Tag: ಮಣಿಪುರ ಗಲಭೆ

  • ಮಣಿಪುರ ಗಲಭೆ: ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ – 50 ಕೇಂದ್ರೀಯ ಭದ್ರತಾ ಪಡೆ ನಿಯೋಜನೆ

    ಮಣಿಪುರ ಗಲಭೆ: ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ – 50 ಕೇಂದ್ರೀಯ ಭದ್ರತಾ ಪಡೆ ನಿಯೋಜನೆ

    – ನ.19ರ ವರೆಗೆ ಕೆಲ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳು ಬಂದ್

    ಇಂಫಾಲ್‍: ಹಿಂಸಾಚಾರ ಪೀಡಿತ ಮಣಿಪುರದ (Manipur violence) ಭದ್ರತಾ ವ್ಯವಸ್ಥೆಗಳ ಕುರಿತು ಕೇಂದ್ರ ಸಚಿವ ಅಮಿತ್‌ ಶಾ (Amit Shah) ಅವರಿಂದು ಉನ್ನತ ಮಟ್ಟದ ಸಭೆ ನಡೆಸಿದರು. ಹಲವು ವಿಷಯಗಳ ಕುರಿತು ಚರ್ಚಿಸಿದರು.

    ಈ ವೇಳೆ ಉದ್ವಿಗ್ನತೆ ಹೆಚ್ಚಿರುವ ಕಾರಣ ಮಣಿಪುರದಲ್ಲಿ ಹೆಚ್ಚುವರಿ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳನ್ನು (CAPF) ನಿಯೋಜಿಸಲು ನಿರ್ಧರಿಸಲಾಯಿತು. ಈ ಸಂಬಂಧ ಸಭೆಯ ಬಳಿಕ ಸಿಎಪಿಎಫ್‌ ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಅಮಿತ್‌ ಶಾ ನಿರ್ದೇಶನ ನೀಡಿದರು. ಈ ಮೊದಲೇ 20 ಭದ್ರತಾ ಪಡೆಗಳನ್ನು ನಿಯೋಹಿಸಲಾಗಿತ್ತು. ಸದ್ಯ ಒಟ್ಟು 70 ಕೇಂದ್ರೀಯ ಭದ್ರತಾ ಪಡೆಗಳು ಮಣಿಪುರದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.

    ಶಾಲೆ, ಕಾಲೇಜುಗಳು ಬಂದ್‌:
    ಇನ್ನೂ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ ಜನ ಕಂಗಾಲಾಗಿದ್ದು, ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳನ್ನು ನವೆಂಬರ್‌ 19ರ ವರೆಗೆ (ಮಂಗಳವಾರ) ಬಂದ್‌ ಮಾಡಿರುವುದಾಗಿ ಮಣಿಪುರ ಸರ್ಕಾರ ಸೋಮವಾರ (ಇಂದು) ಘೋಷಿಸಿದೆ. ಇದನ್ನೂ ಓದಿ: ವಿಮಾನ ಪ್ರಯಾಣದಲ್ಲಿ ದಾಖಲೆ – ನ.17 ರಂದು ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ

    ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
    ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು. ಇದನ್ನೂ ಓದಿ: ದೆಹಲಿ | 10, 12ನೇ ತರಗತಿಯವರಿಗೆ ಬೇರೆ ಬಗೆಯ ಶ್ವಾಸಕೋಶಗಳಿಲ್ಲ – ತರಗತಿ ಬಂದ್‌ಗೆ ಸುಪ್ರೀಂ ನಿರ್ದೇಶನ

    ನಿಂಗ್‌ತೊಕೊಂಗ್‌ನಲ್ಲಿ ಲೋಕೋಪಯೋಗಿ ಸಚಿವ ಗೋವಿಂದಾಸ್ ಕೊಂತುಜಮ್, ಲಾಂಗ್‌ಮೇಡಾಂಗ್ ಬಜಾರ್‌ನಲ್ಲಿನ ಬಿಜೆಪಿ ಶಾಸಕ ವೈ ರಾಧೇಶ್ಯಾಮ್, ತೌಬಲ್ ಜಿಲ್ಲೆಯ ವಾಂಗ್‌ಜಿಂಗ್ ತೆಂತಾದ ಬಿಜೆಪಿ ಶಾಸಕ ಪಿ. ಬ್ರೋಜೆನ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಖುಂಡ್ರಕ್‌ಪಾಮ್‌ನ ಕಾಂಗ್ರೆಸ್ ಶಾಸಕ ತೊಕ್ಚೋಮ್ ಲೋಕೇಶ್ವರ್ ಅವರ ಮನೆಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿತ್ತು. ಇದರಿಂದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಇದರಿಂದ ಅಮಿತ್‌ ಶಾ ಮಹಾರಾಷ್ಟ್ರದಲ್ಲಿ ನಿಯೋಜನೆಗೊಂಡಿದ್ದ ಚುನಾವಣಾ ರ‍್ಯಾಲಿಗಳನ್ನು ದಿಢೀರ್‌ ಸ್ಥಗಿತಗೊಳಿಸಿ ಭಾನುವಾರ ಸಂಜೆಯೇ ಭದ್ರತಾ ಅಧಿಕಾರಿಗಳ ಸಭೆ ನಡೆಸಿದ್ದರು.

    ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು, ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ ಎಂದು ಮುಖ್ಯಮಂತ್ರಿಗಳನ್ನ ನೇರವಾಗಿ ಹೊಣೆ ಮಾಡಿತು. ಇದನ್ನೂ ಓದಿ: ನಾವು ಜಾತಿ ಸಮೀಕ್ಷೆ ನಡೆಸುತ್ತೇವೆ, ಅವಕಾಶ ವಂಚಿತರಿಗೆ ಇದರಿಂದ ಲಾಭವಾಗಲಿದೆ: ರಾಹುಲ್ ಗಾಂಧಿ

    ಸದ್ಯ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೈಗೆತ್ತಿಕೊಂಡಿದೆ. ಇದನ್ನೂ ಓದಿ: Kantara Chapter 1 ಟೈಟಲ್ ಟೀಸರ್ ರಿಲೀಸ್- ರಿಷಬ್ ಶೆಟ್ಟಿ ಲುಕ್‌ಗೆ ಫ್ಯಾನ್ಸ್ ಫಿದಾ

  • ಮಣಿಪುರದಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ರೇಪ್ – ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

    ಮಣಿಪುರದಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ರೇಪ್ – ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

    ಇಂಫಾಲ್: ಅಂದು ನೆರೆಹೊರೆಯ ಮನೆಗಳಿಗೆಲ್ಲಾ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು, ನನ್ನ ಮನೆಗೂ ಬೆಂಕಿ ಬಿದ್ದಿತ್ತು. ಇಬ್ಬರು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು, ಸೊಸೆ, ನಾದಿನಿಯನ್ನ ಕರೆದುಕೊಂಡು ಬೆಂಕಿಬಿದ್ದ ಮನೆಯಿಂದ ತಪ್ಪಿಸಿಕೊಂಡು ಓಡುತ್ತಿದೆ. ವೇಗವಾಗಿ ಓಡುತ್ತಿದ್ದರಿಂದ ಕಾಲು ತಡವರಿಸಿ ಎಡವಿ ಬಿದ್ದೆ. ಅಷ್ಟರಲ್ಲಿ ಯಮಸ್ವರೂಪಿಗಳಂತೆ ಬಂದ ದುಷ್ಕರ್ಮಿಗಳು ನನ್ನನ್ನ ಹಿಡಿದು ಎಳೆದಾಡಿ, ಮನಸ್ಸೋ ಇಚ್ಚೆ ಎಳೆದಾಡಿದ್ರು, ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ರು. ಇದು ಮಣಿಪುರದ ಸಂಘರ್ಷದಲ್ಲಿ (Manipur Violence) ಸಿಕ್ಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಮಹಿಳೆ ಕಹಿ ಅನುಭವವನ್ನು ಬಿಚ್ಚಿಟ್ಟ ಪರಿ.

    ಮಣಿಪುರದಲ್ಲಿ (Manipur) ಜನಾಂಗೀಯ ಘರ್ಷಣೆ ನಡೆಯುತ್ತಿದ್ದು ಮಹಿಳಾ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಮಹಿಳೆಯರು ಆಘಾತಕಾರಿ ಘಟನೆಗಳಲ್ಲಿ ತಾವು ಅನುಭವಿಸಿದ ಕಹಿ ಸತ್ಯಗಳನ್ನ ಬಿಚ್ಚಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಭಯಾಕನ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಹಾಗೂ ಅಧಿಕಾರಿಗಳು ಜನರಿಗೆ ಪ್ರೋತ್ಸಾಹ ನೀಡುತ್ತಿರುವುದರಿಂದ ನೊಂದ ಜೀವಗಳು ಕಷ್ಟ ಹೇಳಿಕೊಳ್ಳಲು ಮುಂದೆ ಬರುತ್ತಿವೆ.

    ಮಣಿಪುರದಲ್ಲಿ ಸಂಘರ್ಷ ಭುಗಿಲೇಳುತ್ತಿದ್ದಂತೆ ಹಲವು ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಎಸಗಿದ್ದರು. ಇಂತಹ ಸಂದರ್ಭದಲ್ಲಿ ಸುಟ್ಟು ಹೋದ ಮನೆಯಿಂದ 37ರ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳು, ಸೊಸೆ ಮತ್ತು ನಾದಿನಿಯೊಂದಿಗೆ ಓಡಿ ಹೋಗುತ್ತಿದ್ದ ವೇಳೆ ಪುರುಷರಿಂದ ಗುಂಪಿಗೆ ಸಿಕ್ಕಿಬಿದ್ದು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

    ನನ್ನ, ನನ್ನ ಕುಟುಂಬದ ಘನತೆ ಗೌರವ ಹಾಳಾಗುತ್ತದೆ, ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಳಲು ಘಟನೆಯನ್ನು ಬಹಿರಂಗಪಡಿಸಿರಲಿಲ್ಲ. ಸಾಮಾಜಿಕ ಕಳಂಕದಿಂದ ತಪ್ಪಿಸಿಕೊಳ್ಳೋದಕ್ಕಾಗಿ ಅತ್ಯಾಚಾರ ಆಗಿದ್ದರೂ ವಿಷಯವನ್ನ ಮುಚ್ಚಿಟ್ಟಿದೆ. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದ್ದೆ. ಆದ್ರೆ ಕುಟುಂಬಸ್ಥರು ಧೈರ್ಯತುಂಬಿದ್ದರಿAದ ದೂರು ನೀಡುತ್ತಿದ್ದೇನೆ ಎಂದು ಬಿಷ್ಣುಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾಳೆ. ಮಹಿಳೆ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಸದ್ಯ ಸಂತ್ರಸ್ತ ಕುಟುಂಬಸ್ಥರು ಪರಿಹಾರ ಶಿಬಿರದಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಸಮೀಪಕ್ಕೆ Chandrayaan-3 ಬಾಹ್ಯಾಕಾಶ ನೌಕೆ – ಇಷ್ಟು ದೂರ ಹೋದ್ರೆ ಚಂದ್ರನ ಮೇಲೆ ಲ್ಯಾಂಡಿಂಗ್‌ ಪಕ್ಕಾ!

