂದೂ ಗೋಹತ್ಯೆ ಆಗದಂತೆ ಮಾಡುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದ್ದರಿಂದ ಹಿಂದೂ ಸಂಘಟನೆಗಳಿಗೆ ಸಮಾಜ ಬಲ ಕೊಡಬೇಕು ಎಂದು ತಿಳಿಸಿದರು.

    ಅಂದು ಹಿಂದುತ್ವದ ಹೋರಾಟಗಳು ಯಶಸ್ವಿಯಾಗಿದ್ದವು. ಇಂದು ಅದು ಆಗುತ್ತಿಲ್ಲ. ಅವತ್ತು ಶುದ್ಧ, ಚಾರಿತ್ರ್ಯ, ತ್ಯಾಗ, ಬಲಿದಾನದ ನಾಯಕರಿದ್ದರು. ಅದರ ಪರಿಣಾಮದಿಂದ ದುಷ್ಟ ಶಕ್ತಿಗಳ ನಾಶವಾಯಿತು. ಹಿಂದವೀ ಸಮಾಜ ನಿರ್ಮಾಣ ಆಗಿತ್ತು. ಅದಕ್ಕೆ ಛತ್ರಪತಿ ಶಿವಾಜಿ ಮಹಾರಾಜರೇ ಉದಾಹರಣೆಯಾಗಿದ್ದಾರೆ. ಆದರೆ ಇವತ್ತಿನ ನಾಯಕರು ಯಾರು ಎಂದು ಪ್ರಶ್ನಿಸಿದ ಅವರು, ನೀಚ, ನಿರ್ಲಜ್ಜ, ಲೂಟಿಕೋರರಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ

    ಇಂದಿನ ನಾಯಕರು ಈ ದೇಶವನ್ನು ಬರ್ಬಾದ್ ಮಾಡುತ್ತಿದ್ದಾರೆ. ಈ ದೇಶವನ್ನು ಹಾಳು ಮಾಡುತ್ತಿದ್ದಾರೆ. ಅವರು ಇವರು ಅಲ್ಲ, ಎಲ್ಲರೂ ಅವರೇ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಾವು ಯೋಚನೆ ಮಾಡಬೇಕಿದೆ. ಇವತ್ತು ನಾವು ಯಾವ ರೀತಿ ನಾಯಕರು ಬೇಕು ಅಂತಾ ವಿಚಾರ ಮಾಡಬೇಕಿದೆ. ಶಿವಾಜಿಯಂತಹ ನಾಯಕರು ಬೇಕೋ?, ಅಥವಾ ಲೂಟಿಕೋರರು ಬೇಕೋ? ಅಂತಾ ನಿಶ್ಚಯ ಮಾಡಬೇಕಿದೆ. ಎಲ್ಲರಲ್ಲೂ ಇವತ್ತು ವೇದನೆ ಇದೆ. ಎಲ್ಲೋ ತಪ್ಪುತ್ತಿದ್ದೇವೆ ಎನ್ನುವ ವೇದನೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಸತ್ಯ ಘಟನೆಯಾಧಾರಿತ ‘ಮಠ’ ಸಿನಿಮಾ : ಗುರುಪ್ರಸಾದ್ ಪಾತ್ರ ಏನು?

    ಸತ್ಯ ಘಟನೆಯಾಧಾರಿತ ‘ಮಠ’ ಸಿನಿಮಾ : ಗುರುಪ್ರಸಾದ್ ಪಾತ್ರ ಏನು?

    ಗುರು ಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಮಠ. ಜಗ್ಗೇಶ್ ಹಾಗೂ ಗುರು ಪ್ರಸಾದ್ ಜುಗಲ್ ಬಂದಿಯ ಈ ಚಿತ್ರ ಪ್ರೇಕ್ಷಕರನ್ನು‌ ನಕ್ಕು ನಲಿಸಿತ್ತು. ಇದೀಗ ಇದೇ ಹೆಸ್ರಿನ ಸಿನಿಮಾ ಬರ್ತಿದೆ. ಹಾಗಂತ ಈ ಸಿನಿಮಾಗೂ ಆ ಸಿನಿಮಾಗೂ ಸಂಬಂಧವಿಲ್ಲ. ಇದೇ ಬೇರೆ ಅದೇ ಬೇರೆ. ಫಿಲಾಸಫಿಕಲ್, ಕಾಮಿಡಿ ಸತ್ಯ ಘಟನೆಯಾಧಾರಿತ ಮಠ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಬರೋಬ್ಬರಿ 82 ಜನ ಕಲಾವಿದರು ನಟಿಸಿರುವ ಈ ಚಿತ್ರದಲ್ಲಿ ಗುರು ಪ್ರಸಾದ್, ತಬಲನಾಣಿ, ಮಂಡ್ಯ ರಮೇಶ್, ಬಿರಾದಾರ್ ಸೇರಿದಂತೆ ಹಾಸ್ಯಕಲಾವಿದರ ದಂಡೇ ಇದೆ.

    ಸುಮಾರು ಮೂರು ವರ್ಷಗಳ ಕಾಲ ಚಿತ್ರೀಕರಣ ನಡೆಸಿರುವ ಚಿತ್ರತಂಡ, 25 ಜಿಲ್ಲೆಗಳಲ್ಲಿ ವಿವಿಧ ಪ್ರವಾಸಿ ತಾಣಗಳಲ್ಲಿ ಕಥೆಗೆ ತಕ್ಕಂತೆ ಚಿತ್ರೀಕರಿಸಲಾಗಿದೆ. ಸುಮಾರು ಮುನ್ನೂರು ಮಠಗಳಲ್ಲಿ ಚಿತ್ರೀಕರಣ ನಡೆಸಲಾಗಿದೆಯಂತೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ. ಸಾಧುಕೋಕಿಲಾ  ಮಾತಾನಾಡಿ, ನಾನು ಸುಮಾರು ಮಾಡಿರಬಹುದು. ಆದ್ರೆ ಲೆಕ್ಕ ಇಟ್ಟಿಲ್ಲ. ಸುಮಾರು 600 ರಿಂದ 700 ಸಿನಿಮಾ ಮಾಡಿರಬಹುದು. ಜಾಸ್ತಿ, ಕಡಿಮೆ ಎರಡು ಇರಬಹುದು. ಆದ್ರೆ ಗುರು ಪ್ರಸಾದ್ ಮಠ ಸಿನಿಮಾದಲ್ಲಿ ನಾನು ಒಂದೆರೆಡು ಸೀನ್ ನಲ್ಲಿ ಮಾಡಿದ್ದೇನೆ. ಆ ಎಲ್ಲಾವೂ ಹಿಟ್. ಆದ್ರೆ ಈ ಮಠ ಹೆಸ್ರು ತೆಗೆದುಕೊಂಡಿದೆ. ಕಥಾವಸ್ತು ಬೇರೆ. ನಾನು ಮೇಜರ್ ರೋಲ್ ಮಾಡಿದ್ದು, ಆದ್ರೆ ಅದು ನನಗೆ ಕಾಮಿಡಿಯಲ್ಲ. ಇದು ನಿಜ ಜೀವನದ ಕಥೆ. ಒಂದೊಂದು ಪಾತ್ರವೂ ಕಥಾನಕ‌ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ:ರಾಜಮೌಳಿ ಮುಂದಿನ ಚಿತ್ರಕ್ಕೆ ಐಶ್ವರ್ಯ ರೈ ನಾಯಕಿ?

    ಗುರು ಪ್ರಸಾದ್ ಮಾತಾನಾಡಿ, ಮನೆ ಕಟ್ಟುವುದು ಸುಲಭ. ಮಠದ ಕಟ್ಟುವುದು ಕಷ್ಟ. 290 ದಿನ ಪಯಣ ಮಾಡಿ ಮಠಗಳಿಗೆ ಭೇಟಿ‌ ಕೊಟ್ಟು ಕಥೆ ಮಾಡಿ ಸಿನಿಮಾ ಮಾಡೋದು ಕಷ್ಟ. ಈ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದರು. ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, ಮಠ ಸಿನಿಮಾ ಕಥೆಗೆ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದಾರೆ. ಗುರು ಪ್ರಸಾದ್ ಇಲ್ಲದೇ ಮಠ ಅಪೂರ್ಣ. ಹೀಗಾಗಿ ಅವರನ್ನು ಕೇಳಿದ್ವಿ. ಅವ್ರು ಗ್ರೀನ್ ಸಿಗ್ನಲ್ ಕೊಟ್ಟರು ಸಿನಿಮಾ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಜೀವನ್ ಗೌಡ ಛಾಯಾಗ್ರಹಣ, ರಾಜ್ಯಪ್ರಶಸ್ತಿ ವಿಜೇತ ಸಿ.ರವಿಚಂದ್ರನ್ ಸಂಕಲನ, ವಿ ಮನೋಹರ್ ಸಂಗೀತ ನಿರ್ದೇಶನ, ಯೋಗರಾಜ್ ಭಟ್ಟ್, ವಿ‌ ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯ ಸಿನಿಮಾಕ್ಕಿದೆ.

  • ದಕ್ಷಿಣ ಭಾರತದ ಅತ್ಯಂತ ದೊಡ್ಡ ಸ್ಪಟಿಕಲಿಂಗ ಕಳ್ಳತನ

    ದಕ್ಷಿಣ ಭಾರತದ ಅತ್ಯಂತ ದೊಡ್ಡ ಸ್ಪಟಿಕಲಿಂಗ ಕಳ್ಳತನ

    ಹಾವೇರಿ: ಮಠದ ಬಾಗಿಲು ಮುರಿದು ಸ್ಪಟಿಕಲಿಂಗವೊಂದನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಹಿರೇಮಠದಲ್ಲಿ ನಡದಿದೆ.

    ಸ್ಪಟಿಕಲಿಂಗವು ಒಟ್ಟು 13 ಇಂಚು ಉದ್ದ ಮತ್ತು 13 ಇಂಚು ಸುತ್ತಳತೆ ಹೊಂದಿದ್ದು, ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಸ್ಫಟಿಕಲಿಂಗ ಎಂದು ಹೆಸರುವಾಸಿಯಾಗಿತ್ತು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ: ಬಿ.ಸಿ.ನಾಗೇಶ್

    ಲಿಂಗವು ನಿನ್ನೆ ರಾತ್ರಿ ಮಠದಲ್ಲಿ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಇಲ್ಲದ ವೇಳೆ ಕಳ್ಳತನ ನಡೆದಿದೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

  • ಮಠದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

    ಮಠದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

    ನೆಲಮಂಗಲ: ಮಠದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

    ಶ್ರೀ ಬಸವಲಿಂಗ ಸ್ವಾಮೀಜಿ(59) ಮೃತರಾಗಿದ್ದಾರೆ. ಸ್ವಾಮೀಜಿ ಸಾವಿನಿಂದ ಅಪಾರ ಭಕ್ತವೃಂದ ಆತಂಕಕ್ಕೆ ಒಳಗಾಗಿದ್ದಾರೆ. ಸ್ವಾಮೀಜಿ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಸೋಲೂರು ಬಳಿಯ ಸಿದ್ದಗಂಗ ಮಠದ ಶಾಖಾ ಮಠ ಚಿಲುಮೆ ಮಠದ ಶ್ರೀಗಳ ಸಾವನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಭಾರತೀಯರ ಡಿಎನ್‌ಎ ಒಂದೇ ಆಗಿದೆ: ಆರ್‌ಎಸ್‌ಎಸ್‌ ಮುಖ್ಯಸ್ಥ

    ಮಾಗಡಿ ತಾಲೂಕಿನ ಸೋಲೂರಿನ ಚಿಲುಮೆ ಮಠದ ಕಿಟಕಿಯಲ್ಲಿ ನೇಣು ಬಿಗಿದ ಸ್ಥೀತಿಯಲ್ಲಿದ್ದ ಬಸವಲಿಂಗ ಶ್ರೀಗಳ ದೇಹ ಪತ್ತೆಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ಹೆಚ್ಚಿನ ವಿಚಾರಣೆ ಆರಂಭಿಸಿದ್ದಾರೆ. ಮಠಕ್ಕೆ ವಿವಿಧ ಮಠಾಧೀಶರು ಭೇಟಿ ನೀಡಿದ್ದಾರೆ. ಇದನ್ನೂ ಓದಿ:  ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್

     

  • ಕುಕ್ಕೆ ಸುಬ್ರಹ್ಮಣ್ಯಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಮಂಗಳೂರು: ಸ್ಯಾಂಡಲ್‍ವುಡ್ ನಟ ಸುದೀಪ್ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಕೊಟ್ಟು, ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

