Tag: ಮದ್ಯಪಾನ

  • ಗುರುದ್ವಾರದಲ್ಲಿ ಮದ್ಯಪಾನ ಮಾಡಿದ ಮಹಿಳೆಯ ಗುಂಡಿಕ್ಕಿ ಹತ್ಯೆ

    ಗುರುದ್ವಾರದಲ್ಲಿ ಮದ್ಯಪಾನ ಮಾಡಿದ ಮಹಿಳೆಯ ಗುಂಡಿಕ್ಕಿ ಹತ್ಯೆ

    ಚಂಡೀಗಢ: ಗುರುದ್ವಾರದ (Gurudwara) ಆವರಣದಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಮಹಿಳೆಯನ್ನು (Woman) ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಪಂಜಾಬ್‌ನ (Punjab) ಪಟಿಯಾಲದಲ್ಲಿ (Patiala) ನಡೆದಿದೆ.

    ಪರ್ಮಿಂದರ್ ಕೌರ್ (32) ಎಂದು ಗುರುತಿಸಲಾದ ಮಹಿಳೆ ಹತ್ಯೆಯಾಗಿದ್ದು, ಗುರುದ್ವಾರಕ್ಕೆ ನಿತ್ಯ ಭೇಟಿ ನೀಡುತ್ತಿದ್ದ ನಿರ್ಮಲಜಿತ್ ಸಿಂಗ್ ಸೈನಿ ಮಹಿಳೆ ಮೇಲೆ 5 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪಟಿಯಾಲ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಭಾನುವಾರ ರಾತ್ರಿ ಪರ್ಮಿಂದರ್ ಕೌರ್ ದುಖ್ನಿವಾರ್ನ್ ಸಾಹಿಬ್ ಗುರುದ್ವಾರದ ಪವಿತ್ರ ನೀರಿನ ಕೊಳದ ಬಳಿ ಮದ್ಯಪಾನ ಮಾಡುತ್ತಿದ್ದಳು. ಇದನ್ನು ಗಮನಿಸಿದ ಗುರುದ್ವಾರದ ಸಿಬ್ಬಂದಿ ಆಕೆಯನ್ನು ಮ್ಯಾನೇಜರ್ ಕಚೇರಿಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅಷ್ಟು ಹೊತ್ತಿಗಾಗಲೇ ನಿರ್ಮಲಜಿತ್ ಸಿಂಗ್ ಸೈನಿ ಕೋಪದಿಂದ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಹಿಳೆ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಬಜರಂಗದಳಕ್ಕೆ ಪಿಎಫ್‍ಐ ಹೋಲಿಕೆ – ಖರ್ಗೆಗೆ ಕೋರ್ಟ್ ಸಮನ್ಸ್

    ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆರೋಪಿ ನಿರ್ಮಲಜಿತ್ ಆಸ್ತಿ ಡೀಲರ್ ಆಗಿದ್ದು, ಯಾವುದೇ ಅಪರಾಧ ಚಟುವಟಿಕೆಗಳ ಇತಿಹಾಸ ಹೊಂದಿಲ್ಲ ಎನ್ನಲಾಗಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

  • ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ಬೆಂಗಳೂರು: ಮದ್ಯಪಾನ (Liquor Drinking) ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ (Govindarajanagar Police Station) ವ್ಯಾಪ್ತಿಯಲ್ಲಿ ನಡೆದಿದೆ.

    ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು (60) ಕೊಲೆಯಾದ ವ್ಯಕ್ತಿ, ಆಟೋ ಚಾಲಕನಾಗಿದ್ದ ಮಗ ನೀಲಾಧರ ಕೊಲೆ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ವಂದೇ ಭಾರತ್ ಎಕ್ಸಪ್ರೆಸ್ ಅನ್ನು ವಿರೂಪಗೊಳಿಸಿದ ‘ಕೈ’ ಕಾರ್ಯಕರ್ತರು

    ಇಲ್ಲಿನ ಮಾರೇನಹಳ್ಳಿ ಪಿಎಸ್ ಬಡಾವಣೆಯ ಶೆಡ್‌ವೊಂದರಲ್ಲಿ ಕೊಲೆಯಾದ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿದ್ದ ಗೋವಿಂದರಾಜನಗರ ಪೊಲೀಸರು ತನಿಖೆ ನಡೆಸಿದಾಗ ಮಗನಿಂದಲೇ ಕೊಲೆಯಾಗಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

