Tag: ಮದುವೆ ಮನೆ

  • ಮದುವೆ ಮನೆಯಲ್ಲಿ ಅವಘಡ – ಸಿಲಿಂಡರ್ ಸ್ಫೋಟಿಸಿ 4 ಸಾವು, 60 ಮಂದಿಗೆ ಗಾಯ

    ಮದುವೆ ಮನೆಯಲ್ಲಿ ಅವಘಡ – ಸಿಲಿಂಡರ್ ಸ್ಫೋಟಿಸಿ 4 ಸಾವು, 60 ಮಂದಿಗೆ ಗಾಯ

    ಜೈಪುರ: ಮದುವೆ ಮನೆಯಲ್ಲಿ (Marriage House) ಸಂಭ್ರಮದ ವಾತಾವರಣದಿಂದ ಕೂಡಿರುವಾಗಲೇ ದುರ್ಘಟನೆಯೊಂದು ನಡೆದು, ನಾಲ್ವರು ಅತಿಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ಜೋಧ್‌ಪುರ ಬಳಿ ಗುರುವಾರ ನಡೆದಿದೆ.

    ಜೋಧ್‌ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವರನ ಮನೆಯಿಂದ ಮದುವೆ ಮಂಟಪದೆಡೆಗೆ ಮೆರವಣಿಗೆ ಹೊರಡಬೇಕಿದ್ದ ಸ್ವಲ್ಪ ಹೊತ್ತಿಗೂ ಮೊದಲೇ ಸಿಲಿಂಡರ್ ಸ್ಫೋಟಗೊಂಡು (Cylinder Blast) ನಾಲ್ವರು ಅತಿಥಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬುರ್ಕಾ ಧರಿಸಿ ಐಟಂ ಸಾಂಗ್‌ಗೆ ಸ್ಟೆಪ್ – ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರು ಅಮಾನತು

    ಮೂಲಗಳ ಪ್ರಕಾರ ಮದುವೆ ಊಟವನ್ನು ಸಿದ್ಧಪಡಿಸಲು ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮದುವೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಘಟನೆಯಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ.

    ಗಾಯಾಳುಗಳನ್ನು ನಗರದ ಎಂಜಿಹೆಚ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಇದನ್ನೂ ಓದಿ: ಪಿಜಿ ಯುವತಿಯರ ನಗ್ನ ದೃಶ್ಯ ಸೆರೆ ಹಿಡಿದು ಟಾರ್ಚರ್ – ಸೆಕ್ಸ್ ಆಫರ್‌ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ

    Live Tv
    [brid partner=56869869 player=32851 video=960834 autoplay=true]

  • ಮದುವೆ ಮನೆಯಲ್ಲಿ ಕನ್ನಡ ಸಾಂಗ್ ಹಾಕಿದ್ದಕ್ಕೆ MES ಪುಂಡರ ಹಲ್ಲೆ ಪ್ರಕರಣ – 10 ಜನ ಆರೋಪಿಗಳು ವಶಕ್ಕೆ

    ಮದುವೆ ಮನೆಯಲ್ಲಿ ಕನ್ನಡ ಸಾಂಗ್ ಹಾಕಿದ್ದಕ್ಕೆ MES ಪುಂಡರ ಹಲ್ಲೆ ಪ್ರಕರಣ – 10 ಜನ ಆರೋಪಿಗಳು ವಶಕ್ಕೆ

    ಬೆಳಗಾವಿ: ಮದುವೆ ಸಮಾರಂಭದಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದ ಘಟನೆ ದಾಮಣೆ ಗ್ರಾಮದಲ್ಲಿ ನಡೆದಿತ್ತು. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣದ ಸಂಬಂಧ ಹತ್ತು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ನಿನ್ನೆ ರಾತ್ರಿ ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮದುವೆ ಸಮಾರಂಭದಲ್ಲಿ ಕೆಲ ಕಿಡಗೇಡಿಗಳು ಗಲಾಟೆ ಮಾಡಿದ್ದಾರೆ. ಗಲಾಟೆಗೆ ಕಾರಣ ಏನು ಅನ್ನೋದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಈ ಇಬ್ಬರ ನಡುವೆ ಈ ಹಿಂದೆ ಎನಾದ್ರೂ ದ್ವೇಷ ಇತ್ತಾ ಎಂಬ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಆರು ತಿಂಗಳ ಹಿಂದೆ ಬೈಕ್ ಸುಟ್ಟಿದ್ದರೆಂಬ ಮಾಹಿತಿ ನೀಡಿದ್ದಾರೆ. ಈ ಕುರಿತಂತೆಯೂ ಕೂಡ ತನಿಖೆ ಮಾಡಲಾಗುತ್ತದೆ. ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಗ್ರಾಮದಲ್ಲಿ ಮಚ್ಚು, ಲಾಂಗ್ ಹಿಡಿದುಕೊಂಡು ಓಡಾಡ್ತಾರೆ ಎಂಬ ಆರೋಪ ಇದೆ. ಆ ರೀತಿ ಎನಾದ್ರೂ ಕಂಡು ಬಂದ್ರೆ ಅಂಥವರನ್ನು ವಶಕ್ಕೆ ಪಡೆಯುತ್ತೇವೆ. ಈಗಾಗಲೇ ಘಟನಾ ಸ್ಥಳದಲ್ಲಿ ಒಂದು ಸಿಎಆರ್ ತುಕಡಿ ನಿಯೋಜಿಸಿ ಬಿಗಿ ಭದ್ರತೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಏನಿದು ಘಟನೆ?
    ಗುರುವಾರ ಬೆಳಗಾವಿ ತಾಲೂಕಿನ ದಾಣಮೆ ಗ್ರಾಮದಲ್ಲಿ ಸೈಬಣ್ಣವರ್ ಅವರ ಮನೆಯಲ್ಲಿ ಮದುವೆ ಸಮಾರಂಭವಿದ್ದ ಹಿನ್ನೆಲೆ ರಾತ್ರಿ ಬ್ಯಾಂಡ್ ಸೆಟ್ ಮೆರವಣಿಗೆ ಮೂಲಕ ವಧು-ವರನನ್ನು ಮನೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮದುವೆ ಸಮಾವೇಶದಲ್ಲಿ ಕನ್ನಡ ಧ್ವಜ ಹಿಡಿದು ‘ಕರುನಾಡೇ’ ಹಾಡಿಗೆ ಯುವಕರು ಕುಣಿದು ಕುಪ್ಪಳಿಸುತ್ತಿದ್ದರು. ಆಗ ಎಂಇಎಸ್ ಗೂಂಡಾಗಳಾದ ಅಜಯ್ ಯಳ್ಳೂರಕರ್, ಆಕಾಶ್ ಸೇರಿ ಎಂಟತ್ತು ಯುವಕರ ತಂಡವೊಂದು ಆಗಮಿಸಿ ಕನ್ನಡ ಹಾಡನ್ನು ಹಾಕದಂತೆ ಎಚ್ಚರಿಕೆ ನೀಡಿ ಗಲಾಟೆ ಪ್ರಾರಂಭಿಸಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದ ವಿಕೋಪಕ್ಕೆ ಹೋಗಿ ಎಂಇಎಸ್ ಪುಂಡರು ವಧು-ವರ ಸೇರಿ ಆತನ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಠಾಣೆಗೆ ಕುಟುಂಬಸ್ಥರ ದೂರು ನೀಡಿದ್ದರು. ಇದನ್ನೂ ಓದಿ: ಸ್ಕಿಡ್ ಆಗಿ ಕಮರಿಗೆ ಬಿದ್ದ ಸೈನಿಕರ ವಾಹನ: ಮೃತಪಟ್ಟ 7 ಯೋಧರು

  • ಮದುವೆ ಮನೆ ಗೋಡೆ ಕುಸಿದು 5 ವರ್ಷದ ಮಗು ಸೇರಿ ಮೂವರು ದುರ್ಮರಣ

    ಮದುವೆ ಮನೆ ಗೋಡೆ ಕುಸಿದು 5 ವರ್ಷದ ಮಗು ಸೇರಿ ಮೂವರು ದುರ್ಮರಣ

    ಲಕ್ನೋ: ಮದುವೆ ಮನೆ ಗೋಡೆ ಕುಸಿದು 5 ವರ್ಷದ ಮಗು ಸೇರಿ ಮೂವರು ಧಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸರೋಜಿನಿ ನಗರ ಪೊಲೀಸ ವೃತ್ತದ ಬಳಿಯ ಬಜ್ನೋರ್‌ನಲ್ಲಿ ನಡೆದಿದೆ.

    ಗುರುವಾರ ರಾತ್ರಿ ನಡೆದ ದುರ್ಘಟನೆಯಲ್ಲಿ 5 ವರ್ಷದ ಶ್ರದ್ಧಾ ಎಂಬ ಮಗು ಮೃತಪಟ್ಟಿದೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಗಲಭೆ ಪ್ರಕರಣಕ್ಕೆ ಟ್ವಿಸ್ಟ್ – ಇಡಿಗೆ ಪತ್ರ ಬರೆದ ದೆಹಲಿ ಪೊಲೀಸ್ ಆಯುಕ್ತ

    ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ಮದುವೆ ಮನೆಯಲ್ಲಿ ಎಲ್ಲರೂ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು, ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

    ಇದ್ದಕ್ಕಿದ್ದಂತೆ ಗೋಡೆ ಮತ್ತು ಬಾಲ್ಕನಿ ಕುಸಿದು ಬಿದ್ದು ಹೀಗಾಯಿತು ಎಂದು ಘಟನೆಯ ಪ್ರತ್ಯಕ್ಷದರ್ಶಿ ಅನಿಕೇತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್‌ ಡೋಸ್‌ ಉಚಿತ

  • ಮದುವೆ ಹಾಲ್‍ನಲ್ಲಿ ಜಗಳ ಬಿಡಿಸಲು ಹೋಗಿ ತಾನೇ ಹೆಣವಾದ!

    ಮದುವೆ ಹಾಲ್‍ನಲ್ಲಿ ಜಗಳ ಬಿಡಿಸಲು ಹೋಗಿ ತಾನೇ ಹೆಣವಾದ!

    ಧಾರವಾಡ: ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ.

    ಪೆಂಡಾರ್ ಗಲ್ಲಿಯ ಹಾಲ್‍ನಲ್ಲಿ ಮದುವೆ ಸಮಾರಂಭವೊಂದಕ್ಕೆ ಹೋದ ಧಾರವಾಡ ನಗರದ ಜಾಂಬವಂತನಗರ ನಿವಾಸಿ ಸಾದಿಕ್, ಇಬ್ಬರ ಮಧ್ಯೆ ಜಗಳ ನಡೆಯುತ್ತಿರುವುದನ್ನು ಬಿಡಿಸಲು ಹೋಗಿದ್ದನು. ಈ ವೇಳೆ ತಳ್ಳಾಟ, ನೂಕಾಟದಲ್ಲಿ ಸಿಲುಕಿದ್ದರಿಂದ ಸಾಧಿಕ್ ತಲೆಗೆ ಗೇಟ್ ಬಡಿದು ಗಂಭೀರ ಗಾಯಗೊಂಡಿದ್ದಾನೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಬಿಹಾರ ಕ್ರಿಕೆಟ್ ಮುಖ್ಯಸ್ಥನ ವಿರುದ್ಧ ಆರೋಪ 

    ತಕ್ಷಣ ಸ್ಥಳದಲ್ಲಿದ್ದ ಜನರು ಆತನನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾಧಿಕ್ ಸಾವನ್ನಪ್ಪಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ.

    ರಿಜ್ವಾನ್, ಸಾಧಿಕ್‍ನನ್ನು ತಳ್ಳಿದ್ದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ಆರೋಪಿ ರಿಜ್ವಾನ್‍ನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಮದುವೆ ಮನೆಯಲ್ಲಿ ರೋಟಿಗೆ ಉಗುಳಿ ಬೇಯಿಸ್ತಿದ್ದ ವ್ಯಕ್ತಿಯ ವೀಡಿಯೋ ವೈರಲ್

    ಮದುವೆ ಮನೆಯಲ್ಲಿ ರೋಟಿಗೆ ಉಗುಳಿ ಬೇಯಿಸ್ತಿದ್ದ ವ್ಯಕ್ತಿಯ ವೀಡಿಯೋ ವೈರಲ್

    ಲಕ್ನೋ: ಮದುವೆ ಸಮಾರಂಭವೊಂದರಲ್ಲಿ ರೋಟಿ ಸಿದ್ಧಪಡಿಸುತ್ತಿದ್ದ ವ್ಯಕ್ತಿ ಲಟ್ಟಿಸಿದ್ದ ರೋಟಿಗೆ ಉಗುಳಿ ನಂತರ ಅದನ್ನು ಬೇಯಿಸಿದ್ದಾನೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ನೌಶಾದ್ ಅಕಾ ಸೋಹೈಲ್ ಎಂದು ಗುರುತಿಸಲಾಗಿದ್ದು, ಈತ ಮೀರತ್ ನಿವಾಸಿಯಾಗಿದ್ದಾನೆ. ಘಟನೆ ವಿಚಾರವಾಗಿ ಮಾತನಾಡಿದ ಮೀರತ್ ಪೊಲೀಸರು, ಸದ್ಯ ಘಟನೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

    ವೀಡಿಯೋದಲ್ಲಿ ಆರೋಪಿ ಲಟ್ಟಿಸಿದ ರೋಟಿಗೆ ಉಗುಳಿ ನಂತರ ಅದನ್ನು ಬೇಯಲು ತಂದೂರಿ ಮೇಕರ್‍ನಲ್ಲಿ ಇಡುತ್ತಿರುವ ದೃಶ್ಯ ಕಾಣಿಸುತ್ತದೆ. ಈ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿಯೋರ್ವ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

  • ಮ್ಯಾಗಿ ಪ್ರಿಯರಿಗೆ ಗುಡ್ ನ್ಯೂಸ್ – ಮದುವೆ ಮನೆಗೂ ಕಾಲಿಟ್ಟಿದೆ ಮ್ಯಾಗಿ

    ಮ್ಯಾಗಿ ಪ್ರಿಯರಿಗೆ ಗುಡ್ ನ್ಯೂಸ್ – ಮದುವೆ ಮನೆಗೂ ಕಾಲಿಟ್ಟಿದೆ ಮ್ಯಾಗಿ

    ನವದೆಹಲಿ: ಮ್ಯಾಗಿ ಅಂದರೆ ಯಾರಿಗಿಷ್ಟ ಇಲ್ಲಾ ಹೇಳಿ? ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮ್ಯಾಗಿ ಎಲ್ಲರಿಗೂ ಅಚ್ಚು-ಮೆಚ್ಚು. 2 ನಿಮಿಷದಲ್ಲಿ ತಯಾರಾಗುವ ಬಿಸಿ ಬಿಸಿಯಾದ ಮ್ಯಾಗಿಯನ್ನು ನೋಡಿದವರು ಯಾರು ಸುಮ್ಮನೆ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ. ಸದ್ಯ ಮ್ಯಾಗಿ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.

    ನಿಮ್ಮ ನೆಚ್ಚಿನ ಮ್ಯಾಗಿ ಇದೀಗ ಮದುವೆ ಮನೆಯ ಊಟದ ಮೆನು ಲಿಸ್ಟ್‍ಗಳಲ್ಲಿ ಕೂಡ ಒಂದಾಗಿದೆ. ಕೊರೊನಾದಂತಹ ಸಾಂಕ್ರಾಮಿಕ ರೋಗ ದೇಶದಲ್ಲಿ ಹರಡಿದ್ದಾಗ ಎಷ್ಟೋ ಮಂದಿ ಲಾಕ್ ಡೌನ್ ಸಮಯದಲ್ಲಿ ಮ್ಯಾಗಿಯನ್ನೇ ಆಹಾರವಾಗಿ ಅವಲಂಬಿಸಿದ್ದರು.

    ಇತ್ತೀಚೆಗೆ ಪತ್ರಕರ್ತೆ ಸೌಮ್ಯ ಲೇಖನಿ ಎಂಬವರು ತಮ್ಮ ಸೋದರ ಸಂಬಂಧಿ ವಿವಾಹ ಮಹೋತ್ಸವಕ್ಕೆ ಹೋಗಿದ್ದಾಗ, ಅಲ್ಲಿನ ಫುಡ್ ಕೌಂಟರ್‍ನಲ್ಲಿ ಮ್ಯಾಗಿ ಕೂಡ ಇರುವುದನ್ನು ಕಂಡು ಮೊಬೈಲ್ ನಲ್ಲಿ ಫೋಟೋವನ್ನು ಸೆರೆಹಿಡಿದಿದ್ದಾರೆ. ಅಲ್ಲದೆ ಕ್ಯಾಪ್ಷನ್‍ನಲ್ಲಿ ನನ್ನ ಸೋದರ ಸಂಬಂಧಿ ಯೋಚಿಸಿರುವ ರೀತಿ ಮತ್ತು ಅವರ ಮದುವೆಯಲ್ಲಿ ಮ್ಯಾಗಿ ಕೌಂಟರ್ ಏರ್ಪಡಿಸಿರುವುದಕ್ಕಾಗಿ ನಾನು ಅವರನ್ನು ಪ್ರೀತಿಸುತ್ತೇನೆ ಎಂದು ಬರೆದುಕೊಳ್ಳುವ ಮೂಲಕ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಇನ್ನೂ ಫೋಟೋದಲ್ಲಿ ಮರದ ರ್ಯಾಕ್‍ಗಳಲ್ಲಿ ಮ್ಯಾಗಿ ಪ್ಯಾಕೆಟ್‍ಗಳನ್ನು ಇಟ್ಟುಕೊಂಡು, ಸ್ವಲ್ಪ ಮ್ಯಾಗಿಯನ್ನು ಒಲೆ ಮೇಲೆ ಬಾಣಸಿಗ ಬೇಯಿಸುತ್ತಿರುವುದನ್ನು ಕಂಡು ಬಂದಿದೆ. ಈ ಫೋಟೋ ಟ್ವೀಟರ್ ನಲ್ಲಿ ವೈರಲ್ ಆಗುತ್ತಿದ್ದಂತೆಯೇ 1 ಸಾವಿರಕ್ಕೂ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್ಸ್ ಗಳು ಬಂದಿದೆ.

  • ಮೋಹಕ ನಿಗೂಢ ಬಚ್ಚಿಟ್ಟುಕೊಂಡ ಮೀನಾಬಜಾರ್ ಟೀಸರ್!

    ಮೋಹಕ ನಿಗೂಢ ಬಚ್ಚಿಟ್ಟುಕೊಂಡ ಮೀನಾಬಜಾರ್ ಟೀಸರ್!

    ಬೆಂಗಳೂರು: ಕಿರುತೆರೆ ಜಗತ್ತಿನಲ್ಲಿ ಅದ್ದೂರಿತನದ ಸೂಪರ್ ಹಿಟ್ ಮೆಗಾ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದವರು ರಾಣಾ ಸುನೀಲ್ ಕುಮಾರ್ ಸಿಂಗ್. ಅವರು ಧಾರಾವಾಹಿ ಲೋಕದಿಂದ ಹಿರಿತೆರೆಯತ್ತ ಮುಖ ಮಾಡಿ ಒಂದಷ್ಟು ವರ್ಷಗಳೇ ಕಳೆದಿವೆ. ಈ ಹಿಂದೆ ‘ಮದುವೆ ಮನೆ’ ಎಂಬ ಚಿತ್ರ ನಿರ್ದೇಶನ ಮಾಡಿದ್ದ ಅವರು ಇದೀಗ ತಮ್ಮ ಜೀವಿತದ ಮಹಾ ಕನಸಿನಂಥಾ ‘www.ಮೀನಾ ಬಜಾರ್.ಕಾಮ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಮೇಕಿಂಗ್ ಸೂಚನೆಗಳೊಂದಿಗೇ ಮನಸೆಳೆದಿರೋ ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ಇದೀಗ ‘ಮೀನಾ ಬಜಾರ್’ನ ಮೋಹಕವಾದ ಟೀಸರ್ ಬಿಡುಗಡೆಗೊಂಡಿದೆ.

    ಹೇಳಿಕೇಳಿ ರಾಣಾ ಸುನೀಲ್ ಕುಮಾರ್ ಸಿಂಗ್ ಎಂದರೆ ಅದ್ದೂರಿತನ ಎಂಬಂಥಾ ಇಮೇಜ್ ಇದೆ. ಅದಕ್ಕೆ ತಕ್ಕುದಾಗಿಯೇ ಈ ಟೀಸರ್ ರೂಪುಗೊಂಡಿದೆ. ರೋಮಾಂಚಕ ಸನ್ನಿವೇಶಗಳ ಆಳದಲ್ಲಿ ರೌದ್ರ ಲೋಕದ ಕಥೆಯೊಂದಿರೋ ಸುಳಿವಿನೊಂದಿಗೆ ಈ ಟೀಸರ್ ಈಗ ವ್ಯಾಪಕ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಎಲ್ಲವನ್ನೂ ಕಾಣಿಸಿ ಏನೂ ಗೊತ್ತಾಗದಂಥಾ ಭಾವ ಹುಟ್ಟಿಸಿ ಅಚ್ಚರಿ ಮತ್ತು ಸಿನಿಮಾದೆಡೆಗಿನ ಕುತೂಹಲ ಕಾಯ್ದಿಟ್ಟುಕೊಳ್ಳುವ ತಂತ್ರಗಾರಿಕೆಯೊಂದಿಗೆ ಮೂಡಿ ಬಂದಿರೋ ಈ ಟೀಸರ್ ನಿಜಕ್ಕೂ ಪ್ರಾಮಿಸಿಂಗ್ ಆಗಿದೆ.

    ಸಿ.ಎನ್.ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿರೋ ‘ಮೀನಾ ಬಜಾರ್’ ಏಕ ಕಾಲದಲ್ಲಿಯೇ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಿರ್ಮಾಣಗೊಂಡಿದೆ. ಅತ್ಯಂತ ಸಾವಕಾಶದಿಂದ ವರ್ಷಗಟ್ಟಲೆ ಸಮಯ ತೆಗೆದುಕೊಂಡೇ ಸುನೀಲ್ ಕುಮಾರ್ ಸಿಂಗ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿಯೂ ನಟಿಸಿದ್ದಾರೆ. ಈ ಟೀಸರ್‍ನಲ್ಲಿಯೇ ಈ ಸಿನಿಮಾ ಮೂಡಿ ಬಂದಿರೋ ರೀತಿಯೂ ಸ್ಪಷ್ಟವಾಗಿ ಜಾಹೀರಾಗಿದೆ. ಪ್ರತಿ ದೃಶ್ಯಗಳೂ ಕಣ್ಣಿಗೆ ಹಬ್ಬದಂತೆ ಕಾಣಿಸುತ್ತಾ, ಮೋಹಕ್ಕೀಡು ಮಾಡುತ್ತಲೇ ಬೆಚ್ಚಿ ಬೀಳೋ ಹೊಳಹುಗಳನ್ನೂ ನೀಡುವ ಮೂಲಕ ಮೀನಾ ಬಜಾರ್ ಟೀಸರ್ ಇದೀಗ ಎಲ್ಲೆಡೆ ಹರಿದಾಡಲಾರಂಭಿಸಿದೆ.

  • ಮದ್ವೆ ಮನೆಯಲ್ಲಿ 18 ತಿಂಗಳ ಕಂದಮ್ಮನ ಮೇಲೆ ಸಂಬಂಧಿಕನಿಂದಲೇ ರೇಪ್!

    ಮದ್ವೆ ಮನೆಯಲ್ಲಿ 18 ತಿಂಗಳ ಕಂದಮ್ಮನ ಮೇಲೆ ಸಂಬಂಧಿಕನಿಂದಲೇ ರೇಪ್!

    ಆಗ್ರಾ: 18 ತಿಂಗಳ ಪುಟ್ಟ ಕಂದಮ್ಮನ ಮೇಲೆ ಸಂಬಂಧಿಕನೇ ಮದುವೆ ಸಮಾರಂಭದಲ್ಲಿ ಅತ್ಯಾಚಾರ ಮಾಡಿದ್ದಾನೆ. ಮಗುವನ್ನು ಯಾರಿಗೂ ತಿಳಿಯದಂತೆ ಪೊದೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಕೆಲ ದಿನಗಳ ಹಿಂದೆ ಪೋಹಿಯಾ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ತಾಯಿಯೊಂದಿಗೆ ಮದುವೆಗೆ ಬಂದಿದ್ದ ಮಗುವನ್ನು ಸಂಬಂಧಿಕನೊಬ್ಬ ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಿಂದ ಯಾರಿಗೂ ತಿಳಿಯದಂತೆ ಎತ್ತುಕೊಂಡು ಹೋಗಿ, ಅಮಾನುಷವಾಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ತುಸು ದೂರದಲ್ಲಿದ್ದ ಪೊದೆಯೊಂದರಲ್ಲಿ ರಕ್ತಸಿಕ್ತವಾಗಿದ್ದ ಮಗುವನ್ನು ಎಸೆದು ಹೋಗಿದ್ದಾನೆ.

    ಮದುವೆ ನಡೆಯುತ್ತಿದ್ದ ಸ್ಥಳದಲ್ಲಿ ಮಗು ಕಾಣದಿದ್ದಾಗ, ತಾಯಿ ಹಾಗೂ ಕೆಲವರು ಮಗುವನ್ನು ಸುತ್ತಮುತ್ತ ಹುಡುಕಿದ್ದಾರೆ. ಆಗ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಸುಮಾರು 400 ಮೀ. ದೂರದಲ್ಲಿದ್ದ ಪೊದೆಯೊಂದರ ನಡುವೆ ಮಗು ಜ್ಞಾನ ತಪ್ಪಿ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಈ ವೇಳೆ ನಡೆದಿರುವ ವಿಷಯದ ಬಗ್ಗೆ ತಾಯಿ ಬಹಿರಂಗಪಡಿಸಲು ಮುಂದಾದಾಗ ಆಕೆಯ ಸಂಬಂಧಿಕರು ಯಾರಿಗೂ ತಿಳಿಸಿದಂತೆ ಹೇಳಿ ತಾಯಿ ಮಗುವನ್ನು ಸ್ಥಳದಿಂದ ಕಳುಹಿಸಿದ್ದಾರೆ.

    ಬಳಿಕ ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬಿಸಿದ್ದಾರೆ. ಅಲ್ಲದೆ ಮಗುವಿನ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಮನ್ ಕೀ ಬಾತ್ ಕೇಳುತ್ತಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಕಾರ್ಯಕರ್ತ

    ಮನ್ ಕೀ ಬಾತ್ ಕೇಳುತ್ತಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಕಾರ್ಯಕರ್ತ

    ಮಂಗಳೂರು: ಮದುವೆ ಮನೆ ಎಂದರೆ ಪರಸ್ಪರ ಮಾತು, ನಗು, ಮಕ್ಕಳ ಹರಟೆ ಎಲ್ಲವೂ ಇರುತ್ತೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮದುವೆ ಹಾಲ್ ನಲ್ಲಿ ಮಾತ್ರ ಮೋದಿ ಅವರ ಮನ್ ಕೀ ಬಾತ್ ಕೇಳಿಸುತಿತ್ತು.

    ಹೌದು. ಸುಳ್ಯ ತಾಲೂಕಿನ ಬಿಜೆಪಿ ಕಾರ್ಯಕರ್ತ ಜಯರಾಮ ಅವರು ಪ್ರಧಾನಿ ನರೇಂದ್ರ ಮೋದಿಯವರ 53ನೇ ಮನದ ಮಾತು ಕೇಳುತ್ತಲೇ ಗ್ರಹಸ್ಥಾಶ್ರಮಕ್ಕೆ ಕಾಲಿರಿಸಿದ್ದಾರೆ. ಭಾನುವಾರ ಸುಳ್ಯ ನಗರದ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿಯಲ್ಲಿ ಜಯರಾಮ ಹಸೆಮಣೆ ಏರಿದ್ದರು.

    ಮೋದಿಯ ಮನ್ ಕೀ ಬಾತ್ ದಿನವಾಗಿದ್ದರಿಂದ ಮದುವೆಗೆ ಆಗಮಿಸಿದ್ದ ಜನರಿಗೆ ಮೋದಿಯ ರೇಡಿಯೋ ಮಾತು ಕೇಳುವಂತೆ ವ್ಯವಸ್ಥೆ ಮಾಡಿದ್ದರು. 11.30ರ ವೇಳೆಗೆ ಧಾರಾ ಮುಹೂರ್ತದಲ್ಲಿ ಮದುವೆಯಾದ ಜಯರಾಮ, ಅತ್ತ ಮೋದಿ ಮಾತು ಕೇಳುತ್ತಲೇ ಹಸೆಮಣೆ ತುಳಿದಿದ್ದಾರೆ.

    ನವ ವಧುವರರು ಪ್ರಧಾನಿ `ಮನ್ ಕಿ ಬಾತ್’ ಆಲಿಸಲು ಮಂಟಪ ಬಿಟ್ಟು ರೇಡಿಯೋ ಬಳಿ ಬಂದು ಸೇರಿದ ಎಲ್ಲ ಬಂಧುಗಳೊಂದಿಗೆ ಕುಳಿತು ಮೋದಿಯ ಮನದ ಮಾತಿಗೆ ಸಾಕ್ಷಿಗಳಾದರು. ಮನದ ಮಾತು ಕೇಳಿಸುವುದಕ್ಕಾಗಿ ವಿಶೇಷವಾಗಿ ರೇಡಿಯೋ ಮತ್ತು ಸ್ಪೀಕರ್ ವ್ಯವಸ್ಥೆ ಮಾಡಿದ್ದರು. ಸೇರಿದ ನೂರಾರು ಬಂಧು ಮಿತ್ರರು ಒಂದೆಡೆ ಕೂತು ಮನದ ಮಾತನ್ನು ಆಲಿಸಿ ನವ ಜೋಡಿಯನ್ನು ಆಶೀರ್ವದಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ದಾವಣಗೆರೆ: ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಸಾಮಾಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದಲ್ಲಿ ನಡೆದಿದೆ.

    ಷಡಕ್ಷರಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅಡುಗೆ ಮಾಡಲು ಒಲೆ ಹೊತ್ತಿಸುವಾಗ ಈ ಘಟನೆ ಸಂಭವಿಸಿದ್ದು ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿದೆ. ಸಿಲಿಂಡರ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಆಗಿಲ್ಲ.

    ಇನ್ನೆರಡು ದಿನಗಳಲ್ಲಿ ಷಡಕ್ಷರಪ್ಪ ಅವರ ಮನೆಯಲ್ಲಿ ಮದುವೆ ಸಮಾರಂಭವಿತ್ತು. ಆದ್ದರಿಂದ ಮನೆಯಲ್ಲಿ ಮದುವೆ ಬೇಕಾದ ಸಾಮಾಗ್ರಿಗಳನ್ನು ತಂದಿಡಲಾಗಿತ್ತು. ದುರದೃಷ್ಟವೆನ್ನುವಂತೆ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮದುವೆ ಸಾಮಾಗ್ರಿಗಳೆಲ್ಲ ಬೆಂಕಿಗಾಹುತಿಯಾಗಿದೆ.

    ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಣ ಮಾಡಿದ್ದಾರೆ. ಅಲ್ಲದೆ ಘಟನೆ ಕುರಿತು ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗದಿದ್ದರೂ ಮದುವೆ ಸಂಭ್ರಮದಲ್ಲಿದ್ದ ಮನೆಮಂದಿ ಮುಂದೇನು ಮಾಡುವುದು ಎನ್ನುವ ಚಿಂತೆಯಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv