Tag: ಮಣಿಪುರ ಚುನಾವಣೆ

  • ಫಲಿತಾಂಶಕ್ಕೂ ಮೊದಲು ಮಣಿಪುರದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್‌ ಪ್ಲ್ಯಾನ್‌

    ಫಲಿತಾಂಶಕ್ಕೂ ಮೊದಲು ಮಣಿಪುರದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್‌ ಪ್ಲ್ಯಾನ್‌

    ಇಂಫಾಲ್: ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಅತಂತ್ರ ವಿಧಾನಸಭೆ ಪರಿಸ್ಥಿತಿ ತಲೆದೋರುವ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೂ ಸ್ಪಷ್ಟ ಬಹುಮತದಿಂದ ಹಿಂದಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಕಾಂಗ್ರೆಸ್‌, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರನ್ನು ಒಟ್ಟುಗೂಡಿಸಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಕಾರ್ಯತಂತ್ರ ರೂಪಿಸಿದೆ.

    ಮಣಿಪುರದಲ್ಲಿ ಸದ್ಯ ಬಿಜೆಪಿ 27, ಎನ್‌ಪಿಪಿ 12, ಕಾಂಗ್ರೆಸ್‌ 11, ಇತರರು 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ರಾಜ್ಯದಲ್ಲಿ ಒಟ್ಟು 60 ಸ್ಥಾನಗಳಿದ್ದು, ಬಹುಮತಕ್ಕೆ 31 ಸ್ಥಾನಗಳನ್ನು ಗೆಲ್ಲಬೇಕಿದೆ. ಆದರೆ ಫಲಿತಾಂಶವನ್ನು ಗಮನಿಸಿದರೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂದು ವಿಶ್ಲೇಷಿಸಲಾಗಿದೆ. ಫಲಿತಾಂಶಕ್ಕೂ ಮೊದಲು ಮಣಿಪುರದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್‌ ಮುಂದಾಗಿದೆ.

    2017ರಲ್ಲಿ ಇದೇ ರೀತಿ ಕಾಂಗ್ರೆಸ್‌ 28 ಸ್ಥಾನಗಳನ್ನು ಜಯಿಸಿತ್ತು. ಬಿಜೆಪಿ 21 ಹಾಗೂ ಇತರರು 11 ಸ್ಥಾನಗಳನ್ನು ಗೆದ್ದಿದ್ದವು. ಹೆಚ್ಚು ಸ್ಥಾನ ಗಳಿಸಿದ್ದರೂ ಕಾಂಗ್ರೆಸ್‌ಗೆ ಸರ್ಕಾರ ರಚಿಸುವ ಅವಕಾಶ ಕೈತಪ್ಪಿತ್ತು. ಪಕ್ಷೇತರರೊಂದಿಗೆ ಮೈತ್ರಿ ಸಾಧಿಸಿ ಬಿಜೆಪಿ ಸರ್ಕಾರವನ್ನು ರಚಿಸಿತ್ತು.

    ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಬಿಜೆಪಿಗೆ ಅತಿ ಹೆಚ್ಚು ಸ್ಥಾನ ಸಿಗಲಿದೆ ಎಂದು ಸಮೀಕ್ಷೆಗಳು ತಿಳಿಸಿದ್ದವು. ಆದರೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಕೆಲ ಸಮೀಕ್ಷೆಗಳು ನುಡಿದಿದ್ದ ಭವಿಷ್ಯ ನಿಜವಾಗುವ ಚಿತ್ರಣ ಫಲಿತಾಂಶದಿಂದ ಕಂಡುಬರುತ್ತಿದೆ.

  • ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕೆ? ಬಿಜೆಪಿ ಸರ್ಕಾರಕ್ಕೆ ಮತ್ತೆ 5 ವರ್ಷ ಅವಕಾಶ ಕೊಡಿ: ಅಮಿತ್‌ ಶಾ

    ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕೆ? ಬಿಜೆಪಿ ಸರ್ಕಾರಕ್ಕೆ ಮತ್ತೆ 5 ವರ್ಷ ಅವಕಾಶ ಕೊಡಿ: ಅಮಿತ್‌ ಶಾ

    ಇಂಫಾಲ್: ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕಾದರೆ, ಬಿಜೆಪಿ ಸರ್ಕಾರಕ್ಕೆ ಇನ್ನೂ 5 ವರ್ಷ ಅವಕಾಶ ಕೊಡಿ ಎಂದು ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

    ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಇನ್ನೂ 5 ವರ್ಷ ಅವಕಾಶ ಕೊಡಿ. ರಾಜ್ಯದಲ್ಲಿ ಶಾಂತಿ ನೆಲೆಸಲು ಬಿಜೆಪಿ ಸರ್ಕಾರ ಮಣಿಪುರದ ಬಂಡಾಯ ಗುಂಪುಗಳೊಂದಿಗೆ ಮಾತುಕತೆಗೆ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಶಾಂತಿ ಸ್ಥಾಪನೆಗೆ ಇದೇ ರೀತಿಯ ಉಪಕ್ರಮಗಳನ್ನು ಕೈಗೊಂಡಿದೆ. ಈಶಾನ್ಯದಲ್ಲಿ 9,500 ಕ್ಕೂ ಹೆಚ್ಚು ಜನರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿಕೊಂಡಿದ್ದಾರೆ ಎಂದು ಅಮಿತ್‌ ಶಾ ವಿವರಿಸಿದ್ದಾರೆ.

    ಈಗ ಮಣಿಪುರ ರಾಜ್ಯದಲ್ಲಿ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯವು ಮುಂದಿನ ಕೆಲವು ವರ್ಷಗಳಲ್ಲಿ 825 ಕೋಟಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 60 ಕೆಜಿ ಚಿನ್ನ ದಾನ ಮಾಡಿದ ಭಕ್ತ

    15 ವರ್ಷಗಳ ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದ ಒಟ್ಟು ಮನೆಗಳ ಶೇ.5 ರಷ್ಟು ಜನರು ಮಾತ್ರ ಪೈಪ್‌ಲೈನ್‌ನಲ್ಲಿ ನೀರಿನ ಸೌಲಭ್ಯ ಪಡೆದಿದ್ದರು. ಆದರೆ 2017ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಮಾಣ ಶೇ.57ಕ್ಕೆ ತಲುಪಿದೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ

    ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ

    ನವದೆಹಲಿ: ಬಿಜೆಪಿಯು ಈಶಾನ್ಯ ಭಾರತದವರ ಜೀವನ ಶೈಲಿಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದಾಗಿ ತಾರತಮ್ಯ ಉಂಟಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

    ಮಣಿಪುರದಲ್ಲಿ ವರ್ಚುವಲ್ ಪ್ರಚಾರದಲ್ಲಿ ಮಾತನಾಡಿದ ಅವರು, ಅಸ್ಸಾಂ ಬಿಜೆಪಿ ಮತ್ತು ಅದರ ವಿವಿಧ ಸಂಘಟನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್‌ಗೆ ದೂರು ನೀಡಿದ್ದರ ಬಗ್ಗೆ ಕೌಂಟರ್ ನೀಡಿದರು. ಬಿಜೆಪಿ ಬಿಜೆಪಿಯು ರಾಜ್ಯಗಳ ಒಕ್ಕೂಟ ಹಾಗೂ ವೈವಿಧ್ಯತೆಯಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸುತ್ತಿದೆ. ನಮ್ಮ ದೇಶದ ಎಲ್ಲಾ ರಾಜ್ಯಗಳು ಸಮಾನತೆಯನ್ನು ಹೊಂದಿರುವ ಅಖಂಡ ರಾಷ್ಟ್ರವೆನಿಸಿಕೊಂಡಿದೆ. ಆದರೆ ಈಶಾನ್ಯ ಭಾಗಕ್ಕೆ ಬಂದರೆ ಬಿಜೆಪಿಗೆ ಏಕರೂಪತೆಯ ಕಲ್ಪನೆಯಿದೆ ಎಂದು ಕಿಡಿಕಾರಿದರು.

    ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ನಮ್ಮ ಸಂಪ್ರದಾಯಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಿದೆ. ಇದರಿಂದಾಗಿ ಮಣಿಪುರ ಅಭಿವೃದ್ಧಿಯಾಗಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ, ನಾವು ಅದನ್ನು ಪ್ರಶ್ನೆ ಮಾಡುತ್ತೇವಾ: ಮುಸ್ಲಿಂ ವಿದ್ಯಾರ್ಥಿಗಳು

    ನಮಗೆ ಸಂವಿಧಾನದ ಪೀಠಿಕೆಯ ಮೇಲೆ ನಂಬಿಕೆಯಿದೆ. ಅದರನ್ವಯದಂತೆ ಮಣಿಪುರದ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಐತಿಹಾಸಿಕ ಗಡಿಗಳನ್ನು ಭದ್ರಪಡಿಸುತ್ತೇವೆ. ಜೊತೆಗೆ ನಾಗರಿಕ ಹಕ್ಕುಗಳನ್ನು ರಕ್ಷಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸುಳ್ಳು ಭರವಸೆಗಳನ್ನು ಕೇಳಬೇಕಿದ್ದರೆ ಮೋದಿ, ಕೇಜ್ರಿವಾಲ್ ಮಾತು ಕೇಳಿ: ರಾಹುಲ್ ಗಾಂಧಿ

  • ಮಣಿಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಟಿಕೆಟ್‌ ವಂಚಿತರ ಬೆಂಬಲಿಗರಿಂದ ಪ್ರತಿಭಟನೆ

    ಗುವಾಹಟಿ: ಫೆಬ್ರವರಿಯಲ್ಲಿ ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದಿಂದ ಟಿಕೆಟ್‌ ವಂಚಿತರಾದ ಜನಪ್ರತಿನಿಧಿಗಳ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟಿಕೆಟ್‌ ವಂಚಿತರ ಬೆಂಬಲಿಗರು ಬಿಜೆಪಿ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬಿರೇನ್‌ ಸಿಂಗ್‌ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಹಲವೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ. ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: UP ಎಲೆಕ್ಷನ್: ಕಾಂಗ್ರೆಸ್ 4ನೇ ಪಟ್ಟಿ ಪ್ರಕಟ 24 ಮಹಿಳೆಯರಿಗೆ ಅವಕಾಶ

    ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದ ಪಕ್ಷದ ಕೆಲವರು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಎಷ್ಟು ಮಂದಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.

    ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದ್ದರಿಂದ ಬಿಜೆಪಿ ಸೇರಿದ್ದ 10 ಕಾಂಗ್ರೆಸ್‌ನ ಮಾಜಿ ನಾಯಕರಿಗೆ ಟಿಕೆಟ್‌ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: 23 ಕಿಮೀ ಅನ್ನು ಕೇವಲ 15 ನಿಮಿಷಗಳಲ್ಲಿ ಕ್ರಮಿಸಿ ಜೀವ ಉಳಿಸಿದ ಆಂಬುಲೆನ್ಸ್

    2017ರ ಚುನಾವಣೆಯಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದು ಇತರೆ ಸ್ಥಳೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ಸಹಕಾರದೊಂದಿಗೆ ಸರ್ಕಾರ ರಚಿಸಿತ್ತು. ಇವರ ಪೈಕಿ 19 ಶಾಸಕರಿಗೆ ಟಿಕೆಟ್‌ ನೀಡಲಾಗಿದ್ದು, ಮೂವರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಬಿಜೆಪಿ ಮೂವರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.