    ವಿಚಾರಣೆ ವೇಳೆ ನೀಲಾಧರ ತನ್ನ ತಂದೆ ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

  • ಕುಡಿದ ಮತ್ತಿನಲ್ಲಿ ಬೃಹತ್ ಜಾಹೀರಾತು ಕಂಬವೇರಿ ಯುವಕ ಪುಂಡಾಟ

    ಕುಡಿದ ಮತ್ತಿನಲ್ಲಿ ಬೃಹತ್ ಜಾಹೀರಾತು ಕಂಬವೇರಿ ಯುವಕ ಪುಂಡಾಟ

    ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಬೃಹತ್ ಜಾಹೀರಾತು (Advertisement) ಕಂಬವೇರಿ ಯುವಕನೋರ್ವ ಪುಂಡಾಟ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ಸ್ಟೇಶನ್ ರಸ್ತೆಯಲ್ಲಿ ಜಾಹೀರಾತಿನ ಬೃಹತ್ ಹೋಲ್ಡಿಂಗ್ಸ್ ಮೇಲೆ ಯುವಕ ಕೆಲ ಹೊತ್ತು ಪುಂಡಾಟ ನಡೆದಿದ್ದಾನೆ. ಕುಡಿದ (Alcohol) ಮತ್ತಿನಲ್ಲಿ ಪಾಲಿಕೆಯಿಂದ ಜಾಹೀರಾತಿಗಾಗಿ ಹಾಕಲಾಗಿದ್ದ ಹೋಲ್ಡಿಂಗ್ಸ್ ಕಂಬದ ಮೇಲೇರಿದ ಯುವಕ ಕೆಲ ಹೊತ್ತು ಅದರ ಮೇಲೆ ಕುಳಿತು ಆತಂಕ ಸೃಷ್ಟಿಸಿದ್ದಾನೆ. ಇದನ್ನೂ ಓದಿ: ಖಲಿಸ್ತಾನಿ ಕೃತ್ಯ ಖಂಡಿಸದ ಯುಕೆ – ವ್ಯಾಪಾರ ಮಾತುಕತೆ ಸ್ಥಗಿತಗೊಳಿಸಿದ ಭಾರತ

    ಜನ ಎಷ್ಟೇ ಹೇಳಿದರೂ ಯುವಕ ಮಾತ್ರ ಕೆಳಗಿಳಿದಿಲ್ಲ. ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಸದ್ಯ ಯುವಕನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಯುವಕನ ಪುಂಡಾಟದ ದೃಶ್ಯ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ವೈರಲ್ ಆಗುತ್ತಿವೆ.

  • ಗಂಡ-ಹೆಂಡ್ತಿ ಒಟ್ಟಿಗೆ ಕೂತು ಎಣ್ಣೆ ಹೊಡೆದ್ರು- ಜಗಳವಾಡಿ 12ನೇ ಪತ್ನಿಯನ್ನೇ ಮುಗಿಸಿದ!

    ಗಂಡ-ಹೆಂಡ್ತಿ ಒಟ್ಟಿಗೆ ಕೂತು ಎಣ್ಣೆ ಹೊಡೆದ್ರು- ಜಗಳವಾಡಿ 12ನೇ ಪತ್ನಿಯನ್ನೇ ಮುಗಿಸಿದ!

    ರಾಂಚಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ 12ನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಅಚ್ಚರಿಯ ಘಟನೆಯೊಂದು ಜಾರ್ಖಂಡ್‍ (Jharkhand) ನಲ್ಲಿ ನಡೆದಿದೆ.

    ಮೃತಳನ್ನು ಸಾವಿತ್ರಿ ದೇವಿ (40) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪತಿ ರಾಮಚಂದ್ರ ತುರಿ ಕೊಲೆ ಮಾಡಿದ್ದಾನೆ. ಪತಿ ಹಾಗೂ ಪತ್ನಿ ಇಬ್ಬರೂ ಕೋಣೆಯೊಳಗೆ ಕುಳಿತುಕೊಂಡು ಮದ್ಯಪಾನ (Alcohol) ಮಾಡಿದ್ದಾರೆ. ಹೀಗೆ ಮಾತನಾಡುತ್ತಾ ಇಬ್ಬರ ಮಧ್ಯೆ ವಿಚಾರವೊಂದಕ್ಕೆ ವಾಗ್ವಾದ ನಡೆದಿದೆ. ಪತ್ನಿಯ ಮಾತಿನಿಂದ ರೊಚ್ಚಿಗೆದ್ದ ಪತಿ, ಅಲ್ಲೇ ಇದ್ದ ಕೋಲು ತೆಗೆದುಕೊಂಡು ಚೆನ್ನಾಗಿ ಥಳಿಸಿದ್ದಾನೆ. ಪರಿಣಾಮ ಸಾವಿತ್ರಿ ದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

    ಇತ್ತ ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮೃತಳು ಆರೋಪಿಯ 12ನೇ ಪತ್ನಿಯಾಗಿದ್ದಾಳೆ. ಇದಕ್ಕೂ ಮೊದಲು ಮದುವೆಯಾಗಿರುವ 11 ಮಂದಿ ಪತ್ನಿಯರು ಕೂಡ ಈತ ನೀಡುತ್ತಿದ್ದ ಮಾನಸಿಕ ಹಿಂಸೆಯಿಂದ ಬಿಟ್ಟು ಹೋಗಿದ್ದಾರೆ. ಆರೋಪಿಗೆ ಮೂವರು ಪುತ್ರರು ಹಾಗೂ ಓರ್ವ ಮಗಳಿದ್ದು, ಎಲ್ಲರೂ ಸಾವಿತ್ರಿ ದೇವಿ ಜೊತೆ ವಾಸವಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

    ಸಾವಿತ್ರಿ ದೇವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯ ತನಿಖೆ ನಡೆಯುತ್ತಿದೆ ಎಮದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡಿಜೆ ಸೌಂಡ್ ನಿಲ್ಲಿಸಲು ಹೇಳಿದ್ದಕ್ಕೆ ಗರ್ಭಿಣಿ ಮೇಲೆ ಗುಂಡು ಹಾರಿಸಿದ ನೆರೆಮನೆಯಾತ

  • ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮಡಿಕೇರಿ: ಆ ಊರಿನಲ್ಲಿ ಬಹುತೇಕ ಜನರು ಕೂಲಿ ಕಾರ್ಮಿಕರೇ. ದಿನ ನಿತ್ಯ ಕೆಲಸ ಮಾಡಿ ದುಡಿದ ಹಣದಲ್ಲಿ ಮದ್ಯಪಾನ (Drinking Alcohol) ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಕಳೆದ 1 ವಾರದಲ್ಲಿ ಮದ್ಯಪಾನ ಮಾಡಿ ಐವರು ಮೃತಪಟ್ಟಿದ್ದು ಊರಿನ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ.

    ಈ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ ಮುಂಭಾಗದ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಿಮೆ ಬೆಲೆಯ ಮದ್ಯವನ್ನು ತಂದು ಇಲ್ಲಿರುವ ಕೂಲಿ ಕಾರ್ಮಿಕರಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಸನ ಜಿಲ್ಲೆಯಿಂದ ಕಡಿಮೆ ಬೆಲೆಗೆ ಮದ್ಯವನ್ನು ತಂದು ಈ ಊರಿನ ಕೆಲವು ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡಲು ಸಮಯ ನಿಗದಿ ಇರುತ್ತದೆ. ಆದರೆ ಈ ಗ್ರಾಮದಲ್ಲಿ ಹಗಲು ರಾತ್ರಿ ಎನ್ನದೇ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಇದೀಗ ಒಂದೇ ವಾರದಲ್ಲಿ ಐವರು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಲ್ಲಿನ ದೇವಾಲಯ ಮುಂಭಾಗದ ಹಲವು ಮನೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಹಾರಂಗಿ ಪೋಲಿಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಮದ್ಯ ಮಾರಾಟ ಮಾಡುವ ಮನೆಗಳ ಮೇಲೆ ದಾಳಿ ನಡೆಸಿ ಮದ್ಯ ಮಾರಾಟ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಅನಧಿಕೃತವಾಗಿ ಮಾರಾಟ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಗ್ರಾಮದಲ್ಲಿ ಈಗಲೂ ಅನೇಕ ಮನೆಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲು ಕೆಲ ಜನರು ಮುಂದಾಗಿದ್ದಾರೆ. ಕೂಲಿ ಕಾರ್ಮಿಕರು ತಮ್ಮ ಮನೆಗಳ ಸಮೀಪವೇ ಮದ್ಯ ಸಿಗುವುದರಿಂದ ಯಾವ ಬ್ರ್ಯಾಂಡ್ ಎಂಬುವುದನ್ನು ನೋಡದೇ ಕಡಿಮೆ ಬೆಲೆಯ ಮದ್ಯ ಸೇವಿಸಿ ಸಾವನ್ನಪ್ಪುತ್ತಿದ್ದಾರೆ. ಇದನ್ನೂ ಓದಿ: ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