    ಆ ಕರಳ ದಿನದಲ್ಲಿ ನಡೆದಿದ್ದೇನು?
    ಮೇ 3 ರಂದು ಸಂಜೆ 6:30ರ ವೇಳೆ ದುಷ್ಕರ್ಮಿಗಳ ಗುಂಪೊಂದು ಆಕೆಯ ಮನೆ ಹಾಗೂ ನೆರೆಹೊರೆಯ ಮನೆಗಳಿಗೆ ಬೆಂಕಿ ಹಚ್ಚಿದ್ದರು. ಆಗ ಅಲ್ಲಿಂದ ತಪ್ಪಿಸಿಕೊಳ್ಳಲು ಮುಂದಾದ ಮಹಿಳೆ ತನ್ನ ಇಬ್ಬರು ಮಕ್ಕಳು, ಸೊಸೆ ಮತ್ತು ನಾದಿನಿಯೊಂದಿಗೆ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಳು. ವೇಗವಾಗಿ ಓಡುತ್ತಿದ್ದ ವೇಳೆ ರಸ್ತೆಯಲ್ಲಿ ಎಡವಿ ಬಿದ್ದಿದ್ದಾಳೆ. ಅಷ್ಟರಲ್ಲಿ ಸೊಸೆ ಇಬ್ಬರು ಗಂಡುಮಕ್ಕಳನ್ನು ಕರೆದುಕೊಂಡು ಓಡಿ ಹೋಗಿದ್ದಾಳೆ. ಆದ್ರೆ ಎಡವಿ ಬಿದ್ದ ಮಹಿಳೆ ಚೇತರಿಸಿಕೊಂಡು ಎದ್ದೇಳುತ್ತಿದ್ದಂತೆ ಐದಾರು ದುಷ್ಕರ್ಮಿಗಳು ಆಕೆಯನ್ನ ಹಿಡಿದು ಎಳೆದಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ, ಆಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಶೂನ್ಯ ಎಫ್‌ಐಆರ್‌ನಲ್ಲಿ ಹೇಳಿಕೆ ದಾಖಲಿಸಿದ್ದಾಳೆ.

    ಶೂನ್ಯ ಎಫ್‌ಐಆರ್ ಅನ್ನು ಯಾವುದೇ ಪೊಲೀಸ್ ಠಾಣೆಯಲ್ಲಿ ಬೇಕಾದರೂ ದಾಖಲಿಸಬಹುದು. ಪ್ರಕರಣ ದಾಖಲಾದ ಪೊಲೀಸ್ ಠಾಣೆಯು ಎಫ್‌ಐಆರ್ ಅನ್ನು ಸರಿಯಾದ ನ್ಯಾಯವ್ಯಾಪ್ತಿಗೆ ಕಳುಹಿಸಬೇಕು, ನಂತರ ಅದನ್ನು ತನಿಖೆ ಮಾಡಲಾಗುತ್ತದೆ ಎಂದು ಚುರಚಂದಪುರದ ಪೊಲೀಸರು ತಿಳಿಸಿದ್ದಾರೆ.

    ಇದುವರೆಗೆ ಮಣಿಪುರದಲ್ಲಿ ಸಾವಿರಾರು ಎಫ್‌ಐಆರ್‌ಗಳು ದಾಖಲಾಗಿದೆ. ಅದರಲ್ಲಿ ಒಂದೇ ಪ್ರಕರಣದ ಮೇಲೆ ಅನೇಕ ಝೀರೋ ಎಫ್‌ಐಆರ್‌ಗಳು ದಾಖಲಾಗಿವೆ. ಬೆಂಕಿ ಹಚ್ಚಿ ದಾಳಿ ಮಾಡಿರುವ ಸಂಬಂಧ 4,454 ಕೇಸ್, 4,148 ಲೂಟಿ ಕೇಸ್, ಮನೆ ಆಸ್ತಿ ನಾಶಕ್ಕೆ ಸಂಬಂಧಿಸಿದಂತೆ 4,694 ಕೇಸ್ ಹಾಗೂ ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದಂತೆ 584 ಕೇಸ್‌ಗಳು ದಾಖಲಾಗಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದ್ವೆಯಾಗಿ 45 ವರ್ಷಗಳಾಯ್ತು, ನನಗೆ ಕೋಪವೇ ಬರಲ್ಲ – ಧನಕರ್ ಹಾಸ್ಯ ಚಟಾಕಿ

    ಮದ್ವೆಯಾಗಿ 45 ವರ್ಷಗಳಾಯ್ತು, ನನಗೆ ಕೋಪವೇ ಬರಲ್ಲ – ಧನಕರ್ ಹಾಸ್ಯ ಚಟಾಕಿ

    ನವದೆಹಲಿ: ಮುಂಗಾರು ಸಂಸತ್ ಅಧಿವೇಶನಕ್ಕೆ ಮಣಿಪುರ ಹಿಂಸಾಚಾರ (Manipur Violence) ವಿಚಾರ ಕಂಟಕವಾಗಿ ಪರಿಣಮಿಸಿದೆ. ಗುರುವಾರವೂ ಉಭಯ ಸದನಗಳಲ್ಲಿ ಗದ್ದಲ ಏರ್ಪಟ್ಟಿದೆ.

    ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ (Jagdeep Dhankhar) ಮತ್ತು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಡುವೆ ವಾಗ್ಯುದ್ಧ ನಡೆದಿದೆ. ಪ್ರಧಾನಿಯನ್ನ ಅಷ್ಟೇಕೆ ಸಮರ್ಥಿಸಿ ಮಾತಾಡ್ತಿದ್ದೀರಿ? ಮಣಿಪುರ ವಿಚಾರದಲ್ಲಿ ಪ್ರಧಾನಿಯನ್ನ ಏಕೆ ರಕ್ಷಣೆ ಮಾಡ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಧನಕರ್‌, ಯಾರನ್ನೂ ರಕ್ಷಿಸುವ ಅಗತ್ಯ ನನಗಿಲ್ಲ. ಸಂವಿಧಾನ ಮತ್ತು ಸದಸ್ಯರ ಹಕ್ಕುಗಳನ್ನು ರಕ್ಷಣೆ ಮಾಡುವುದು ನನ್ನ ಕೆಲಸ. ನಿಮ್ಮಂಥವರಿಂದ ಇಂಥಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದಾಗ `ಸಭಾಪತಿ ಅವರಿಗೆ ಮದುವೆಯಾಗಿ 45 ವರ್ಷಗಳಾಗಿದೆ. ಆದರೂ ಪ್ರತಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸುವಾಗ ಏಕೆ ಸಿಡಿಮಿಡಿಗೊಳ್ಳುತ್ತಾರೆ ಅನ್ನೋದೇ ಅರ್ಥವಾಗುತ್ತಿಲ್ಲ’ ಎಂದು ಕುಳಿತುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಧನಕರ್, ನಾನು ಮದುವೆಯಾಗಿ 45 ವರ್ಷ ಕಳೆದಿದೆ. ಹಾಗಾಗಿ ನನಗೆ ಕೋಪವೇ ಬರೋದಿಲ್ಲ ಎಂದು ಚಟಾಕಿ ಹಾರಿಸಿದರು. ಇದನ್ನೂ ಓದಿ: ಟ್ರೈನಿಂಗ್ ನೆಪದಲ್ಲಿ ಜ್ಯೂನಿಯರ್‌ಗಳಿಗೆ ಥಳಿಸಿದ NCC ಸೀನಿಯರ್ ಕೆಡೆಟ್- ವೀಡಿಯೋ ವೈರಲ್

    ಇನ್ನು, ಆಡಳಿತ ಮತ್ತು ವಿಪಕ್ಷಗಳ ಧೋರಣೆಗೆ ಬೆಸತ್ತ ಸ್ಪೀಕರ್ ಓಂಬಿರ್ಲಾ ಇವತ್ತು ಕಲಾಪದಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸ್ಪೀಕರ್ ಸದನದ ಸಂರಕ್ಷರು, ಅವರು ಬರಬೇಕು ಎಂದು ಕೋರಿದರು. ಇದನ್ನು ಮನ್ನಿಸಿದ ಸ್ಪೀಕರ್ ಮಧ್ಯಾಹ್ನದ ಕಲಾಪವನ್ನ ನಿರ್ವಹಿಸಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ – ಆಪ್‌ಗೆ ಭಾರೀ ಹಿನ್ನಡೆ

    ಅಲ್ಲದೇ ಗುರುವಾರ ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ದೆಹಲಿ ಸೇವಾ ಮಸೂದೆ ವಿಧೇಯಕವನ್ನು ಮಂಡನೆ ಮಾಡಲಾಯಿತು. ಈ ವೇಳೆ ವಿಧೇಯಕದ ಪ್ರತಿ ಹರಿದೆಸೆದ ಎಎಪಿ ಸಂಸದ ಸುಶೀಲ್ ಸದನದಿಂದ ಅಮಾನಾತಾದರು. ಕೇಂದ್ರದ ವಿರುದ್ಧ ಎಎಪಿ ವಾಗ್ದಾಳಿ ನಡೆಸಿದೆ. ಇದೇ ವೇಳೆ, ಡಿಜಿಟಲ್ ದತ್ತಾಂಶಗಳ ಸಂರಕ್ಷಣಾ ವಿಧೇಯಕವನ್ನು ಸರ್ಕಾರ ಮಂಡಿಸಿದ್ದು, ಲೋಕಸಭೆಯಲ್ಲಿ ಗದ್ದಲ ಉಂಟಾಯ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ?

    ನವದೆಹಲಿ: ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಚಿಂತನೆ ನಡೆಸಿದೆ.

    ಪ್ರಕರಣದ ವಿಶೇಷ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ, ಈವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ

    ವಾದ ಪ್ರತಿವಾದ ಆಲಿಸಿದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ CJI ಚಂದ್ರಚೂಡ್, ನಮ್ಮ ಬಳಿ ಎರಡು ಆಯ್ಕೆಗಳಿವೆ. ಮೊದಲನೇಯದಾಗಿ ನಾವು ಓರ್ವ ಮಹಿಳಾ‌, ಓರ್ವ ಪುರುಷ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಬಹುದು, ವಾಸ್ತವಾಂಶ ತಿಳಿಯಲು ನಾವು ಸಮಿತಿ ರಚನೆ ಮಾಡಬೇಕಾಗುತ್ತದೆ. ಇನ್ನು 2ನೇ ಆಯ್ಕೆ ಸರ್ಕಾರ ಇಲ್ಲಿಯವರೆಗೂ ಏನು ಮಾಡಿದೆ? ಅನ್ನೋದರ ಮೇಲೆ ನಿರ್ಧಾರವಾಗುತ್ತೆ. ಈವರೆಗೂ ಸರ್ಕಾರ ತೆಗೆದುಕೊಂಡ‌ ಕ್ರಮಗಳು ತೃಪ್ತಿಕರವಾಗಿದ್ದರೇ ನಾವು ಮಧ್ಯಪ್ರವೇಶ ಮಾಡದೇ ಇರುವುದು. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

    ಈ ಹಿನ್ನೆಲೆಯಲ್ಲಿ ನಮಗೆ ವಸ್ತುನಿಷ್ಠ ವರದಿಬೇಕು. ಈವರೆಗೂ 6,000 ಎಫ್‌ಐಆರ್ ವಿವರಗಳನ್ನ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಅನ್ನೋ ಮಾಹಿಯೂ ಬೇಕು. ದಾಖಲಾಗಿರುವ 6,000 FIRಗಳ ವಿಭಜನೆ ಮಾಡಬೇಕು. ಅದರಲ್ಲಿ ಎಷ್ಟು ಶೂನ್ಯ ಎಫ್‌ಐಆರ್ ದಾಖಲಾಗಿವೆ? ಎಷ್ಟು ಜನರ ಬಂಧನವಾಗಿದೆ? ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಎಷ್ಟು ಮಂದಿ 156(3), ಎಷ್ಟು ಸೆಕ್ಷನ್ 164 ಹೇಳಿಕೆಗಳನ್ನ ದಾಖಲಿಸಲಾಗಿದೆ? ಎಂಬ ಮಾಹಿತಿ ಬೇಕು ಎಂದು ಸಿಜೆಐ ಚಂದ್ರಚೂಡ್ ನಿರ್ದೇಶಿಸಿದ್ದಾರೆ.

    ಎಲ್ಲ ಮಾಹಿತಿಯನ್ನ ಆಗಸ್ಟ್‌ 1ರಂದು ಕೋರ್ಟ್‌ಗೆ ನೀಡಬೇಕು ಎಂದು ಅವರು ಇದೇ ವೇಳೆ ಸೂಚಿಸಿದರು. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿವರಗಳನ್ನ ನೀಡಲು ಹೆಚ್ಚಿನ ಸಮಯವನ್ನ ಕೋರಿದರು. ಆದ್ರೆ ನ್ಯಾಯಾಲಯವು ನಿರಾಕರಿಸಿತು.

    ಪ್ರಕರಣದ ಬಗ್ಗೆ ಎಸ್‌ಐಟಿ ರಚನೆ ಬಗ್ಗೆ ಕೇಂದ್ರ ಸರ್ಕಾರದ ಅಭಿಪ್ರಾಯವನ್ನ ಸುಪ್ರೀಂಕೋರ್ಟ್ ಕೇಳಿದೆ. ಎಸ್‌ಐಟಿ ರಚನೆ ಅಂತಿಮವಾದ್ರೆ ಯಾರನ್ನ ಸೇರ್ಪಡೆ ಮಾಡಬಹುದು? ಒಳ್ಳೆಯ ಹೆಸರುಗಳಿದ್ದರೆ ತಿಳಿಸಿ, ನಾವು ಆ ಹೆಸರುಗಳನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿ, ವಿಚಾರಣೆಯನ್ನ ನಾಳೆ ಮಧ್ಯಾಹ್ನಕ್ಕೆ ಮುಂದೂಡಿತು.

    ಮಣಿಪುರು ಘಟನೆ ಸಮರ್ಥಿಸಲು ಸಾಧ್ಯವಿಲ್ಲ:
    ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮಣಿಪುರ ಘಟನೆಗೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ವಿಚಾರಣೆ ವೇಳೆ ವಕೀಲ ಬಾನ್ಸುರಿ ಸ್ವರಾಜ್ ಅವರ ವಾದಕ್ಕೆ ಪ್ರತಿಕ್ರಿಯಿಸಿದ ಅವರು, ಮಣಿಪುರ ಘಟನೆಯ ಜೊತೆಗೆ ಇತರೆ ಘಟನೆಗಳ ಹೋಲಿಕೆ ಮಾಡುವುದು ಸರಿಯಲ್ಲ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಗುಂಪುಗಳು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣಗಳು ತನಿಖೆಯಾಗಬೇಕು ಎಂದರು.

    ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿಯೂ ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ ಎಂಬುದನ್ನ ಒಪ್ಪಿಕೊಳ್ಳಲಾಗಿದೆ. ಆದ್ರೆ ಮಣಿಪುರದ ಪರಿಸ್ಥಿತಿ ವಿಭಿನ್ನವಾಗಿದೆ ಮತ್ತು ಅದನ್ನ ಇತರ ಘಟನೆಗಳಿಗೆ ಹೋಲಿಸುವ ಮೂಲಕ ಸಮರ್ಥಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹ

    ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹ

    ಹುಬ್ಬಳ್ಳಿ: ಕೇಂದ್ರ ಸರ್ಕಾರ (Union Government) ಮಣಿಪುರದ ಗಲಭೆಗೆ ಆರಂಭದಲ್ಲೇ ಮೂಲ ಕಾರಣಗಳನ್ನ ಹುಡುಕಬೇಕಿತ್ತು. ಅಲ್ಲಿನ ರಾಜ್ಯ ಸರ್ಕಾರವೂ ಆರಂಭದಲ್ಲೇ ಗಲಭೆ ತಡೆಯುವಲ್ಲಿ ವಿಫಲವಾಗಿದ್ದು, ಸಿಎಂ ವೈಫಲ್ಯಗಳು ಎದ್ದು ಕಾಣುತ್ತಿವೆ. ಆದ್ದರಿಂದ ಮಣಿಪುರದಲ್ಲಿ ರಾಷ್ಟ್ರಪತಿ (President) ಆಡಳಿತ ಜಾರಿಗೆ ತರಬೇಕು ಎಂದು ವಿಧಾನಪರಿಷತ್‌ ಸದಸ್ಯರು ಆಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಆಗ್ರಹಿಸಿದ್ದಾರೆ.

    ಮಣಿಪುರದ ಗಲಭೆ (Manipur Violence) ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕಿತ್ತು. ಆದರೀಗ ಗಲಭೆ ವಿಕೋಪಕ್ಕೆ ತಿರುಗಿದೆ. ಮಣಿಪುರದ ಜನತೆ ಅಲ್ಲಿನ ಸಿಎಂ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಸಿಎಂ ಬಿರೇನ್‌ ಸಿಂಗ್‌ (Biren Singh) ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

    ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿರುವುದು ಪೈಶಾಚಿಕ ಕೃತ್ಯ ನಾನು ಇದನ್ನ ತೀವ್ರವಾಗಿ ಖಂಡಿಸುತ್ತೇನೆ. ಕೇಂದ್ರ ಸರ್ಕಾರ ಬರಿ ಬಾಯಿ ಮಾತಿಗೆ ಕಠಿಣ ಕ್ರಮ ಅನ್ನದೇ ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು. ಇದನ್ನೂ ಓದಿ: 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಜಾಮೀನು ನೀಡಿದ್ದಕ್ಕೆ ಹೈಕೋರ್ಟ್ ಕಿಡಿ

    ಇದೇ ವೇಳೆ ಏಕರೂಪ ನಾಗರಿಕ ಸಂಹಿತೆ ಕಾನೂನು ವಿಚಾರವಾಗಿ ಮಾತನಾಡಿ, ಇದೊಂದು ಚುನಾವಣೆಯ ಗಿಮಿಕ್‌. ಮೋದಿ ಸರ್ಕಾರ ತನ್ನ ಮೊದಲ ಪ್ರಣಾಳಿಕೆಯಲ್ಲಿಯೇ ಏಕರೂಪ ನಾಗರಿಕ ಕಾನೂನು ಘೋಷಣೆ ಮಾಡಿತ್ತು. ಆದ್ರೆ 9 ವರ್ಷಗಳಿಂದ ಜಾರಿ ಮಾಡದೇ ಈಗ ಚುನಾವಣೆಯ ಸಮಯದಲ್ಲಿ ಜಾರಿ ಮಾಡುತ್ತಾರೆ ಅಂದ್ರೆ ಏನರ್ಥ. ಯಾವುದೇ ಚರ್ಚೆ ಆಗದೇ ತರಾತುರಿಯಲ್ಲಿ ಕಾನೂನು ಜಾರಿ ಮಾಡುತ್ತಿರುವುದು ಚುನಾವಣೆ ಉದ್ದೇಶದಿಂದಲೇ ಹೊರತು ಬೇರೇನೂ ಅಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್‌

    ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ಮಾತನಾಡಿದ ಶೆಟ್ಟರ್‌, ಹಾಲಿನ ದರ ಏರಿಕೆ ಬಹಳಷ್ಟು ದಿನಗಳಿಂದ ಇತ್ತು. ಈ ಬಗ್ಗೆ ರೈತ ಮತ್ತು ಸರಬರಾಜು ಮಾಡುವವರ ಜೊತೆಗೆ ಚರ್ಚೆ ನಡೆಯುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಏನಾದರೂ ಯೋಜನೆ ಜಾರಿ ಮಾಡಬೇಕಾದ್ರೆ ದರ ಏರಿಕೆ ಅನಿವಾರ್ಯವಾಗುತ್ತದೆ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]