    ಪತ್ನಿ ಪ್ರಿಯಾ ಜೊತೆ ಕ್ಷೇತ್ರಕ್ಕೆ ಆಗಮಿಸಿದ ಸುದೀಪ್ ಅವರು ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ಆಶ್ಲೇಷ, ನಾಗ ಪ್ರತಿಷ್ಠೆ ಪೂಜೆ ಮಾಡಿದ್ದಾರೆ. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ: ಫೆಬ್ರವರಿ 24ಕ್ಕೆ ತೆರೆ ಮೇಲೆ ವಿಕ್ರಾಂತ್ ರೋಣ

    ಸುದೀಪ್ ಅವರು ಚಿತ್ರರಂಗದಲ್ಲಿ ಸದಾ ಬ್ಯುಸಿ ಆಗಿರುತ್ತಾರೆ. ಆದರೆ ಸಿನಿಮಾ ಕೆಲಸಗಳ ಜೊತೆ ಕುಟುಂಬಕ್ಕೂ ಪ್ರಾಮುಖ್ಯತೆ ನೀಡುತ್ತಾ ಸಮಯ ಕಳೆಯುತ್ತಾರೆ. ಈಗ ಅವರು ಪತ್ನಿ ಪ್ರಿಯಾ ಜೊತೆಗೆ ನಾಗ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ,  ದೇವರ ದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು – ರಾಜ್ ಮನೆ ಇದೀಗ ಮ್ಯೂಸಿಯಂ

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಇದೆ. ಸುದೀಪ್ ಸದ್ಯ, ವಿಕ್ರಾಂತ್ ರೋಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಚಿತ್ರತಂಡ ಸಿನಿಮಾವನ್ನು 2022ರ ಫೆ.24ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಇದನ್ನೂ ಓದಿ: ದೆಹಲಿಯಿಂದ ಮನೆಗಳತ್ತ ಮುಖಮಾಡಿದ ರೈತರು- ಪೊಲೀಸರಿಂದ ಬ್ಯಾರಿಕೇಡ್ ತೆರವು

  • ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆ ಪಾಲು

    ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆ ಪಾಲು

    ಹುಬ್ಬಳ್ಳಿ: ಶ್ರೀ ಸಿದ್ದಾರೂಢರ ಮಠದ ಕೆರೆಯಲ್ಲಿನ ಶ್ರೀ ಸಿದ್ದಾರೂಢರ ಹಾಗೂ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರ ಹಾಗೂ ಪೂಜೆ ಸಲ್ಲಿಸಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

    ಉಮೇಶಪ್ಪ ಜಾಲಿಹಾಳ (22) ಮೃತ. ಈತ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದಾನೆ. ಕಳೆದ 6 ವರ್ಷಗಳಿಂದ ಮಠದ ವಿದ್ಯಾರ್ಥಿನಿಯದಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪಿದ್ದಾನೆ. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್

    ಇಂದು ಬೆಳಗ್ಗೆ ಮಠದ ಕೆರೆಯ ಮಧ್ಯದಲ್ಲಿರುವ ಸಿದ್ದಾರೂಢ ಹಾಗೂ ಗುರುನಾಥರೂಢ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಈಜಿಕೊಂಡು ಹೋಗಿದ್ದಾನೆ. ಆದರೆ ಕೆರೆಯಲ್ಲಿ ಆತನಿಗೆ ಕೈ ಸೋತು ಕೆರೆಯಲ್ಲಿ ಮುಳಗಿದ್ದಾನೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ಕಾರ್ಯಚರಣೆ ನಡೆಸಿ ಯುವಕನ ಶವ ಹೊರ ತೆಗೆದಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಮುಂದಿನ ಚುನಾವಣೆಗೆ ಮೈತ್ರಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ – ದೇವೇಗೌಡ

  • ಡಿಸಿಎಂ ಜೊತೆ 30ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳಿಂದ ಚರ್ಚೆ

    ಡಿಸಿಎಂ ಜೊತೆ 30ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳಿಂದ ಚರ್ಚೆ

    ಬೆಂಗಳೂರು: ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

    ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು. ಇದನ್ನೂ ಓದಿ: ವಿಜಯೇಂದ್ರ ಮಠಗಳ ಯಾತ್ರೆ: ಬಿಎಸ್‍ವೈಗೆ ಮಠಾಧೀಶರ ಶ್ರೀರಕ್ಷೆ ಎಂದು ಅಭಿಮಾನಿಗಳಿಂದ ಪೋಸ್ಟರ್ 

    ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು.

    ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು.

    ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ನಮ್ಮ ಸರ್ಕಾರ ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ ನೀಡಲಿದೆ ಎಂದು ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.