ತುಮಕೂರು: ಜಾತಿ ಮುಂದೆ ಕ್ರಿಶ್ಚಿಯನ್ ಅಂತ ಬರೆದಿರೋದು ಸರ್ಕಾರವೇ ಮತಾಂತರಕ್ಕೆ (Conversion) ಪ್ರೋತ್ಸಾಹ ನೀಡಿದಂತೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ (KN Rajanna) ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ತುಮಕೂರಿನಲ್ಲಿ (Tumakuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ (Caste) ಮುಂದೆ ಕ್ರಿಶ್ಚಿಯನ್ ಅಂತ ಬರೆಯುವುದನ್ನು ನಾನೂ ವಿರೋಧ ಮಾಡಿದ್ದೇನೆ. ಅದನ್ನು ಈಗ ಡಿಲೀಟ್ ಮಾಡಿದ್ದಾರೆ. ಸರ್ಕಾರ ಈ ರೀತಿ ಬರೆದು ಸಮೀಕ್ಷೆ ಮಾಡೋದ್ರಿಂದ ಮತಾಂತರಕ್ಕೆ ಪ್ರೋತ್ಸಾಹ ಮಾಡಿದಂತೆ ಎಂದು ಖಂಡಿಸಿದ್ದಾರೆ. ಇದನ್ನೂ ಓದಿ: ಬಾನು ಮುಷ್ತಾಕ್ ಮೇಲೆ ನಮಗೆ ಗೌರವ ಹೆಚ್ಚಾಗಿದೆ: ನಾರಾಯಣಸ್ವಾಮಿ
ಮತಗಳ್ಳತನದ (Vote Chori) ತನಿಖೆ ವಿಚಾರದಲ್ಲಿ ಮಾತನಾಡಿದ ರಾಜಣ್ಣ, ಈಗ ಎಸ್‌ಐಟಿ ಮಾಡಿದ್ದಾರೆ. ಮೊದಲು ಒಂದು ಎಫ್‌ಐಆರ್ ರಿಜಿಸ್ಟ್ರಾರ್ ಮಾಡಿ ಆನ್ ಲೈನ್ 6-7 ಫಾರಂ ಕೊಟ್ಟಿರ್ತಾನೋ, ಯಾವ ಐಡಿಯಲ್ಲಿ ಬಂದಿದೆ ಅಂತ ಚೆಕ್ ಮಾಡಿ ಅವನ ಮೇಲೆ ಕೇಸ್ ಹಾಕ್ಬೇಕು. ಮಲ್ಲಿಕಾರ್ಜುನ್ ಎಂಬಾತ ನನ್ನದೇ ಹೆಸರಲ್ಲಿ 7 ವೋಟ್ ಡಿಲೀಟ್ ಮಾಡಿದ್ದಾರೆ ಅಂತಿದ್ದಾರೆ. ಅವನದ್ದೇ ಕಂಪ್ಲೆಂಟ್ ತಗೊಂಡು, ಬಾಟಂನಿಂದ ಹೋಗಬೇಕು. ಅವನ ಊರು ಯಾವುದು? ಯಾವ ಉದ್ದೇಶಕ್ಕೆ ಮಾಡಿದ್ದಾನೆ? ಎಲ್ಲವನ್ನು ವಿಚಾರಣೆ ಮಾಡಬೇಕು. ಏಕೆಂದ್ರೆ ಇದು ಮಿಸ್ ರೆಪ್ರೆಸೆಂಟೇಷನ್ ಅಂಡ್ ಕ್ರಿಮಿನಲ್ ಸಂಚು ಕಾನೂನು ಅಡಿಯಲ್ಲಿ ಕೇಸ್ ದಾಖಲು ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಳ ದಾಸೋಹ ಸಂಗ್ರಹಕ್ಕೆ ಕಾರು ಉಡುಗೊರೆ ನೀಡಿದ ನಟ ವಿನೋದ್ ರಾಜ್
ಬೆಂಗಳೂರು: ವಿವಾದದ ನಡುವೆಯೇ ನಾಳೆಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಾರಂಭ ಆಗಲಿದೆ. ಕ್ರಿಶ್ಚಿಯನ್‌ಗೆ ಮತಾಂತರ ಆದ ಜಾತಿಗಳ (Caste) ಬಗೆಗಿನ ವಿವಾದ ಬೆನ್ನಲ್ಲೇ ಎಚ್ಚೆತ್ತಿರೋ ಹಿಂದುಳಿದ ವರ್ಗಗಳ ಆಯೋಗ ವಿವಾದದ 33 ಜಾತಿಗಳನ್ನ ಕೈಬಿಟ್ಟು ಸಮೀಕ್ಷೆ ನಡೆಸಲು ನಿರ್ಧಾರ ಮಾಡಿದೆ.
ಭಾರೀ ವಿವಾದಕ್ಕೆ ಕಾರಣವಾಗಿರೋ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದೆ. ಮತಾಂತರವಾದ ಜಾತಿಗಳ ಗೊಂದಲದ ನಡುವೆಯೇ ಸಮೀಕ್ಷೆಗೆ (Caste Census) ಹಿಂದುಳಿದ ವರ್ಗಗಳ ಆಯೋಗ ಸಿದ್ದತೆ ಮಾಡಿಕೊಂಡಿದೆ. ಇದೇ ವೇಳೆ ಗೊಂದಲಕ್ಕೆ ಕಾರಣವಾದ 33 ಜಾತಿಗಳನ್ನ ಸರ್ಕಾರದ (Karnataka Government) ಸಲಹೆ ಮೇರೆಗೆ ಆಯೋಗ ಕೈ ಬಿಟ್ಟಿದೆ. ಪಟ್ಟಿಯಲ್ಲಿ ಅ ಜಾತಿ ಹೆಸರು ಇರೋದಿಲ್ಲ. ಆದರೆ ಜನರ ಇಚ್ಚೆ ಇದ್ದರೆ ಪಟ್ಟಿಯಿಂದ ಕೈಬಿಟ್ಟಿರೋ ಧರ್ಮ ಮತ್ತು ಜಾತಿ ಹೆಸರು ಬರೆಸಬಹುದು ಅಂತ ಆಯೋಗ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್
ಮತಾಂತರ ಆದವರಿಗೆ ಆ ಧರ್ಮವೇ ಫಿಕ್ಸ್
ಮತಾಂತರವಾದ ಜಾತಿಗಳ ಇನ್ನಷ್ಟು ಗೊಂದಲಗಳಿಗೆ ಆಯೋಗ ಸ್ಪಷ್ಟನೆ ನೀಡಿದೆ. ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯವಾಗಲಿದೆ. ಮೂಲ ಜಾತಿ ಅವರಿಗೆ ಅನ್ವಯ ಆಗೋದಿಲ್ಲ ಅಂತ ಸ್ಪಷ್ಟಪಡಿಸಿದೆ. ಅಲ್ಲದೇ ಸಮೀಕ್ಷೆ ಆದ ನಂತರ ಯಾವ ಯಾವ ಜಾತಿ ಯಾವ ಯಾವ ಕ್ಯಾಟಗರಿ ಬರುತ್ತದೆ ಅಂತ ತಜ್ಞರ ಟೀಂ ನಿರ್ಧಾರ ಮಾಡಿಲಿದೆ ಅಂತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯಕ್ (Madhusudan R Naik) ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಶಾಲಾ ಅವಧಿ ಬದಲು ರಜೆ ವೇಳೆ ಸರ್ವೆಗೆ ಶಿಕ್ಷಕರ ಬಳಕೆ: ಮಧು ಬಂಗಾರಪ್ಪ
ನಾಳೆ ಬೆಂಗಳೂರಲ್ಲಿ ನಡೆಯಲ್ಲ ಸಮೀಕ್ಷೆ
ನಾಳೆಯಿಂದಲೇ ರಾಜ್ಯಾದ್ಯಂತ ಸಮೀಕ್ಷೆ ಶುರುವಾದರು ಬೆಂಗಳೂರಿನಲ್ಲಿ 2-3 ದಿನ ತಡವಾಗಿ ಸಮೀಕ್ಷೆ ಪ್ರಾರಂಭವಾಗಲಿದೆ. ಜಿಬಿಎ ಆಡಳಿತ ಬಂದ ಹಿನ್ನಲೆ ಮತ್ತು ತರಬೇತಿ ತಡವಾಗಿ ಆಗಿರೋದ್ರೀಂದ 2-3 ದಿನ ತಡವಾಗಿ ಬೆಂಗಳೂರಿನಲ್ಲಿ ಸಮೀಕ್ಷೆ ಪ್ರಾರಂಭ ಆಗಲಿದೆ. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನ ಕೇಳಲಾಗಿದೆ. ಆಧಾರ್ ಕಾರ್ಡ್, ಅಥವಾ ರೇಷನ್ ಕಾರ್ಡ್ ಕಡ್ಡಾಯವಾಗಿ ಕೊಡಬೇಕಾಗಿದೆ. ಆನ್ ಲೈನ್ ನಲ್ಲೂ ಮಾಹಿತಿ ನೀಡಲು ಆಯೋಗ ಅವಕಾಶ ಮಾಡಿದೆ.
– ಕುರುಬ ಸಮುದಾಯದ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಯಿದೆ
ಮಡಿಕೇರಿ: ಜಾತಿ ಜನಗಣತಿ (Caste census) ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ ಎಂದು ಸಚಿವ ಎನ್.ಎಸ್ ಬೋಸರಾಜು (NS Bosaraju) ಹೇಳಿದ್ದಾರೆ.
ಮಡಿಕೇರಿಯಲ್ಲಿ ಜಾತಿ ಜನಗಣತಿ ಮರು ಸಮೀಕ್ಷೆ ಕುರಿತು ಮಾತನಾಡಿ, ಜಾತಿಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವುದಕ್ಕೆ ಅವಕಾಶ ಇದೆ. ಒತ್ತಾಯವಾಗಿ ಯಾರನ್ನೂ ಸೇರಿಸಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದ್ರೂ ಬಿಜೆಪಿಯವರು ತಪ್ಪು ಹುಡುಕುವ ಕೆಲಸ ಮಾಡ್ತಿದ್ದಾರೆ, ಅದೇ ಅವರ ಅಜೆಂಡಾ ಆಗಿದೆ. ಅಲ್ಲದೇ ಉತ್ತಮ ಆಡಳಿತದ ವಿರುದ್ಧ ಜನರಲ್ಲಿ ಗೊಂದಲ ಸೃಷ್ಟಿಮಾಡೋದು ಅವರ ಕೆಲಸವಾಗಿಬಿಟ್ಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಾತಿಗಣತಿ ಕಾಲಂನಲ್ಲಿ ಮತಾಂತರ ಜಾತಿಗೂ ಜಾಗ – ಸರ್ಕಾರದ ವಿರುದ್ಧ ಬಿಜೆಪಿ, ಕನಕ ಶ್ರೀ ಕಿಡಿ
ಇನ್ನೂ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿಸುವ ಪ್ರಕ್ರಿಯೆ ಚುರುಕುಗೊಂಡ ಬಗ್ಗೆ ಪ್ರತಿಕ್ರಿಯಿಸಿ, ಇದು ಹಲವು ವರ್ಷಗಳ ಬೇಡಿಕೆ, ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಲ್ಲಿಯೂ ಗೊಂದಲ ಆಗದ ರೀತಿಯಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?
ಇದೇ ವೇಳೆ ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ವಿಳಂಬ ವಿಚಾರವಾಗಿ ಮಾತನಾಡಿ, SIT ಬಗ್ಗೆ ಮೊದಲು ಸ್ವಾಗತ ಮಾಡಿದ್ದು ಬಿಜೆಪಿ ಅವರೇ. ಈಗ ಅದನ್ನ ವಿರೋಧ ಮಾಡುತ್ತಿದ್ದಾರೆ. ತನಿಖಾ ತಂಡ ಉತ್ತಮವಾಗಿ ಕೆಲಸ ಮಾಡುತ್ತಿದೆ. ಆದ್ರೂ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ
ಬೆಂಗಳೂರು: ಜಾತಿಗಣತಿ (Caste Census) ವೇಳೆ 52 ಜಾತಿಗಳಿಗೆ ಮತಾಂತರ ಕಾಲಂನಲ್ಲಿ (Religious Conversion) ಮತಾಂತರ ಒಳಗೊಂಡ ಜಾತಿ ಬರೆಸಲು ಅವಕಾಶ ನೀಡುವ ಸರ್ಕಾರದ ಕ್ರಮಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್‌ಗೆ ಮತಾಂತರವಾದ ಹಿಂದುಳಿದ ವರ್ಗದವರಿಗೆ ಪ್ರತ್ಯೇಕ ಕಾಲಂ ನೀಡಲಾಗಿದೆ. 52 ಜಾತಿ ಹೆಸರಿನ ಬಗ್ಗೆ ಆಕ್ಷೇಪ ಇದೆ. ಆಕ್ಷೇಪಾರ್ಹ ಜಾತಿಗಳ ಹೆಸರು ಕೈಬಿಟ್ಟು ಸಮೀಕ್ಷೆ ನಡೆಸಬೇಕೆಂದು ಒತ್ತಾಯ ಕೇಳಿಬಂದಿದೆ. ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮರಾಠ ಕ್ರಿಶ್ಚಿಯನ್, ಬಲಿಜ ಕ್ರಿಶ್ಚಿಯನ್, ಮಾದಾರ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಭೋವಿ ಕ್ರಿಶ್ಚಿಯನ್ ಹೀಗೆ 52 ಜಾತಿಗಳಿಗೆ ಮತಾಂತರ ಹೊಂದಿದ ಜಾತಿಗಳ ಕಾಲಂ ಕೊಟ್ಟಿದ್ದಾರೆ. ಹಾಗಾಗಿ ಮತಾಂತರ ಹೊಂದಿದ ಜಾತಿಗಳ ಕಾಲಂ ವಿರುದ್ಧ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?
ಇದೇ ಸೆಪ್ಟೆಂಬರ್ 16ರಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಮೂಲಕ ಮೊದಲ ಸಭೆ ನಡೆಯಲಿದ್ದು, ಹಿಂದುಳಿದ ವರ್ಗಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಸಭೆ ಬಳಿಕ ರಾಜ್ಯದ 10 ಕಡೆಗಳಲ್ಲೂ ವಿವಿಧ ಸ್ವಾಮೀಜಿಗಳು, ರಾಜಕೀಯ, ಸಾಮಾಜಿಕ ನಾಯಕರ ಸಭೆಗೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಮಹಾಸಭೆಯಿಂದ ಗೊಂದಲ ಸೃಷ್ಟಿ: ಬೊಮ್ಮಾಯಿ
ಇನ್ನು ಕುರುಬ ಕ್ರಿಶ್ಚಿಯನ್ ಜಾತಿ ಕಾಲಂ ಕೈಬಿಡುವಂತೆ ದೇವದುರ್ಗದ ತಿಂಥಣಿ ಬ್ರಿಡ್ಜ್‌ನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಜಾತಿ ಕಾಲಂನಲ್ಲಿ ಕುರುಬ ಎಂದೇ ಬರೆಸಬೇಕು ಅಂದಿದ್ದಾರೆ. ಹಿಂದುಳಿದ ಆಯೋಗ ಬಿಡುಗಡೆ ಮಾಡಿದ ಜಾತಿ ಪಟ್ಟಿಯಲ್ಲಿ ಅನ್ಯ ಜಾತಿಗಳ ಜೊತೆಗೆ ಹಲವಾರು ಜಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನ ಸೃಷ್ಟಿ ಮಾಡಿ ಸಮಾಜದಲ್ಲಿ ಗೊಂದಲವನ್ನ ಉಂಟು ಮಾಡಿದೆ. ಈ ಕೃತ್ಯದಲ್ಲಿ ಯಾರ ಕೈವಾಡ ಇದೆಯೋ ಗೊತ್ತಿಲ್ಲ. ಆದರೆ ಮತಾಂತರಕ್ಕೆ ಪ್ರೇರಣೆ ನೀಡುವಂತಹ ಕೆಲಸ ಮಾಡುತ್ತಿದ್ದಾರೆ. ಇದನ್ನ ನಾವು ಖಂಡಿಸಬೇಕು. ಮತಾಂತರಗೊಂಡ ಜನರು ತಮ್ಮ ಧರ್ಮದ ಹೆಸರನ್ನು ಬರೆಸುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಆದರೆ ಜಾತಿ ಕಾಲಂನಲ್ಲಿ ಅನ್ಯಧರ್ಮದ ಹೆಸರು ಬರೆಯುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಸಿದ್ದರಾಮಾನಂದ ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ
ಬೆಂಗಳೂರು: ಮತಾಂತರಕ್ಕೆ ನನ್ನ ಬೆಂಬಲ ಇಲ್ಲ. ಆದರೆ, ಮತಾಂತರ ಅವರ ಹಕ್ಕು. ಅದನ್ನು ತಪ್ಪಿಸಲು ಆಗಲ್ಲ. ಹಿಂದೂ ಧರ್ಮದಲ್ಲಿನ ಅಸಮಾನತೆಯಿಂದ ಕೆಲವರು ಮತಾಂತರ ಆಗ್ತಾರೆ ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ಸಂಚಲನ ಮೂಡಿಸಿದೆ. ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಇದೆ. ಆದರೂ ಮತಾಂತರ ಅವರ ಹಕ್ಕು ಎಂದು ಸಿಎಂ ಹೇಳಿದ್ದಾರೆ. ಸಿಎಂ ಹೇಳಿಕೆ ಕಾನೂನು ಬಾಹಿರ, ಸಂವಿಧಾನ ಬಾಹಿರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಜಾತಿಗಣತಿ ವೇಳೆ 47 ಜಾತಿಗಳಿಗೆ ಮತಾಂತರ ಕಾಲಂನಲ್ಲಿ ಮತಾಂತರ ಒಳಗೊಂಡ ಜಾತಿ ಬರೆಸಲು ಅವಕಾಶಕ್ಕೂ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್‌ಗೆ ಮತಾಂತರವಾದ ಹಿಂದುಳಿದ ವರ್ಗದವರಿಗೆ ಪ್ರತ್ಯೇಕ ಕಾಲಂ ನೀಡಲಾಗಿದೆ. 47 ಜಾತಿ ಹೆಸರಿನ ಬಗ್ಗೆ ಆಕ್ಷೇಪ ಇದೆ. ಆಕ್ಷೇಪಾರ್ಹ ಜಾತಿಗಳ ಹೆಸರು ಕೈಬಿಟ್ಟು ಸಮೀಕ್ಷೆ ನಡೆಸಬೇಕೆಂದು ಒತ್ತಾಯ ಕೇಳಿಬಂದಿದೆ.
ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮರಾಠ ಕ್ರಿಶ್ಚಿಯನ್, ಬಲಿಜ ಕ್ರಿಶ್ಚಿಯನ್. ಮಾದಾರ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬೋವಿ ಕ್ರಿಶ್ಚಿಯನ್ ಹೀಗೆ 47 ಜಾತಿಗಳಿಗೆ ಮತಾಂತರ ಹೊಂದಿದ ಜಾತಿಗಳ ಕಾಲಂ ಕೊಟ್ಟಿದ್ದಾರೆ. ಹಾಗಾಗಿ, ಮತಾಂತರ ಹೊಂದಿದ ಜಾತಿಗಳ ಕಾಲಂ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದು, ಇದೇ ಸೆ.16 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಮೂಲಕ ಮೊದಲ ಸಭೆ ನಡೆಯಲಿದ್ದು, ಹಿಂದುಳಿದ ವರ್ಗಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಸಭೆ ಬಳಿಕ ರಾಜ್ಯದ 10 ಕಡೆಗಳಲ್ಲೂ ಸ್ವಾಮೀಜಿಗಳು, ರಾಜಕೀಯ, ಸಾಮಾಜಿಕ ನಾಯಕರ ಸಭೆಗೆ ಪ್ಲ್ಯಾನ್ ಮಾಡಿದ್ದಾರೆ.
ಭೋಪಾಲ್: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು (Conversion) ಹಾಗೂ ತನ್ನನ್ನ ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 35 ವರ್ಷದ ಮಹಿಳೆಯ ಕತ್ತು ಸೀಳಿ ಕ್ರೂರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಭಾಗ್ಯಶ್ರೀ ನಾಮದೇವ್ ಧನುಕ್ (35 ಕೊಲೆಯಾದ ಮಹಿಳೆ) ಶೇಖ್ ರಯೀಸ್ (42) ಕೊಲೆಗೈದ ಆರೋಪಿ. ಮಹಿಳೆಯ ಗಂಟಲು ಕತ್ತರಿಸಿ, ಹಲವು ಬಾರಿ ಇರಿದಿದ್ದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕೃತ್ಯ ಎಸಗಿದ ಕೆಲವೇ ಗಂಟೆಗಳಲ್ಲಿ ಪೊಲೀಸರು (Madhya Pradesh Police) ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್ ಬಹುತೇಕ ಮುಳುಗಡೆ
ಕೊಲೆಯಾದ ಮಹಿಳೆಯ ಸಹೋದರಿ ಗಂಭೀರ ಆರೋಪ
ಕೊಲೆಯಾದ ಮಹಿಳೆಯ ಸಹೋದರಿ ಗಂಭೀರ ಆರೋಪ ಮಾಡಿದ್ದಾರೆ. ರಯೀಸ್ ಆಕೆಯ ಕೂದಲನ್ನ ಹಿಡಿದು, ಹಲ್ಲೆ ನಡೆಸುತ್ತಿದ್ದ. ಅಲ್ಲದೇ ಬಹಳ ದಿನಗಳಿಂದ ನನ್ನ ಅಕ್ಕನಿಗೆ ಕಿರುಕುಳ ನೀಡುತ್ತಿದ್ದ, ತನ್ನನ್ನು ಮದುವೆಯಾಗುವಂತೆ ಹಾಗೂ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರುತ್ತಿದ್ದ. ನನ್ನ ಸಹೋದರಿ ನಿರಾಕರಿದಿದ್ದಕ್ಕೆ ಮನೆಗೆ ನುಗ್ಗಿ ಆಕೆಯ ಕುತ್ತಿಗೆ ಸೀಳಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್ ಕೊಟ್ರಾ ಡಿಕೆಶಿ?
ಇನ್ನೂ ಈ ಘಟನೆ ಹಿಂದೂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಮುಖಂಡರು ಇದೊಂದು ಲವ್ ಜಿಹಾದ್ ಪ್ರಕರಣ, ಪೊಲೀಸರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆರೋಪಿಯನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.
– ಬಡವರು, ವಿಧವೆಯರು, ದುರ್ಬಲ ಮನಸ್ಥಿತಿಯ ಯುವತಿಯರೇ ಟಾರ್ಗೆಟ್ – ಮುಸ್ಲಿಂ ರಾಷ್ಟ್ರಗಳಿಂದ 500 ಕೋಟಿ ರೂ. ಫಂಡಿಂಗ್
ಲಕ್ನೋ: ಉತ್ತರ ಪ್ರದೇಶದ ಸ್ವಯಂ ಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ (Chhangur Baba), ಹಿಂದೂ ಯುವತಿಯರಿಗೆ ಬಲೆ ಬೀಸಿ ಲವ್ ಜಿಹಾದ್ (Love Jihad) ನಡೆಸಲು 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಸ್ಫೋಟಕ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಬಡವರು, ವಿಧವೆಯರು ಮತ್ತು ದುರ್ಬಲ ಮನಸ್ಥಿತಿಯ ಮಹಿಳೆಯರನ್ನು ಗುರಿಯಾಗಿರಿಸಿಕೊಂಡು ಮತಾಂತರ ನಡೆಸಲಾಗುತ್ತಿತ್ತು. ಇದಕ್ಕೆ ಕಳೆದ ಮೂರು ವರ್ಷದಲ್ಲಿ ಮುಸ್ಲಿಂ ರಾಷ್ಟ್ರಗಳಿಂದ ಸುಮಾರು 500 ಕೋಟಿ ರೂ. ಪಡೆದಿದ್ದ. ಯುವಕರನ್ನು ಬಳಸಿಕೊಂಡು ಬಡ ಕುಟುಂಬದ ಯುವತಿಯರಿಗೆ, ವಿಧವೆಯರಿಗೆ ಪ್ರೇಮ, ವಿವಾಹ, ಮನೆ ಎಂಬ ಆಸೆಗಳನ್ನು ಒಡ್ಡಿ ಮತಾಂತರಿಸಲಾಗುತ್ತಿತ್ತು. ಇದನ್ನೂ ಓದಿ: ಮಾದಕದ್ರವ್ಯ ಮಾರಾಟ – ಪ್ರಿಯಾಂಕ್ ಖರ್ಗೆ ಆಪ್ತ ಅರೆಸ್ಟ್
ಇನ್ನು ಹಿಂದೂ ಯುವತಿಯರನ್ನು ಮತಾಂತರಿಸಿದ್ದಕ್ಕಾಗಿ ಛಂಗೂರ್ ಬಾಬಾ ಭಾರತ-ನೇಪಾಳ ಗಡಿಯಲ್ಲಿ ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮುಸ್ಲಿಂ ಪುರುಷರಿಗೆ ಹಣ ಪಾವತಿಯನ್ನೂ ಮಾಡಿದ್ದಾನೆ. ಛಂಗೂರ್ ಬಾಬಾ ಜೊತೆಗೆ ಆತನ ಸಹಚರ ನೀತು ಅಲಿಯಾಸ್ ನಸ್ರೀನ್‌ನನ್ನು ಸಹ ಬಂಧಿಸಿ ಏಳು ದಿನಗಳ ಎಟಿಎಸ್ ಕಸ್ಟಡಿಗೆ ಕಳುಹಿಸಲಾಗಿದೆ. ವಿದೇಶದಿಂದ ಬಂದ ಹಣವನ್ನು ನೀತು ನಸ್ರೀನ್ ನಿರ್ವಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ವಿದೇಶಿ ಫಂಡಿಂಗ್ ಪತ್ತೆಹಚ್ಚಲು ಮತ್ತು ಹೆಚ್ಚಿನ ಸಂಪರ್ಕಗಳನ್ನು ಪತ್ತೆಹಚ್ಚುವ ಸಲುವಾಗಿ ಗುಪ್ತಚರ ಬ್ಯೂರೋ (IB) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ನವೀನ್ ಅಲಿಯಾಸ್ ಜಮಾಲುದ್ದೀನ್ ಮತ್ತು ಛಂಗೂರ್ ಬಾಬಾ ಮಗ ಮೆಹಬೂಬ್‌ನನ್ನು ಈಗಾಗಲೇ ಬಂಧಿಸಲಾಗಿದ್ದು, ಲಕ್ನೋ ಜಿಲ್ಲಾ ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?
ಐಎಸ್‌ಐ ಜೊತೆ ನಂಟಿಗೆ ಯತ್ನ:
ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರ ಮತಾಂತರ ಮಾತ್ರವಲ್ಲದೇ ಛಂಗೂರ್ ಬಾಬಾ ನೇಪಾಳಕ್ಕೆ ತೆರಳಿದ್ದು, ಪಾಕ್ ಜೊತೆಗಿನ ಸಂಬಂಧವನ್ನು ಬಲಪಡಿಸಲು ಅಲ್ಲಿನ ಪಾಕ್ ರಾಯಭಾರ ಕಚೇರಿಯಲ್ಲಿ ಸಭೆ ನಡೆಸಿ ಐಎಸ್‌ಐ ಅಧಿಕಾರಿಗಳನ್ನು ಭೇಟಿ ಮಾಡಲು ಯತ್ನಿಸಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ
ಮತಾಂತರಕ್ಕೆ ಕೋಡ್‌ವರ್ಡ್ ಬಳಕೆ:
ಛಂಗೂರ್ ಬಾಬಾ ತಾನು ಮಾಡುತ್ತಿರುವ ಕೃತ್ಯ ಯಾರಿಗೂ ತಿಳಿಯಬಾರದೆಂಬ ಕಾರಣಕ್ಕೆ ಪ್ರತ್ಯೇಕ ಕೋಡ್‌ವರ್ಡ್‌ಗಳನ್ನು ಬಳಸುತ್ತಿದ್ದ. ಪ್ರಾಜೆಕ್ಟ್, ಮಿಟ್ಟಿ ಪಲಟ್ನಾ, ಕಾಜಲ್ ಲಗಾನಾ ಹಾಗೂ ದರ್ಶನ್ ಎಂಬ ಕೋಡ್‌ವರ್ಡ್‌ಗಳ ಮೂಲಕ ಯುವತಿಯರ ಮತಾಂತರ ನಡೆಯುತ್ತಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
ಲಕ್ನೋ: ಆರ್ಥಿಕ ನೆರವು, ವಿವಾಹ ಸೇರಿದಂತೆ ಹತ್ತು ಹಲವು ಭರವಸೆಗಳನ್ನ ಹಿಂದೂಗಳನ್ನ ಇಸ್ಲಾಂಗೆ ಮತಾಂತರ ಮಾಡುತ್ತಿದ್ದ ಧಾರ್ಮಿಕ ಮತಾಂತರ ತಂಡದ (Religious Conversion Gang) ಮಾಸ್ಟರ್ ಮೈಂಡ್ ಮತ್ತು ಆತನ ಸಹಾಯಕನನ್ನ ಉತ್ತರ ಪ್ರದೇಶ ಪೊಲೀಸರ (Uttar Pradesh Police) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಜಲಾಲುದ್ದೀನ್ ವಿರುದ್ಧ ಉತ್ತರ ಪ್ರದೇಶ ಕೋರ್ಟ್ (UP Court) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಬೆನ್ನಲ್ಲೇ ಆತನ ಸುಳಿವು ನೀಡಿದವರಿಗೆ ಯುಪಿ ಪೊಲೀಸರು 50,000 ರೂ. ನಗದು ಬಹುಮಾನ ಘೋಷಿಸಿದ್ದರು ಎಂದು ವರದಿಗಳು ತಿಳಿಸಿವೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಲಕ್ನೋ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಬಿಎನ್‌ಎಸ್ ಹಾಗೂ ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ, 2021ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಹಿಂದೂ ಮತ್ತು ಇತರ ಮುಸ್ಲಿಮೇತರ ಸಮುದಾಯದ ಜನರನ್ನು ಇಸ್ಲಾಂಗೆ ಮತಾಂತರ ಮಾಡಲು ಸಂಘಟಿತವಾಗಿ ಕೆಲಸ ಮಾಡುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್ ಕಡ್ಡಾಯ
ಮುಖ್ಯವಾಗಿ ಬಡವರು, ಅಸಹಾಯಕ ಕಾರ್ಮಿಕರು, ದುರ್ಬಲ ವರ್ಗದವರು ಮತ್ತು ವಿಧವೆಯರಿಗೆ ಪ್ರೋತ್ಸಾಹ ಧನ, ಆರ್ಥಿಕ ನೆರವು ಹಾಗೂ ವಿವಾಹದ ಭರವಸೆ ನೀಡಿ ಮತಾಂತರಗೊಳಿಸುತ್ತಿದ್ದರು. ಅದು ಸಾಧ್ಯವಾಗದೇ ಇದ್ದಾಗ ಬೆದರಿಸಿ ಬಲವಂತವಾಗಿ ಮತಾಂತರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದು ಮತಾಂತರದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಲಾಗಿದೆ.
ಚಿತ್ರದುರ್ಗ: ವಿವಿಧ ಆಮಿಷವೊಡ್ಡಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು (Conversion) ಯತ್ನಿಸುತಿದ್ದಾರೆಂಬ ಆರೋಪದಡಿ ಇಬ್ಬರು ಆರೋಪಿಗಳನ್ನು ಚಿತ್ರದುರ್ಗ (Chitradurga) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಪ್ರಶಾಂತ ನಗರದ ಮನೆಯೊಂದರಲ್ಲಿ ಸಭೆ ನಡೆಸಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ನೋವುಂಟು ಮಾಡುವ ಮಾತನ್ನು ಆಡುತ್ತಿದ್ದು, ವಿವಿಧ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸಿದ್ದಾರೆಂದು ದೀಪಕ್ ರಾಜ್ ಎಂಬವರು ದೂರು ನೀಡಿದ್ದರು. ಇದನ್ನೂ ಓದಿ: ಇರಾನ್‌ನಿಂದ ಖಂಡಾಂತರ ಕ್ಷಿಪಣಿ ದಾಳಿ – ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಉಡೀಸ್
ದೂರಿನ ಆಧಾರದ ಮೇರೆಗೆ ದಾಳಿ ನಡೆಸಿದ ಪೊಲೀಸರು, ಧನಂಜಯ್ (35), ಜೋಶೆವಾ ಇಸ್ರೇಲ್ (20) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 38 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಆರೋಪಿ ಅರೆಸ್ಟ್
- ಯಾರಾದ್ರೂ ಮತಾಂತರ ಆಗಬೇಕು ಅಂದ್ರೆ ಪ್ರೀತಿಯಿಂದ ಕರೀರಿ
– ನಮ್ಮ ಹೆಣ್ಮಕ್ಕಳಿಗೆ ಗಂಡು ಮಕ್ಕಳ ಪಕ್ಕ ಕೂರಬೇಡಿ ಅಂದಿಲ್ಲ; ಚಿಂತಕ
ಮಂಗಳೂರು: ಇತ್ತೀಚೆಗಷ್ಟೇ ʻಹಿಂದೂ ಯುವಕರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿʼ ಎಂದು ಕರೆ ನೀಡಿ ವಿವಾದಕ್ಕೀಡಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹಿಂದೂಗಳು ಮತಾಂತರ (Conversion) ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.
ಇತ್ತೀಚೆಗೆ ಬಜರಂಗದಳದವರು (Bajrang Dal) ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ತೇವೆ ಅಂತ ಹೇಳಿದ್ರು. ಆದ್ರೆ ನಮ್ಮ ಜನ 2-3 ಮಕ್ಕಳನ್ನ ಮಾಡ್ತಾರೇನ್ರೀ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಅಂತ ಕರೆ ಕೊಟ್ಟಿದ್ದಾರೆ.
ಪೊಲೀಸರಿಗೂ ಹೇಳ್ತಾ ಇದೀನಿ, ಇದು ಸರ್ಕಾರ ಕೊಟ್ಟಿರೋ ಕಾನೂನು, ನಮ್ಮದಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್ ದಾಖಲು
ಮತಾಂತರ ಮಾಡೋದು ಕಷ್ಟ ಏನಿಲ್ಲ, ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ, ಆದರೆ ಅವರಿಗೆಲ್ಲಾ ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು, ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಬೇಡಿಕೆ
ಹಾಗಾಗಿ ಅವರಿಗೆ ಹೇಳಿ, ಒಂದೇ ದೇವರು ಒಳ್ಳೆಯದೋ ಅಥವಾ 33 ಕೋಟಿ ದೇವರು ಒಳ್ಳೆಯದೋ? ಅಂಥ. ಮಿತ್ರರೇ ಅವರು ಬಂದು ಹೇಳ್ತಾರೆ, ನಮ್ಮದೊಂದೇ ಪುಸ್ತಕ, ನಿಮ್ಮತ್ರ ಬಹಳ ಪುಸ್ತಕ ಇದೆ ಅಂತ. ಆಗ ನೀವು ಹೇಳಿ, ನಮ್ಮತ್ರ ಲೈಬ್ರಿರಿ ಇದೆ, ಯಾವುದೋ ಒಂದು ಪುಸ್ತಕ ಸುಡೋದ್ರಿಂದ ಹಿಂದೂ ಧರ್ಮ ಸಾಯಲ್ಲ. ನಿಮ್ಮ ಮತ-ಪಂಥಗಳಲ್ಲಿ ಹೆಣ್ಮಕ್ಕಳಿಗೆ ಗೌರವ ಇಲ್ಲ ಅಂತ ಅವರಿಗೆ ಹೇಳಿ. ಇಲ್ಲಿರೋ ಹೆಣ್ಮಕ್ಕಳಿಗೆ ಮುಖ ಮುಚ್ಚಿಕೊಳ್ಳಿ ಅಂತ ಹೇಳಿಲ್ಲ, ಗಂಡು ಮಕ್ಕಳ ಪಕ್ಕದಲ್ಲಿ ಕೂರಬೇಡಿ ಅಂತ ಹೇಳಿಲ್ಲ. ಬರೋರಿಗೆ ಬನ್ನಿ ಅಂತ ಹೇಳಿ, ಬರುವವರನ್ನು ಮುಕ್ತ ಕಂಠದಿಂದ ಸ್ವಾಗತಿಸಿ, ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ, ನಮ್ಮ ಹೃದಯ ಸ್ವಲ್ಪ ವಿಶಾಲ ಆಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.
ಸೇವೆ ಮಾಡೋದು ನಿಮ್ಮ ಸಮಾಜ ಮಾತ್ರ ಅಲ್ಲ, ನಮ್ಮ ಸಮಾಜ ಮಾಡೋ ಸೇವೆ ಯಾವ ಧರ್ಮ ಮಾಡಿದೆ? ಇಂಥ ಸೇವೆ ಮಾಡೋ ಸಮಾಜ ಮತ್ತೊಂದಿಲ್ಲ ಅಂತ ಹೇಳಿ ನಮ್ಮ ಸಮಾಜಕ್ಕೆ ಕರೆಯಿರಿ. ನಮ್ಮ ಸಮಾಜದ ಎಲ್ಲಾ ಪ್ರಮುಖರು ಈ ಬಗ್ಗೆ ಒಂದು ಘೋಷಣೆ ಹೊರಡಿಸಿ. ಯಾರಾದರೂ ನಮಗೆ ಮತಾಂತರ ಆಗಬೇಕು ಅಂದ್ರೆ ನಮ್ಮ ಸಮಾಜ ಅವರನ್ನ ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಅಂತ ಕರೀರಿ. ಸಮಾಜದ ಸ್ವಾಮೀಜಿಗಳ ಮೂಲಕ ಘೋಷಣೆ ಕೊಡಲಿ, ಯಾರಾದ್ರೂ ಬರ್ತೀರ ಅಂತಾದರೆ ಜಾತಿ ಕೇಳದೇ ಕರೆಯಿರಿ, ನೀವು ಒಂದು ಸಲ ಮುಕ್ತ ಕಂಠದಿಂದ ಕರೀರಿ, ಎಷ್ಟು ಜನ ಸೈಲೆಂಟಾಗಿ ಸೇರಿಕೊಳ್ತಾರೆ ನೋಡಿ ಎಂದು ಬಹಿರಂಗವಾಗಿಯೇ ಮತಾಂತರಕ್ಕೆ ಕರೆ ಕೊಟ್ಟಿದ್ದಾರೆ.
ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮುಂದಿನ ಪೀಳಿಗೆಗೆ ಭಾರತ ಬಿಟ್ಟು ಕೊಟ್ಟು ಹೋಗುವಾಗ ಅದಕ್ಕೆ ಸ್ವಲ್ಪ ಪಾಕಿಸ್ತಾನ, ಬಾಂಗ್ಲಾದೇಶ, ಅಗತ್ಯ ಬಿದ್ದರೆ ನೇಪಾಳವನ್ನೂ ಸೇರಿಸೋಣ ಎಂದು ಹೇಳಿದ್ದಾರೆ.