ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.
ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್ ನಿಧನ
ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ರೌಡಿಶೀಟರ್ ಕೊಲೆ ಕೇಸ್; ಬಂಧನ ಭೀತಿ – ಕಳೆದೆರಡು ದಿನಗಳಿಂದ ಮನೆಯಲ್ಲಿಲ್ಲ ಬೈರತಿ ಬಸವರಾಜ್
ಲಕ್ನೋ: ಮಥುರಾದ (Mathura) ಜಮುನಾಪರ್ ಪ್ರದೇಶದ ಮುಸ್ಲಿಂ ಕುಟುಂಬದ (Muslim Family) ಎಂಟು ಸದಸ್ಯರು ವೃಂದಾವನದ ಆಶ್ರಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಹಿಂದೂ ಧರ್ಮಕ್ಕೆ (Hinduism) ಮತಾಂತರ ಆಗಿದ್ದಾರೆ.
ಕುಟುಂಬದ ಯಜಮಾನ ಜಾಕೀರ್ ಎಂಬಾತ ಜಗದೀಶ್ ಎಂದು ಹೆಸರು ಬದಲಾಯಿಸಿಕೊಂಡರು. ‘ತಮ್ಮ ಮೂಲ ಗುರುತು ಹಿಂದೂ ಎಂಬ ನಂಬಿಕೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಪೂರ್ವಜರು ಮೊಘಲರ ಯುಗದವರೆಗೂ ಹಿಂದೂಗಳಾಗಿದ್ದರು. ಬಳಿಕ ಒತ್ತಡದಿಂದಾಗಿ ಇಸ್ಲಾಂಗೆ ಮತಾಂತರಗೊಂಡರು. ನಾನು ಕಾಳಿ ದೇವಿಯನ್ನು ಪೂಜಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮಕ್ಕೆ ಮರಳುವ ಆಲೋಚನೆ ಕಳೆದ ಮೂರು ವರ್ಷಗಳಿಂದ ಕುಟುಂಬದ ಮನಸ್ಸಿನಲ್ಲಿತ್ತು. ‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಮಗೆ ಯಾರೂ ಒತ್ತಡ ಹಾಕಿಲ್ಲ. ಯಾರ ಪ್ರಚೋದನೆಯೂ ಇಲ್ಲ. ಹಿಂದೂ ಧರ್ಮದ ನಂಬಿಕೆಯೊಂದಿಗೆ ಈ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್
ವೃಂದಾವನದ ಶ್ರೀ ಜಿ ವಾಟಿಕಾ ಕಾಲೋನಿಯಲ್ಲಿರುವ ಭಾಗವತ್ ಧಾಮ ಆಶ್ರಮದಲ್ಲಿ ಮತಾಂತರ ನಡೆಯಿತು. ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಯುವ ವಾಹಿನಿ ಇದಕ್ಕೆ ನೆರವು ನೀಡಿತು. ಜಗದೀಶ್ ಜೊತೆಗೆ, ಅವರ ಪತ್ನಿ, ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಎಲ್ಲರೂ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಾಂಟ್ ಟೋಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕಾರಿನಿಂದ ಸುಮಾರು 12.5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೆಹಲಿಯಿಂದ ಡಿಯೋರಿಯಾ ಕಡೆಗೆ ಚಿನ್ನವನ್ನು ಸಾಗಿಸುತ್ತಿದ್ದರು. ಚಿನ್ನ ಸಾಗಣೆಯ ಸಂಬಂಧ ಯಾವುದೇ ದಾಖಲೆ ಇರಲಿಲ್ಲ. ಆದ್ದರಿಂದ ಚಿನ್ನವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಓರ್ವ ಉತ್ತರ ಪ್ರದೇಶದವನಾಗಿದ್ದು, ಇನ್ನೊಬ್ಬ ಬಿಹಾರದವನು ಎಂದು ಮಥುರಾ ಗ್ರಾಮಾಂತರ ಎಸ್‌ಪಿ ತ್ರಿಗುಣ್ ವಿಶೇನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ಮಲಿಯಾಬಾದ್ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ- ಕ್ಯಾಮೆರಾದಲ್ಲಿ ಚಲನವಲನ ಸೆರೆ
ಲಕ್ನೋ: ಮಥುರಾ (Mathura) ಕೃಷ್ಣಜನ್ಮಭೂಮಿ (Krishna Janmabhoomi) ವಿವಾದ ಸಂಬಂಧ ಮಸೀದಿ ಸಮಿತಿಗೆ ಭಾರೀ ಹಿನ್ನಡೆಯಾಗಿದೆ. ಶಾಹೀ ಈದ್ಗಾ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ (Allahabad High Court) ವಜಾ ಮಾಡಿದೆ.
ಮಸೀದಿ ತೆರವು ಕೋರಿ ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ 15 ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಹಿಂದೂಗಳು ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದಿದೆ. ಈ ಮೂಲಕ ಹಿಂದೂಗಳ ವಾದಕ್ಕೆ ಹೈಕೋರ್ಟ್ ಮನ್ನಣೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಪಾದಯಾತ್ರೆ – ಭಾಗಿಯಾಗಲು ಷರತ್ತು ವಿಧಿಸಿದ ಹೆಚ್‌ಡಿಕೆ
1991ರ ಕಾನೂನಿನಡಿ ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಬಾರದು ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು. ಆದರೆ ಈ ಕಾನೂನಿನ ಅಂಶದ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ.
ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಲು ಹಲವಾರು ಮೊಕದ್ದಮೆಗಳನ್ನು ಹೂಡಲಾಗಿತ್ತು. ಕೃಷ್ಣ ದೇವಸ್ಥಾನವನ್ನು ಕೆಡವಿದ ನಂತರ ಔರಂಗಜೇಬ್ ಕಾಲದ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ದಾವೆ ಹೂಡಲಾಗಿತ್ತು. ಇದನ್ನೂ ಓದಿ: SC, ST ಒಳ ಮೀಸಲಾತಿ ಕಾನೂನುಬದ್ಧ- ಸುಪ್ರೀಂ ಐತಿಹಾಸಿಕ ತೀರ್ಪು
ಲಕ್ನೋ: ಉತ್ತರಪ್ರದೇಶದಲ್ಲಿ ಲೋಕಸಭಾ ಚುನಾವಣಾ (Loksabha Election 2024) ಪ್ರಚಾರದ ಭರಾಟೆ ಜೋರಾಗಿದೆ. ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಹೇಮಾ ಮಾಲಿನಿಯವರು (Hema Malini) ಮತಯಾಚನೆ ಮಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ.
ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Today I went into the farms to interact with the farmers who I have been meeting regularly these 10 years. They loved having me in their midst and insisted I pose with them which I did❤️ pic.twitter.com/iRD4y9DH4k
ವೀಡಿಯೋದಲ್ಲೇನಿದೆ..?: ಚುನಾವಣಾ ಪ್ರಚಾರದ ವೇಳೆ ಬಲದೇವ್ ಪ್ರದೇಶದ ಹಯಾತ್‌ಪುರ ಗ್ರಾಮದಲ್ಲಿ ಕೆಲ ಮಹಿಳೆಯರು ಬಿಸಿಲಲ್ಲಿ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡುತ್ತಿದ್ದರು. ಗೋಧಿ ಕೊಯ್ಲು ಮಾಡುತ್ತಿರುವ ಮಹಿಳೆಯರನ್ನು ನೋಡಿದ ಹೇಮಾ ಮಾಲಿನಿ, ತನ್ನ ಕಾರನ್ನು ನಿಲ್ಲಿಸಿ ಹೊಲಕ್ಕೆ ಇಳಿದಿದ್ದಾರೆ. ಬಳಿಕ ಮಹಿಳೆಯೊಬ್ಬರ ಕೈಯಿಂದ ಕುಡುಗೋಲು ತೆಗೆದುಕೊಂಡು ಗೋಧಿ ಕೊಯ್ಲು ಮಾಡಿದರು. ಇದನ್ನೂ ಓದಿ: ವಿಭಿನ್ನವಾಗಿ ಚುನಾವಣಾ ಪ್ರಚಾರಕ್ಕಿಳಿದ ಪದ್ಮಶ್ರೀ ಪುರಸ್ಕೃತ ಸ್ವತಂತ್ರ ಅಭ್ಯರ್ಥಿ!
ಮಹಿಳೆಯರೊಂದಿಗೆ ಫೋಟೋ: ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶೇಕ್‌ಹ್ಯಾಂಡ್ ಕೊಡುವುದರಿಂದ ಹಿಡಿದು ಅವರ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ ಕಳೆದ 10 ವರ್ಷಗಳಿಂದ ನಾನು ನಿಯಮಿತವಾಗಿ ಭೇಟಿಯಾಗುತ್ತಿರುವ ರೈತರೊಂದಿಗೆ ಮಾತನಾಡಲು ಇಂದು ನಾನು ಹೊಲಗಳಿಗೆ ಹೋಗಿದ್ದೇನೆ. ಅವರೊಂದಿಗೆ ಕಳೆದ ಸಮಯ ಅತ್ಯಂತ ಖುಷಿ ಕೊಟ್ಟಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ
ಮಥುರಾ ಲೋಕಸಭಾ ಕ್ಷೇತ್ರದಿಂದ ಹೇಮಾ ಮಾಲಿನಿ ಅವರನ್ನು ಬಿಜೆಪಿ ಸತತ ಮೂರನೇ ಬಾರಿಗೆ ಕಣಕ್ಕಿಳಿಸಿದೆ. 1991 ರಿಂದ 1999 ರವರೆಗೆ ನಾಲ್ಕು ಬಾರಿ ಬಿಜೆಪಿ ಮಥುರಾದಿಂದ ಗೆದ್ದಿದೆ. 2004ರಲ್ಲಿ ಮಥುರಾ ಕ್ಷೇತ್ರ ಕಾಂಗ್ರೆಸ್ ಪಾಲಾಯಿತು. 2009 ರಲ್ಲಿ, ಆರ್‌ಎಲ್‌ಡಿಯ ಜಯಂತ್ ಚೌಧರಿ ಮಥುರಾದಿಂದ ಸಂಸದರಾದರು. 2014ರಲ್ಲಿ ಬಿಜೆಪಿ ಹೇಮಾ ಮಾಲಿನಿ ಅವರನ್ನು ಕಣಕ್ಕಿಳಿಸಿ ಗೆದ್ದಿತ್ತು. 2019 ರ ಚುನಾವಣೆಯಲ್ಲಿ, ಹೇಮಾ ಅವರ ಪತಿ ನಟ ಧರ್ಮೇಂದ್ರ ಕೂಡ ಅವರ ಪರವಾಗಿ ಪ್ರಚಾರ ಮಾಡಿದರು.
ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಒಟ್ಟು 142 ಕೋಟಿ ರೂಪಾಯಿಯನ್ನು ಘೋಷಿಸಿದ್ದಾರೆ.
ಹೇಮಾ ಮಾಲಿನಿ ಪತಿ ನಟ ಧರ್ಮೇಂದ್ರ ಅವರ ಆಸ್ತಿ ಒಟ್ಟು 26,52,32,266 ರೂ ಆಸ್ತಿ ಹೊಂದಿದ್ದಾರೆ. ಹೇಮಾ ಮಾಲಿನಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಹೇಮಾ ಮಾಲಿನಿ ಕೈಯಲ್ಲಿ 13,52,865 ರೂಪಾಯಿ ನಗದು ಇದೆ. ಬ್ಯಾಂಕ್ ಖಾತೆಯಲ್ಲಿ 99,93,177 ರೂಪಾಯಿಯನ್ನು ಇಟ್ಟಿದ್ದಾರೆ.
1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 2ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ಮಥುರಾ ಅಭ್ಯರ್ಥಿಯಾಗಿ ಹೇಮಾ ಮಾಲಿನಿ ಹೆಸರನ್ನು ಘೋಷಿಸಿದೆ.
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ ಸಜ್ಜಾಗಿದ್ದು, ಈ ಬಾರಿ ಹೇಮಾ ಮಾಲಿನಿ ಕೂಡ ಸಾಥ್ ನೀಡುತ್ತಿದ್ದಾರೆ. ಜೊತೆಗೆ ನಾನಾ ಭಾಗಗಳಲ್ಲಿ ಸಿನಿಮಾ ನಟ ನಟಿಯರಿಗೆ ನಾನಾ ಪಕ್ಷಗಳು ಟಿಕೆಟ್ ಘೋಷಣೆ ಮಾಡಿವೆ.
ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) ಅವರು 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಜಪಾನ್‌ಗೆ ಹೋಗಿದ್ದು ಪುಷ್ಪ 2ಗಾಗಿ ಅಲ್ಲ- ಮತ್ಯಾಕೆ?
1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 2ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ಮಥುರಾ ಅಭ್ಯರ್ಥಿಯಾಗಿ ಹೇಮಾ ಮಾಲಿನಿ ಹೆಸರನ್ನು ಘೋಷಿಸಿದೆ.
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ ಸಜ್ಜಾಗಿದ್ದು, ಈ ಬಾರಿ ಹೇಮಾ ಮಾಲಿನಿ ಕೂಡ ಸಾಥ್ ನೀಡುತ್ತಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಿಂದ 195 ಸೀಟುಗಳಿಗೆ ಹೆಸರು ಪ್ರಕಟಿಸಿದೆ. ಪ್ರಧಾನಿ ಮೋದಿ ಸೇರಿದಂತೆ 34 ಸಚಿವರು ಕಣದಲ್ಲಿದ್ದಾರೆ.
ಲಕ್ನೋ: ಮಹಾಭಾರತದಲ್ಲಿ ಶ್ರೀ ಕೃಷ್ಣನು ಪಾಂಡವರಿಗಾಗಿ ಕೇವಲ 5 ಗ್ರಾಮಗಳನ್ನು ಮಾತ್ರ ಕೇಳಿದ್ದ. ಆದರಿಂದು ನಾವು ಪವಿತ್ರ ಮೂರು ಸ್ಥಳಗಳನ್ನು ಮಾತ್ರ ಕೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath), ಅಯೋಧ್ಯೆ ಬಳಿಕ ಕಾಶಿ ಮತ್ತು ಮಥುರಾದಲ್ಲಿರುವ ಮಸೀದಿಗಳನ್ನು ಪಡೆದುಕೊಳ್ಳುವ ಸುಳಿವು ನೀಡಿದ್ದಾರೆ.
ಬುಧವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡುವಾಗ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ (Ramlalla Pran Pratishtha) ಸಮಾರಂಭದ ಕುರಿತು ಮಾತನಾಡಿದರು. ಇದೇ ವೇಳೆ ಕಾಶಿ ಮತ್ತು ಮಥುರಾ (Mathura And Kashi) ವಿವಾದಿತ ಸ್ಥಳಗಳನ್ನೂ ಉಲ್ಲೇಖಿಸಿದರು. ಇದನ್ನೂ ಓದಿ: ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು: ಈರಣ್ಣ ಕಡಾಡಿ
#WATCH | Lucknow: In Uttar Pradesh Assembly, CM Yogi Adityanath says, “… Injustice was done to Ayodhya. When I talk about injustice, we remember something 5 thousand years old… Lord Shri Krishna asked (Duryodhan) for half (of the property), but if that was difficult, then… pic.twitter.com/1uz4HViGaU
ಈ ಹಿಂದಿನ ಸರ್ಕಾರದ ಆಳ್ವಿಕೆಯಲ್ಲಿ ಅಯೋಧ್ಯೆಯು (Ayodhya) ಕರ್ಫ್ಯೂ ಮತ್ತು ನಿಷೇಧಗಳನ್ನು ಎದುರಿಸಿತ್ತು. ಶತಮಾನಗಳವರೆಗೆ, ಅಯೋಧ್ಯೆಯು ನೀಚ ಉದ್ದೇಶಗಳಿಗೆ ಬಲಿಯಾಯಿತು, ಅನ್ಯಾಯ ಎದುರಿಸಿತ್ತು. ನಾನು ಆ ಅನ್ಯಾಯದ ಬಗ್ಗೆ ಮಾತನಾಡುವಾಗ, 5,000 ವರ್ಷಗಳ ಹಿಂದೆ ನಡೆದ ಅನ್ಯಾಯದ ಬಗ್ಗೆ ಮಾತನಾಡಬೇಕಾಗುತ್ತದೆ. ಆ ಸಮಯದಲ್ಲಿ ಅಯೋಧ್ಯೆ, ಕಾಶಿ ಮತ್ತು ಮಥುರಾದಲ್ಲಿ ಅನ್ಯಾಯ ಸಂಭವಿಸಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ʻಮಹಾಭಾರತʼವನ್ನು ಉಲ್ಲೇಖಿಸಿ ಮಾತನಾಡಿದರು. ಇದನ್ನೂ ಓದಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ
ಬೇರೆ ಸ್ಥಳಗಳ ಬಗ್ಗೆ ತಕರಾರಿಲ್ಲ:
ಆ ಸಮಯದಲ್ಲಿ, ಕೃಷ್ಣನು ಕೌರವರ ಬಳಿಗೆ ಹೋಗಿ 5 ಗ್ರಾಮಗಳನ್ನು ಮಾತ್ರ ಬಿಟ್ಟುಕೊಡುವಂತೆ ಕೇಳಿದ. ಉಳಿದದ್ದನ್ನು ನಿನ್ನ ಬಳಿಯೇ ಇಟ್ಟುಕೊಳ್ಳಿ ಎಂದು ಕೃಷ್ಣ ಕೌರವರಿಗೆ ಹೇಳಿದ್ದ. ದುರ್ಯೋಧನ ಅದನ್ನೂ ಬಿಟ್ಟುಕೊಡಲಿಲ್ಲ ಎಂದು ಕವಿತೆ ಮೂಲಕ ಉದಾಹರಣೆ ಕೊಟ್ಟರು. ಆದ್ರೆ ನಾವು ಈಗ ಮೂರು ಸ್ಥಳಗಳನ್ನು ಮಾತ್ರ ಕೇಳುತ್ತಿದ್ದೇವೆ, ಇತರ ಸ್ಥಳಗಳ ಬಗ್ಗೆ ಯಾವುದೇ ತಕರಾರಿಲ್ಲ ಎಂದು ಸಿಎಂ ಹೇಳಿದರು. ಇದನ್ನೂ ಓದಿ: UCC ಬಿಲ್ ಪಾಸ್ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ
ಅಯೋಧ್ಯೆ, ಮಥುರಾ ಮತ್ತು ವಾರಣಾಸಿಯ ತಾಣಗಳನ್ನು ಕೇಳುತ್ತಿದ್ದೇವೆ. ಅಯೋಧ್ಯೆ ರಾಮನ ಜನ್ಮಸ್ಥಳವಾಗಿದ್ದರೆ, ಮಥುರಾವನ್ನು ಕೃಷ್ಣನ ಜನ್ಮಸ್ಥಳ ಎಂದು ನಂಬಲಾಗಿದೆ. ವಾರಣಾಸಿಯಲ್ಲಿರುವ ಜ್ಞಾನವಾಪಿ ಸ್ಥಳವನ್ನು 12 ಜ್ಯೋತಿರ್ಲಿಂಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಏಕೆಂದರೆ ಹಿಂದೂ ಸಮಾಜವು ನಮ್ಮ ನಂಬಿಕೆಯ ಕೇಂದ್ರಗಳಾದ ಮೂರು ಕೇಂದ್ರಗಳನ್ನು ಮಾತ್ರ ಹುಡುಕುತ್ತಿದೆ. ಈ ಮೂರು ಕೇಂದ್ರಗಳು ನಂಬಿಕೆಗೆ ಬಹಳ ವಿಶೇಷವಾಗಿವೆ. ಇದನ್ನು ರಾಜಕೀಯಗೊಳಿಸಿದಾಗ ಮಾತ್ರ ವಿವಾದಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಇಶಾಗೆ ಡಿವೋರ್ಸ್ ಕೊಡಲು ಬೆಂಗಳೂರು ಹುಡುಗಿ ಜೊತೆಗಿನ ಭರತ್ ಅಫೇರ್ ಕಾರಣ?
ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.
ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.
ಪ್ರಶ್ನೆ ಏನಿತ್ತು?
1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು (British) ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.
ಎಎಸ್‌ಐ ಉತ್ತರ ಏನಿತ್ತು?
1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.
ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಪ್ರತಿಕ್ರಿಯಿಸಿ, ರಾಜ್ಯಪತ್ರದಲ್ಲಿ ಉಲ್ಲೇಖವಾದ ಹಾಗೂ ಈಗ ಆರ್‌ಟಿಐ ಅಡಿ ನೀಡಿದ ಪ್ರಶ್ನೆಗೆ ಎಎಸ್‌ಐ ನೀಡಿದ ಮಾಹಿತಿಯನ್ನೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಸಾಕ್ಷ್ಯವಾಗಿ ಸೇರಿಸುತ್ತೇವೆ ಎಂದು ಹೇಳಿದ್ದಾರೆ.
ಮಥುರಾದ ಕೇಶವದೇವ ದೇವಾಲಯವನ್ನು ಸುಮಾರು 5000 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ನಂಬಲಾಗುತ್ತಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳ. ಶ್ರೀಕೃಷ್ಣನ ಮೊಮ್ಮಕ್ಕಳಾದ ವ್ರಜ ಮತ್ತು ವ್ರಜನಾಭ ರಾಜ ಪರೀಕ್ಷಿತನ ಸಹಾಯದಿಂದ ಮಥುರಾದಲ್ಲಿ ಕೇಶದೇವ ದೇವಾಲಯವನ್ನು ನಿರ್ಮಿಸಿದರು ಎಂಬ ಕಥೆಯಿದೆ.
ಮೊಘಲ್ ರಾಜ ಔರಂಗಜೇಬ್ (Aurangzeb) 1670ರಲ್ಲಿ ಕೇಶವದೇವನ ದೇವಾಲಯವನ್ನು ಕೆಡವಲು ಆದೇಶಿಸಿದ್ದ. ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ನಿರ್ಮಿಸಲಾದ ಮಸೀದಿಯಲ್ಲಿ ಔರಂಗಜೇಬ ಸ್ವತಃ ನಮಾಜ್ ಮಾಡಿದ್ದ.
ಏನಿದು ವಿವಾದ?
ಮಥುರಾದ ವಿವಾದವು 13.37 ಎಕರೆ ಭೂಮಿಯ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದೆ. ಶ್ರೀ ಕೃಷ್ಣ ಜನ್ಮಭೂಮಿ 10.9 ಎಕರೆ ಜಮೀನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿ ಎರಡೂವರೆ ಎಕರೆ ಜಮೀನು ಹೊಂದಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಭಾಗಿ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ತ್ತರ ಪ್ರದೇಶದ ಮಥುರಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.
ಅರ್ಜಿಯಲ್ಲಿ ಏನಿತ್ತು?
ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.
ನವದೆಹಲಿ: ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ (Mathura’s Krishna Janmabhoomi Land Dispute) ಪಕ್ಕದಲ್ಲಿರುವ ಶಾಹಿ ಈದ್ಗಾ (Shahi Idgah) ಸಂಕೀರ್ಣದ ಪ್ರಾಥಮಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಗುರುವಾರ ನೀಡಿದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ ಅವರ ಪೀಠವು ಮಸೀದಿ ಸಮಿತಿಯ ಮನವಿಯನ್ನು ನಿರಾಕರಿಸಿತು.
ಅಲಹಾಬಾದ್ ಹೈಕೋರ್ಟ್ (Allahabad High Court) ಡಿಸೆಂಬರ್ 14 ರಂದು ಈದ್ಗಾ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯ ಮೂವರು ವಕೀಲ ಕಮಿಷನರ್‌ಗಳ ತಂಡಕ್ಕೆ ಅನುಮತಿಸಿತು. ಈ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದನ್ನೂ ಓದಿ: ಇಂಧನ ಸಚಿವ ಕೆ.ಜೆ ಜಾರ್ಜ್ ಚಿಕ್ಕಮಗಳೂರು ಕಚೇರಿಯಲ್ಲಿ ಕಳ್ಳತನ
ಭೂ ವಿವಾದಕ್ಕೆ ಸಂಬಂಧಿಸಿದ ಮೊಕದ್ದಮೆಗಳನ್ನು ಒಗ್ಗೂಡಿಸಿ ವರ್ಗಾಯಿಸುವ ಹೈಕೋರ್ಟ್‌ನ ಮೇ 2023ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಜನವರಿ 9 ರಂದು ವಿಶೇಷ ರಜೆ ಕಾಲ ಪೀಠವು ವಿಚಾರಣೆಯ ನಡೆಸಲಿದೆ ಎಂದು ನ್ಯಾಯಲಯ ಹೇಳಿದೆ.
ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಮತ್ತು ಅರ್ಜಿಗಳ ವರ್ಗಾವಣೆ ಆದೇಶದ ಸವಾಲಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜನವರಿ 9 ರಂದು ವಿಚಾರಣೆ ನಡೆಸಲಿದೆ ಹೀಗಾಗಿ ಹೈಕೋರ್ಟ್ ಆದೇಶವು ಮುಂದುವರಿಯುತ್ತದೆ. ಸುಪ್ರೀಂಕೋರ್ಟ್‌ನಿಂದ ಯಾವುದೇ ತಡೆ ಇಲ್ಲ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಶ್ರೀಕೃಷ್ಣನ ಜನ್ಮಸ್ಥಳದ 13.37 ಎಕರೆಯಲ್ಲಿ ದೇವಾಲಯವನ್ನು ಕೆಡವಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಮಸೀದಿಯನ್ನು ನಿರ್ಮಿಸಿದನೆಂದು ಹಿಂದೂಗಳ ಪರ ಅರ್ಜಿದಾರರು ಆರೋಪಿಸಿದ್ದು, ಈದ್ಗಾ ಸಂಕೀರ್ಣಕ್ಕೆ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್‌ನಲ್ಲಿ ಹತ್ತಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಸಲಾಗಿತ್ತು.