Tag: ಮದೆನಾಡು

  • ಕೊಡಗಿನ ಹಲವೆಡೆ ಭೂಕಂಪನ – ಬೆಚ್ಚಿದ ಜನ

    ಕೊಡಗಿನ ಹಲವೆಡೆ ಭೂಕಂಪನ – ಬೆಚ್ಚಿದ ಜನ

    ಮಡಿಕೇರಿ: ಕೊಡಗಿನ (Kodagu) ಹಲವೆಡೆ ಬುಧವಾರ (ಮಾ.12) ಬೆಳಗ್ಗೆ 10:50ರ ಸುಮಾರಿಗೆ ಭೂ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು `ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ.

    ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಗೇರಿ, ಮದೆನಾಡು ಗ್ರಾಮ, ಬೆಟ್ಟತ್ತೂರಿನ ಸುತ್ತಮುತ್ತಲಿನಲ್ಲಿ ಕಂಪನದ ಅನುಭವವಾಗಿದೆ. ಪದ್ಮನಾಭ ಮತ್ತು ಭರತ್ ಎಂಬುವವರ ಮನೆಯ ಅಸುಪಾಸಿನಲ್ಲಿ ಭೂಮಿ ಕಂಪಿಸಿದೆ. 2018ರಲ್ಲಿಯೂ ಈ ಭಾಗದಲ್ಲಿ ಕಂಪನದ ಅನುಭವ ಆಗಿತ್ತು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಯೋವರೆಗೂ ದರ್ಶನ್‌ಗೆ ಚಿರಋಣಿ: ರಚಿತಾ ರಾಮ್

    ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ. ಭೂಮಿ ಕಂಪಿಸಿದ ಸಂದೇಶವು ವಾಟ್ಸಪ್ ಗ್ರೂಪ್‌ಗಳಲ್ಲಿ ಹರಿದಾಡಿದೆ. ಸ್ಥಳೀಯರಿಂದ ಭೂಕಂಪನದ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ನಮ್ಮ ಪಂಚಾಯತಿ ಸಿಬ್ಬಂದಿಗಳು ಭೂಕಂಪದ ಅನುಭವವನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ಹೆಚ್ಚಿನ ವಿವರಗಳನ್ನು ಪಡೆಯಲು ಪತ್ರ ಬರೆಯಲು ಕಾರ್ಯಪ್ರವೃತ್ತರಾಗಿದ್ದೇವೆ. ಸುಮಾರು 11 ಗಂಟೆ ವೇಳೆಯಲ್ಲಿ ಗುಡುಗಿನ ರೀತಿಯಲ್ಲಿ ಶಬ್ದ ಅಗಿದೆ ಎಂದು ಇಲ್ಲಿನ ಸಿಬ್ಬಂದಿಗಳು ತಿಳಿಸಿದ್ದಾರೆ ಎಂದು ಮದೆನಾಡು ಗ್ರಾಪಂ ಪಿಡಿಓ ಯಾದವ್ `ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಪಿಎಸ್‌ಸಿ ಪರೀಕ್ಷೆಯ ಲೋಪದೋಷಗಳನ್ನು ಪರಿಹರಿಸಿ: ಬಿ.ವೈ.ವಿಜಯೇಂದ್ರ

    2018 ರ ರೀತಿಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪವು  ಗ್ರಾಮದಲ್ಲಿ ಮತ್ತೆ ಮರುಕಳಿಸದಿರಲಿ ಎಂದು ಗ್ರಾಮಸ್ಥರು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

  • ಮಡಿಕೇರಿ-ಮಂಗಳೂರು ಹೈವೇಯಲ್ಲಿ ಗುಡ್ಡ ಕುಸಿತ

    ಮಡಿಕೇರಿ-ಮಂಗಳೂರು ಹೈವೇಯಲ್ಲಿ ಗುಡ್ಡ ಕುಸಿತ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ (Kodagu District) ಸುರಿಯುತ್ತಿರುವ ಭಾರೀ ಮಳೆಗೆ (Heavy Rain) ಮಡಿಕೇರಿ – ಮಂಗಳೂರು (Madikeri-Mangaluru) ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಗುಡ್ಡ ಕುಸಿತವಾಗಿದೆ.

    ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ ರಾತ್ರಿ ವೇಳೆ ಮರ ಸಹಿತ ಗುಡ್ಡ ಕುಸಿದಿದ್ದು (Landslide) ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

     

    ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಜೆಸಿಬಿ, ಹಿಟಾಚಿ ಯಂತ್ರ ಬಳಸಿ ರಸ್ತೆಯ ಒಂದು ಬದಿಯ ಮಣ್ಣು ಮತ್ತು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ. ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು, ಮಡಿಕೇರಿ ತಹಶಿಲ್ದಾರ್ ಸ್ಥಳದಲ್ಲಿ ಹಾಜರಾಗಿ ತೆರವು ಕಾರ್ಯ ನಡೆಸುತ್ತಿದ್ದಾರೆ.

    ಭಾರೀ ಗಾಳಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ಹಿನ್ನೆಲೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಜಿಲ್ಲೆಯ ಅಂಗನವಾಡಿ, ಶಾಲೆ, ಹಾಗೂ ಪಿಯು ಕಾಲೇಜಿಗೆ ಮಂಗಳವಾರವೂ ರಜೆ ಘೋಷಿಸಿ ಕೊಡಗು ಡಿಸಿ ವೆಂಕಟ್ ರಾಜ್ ಆದೇಶ ಹೊರಡಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುರಂತ ಸಂಭವಿಸಿ 10 ದಿನಗಳಾದರು ಸಂತ್ರಸ್ತರ ಕೇಂದ್ರದಲ್ಲೇ ಇರುವ ಸಾವಿರಾರು ನಿವಾಸಿಗಳು

    ದುರಂತ ಸಂಭವಿಸಿ 10 ದಿನಗಳಾದರು ಸಂತ್ರಸ್ತರ ಕೇಂದ್ರದಲ್ಲೇ ಇರುವ ಸಾವಿರಾರು ನಿವಾಸಿಗಳು

    ಮಂಗಳೂರು: ಕೊಡಗಿನ ಜೋಡುಪಾಲ, ಮದೆನಾಡಿನಲ್ಲಿ ದುರಂತ ಎದುರಾಗಿ ಹತ್ತು ದಿನ ಕಳೆದಿವೆ. ಆದರೂ ಅಲ್ಲಿನ ಮೂರು ಗ್ರಾಮಗಳ ಸಾವಿರಾರು ನಿವಾಸಿಗಳು ಇನ್ನು ಕಲ್ಲುಗುಂಡಿ, ಸಂಪಾಜೆಯಲ್ಲಿರುವ ಕೇಂದ್ರದಲ್ಲೇ ತಂಗಿದ್ದಾರೆ.

    ಈ ನಡುವೆ ತಮ್ಮ ತಮ್ಮ ಮನೆಗಳನ್ನು ನೋಡಿ ಹೋಗಲು ಬರುವ ಬಹುತೇಕ ನಿವಾಸಿಗಳು ಅಲ್ಲಿಂದ ಸಾಮಾಗ್ರಿಗಳನ್ನು ಹೊತ್ತು ಒಯ್ಯುತ್ತಿದ್ದಾರೆ. ಕೆಲವು ಮನೆಗಳಿಗೆ ಹಾನಿ ಆಗದಿದ್ದರೂ, ಇಲ್ಲಿ ಮತ್ತೆ ಮಳೆಯಾಗಿ ಭೂಕುಸಿತವಾದರೆ ಅಪಾಯ ಅನ್ನುವ ಭಾವನೆ ನಿವಾಸಿಗಳಲ್ಲಿದೆ. ಹೀಗಾಗಿ ಸರ್ಕಾರದಿಂದ ಸೂಕ್ತ ಜಾಗದಲ್ಲಿ ಪುನರ್ವಸತಿ ಮಾಡಿಕೊಟ್ಟರೆ ತಮ್ಮ ಮನೆಗಳನ್ನು ಬಿಟ್ಟು ಅಲ್ಲಿಗೆ ತೆರಳಲು ರೆಡಿಯಾಗಿದ್ದಾರೆ. ಅದಕ್ಕಾಗಿ ಸ್ವಯಂಸೇವಕರ ಜೊತೆಗೆ ಮನೆಗೆ ತೆರಳಿ, ಅಗತ್ಯ ವಸ್ತುಗಳನ್ನು ಮೂಟೆ ಕಟ್ಟಿ ಸಂತ್ರಸ್ತರ ಕೇಂದ್ರಕ್ಕೆ ಹೊತ್ತು ತರುತ್ತಿದ್ದಾರೆ.

    ಇತ್ತೀಚೆಗೆ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ತಜ್ಞರು ಸ್ಥಳ ಪರಿಶೀಲಿಸಿದ ಸಂದರ್ಭದಲ್ಲಿ ಜೋಡುಪಾಲ, ಮದೆನಾಡು, ಮಣ್ಣಂಗೇರಿ ಪ್ರದೇಶಗಳು ವಾಸಕ್ಕೆ ಯೋಗ್ಯವಲ್ಲ ಎಂದಿದ್ದರು. ಹೀಗಾಗಿ ದುರಂತದ ಭಯ ಸಂತ್ರಸ್ತರಲ್ಲಿ ಆವರಿಸಿದ್ದು, ಮತ್ತೆ ಬೆಟ್ಟಗಳ ಮಧ್ಯೆ ವಾಸ ಇರುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

    ಇನ್ನೊಂದೆಡೆ ಘಟ್ಟಗಳ ವ್ಯಾಪ್ತಿಯಲ್ಲಿ ಈಗಾಗಲೇ ಬಿರುಕು ಬಿಟ್ಟು ನಿಂತಿರುವ ಕಾರಣ, ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮಾನವ ವಾಸ ತಕ್ಕುದಾಗಿಲ್ಲವಾದರೆ, ಬಡವರಿಗೆ ಪ್ರತ್ಯೇಕ ವಸತಿ ನಿರ್ಮಿಸಿ, ಅಲ್ಲಿರುವ ಕಾಫಿ ಎಸ್ಟೇಟ್‍ಗಳನ್ನು ವಶಕ್ಕೆ ತೆಗೆದುಕೊಳ್ಳುವ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ್ತೆ ಜೋಡುಪಾಲ, ಮದೆನಾಡಿನಲ್ಲಿ ಗುಡ್ಡ ಕುಸಿತ ಸಾಧ್ಯತೆ: ವಿಜ್ಞಾನಿಗಳು ಹೇಳೋದು ಏನು? ವಿಡಿಯೋ ನೋಡಿ

    ಮತ್ತೆ ಜೋಡುಪಾಲ, ಮದೆನಾಡಿನಲ್ಲಿ ಗುಡ್ಡ ಕುಸಿತ ಸಾಧ್ಯತೆ: ವಿಜ್ಞಾನಿಗಳು ಹೇಳೋದು ಏನು? ವಿಡಿಯೋ ನೋಡಿ

    ಮಡಿಕೇರಿ: ಕೊಡಗಿನ ಜೋಡುಪಾಲ, ಮದೆನಾಡು ಪ್ರದೇಶಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ರಾಜ್ಯ ನೈಸರ್ಗಿಕ ನಿರ್ವಹಣೆ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ.

    ಭೂ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ, ಗುಡ್ಡ ಪ್ರದೇಶದಲ್ಲಿ ನೀರು ಇಂಗಿ ಸ್ಫೋಟಗೊಂಡು ಹೊರಬಂದಿದೆ. ಮತ್ತೆ ಕೆಲವು ಕಡೆ ಗುಡ್ಡಗಳು ಕುಸಿದು ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

    ಭಾರೀ ಮಳೆಯಿಂದಾಗಿ ಮಣ್ಣು ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಕಳೆದುಕೊಂಡ ಪರಿಣಾಮ ಅಂತರ್ಜಲ ಮಟ್ಟ ಏರಿ ಈ ಕುಸಿತ ಸಂಭವಿಸಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಮುಂದೆ ಪರಿಸ್ಥಿತಿಯನ್ನು ಯಾವ ರೀತಿ ಎದುರಿಸಬೇಕು ಎಂಬುದಕ್ಕೆ ಕ್ರಮ ಕೈಗೊಳ್ಳಬೇಕಿದೆ. ಇಲ್ಲಿನ ವಾತಾವರಣವನ್ನು ನೋಡಿದರೆ ಜನರಿಂದ ಯಾವುದೇ ರೀತಿಯ ತೊಂದರೆ ಆಗಿಲ್ಲ. ಈಗ ನಾವು ಪ್ರಾಥಮಿಕ ಮಾಹಿತಿ ಕಲೆ ಹಾಕಲು ಬಂದಿದ್ದು ಮುಂದೆ ಸಮಗ್ರ ಅಧ್ಯಯನಕ್ಕೆ ತಂಡ ಬರಲಿದೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ 2 ತಿಂಗಳು ಅಧ್ಯಯನ ನಡೆಸಿ ವರದಿ ನೀಡಲಾಗುತ್ತದೆ ಎಂದು ವಿವರಿಸಿದರು.

    ಇಲ್ಲಿ ಜನರು ವಾಸಿಸಬಹುದೇ ಇಲ್ಲವೇ ಎಂಬುದನ್ನು ನೋಡಲು ಬಂದಿದ್ದೇವೆ. ಬಳಿಕ ಪರಿಸ್ಥಿತಿಯನ್ನು ಹೇಗೆ ಸರಿಪಡಿಸಲಾಗುತ್ತದೆ ಎಂಬುದನ್ನು ಕಂಡು ಕೊಳ್ಳಬೇಕಿದೆ ಪ್ರಕೃತಿ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ. ಆದರೆ ನಾವು ಮಾಡಿರುವ ತಪ್ಪನ್ನು ಮುಂದೆ ಮಾಡದೇ ಇರುವ ಹಾಗೇ ನೋಡಿಕೊಳ್ಳಬೇಕಿದೆ ಎಂದು ಶ್ರೀನಿವಾಸರೆಡ್ಡಿ ಹೇಳಿದರು.

    ಬೋಪಯ್ಯ ತಿರುಗೇಟು: ಜೋಡುಪಾಲ ವಾಸ ಯೋಗ್ಯ ಅಲ್ಲವೆಂಬ ತಜ್ಞರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬೋಪಯ್ಯ ಹತ್ತಾರು ವರ್ಷಗಳಿಂದ ವಾಸವಿದ್ದವರನ್ನು ಎಬ್ಬಿಸುವುದು ಸರಿಯಲ್ಲ ಎಂದಿದ್ದಾರೆ.

    ಸಂಪಾಜೆಯಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿದ ಅವರು, ಯಾವುದೇ ಹೋಮ್ ಸ್ಟೇಗಳಿದ್ದಲ್ಲಿ ಭೂ ಕುಸಿತ ಆಗಿಲ್ಲ, ಬರೀ ಬಡವರ ಮನೆಗಳಿರುವಲ್ಲಿ ಹೆಚ್ಚು ಭೂಕುಸಿತವಾಗಿ ನಾಶ ಆಗಿದೆ. ಹೋಮ್ ಸ್ಟೇ ಇಲ್ಲದ ಮೊಣ್ಣಂಗೇರಿ ಸ್ಥಳಗಳಲ್ಲಿ ಪೂರ್ತಿ ನಾಶವಾಗಿದೆ. ಒಂದು ವರ್ಷದಲ್ಲಿ ಬೀಳಬೇಕಾಗಿದ್ದ ಮಳೆ 15 ದಿನದಲ್ಲಿ ಬಿದ್ದ ಪರಿಣಾಮ ಈ ದುರ್ಘಟನೆಯಾಗಿದೆ ಎಂದು ಎಂದು ವಿಜ್ಞಾನಿಗಳ ಹೇಳಿಕೆಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಪಾಜೆ ಘಾಟಿ ಶ್ರೇಣಿಯಲ್ಲೇ ಬೆಟ್ಟಗಳು ಭಾರೀ ಕುಸಿತವಾಗಿದ್ದು ಯಾಕೆ?

    ಸಂಪಾಜೆ ಘಾಟಿ ಶ್ರೇಣಿಯಲ್ಲೇ ಬೆಟ್ಟಗಳು ಭಾರೀ ಕುಸಿತವಾಗಿದ್ದು ಯಾಕೆ?

    ಬೆಂಗಳೂರು: ಕೊಡಗಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದರೂ ಎಲ್ಲ ಕಡೆ ಯಾಕೆ ಭೂ ಕುಸಿತವಾಗಿಲ್ಲ ಎಂದು ಹಲವು ಜನ ಈಗ ಪ್ರಶ್ನೆ ಮಾಡುತ್ತಿದ್ದಾರೆ.

    ದೇವರಕೊಲ್ಲಿ, ಜೋಡುಪಾಲ, ಮದೆನಾಡು, ಮುಕ್ಕೋಡ್ಲು, ಮಾದಾಪುರ ಗಾಳಿಬೀಡು ಹಮ್ಮಿಯಾಲ, ದೇವಸ್ತೂರು, ಸಂಪಾಜೆಯ ಅರೆಕಲ್ಲು, ಜೇಡ್ಲ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತವಾಗಿದ್ದರಿಂದ ಜನ ಈಗ ಈ ಪ್ರಶ್ನೆ ಕೇಳುತ್ತಿದ್ದಾರೆ.

    ಮಡಿಕೇರಿ- ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಶ್ರೇಣಿಯಲ್ಲಿ ಬಿದ್ದ ಮಳೆಗಿಂತಲೂ ಜಾಸ್ತಿ ಮಳೆ ಪುಷ್ಪಗಿರಿ ಬೆಟ್ಟ, ಕೊಡಗಿನ ಅತಿ ಎತ್ತರ ಬೆಟ್ಟವಾದ ತಡಿಯಂಡಮೋಳು, ಬ್ರಹ್ಮಗಿರಿ ಬೆಟ್ಟ, ತಲಕಾವೇರಿ ಮುಂತಾದ ಬೆಟ್ಟದಲ್ಲಿ ಬಿದ್ದಿದೆ. ಆದರೆ ಇಲ್ಲಿ ಎಲ್ಲೂ ಆಗದ ಕುಸಿತಗಳು ಇಲ್ಲೆ ಯಾಕೆ ಆಗಿದೆ ಎನ್ನುವ ಪ್ರಶ್ನೆಗಳು ಈಗ ಎದ್ದಿದೆ.

    ಈ ಪ್ರಶ್ನೆಗೆ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಉತ್ತರ ಕಂಡುಕೊಳ್ಳಬೇಕಾದರೆ ಹಲವು ದಿನಗಳು ಬೇಕಾಗಬಹುದು. ಆದರೆ ನಿರಂತರ ಭೂ ಕೊರೆತ, ಭಾರೀ ವಾಹನಗಳ ಓಡಾಟದಿಂದ ಈ ಪ್ರಮಾಣದಲ್ಲಿ ಭೂ ಕುಸಿತವಾಗಿರಬಹುದು ಎನ್ನುವುದು ಸ್ಥಳೀಯರ ಮಾತು.

    ಭಾರೀ ಪ್ರಮಾಣದ ಓಡಾಟ ಹೇಗೆ?
    ಬೆಂಗಳೂರು – ಮೈಸೂರು – ಮಡಿಕೇರಿಯಿಂದ ಬಂಟ್ವಾಳ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿ 275 ಎಂದು ಘೋಷಿಸಲಾಗಿದ್ದು, ಇದರ ಕಾಮಗಾರಿ ಪೂರ್ಣವಾಗಿ ಮುಗಿದಿದ್ದು 2014ರಲ್ಲಿ. ಮೈಸೂರಿನಿಂದ- ಕುಶಾಲನಗರ, ಕುಶಾಲನಗರದಿಂದ ಸಂಪಾಜೆ, ಸಂಪಾಜೆಯಿಂದ ಬಂಟ್ವಾಳ ಹೀಗೆ ಮೂರು ಹಂತದಲ್ಲಿ ಈ ಯೋಜನೆಯನ್ನು ಮುಗಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯಾಗುವ ಮೊದಲು ಈ ರಸ್ತೆಯಲ್ಲಿ ಕಡಿಮೆ ಪ್ರಮಾಣದ ವಾಹನಗಳು ಓಡಾಡುತಿದ್ದವು. ಯಾವಾಗ ಹೆದ್ದಾರಿ ಕಾಮಗಾರಿಗಳು ಮುಗಿದವೋ ಆಗ ವಾಹನಗಳ ಸಂಖ್ಯೆಯೂ ಹೆಚ್ಚಾಯಿತು. ಈ ಹಿಂದೆ ಅಪಾಯಕಾರಿ ತಿರುವುಗಳಾಗಿದ್ದ ಜಾಗ ಅಗಲವಾಗಿ ನಿರ್ಮಾಣವಾದ ಪರಿಣಾಮ ಘನವಾಹನಗಳ ಓಡಾಟ ಆರಂಭವಾಯಿತು.

    ಈ ನಡುವೆ ಶಿರಾಡಿ ಘಾಟ್ ಸಂಚಾರ 6 ತಿಂಗಳು ಬಂದ್ ಆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚರಿಸುವ ವಾಹಗಳ ಸಂಖ್ಯೆ ಹೆಚ್ಚಾಯಿತು. ಘನವಾಹನಗಳು ಸಂಪಾಜೆ, ಕೊಯನಾಡು, ಜೋಡುಪಾಲ, ಮದೆನಾಡು ಮೂಲಕ ಮಡಿಕೇರಿಗೆ ಆಗಮಿಸಿ ಮೈಸೂರಿಗೆ ತೆರಳಿದ್ದರೆ, ಇನ್ನು ಕೆಲವು ಮಡಿಕೇರಿಯ ಮೂಲಕ ಹಟ್ಟಿಹೊಳೆ, ಮಾದಾಪುರ ಮೂಲಕ ಹಾಸನಕ್ಕೆ ಓಡಾಡಿವೆ. ಭಾರೀ ವಾಹನಗಳ ಓಡಾಟದಿಂದ ಮನೆಗಳು, ಭೂಮಿ ಅಲುಗಾಡುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದರೂ ಈ ವಿಚಾರಗಳನ್ನು ಯಾರು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಘನವಾಹನಗಳ ಸಂಚಾರಕ್ಕೆ ಈ ರಸ್ತೆಯನ್ನು ಬಂದ್ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.

    ಸಂಪಾಜೆ- ಮಡಿಕೇರಿ ರಸ್ತೆ ಮಧ್ಯೆ ಬಾಯಿಬಿಡುವುದು ಅಥವಾ ಕುಸಿತವಾಗುವುದು ಇದೇ ಮೊದಲೆನಲ್ಲ. 2015ರಲ್ಲಿ ಸುರಿದ ಮಳೆಗೆ ಸಂಪಾಜೆಯಿಂದ 1 ಕಿ.ಮೀ ದೂರದಲ್ಲಿರುವ ಕೊಯಿನಾಡು ಬಳಿ ಇರುವ ಸಿಂಕೋನ ಎಸ್ಟೇಟ್ ಸಮೀಪ ರಸ್ತೆ ಬಿರುಕು ಬಿಟ್ಟಿತ್ತು. ಮಳೆ ನೀರು ಹರಿಯಲು ಸರಿಯಾಗಿ ಜಾಗ ಇಲ್ಲ ಕಾರಣ ರಸ್ತೆಯ ಅಡಿಯಲ್ಲೇ ನೀರು ಹೋದ ಪರಿಣಾಮ ಕುಸಿತಗೊಂಡಿತ್ತು. ಈ ಸಮಸ್ಯೆಯಾದ ಬಳಿಕ ದುರಸ್ತಿ ಕಾರ್ಯದ ವೇಳೆ ರಸ್ತೆಯ ಅಡಿ ಭಾಗದಿಂದ ನೀರು ಹೊರಹೋಗಲು ವ್ಯವಸ್ಥೆ ಮಾಡಲಾಗಿತ್ತು. ಈಗ ಕುಸಿತಗೊಂಡ ಭಾಗದಲ್ಲಿ ರಸ್ತೆ ಚೆನ್ನಾಗಿದೆ. ಹೀಗಾಗಿ ಘಾಟಿಯಲ್ಲಿ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಮೇಲಿನಿಂದ ಬಿದ್ದ ನೀರು ರಸ್ತೆಯ ಕೆಳ ಭಾಗದಿಂದ ಹರಿದು ಹೋಗಲು ಸರಿಯಾಗಿ ವ್ಯವಸ್ಥೆ ಮಾಡದ ಕಾರಣ ಹಲವು ಕಡೆ ಕುಸಿತ ಉಂಟಾಗಿರಬಹುದು ಎನ್ನುವ ಮಾತುಗಳು ಕೇಳಿಬಂದಿವೆ.

    (ಕೊಯಿನಾಡಿನ ಬಳಿ 2015ರಲ್ಲಿ ಕುಸಿತಗೊಂಡ ರಸ್ತೆ. ಸಾಮಾಜಿಕ ಜಾಲತಾಣದಲ್ಲಿ ಜನ ಈ ಬಾರಿ ಕುಸಿತಗೊಂಡ ಫೋಟೋದ ಜೊತೆಗೆ ಈ ಫೋಟೋವನ್ನು ಸೇರಿಸಿ ಶೇರ್ ಮಾಡುತ್ತಿದ್ದಾರೆ)

    ಮೇಲೆ ತಿಳಿಸಿದ ಕಾರಣದ ಜೊತೆ ದಾಖಲೆ ಪ್ರಮಾಣದ ಮಳೆ ಕೊಡಗಿನಲ್ಲಿ ಆಗಿದೆ. ಏಪ್ರಿಲ್ ನಿಂದ ಆರಂಭಗೊಂಡ ಬಳಿ ನಿರಂತರವಾಗಿ ಸರಿಯುತ್ತಲೇ ಇದೆ. ಎಲ್ಲದರ ಪರಿಣಾಮ ಅರಣ್ಯ ನಾಶದಿಂದ ಮೊದಲೇ ಸಡಿಲಗೊಂಡಿದ್ದ ಮಣ್ಣು ಆಗಸ್ಟ್ ಮೂರನೇ ವಾರದಲ್ಲಿ ಬಿದ್ದ ಭಾರೀ ಮಳೆಗೆ ರಸ್ತೆಗೆ ಬಿದ್ದಿದೆ. ನೀರಿನ ರಭಸಕ್ಕೆ ಮರಗಳು, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv