Tag: ಮತದಾನ

  • Kolar | ಮತದಾನದ ವೇಳೆ ಹೃದಯಾಘಾತ – ವೃದ್ಧ ಸಾವು

    Kolar | ಮತದಾನದ ವೇಳೆ ಹೃದಯಾಘಾತ – ವೃದ್ಧ ಸಾವು

    ಕೋಲಾರ: ಮತದಾನದ (Voting) ವೇಳೆ ಹೃದಯಾಘಾತಕ್ಕೊಳಗಾಗಿ (Heart Attack) ವೃದ್ಧ ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಹೂಗಳ ಸೀನಪ್ಪ (86) ಹೃದಯಾಘಾತದಿಂದ ಮೃತಪಟ್ಟ ವೃದ್ಧ. ಬಿ ವರ್ಗದ 8ರ ಪೈಕಿ ಎರಡು ಮತದಾನ ಮಾಡಿದ್ದ ಸೀನಪ್ಪ, ಇನ್ನೂ 6 ಮತ ಮಾಡಲು ಪಕ್ಕದ ಮತಗಟ್ಟೆಗೆ ತೆರಳಿದ್ದ ವೇಳೆ ಮತಗಟ್ಟೆ ಬಳಿಯೇ ಹೃದಯಾಘಾತವಾಗಿದೆ. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಾದರಿ ಕನ್ನಡ ಶಾಲೆಯಲ್ಲಿ ಮತದಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸೀನಪ್ಪ ಮೃತಪಟ್ಟಿದ್ದಾರೆ. ಸೀನಪ್ಪ ಸಿಪಿಐ ಅಂಜನಪ್ಪ ಸೇರಿ ಮೂವರು ಮಕ್ಕಳನ್ನ ಅಗಲಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಬ್ಲೂ ಸ್ಟಾರ್‌ ತಪ್ಪು, ಅದಕ್ಕೆ ಇಂದಿರಾ ಗಾಂಧಿ ಪ್ರಾಣವನ್ನೇ ಪಣಕ್ಕಿಟ್ಟರು: ಪಿ.ಚಿದಂಬರಂ

  • ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

    ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

    ಕೋಲಾರ: ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತ್ (Vemagal-Kurugal Town Panchayat Election) ಘೋಷಣೆಯಾದ ಬಳಿಕ ಇದೇ ಮೊದಲ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ 17 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲೆಡೆ ಶಾಂತಿಯುತವಾಗಿ ಮತದಾನ (Voting) ಪ್ರಕ್ರಿಯೆ ನಡೆಯಿತು.

    ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ಮತದಾನ ಮಾಡಿದರು. ಸರದಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡಿದ್ದು, ಬೆಳಗ್ಗಿನಿಂದ ಮಧ್ಯಾಹ್ನದ ವೇಳೆಗೆ 70% ಮತದಾನ ಪ್ರಕ್ರಿಯೆ ಮುಗಿದಿದ್ರೆ, ಮಧ್ಯಾಹ್ನದ ನಂತರ ಕೊಂಚ ಸುಧಾರಿಸಿತು. ಇದನ್ನೂ ಓದಿ: ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

    ಇನ್ನೂ ವೃದ್ದರೊಬ್ಬರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ. ಮತದಾರರನ್ನು ಆಕರ್ಷಿಸಲು ಪಿಂಕ್ ಮತಗಟ್ಟೆ ನಿರ್ಮಾಣ ಮಾಡಿದ್ದು ವಿಶೇಷವಾಗಿ ಕಂಡು ಬಂತು. ಇನ್ನೂ ಕೋಲಾರ ಜಿಲ್ಲಾಧಿಕಾರಿ ಎಂ.ಆರ್.ರವಿ, ಎಸ್ಪಿ ನಿಖಿಲ್, ತಹಶೀಲ್ದಾರ್ ನಯನ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೆಂಕಟೇಶ್ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿರುಸಿನ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಯುವಕರು, ವೃದ್ಧರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದನ್ನೂ ಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

    ಇನ್ನೂ ಮತಗಟ್ಟೆ ಬಳಿ ತಮ್ಮ ಪಕ್ಷ ಹಾಗೂ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು, ಮುಖಂಡರು ಮತಯಾಚನೆ ಮಾಡಿದ್ರು. ಅತಿ ಸೂಕ್ಷ್ಮ ಮತಗಟ್ಟೆಯಾಗಿದ್ದ ವಿಶ್ವನಗರ ಮತಗಟ್ಟೆಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಂಜೆ ವೇಳೆಗೆ 92%ನಷ್ಟು ಮತದಾನ ನಡೆದಿದೆ. ಇನ್ನೂ 17 ವಾರ್ಡ್ಗಳಿಗೆ 13,494 ಮತದಾರರಿದ್ದು, ಇದರಲ್ಲಿ 6,555 ಗಂಡಸರು, 6,939 ಹೆಂಗಸರು. ಒಟ್ಟು 22 ಮತಗಟ್ಟೆಗಳನ್ನ ನಿರ್ಮಾಣ ಮಾಡಲಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

    ಇದರಲ್ಲಿ 3 ಅತಿ ಸೂಕ್ಷ್ಮ, 8 ಸೂಕ್ಷ್ಮ ಮತಗಟ್ಟೆಗಳನ್ನ ಮಾಡಲಾಗಿತ್ತು. ಮತದಾನ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ 100 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಪಟ್ಟಣ ಪಂಚಾಯತ್ ಚುನಾವಣೆ ಶಾಂತಿಯುತವಾಗಿ ನಡೆಯಿತು. ಆದ್ರೆ ಅಭ್ಯರ್ಥಿಗಳು ಮಾತ್ರ ಮತದಾರರಿಗೆ ಬೆದರಿಕೆ, ಆಮಿಷಗಳನ್ನ ನೀಡಲಾಗಿತ್ತು, ಕೆಲವೆಡೆ ಆತಂಕವನ್ನ ಸೃಷ್ಠಿ ಮಾಡಲಾಗಿದೆ ಎಂದು ಆರೋಪ ಪ್ರತ್ಯಾರೋಪಗಳನ್ನ ಮಾಡಿಕೊಂಡರು. ಇನ್ನೂ 3 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಅನ್ನೋದು ಎಸ್ಪಿ ನಿಖಿಲ್ ಮಾತು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

  • ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್‌

    ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್‌

    – ವಕ್ಫ್‌ ಬ್ಯಾನ್‌ ಮಾಡಿ ಅಂದೇ ಇಲ್ಲ
    – ಸ್ವಾಮೀಜಿ ಬೆನ್ನಿಗೆ ನಿಂತ ಬಿಜೆಪಿ

    ಬೆಂಗಳೂರು: ಭಾರತ ಸರ್ವಧರ್ಮಗಳ ದೇಶ. ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekar Swamiji) ಯೂಟರ್ನ್‌ ಹೊಡೆದಿದ್ದಾರೆ.

    ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ ಸ್ವಾಮೀಜಿಗೆ ಉಪ್ಪಾರಪೇಟೆ ಪೊಲೀಸರಿಂದ ನೊಟೀಸ್ ಹೊರಡಿಸಿದ್ದಾರೆ. ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ. ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಸ್ವಾಮೀಜಿ ಮಾತನಾಡಿದ್ದಾರೆ. ಇದನ್ನೂ ಓದಿ: Cyclone Fengal | ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು

    ಜೈಲಿಗೆ ಹಾಕ್ತರಾ? ಹಾಕ್ಲಿ ಬಿಡಿ, ಅಲ್ಲೇ ಇರ್ತಿನಿ. ದೇವರ ಮೇಲೆ ಬರ ಹಾಕಿದ್ದೀನಿ, ರೈತರ ಪರ ಹೋರಾಟದಲ್ಲಿ ಭಾಗಿಯಾಗಿದ್ದೆ. ರೈತರು ಭೂಮಿ ಕಳೆದುಕೊಳ್ಳದಕ್ಕೆ ವಿರೋಧಿಸಿ ಮಾತಾನಾಡಿದ್ದೆ. ಮಾತಿನ ಭರಾಟೆಯಲ್ಲಿ ಮುಸ್ಲಿಮರ ಮತದಾನದ ಬಗ್ಗೆ ಹೇಳಿದ್ದೆ. ಅದು ಉದ್ದೇಶ ಪೂರ್ವಕವಾಗಿ ಹೇಳಿದ ಮಾತಲ್ಲ. ಆ ಬಗ್ಗೆ ಮರುದಿನವೇ ಪತ್ರಿಕಾ ಹೇಳಿಕೆ ನೀಡಿದ್ದೆ. ಇದನ್ನ ಇಲ್ಲಿಗೆ ಬಿಟ್ಟು ಬಿಡಿ, ಭಾರತ ಎಲ್ಲ ಧರ್ಮದವರ ದೇಶ. ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನು ಸಹ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ. ಇದಾದ್ಮೇಲೆ ಯಾಕೇ ದೂರು ದಾಖಲಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.

    ವಿಚಾರಣೆಗೆ ಹೋಗಲ್ಲ, ಅವ್ರೇ ಇಲ್ಲಿಗೆ ಬರಲಿ:
    ನೋಟಿಸ್ ನೀಡಿರೋದು ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ, ನಾನು ವಿಶ್ರಾಂತಿಯಲ್ಲಿದ್ದೆ. ನಿನ್ನೆ ಕೆಲ ನಾಯಕರು ಬಂದು ನಾವಿದ್ದೇವೆ ಅಂತಾ ಹೇಳಿದ್ರು. ನಾನು ಯಾವುದರ ಬಗ್ಗೆಯೂ ಚಿಂತೆ ಮಾಡ್ತಿಲ್ಲ. ವಕ್ಫ್‌ ಬ್ಯಾನ್‌ ಮಾಡಿ ಅಂತ ನಾನು ಹೇಳೇ ಇಲ್ಲ. ರೈತರ ಭೂಮಿ ರೈತರಿಗೆ ನೀಡಿ ಅಂತಾ ಹೇಳಿದ್ದೇನೆ. ಸರ್ಕಾರ ಯಾಕೇ ಹೀಗೆ ಮಾಡ್ತಿದೆ? ಒಂದು ಸಮುದಾಯದವರನ್ನ ಓಲೈಕೆ ಮಾಡೋದು ಸರಿಯಲ್ಲ. ವಿಚಾರಣೆಗೆ ಹೋಗಲು ಆಗೋಲ್ಲ, ಅವ್ರೇ ಇಲ್ಲೇ ಬಂದ್ರೇ ನನ್ನ ಹೇಳಿಕೆಗೆ ಸ್ಪಷ್ಟನೆ ನೀಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಾರಣಾಸಿ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಬಳಿ ಆಕಸ್ಮಿಕ ಬೆಂಕಿ – 200 ದ್ವಿಚಕ್ರ ವಾಹನಗಳು ಭಸ್ಮ

    ನನಗಿಂತ ಮೊದಲು ಇತಂಹ ಅನೇಕ ಹೇಳಿಕೆಗಳು ಬಂದಿದೆ. ನಾನು ಹೇಳಿದ ಕೂಡ್ಲೇ ಮತದಾನದಿಂದ ಹಿಂದೆ ಸರಿಸೋಕೆ ಆಗುತ್ತಾ? ಅದಕ್ಕೆ ಅಂತಾ ಸಂವಿಧಾನವಿದೆ. ರೈತರಿಗೆ ಒಳ್ಳೆಯದು ಆಗಬೇಕು ಅನ್ನೋದಷ್ಟೇ ನನ್ನ ಉದ್ದೇಶ. ನನ್ನ ಆರೋಗ್ಯ ಸರಿಯಿಲ್ಲ. ಆರ್‌. ಅಶೋಕ್, ಅಶ್ವಥ್ ನಾರಾಯಣ್‌ ಬಂದಿದ್ರು, ನಿಮ್ಮ ಪರವಾಗಿ ಇದ್ದೇವೆ ಅಂತ ಹೇಳಿದ್ರು. ಕಾನೂನಿನಲ್ಲಿ ಏನ್ ಆಗಿತ್ತೋ ನೋಡೋಣ. ಯಾಕ್ ಹೀಗೆ ಮಾಡ್ತಿದ್ದಾರೆ ಗೊತ್ತಿಲ್ಲ. ಮುಂದೇನಾಗುತ್ತೋ, ಆ ದೇವರು ನಡೆಸಿದಂತೆ ಆಗುತ್ತೆ ಎಂದು ನುಡಿದಿದ್ದಾರೆ.

  • ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡ್ಬೇಕು ಅಂದಿದ್ದ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್‌

    ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡ್ಬೇಕು ಅಂದಿದ್ದ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್‌

    – ಡಿ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಗೆ (Chandrashekar Swamiji) ಉಪ್ಪಾರಪೇಟೆ ಪೊಲೀಸರಿಂದ ನೊಟೀಸ್ ಹೊರಡಿಸಿದ್ದಾರೆ. ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ.

    ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    ದೂರಿನಲ್ಲಿ ಏನಿದೆ?
    ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದರು. ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಚಂದ್ರಶೇಖರ ಸ್ವಾಮೀಜಿ ಹೇಳಿದ್ದು ಏನು?
    ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ (Vote) ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ. ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು.

    ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ‌ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

  • ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

     

    ದೂರಿನಲ್ಲಿ ಏನಿದೆ?
    ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ

    ಚಂದ್ರಶೇಖರ ಸ್ವಾಮೀಜಿ ಹೇಳಿದ್ದು ಏನು?
    ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ(Vote) ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ.

    ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ‌ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

  • 3 ಕ್ಷೇತ್ರದಲ್ಲಿ ಶಾಂತಿಯುತ ಮತದಾನ – ಚನ್ನಪಟ್ಟಣದಲ್ಲಿ 89% ದಾಖಲೆಯ ವೋಟಿಂಗ್

    3 ಕ್ಷೇತ್ರದಲ್ಲಿ ಶಾಂತಿಯುತ ಮತದಾನ – ಚನ್ನಪಟ್ಟಣದಲ್ಲಿ 89% ದಾಖಲೆಯ ವೋಟಿಂಗ್

    – ವಯನಾಡಿನಲ್ಲಿ ಪ್ರವಾಹ ಸಂತ್ರಸ್ತರ ಸಮಾಗಮ

    ಬೆಂಗಳೂರು: ದೊಡ್ಡ ಮಾತಿನ ಮತಾಪುಗಳಿಗೆ ಸಾಕ್ಷಿಯಾಗಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ (By Elections 2024) ಶಾಂತಿಯುತವಾಗಿ ನೆರವೇರಿದೆ.

    ಯಾವುದೇ ಗದ್ದಲ ಗಲಾಟೆಗಳಿಲ್ಲದೇ ಚನ್ನಪಟ್ಟಣ (Channapatna) ಮತ್ತು ಶಿಗ್ಗಾಂವಿಯಲ್ಲಿ ಶೇ.80ಕ್ಕೂ ಹೆಚ್ಚು, ಸಂಡೂರಿನಲ್ಲಿ (Sandur) 75%ಗೂ ಹೆಚ್ಚು ವೋಟಿಂಗ್ ಆಗಿದೆ. ಆಡಳಿತ ಮತ್ತು ವಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣದಲ್ಲಿ ದಾಖಲೆಯ 88.80ರಷ್ಟು ಮತದಾನವಾಗಿದೆ. ಅದೇ ರೀತಿ ಶಿಗ್ಗಾಂವಿಯಲ್ಲಿ 80.48ರಷ್ಟು, ಸಂಡೂರಿನಲ್ಲಿ 76.24ರಷ್ಟು ವೋಟಿಂಗ್ ಆಗಿದೆ. ಇದನ್ನೂ ಓದಿ: ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್‌ ಬಂದಿತ್ತು: ಸಿಎಂ ಬಾಂಬ್‌

    ಅಭ್ಯರ್ಥಿಗಳಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಸಿಪಿ ಯೋಗೇಶ್ವರ್, ಭರತ್ ಬೊಮ್ಮಾಯಿ, ಯಾಸೀರ್ ಪಠಾಣ್, ಅನ್ನಪೂರ್ಣ ತುಕಾರಾಮ್, ಬಂಗಾರು ಹನುಮಂತು ಭವಿಷ್ಯ ಮತಯಂತ್ರ ಸೇರಿದೆ. ನವೆಂಬರ್ 23ಕ್ಕೆ ಫಲಿತಾಂಶ ಹೊರಬೀಳಲಿದೆ.

    ಅಂದ ಹಾಗೆ, ಫಲಿತಾಂಶಕ್ಕೆ ಮೊದಲೇ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದಂತೆ ಸಂಭ್ರಮಾಚರಣೆ ನಡೆಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಚನ್ನಪಟ್ಟಣದ ಚಕ್ಕೆರೆಯಲ್ಲಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ, ಯಾಸೀರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ವೋಟ್ ಮಾಡಿದ್ರು. 90ರ ವೃದ್ಧರಿಂದ ಹಿಡಿದು ಹಸಿ ಬಾಣಂತಿವರೆಗೂ ಎಲ್ರೂ ಉತ್ಸಾಹದಿಂದ ಮತಗಟ್ಟೆಗೆ ಬಂದಿದ್ರು. ಅಮೆರಿಕದಿಂದ ಅನುಷಾ ಎಂಬಾಕೆ ಮತಹಾಕಲು ಶಿಗ್ಗಾಂವಿಗೆ ಬಂದು ಮತ ಚಲಾವಣೆ ಮಾಡಿದರು. ಇದನ್ನೂ ಓದಿ: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ

    ಎಲ್ಲೆಲ್ಲಿ ಎಷ್ಟೆಷ್ಟು ಮತದಾನ?
    ಚನ್ನಪಟ್ಟಣ ಕ್ಷೇತ್ರ
    ಒಟ್ಟು ಮತದಾನ: 88.80%
    ಒಟ್ಟು ಮತದಾನ ಮಾಡಿದವರ ಸಂಖ್ಯೆ – 2,06,866.
    ಪುರುಷ ಮತದಾರರು – 1,00,501
    ಮಹಿಳಾ ಮತದಾರರು – 1,06,362
    ತೃತೀಯಲಿಂಗಿಗಳು – 3

    ಶಿಗ್ಗಾವಿ ಕ್ಷೇತ್ರ
    ಒಟ್ಟು ಮತದಾನ: 80.48%
    ಒಟ್ಟು ಮತದಾನ ಮಾಡಿದವರ ಸಂಖ್ಯೆ – 1,91,166
    ಪುರುಷ ಮತದಾರರು- 98,642
    ಮಹಿಳಾ ಮತದಾರರು- 92,522
    ತೃತೀಯ ಲಿಂಗಿಗಳು – 2

    ಸಂಡೂರು ಕ್ಷೇತ್ರ
    ಒಟ್ಟು ಮತದಾನ – 76.24%
    ಒಟ್ಟು ಮತದಾನ ಮಾಡಿದವರ ಸಂಖ್ಯೆ – 1,80,189
    ಪುರುಷ ಮತದಾರರು – 90,922
    ಮಹಿಳೆ ಮತದಾರರು – 89,252
    ತೃತೀಯಲಿಂಗಿಗಳು -12

  • ಜಾರ್ಖಂಡ್ ವಿಧಾನಸಭೆ ಚುನಾವಣೆ – 43 ಕ್ಷೇತ್ರಗಳಿಗೆ ಇಂದು ಮತದಾನ

    ಜಾರ್ಖಂಡ್ ವಿಧಾನಸಭೆ ಚುನಾವಣೆ – 43 ಕ್ಷೇತ್ರಗಳಿಗೆ ಇಂದು ಮತದಾನ

    ರಾಂಚಿ: ಜಾರ್ಖಂಡ್‌ನ (Jharkhand) 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು (ನ.13) ಮತದಾನ ಆರಂಭವಾಗಿದ್ದು, ಒಟ್ಟು 683 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

    ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.ಇದನ್ನೂ ಓದಿ: ಮುಡಾ ಹಗರಣ: ವಿಚಾರಣೆ ತೀವ್ರಗೊಳಿಸಿದ ಇ.ಡಿ – ಸಿಎಂ ಸಿದ್ದರಾಮಯ್ಯ ಆಪ್ತನಿಗೆ ಡ್ರಿಲ್

    ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಒಟ್ಟು 2.60 ಕೋಡಿ ಮತದಾರರ ಪೈಕಿ ಈ ಹಂತದಲ್ಲಿ 1 ಕೋಟಿ 37 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

    ಎನ್‌ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿ(ಯು), ಎಲ್‌ಜೆಪಿ ಮತ್ತು ಎಜೆಎಸ್ ಮತ್ತು ಇಂಡಿಯಾ ಮೈತ್ರಿಕೂಟಗಳ ಜೆಎಂಎಂ, ಕಾಂಗ್ರೆಸ್, ಆರ್‌ಜೆಡಿ ನಡುವೆ ನೇರ ಏರ್ಪಟ್ಟಿದೆ. ಮೊದಲ ಹಂತದ ಚುನವಾಣೆಯ ಪಶ್ಚಿಮದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಪ್ರಮುಖ ಅಭ್ಯರ್ಥಿಗಳೆಂದರೆ ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್ ಸ್ಪರ್ಧಿಸುತ್ತಿದ್ದಾರೆ. ಜಗನ್ನಾಥಪುರದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳಿದ್ದು, ಕೇವಲ ಎಂಟು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

    ನ.20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇನ್ನೂ ನ.23 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.ಇದನ್ನೂ ಓದಿ: ಶಿಗ್ಗಾಂವಿ| ಒಳ್ಳೆಯ ಅಭ್ಯರ್ಥಿ ಆಯ್ಕೆ ಆಗಿ ಬರಲಿ – ಕುರುಬ ಸಮಾಜದ ವಯೋವೃದ್ಧನಿಂದ ಪೂಜೆ

  • ಜಾರ್ಖಂಡ್ ವಿಧಾನಸಭೆಗೆ ನಾಳೆ ಮೊದಲ ಹಂತದ ಚುನಾವಣೆ – 15 ಜಿಲ್ಲೆಗಳ 42 ಸ್ಥಾನಗಳಿಗೆ ಮತದಾನ

    ಜಾರ್ಖಂಡ್ ವಿಧಾನಸಭೆಗೆ ನಾಳೆ ಮೊದಲ ಹಂತದ ಚುನಾವಣೆ – 15 ಜಿಲ್ಲೆಗಳ 42 ಸ್ಥಾನಗಳಿಗೆ ಮತದಾನ

    ರಾಂಚಿ: ಜಾರ್ಖಂಡ್ ವಿಧಾನಸಭೆಗೆ (Jharkhand Assembly Elections) ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಸುತ್ತಿನಲ್ಲಿ 15 ಜಿಲ್ಲೆಗಳ 43 ಸ್ಥಾನಗಳಿಗೆ ಮತದಾನ (Voting) ನಡೆಯಲಿದೆ.

    ಮೊದಲ ಹಂತದಲ್ಲಿ 683 ಅಭ್ಯರ್ಥಿಗಳು ಅಖಾಡದಲ್ಲಿದ್ದು, ನಾಳೆ (ಬುಧವಾರ) ಅವರ ಭವಿಷ್ಯ ಇವಿಎಂಗಳಲ್ಲಿ (EVM) ಭದ್ರವಾಗಲಿದೆ. ಮೊದಲ ಸುತ್ತಿನಲ್ಲಿ ಗರಿಷ್ಠ ಆರು ಸ್ಥಾನಗಳು ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿವೆ. ಪಲಮು, ಪಶ್ಚಿಮ ಸಿಂಗ್‌ಭೂಮ್ ಮತ್ತು ರಾಂಚಿ ಜಿಲ್ಲೆಗಳಲ್ಲಿ ತಲಾ ಐದು ವಿಧಾನಸಭಾ ಸ್ಥಾನಗಳಿದ್ದು, ಕೊಡೆರ್ಮಾ ಮತ್ತು ರಾಮಗಢ ಜಿಲ್ಲೆಯಲ್ಲಿ ತಲಾ ಒಂದು ಸ್ಥಾನವಿದೆ. ಇಂಡಿಯಾ ಒಕ್ಕೂಟದ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್, ಜನತಾ ದಳ ಯುನೈಡೆಟ್ ಒಳಗೊಂಡು ಎನ್‌ಡಿಎ ಒಕ್ಕೂಟದ ವಿರುದ್ಧ ಸ್ಪರ್ಧೆ ಮಾಡಿದೆ. ಇದನ್ನೂ ಓದಿ: ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ವಾಪಸ್? – ಹೈಕಮಾಂಡ್‌ ಲಾಬಿಗೆ ಮಣಿದ್ರಾ ಡಿಕೆಶಿ?

    ಮೊದಲ ಹಂತದಲ್ಲಿ ಒಟ್ಟು 43 ಸ್ಥಾನಗಳ ಪೈಕಿ ಜೆಎಂಎಂ 23 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಟ್ಟು ಐದು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್‌ಡಿಎಯಲ್ಲಿ ಬಿಜೆಪಿ 43ರಲ್ಲಿ 36 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸುದೇಶ್ ಮಹತೋ ಅವರ ಎಜೆಎಸ್‌ಯು ನಾಲ್ಕು ಸ್ಥಾನಗಳಲ್ಲಿ, ನಿತೀಶ್ ಕುಮಾರ್ ಅವರ ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್) ಒಂದು ಸ್ಥಾನದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದಲ್ಲದೇ ಇತರೆ ಸಣ್ಣ ಪಕ್ಷಗಳೂ ಸ್ಪರ್ಧೆಯನ್ನು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ

    ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್, ಆರೋಗ್ಯ ಸಚಿವ ಬನ್ನಾ ಗುಪ್ತಾ, ರಾಜ್ಯಸಭಾ ಸಂಸದ ಮಹುವಾ ಮಜಿ, ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ ಮತ್ತು ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಸೊಸೆ ಪೂರ್ಣಿಮಾ ದಾಸ್ ಅವರಂತಹ ಪ್ರಮುಖ ಮುಖಗಳು ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿವೆ. ಇದನ್ನೂ ಓದಿ: Assam| ನಿರ್ಮಾಣ ಹಂತದ ಮೋರಿಗೆ ಬಿದ್ದ ಕಾರು – ನಾಲ್ವರು ಸಾವು, ಇಬ್ಬರು ಗಂಭೀರ

    ಚುನಾವಣೆಗಾಗಿ ಚುನಾವಣಾ ಆಯೋಗವು ಸಕಲ ತಯಾರಿ ಮಾಡಿಕೊಂಡಿದೆ. ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಸುಗಮಗೊಳಿಸಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮೊದಲ ಹಂತದಲ್ಲಿ 1.37 ಕೋಟಿ ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಇದನ್ನೂ ಓದಿ: ತಲೆ ಮೇಲೆ ಹರಿದ ಸರ್ಕಾರಿ ಬಸ್- ವಿದ್ಯಾರ್ಥಿ ಸ್ಥಳದಲ್ಲೇ ಸಾವು

  • ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ – ನ.20ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ – ನ.20ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಕೇಂದ್ರ ಚುನಾವಣಾ ಆಯೋಗ (Election Commission) ಮುಹೂರ್ತ ನಿಗದಿ ಮಾಡಿದೆ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

    ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ, ಮಹಾರಾಷ್ಟ್ರ ಚುನಾವಣೆ ಹಾಗೂ ಫಲಿತಾಂಶದ ದಿನಾಂಕ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 26 ಜಿಲ್ಲೆಗಳ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 4.97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. ಇದನ್ನೂ ಓದಿ: ಗಡ್ಕರಿಯನ್ನು ಭೇಟಿಯಾದ ಸೋಮಣ್ಣ- ತುಮಕೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಗಳ ಬಗ್ಗೆ ಚರ್ಚೆ

    1,00,186 ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸೌಕರ್ಯಗಳನ್ನು ನಿರ್ಮಿಸಲಾಗುವುದು. ಮತದಾನದ ಲೈನ್‌ನಲ್ಲಿ ಕುರ್ಚಿ ಮತ್ತು ಟೇಬಲ್ ಹಾಕಲು ಸೂಚಿಸಲಾಗಿದೆ. ಇದು ವೃದ್ಧ ಮತದಾರರಿಗೆ ಅನುಕೂಲವಾಗಲಿದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿರಿಯರ ಮತ ಪಡೆಯುವ ರೂಟ್‌ಮ್ಯಾಪ್ ರಾಜಕೀಯ ಪಕ್ಷಗಳಿಗೆ ನೀಡಲಾಗುವುದು. ಮತದಾನದ ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಅಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸ್‌- ಶಾಸಕ ಮುನಿರತ್ನಗೆ ಜಾಮೀನು

  • ಜಮ್ಮು-ಕಾಶ್ಮೀರದಲ್ಲಿ ಅಂತಿಮ ಹಂತದ ಚುನಾವಣೆ ಸಂಪನ್ನ – ಶೇ.65ಕ್ಕೂ ಹೆಚ್ಚು ಮತದಾನ

    ಜಮ್ಮು-ಕಾಶ್ಮೀರದಲ್ಲಿ ಅಂತಿಮ ಹಂತದ ಚುನಾವಣೆ ಸಂಪನ್ನ – ಶೇ.65ಕ್ಕೂ ಹೆಚ್ಚು ಮತದಾನ

    – ಅ.8ರಂದು ಅಭ್ಯರ್ಥಿಗಳ ಭವಿಷ್ಯ

    ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಮೂರನೇ ಹಂತದ ವಿಧಾನಸಭೆ ಚುನಾವಣೆ (Assembly Election) ಮಂಗಳವಾರ ಮುಕ್ತಾಯಗೊಂಡಿದ್ದು, ಶೇ.65ಕ್ಕೂ ಹೆಚ್ಚು ಮತದಾನವಾಗಿದೆ. ಕಣಿವೆನಾಡಿನ ಮಂದಿ ಉಗ್ರರ ಬುಲೆಟ್‌ಗೆ ಬ್ಯಾಲೆಟ್ ಮೂಲಕ ಉತ್ತರ ನೀಡಿದ್ದಾರೆ.

    ಇಂದು (ಮಂಗಳವಾರ) 40 ಸ್ಥಾನಗಳಿಗೆ ನಡೆದ ಮೂರನೇ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಸಂಜೆ 5 ಗಂಟೆಯ ವೇಳೆಗೆ ಶೇ. 65.48ರಷ್ಟು ಮತದಾನ ಆಗಿದೆ. ಉಧಾಂಪುರದಲ್ಲಿ 72.91%, ಸಾಂಬಾದಲ್ಲಿ 72.41%, ಕಥುವಾದಲ್ಲಿ 70.53ರಷ್ಟು ಮತದಾನವಾಗಿದೆ. ಅಕ್ಟೋಬರ್ 8ರಂದು ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ. ಇದನ್ನೂ ಓದಿ: 2 ವರ್ಷಗಳ ನಂತ್ರ ಭೇಟಿಯಾದ ಗೆಳೆಯನೊಂದಿಗೆ ಸೆಕ್ಸ್‌ – ರಕ್ತಸ್ರಾವದಿಂದ ಯುವತಿ ಸಾವು

    2019ರ ಆಗಸ್ಟ್ನಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆದಿದೆ. ಸೆ.18ರಂದು ನಡೆದ ಮೊದಲ ಹಂತದಲ್ಲಿ ಶೇ.61.38ರಷ್ಟು ಮತದಾನ ನಡೆದಿದ್ದು, ಸೆ.26ರಂದು ನಡೆದ 2ನೇ ಹಂತದ ಚುನಾವಣೆಯಲ್ಲಿ ಶೆ.57.31ರಷ್ಟು ಮತದಾನವಾಗಿತ್ತು. ಮೊದಲ ಎರಡು ಹಂತಗಳ ಚುನಾವಣೆಗೆ ಹೋಲಿಸಿದರೆ ಮೂರನೇ ಹಂತದಲ್ಲಿ ಜನರು ಹೆಚ್ಚು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