Tag: ಮದನ್ ಮಿತ್ರಾ

  • ಬೈಕ್ ಅಪಘಾತ – ಟಿಎಂಸಿ ನಾಯಕ ಮದನ್ ಮಿತ್ರಾಗೆ ಗಾಯ

    ಬೈಕ್ ಅಪಘಾತ – ಟಿಎಂಸಿ ನಾಯಕ ಮದನ್ ಮಿತ್ರಾಗೆ ಗಾಯ

    ಕೋಲ್ಕತ್ತಾ: ಕೋಲ್ಕತ್ತಾದ ರಸ್ತೆ ಅಪಘಾತದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಗಾಯಗೊಂಡಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮದನ್ ಮಿತ್ರಾ ಅವರು ತೆರಳುತ್ತಿದ್ದ ವೇಳೆ ನಗರದ ಬಿಟಿ ರಸ್ತೆಯಲ್ಲಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದಿದೆ. ಆದರೆ ಸ್ಥಳೀಯರು ಹೇಳುವಂತೆ ಮದನ್ ಮಿತ್ರಾ ಅವರಿಗೆ ಯಾವುದೇ ಗಂಭೀರವಾದ ಗಾಯಗಳು ಆಗಿಲ್ಲ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

    ಟ್ರಾಫಿಕ್‍ನಿಂದ ತಪ್ಪಿಸಿಕೊಳ್ಳಲು ಕಾರಿನ ಬದಲು ಬೈಕಿನಲ್ಲಿ ತೆರಳಿದ್ದರು. ಈ ವೇಳೆ ನಗರದ ಬಿಟಿ ರಸ್ತೆಯಲ್ಲಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಳೆದ ವಾರ ಕಮಲದ ಹೂವತ್ತು ಕಿತ್ತು ದುರ್ಗ ಮಾತೆಗೆ ಅರ್ಪಿಸುವುದಿಲ್ಲ ಎಂದು ಹೇಳುವ ಮೂಲಕ ಭಾರೀ ಸುದ್ದಿಯಲ್ಲಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದನ್ನೂ ಓದಿ: ಹೂ ಕಟ್ಟುತ್ತಿದ್ದ ಯುವತಿ ಈಗ ಪಿಎಸ್‍ಐ..!