Tag: ಮಣಿಪುರ ಸಂಘರ್ಷ

  • ಮಣಿಪುರದಲ್ಲಿ ಬಿರೇನ್‌ ಸರ್ಕಾರಕ್ಕೆ ಸಂಕಷ್ಟ – ಬಿಜೆಪಿಯ 37ರ ಪೈಕಿ 17 ಶಾಸಕರು ಸಭೆಗೆ ಗೈರು

    ಮಣಿಪುರದಲ್ಲಿ ಬಿರೇನ್‌ ಸರ್ಕಾರಕ್ಕೆ ಸಂಕಷ್ಟ – ಬಿಜೆಪಿಯ 37ರ ಪೈಕಿ 17 ಶಾಸಕರು ಸಭೆಗೆ ಗೈರು

    ಇಂಫಾಲ: ಸಂಘರ್ಷಪೀಡಿತ ಮಣಿಪುರದಲ್ಲಿ (Manipura) ಬಿರೇನ್ ಸಿಂಗ್ ನೇತೃತ್ವದ ಎನ್‌ಡಿಎ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಹಿಂಸಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ (Biren Singh) ಅವರ ವಿರುದ್ಧವೇ ಪಕ್ಷದೊಳಗೆ ಅಸಮಾಧಾನ ಬಹಿರಂಗವಾಗಿಯೇ ಸ್ಫೋಟಗೊಂಡಿದೆ.

    ಎನ್‌ಡಿಎಗೆ ನೀಡಿದ್ದ ಬೆಂಬಲವನ್ನು ಎನ್‌ಪಿಪಿ (NPP) ಹಿಂಪಡೆದ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಸಿಎಂ ಬಿರೇನ್‌ ಸಿಂಗ್‌ ಕರೆದಿದ್ದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ 27 ಮಂದಿ ಹಾಜರಾಗಿದ್ದರೆ 19 ಮಂದಿ ಗೈರಾಗಿದ್ದರು. ಈ ಪೈಕಿ ಬಿಜೆಪಿಯ 37 ಶಾಸಕರ ಪೈಕಿ 17 ಮಂದಿ ಗೈರಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    19ರಲ್ಲಿ 7 ಶಾಸಕರು ವೈದ್ಯಕೀಯ ಕಾರಣ ಹೇಳಿ ಗೈರು ಹಾಜರಾದರೆ ಉಳಿದ 12 ಜನ ಹೇಳದೇ ಕೇಳದೇ ಗೈರು ಹಾಜರಾಗಿದ್ದಾರೆ. ಈಗ ಬಂದಿರುವ ಮಾಹಿತಿ ಪ್ರಕಾರ 7 ಮಂದಿ ಶಾಸಕರು ಮಣಿಪುರವನ್ನೇ ತೊರೆದಿದ್ದಾರೆ. ಸಭೆಗೆ ಗೈರಾಗಿದ್ದಕ್ಕೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಮಣಿಪುರ | ಉದ್ರಿಕ್ತರಿಗೆ ಹೆದರಿ ಬಂಕರ್‌ ನಿರ್ಮಿಸಿಕೊಂಡ ಸಚಿವ!

    ಬಹಿರಂಗವಾಗಿಯೇ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಸರ್ಕಾರ ಉಳಿಯುತ್ತಾ? ಅಥವಾ ಮುಖ್ಯಮಂತ್ರಿ ಬದಲಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಬಿಜೆಪಿ ಹೈಕಮಾಂಡ್‌ ನಾಯಕರು ಇಲ್ಲಿಯವರೆಗೆ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ಚುನಾವಣೆಯಲ್ಲಿ ಬ್ಯುಸಿ ಇದ್ದ ಕಾರಣ ಮಣಿಪುರ ಸರ್ಕಾರದ ವಿಚಾರಕ್ಕೆ ತಲೆ ಹಾಕಿರಲಿಲ್ಲ. ಇಂದು ಚುನಾವಣೆ ಮುಗಿದ ಬಳಿಕ ಬಿಜೆಪಿ ಹೈಕಮಾಂಡ್‌ ಮಣಿಪುರ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

    ಸಿಎಂ ಬಿರೇನ್‌ ಸಿಂಗ್‌ ಕಾರ್ಯವೈಖರಿಗೆ ಕುಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ 10 ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿ, ಸಭೆಯಿಂದ ದೂರ ಉಳಿದಿದ್ದಾರೆ ಎಂದು ವರದಿಯಾಗಿದೆ.

    ಒಟ್ಟು 60 ಮಂದಿ ಶಾಸಕರ ಬಲವನ್ನು ಹೊಂದಿರುವ ಮಣಿಪುರ ವಿಧಾನಸಭೆಯಲ್ಲಿ ಎನ್‌ಡಿಎ ಶಾಸಕರ ಸಂಖ್ಯೆ 46 ಇದೆ. ಈ ಪೈಕಿ ಬಿಜೆಪಿ 37, ನಾಗಾ ಪೀಪಲ್ಸ್‌ ಫ್ರಂಟ್‌ 5, ಮೂವರು ಪಕ್ಷೇತರರು, ಜೆಡಿಯು 1 ಸ್ಥಾನವನ್ನು ಹೊಂದಿದೆ.

    14 ಸ್ಥಾನಗಳನ್ನು ವಿಪಕ್ಷಗಳು ಹೊಂದಿವೆ. ಎನ್‌ಪಿಪಿ 7, ಕಾಂಗ್ರೆಸ್‌ 5. ಕೆಪಿಎ 2 ಸ್ಥಾನವನ್ನು ಗಳಿಸಿದೆ. ಬಹುಮತಕ್ಕೆ 31 ಶಾಸಕರ ಸಂಖ್ಯೆ ಬೇಕಾಗಿರುವ ಕಾರಣ ಸದ್ಯಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ.

     

  • ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

    ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

    ತಿರುವನಂತಪುರಂ: ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂತಹ ಸಂಘರ್ಷದ ಅನುಭವವನ್ನು ನಾನು ಎಂದಿಗೂ ಅನುಭವಿಸಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅಭಿಪ್ರಾಯಪಟ್ಟಿದ್ದಾರೆ.

    ತಮ್ಮ ತವರು ಕ್ಷೇತ್ರವಾದ ವಯನಾಡಿಗೆ (Wayanad) ಶನಿವಾರ ರಾಹುಲ್‌ ಗಾಂಧಿ ಭೇಟಿ ನೀಡಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಣಿಪುರ ಹಿಂಸಾಚಾರ ಕುರಿತು ಮಾತನಾಡಿ, ನಾನು ಸ್ವಲ್ಪ ದಿನಗಳ ಹಿಂದೆ ಮಣಿಪುರಕ್ಕೆ (Manipur Violence) ಹೋಗಿದ್ದೆ. ನಾನು 19 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮಣಿಪುರದಲ್ಲಿ ನಾನು ಅನುಭವಿಸಿದ ಅನುಭವವನ್ನು ರಾಜಕೀಯ ಜೀವನದಲ್ಲಿ ಎಂದಿಗೂ ಅನುಭವಿಸಿಲ್ಲ. ಬಿಜೆಪಿ ಕುಟುಂಬಗಳನ್ನು ನಾಶ ಮಾಡುವ ಗುರಿ ಹೊಂದಿದೆ. ಭಾರತವನ್ನು ವಿಭಜಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    ನೀವು ಸಾವಿರಾರು ಕುಟುಂಬಗಳನ್ನು ನಾಶಪಡಿಸಿದ್ದೀರಿ. ನೀವು ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅವಕಾಶ ನೀಡಿದ್ದೀರಿ. ನೀವು ಜನರ ಹತ್ಯೆಗೆ ಅವಕಾಶ ಮಾಡಿಕೊಟ್ಟಿದ್ದೀರಿ. ದೇಶದ ಪ್ರಧಾನಿಯಾಗಿ ನೀವು ನಗುತ್ತಿದ್ದೀರಾ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ವೈಖರಿ ವಿರುದ್ಧ ಮತ್ತೆ ರಾಹುಲ್‌ ಗಾಂಧಿ ಗುಡುಗಿದ್ದಾರೆ.

    ಪ್ರಧಾನಿಯವರ ಎರಡು ಗಂಟೆ 13 ನಿಮಿಷಗಳ ಭಾಷಣದಲ್ಲಿ ಮಣಿಪುರದ ಸಮಸ್ಯೆಗೆ ಸಿಕ್ಕ ಸಮಯ ಕೇವಲ 2 ನಿಮಿಷ. ನೀವು ಭಾರತ್ ಮಾತೆಯ ಹತ್ಯೆಯ ಬಗ್ಗೆ ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದ್ದೀರಿ. ಹೀಗೆ ಮಾಡಲು ನಿಮಗೆ ಎಷ್ಟು ಧೈರ್ಯ? ನೀವು ಭಾರತದ ಕಲ್ಪನೆಯನ್ನು ಹೇಗೆ ತಳ್ಳಿಹಾಕುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಪ್ರಧಾನಿ ನಗುತ್ತ ಜೋಕ್ ಮಾಡಿಕೊಂಡಿದ್ದಾರೆ – ರಾಹುಲ್ ಕಿಡಿ

    ಕಲ್ಪೆಟ್ಟಾದಲ್ಲಿ ವಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ರಾಹುಲ್‌ ಗಾಂಧಿ ಇಂದು ಮಾತನಾಡಿದರು. ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ವಯನಾಡಿಗೆ ರಾಹುಲ್‌ ಗಾಂಧಿ ಮೊದಲ ಭೇಟಿ ನೀಡಿದ್ದರು. ಅವರನ್ನು ಸ್ವಾಗತಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

    ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

    ನವದೆಹಲಿ: ರಾಜ್ಯಸಭೆಗೆ ಪ್ರಧಾನಮಂತ್ರಿ ಬಂದು ಉತ್ತರ ಕೊಡಲಿ, ಮಣಿಪುರದ ಹಿಂಸಾಚಾರದ (Manipur Violence) ಬಗ್ಗೆ ಮಾತನಾಡಲಿ, ಪ್ರಧಾನಮಂತ್ರಿ ರಾಜ್ಯಸಭೆಗೆ ಬಂದರೆ ಏನಾಗಲಿದೆ? ಮೋದಿ ಏನು ಪರಮಾತ್ಮನೇ? ಅವರೇನು ದೇವರಲ್ಲ. ರಾಜ್ಯಸಭೆಗೆ ಬಂದು ಉತ್ತರ ಕೊಡಲಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಿಡಿಕಾರಿದ್ದಾರೆ.

    ರಾಜ್ಯಸಭೆಯಲ್ಲಿ ಮಣಿಪುರ ಜನಾಂಗೀಯ ಸಂಘರ್ಷ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಂದು ಈ ಬಗ್ಗೆ ಮಾತನಾಡಬೇಕು ಎಂದರು. ಆಡಳಿತ ಪಕ್ಷದ ಸದಸ್ಯರು ನಿಯಮ 167 ರ ಅಡಿಯಲ್ಲಿ ಚರ್ಚೆ ಮಾಡಲು ಒಪ್ಪಿಕೊಂಡಿದ್ದರು. ಸನದಕ್ಕೆ ಬರುತ್ತಿದ್ದಂತೆ ತಮ್ಮ ನಿಲುವು ಬದಲಾಯಿಸಿದ್ದಾರೆ.

    ಮಣಿಪುರ ಬಗ್ಗೆ ಚರ್ಚೆ ಮಾಡದಿರುವುದು ಯಾಕೆ? ಈ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿ. ಪ್ರಧಾನಮಂತ್ರಿಯೂ ಬಂದು ಮಾತನಾಡಲಿ ಎಂದು ಹೇಳಿದರು. ಇದಕ್ಕೆ ಆಡಳಿತ ಪಕ್ಷದ ನಾಯಕರು ಗದ್ದಲ ಮಾಡಿದರು. ಇದರಿಂದ ಆಕ್ರೋಶಗೊಂಡ ಖರ್ಗೆ, ಪ್ರಧಾನಿ ಏನು ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ ಎಂದು ಕಟು ಶಬ್ದಗಳಲ್ಲಿ ಟೀಕಿಸಿದರು. ಖರ್ಗೆ ಮಾತಿಗೆ ಸದನದಲ್ಲಿ ಹೆಚ್ಚಿದ ಗದ್ದಲ, ಕಲಾಪ ಮುಂದೂಡಿಕೆ ಮಾಡಲಾಯಿತು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

    ತಮ್ಮ ಸರ್ಕಾರ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಅವರು ಸುದೀರ್ಘ ಭಾಷಣ ಮಾಡಲಿದ್ದು ಅದಕ್ಕೂ ಮುನ್ನ ರಾಜ್ಯಸಭೆಗೂ ಬಂದು ಮಾತನಾಡಲು ಖರ್ಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್‌ ಕಿಡಿ

    ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್‌ ಕಿಡಿ

    ನವದೆಹಲಿ: ಸಂಸತ್ ಸದಸ್ಯತ್ವ ರದ್ದಾಗಿ ಮರುಸ್ಥಾಪನೆಯಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ (Lok Sabha) ಭಾಷಣ ಮಾಡಿದ ರಾಹುಲ್ ಗಾಂಧಿ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಬಿಜೆಪಿ (BJP) ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಗಂಭೀರ ಆರೋಪ ಮಾಡಿದ್ದಾರೆ.

    ಸಂಸತ್‌ ಸದಸ್ಯತ್ವ  ಮರಳಿ ಪಡೆದ ಬಳಿಕ 2ನೇ ದಿನ ಲೋಕಸಭೆಗೆ ಆಗಮಿಸಿದ ಸಂಸದ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಈ ವೇಳೆ ಮಣಿಪುರ ವಿಚಾರವನ್ನ ತೆಗೆದುಕೊಂಡು ಪ್ರಧಾನಿ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಬಿಜೆಪಿ-ಕಾಂಗ್ರೆಸ್‌ ನಡುವೆ ಗದ್ದಲ ಏರ್ಪಟಿತು.

    ಮಣಿಪುರ ಗಲಭೆಯನ್ನುದ್ದೇಶಿಸಿ (Maipur Violence) ಮಾತನಾಡಿದ ರಾಹುಲ್‌ ಗಾಂಧಿ, ನಾನು ಮಣಿಪುರಕ್ಕೆ ಭೇಟಿ ನೀಡಿದ್ದೇನೆ, ಅಲ್ಲಿನ ಸ್ಥಿತಿಗತಿಯನ್ನ ಗಮನಿಸಿದ್ದೇನೆ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಏಕೆಂದರೆ ಮೋದಿಗೆ ಮಣಿಪುರ ಭಾರತದ ಭಾಗ ಅಂತಾ ಮೋದಿಗೆ ಅನ್ನಿಸಿಯೇ ಇಲ್ಲ. ಮಣಿಪುರವನ್ನ ಎರಡು ಭಾಗವಾಗಿ ವಿಂಗಡಿಸಿದ್ದಾರೆ. ಭಾರತವನ್ನ ಮಣಿಪುರದಲ್ಲಿ ಹತ್ಯೆ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

    ಮುಂದುವರಿದು.. ನೀವು ಭಾರತ ಮಾತೆಯನ್ನೂ ಕೊಂದಿದ್ದೀರಿ. ನನ್ನ ಒಬ್ಬ ತಾಯಿ ಇಲ್ಲಿ ಕುಳಿತಿದ್ದರೆ, ಇನ್ನೊಬ್ಬ ತಾಯಿಯನ್ನ ಮಣಿಪುರದಲ್ಲಿ ಕೊಂದಿದ್ದೀರಿ. ಮನಸ್ಸು ಮಾಡಿದ್ರೆ ಭಾರತೀಯ ಸೇನೆ ಒಂದೇ ದಿನದಲ್ಲಿ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಬಹುದು. ಆದ್ರೆ ಮೋದಿ ಸರ್ಕಾರ ಸೇನೆಯನ್ನ ಬಳಸುತ್ತಿಲ್ಲ. ನಮ್ಮ ಸೈನಿಕರು ಸಾಯಬೇಕು ಅಂತಾ ಬಯಸುತ್ತಿದೆ. ಭಾರತೀಯರ ಮನಸ್ಸನ್ನು ಅರ್ಥಮಾಡಿಕೊಳ್ಳದ ಮೋದಿ ಇನ್ನಾರ ಧ್ವನಿಗೆ ಕಿವಿಗೊಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಿಲಯನ್ಸ್‌ ಹಿಂದಿಕ್ಕಿ ಲಾಭಾಂಶದಲ್ಲಿ ದೇಶದಲ್ಲಿ ನಂ.1 ಕಂಪನಿಯಾಗಿ ಹೊರಹೊಮ್ಮಿದ ಎಸ್‌ಬಿಐ

    ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯಿಂದ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹರಿಯಾಣದಲ್ಲೂ ಅದೇ ಕೆಲಸ ಮಾಡುತ್ತಿದ್ದೀರಿ. ಅಲ್ಲಿಯೂ ಕೋಮು ಘರ್ಷಣೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದರು. ಇದೇ ವೇಳೆ ರಾಮಾಯಣ ಮಹಾಕಾವ್ಯ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ, ಲಂಕೆಯನ್ನ ಹನುಮಂತ ಸುಟ್ಟುಹಾಕಲಿಲ್ಲ. ರಾವಣದ ದುರಹಂಕಾರದಿಂದ ಸುಟ್ಟಹೋಯ್ತು. ರಾವಣ ತನ್ನ ದುರಹಂಕಾರದಿಂದಲೇ ರಾಮನಿಂದ ಹತ್ಯೆಯಾದ ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

    ಈ ವೇಳೆ ರಾಹುಲ್‌ ಗಾಂಧಿ ಅವರ ಭಾಷಣಕ್ಕೆ ತಕರಾರು ತೆಗೆದ ಬಿಜೆಪಿ ಸಂಸದ ಕಿರಣ್‌ ರಿಜಿಜು, ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ? ಎಂದು ಪ್ರಶ್ನಿಸಿದರು. ಈ ನಡುವೆ ಸ್ಪೀಕರ್‌ ಓಂ ಬಿರ್ಲಾ ಅವರು ಸಜ್ಜನಿಕೆ ಕಾಯ್ದುಕೊಳ್ಳುವಂತೆ ಸೂಚಿಸಿದ್ದರಿಂದ ಗದ್ದಲ ಉಂಟಾಯಿತು.

    ಕ್ಷಮೆ ಕೋರಿದ ರಾಹುಲ್‌ ಗಾಂಧಿ:
    ಸಂಸತ್‌ ಮರು ಪ್ರವೇಶಿಸಿದ ಮೊದಲ ಭಾಷಣದಲ್ಲಿ ರಾಹುಲ್‌ ಕ್ಷಮೆ ಕೋರಿದರು. ನಾನು ಕೊನೆಯಬಾರಿ ಮಾತನಾಡುವಾಗ ಅದಾನಿ ಬಗ್ಗೆ ಮಾತನಾಡಿದ್ದರಿಂದ ನಿಮ್ಮ ಹಿರಿಯ ನಾಯಕನಿಗೆ ನೋವಾಗಿದೆ. ಆ ನೋವು ನಿಮ್ಮ ಮೇಲೂ ಪರಿಣಾಮ ಬೀರಿರಬಹುದು. ನೋವುಟುಂಮಾಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ. ಆದಾಗ್ಯೂ ನಾನು ಸತ್ಯವನ್ನೇ ಹೇಳಿದ್ದೇನೆ. ಆದ್ರೆ ಬಿಜೆಪಿಯಲ್ಲಿರುವ ನನ್ನ ಸ್ನೇಹಿತರಿಗೆ ಹೇಳುತ್ತೇನೆ. ಇಂದು ಭಯ ಪಡೋದಕ್ಕೆ ಯಾವುದೇ ಕಾರಣಗಳಿಲ್ಲ. ಏಕೆಂದರೆ ನನ್ನ ಮುಖ್ಯ ಭಾಷಣ ಅದಾನಿ ಬಗ್ಗೆ ಇರುವುದಿಲ್ಲ ಎಂದು ಕುಟುಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ (Manipur Violence) ಕಳೆದ 3 ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರ ಕಿಡಿಗೇಡಿಗಳು ಇಂಫಾಲದಲ್ಲಿ (Imphal) ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.

    ಗುರುವಾರ ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಬಿಷ್ಣುಪುರ್ ಜಿಲ್ಲೆಯ ಮಣಿಪುರ ಸಶಸ್ತ್ರ ಪೊಲೀಸ್ ಎರಡನೇ ಬೆಟಾಲಿಯನ್‌ನ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ. ಕೌಟ್ರುಕ್, ಹರಾಥೆಲ್ ಮತ್ತು ಸೆಂಜಮ್ ಚಿರಾಂಗ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಕಳೆದ 24 ಗಂಟೆಗಳಲ್ಲಿ ರಾಜ್ಯದ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ವಿವಿಧ ಸ್ಥಳಗಳಲ್ಲಿ ಜನರ ಸಮೂಹ ಅಶಿಸ್ತಿನಿಂದ ವರ್ತಿಸಿ ಗುಂಡು ಹಾರಿಸುವ ಹಾಗೂ ಗುಂಪುಗೂಡುವುದು ಸಂಭವಿಸುತ್ತಲೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಣಿಪುರದ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 1,047 ಜನರನ್ನು ಬಂಧಿಸಲಾಗಿದೆ. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಜನಾಂಗೀಯ ಘರ್ಷಣೆ ಕಳೆದ 3 ತಿಂಗಳಿನಿಂದ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

    ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

    ನವದೆಹಲಿ: ಸಂಘರ್ಷ ಪೀಡಿತ ಮಣಿಪುರ (Manipur) ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಮಧ್ಯಸ್ಥಿಕೆ ವಹಿಸುವಂತೆ ವಿಪಕ್ಷಗಳ ಬಣ INDIA ಒಕ್ಕೂಟದ ನಾಯಕರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಎರಡು ದಿನಗಳ ಕಾಲ ಮಣಿಪುರಕ್ಕೆ ಭೇಟಿ ನೀಡಿದ ವಿರೋಧ ಪಕ್ಷಗಳ ಸಂಸದರ 21 ಸದಸ್ಯರ ನಿಯೋಗ ಸೇರಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ ಒಟ್ಟು 31 ಸದಸ್ಯರು ಇಂದು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    ಮಣಿಪುರದ ಪರಿಸ್ಥಿತಿಯು ಕಳೆದ ಕೆಲವು ವಾರಗಳಲ್ಲಿ ನಿರ್ಣಾಯಕ ಹಂತವನ್ನು ತಲುಪಿದೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಆಘಾತಕಾರಿ ವೈರಲ್ ವೀಡಿಯೋ ರಾಷ್ಟ್ರವನ್ನು ಆಘಾತಕ್ಕೆ ತಳ್ಳಿದೆ. ರಾಜ್ಯ ಆಡಳಿತ ಮತ್ತು ಪೊಲೀಸರು ಈ ವಿಷಯವನ್ನು ತ್ವರಿತವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿ ಬಂಧಿಸಲು ಎರಡು ತಿಂಗಳ ಕಾಲ ವಿಳಂಬ ಮಾಡಿರುವುದು ಸಮಸ್ಯೆಯ ತೀವ್ರತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಯಾವುದೇ ವಿಳಂಬವಿಲ್ಲದೆ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪಿಸಲು ನೀವು ತುರ್ತಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ವಿನಂತಿಸುತ್ತೇವೆ. ಕಳೆದ 92 ದಿನಗಳ ವಿನಾಶಕ್ಕೆ ಉತ್ತರದಾಯಿತ್ವ ಇರಬೇಕು. ಸಂತ್ರಸ್ತ ಸಮುದಾಯಗಳಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಬದ್ಧರಾಗಬೇಕು. ಮಣಿಪುರದ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ತುರ್ತಾಗಿ ಪ್ರಸ್ತಾಪಿಸಲು ಪ್ರಧಾನ ಮಂತ್ರಿಯ ಮೇಲೆ ಒತ್ತಡ ಹೇರಲು ನಾವು ನಿಮ್ಮನ್ನು ಕೋರುತ್ತೇವೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ?

    ವಿಪಕ್ಷಗಳ ಒಕ್ಕೂಟದ ಸಂಸದರ ನಿಯೋಗವು ಮಣಿಪುರಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿದ್ದರು. ಬಿಷ್ಣುಪುರ ಜಿಲ್ಲೆಯ ಇಂಫಾಲ್‌, ಮೊಯಿರಾಂಗ್‌, ಚುರಾಚಂದ್‌ಪುರ ಸೇರಿ ಹಲವಾರು ಶಿಬಿರಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಜನಾಂಗೀಯ ಘರ್ಷಣೆಯಿಂದ ಸ್ಥಳಾಂತರಗೊಂಡ ಸ್ಥಳೀಯರ ಜೊತೆ ಸಂವಾದ ಕೂಡ ನಡೆಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಇಂಫಾಲ್: ಮೀಸಲಾತಿ ವಿಚಾರವಾಗಿ ಮಣಿಪುರದಲ್ಲಿ (Manipur violence) ಮೈತೇಯ್‌ (Meitei) ಮತ್ತು ಕುಕಿ ಸಮುದಾಯಗಳ (Kuki woman) ನಡುವೆ ಉಂಟಾದ ಸಂಘರ್ಷ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಇದರ ಪರಿಣಾಮವಾಗಿ ಈ ಎರಡೂ ಸಮುದಾಯಕ್ಕೆ ಸೇರಿದ ದಂಪತಿ ಪರಸ್ಪರ ಬೇರಾಗಿದ್ದು, ಕಣ್ಣೀರಿಡುತ್ತಿದ್ದಾರೆ.

    ಕುಕಿ ಸಮುದಾಯದ ಮಹಿಳೆಯೊಬ್ಬರಿಗೆ ಮೈತೇಯ್‌ ಸಮುದಾಯದ ವ್ಯಕ್ತಿಯನ್ನು ಪ್ರೇಮಿಸಿ ಮದುವೆಯಾಗಿದ್ದರು. ಮಣಿಪುರ ಸಂಘರ್ಷಕ್ಕೂ ಹಿಂದಿನ ದಿನಗಳವರೆಗೂ ಇಬ್ಬರು ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಆದರೆ ಸಂಘರ್ಷ ಉಂಟಾಗಿದ್ದು, ಇವರಿಬ್ಬರನ್ನು ಬೇರಾಗುವಂತೆ ಮಾಡಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

    ಹಿಂಸಾಚಾರ ಪೀಡಿತ ಸ್ಥಳಗಳಿಂದ ನೂರಾರು ಕುಟುಂಬಗಳು ಬೇರೆ ಕಡೆ ಹೋಗಿ ನೆಲೆಸಿವೆ. ಅದೇ ರೀತಿ ಈ ಇಬ್ಬರು ದಂಪತಿ ಪರಿಹಾರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ದಂಪತಿಯು ಇಂಫಾಲ್‌ನ ಪರಿಹಾರ ಶಿಬಿರದಲ್ಲಿ ಒಟ್ಟಿಗೆ ಇದ್ದರು. ಆದರೆ ಜನರು ಆಕೆ ಕುಕಿ ಸಮುದಾಯದಿಂದ ಬಂದವಳು ಎಂದು ತಿಳಿದಾಗ, ಪರಿಹಾರ ಶಿಬಿರವನ್ನು ತೊರೆಯುವಂತೆ ಒತ್ತಾಯಿಸಲಾಯಿತು.

    ಜನರ ಒತ್ತಡದ ಕಾರಣದಿಂದಾಗಿ ದಂಪತಿ ಪರಸ್ಪರ ಬೇರಾಗಿದ್ದಾರೆ. ಈ ಬಗ್ಗೆ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ಹಿಂಸಾಚಾರ ಇನ್ನೂ ಕಡಿಮೆಯಾಗಿಲ್ಲ. ಮಣಿಪುರ ಹಿಂಸಾಚಾರ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸಂಸತ್‌ನಲ್ಲೂ ಗದ್ದಲಕ್ಕೆ ಕಾರಣವಾಗಿದೆ. ಈ ಎಲ್ಲದರ ಮಧ್ಯೆ ಮತ್ತೊಂದು ಪ್ರಕರಣ ಸುದ್ದಿಯಾಗಿದೆ. ಇದನ್ನೂ ಓದಿ: ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    – ನಿವೃತ್ತ ನ್ಯಾಯಾಧೀಶರ ನೇತೃತ್ವದದಲ್ಲಿ ತನಿಖೆ – ಕೇಂದ್ರ ಗೃಹ ಸಚಿವ ಭರವಸೆ

    ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur Violence) ನಡೆದ ಹಿಂಸಾಚಾರದ ಘಟನೆಗಳ ತನಿಖೆಯನ್ನು ಸಿಬಿಐ (CBI) ವಿಶೇಷ ತಂಡ ನಡೆಸಲಿದ್ದು, ಇದರ ಮೇಲ್ವಿಚಾರಣೆಗೆ ಕೇಂದ್ರ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದರು.

    ಇಂಫಾಲ್ ಪ್ರವಾಸದಲ್ಲಿರುವ ಅಮಿತ್ ಶಾ ಸರ್ವಪಕ್ಷಗಳ ಸಭೆ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆಗಳನ್ನು ನಡೆಸಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂಸಾತ್ಮಕ ಘಟನೆಗಳ ತನಿಖೆಗಾಗಿ ಮಣಿಪುರದಲ್ಲಿ ಹಲವಾರು ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿವೆ. 6 ಹಿಂಸಾಚಾರದ ಘಟನೆಗಳಲ್ಲಿ ಉನ್ನತ ಮಟ್ಟದ ಸಿಬಿಐ ತನಿಖೆ ನಡೆಯಲಿದೆ. ಈ ತನಿಖೆ ನ್ಯಾಯಯುತವಾಗಿರಲಿದೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದು ಶಾ ಹೇಳಿದರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಭೂಕುಸಿತ – ಸಂಕಷ್ಟಕ್ಕೆ ಸಿಲುಕಿದ 300 ಮಂದಿ ಪ್ರಯಾಣಿಕರು

    ಸಂಘರ್ಷದಿಂದ ಸಂತ್ರಸ್ತರಾದವರಿಗೆ ಪರಿಹಾರ ಮತ್ತು ಪುನರ್ವಸತಿಯನ್ನು ಸಿದ್ಧಪಡಿಸಲಾಗಿದೆ. ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಕೇಂದ್ರ ಮತ್ತು ರಾಜ್ಯ ಎರಡೂ ತಲಾ 5 ಲಕ್ಷ ರೂ. ನೀಡುತ್ತೇವೆ. ಮಣಿಪುರದ ರಾಜ್ಯಪಾಲರು ನಾಗರಿಕ ಸಮಾಜದ ಸದಸ್ಯರನ್ನೊಳಗೊಂಡ ಶಾಂತಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಅವರು ತಿಳಿಸಿದರು.

    ರಾಜ್ಯದಲ್ಲಿ ಹಿಂಸಾಚಾರದ ಸಂತ್ರಸ್ತರಿಗೆ ನೆರವು ನೀಡಲು ಕೇಂದ್ರ ಸರ್ಕಾರವು 20 ವೈದ್ಯರು ಸೇರಿದಂತೆ 8 ವೈದ್ಯಕೀಯ ತಜ್ಞರ ತಂಡಗಳನ್ನು ಮಣಿಪುರಕ್ಕೆ ಒದಗಿಸಿದೆ. ಈಗಾಗಲೇ 5 ತಂಡಗಳು ಇಲ್ಲಿಗೆ ತಲುಪಿವೆ ಮತ್ತು 3 ಇತರ ತಂಡಗಳು ದಾರಿಯಲ್ಲಿವೆ ಎಂದು ಅವರು ವಿವರಿಸಿದರು. ಇದೇ ವೇಳೆ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿರುವ ಜನರಿಗೆ ಧೈರ್ಯ ತುಂಬಿದ ಶಾ, ಖೊಂಗ್‌ಸಾಂಗ್ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ಪ್ಲಾಟ್‌ಫಾರ್ಮ್ ನಿರ್ಮಿಸಲು ಯುದ್ಧೋಪಾದಿಯಲ್ಲಿ ಕೆಲಸ ನಡೆಯುತ್ತಿದೆ. ಒಂದು ವಾರದ ಅವಧಿಯಲ್ಲಿ ಅದು ಕಾರ್ಯರೂಪಕ್ಕೆ ಬರಬಹುದು ಎಂದರು. ಇದನ್ನೂ ಓದಿ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ

    ಇದೇ ವೇಳೆ ದಂಗೆಕೋರರಿಗೆ ಕೇಂದ್ರ ಗೃಹ ಸಚಿವರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೂಡಲೇ ಅನಧಿಕೃತ ಶಸ್ತ್ರಾಸ್ತ್ರಗಳನ್ನು ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡಬೇಕು ಎಂದು ಜನರಿಗೆ ಮನವಿ ಮಾಡಿದ್ದಾರೆ.

    ಹಿಂಸಾಚಾರ ಪೀಡಿತ ಮಣಿಪುರಕ್ಕೆ ಗೃಹ ಸಚಿವ ಅಮಿತ್ ಶಾ ನಾಲ್ಕು ದಿನಗಳಿಂದ ಪ್ರವಾಸದಲ್ಲಿದ್ದು, ಸಮುದಾಯಗಳ ನಡುವೆ ಶಾಂತಿ ಮಾತುಕತೆ, ಭದ್ರತಾ ಪಡೆಗಳು ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಭೆಗಳ ಅಧ್ಯಕ್ಷತೆ ವಹಿಸಿದ್ದಾರೆ. ಮೈಟಿ ಮತ್ತು ಕುಕಿ ಸಮುದಾಯಗಳ CSO ಗಳನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: LPG Cylinder Price:‌ ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