Tag: ಮಣಿರತ್ನಂ

  • ಕಮಲ್- ಮಣಿರತ್ನಂ ಕಾಂಬಿನೇಷನ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್

    ಕಮಲ್- ಮಣಿರತ್ನಂ ಕಾಂಬಿನೇಷನ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್

    ಮಲ್ ಹಾಸನ್ (Kamal Haasan) ಮತ್ತು ಮಣಿರತ್ನಂ (Mani Ratnam) ಅವರು 37 ವರ್ಷಗಳ ನಂತರ ‘ಥಗ್ ಲೈಫ್’ (Thug Life) ಚಿತ್ರದೊಂದಿಗೆ ಮತ್ತೆ ಒಂದಾಗಿದ್ದಾರೆ. ಈ ಚಿತ್ರವು 2025ರ ಜೂನ್ 5ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆ ದಿನಾಂಕವನ್ನು ಘೋಷಿಸಲಾಯಿತು.

    ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಮತ್ತು ಮದ್ರಾಸ್ ಟಾಕೀಸ್ ಸಹ-ನಿರ್ಮಾಣದಲ್ಲಿ ಬರುತ್ತಿರುವ ಈ ಚಿತ್ರವನ್ನು ರೆಡ್ ಜೈಯಂಟ್ ಮೂವೀಸ್ ವಿತರಿಸಲಿದೆ‌. ಚಿತ್ರದ ತಾರಾಗಣ ಕಮಲ್ ಹಾಸನ್, ಸಿಲಂಬರಸನ್ ಟಿಆರ್, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್ ಮತ್ತಿತರ ನಟರನ್ನು ಒಳಗೊಂಡಿದೆ. ಈ ಬಹು ನಿರೀಕ್ಷಿತ ಚಿತ್ರಕ್ಕೆ ದಿಗ್ಗಜ ಎ.ಆರ್. ರೆಹಮಾನ್ ಅವರ ಸಂಗೀತವಿದೆ.

    ಈ ಚಿತ್ರದ ಕತೆ, ಚಿತ್ರಕತೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನದಲ್ಲಿ ರವಿ ಆರ್ ಚಂದ್ರನ್ ಅವರ ಸಿನಿಮಾಟೋಗ್ರಫಿ, ಅನ್ಬರಿವ್ ಅವರ ಆ್ಯಕ್ಷನ್ ಕೋರಿಯಾಗ್ರಫಿ ಈ ಚಿತ್ರಕ್ಕಿದೆ.

  • ಭರ್ತಿ 150 ಕೋಟಿಗೆ ಮಾರಾಟ ಆಯ್ತು ಕಮಲ್ ನಟನೆಯ `ಥಗ್ ಲೈಫ್’

    ಭರ್ತಿ 150 ಕೋಟಿಗೆ ಮಾರಾಟ ಆಯ್ತು ಕಮಲ್ ನಟನೆಯ `ಥಗ್ ಲೈಫ್’

    ಫ್ಟರ್ ಎ ಲಾಂಗ್‌ಟೈಂ ಮಣಿರತ್ನಂ (Mani Ratnam) ಹಾಗೂ ಕಮಲ್ ಹಾಸನ್ (Kamal Haasan) ಕಾಂಬಿನೇಷನ್‌ನಲ್ಲಿ `ಥಗ್ ಲೈಫ್ (Thug Life) ‘ ಸಿನಿಮಾ ಮೂಡಿ ಬರ್ತಿದೆ. ಸಿನಿಮಾ ರಿಲೀಸ್‌ಗೂ ಮುನ್ನವೇ ಭಾರಿ ಮೊತ್ತಕ್ಕೆ ಓಟಿಟಿ ರೈಟ್ಸ್ ಸೇಲ್ ಆಗಿರೋದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಬರೋಬ್ಬರಿ 149.7 ಕೋಟಿಗೆ ಸಿನಿಮಾದ ಓಟಿಟಿ ಹಕ್ಕನ್ನ ನೆಟ್‌ಫ್ಲಿಕ್ಸ್ ಸಂಸ್ಥೆ ತನ್ನ ತನ್ನದಾಗಿಸಿಕೊಂಡಿದೆ.

    ಕಮಲ್ ಹಾಸನ್, ತ್ರಿಶಾ ಕೃಷ್ಣನ್, ಸಿಲಂಬರಸನ್, ಅಶೋಕ್ ಸೆಲ್ವನ್, ನಾಸರ್ ಸೇರಿದಂತೆ ಅತೀದೊಡ್ಡ ತಾರಾಗಣ `ಥಗ್ ಲೈಫ್’ ಸಿನಿಮಾದಲ್ಲಿದೆ. ಈಗಾಗಲೇ ಚಿತ್ರತಂಡ ಬಿಟ್ಟಿರುವ ಮೇಕಿಂಗ್‌ನಿಂದಲೇ ಇಡೀ ದೇಶದ ಗಮನಸೆಳೆದಿರುವ ಈ ಸಿನಿಮಾ ರಿಲೀಸ್‌ಗೂ ಮುನ್ನವೇ ಕ್ರೇಜ್ ಕ್ರಿಯೇಟ್ ಮಾಡಿದೆ. ಕಮಲ್ ಹಾಸನ್ ಫ್ಯಾನ್ಸ್ ಈ ಸುದ್ದಿ ಕೇಳಿ ರಣಕೇಕೆ ಹಾಕಿದ್ದಾರೆ.

    `ಪೊನ್ನಿಯನ್ ಸೆಲ್ವನ್’ ಪಾರ್ಟ್-2 ಸಿನಿಮಾದ ನಂತರ ಮಣಿರತ್ನಂ ನಿರ್ದೇಶನಕ್ಕೆ ಕೈಹಾಕಿದ ಸಿನಿಮಾ `ಥಗ್ ಲೈಫ್’. ಹೀಗಾಗಿನೇ ಸಿನಿಮಾ ರಿಲೀಸ್‌ಗೂ ಮುನ್ನವೇ ಭಾರಿ ಸೌಂಡ್ ಮಾಡ್ತಿದೆ. ಹತ್ತತ್ತಿರ 150 ಕೋಟಿಗೆ ಈ ಸಿನಿಮಾ ಓಟಿಟಿ ಹಕ್ಕು ಸೇಲ್ ಮಾಡಿ ಕಮಾಲ್ ಮಾಡ್ತಿದೆ. ಹಾಗಾಗಿ ಕಮಲ್ ಹಾಸನ್ ಹಾಗೂ ಮಣಿರತ್ನಂ ಕಾಂಬಿನೇಷನ್‌ಗೆ ಇರೋ ತಾಕತ್ತು ಇದೇ ಅಂತಾ ಅವರ ಅಭಿಮಾನಿ ಬಳಗ ಕೂಗಿ ಹೇಳುತ್ತಿದೆ.

    ಪ್ಯಾನ್ ಇಂಡಿಯಾ ಕಾನ್ಸೆಪ್ಟ್ನಲ್ಲಿ ತಯಾರಾಗಿರುವ `ಥಗ್ ಲೈಫ್’ ಸಿನಿಮಾ ಭಾರತದಾದ್ಯಂತ ಸುತ್ತಿ ಶೂಟಿಂಗ್ ಮಾಡಿದೆ. ಇನ್ನು ಥಿಯೇಟರ್‌ಗೆ ಬರುವ ಮುನ್ನವೇ ಭರ್ಜರಿ ಮೊತ್ತಕ್ಕೆ ಓಟಿಟಿ ಹಕ್ಕು ಮಾರಾಟವಾಗಿರೋದು ಇಡೀ ಚಿತ್ರತಂಡಕ್ಕೆ ಎಲ್ಲಿಲ್ಲದ ಸಂಭ್ರಮ. ರಿಲೀಸ್ ಆಗಿ ಬಾಕ್ಸಾಫೀಸ್‌ನಲ್ಲಿ ಹೇಗೆಲ್ಲ ಸದ್ದು ಮಾಡುತ್ತೆ ಕಾದು ನೋಡ್ಬೇಕು.

  • ಕಮಲ್-ಮಣಿರತ್ನಂ ಟೀಮ್ ಸೇರಿಕೊಂಡ ಸಿಲಂಬರಸನ್

    ಕಮಲ್-ಮಣಿರತ್ನಂ ಟೀಮ್ ಸೇರಿಕೊಂಡ ಸಿಲಂಬರಸನ್

    ಮೂರು ದಶಕಗಳ ನಂತರ ಲೆಜೆಂಡರಿ ನಟ ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಮಣಿರತ್ನಂ (Mani Ratnam) ಜೋಡಿ ಮತ್ತೆ ಒಂದಾಗಿರುವುದು ಗೊತ್ತೇ ಇದೆ. 36 ವರ್ಷಗಳ ಹಿಂದೆ ಗ್ಯಾಂಗ್‌ಸ್ಟರ್ ಸಿನಿಮಾ ‘ನಾಯಕನ್’ ಬಿಡುಗಡೆಯಾಗಿ ಕಮಾಲ್ ಮಾಡಿತ್ತು. ಅದೇ ವೈಭವ ಮತ್ತೆ ಸೃಷ್ಟಿಸಲು ಈ ಸೂಪರ್ ಹಿಟ್ ಜೋಡಿ ಕೈ ಜೋಡಿಸಿದೆ. ಈ ಬಾರಿ ‘ಥಗ್ ಲೈಫ್’ ಮೂಲಕ ಕಮಲ್-ಮಣಿ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಟೈಟಲ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರಕ್ಕೀಗ ತಮಿಳಿನ ಖ್ಯಾತ ನಟ ಸಿಲಂಬರಸನ್ (Silambarasan) ಎಂಟ್ರಿ ಕೊಟ್ಟಿದ್ದಾರೆ.

    ಥಗ್ ಲೈಫ್ ತಂಡಕ್ಕೀಗ ಸಿಲಂಬರಸನ್ ಸೇರ್ಪಡೆಯಾಗಿದ್ದಾರೆ. ಮರುಭೂಮಿಯಲ್ಲಿ ಕಾರ್ ಚೇಸಿಂಗ್ ಮಾಡುತ್ತಾ ಬುಲೆಟ್ ಫೈರ್ ಮಾಡುವ ಸಿಲಂಬರಸನ್ ಝಲಕ್ ಬಿಡುಗಡೆ ಮಾಡಿದೆ ಚಿತ್ರತಂಡ ಅವರನ್ನು ಸ್ವಾಗತಿಸಿದೆ. ಇನ್ನು, ನಟಿ ತ್ರಿಶಾ, ಮತ್ತು ಜಯರಾಮ್‌ ರವಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ

    ಈ ಚಿತ್ರವನ್ನು ಕಮಲ್‌ ಹಾಸನ್‌, ಮಣಿ ರತ್ನಂ, ಆರ್‌ ಮಹೇಂದ್ರನ್‌ ಮತ್ತು ಶಿವ ಅನಂತ್‌ ಅವರು ಜತೆಯಾಗಿ ರಾಜ್‌ ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಹೆಸರಿನಲ್ಲಿ ನಿರ್ಮಿಸುತ್ತಿದ್ದಾರೆ.   ಎಆರ್‌ ರೆಹಮಾನ್‌ ಸಂಗೀತ,  ಶ್ರೀಕರ್‌ ಪ್ರಸಾದ್‌ ಅವರು ಸಂಕಲನದ ಹೊಣೆ ಹೊತ್ತಿದ್ದಾರೆ. ರವಿ ಕೆ. ಚಂದ್ರನ್‌ ಅವರ ಕೊರಿಯೊಗ್ರಫಿ  ಥಗ್ ಲೈಫ್ ಸಿನಿಮಾಕ್ಕಿದೆ.

  • ಶಾರುಖ್ ಖಾನ್ ಆಸೆಯನ್ನು ರಿವೀಲ್ ಮಾಡಿದ ಕಮಲ್ ಹಾಸನ್

    ಶಾರುಖ್ ಖಾನ್ ಆಸೆಯನ್ನು ರಿವೀಲ್ ಮಾಡಿದ ಕಮಲ್ ಹಾಸನ್

    ಬಾಲಿವುಡ್ ನಟ ಶಾರುಖ್ ಖಾನ್ (Kamal Haasan) ಕುರಿತಾಗಿ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

    ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ (Shah Rukh Khan) ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ (Mani Ratnam) ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ. ಒಂದಾದರೂ ಅವರಿಗೆ ಕನಸಿದೆ ಎಂದಿದ್ದಾರೆ ಕಮಲ್.

    ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

  • ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.

    ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ.

    View this post on Instagram

    A post shared by Blessy (@blessyofficial)

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಕಮಲ್ ನಟನೆಯ 234ನೇ ಸಿನಿಮಾಗೆ ಟೈಟಲ್ ಫಿಕ್ಸ್

    ಕಮಲ್ ನಟನೆಯ 234ನೇ ಸಿನಿಮಾಗೆ ಟೈಟಲ್ ಫಿಕ್ಸ್

    ಇಂದು ಕಮಲ್ ಹಾಸನ್ ಹುಟ್ಟು ಹಬ್ಬ (Birthday). ಈ ಸಡಗರವನ್ನು ಇನ್ನಷ್ಟು ಹೆಚ್ಚಿಸುವುದಕ್ಕಾಗಿ ಅವರ ನಟನೆಯ 234ನೇ ಸಿನಿಮಾದ ಟೈಟಲ್ ಘೋಷಣೆ ಆಗಿದೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ‘ಥಗ್ ಲೈಫ್’ (Thug’s Life) ಎಂದು ಹೆಸರಿಡಲಾಗಿದೆ. ಶೀರ್ಷಿಕೆಯ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದೆ.

    ಶಿವಣ್ಣ ನಟನೆ?

    ಜೈಲರ್ ಸಿನಿಮಾದ ಯಶಸ್ಸಿನ ನಂತರ ತಮಿಳಿನಲ್ಲಿ ಶಿವರಾಜ್ ಕುಮಾರ್ (Shivaraj Kumar) ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ಜೊತೆ ಜೊತೆಗೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದರು. ಇದೀಗ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಶಿವಣ್ಣ ಜೊತೆ ಮಾತುಕತೆ ಕೂಡ ನಡೆದಿದೆ ಎನ್ನುವ ಸುದ್ದಿಯಿದೆ.

    ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ ಎನ್ನಲಾದ ಸಿನಿಮಾ ವಿಶೇಷವಾಗಿದೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

  • ಕಮಲ್ ಹಾಸನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರಂತೆ ಶಿವಣ್ಣ

    ಕಮಲ್ ಹಾಸನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರಂತೆ ಶಿವಣ್ಣ

  • ಕಮಲ್‌-ಮಣಿರತ್ನಂ ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ?: ಹೊರಬಿತ್ತು ಪಟ್ಟಿ

    ಕಮಲ್‌-ಮಣಿರತ್ನಂ ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ?: ಹೊರಬಿತ್ತು ಪಟ್ಟಿ

    ಮಲ್‌ ಹಾಸನ್‌  ಮತ್ತು ಮಣಿರತ್ನಂ ಕಾಂಬಿನೇಷನ್‌ ನ ಹೊಸ ಸಿನಿಮಾದ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಈ ಸಿನಿಮಾವನ್ನು ಆರ್.ಮಹೇಂದ್ರನ್‌, ಶಿವ ಅನಂತ್‌ ಹಾಗೂ ಕಮಲ್‌, ಮಣಿರತ್ನಂ ಅವರು ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ಎ.ಆರ್.ರೆಹಮಾನ್‌ (AR Rahman) ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ರವಿ ಕೆ. ಚಂದ್ರನ್‌ ಸಿನಿಮಾಟೋಗ್ರಾಫರ್.‌ ಶ್ರೀಕರ್‌ ಪ್ರಸಾದ್‌ ಸಂಕಲನಕಾರರಾಗಿದ್ದರೆ, ಅನ್ಬರಿವ್‌ ಅವರ ಸಾಹಸ ಚಿತ್ರಕ್ಕೆ ಇರಲಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು, ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿರತ್ನಂ-ಕಮಲ್ ಹಾಸನ್ ಸಿನಿಮಾ: ಬಿಗ್ ಅಪ್ ಡೇಟ್

    ಮಣಿರತ್ನಂ-ಕಮಲ್ ಹಾಸನ್ ಸಿನಿಮಾ: ಬಿಗ್ ಅಪ್ ಡೇಟ್