Tag: ಮದನ್ ಕುಮಾರ್

  • ನಿಖಿಲ್ ನಾಮಪತ್ರ ತಿರಸ್ಕಾರಕ್ಕೆ ಒತ್ತಾಯ ಯಾಕೆ? ಪರಿಶೀಲನೆ ವೇಳೆ ಆಗಿದ್ದೇನು?

    ನಿಖಿಲ್ ನಾಮಪತ್ರ ತಿರಸ್ಕಾರಕ್ಕೆ ಒತ್ತಾಯ ಯಾಕೆ? ಪರಿಶೀಲನೆ ವೇಳೆ ಆಗಿದ್ದೇನು?

    ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ತಿರಸ್ಕರಿಸುವಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಒತ್ತಾಯಿಸುತ್ತಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 22 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 6 ಜನ ಅಧಿಕಾರಿಗಳು ಎಲ್ಲಾ ಅಭ್ಯರ್ಥಿಗಳ ಏಜೆಂಟ್‍ಗಳ ಮುಂದೆ ನಾಮಪತ್ರ ಪರಿಶೀಲನೆ ನಡೆಸಿದ್ದರು. ಒಂದು ವೇಳೆ ಯಾವುದೇ ಅಭ್ಯರ್ಥಿಯ ನಾಮಪತ್ರದ ಬಗ್ಗೆ ಆಕ್ಷೇಪಗಳಿದ್ದರೆ ತಿಳಿಸುವಂತೆ ಅಧಿಕಾರಿಗಳು ಏಜೆಂಟ್‍ಗಳಿಗೆ ತಿಳಿಸಿದ್ದರು. ಈ ವೇಳೆ ಸುಮಲತಾ ಅವರ ಏಜೆಂಟ್ ಮದನ್ ಕುಮಾರ್, ನಿಖಿಲ್ ಕುಮಾರಸ್ವಾಮಿ ನಾಮಪತ್ರದ ಬಗ್ಗೆ ಆಕ್ಷೇಪ ಸಲ್ಲಿದ್ದರು. ಇದನ್ನು ಓದಿ: ಒಂದು ವಿಡಿಯೋ ನೋಡ್ಕೊಳ್ಳಕ್ಕಾಗದವರು ಅನ್ಯಾಯ ಹೇಗೆ ತಡೀತಾರೆ: ಡಿಸಿ ವಿರುದ್ಧ ಸುಮಲತಾ ಕಿಡಿ

    ಜಿಲ್ಲಾಧಿಕಾರಿಗಳ ಕಚೇರಿ ನೋಟಿಸ್ ಬೋರ್ಡ್ ಹಾಗೂ ವೆಬ್‍ಸೈಟ್‍ನಲ್ಲಿದ್ದ ನಿಖಿಲ್ ಕುಮಾರಸ್ವಾಮಿ ನಾಮಪತ್ರದಲ್ಲಿ ಕ್ರಮಸಂಖ್ಯೆ 26 ರ ಪ್ರಶ್ನೆಗೆ ಸರಿಯಾಗಿ ಉತ್ತರ ಸಿಕ್ಕಿರಲಿಲ್ಲ. ಈ ವಿಚಾರವನ್ನು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದೆ. ಆದರೆ ಅವರು ಲಿಖಿತ ರೂಪದಲ್ಲಿ ಆಕ್ಷೇಪ ಸಲ್ಲಿಸುವಂತೆ ತಿಳಿಸಿದರು. ಆಗ ಅಧಿಕಾರಿಗಳ ಮುಂದೆಯೇ ಆಕ್ಷೇಪಣಾ ಅರ್ಜಿ ಬರೆದು ಸಲ್ಲಿಸಿದೆ. ಅವರು ಅರ್ಜಿ ಸ್ವೀಕರಿಸಿ ದೃಢೀಕರಣ ಕೂಡ ನೀಡಿದ್ದಾರೆ ಎಂದು ಮದನ್ ಕುಮಾರ್ ತಿಳಿಸಿದ್ದಾರೆ.

    ಅರ್ಜಿ ಸಲ್ಲಿಸಿ ಉತ್ತರಕ್ಕಾಗಿ ಕಾಯುತ್ತಿದ್ದೆ. ಸಂಜೆಯವರೆಗೂ ನನಗೆ ಉತ್ತರ ಸಿಗದಿದ್ದರಿಂದ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಕೆ ಹೋಗಿ ಮಾಹಿತಿ ಕೇಳಿದೆ. ಆಗ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು. ಇದಾದ ನಂತರ ನೀವು ಯಾವುದೇ ಆಕ್ಷೇಪಣೆ ಪತ್ರ ನೀಡಿಲ್ಲವೆಂದು ರಾತ್ರಿ 10 ಗಂಟೆಗೆ ಹಿಂಬರಹ ನೀಡಿದ್ದಾರೆ ಎಂದು ಮದನ್ ಕುಮಾರ್ ಆರೋಪಿಸಿದ್ದಾರೆ.

    ಆಕ್ಷೇಪಣಾ ಅರ್ಜಿಯಲ್ಲಿ ಏನಿತ್ತು?:
    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸಲ್ಲಿಸಿದ ಫಾರ್ಮ್ ನಂಬರ್ 26ನಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚರಾಸ್ತಿ ಹಾಗೂ ಸ್ಥಿರಾಸ್ತಿಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಹೀಗಾಗಿ ನೀವು ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದ್ದೇನೆ ಎಂದು ಮದನ್ ಕುಮಾರ್ ತಿಳಿಸಿದ್ದಾರೆ.

    ಆಕ್ಷೇಪಣಾ ಅರ್ಜಿ ಸಲ್ಲಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದರು. ಇದರಿಂದಾಗಿ ನಾಮಪತ್ರ ಪರಿಶೀಲನೆಯ ದೃಶ್ಯವನ್ನು ಸೆರೆ ಹಿಡಿದ ದೃಶ್ಯವನ್ನು ನೀಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿ, ವಿಡಿಯೋ ಕ್ಯಾಮೆರಾಮನ್ ಯಾವುದೋ ಮದುವೆ ಕಾರ್ಯಕ್ಕೆ ಕಳಿಸಿದ್ದೇವೆ. ಹೀಗಾಗಿ ವಿಡಿಯೋ ಫುಟೇಜ್ ನೀಡಲು ಎರಡ್ಮೂರು ದಿನ ಸಮಯ ಬೇಕಾಗುತ್ತದೆ ಅಂತ ಹೇಳಿದ್ದರು. ಆದರೆ ಮರುದಿನವೇ ನಮಗೆ ಅರ್ಧ ವಿಡಿಯೋ ಮಾತ್ರ ಕೊಟ್ಟರು. ಅದರಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ ದೃಶ್ಯವನ್ನೇ ಕತ್ತರಿಸಲಾಗಿತ್ತು. ಇದರಿಂದಾಗಿ ಸಂಪೂರ್ಣ ವಿಡಿಯೋ ನೀಡುವಂತೆ ಕೇಳಿದಾಗ, ವಿಡಿಯೋಗ್ರಾಫರ್ ಟ್ಯಾಂಪರ್ ಮಾಡಿದ್ದಾನೆ ಎಂಬ ಸಂಶಯ ಬರುತ್ತಿದೆ. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ ವಿಡಿಯೋಗ್ರಾಫರ್ ವಿರುದ್ಧ ಇಲ್ಲಿಯವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ಮದನ್ ಕುಮಾರ್ ದೂರಿದರು.

  • ನಾನು ಆಕ್ಷೇಪಿಸಿದ್ದ ವಿಡಿಯೋಗೆ ಕತ್ತರಿ: ಮಂಡ್ಯ ಡಿಸಿ ವಿರುದ್ಧ ಗಂಭೀರ ಆರೋಪ

    ನಾನು ಆಕ್ಷೇಪಿಸಿದ್ದ ವಿಡಿಯೋಗೆ ಕತ್ತರಿ: ಮಂಡ್ಯ ಡಿಸಿ ವಿರುದ್ಧ ಗಂಭೀರ ಆರೋಪ

    ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಪರಿಶೀಲನೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸಿದ್ದೆ. ಆದರೆ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ನೀವು ಯಾವುದೇ ಆಕ್ಷೇಪಣೆ ಪತ್ರ ನೀಡಿಲ್ಲ ಅಂತ ಹಿಂಬರಹ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ಕುಮಾರ್ ಆರೋಪಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕ್ಷೇಪ ಸಲ್ಲಿಸಿದ್ದಕ್ಕೆ ಸಂಜೆಯವರೆಗೂ ಜಿಲ್ಲಾಧಿಕಾರಿಗಳು ಉತ್ತರ ನೀಡಲಿಲ್ಲ. ಹೀಗಾಗಿ ಖುದ್ದಾಗಿ ನಾನೇ ಡಿಸಿ ಕಚೇರಿಗೆ ತೆರಳಿ ಮಾಹಿತಿ ಕೇಳಿದಾಗ ನಾಮಪತ್ರ ಅಂಗೀಕರಿಸಿದ್ದೇವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು. ಇದರಿಂದಾಗಿ ನಾಮಪತ್ರ ಪರಿಶೀಲನೆಯ ವಿಡಿಯೋ ರೆಕಾರ್ಡಿಂಗ್ ಕೊಡುವಂತೆ ಮನವಿ ಸಲ್ಲಿಸಿದ್ದೆ ಎಂದರು. ಇದನ್ನು ಓದಿ: ಒಂದು ವಿಡಿಯೋ ನೋಡ್ಕೊಳ್ಳಕ್ಕಾಗದವರು ಅನ್ಯಾಯ ಹೇಗೆ ತಡೀತಾರೆ: ಡಿಸಿ ವಿರುದ್ಧ ಸುಮಲತಾ ಕಿಡಿ 

    ಜಿಲ್ಲಾಧಿಕಾರಿಗಳು ವಿಡಿಯೋ ಕ್ಯಾಮೆರಾಮನ್ ಯಾವುದೋ ಮದುವೆ ಕಾರ್ಯಕ್ಕೆ ಕಳಿಸಿದ್ದೇವೆ. ಹೀಗಾಗಿ ವಿಡಿಯೋ ಫುಟೇಜ್ ನೀಡಲು ಎರಡ್ಮೂರು ದಿನ ಸಮಯ ಬೇಕಾಗುತ್ತದೆ ಅಂತ ಹೇಳಿದರು. ಆದರೆ ಮರುದಿನ ನಮಗೆ ಅರ್ಧ ವಿಡಿಯೋ ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ ದೃಶ್ಯವನ್ನೇ ಕತ್ತರಿಸಲಾಗಿದೆ. ಇದರಿಂದಾಗಿ ಸಂಪೂರ್ಣ ವಿಡಿಯೋ ನೀಡುವಂತೆ ಕೇಳಿದಾಗ, ವಿಡಿಯೋಗ್ರಾಫರ್ ಟ್ಯಾಂಪರ್ ಮಾಡಿದ್ದಾನೆ ಎಂಬ ಸಂಶಯ ಬರುತ್ತಿದೆ. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ ಇಲ್ಲಿಯವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ದೂರಿದರು.

    ಚುನಾವಣಾ ಆಯುಕ್ತರು ಮತ್ತು ಸ್ಪೆಷಲ್ ಅಬ್ಸರ್ವರ್ ಮಧು ಮಹಾಜನ್ ಅವರನ್ನು ಭೇಟಿ ಮಾಡಿದ್ದೇನೆ. ವಿಚಾರಣೆ ನಡೆಸಿ ಸೂಕ್ತ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ವಿಡಿಯೋಗ್ರಾಫರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಮಂಜುಶ್ರೀ ಅವರು ಕೂಡ ಪ್ರಕರಣದ ಕುರಿತು ವಿಚಾರಣೆಗಾಗಿ ಇಂದು ಬರುವಂತೆ ಸೂಚಿಸಿದ್ದಾರೆ ಎಂದು ಮದನ್ ಕುಮಾರ್ ಹೇಳಿದರು.

  • ಇಂದು ನಿಖಿಲ್ ನಾಮಪತ್ರ ತಿರಸ್ಕಾರ?

    ಇಂದು ನಿಖಿಲ್ ನಾಮಪತ್ರ ತಿರಸ್ಕಾರ?

    ಮಂಡ್ಯ: ಮೈತ್ರಿ ಅಭ್ಯರ್ಥಿಯ ನಾಮಪತ್ರ ತಿರಸ್ಕಾರ ಮಾಡುವಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನ ವಿಚಾರಣೆ ಇಂದು ನಡೆಯಲಿದೆ.

    ಇಂದು ಬೆಳಗ್ಗೆ 11 ಗಂಟೆಗೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ದೂರಿನ ವಿಚಾರಣೆ ನಡೆಸಲಿದ್ದಾರೆ.

    ತಾವು ನೀಡಿರುವ ದೂರಿಗೆ ಸಂಬಂಧಪಟ್ಟಂತೆ ಸೂಕ್ತ ದಾಖಲೆಗಳೊಂದಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ದೂರದಾರ ಮದನ್ ಕುಮಾರ್ ಗೆ ಸೂಚಿಸಲಾಗಿದೆ. ಇಂದು ನಡೆಯುವ ವಿಚಾರಣೆಯಲ್ಲಿ ನಿಖಿಲ್ ನಾಮಪತ್ರ ತಿರಸ್ಕಾರಗೊಳ್ಳುತ್ತಾ? ಪುರಸ್ಕಾರಗೊಳ್ಳುತ್ತಾ? ಅಥವಾ ಸುಮಲತಾಗೆ ಮುಖಭಂಗವಾಗುತ್ತಾ? ಎಂಬುದನ್ನು ತಿಳಿಯ ಬಹುದು.

    ಮದನ್ ಆರೋಪವೇನು?
    ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರದಲ್ಲಿ ಎಲ್ಲಾ ಕಾಲಮ್ ನನ್ನು ಖಾಲಿ ಬಿಟ್ಟಿದ್ದಾರೆ. ಎಸ್ ಅಥವಾ ನೋ ಎಂದು ಕೂಡ ಭರ್ತಿ ಮಾಡಲಿಲ್ಲ. ಅಷ್ಟೇ ಅಲ್ಲದೆ ನಾಮಪತ್ರ ಸಲ್ಲಿಸುವಾಗ ಯಾವುದೇ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿಲ್ಲ. ಈ ಬಗ್ಗೆ ಸುದ್ದಿ ಹರಿದಾಡುತ್ತಿದ್ದಂತೆ ಜಿಲ್ಲಾಧಿಕಾರಿಯೇ ಖುದ್ದಾಗಿ ನಿಖಿಲ್ ಅವರನ್ನು ಕರೆಸಿ ನಾಮಪತ್ರ ತುಂಬಿಸಿದ್ದಾರೆ ಎಂದು ಮದನ್ ಕುಮಾರ್ ಆರೋಪಿಸಿದ್ದಾರೆ.

    ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ದೂರಿನಲ್ಲಿರುವ ಅಂಶಗಳಿಗೆ ಸಂಬಂಧಿಸಿದಂತೆ ನಿಮ್ಮ ಸಮರ್ಥನೆ ಹಾಗೂ ಸೂಕ್ತ ದಾಖಲೆ ಅಥವಾ ಮಾಹಿತಿ ನೀಡಿ ಎಂದು ಇಂದು ಪ್ರಾದೇಶಿಕ ಆಯುಕ್ತರು ಮದನ್ ಕುಮಾರ್ ಅವರನ್ನು ವಿಚಾರಣೆ ಮಾಡಲಿದ್ದಾರೆ.