Tag: ಮಣಿಪಾಲ ಆಸ್ಪತ್ರೆ

  • ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು – ರಾಜು ತಾಳಿಕೋಟೆ ನಿಧನಕ್ಕೆ ಶೈನ್ ಶೆಟ್ಟಿ ಕಣ್ಣೀರು

    ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು – ರಾಜು ತಾಳಿಕೋಟೆ ನಿಧನಕ್ಕೆ ಶೈನ್ ಶೆಟ್ಟಿ ಕಣ್ಣೀರು

    – ತುಂಬಾ ತಮಾಷೆಯ, ಬಹಳ ಪ್ರೀತಿಸುವ ವ್ಯಕ್ತಿ
    – ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿದ್ದೇವೆ

    ಉಡುಪಿ: ರಾಜು ತಾಳಿಕೋಟೆ (Raju Talikote) ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ರಾಜು ತಾಳಿಕೋಟೆಯವರ ನಿಧನಕ್ಕೆ ನಟ ಶೈನ್ ಶೆಟ್ಟಿ (Shine Shetty) ಕಣ್ಣೀರಿಟ್ಟಿದ್ದಾರೆ.

    ಮಣಿಪಾಲ ಆಸ್ಪತ್ರೆ (Manipal Hospital) ಮುಂದೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಗ್ ಬಾಸ್ ಸೀಸನ್ 7ರಲ್ಲಿ ಜೊತೆಗಿದ್ದೆವು. ಇಡೀ ಸೀಸನ್‌ನ ನಟರ ಜೊತೆ ಅನ್ಯೋನ್ಯ ಸಂಬಂಧವಿದೆ. ರಾಜು ತಾಳಿಕೋಟೆ ತುಂಬಾ ತಮಾಷೆಯ, ಬಹಳ ಪ್ರೀತಿಸುವ ವ್ಯಕ್ತಿ. ಸಿನಿಮಾ ನಿರ್ಮಾಣದ ಕಾಲ ಕೂಡಿ ಬಂದಾಗ ರಾಜು ಅವರನ್ನು ಸಂಪರ್ಕ ಮಾಡಿದ್ದೆ. ನಮ್ಮ ಸಿನಿಮಾಗೆ ಮೊದಲು ಆಯ್ಕೆ ಮಾಡಿದ್ದು ರಾಜು ತಾಳಿಕೋಟೆ ಅವರನ್ನು. ಪಾತ್ರ ಮತ್ತು ಡೈಲಾಗ್ ಅವರಿಗಾಗಿಯೇ ಬರೆದಿದ್ದೇವೆ. ರಾಜು ತಾಳಿಕೋಟೆಯವರಿಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿದ್ದೇವೆ. ಉಡುಪಿ, ಮಂಗಳೂರು ಸುತ್ತಾಡಲು, ಮೀನು ತಿನ್ನಲು ಒಂದು ದಿನ ಮೊದಲೇ ಬಂದಿದ್ದರು. ಗೆಳೆಯರ ಜೊತೆ ಬೇರೆ ಬೇರೆ ಜಾಗಕ್ಕೆ ಸುತ್ತಾಡಿದ್ದಾರೆ ಎಂದರು.

    ಭಾನುವಾರ ರಾತ್ರಿ 11 ಗಂಟೆಗೆ ತಂಡದ ಜೊತೆ ಮಾತನಾಡಿದ್ದಾರೆ. ಬಳಿಕ 11:59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದಾರೆ. ಕೂಡಲೇ ಹೆಬ್ರಿ ಹೆಲ್ತ್ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಅಲ್ಲಿಂದ ನೇರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬಂದೆವು. ಕಳೆದ ರಾತ್ರಿಯೇ ಕುಟುಂಬಕ್ಕೆ ಮಾಹಿತಿಯನ್ನು ಕೊಟ್ಟಿದ್ದೇವೆ. ಮಕ್ಕಳು ಕುಟುಂಬಸ್ಥರು ಬಂದಿದ್ದರು. ಬಳಿಕ ಕೊನೆಯುಸಿರೆಳೆದಿದ್ದಾರೆ ಎಂದು ಬೇಸರಿಸಿದರು.

  • Bengaluru | ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಹ್ಲಾದ್ ಜೋಶಿ

    Bengaluru | ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಹ್ಲಾದ್ ಜೋಶಿ

    ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Deve Gowda) ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದರು. ಹಿರಿಯ ರಾಜಕೀಯ ಮುತ್ಸದ್ದಿ, ಮಾರ್ಗದರ್ಶಕರು ಆಗಿರುವ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಹಾರೈಸಿದರು. ಇದನ್ನೂ ಓದಿ: ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಶರಣಗೌಡ ಕಂದಕೂರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ತಪ್ಪು ಕಲ್ಪನೆ ದೂರ ಮಾಡಲು ನಾವು ಸಿದ್ಧ: ಸಿ.ಟಿ.ರವಿ

  • ಕುರುಬೂರು ಶಾಂತಕುಮಾರ್ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

    ಕುರುಬೂರು ಶಾಂತಕುಮಾರ್ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

    ಬೆಂಗಳೂರು: ಪಂಜಾಬಿನ (Punjab) ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಇಂದು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ (Bengaluru) ಕರೆತರಲಾಗಿದೆ.

    ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಇದನ್ನೂ ಓದಿ: ದರ ಏರಿಕೆ ಎಫೆಕ್ಟ್ – ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ

    ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಅಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಇದನ್ನೂ ಓದಿ: ಎಲಾನ್‌ ಮಸ್ಕ್‌ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್‌

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಶನಿವಾರ ಏರ್ ಅಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು

  • ಮಣಿಪಾಲ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ನ ಕಿಡ್ನಿ ಕಸಿ ಯಶಸ್ವಿ

    ಮಣಿಪಾಲ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ನ ಕಿಡ್ನಿ ಕಸಿ ಯಶಸ್ವಿ

    ಬೆಂಗಳೂರು: ಇತ್ತೀಚೆಗೆ ಯಂಗ್ ಯೇಜ್ ನಲ್ಲಿ ಕಿಡ್ನಿ ವೈಫಲ್ಯದ ಸಮಸ್ಯೆ ಕಾಡುತ್ತಿದೆ. ಕಿಡ್ನಿ ದಾನಕ್ಕೆ (Kidney Transplant) ಕೆಲವೊಮ್ಮೆ ಕುಟುಂಬಸ್ಥರು ತಯಾರಿದರೂ ರಕ್ತದ ಗುಂಪು ಮ್ಯಾಚ್ ಆಗದೇ ಜೀವನ್ಮರಣದ ಹೋರಾಟ ಮಾಡುವ ರೋಗಿಗಳಿದ್ದಾರೆ. ಆದರೆ ಇನ್ಮುಂದೆ ಈ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಬ್ಲಡ್ ಗ್ರೂಪ್ ಯಾವುದಾದರೂ ಕಿಡ್ನಿ ಕಸಿ ಮಾಡಬಹುದಾಗಿದೆ.

    ಮಗನಿಗೆ 16 ವರ್ಷವಿದ್ದಾಗ ಅಮ್ಮನಿಗೆ ಕಿಡ್ನಿ ವೈಫಲ್ಯವಾಗಿತ್ತು. ಕಿಡ್ನಿ ಕೊಡಲು ಮಗ ಮುಂದಾದರೂ 18 ವರ್ಷ ತುಂಬದೇ ಕಿಡ್ನಿ ಕೊಡುವಂತಿರಲಿಲ್ಲ. 19 ವರ್ಷಕ್ಕೆ ಕಿಡ್ನಿ ಕೊಟ್ಟು ಅಮ್ಮನ ಉಳಿಸಲು ಮುಂದಾದ ಮಗನಿಗೆ ರಕ್ತದ ಗುಂಪು ಹೊಂದಾಣಿಕೆಯಾಗದ ಸತ್ಯ ಗೊತ್ತಾಗಿದೆ. ಇನ್ನೊಂದು ಕೇಸ್‍ನಲ್ಲಿ 75 ವರ್ಷದ ಬೆನ್ನು ಬಾಗಿದ ಸ್ಥಿತಿಯಲ್ಲಿರುವ ಅಜ್ಜಿ ತನ್ನ ಮಗನ ಉಳಿಸಲು ಕಿಡ್ನಿ ಕೊಡಲು ತಯಾರಾಗಿದ್ದರೂ, ಇಲ್ಲೂ ಬ್ಲಡ್ ಗ್ರೂಪ್ ಮಗನ ಹಾಗೂ ತಾಯಿಯದ್ದು ಮ್ಯಾಚ್ ಆಗಿಲ್ಲ. ಆದರೂ ಹೊಂದಾಣಿಕೆಯಾಗದ ರಕ್ತದ ಗುಂಪು ಇದ್ದರೂ ಮಣಿಪಾಲ ಆಸ್ಪತ್ರೆಯ (Manipal Hospital) ವೈದ್ಯರು ರಿಸ್ಕ್ ತೆಗೆದುಕೊಂಡು ಕಿಡ್ನಿ ಕಸಿ ಮಾಡಿ ಮರು ಜೀವ ಕೊಟ್ಟಿದ್ದಾರೆ. ಈ ರೀತಿ ಸುಮಾರು 27 ಅಪರೂಪದ ಕಿಡ್ನಿ ಕಸಿಯೂ ಯಶಸ್ವಿಯಾಗಿದೆ. ಈಗ ಕಿಡ್ನಿ ಕಸಿ ಮಾಡಿಕೊಂಡವರು ಹಾಗೂ ಅವರ ಕುಟುಂಬಸ್ಥರ ಮೊಗದಲ್ಲಿ ನಗುವಿನ ಹೊನಲು ತುಂಬಿದೆ.

    ಇನ್ನು ಬೇರೆ ಬೇರೆ ಬ್ಲಡ್ ಗ್ರೂಪ್‍ನ ಕಿಡ್ನಿ ಕಸಿ ಪ್ರಕ್ರಿಯೆ ಕೊಂಚ ಸಂಕೀರ್ಣ. ಕಸಿ ಕ್ರಮದ ಮುನ್ನ ಹಾಗೂ ನಂತರ ರಕ್ತದಲ್ಲಿನ ಪ್ರತಿಕಾಯ ಮಟ್ಟವನ್ನು ಕಡಿಮೆ ಮಾಡಲು ಸಾಕಷ್ಟು ಔಷಧಗಳನ್ನು ನೀಡಲಾಗುತ್ತದೆ. ಮೂರು ತಿಂಗಳವರೆಗೆ ರೋಗಿಗಳನ್ನು ಯಾವುದೇ ಸೋಂಕು ತಾಕದಂತೆ ಎಚ್ಚರ ವಹಿಸಬೇಕು ಎಂದು ಮೂತ್ರಪಿಂಡ ತಜ್ಞ ಡಾ. ದೀಪಕ್ ಕುಮಾರ್ ಚಿತ್ರಹಳ್ಳಿ ಹೇಳುತ್ತಾರೆ. ಇದನ್ನೂ ಓದಿ: `ಗಂಧದಗುಡಿ’ ಚಿತ್ರಕ್ಕೆ ಟ್ಯಾಕ್ಸ್ ಫ್ರೀಗೆ ಒತ್ತಾಯ – ಅಪ್ಪು ಅಭಿಮಾನಿಗಳಿಂದ ಸರ್ಕಾರಕ್ಕೆ ಮನವಿ

    ಡಯಾಲಿಸಿಸ್‍ನಲ್ಲಿ ಬದುಕು ತಳ್ಳುವ ರೋಗಿಗಳಿಗೆ ಈ ಪ್ರಕ್ರಿಯೆ ನಿಜಕ್ಕೂ ಆಶಾದಾಯಕವಾಗಿದೆ. ಹೊಸ ಪ್ರಯೋಗದಲ್ಲಿ ಸಕ್ಸಸ್ ಕಂಡ ಮಣಿಪಾಲ ಆಸ್ಪತ್ರೆಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದೇ ಹೇಳಬಹುದು. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ, ರಾಜಸ್ಥಾನ ಸಿಎಂ ಗೆಹ್ಲೋಟ್

    Live Tv
    [brid partner=56869869 player=32851 video=960834 autoplay=true]

  • ಮಣಿಪಾಲ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಮಣಿಪಾಲ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

    ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಜೂನ್ 1 ರಂದು ಸಿದ್ದರಾಮಯ್ಯ  ಆಸ್ಪತ್ರೆಗೆ ದಾಖಲಾಗಿದ್ದರು. ಈ ಮಧ್ಯೆ ಒಟ್ಟು ಮೂರು ಬಾರಿ ಸಿದ್ದರಾಮಯ್ಯ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು ಟೆಸ್ಟ್ ರಿಪೋರ್ಟ್  ನೆಗೆಟಿವ್ ಬಂದಿದೆ. ಇದನ್ನೂ ಓದಿ: ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

    ಸಿದ್ದರಾಮಯ್ಯ ವೈರಲ್ ಫೀವರ್ ನಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ 6  ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ಶಾಸಕ ಯತೀಂದ್ರ ಜೊತೆಗಿದ್ದು ಸಿದ್ದರಾಮಯ್ಯ ಯೋಗಕ್ಷೇಮ ನೋಡಿಕೊಂಡಿದ್ದರು.  ಒಂದು ವಾರಗಳ ಕಾಲ ಸಿದ್ದರಾಮಯ್ಯ ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

    ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿದ್ದು, ಬಳಿಕ ಗುಣಮುಖರಾಗಿದ್ದರು.

  • ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಸುಧಾಕರ್

    ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಸುಧಾಕರ್

    ಬೆಂಗಳೂರು : ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ. ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ದಿನವೇ‌ ಶೇ. 62 ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.

    ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದೆ. ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

    ಬಿಜೆಪಿ ವರಿಷ್ಠರು ನಮ್ಮ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಮುಂದಿನ ಐದು ವರ್ಷವೂ ನಮ್ಮ ಸರ್ಕಾರ ಇರಲಿದೆ ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷಗಳು ವಿರೋಧವಾಗಿ ಹೇಳಿದರೆ ಅವರಿಗೆ ಮಾರ್ಕೆಟ್ ದೊರೆಯುತ್ತದೆ. ಯಾರು ಏನು ಹೇಳಿದರೂ ಅದನ್ನು ಸಾಬೀತುಮಾಡಬೇಕು ಎಂದರು.

  • ಕೊರೊನಾ ಗೆದ್ದ ಬಿಎಸ್‌ವೈ  – ಮಣಿಪಾಲ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್‌

    ಕೊರೊನಾ ಗೆದ್ದ ಬಿಎಸ್‌ವೈ – ಮಣಿಪಾಲ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್‌

    ಬೆಂಗಳೂರು: ಕೊರೊನಾದಿಂದ ಸಿಎಂ ಯಡಿಯೂರಪ್ಪನವರು ಗುಣಮುಖರಾಗಿದ್ದು ಇಂದು ಸಂಜೆ ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಆಸ್ಪತ್ರೆಗೆ ದಾಖಲಾದ ಬಳಿಕ ಮುಖ್ಯಮಂತ್ರಿಗಳು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬೆಳಗ್ಗೆ ವರದಿ ನೆಗೆಟಿವ್ ಬಂದಿದೆ. ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಡಿಯೂರಪ್ಪನವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಡಿಸ್ಚಾರ್ಜ್‌ ಮಾಡಬಹುದು ಎಂದು ವೈದ್ಯರು ತಿಳಿಸಿದ್ದರು.

    ಕೊರೊನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತ ಇದೆ ಎಂಬ ಮಾಹಿತಿ ಮೊದಲು ಲಭ್ಯವಾಗಿತ್ತು. ಆದರೆ ಈಗ ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಡಿಸ್ಚಾರ್ಜ್‌ ಆದ ಬಿಎಸ್‌ವೈ ನೇರವಾಗಿ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.

    ಆ.16ರವರೆಗೆ ಹೋಂ ಕ್ವಾರಂಟೈನ್‌:
    ಬಿಬಿಎಂಪಿ, ಆರೋಗ್ಯ ಇಲಾಖಾ ಅಧಿಕಾರಿಗಳು ಆಗಸ್ಟ್‌ 4 ರಂದು ಸಿಎಂ ಕಚೇರಿ ಮತ್ತು ಮನೆಯ ಮುಂದೆ ಆ. 2 ರಿಂದ 16 ರವರೆಗೂ ಪ್ರವೇಶ ನಿರಾಕರಣೆ ಮಾಡಿ ಪೋಸ್ಟರ್‌ ಅಂಟಿಸಿದ್ದಾರೆ. ಆಗಸ್ಟ್ 16 ರವರೆಗೂ ಸಿಎಂ ಬಿಎಸ್ ಯಡಿಯೂರಪ್ಪ ಹೋಂ ಕ್ವಾರಂಟೈನ್ ಹಿನ್ನೆಲೆಯಲ್ಲಿ ಯಾರಿಗೂ ಪ್ರವೇಶವಿಲ್ಲ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಸಿಎಂಗಾಗಿ ಹೋಮ್‌ ಕ್ವಾರಂಟೈನ್‌ ನಿಯಮ ಬದಲಾಗುತ್ತಾ?

  • ಮಾಜಿ ಸಿಎಂಗೆ ಕೊರೊನಾ – ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಮಾಜಿ ಸಿಎಂಗೆ ಕೊರೊನಾ – ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.

    ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್‌ ಮಾಡಿಸಿದ್ದು ಪಾಸಿಟಿವ್‌ ಬಂದಿದೆ.

    ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್‌ ಟೆಸ್ಟ್‌ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

    ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.

    ಕೊರೊನಾ ಬಂದಿರುವ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ

    ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.

    ಆಸ್ಪತ್ರೆಗೆ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್‌ ವಾರ್ಡ್‌ನಲ್ಲಿದ್ದು ಆರೋಗ್ಯವಾಗಿದ್ದಾರೆ.

  • ಮಣಿಪಾಲ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದಾಖಲು

    ಮಣಿಪಾಲ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದಾಖಲು

    ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ. ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.

    ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.

    ಆಸ್ಪತ್ರೆಯಲ್ಲಿ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಇಂದು ಸಿದ್ದರಾಮಯ್ಯನವರು ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್‌ ವಾರ್ಡ್‌ನಲ್ಲಿದ್ದು ಆರೋಗ್ಯವಾಗಿದ್ದಾರೆ.

  • ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌

    ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌

    ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್‌ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ.

    ಯಡಿಯೂರಪ್ಪನವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಎಚ್‌ಎಎಲ್‌ ಬಳಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಯಡಿಯೂರಪ್ಪನವರ ಆರೋಗ್ಯ ಸ್ಥಿರವಾಗಿದು ತಮ್ಮ ವೈದ್ಯರ ತಂಡ ನಿಗಾ ಇರಿಸಿದೆ ಎಂದು ಮಣಿಪಾಲ ಆಸ್ಪತ್ರೆ ತನ್ನ ಮೀಡಿಯಾ ಬುಲೆಟಿನ್‌ನಲ್ಲಿ ತಿಳಿಸಿದೆ.

    ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಕೇಳಿಕೊಂಡಿದ್ದರು.

    ಕೋವಿಡ್‌ ಸೋಂಕಿಗೆ ಒಳಗಾದ ದೇಶದ ಎರಡನೇ ಮುಖ್ಯಮಂತ್ರಿ ಯಡಿಯೂರಪ್ಪ ಆಗಿದ್ದಾರೆ. ಈ ಮೊದಲು ಮಧ್ಯಪ್ರದೇಶದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸೋಂಕು ಬಂದಿತ್ತು.

    ಸಿಎಂ ಯಡಿಯೂರಪ್ಪನರಿಗೆ ಸೋಂಕು ತಿಳಿದ ವಿಚಾರ ಕೇಳಿ ಸಚಿವರಾದ ಸುಧಾಕರ್‌, ಅಶ್ವಥ್‌ ನಾರಾಯಣ್‌, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಲ್‌ ಸಂತೋಷ್‌ ಸೇರಿದಂತೆ ಹಲವು ಗಣ್ಯರು ಚೇತರಿಕೆಯಾಗಲಿ ಎಂದು ಹಾರೈಸಿದ್ದಾರೆ.