Tag: ಮತಾಂತರ ನಿಷೇಧ ಮಸೂದೆ

  • ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ, ಮತಾಂತರ ಮಸೂದೆ ತೆಗೆಯಲಾಗಲ್ಲ: ಸುಧಾಕರ್

    ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ, ಮತಾಂತರ ಮಸೂದೆ ತೆಗೆಯಲಾಗಲ್ಲ: ಸುಧಾಕರ್

    ಬೆಂಗಳೂರು: ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ. ಮತಾಂತರ ನಿಷೇಧ ಮಸೂದೆ ರದ್ದುಗೊಳಿಸಲು ಆಗುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ವ್ಯಂಗ್ಯವಾಡಿದ್ದಾರೆ.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ. ಮೊದಲ ಅಧಿವೇಶನದಲ್ಲೇ ಮಸೂದೆ ಹಿಂಪಡೆದು ಎಸೆಯುತ್ತೇವೆ ಎಂದು ಸೋಮವಾರ ಹೇಳಿದ್ದರು.

    ಇದೀಗ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸುಧಾಕರ್, ಅವರು ಅಧಿಕಾರಕ್ಕೆ ಬರಲ್ಲ, ಅದಾಗಲ್ಲ ಅದಕ್ಕೇ ಹಾಗೇ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

    ನೈಟ್ ಕರ್ಫ್ಯೂ ವಿಚಾರವಾಗಿ ಹತ್ತು ದಿನಗಳವರೆಗೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಇದರ ಪಾಲನೆ ಒಳ್ಳೆ ರೀತಿಯಲ್ಲಿ ಆಗಬೇಕು. ಜನರು ಸಹಕಾರ ಕೊಡಬೇಕು. ಹತ್ತು ದಿನಗಳ ಕಾಲ ಪರಿಸ್ಥಿತಿ ಗಮನಿಸುತ್ತೇವೆ. ನಂತರ ಸಿಎಂ, ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಇನ್ನೂ ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರವಾಗಿ ಎಲ್ಲ ಸಾಧಕ, ಬಾಧಕ ನೋಡಿಕೊಂಡೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪದೇ, ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಎರಡನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿತ್ತು. ಯಾಕೆ ಲಾಕ್‍ಡೌನ್ ಆಗಿತ್ತು ಎಂದು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

    ಇದೇ ವೇಳೆ 15-18 ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಗೆ ಕೇಂದ್ರ ಸೂಚನೆ ನೀಡಿದೆ. ನಮ್ಮಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಗತ್ಯದಷ್ಟು ಸಂಗ್ರಹ ಇಲ್ಲ. ಕೇಂದ್ರದ ಎದುರು ಕೋವ್ಯಾಕ್ಸಿನ್‍ಗೆ ಬೇಡಿಕೆ ಇಡುತ್ತೇವೆ. ಕೇಂದ್ರದಿಂದ ಕೋವ್ಯಾಕ್ಸಿನ್ ಸರಾಗವಾಗಿ ಪೂರೈಕೆ ಆಗುವ ವಿಶ್ವಾಸ ಇದೆ. 43 ಲಕ್ಷ ಮಕ್ಕಳಿಗೆ ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುತ್ತದೆ. ಜನವರಿ 3 ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬುಕ್ ಮಾಡಿದ್ದು 1 ಲಕ್ಷ ರೂ. ಐಫೋನ್ ಆದ್ರೆ ಬಂದಿದ್ದು ಚಾಕೊಲೇಟ್

    ಹುಬ್ಬಳ್ಳಿಯಲ್ಲಿ ಎರಡು ದಿನ ಸಭೆ ಇದೆ. ಈ ಸಭೇಯಲ್ಲಿ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಭಾಗವಹಿಸುತ್ತಾರೆ. ಮುಂಬರುವ ಸಾರ್ವತ್ರಿಕ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಬಿಬಿಎಂಪಿ ಚುನಾವಣೆ, ಪರಿಷತ್ ಫಲಿತಾಂಶಗಳ ಬಗ್ಗೆ ಚರ್ಚೆ ನಡೆಯುತ್ತದೆ ಎಂದಿದ್ದಾರೆ.

  • ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ

    ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ

    ಬೆಂಗಳೂರು: ಕರ್ನಾಟಕ ಸರ್ಕಾರವು ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನ ವಿರೋಧಿಯು ಮತ್ತು ಸರ್ಕಾರಿ ಪ್ರಾಯೋಜಿತ ಭಯೋತ್ಪಾದಕ ಕೃತ್ಯವೂ ಆಗಿದೆ ಎಂಬ ನಿಲುವನ್ನು ಎಸ್‍ಡಿಪಿಐ ಈಗಾಗಲೇ ಪ್ರಕಟಿಸಿದ್ದು, ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧರಿಸಿದೆ.

    ಈ ಬಗ್ಗೆ ಧ್ವನಿ ಎತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ಘನತೆವೆತ್ತ ರಾಜ್ಯಪಾಲರು ಈ ಮಸೂದೆಯನ್ನು ತಿರಸ್ಕರಿಸಬೇಕು ಎಂಬ ಒತ್ತಾಯದ ಮನವಿಗಳನ್ನು ರಾಜ್ಯದಾದ್ಯಂತ ನಡೆಸಲಾದ ಪ್ರತಿಭಟನೆಗಳ ಮೂಲಕ ಸಲ್ಲಿಸಲಾಗಿದೆ. ಯುವಜನರ ಧರ್ಮಾಂತರದ ವೈವಾಹಿಕ ಜೀವನದ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿಯುವ ಮತ್ತು ಭಾರತದ ಪ್ರತಿಯೊಬ್ಬ ಪ್ರಜೆಯ ಧಾರ್ಮಿಕ ಹಕ್ಕು ಮತ್ತು ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಮತ್ತು ಇನ್ನೂ ಹತ್ತು ಹಲವು ಒತ್ತಾಯಗಳು ಮತ್ತು ಹೇರಿಕೆಗಳ ಮೂಲಕ ಜನತೆಯಲ್ಲಿ ಆತಂಕ ಮತ್ತು ಅಭದ್ರತೆಯ ವಾತಾವರಣ ಸೃಷ್ಟಿಸಲು ಕಾರಣವಾಗಿರುವ ಮತಾಂತರ ನಿಷೇಧ ಎಂಬ ಭಯೋತ್ಪಾದಕ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ, ಎಸ್‍ಡಿಪಿಐ ನಾಡಿನ ಸರ್ವ ಜನರ ಹಿತದೃಷ್ಟಿಯಿಂದ ಘನ ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲು ಎಸ್‍ಡಿಪಿಐ ತೀರ್ಮಾನಿಸಿದೆ ಎಂದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

    ಮತಾಂತರ ನಿಷೇಧ ಕಾಯ್ದೆಯು ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಬಂದಾಗ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಕುಂಟು ನೆಪಗಳನ್ನು ಹೇಳದೇ, ಸಭೆಯನ್ನು ಬಹಿಷ್ಕರಿಸದೇ, ತನ್ನ ಎಲ್ಲಾ ಸದಸ್ಯರಿಗೂ ವಿಪ್ ಜಾರಿಗೊಳಿಸಿ ಮತಾಂತರ ನಿಷೇಧ ಕಾಯ್ದೆಯ ಚರ್ಚೆಯಲ್ಲಿ ಕಡ್ಡಾಯವಾಗಿ ಬಾಗವಹಿಸುವಂತೆ ನೋಡಿಕೊಳ್ಳಬೇಕು. ವಿಧಾನಸಭೆಯಲ್ಲಿ ಸದರಿ ಮಸೂದೆಯ ಕರಡನ್ನು ಮಂಡಿಸಿದಾಗ ಕಾಂಗ್ರೆಸ್‍ನ ಪ್ರಮುಖ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಹಾಜರಿರದೆ ಮಸೂದೆಯು ಮಂಡನೆಯಾದ ಮೇಲೆ ತಡವಾಗಿ ಸಭೆಗೆ ಆಗಮಿಸಿ, ನಮ್ಮಿಂದ ಮಸೂದೆಯನ್ನು ಮುಚ್ಚಿಟ್ಟು, ಚರ್ಚೆಗೆ ಅವಕಾಶ ನೀಡದೇ ಮಸೂದೆಯನ್ನು ಮಂಡಿಸಲಾಗಿದೆ ಎಂದು ತಕರಾರು ತೆಗೆದು ಮಾತನಾಡಿರುವ ಬಗ್ಗೆ ಎಸ್‍ಡಿಪಿಐ ಗಮನಿಸಿದೆ. ಇದು ತಪ್ಪು ಎಂದು ಅಭಿಪ್ರಯಾಪಟ್ಟಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    ಸಭೆಗೆ ಸರಿಯಾದ ಸಮಯಕ್ಕೆ ಆಗಮಿಸಿ ಕರಡು ಮಂಡನೆಯಾಗದಂತೆ ನೋಡಿಕೊಳ್ಳಬೇಕಾಗಿದ್ದು ವಿರೋಧ ಪಕ್ಷಗಳ ಜವಾಬ್ದಾರಿ ಆಗಿತ್ತು. ಈಗಲಾದರೂ ಮಸೂದೆಯು ವಿಧಾನ ಪರಿಷತ್ತಿಗೆ ಚರ್ಚೆಗೆ ಬಂದಾಗ, ಯಾವ ನೆಪವನ್ನೂ ಹೇಳದೇ ವಿರೋಧ ಪಕ್ಷದ ಸರ್ವ ಸದಸ್ಯರು ಖುದ್ದು ಹಾಜರಿದ್ದು ಮಸೂದೆಯನ್ನು ವಿರೋಧಿಸಿ, ಪರಿಷತ್ತಿನಲ್ಲಿ ತಿರಸ್ಕಾರವಾಗುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

  • ಹೆಬ್ಬೆಟ್ಟಿನ ಜನ ಕೂಡ ಮತ್ತೊಬ್ಬರ ಬಳಿ ಕೇಳಿ ಹೆಬ್ಬೆಟ್ಟು ಒತ್ತುತ್ತಾರೆ – ಸಿದ್ದು ವಿರುದ್ಧ ಸಿ.ಟಿ.ರವಿ ವ್ಯಂಗ್ಯ

    ಹೆಬ್ಬೆಟ್ಟಿನ ಜನ ಕೂಡ ಮತ್ತೊಬ್ಬರ ಬಳಿ ಕೇಳಿ ಹೆಬ್ಬೆಟ್ಟು ಒತ್ತುತ್ತಾರೆ – ಸಿದ್ದು ವಿರುದ್ಧ ಸಿ.ಟಿ.ರವಿ ವ್ಯಂಗ್ಯ

    ಚಿಕ್ಕಮಗಳೂರು: ಓದು, ಬರಹ ಬರದ ಹೆಬ್ಬೆಟ್ಟಿನ ಜನ ಕೂಡ ಮತ್ತೊಬ್ಬರ ಬಳಿ ಕೇಳಿ ಹೆಬ್ಬೆಟ್ಟು ಒತ್ತುತ್ತಾರೆ. ಅವರಿಗಾದರೂ ಸ್ವಲ್ಪ ತಿಳುವಳಿಕೆ ಇರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇವರದ್ದು ಬರೀ ನಾಟಕ. 2016ರಲ್ಲಿ ಮತಾಂತರ ಡ್ರಾಮಾಗೆ ಸಹಿ ಹಾಕಿ, ನಾನು ಸಹಿ ಹಾಕಿಲ್ಲ ಅಂತಾರೆ. ಆಮೇಲೆ ತೋರಿಸಿ ಎನ್ನುತ್ತಾರೆ. ತೋರಿಸಿದ ಮೇಲೆ ಗೊತ್ತಿಲ್ಲದೆ ಸಹಿ ಹಾಕಿದ್ದೇನೆ ಅಂತಾರೆ. ಇದು ಇವರ ರಾಜಕೀಯ ನಾಟಕ. ಕಾಂಗ್ರೆಸ್ ಚುಲಾವಣೆಯಲ್ಲಿ ಇಲ್ಲದ ಸವಕಲು ನಾಣ್ಯ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

    ಇದೇ ವೇಳೆ ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ನಡೆದರೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸೋನಿಯಾಗಾಂಧಿ, ಪರಮೇಶ್ವರ್ ಯಾರ ನಾಯಕತ್ವದಲ್ಲಿ ಬೇಕಾದರೂ ಎಲೆಕ್ಷನ್ ಮಾಡಲಿ. ಅವರೇನು ಅಧಿಕಾರಕ್ಕೆ ಬರಲ್ಲ ಎಂದು ಕಾಂಗ್ರೆಸ್ ಕುರಿತು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

    ಕಾಂಗ್ರೆಸ್ ನಿಲುವು ಏನೆಂದು ನಾವು ವಿಧಾನಸಭೆ ಅಧಿವೇಶನದಲ್ಲಿಯೇ ನೋಡಿದ್ದೇವೆ. ಅವರ ನಿಲುವುಗಳೇ ಕಾಂಗ್ರೆಸ್ ಪಕ್ಷಕ್ಕೆ ಮಾರಕವಾಗಿವೆ. ಅವರ ತತ್ವ-ನಿಲುವುಗಳು ಜನಹಿತಕ್ಕೆ ಮಾರಕವಾಗಿದೆ. ಅದಕ್ಕೆ ಕಾಂಗ್ರೆಸ್ ಸೋಲುತ್ತಿದೆ. ಅವರದ್ದು ಓಲೈಕೆ ರಾಜನೀತಿ ಅದಕ್ಕೆ ಅವರು ವಿಫಲರಾಗುತ್ತಾರೆ. ಅದನ್ನು ಬಿಟ್ಟಿರೇ ಮತ್ತೇನೂ ಇಲ್ಲ ಎಂದು ತತ್ವ-ನಿಲುವುಗಳನ್ನ ಬದಲಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

  • ಬಸವರಾಜ ಬೊಮ್ಮಾಯಿ ಕೋಮುವಾದಿ ಸಿಎಂ: ನಟ ಚೇತನ್

    ಬಸವರಾಜ ಬೊಮ್ಮಾಯಿ ಕೋಮುವಾದಿ ಸಿಎಂ: ನಟ ಚೇತನ್

    ದಾವಣಗೆರೆ: ಬಸವರಾಜ ಬೊಮ್ಮಾಯಿ ಒಬ್ಬ ಕೋಮುವಾದಿ ಸಿಎಂ, ಯಾವ ಸಿಎಂ ಕೂಡ ಇಷ್ಟು ಕೋಮುವಾದಿಯಾಗಿರಲಿಲ್ಲ. ಇವರಲ್ಲಿ ಎಲ್ಲರಿಗಿಂತ ಹೆಚ್ಚು ಕೋಮುವಾದ ಇದೆ ಎಂದು ನಟ ಚೇತನ್ ಅಹಿಂಸಾ ಕಿಡಿಕಾರಿದರು.

    basavaraj bommai

    ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವದಾಸಿಗಳು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇದನ್ನು ನೋಡುವಷ್ಟು ತಾಳ್ಮೆ ರಾಜಕಾರಣಿಗೆ ಇಲ್ಲ. ಸಿಎಂ ಬೊಮ್ಮಾಯಿ ಒಬ್ಬ ಕೋಮುವಾದಿ ಸಿಎಂ. ಯಾವ ಸಿಎಂ ಕೂಡ ಇಷ್ಟು ಕೋಮುವಾದಿಯಾಗಿರಲಿಲ್ಲ. ಇವರಲ್ಲಿ ಎಲ್ಲರಿಗಿಂತ ಹೆಚ್ಚು ಕೋಮುವಾದ ಇದೆ. ಅವರ ತಂದೆ ಒಳ್ಳೆಯ ಪ್ರಗತಿಪರ ಸಿಎಂ ಆಗಿದ್ದರು. ಮತಾಂತರ ನಿಷೇಧ ಕಾಯ್ದೆ ಸಂವಿಧಾನದ ವಿರೋಧ ನೀತಿ. ಅಂಬೇಡ್ಕರ್, ಬಸವಣ್ಣನವರು ಕೂಡ ಅವರಿಗೆ ಬೇಕಾದ ಧರ್ಮ ಸ್ಥಾಪನೆ ಮಾಡಿದ್ದಾರೆ. ಜನರು ಅವರಿಗೆ ಬೇಕಾದ ಧರ್ಮಕ್ಕೆ ಸೇರಬಹುದು ಎನ್ನುವುದು ಸಂವಿಧಾನದಲ್ಲಿದೆ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದರೆ ಕ್ರಮ ಕೈಗೊಳ್ಳಲಿ. ಜನರಿಗೆ ಹೆದರಿಸಿ, ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ. ಅಲ್ಪಸಂಖ್ಯಾತ, ಕ್ರಿಸ್ಚಿಯನ್‍ರ ಮೇಲೆ ದಬ್ಬಾಳಿಕೆ ಮಾಡಿ ಕಾಯ್ದೆ ತರುವಂತಾಗಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನು ತೆರೆಯುವಂತೆ ಕೇಳುತ್ತಿರುವುದು ಬೇಸರದ ವಿಚಾರ. ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಚಿದ್ರ ಮಾಡುವುದು ಸ್ವಾಮೀಜಿಗಳ ಉದ್ದೇಶವೆ? ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳಿದ್ದರು. ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡೀ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

  • ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

    ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

    ಬೆಂಗಳೂರು: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹರಡಿಸುತ್ತಾರೆ.  ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿಎಂಗೆ ಯಾವುದೇ ಅನಾರೋಗ್ಯ ಇಲ್ಲ, ಕಾಲು ನೋವು ಮಾತ್ರ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೊಮ್ಮಾಯಿ ಅವರು ವಿದೇಶಕ್ಕೂ ಹೋಗಲ್ಲ, ಅವರ ಕಾಲಿನ ಸಮಸ್ಯೆಗೆ ಇಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ

    ಇದೇ ವೇಳೆ ಸಚಿವ ಸಂಪುಟ ಪುನರ್ ರಚನೆ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟ ವಿಚಾರ. ಒಂದು ವೇಳೆ ಪುನರ್ ರಚನೆ ಆಗುವುದಾದರೆ ನಮ್ಮ ಜೊತೆ ಚರ್ಚೆ ಮಾಡುತ್ತಾರೆ. ಮರುದಿನ ಅದರ ಬಗ್ಗೆ ನಿಮಗೆ ತಿಳಿಸುತ್ತೇನೆ ಎಂದರು.  ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

    ಮತಾಂತರದಿಂದ ಸಾಮಾಜಿಕ ಕಲಹ ಆಗುತ್ತಿತ್ತು. ಅದಕ್ಕೆ ತಡೆಯೊಡ್ಡಲು ಕಾಯ್ದೆ ಜಾರಿ ಮಾಡಲಾಗಿದೆ. ಬಡತನ, ನಿರುದ್ಯೋಗದಿಂದ ನಗರದಲ್ಲಿ ಇದ್ದ ಮತಾಂತರ ಹಳ್ಳಿಗೂ ವ್ಯಾಪಿಸಿದೆ. ಹಾಗಾಗಿ ಬೊಮ್ಮಾಯಿ ಒಳ್ಳೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ವಿರೋಧ ಮಾಡುವುದು ಸಹಜ. ಸಿದ್ದರಾಮಣ್ಣನೇ ಮತಾಂತರ ನಿಷೇಧ ಕಾಯ್ದೆಗೆ ಸಹಿ ಹಾಕಿದ್ದಾರೆ. ಅಧಿಕಾರ ಇದ್ದಾಗ ಒಂದು, ಇಲ್ಲದಾಗ ಒಂದು. ಅವರಿಗೆ ಮರೆವು. ಅರಳು, ಮರಳು ಇಲ್ಲಿ ಬಂದು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಶಾಸಕರೇ ನಾವು ತಂದ ಕಾಯ್ದೆ ಪರವಾಗಿದ್ದಾರೆ ಎಂದು ಟಾಂಗ್ ನೀಡಿದರು.

  • ಪರಿಷತ್‌ನಲ್ಲಿ ಜನವರಿಗೆ ಮತಾಂತರ ನಿಷೇಧ ಮಸೂದೆ ಮಂಡನೆ: ಕೋಟ ಶ್ರೀನಿವಾಸ ಪೂಜಾರಿ

    ಪರಿಷತ್‌ನಲ್ಲಿ ಜನವರಿಗೆ ಮತಾಂತರ ನಿಷೇಧ ಮಸೂದೆ ಮಂಡನೆ: ಕೋಟ ಶ್ರೀನಿವಾಸ ಪೂಜಾರಿ

    ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಇಂದು ಮಂಡಿಸುವ ನಿರ್ಧಾರದಿಂದ ಬಿಜೆಪಿ ಹಿಂದೆ ಸರಿದಿದೆ. ಪ್ರತಿಪಕ್ಷಗಳ ವಿರೋಧದಿಂದಾಗಿ ಕಾದು ನೋಡುವ ತಂತ್ರ ಅನುಸರಿಸಿದ್ದ ಬಿಜೆಪಿ ಸರ್ಕಾರ ಮಸೂದೆ ಮಂಡನೆ ದಿನವನ್ನು ಮುಂದೂಡಿದೆ.

    ವಿಧಾನಸಭೆಯಲ್ಲಿ ಬಹುಮತದ ಆಧಾರದಲ್ಲಿ ಅಂಗೀಕಾರ ಆಗಿದೆ. ಆದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಮತಾಂತರ ನಿಷೇಧ ಮಸೂದೆ ಮಂಡನೆಗೆ ಮೀನಾಮೇಷ ಎಣಿಸುತ್ತಿದೆ. ಇಂದು ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ನಿಲುವು ಬದಲಿಸಲಾಗಿದೆ. ಮಸೂದೆಯನ್ನು ಜನವರಿಯಲ್ಲಿ ಮಂಡಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ

    ಇಂದು ಕಲಾಪದಲ್ಲಿ ಬಿಜೆಪಿಯ 30 ಸದಸ್ಯರು ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ 26 ಸದಸ್ಯರು ಉಪಸ್ಥಿತರಿದ್ದರು. ಮತಾಂತರ ನಿಷೇಧ ಮಸೂದೆ ಮಂಡನೆ ವಿಚಾರವಾಗಿ ಇಂದು ಪರಿಷತ್‌ನಲ್ಲಿ ಹೈಡ್ರಾಮಾ ನಡೆಯಿತು. ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ವಾಗ್ವಾದ ಏರ್ಪಟ್ಟಿತು.

    ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ, ನಾಳೆ ಬಿಲ್ ಮಂಡಿಸಿ. ಇವತ್ತೇ ಮಂಡಿಸಿ ಮಾಡಬೇಕಾದದ್ದೇನೂ ಇಲ್ಲ. ನಮ್ಮ ಕೆಲ ಸದಸ್ಯರು ಬರುವವರಿದ್ದಾರೆ. ನಾಳೆಯೇ ಅವಧಿ ಮುಗಿದವರ ವಿದಾಯ ಭಾಷಣಕ್ಕೆ ಅವಕಾಶ ಕೊಡಿ. ಕಲಾಪ ನಾಳೆಗೆ ಮುಂದೂಡುವಂತೆ ಮನವಿ ಮಾಡಿದರು. ಆದರೂ ಮಸೂದೆ ಮಂಡನೆ ವಿಚಾರವಾಗಿ ಗೊಂದಲ ಇದ್ದಿದ್ದರಿಂದ ಮುಂದೂಡಲಾಯಿತು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

  • ವಿಧಾನ ಪರಿಷತ್‌ನಲ್ಲಿ ಇಂದು ಮತಾಂತರ ನಿಷೇಧ ಮಸೂದೆ ಮಂಡನೆ?

    ವಿಧಾನ ಪರಿಷತ್‌ನಲ್ಲಿ ಇಂದು ಮತಾಂತರ ನಿಷೇಧ ಮಸೂದೆ ಮಂಡನೆ?

    ಬೆಳಗಾವಿ: ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿರುವ ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್‌ ಇಂದು ಮಂಡನೆಯಾಗುವ ಸಾಧ್ಯತೆ ಇದೆ.

    ವಿಧಾನ ಪರಿಷತ್‌ನಲ್ಲಿ ದೊಡ್ಡ ಹೈಡ್ರಾಮಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರತಿಪಕ್ಷಗಳ ಪ್ರಬಲ ವಿರೋಧವಿದ್ದರೂ ಬಹುಮತದ ಆಧಾರದ ಮೇಲೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಆದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಇಲ್ಲ. ಮಸೂದೆ ವಿರುದ್ಧ ಧ್ವನಿಯೆತ್ತಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು, ಮಸೂದೆ ಮತಕ್ಕೆ ಹಾಕಿದಾಗ ಸೋಲಿಸಲು ಯೋಜನೆ ರೂಪಿಸಿವೆ. ಪ್ರತಿಪಕ್ಷಗಳ ಅಸ್ತ್ರಕ್ಕೆ ಬಿಜೆಪಿಯಿಂದಲೂ ಪ್ರತಿ ಅಸ್ತ್ರ ಪ್ರಯೋಗಿಸಲು ತಂತ್ರ ರೂಪಿಸಲಾಗಿದೆ. ಇದನ್ನೂ ಓದಿ: ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ

    ಇಂದು ಮಸೂದೆಯನ್ನು ಕೇವಲ ಮಂಡಿಸುವುದಕ್ಕಷ್ಟೇ ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಮಸೂದೆ ಮೇಲಿನ ಚರ್ಚೆ, ಅಂಗೀಕಾರ ಕಸರತ್ತಿಗೆ ಕೈಹಾಕಿಲ್ಲ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

  • ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

    ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

    ಚಿಕ್ಕಮಗಳೂರು: ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

    ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಜಾತಿ, ಧರ್ಮಗಳನ್ನ ಪ್ರೀತಿಸುವವನೇ ನಿಜವಾದ ಹಿಂದೂ. ಜಾತಿ-ಧರ್ಮಗಳನ್ನು ಕಟ್ಟುವಾಗ ಮತ್ತೊಂದು ಜಾತಿ-ಧರ್ಮದ ವಿರುದ್ಧ ಕಟ್ಟುವುದಿಲ್ಲ ಎಲ್ಲರನ್ನು ಪ್ರೀತಿ ಮಾಡಬೇಕು ಎಂಬ ನಿಟ್ಟಿನಲ್ಲಿ ಕಟ್ಟಲಾಗುತ್ತದೆ. ಯಾವುದೇ ಜಾತಿ, ಧರ್ಮ ಅಂದರೆ ಅದು ತಾಯಿ ಇದ್ದಂತೆ ಆಯಾಯ ಧರ್ಮದವರಿಗೆ ಅವರ ಧರ್ಮ, ಜಾತಿಯೇ ತಾಯಿ. ಇದು ಬಿಜೆಪಿಯವರಿಗೆ ಅರ್ಥವಾಗಬೇಕು ಎಂದು ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:  ವಿಗ್ ಒಳಗಡೆ ಡಿವೈಸ್ – ಪೊಲೀಸ್ ಪರೀಕ್ಷೆಯ ವೇಳೇ ಸಿಕ್ಕಿ ಬಿದ್ದ ಭೂಪ

    ಮತಾಂತರ ಕಾಯ್ದೆಯ ಕಡತಕ್ಕೆ ಸಿದ್ದರಾಮಯ್ಯ ಸಹಿ ಹಾಕಿದ್ದರು ಎಂಬ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸಹಿ ಹಾಕಿದ್ದರೆ ಅದರಲ್ಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಯೋಚಿಸಿರುವುದಿಲ್ಲ. ಬಿಜೆಪಿಯವರು ವಿಧಾನಸೌಧದಲ್ಲಿ ಬಾಯಿ ಬಡಿದುಕೊಳ್ಳಬೇಕು ಅಷ್ಟೇ. ಆದರೆ ವಿಷಯ ಏನು ಎಂಬುದನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ನೆಪವಾಗಿ ಇಟ್ಟುಕೊಂಡಿದ್ದಾರೆ. ಬಿಜೆಪಿಯವರು ಇರುವ ಕಾನೂನನ್ನು ಬಿಗಿ ಮಾಡುವ ಅಗತ್ಯ ಇದೆ. ಆದರೆ ಮೂರೂವರೆ ವರ್ಷಗಳ ಕಾಲ ಸುಮ್ಮನಿದ್ದು ಈಗ ಮತಾಂತರ ಕಾಯ್ದೆ ತರಲು ಹೊರಟಿರುವ ಹಿಂದೆ ದುರುದ್ದೇಶ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹಲವು ವರ್ಷಗಳಿಂದ ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ, ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ ಎಂಬ ವಿಶ್ವಾಸ ಕಂಡು ಬರುತ್ತಿದೆ. ಕಾಂಗ್ರೆಸ್ ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮೂಲಕ ಚುನಾವಣೆ ಎದುರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎಫ್‍ಸಿ ಚಿಕನ್‍ನಲ್ಲಿ ಮಹಿಳೆಗೆ ಸಿಕ್ತು ಕೋಳಿ ತಲೆ

    ದೇಶ ಹಾಗೂ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ಹಾಗೂ ಹಾನಗಲ್-ಸಿಂಧಗಿಯ ಉಪಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಇಡೀ ರಾಜ್ಯದ ಜನರ ಭಾವನೆ ಬದಲಾವಣೆಯತ್ತ ಸಾಗಿದೆ ಎಂಬುದು ಕಂಡು ಬರುತ್ತಿದೆ. ಕಾಂಗ್ರೆಸ್ ಪಕ್ಷ ದೇಶ ಹಾಗೂ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಭೂದಾನ, ರೈತರಿಗೆ ಉಚಿತ ವಿದ್ಯುತ್, ಅನ್ನಭಾಗ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನೀಡಿದ ಕೀರ್ತಿ ಕಾಂಗ್ರೆಸ್‍ಗೆ ಸೇರುತ್ತದೆ. ಆದರೆ ಅನ್ನ ಭಾಗ್ಯಕ್ಕೂ ಕತ್ತರಿ ಹಾಕಿದ ಅಪಕೀರ್ತಿ ಬಿಜೆಪಿಯದ್ದು ಎಂದು ವ್ಯಂಗ್ಯವಾಡಿದರು.

  • ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ:  ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ: ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    -ಮತಾಂತರ ನಿಷೇಧ ಮಸೂದೆಗೆ ವಿರೋಧ
    -ಬಸವಣ್ಣರ ಮಾನವ ಧರ್ಮ ಒಡೆಯುತ್ತಿದ್ದಾರೆ ಸಿಎಂ

    ಮೈಸೂರು: ವೀರಶೈವ ಲಿಂಗಾಯತ ಧರ್ಮ ರೂಪುಗೊಂಡಿದ್ದೇ ಮತಾಂತರದಿಂದ. ನೀವು ಬಸವಣ್ಣ ಅವರನ್ನು ಬಂಧಿಸುತ್ತೀರಾ ಎನ್ನುವ ಮೂಲಕ ರಾಜ್ಯ ಸರ್ಕಾರದ ಮತಾಂತರ ನಿಷೇಧ ಮಸೂದೆಯನ್ನು ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ವಿರೋಧಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದರು. ಬಸವೇಶ್ವರರು ಕಟ್ಟಿದ ಮಾನವ ಧರ್ಮವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದಲೇ ಒಡೆಸಲಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸದ ಸಂಗತಿ. ಭಾರತ ಬಹುತ್ವದ ದೇಶ. ಸಂವಿಧಾನದಲ್ಲೇ ಧಾರ್ಮಿಕ ಸ್ವಾತಂತ್ರ್ಯ ಕೊಡಲಾಗಿದೆ. ಬಸವಣ್ಣನ ಕಾಲದಲ್ಲೇ ಮತಾಂತರ ನಡೆಯಿತು. ಬಸವಣ್ಣ 12ನೇ ಶತಮಾನದಲ್ಲೇ ಶೋಷಿತರು, ಅಸ್ಪೃಶ್ಯರಿಗೆ ಲಿಂಗ ದೀಕ್ಷೆ ಮಾಡಿ ಲಿಂಗಾಯತ ಮಾನವ ಧರ್ಮ ಕಟ್ಟಿದರು. ಮಾನವ ಧರ್ಮಕ್ಕೆ ಬಸವಣ್ಣ ಅವರು ಎಲ್ಲರನ್ನೂ ಸೇರಿಸಿಕೊಂಡರು ಎಂದರು.

    basavaraj bommai

    ಹಾಗಾದರೆ ಮತಾಂತರ ವಿಧೇಯಕದ ಮೂಲಕ ಗಾಂಧೀಜಿ, ಬಸವಣ್ಣ ಅವರನ್ನು ಬಂಧಿಸಬೇಕು. ಅಡ್ವಾಣಿ, ಬಾಳಾ ಠಾಕ್ರೆ, ಪ್ರವೀಣ್ ತೊಗಾಡಿಯಾ ಕುಟುಂಬದಲ್ಲಿ ಅನ್ಯ ಧರ್ಮದವರನ್ನು ಮದುವೆಯಾಗಿದ್ದಾರೆ. ಇವರನ್ನೆಲ್ಲಾ ಡಿಸಿಗಳ ಮೂಲಕ ಜೈಲಿಗೆ ಹಾಕುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದರು.

    ಕಾಂಗ್ರೆಸ್ ಮತಾಂತರ ಕಾಯ್ದೆ ವಿಚಾರದಲ್ಲಿ ಇಬ್ಬಂದಿತನ ಪ್ರದರ್ಶನ ಮಾಡುತ್ತಿದೆ. ಕಲಾಪದ ಬೆಲ್ ಬಾರಿಸಿದ ಮೇಲೂ ಸದನದ ಹೊರಗೆ ಹರಟೆ ಹೊಡೆಯುತ್ತಾ ಕೂತಿದ್ದರು. ಕಾಂಗ್ರೆಸ್‌ನವರು ಮತ ಬ್ಯಾಂಕ್‌ಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಲು ಸಾಧ್ಯವಿದೆಯಾ ಎಂದು ಪ್ರಶ್ನಿಸಿದ ಅವರು, ಸರ್ಕಾರದಿಂದ ಧಾರ್ಮಿಕ ದಿಗ್ಭಂಧನ ಹಾಕಲಾಗುತ್ತಿದೆ. ದಲಿತರಿಗೆ ಇದು ದೊಡ್ಡ ದಿಗ್ಭಂಧನ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್‌ ಹಲ್ಲೆ!

    ಮತಾಂತರ ತಡೆ ವಿಧೇಯಕದ ವಿಷಯದಲ್ಲಿ ಬಸವೇಶ್ವರರ ಹೆಸರಿನ ಮಠಗಳು, ಅಹಿಂದ ಮಠಗಳು, ವೀರಶೈವ ಮಠಗಳು, ಚಿತ್ರದುರ್ಗದ ಪ್ರಗತಿಪರ ಮುರುಘ ಮಠದ ಸ್ವಾಮೀಜಿ ಯಾಕೆ ಮಾತಾಡುತ್ತಿಲ್ಲ. ಸರ್ಕಾರದ ಅನುದಾನ ಮಠಗಳ ಬಾಯಿ ಮುಚ್ಚಿಸಿದೆಯಾ ಎಂದು ಪ್ರಶ್ನಿಸಿದರು.

    ಸಾಹಿತಿಗಳು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಾತ್ರ ಸಿಮೀತರಾಗಿದ್ದಾರೆ. ಕ್ರಿಶ್ಚಿಯನ್ ದೇಶಗಳಲ್ಲಿ ಕನ್ನಡಿಗರು ಬದುಕು ಕಟ್ಟಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ವಾಪಾಸ್ ಕರೆಸಿಕೊಳ್ಳಿ. ಕ್ರಿಶ್ಚಿಯನ್ನರಿಗೆ ಇಲ್ಲಿ ಯಾಕೆ ಕಿರುಕುಳ ನೀಡುತ್ತೀದ್ದಿರಾ? ಈ ವಿಧೇಯಕ ಜಾಗತಿಕವಾಗಿ ಪರಿಣಾಮ ಬೀರುತ್ತದೆ ಎಂದರು. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಶಾಸಕಾಂಗ ಸಮಿತಿ ರಚಿಸಿ ಮತ್ತೆ ಈ ವಿಧೇಯಕದ ಚರ್ಚೆ ಆಗಲಿ. ಈ ನಿಟ್ಟಿನಲ್ಲಿ ದಲಿತರ ಧಾರ್ಮಿಕ ಸ್ವಾತಂತ್ರ್ಯ ಹರಣ ತಡೆಯಬೇಕು. ಈ ವಿಧೇಯಕ ತರುವುದರಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ಅವರು ಈ ವಿಧೇಯಕ ತರಲು ಯಾಕೆ ಇಷ್ಟು ಅವಸರ ಮಾಡುತ್ತಿದ್ದಾರೆ? ಜನರಿಗೆ ಸರ್ಕಾರ ಉತ್ತರ ಕೊಡಲಿ. ವೀರಶೈವ ಲಿಂಗಾಯತ ಧರ್ಮ ಮತಾಂತರದಿಂದಲೇ ರೂಪಗೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: 2023ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲೇ ನಡೆಯುತ್ತೆ: ವಿ. ಸೋಮಣ್ಣ

    ಬೆಳಗಾವಿಯಲ್ಲಿ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮರಾಠಿ ಮತಕ್ಕಾಗಿ ಬೆಳಗಾವಿಯ ಮುಖಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನವಾದರೂ ಮಾತಾಡುತ್ತಿಲ್ಲ. ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು. ನಮ್ಮ ಅನ್ನ ತಿಂದು, ನೀರು ಕುಡಿದು ನಮ್ಮ ಬಾವುಟ ಸುಟ್ಟರೆ ಅಂಥವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಎಂಇಎಸ್ ಅನ್ನು ಮೊದಲು ಬ್ಯಾನ್ ಮಾಡಿ ಎಂದು ಒತ್ತಾಯಿಸಿದರು.

  • ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ

    ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ

    ಬೆಳಗಾವಿ: 2023 ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲೇ ನಡೆಯುತ್ತದೆ. ಸರ್ಕಾರ ತೆಗೆಯಬೇಕೆಂಬ ಹುಚ್ಚರಿದ್ದಾರೆ. ಆದರೆ ಈ ಬಗ್ಗೆ ಕ್ರಮವಹಿಸಲಾಗುತ್ತದೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕನಸುಕಾಣುತ್ತಿದ್ದ ನಾಯಕರಿಗೆ ವಸತಿ ಸಚಿವ ವಿ. ಸೋಮಣ್ಣ ತಿರುಗೇಟು ನೀಡಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಎಲ್ಲವೂ ಸಿಎಂ ಪರಮಾಧಿಕಾರ. 2023 ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲಿ ನಡೆಯುತ್ತದೆ. ಗೊಂದಲ ಇದ್ದರೆ ಅದು ಮಾಧ್ಯಮದಲ್ಲಿ, ನಮ್ಮಲ್ಲಿ ಅಲ್ಲ. ನಮ್ಮ ಪಕ್ಷ ಅದಕ್ಕೆ ಮನ್ನಣೆ ಕೊಡಲ್ಲ. ತಿರುಕನ ಕನಸು ಕಾಣುವ ಜನರಿದ್ದಾರೆ. ಬಸವರಾಜ್ ಬೊಮ್ಮಾಯಿ 4 ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರ ತೆಗೆಯಬೇಕೆಂಬ ಹುಚ್ಚರಿದ್ದಾರೆ. ಅಂಥವರ ವಿರುದ್ಧ ಪಕ್ಷ ಕ್ರಮವಹಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು – ಹರಿಯಾಣ

    ಇದೇ ವೇಳೆ ಮತಾಂತರ ನಿಷೇಧ ಮಸೂದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪರಿಸ್ಥಿತಿ ಏನು ಎನ್ನುವುದಕ್ಕಿಂತ ಏನಿದೆ ಎನ್ನುವ ಬಗ್ಗೆ ಯೋಚಿಸಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂಪುಟದಲ್ಲಿ ಮತಾಂತರ ಮಸೂದೆ ಜಾರಿಗೆ ತರಲು ಅನುಮತಿ ನೀಡಿದ್ದಾರೆ. ನಾವು ಕೆಲವೊಂದು ಮಾರ್ಪಾಡು ಮಾಡಿದ್ದೇವೆ ಅಷ್ಟೇ. ಇಂತಹ ಅವ್ಯವಸ್ಥೆಗಳು ಸರಿಯಾಗಬೇಕು ಎಂದು ಈ ಕಾಯ್ದೆಯಲ್ಲಿ ತರಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋಣಿಚೀಲದಲ್ಲಿ ನವಜಾತ ಶಿಶುವಿನ ಶವ ಪತ್ತೆ – ತಾಯಿ, ಪ್ರಿಯಕರನ ಬಂಧನ

    ಕಾನೂನು ಸಚಿವ ಮಾಧುಸ್ವಾಮಿ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ನಮಗೆ ಎಲ್ಲಕ್ಕಿಂತ ದೊಡ್ಡದು ರಾಜ್ಯ. ರಾಜ್ಯಕ್ಕಿಂತ ದೊಡ್ಡದು ದೇಶ. ದೇಶಕ್ಕಿಂತ ದೊಡ್ಡದು ಸಮಾಜ. ಸಮಾಜದಲ್ಲಿ ಮತಾಂತರ ಕಾಯ್ದೆ ತಂದಿರುವುದು ಒಳ್ಳೆಯದಕ್ಕಾಗಿ. ಅವರು ತಂದಿರುವುದನ್ನು ನಾವು ಒಪ್ಪಿಕೊಂಡಿದ್ದೇವೆ. ನೀವು ಮಾಡಿರುವುದು ಸಮಂಜಸವಾಗಿದೆ. ಚರ್ಚೆ ಇಲ್ಲದೆ ಕಾಯ್ದೆ ಒಪ್ಪಿಕೊಂಡರೆ ಸ್ವಲ್ಪ ಬೆಲೆ ಇರುತ್ತದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.