    ಇದೀಗ ಮದ್ಯ ಸೇವಿಸಿ ಐವರು ಸಾವನ್ನಪ್ಪಿರುವುದಕ್ಕೆ ಸಂಬಂಧಪಟ್ಟ ಇಲಾಖೆಯವರು ಭೇಟಿ ನೀಡಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಒಂದೇ ವಾರದಲ್ಲಿ ಕಡಿಮೆ ಬೆಲೆಯ ಮದ್ಯ ಸೇವಿಸಿ ಕೂಲಿ ಕಾರ್ಮಿಕರು ಬಲಿಯಾಗಿರುವುದಕ್ಕೆ ಇನ್ನಾದರೂ ಇಲಾಖೆಯವರು ಗ್ರಾಮಕ್ಕೆ ತೆರಳಿ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: H3N2 ಇನ್‌ಫ್ಲುಯೆಂಜಾ ಭೀತಿ ಮಧ್ಯೆ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

  • ತಂದೆಯಿಂದಲೇ ಗುಂಡಿಕ್ಕಿ ಮಗನ ಹತ್ಯೆ

    ತಂದೆಯಿಂದಲೇ ಗುಂಡಿಕ್ಕಿ ಮಗನ ಹತ್ಯೆ

    ಮಡಿಕೇರಿ: ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ (Father) ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

    ನಂದೇಟಿರ ನಿರನ್ (28) ಸಾವನ್ನಪ್ಪಿದ ಯುವಕ. ನಂದೇಟಿರ ಚಿಟ್ಟಿಯಪ್ಪ (58) ಹತ್ಯೆ ಮಾಡಿದ ಆರೋಪಿ. ದಿನ ನಿತ್ಯ ಕುಡಿತದ ದಾಸನಾಗಿದ್ದ (Drinking Habit) ನಂದೇಟಿರ ನಿರನ್ ತಂದೆಯ ಬಳಿ ಹಣಕ್ಕಾಗಿ ಪಿಡಿಸುತ್ತಿದ್ದ.

    ಭಾನುವಾರ ಮಧ್ಯಾಹ್ನ ತಂದೆಯ ಬಳಿ 2 ಸಾವಿರ ರೂ. ಹಣಕ್ಕಾಗಿ ಪಟ್ಟು ಹಿಡಿದಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಇದನ್ನೂ ಓದಿ: ಕರ್ಮ ಯಾರನ್ನೂ ಬಿಡಲ್ಲ, ನಾನು ದೇವರನ್ನು ನಂಬ್ತೀನಿ: ಕುಸುಮಾ

    ಈ ವೇಳೆ ಸಿಟ್ಟಾದ ತಂದೆ ಚಿಟ್ಟಿಯಪ್ಪ ಮನೆಯಲ್ಲಿ ಇದ್ದ ಕೋವಿಯನ್ನು ತಂದು ಹೆದರಿಸಿದ್ದಾರೆ. ಹೆದರಿಕೆಗೆ ಬಗ್ಗದ ನಿರನ್‌ ಹಣ ಬೇಕೆಂದು ಹಠ ಹಿಡಿದಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಚಿಟ್ಟಿಯಪ್ಪ ಸಂಜೆ 4 ಗಂಟೆ ವೇಳೆಗೆ ಮಗನ ಮೇಲೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್‌ ರಾಜನ್ ಭೇಟಿ ಪರಿಶೀಲನೆ ನಡೆಸಿದ್ದು, ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಡಿತದ ಚಟವಿರುವವರು ಕೆಟ್ಟವರಲ್ಲ, ಅವರ ಕುಡಿತ ಕೆಟ್ಟದ್ದು: ವೀರೇಂದ್ರ ಹೆಗ್ಗಡೆ

    ಕುಡಿತದ ಚಟವಿರುವವರು ಕೆಟ್ಟವರಲ್ಲ, ಅವರ ಕುಡಿತ ಕೆಟ್ಟದ್ದು: ವೀರೇಂದ್ರ ಹೆಗ್ಗಡೆ

    ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವು ಸಾಮಾಜಿಕ ಕೈಂಕರ್ಯಗಳನ್ನ ಮಾಡಿಕೊಂಡು ಬರುತ್ತಿದೆ. ಅದರಲ್ಲಿ ಮದ್ಯವ್ಯಸನಿಗಳಿಗೆ ಮದ್ಯ ಕುಡಿಯುವ ಚಟ ಬಿಡಿಸುವ ಶಿಬಿರಗಳನ್ನ ಆಯೋಜನೆ ಮಾಡಿಕೊಂಡು ಬರುತ್ತಿದ್ದು, ಸಂಸ್ಥೆಯ ಸಮಾಜಿಕ ಬದ್ಧತೆ ಎದ್ದು ಕಾಣುತ್ತಿದೆ. ಅದೇ ರೀತಿ ಮಂಡ್ಯದ ಮದ್ದೂರಿ (Mandya Mddur) ನಲ್ಲಿ ಸಂಸ್ಥೆ ವತಿಯಿಂದ ನಡೆದ 1639 ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ (Veerendra Heggade) ಯವರು ಆಶೀರ್ವಚನ ನೀಡಿದ್ರು.

    ಮಂಡ್ಯದ ಮದ್ದೂರು ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಶಿಬರವನ್ನ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಶಿಬಿರಾರ್ಥಿಗಳ ಕುರಿತು ಮಾತನಾಡಿದ ಅವರು, ಕುಡಿತದ ಚಟ ಹೊಂದಿರುವವರೆಲ್ಲ ಕೆಟ್ಟವರಲ್ಲ, ಅವರ ದುಶ್ಚಟಗಳು ಅವರನ್ನ ಕೆಟ್ಟವರನ್ನಾಗಿ ಬಿಂಬಿಸಿದೆ. ಖುಷಿಗೋ, ಕುತೂಹಲಕ್ಕೊ ಅಥವಾ ಸಹವಾಸ ದೋಷಕ್ಕೊ ಮನುಷ್ಯ ಮದ್ಯ ಸೇವಿಸುವುದನ್ನ ಕಲಿಯುತ್ತಾನೆ. ಆದರೆ ಬಳಿಕ ಮದ್ಯಪಾನವೇ ಆತನನ್ನ ಕೈವಶ ಮಾಡಿಕೊಳ್ಳುತ್ತೆ ಎಂದು ಹೇಳಿದರು. ಇದನ್ನೂ ಓದಿ: ನಾರಾಯಣಪುರ ಎಡದಂಡೆ ಕಾಲುವೆ ಆಧುನೀಕರಣ ದೇಶಕ್ಕೆ ಮಾದರಿ, ಇದೊಂದು ಮೈಲಿಗಲ್ಲು – ಬೊಮ್ಮಾಯಿ

    ಸದ್ಯ ಆ ಮದ್ಯಪಾನ ತ್ಯಜಿಸುವ ನಿಟ್ಟಿನಲ್ಲಿ ನೀವೆಲ್ಲ ಶಿಬಿರದಲ್ಲಿ ಭಾಗವಹಿಸಿದ್ದೀರಿ. ನೀವೆಲ್ಲ ಊರಿಗೆ ಹೋದ ಮೇಲೆ ಸಂಯಮದಿಂದ ಬದುಕುವ ಜೊತೆಗೆ ಸಹಪಾಠಿಗಳ, ಜನರ ಮೂದಲಿಕೆ ಟೀಕೆ ಟಿಪ್ಪಣಿಗಳನ್ನ ತಾಳ್ಮೆಯಿಂದ ಸಹಿಸಿಕೊಂಡು ದುಶ್ಚಟದಿಂದ ಮುಕ್ತರಾಗಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದ್ರು. ಈ ಶಿಬಿರದ ಮತ್ತೊಂದು ವಿಶೇಷತೆ ಎಂದ್ರೆ ಯಾವುದೇ ಮಾತ್ರೆ, ಔಷಧಿ ಬಳಕೆಯಿಲ್ಲದೆ, ಮಂತ್ರ ತಂತ್ರಗಳ ಮೊರೆ ಹೋಗದೆ, ಕೇವಲ ಮನಪರಿವರ್ತನೆಯಿಂದ ಮದ್ಯಪಾನ ಬಿಡಿಸುವ ಪ್ರಕ್ರಿಯಾಗಿದೆ. ಈ ಶಿಬಿರದಲ್ಲಿ ಭಾಗವಹಿಸಿರುವ ನೂರಾರು ಜನರು ಮದ್ಯಪಾನ (Alcohol) ದುಶ್ಚಟವನ್ನ ಮುಂದೆಯು ತ್ಯಜಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಿ ಸಂಯಮದಿಂದ ಬದುಕುವಂತೆ ಕರೆ ನೀಡಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾನಮತ್ತನಾಗಿ ಕರೆದೊಯ್ಯಲು ಬಂದ ಪತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಪತ್ನಿ!

    ಪಾನಮತ್ತನಾಗಿ ಕರೆದೊಯ್ಯಲು ಬಂದ ಪತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಪತ್ನಿ!

    ಚಿತ್ರದುರ್ಗ:  ಮದ್ಯಪಾನದ ಚಟವನ್ನು ಬಿಡಿಸಲು ಗಂಡನನ್ನು ಪತ್ನಿಯೇ ಸರಪಳಿಯಲ್ಲಿ ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ‘ಒಲಿದರೆ ನಾರಿ ಮುನಿದರೆ ಮಾರಿ’ ಎಂಬ ಮಾತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸೂರು ಗ್ರಾಮದ ಅಮೃತಾ, ಹಿರಿಯೂರು ತಾಲೂಕಿನ ಕಳವಿಬಾಗಿಯ ರಂಗನಾಥ್ ಜೊತೆ ವಿವಾಹವಾಗಿದ್ದಳು. ರಂಗನಾಥ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದನು. ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ನನ್ನ ಶರ್ಟ್ ತೆಗೆದು ನಿಲ್ಲಿಸಿದ್ದಾರೆ: ಯುವತಿಯ ಆರೋಪ

    ಕೋವಿಡ್ ಎರಡನೇ ಅಲೆ ವೇಳೆ ಸ್ವಗ್ರಾಮ ಸೇರಿದ್ದ ರಂಗನಾಥ್, ಕುಡಿತದ ದಾಸನಾಗಿದ್ದನು. ಆಗ ದುಡಿಯಲಾರದ ಗಂಡನೊಂದಿಗೆ ಅಮೃತಾ ಹಿರಿಯೂರು ತಾಲೂಕಿನ ಹರ್ತಿಕೋಟೆಯಲ್ಲಿ ವಾಸವಾಗಿದ್ದಳು. ಇತ್ತ ಪ್ರತಿನಿತ್ಯ ಕುಡಿದು ಮನೆಗೆ ಧಾವಿಸುತಿದ್ದ ರಂಗನಾಥ್, ಪತ್ನಿ ಜೊತೆ ಜಗಳವಾಡ್ತಿದ್ದನು. ಇದರಿಂದ ಬೇಸತ್ತ ಪತ್ನಿ, ಪತಿಯಿಂದ ದೂರವಿದ್ದು, ತವರು ಮನೆಯಲ್ಲೇ ಬೀಡುಬಿಟ್ಟಿದ್ದಳು.

    ALCOHOL

    ಇತ್ತ ತವರು ಸೇರಿದ್ದ ಪತ್ನಿ ಅಮೃತಾಳನ್ನು ಕರೆತರಲು ಫುಲ್ ಟೈಟ್ ಆಗಿ ರಂಗನಾಥ್ ಬುಧವಾರ ಆಗಮಿಸಿ, ಮನೆ ಮುಂದೆ ಗಲಾಟೆ ಮಾಡಿದ್ದಾನೆ. ತಂದೆ ಉಮೇಶ್ ಜೊತೆ ಗಲಾಟೆ ಮಾಡುತ್ತಿದ್ದ ಪತಿಯ ವರ್ತನೆ ಕಂಡು ಅಮೃತಾ, ನೀನು ಕುಡಿಯುವುದು ಬಿಡುವ ತನಕ ಮನೆಗೆ ಬರಲ್ಲ ಅಂತಾ ಅವಾಜ್ ಹಾಕಿದ್ದಾಳೆ. ಅಲ್ಲದೆ ಅಲ್ಲೇ ಇದ್ದ ನಾಯಿ ಕಟ್ಟಿಹಾಕುವ ಸರಪಳಿಯನ್ನು ತಂದು ಪತಿಯನ್ನು ಬಂಧಿಸಿ, ಕಂಬಕ್ಕೆ ಕಟ್ಟಿದ್ದಾಳೆ.

    ಗಂಡನನ್ನು ಪತ್ನಿಯೇ ಸರಪಳಿಯಿಂದ ಬಂಧಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಣಗಳಲ್ಲಿ ಮಹಿಳೆಯ ಧೈರ್ಯಕ್ಕೆ ಮಹಿಳೆಯರು ಪ್ರಜ್ಞಾವಂತರು ಶಹಬ್ಬಾಸ್ ಎಂದಿದ್ದಾರೆ. ಈ ಘಟನೆ ಅಬ್ಬಿನಹೊಳೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Delhi Hit-And-Run ಕುಡಿದು ಸ್ಕೂಟಿ ಚಲಾಯಿಸಿದ್ದಳು: ಅಂಜಲಿ ಸ್ನೇಹಿತೆ ಸ್ಫೋಟಕ ಹೇಳಿಕೆ

    Delhi Hit-And-Run ಕುಡಿದು ಸ್ಕೂಟಿ ಚಲಾಯಿಸಿದ್ದಳು: ಅಂಜಲಿ ಸ್ನೇಹಿತೆ ಸ್ಫೋಟಕ ಹೇಳಿಕೆ

    ನವದೆಹಲಿ: ಭಯಾನಕ ಹಿಟ್‌ ಆಂಡ್‌ ರನ್‌ ಪ್ರಕರಣಕ್ಕೆ(Hit and Run Case) ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು ಮೃತಪಟ್ಟ ಅಂಜಲಿ(Anjali) ಮದ್ಯಪಾನ ಮಾಡಿ ಸ್ಕೂಟಿ ಚಲಾಯಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೋಟೆಲ್‌ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಅಂಜಲಿ ಜೊತೆ ಇದ್ದ ಸ್ನೇಹಿತೆ ನಿಧಿಯನ್ನು(Nidhi) ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ ಘಟನೆ ಹೇಗಾಯ್ತು ಎಂಬುದನ್ನು ವಿವರಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ನಿಧಿ, ಅಂಜಲಿ ಕುಡಿದು ಸ್ಕೂಟಿ ಓಡಿಸಲು ಹಠ ಮಾಡಿದ್ದಳು. ಈ ಸಂದರ್ಭದಲ್ಲಿ ಆಕೆಗೆ ಮತ್ತು ನನಗೆ ಜಗಳ ನಡೆದಿತ್ತು. ನನಗೆ ಪ್ರಜ್ಞೆ ಇದೆ ನಾನು ಚಲಾಯಿಸುತ್ತೇನೆ ಎಂದು ಹೇಳಿದರೂ ಆಕೆ ಹಠ ಹಿಡಿದು  ಸ್ಕೂಟಿ  ಓಡಿಸಿದ್ದಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ಕಾರು ನಮಗೆ ಡಿಕ್ಕಿ ಹೊಡೆದ ನಂತರ ನಾನು ಒಂದು ಬದಿಗೆ ಬಿದ್ದೆ. ಸ್ನೇಹಿತೆ ಕಾರಿನ ಕೆಳಗಡೆ ಸಿಕ್ಕಿಕೊಂಡಿದ್ದಳು. ಕಾರಿನಲ್ಲಿದ್ದ ಪುರುಷರಿಗೆ ಮಹಿಳೆ ಕಾರಿನ ಕೆಳಗೆ ಸಿಲುಕಿಕೊಂಡಿದ್ದ ವಿಚಾರ ತಿಳಿದಿತ್ತು. ಅಪಘಾತದ ನಂತರ ನಾನು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಭಯಗೊಂಡು ಮನೆಗೆ ಹೋಗಿದ್ದೆ ಎಂದು ವಿವರಿಸಿದ್ದಾರೆ.

    ಹೋಟೆಲ್‌ ಮ್ಯಾನೇಜರ್‌ ಪ್ರತಿಕ್ರಿಯಿಸಿ ಜ.1 ನಸುಕಿನ ಜಾವ 1:30ಕ್ಕೆ ಇಬ್ಬರು ಜಗಳವಾಡುತ್ತಿದ್ದರು. ನಾನು ಇಲ್ಲಿ ಜಗಳವಾಡಬೇಡಿ ಎಂದು ಹೇಳಿದರೂ ಅವರು ಮತ್ತೆ ಜಗಳ ಮುಂದುವರಿಸಿ ಸ್ಕೂಟಿ ಹತ್ತಿ ತೆರಳಿದ್ದರು ಎಂದು ತಿಳಿಸಿದ್ದಾರೆ.

    ಹೋಟೆಲ್‌ನಲ್ಲಿ ಪ್ರತ್ಯೇಕವಾಗಿ ರೂಮ್‌ ಬುಕ್‌ ಮಾಡಿದ್ದ ಹುಡುಗರ ಜೊತೆ ಇಬ್ಬರು ಮಾತನಾಡುತ್ತಿದ್ದರು ಎಂದು ಹೋಟೆಲ್‌ ಮ್ಯಾನೇಜರ್‌ ತಿಳಿಸಿದ ಹಿನ್ನೆಲೆಯಲ್ಲಿ ಈಗ ಪೊಲೀಸರು ಕೆಲ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಅಂಜಲಿ ಮತ್ತು ನಿಧಿ ಜನವರಿ 1 ರಂದು ಹೋಟೆಲ್‌ನಿಂದ ಹೊರಟಿದ್ದಾರೆ. ದಾರಿಯಲ್ಲಿ ಬರುತ್ತಿದ್ದಾಗ ಅವರ ಸ್ಕೂಟಿಗೆ ಕಾರಿಗೆ ಡಿಕ್ಕಿ ಹೊಡೆದಿದೆ. ನಿಧಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಅಂಜಲಿಯ ಕಾಲು ಮುಂಭಾಗದ ಆಕ್ಸಲ್‌ಗೆ ಸಿಲುಕಿಕೊಂಡಿದ್ದರಿಂದ ಕಾರು ದೇಹವನ್ನು ಸುಮಾರು 13 ಕಿ.ಮೀ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ವಿರುದ್ಧ ನರಹತ್ಯೆ ಅಡಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಉತ್ತಮ ವರನಾಗಬಹುದು: ಮಗನ ನೋವಿನ ಕಥೆ ವಿವರಿಸಿದ ಕೇಂದ್ರ ಸಚಿವ

    ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಉತ್ತಮ ವರನಾಗಬಹುದು: ಮಗನ ನೋವಿನ ಕಥೆ ವಿವರಿಸಿದ ಕೇಂದ್ರ ಸಚಿವ

    ಲಕ್ನೋ: ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಅಥವಾ ಕಾರ್ಮಿಕ ಉತ್ತಮ ವರನಾಗಬಹುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ, ಉತ್ತರ ಪ್ರದೇಶದ ಸುಲ್ತಾನ್‌ಪುರ ಕ್ಷೇತ್ರದ ಬಿಜೆಪಿ ಸಂಸದ ಕೌಶಲ್ ಕಿಶೋರ್(Kaushal Kishore) ಹೇಳಿದ್ದಾರೆ.

    ತಮ್ಮ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಮದ್ಯ ವರ್ಜನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೆಣ್ಣುಮಕ್ಕಳನ್ನು ಮದ್ಯವ್ಯಸನಿಗಳಿಗೆ(Alcoholics) ಮದುವೆ ಮಾಡಿಕೊಡಬೇಡಿ ಎಂದು ಪೋಷಕರಲ್ಲಿ ಮನವಿ ಮಾಡಿದರು. ಮದ್ಯವ್ಯಸನಿಗಳ ಜೀವಿತಾವಧಿ ತುಂಬಾ ಕಡಿಮೆ ಎಂದು ಹೇಳಿ ತಮ್ಮ ಮಗನ ಕಥೆಯನ್ನು ವಿವರಿಸಿ ತಮಗಾದ ನೋವನ್ನು ತೋಡಿಕೊಂಡರು.

    ನಾನು ಸಂಸದನಾಗಿಯೂ, ನನ್ನ ಪತ್ನಿ ಶಾಸಕಿಯಾಗಿದ್ದರೂ ನಮಗೆ ನಮ್ಮ ಮಗನ ಜೀವ ಉಳಿಸಲು ಸಾಧ್ಯವಾಗದೇ ಇರುವಾಗ ಸಾಮಾನ್ಯ ಜನರಿಗೆ ಸಾಧ್ಯವೇ ