Tag: ಮದುವೆ ಕಾರ್ಯಕ್ರಮ

  • ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

    ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

    ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Uttar Pradesh’s Meerut) ನಡೆದಿದೆ.

    ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯ ಮೆಹಂದಿ ಕಾರ್ಯಕ್ರಮವಿತ್ತು. ಈ ವೇಳೆ ರಿಮ್ಶಾ ಮೃತಪಟ್ಟಿದ್ದಾಳೆ. ಇದೀಗ ರಿಮ್ಶಾ ಡ್ಯಾನ್ಸ್ ಮಾಡುತ್ತಾ ಕುಸಿದು ಬೀಳುತ್ತಿರುವ‌ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

    ಮದುವೆಗೂ ಮುನ್ನ ನಡೆಯುವ ಮೆಹಂದಿ ಕಾರ್ಯಕ್ರಮದಲ್ಲಿ ರಿಮ್ಶಾ ತನ್ನ ಕುಟುಂಬ ಸದಸ್ಯರೊಂದಿಗೆ ಡ್ಯಾನ್ಸ್‌ ಮಾಡುತ್ತಿರುತ್ತಾಳೆ. ಆದರೆ ಕೆಲವೇ ಸೆಕೆಂಡುಗಳಲ್ಲಿ ಆಕೆಗೆ ತಲೆಸುತ್ತು ಬಂದಂತೆ ಆಗಿದ್ದು, ಎದೆ ಹಿಡಿದುಕೊಂಡು ಅಲ್ಲೇ ಇದ್ದ ಪುಟ್ಟ ಹುಡುಗನ ಕೈ ಹಿಡಿದುಕೊಳ್ಳಲು ಪ್ರಯತ್ನಿಸುತ್ತಾಳೆ. ನಂತರ ಅಲ್ಲೇ ಕುಸಿದು ಬೀಳುತ್ತಾಳೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣರನ್ನ ಪಕ್ಷದಿಂದ ಅಮಾನತು ಮಾಡಿ- ಹೆಚ್‌ಡಿಡಿಗೆ ಕಂದಕೂರು ಒತ್ತಾಯ

    ರಿಮ್ಶಾ ಬೀಳುತ್ತಿದ್ದಂತೆಯೇ ಕಾರ್ಯಕ್ರಮ ಬಂದ ಕೆಲವರು ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸುತ್ತಾರೆ. ಆಕೆಗೆ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ನೀರವ ಮೌನ ಆವರಿಸಿದೆ.

  • ಮಗನ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಂಸದ ಉಮೇಶ್ ಜಾಧವ್

    ಮಗನ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಂಸದ ಉಮೇಶ್ ಜಾಧವ್

    ಕಲಬುರಗಿ: ಸಾಮಾನ್ಯವಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಸ್ಟೆಪ್ಸ್ ಹಾಕುವುದನ್ನು ನೀವು ನೋಡಿರಬಹುದು. ಆದರೆ ಸಂಸದ ಉಮೇಶ್ ಜಾಧವ್ ಅವರು ತಮ್ಮ ಮಗನ ಜೊತೆ ಮದುವೆ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

    ಕಲಬುರಗಿ ಸಂಸದ ಡಾ ಉಮೇಶ್ ಜಾಧವ್, ತಮ್ಮ ಹಿರಿಯ ಸಹೋದರ ರಾಮಚಂದ್ರ ಜಾಧವ್ ಪುತ್ರ ಪ್ರಶಾಂತ್ ಅವರ ಮದುವೆ ಸಮಾರಂಭದಲ್ಲಿ ಪುತ್ರ ಚಿಂಚೋಳಿ ಶಾಸಕ ಡಾ ಅವಿನಾಶ್ ಜಾಧವ್ ಹಾಗೂ ಸ್ನೇಹಿತರ ಜೊತೆಗೂಡಿ ಕಲ್ಯಾಣ ಮಂಟಪದಲ್ಲಿ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ.

    ತಂದೆ ಡಾ ಉಮೇಶ್ ಜಾಧವ್ ಹಾಗೂ ಪುತ್ರ ಶಾಸಕ ಡಾ ಅವಿನಾಶ್ ಜಾಧವ್ ಒಟ್ಟಿಗೆ ಡ್ಯಾನ್ಸ್ ಮಾಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರ ಜೊತೆ ಸಹೋದರ ರಾಮಚಂದ್ರ ಜಾಧವ್ ಮತ್ತು ಅವರ ಕುಟುಂಬಸ್ಥರು ಸೇರಿ ಮಗನ ಮದುವೆಯಲ್ಲಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.

  • ಇಶಾ ಅಂಬಾನಿ ಮದುವೆ ಸಂಭ್ರಮದಲ್ಲಿ ದೀಪ್‍ವೀರ್ ಡ್ಯಾನ್ಸ್ – ವಿಡಿಯೋ ನೋಡಿ

    ಇಶಾ ಅಂಬಾನಿ ಮದುವೆ ಸಂಭ್ರಮದಲ್ಲಿ ದೀಪ್‍ವೀರ್ ಡ್ಯಾನ್ಸ್ – ವಿಡಿಯೋ ನೋಡಿ

    ಉದಯ್‍ಪುರ: ಬಾಲಿವುಡ್ ಕ್ಯೂಟ್ ಕಪಲ್ಸ್ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಭಾರತದ ನಂಬರ್ 1 ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಮಗಳ ಮದುವೆ ಪೂರ್ವ ಸಮಾರಂಭದಲ್ಲಿ ಭರ್ಜರಿಯಾಗಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

    ಬಿಟೌನ್ ತಾರೆಯರೆಲ್ಲ ಇಶಾ ಅಂಬಾನಿಯವರ ಮದುವೆ ಪೂರ್ವ ಪಾರ್ಟಿಯನ್ನು ಸಖತ್ ಆಗಿ ಎಂಜಾಯ್ ಮಾಡುವ ಮೂಲಕ ಸಂಭ್ರಮಕ್ಕೆ ಇನ್ನಷ್ಟು ಮೆರಗು ತಂದರು. ಉದಯ್‍ಪುರದಲ್ಲಿ ನಡೆಯುತ್ತಿರುವ ಈ ಅದ್ದೂರಿ ಮದುವೆ ಸಂಭ್ರಮದಲ್ಲಿ ಸಿನಿ ತಾರೆಯರು ಹೆಜ್ಜೆ ಹಾಕಿ ಮಿಂಚಿದ್ದಾರೆ. ಅದರಲ್ಲೂ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ಕಪಲ್ ಡ್ಯಾನ್ಸ್ ನೋಡಿ ಸಂತೋಷಪಟ್ಟರು.

    https://www.instagram.com/p/BrLzh7gHGfF/?utm_source=ig_embed&utm_campaign=embed_video_watch_again

    ಇಶಾ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ದೀಪ್‍ವೀರ್ ಬಾಲಿವುಡ್‍ನ ಹಿಟ್ ಹಾಡುಗಳಿಗೆ ಜೊತೆಯಾಗಿ ಹೆಜ್ಜೆ ಹಾಕಿದರು. ಅಷ್ಟೇ ಅಲ್ಲದೆ `ದಿಲ್ ಧಡಕನೆ ದೋ’ ಚಿತ್ರದ ಗಾಲಾ ಗುಡಿಯಾ ಹಾಡಿಗೆ ಕ್ಯೂಟ್ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಗೆದ್ದಿದೆ.

    https://www.instagram.com/p/BrL_oYmnr7r/?utm_source=ig_embed&utm_campaign=embed_video_watch_again

    ಒಂದೆಡೆ ದೀಪಿಕಾ ಹಾಗೂ ರಣ್‍ವೀರ್ ಇನ್ನೊದೆಡೆ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಕೂಲ್ ಆಗಿ ಹೆಜ್ಜೆ ಹಾಕಿದ್ದಾರೆ. ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋ ರೀತಿ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಬಹಳ ವರ್ಷಗಳ ನಂತರ ಜೋಡಿಯಾಗಿ `ಗುರು’ ಸಿನಿಮಾದ `ತೇರೆ ಬಿನಾ’ ಹಾಡಿಗೆ ಹೆಜ್ಜೆಹಾಕಿ ಎಲ್ಲರ ಗಮನ ಸೆಳೆದರು.

    https://www.instagram.com/p/BrM7cY7gRs0/?utm_source=ig_embed&utm_campaign=embed_video_watch_again

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv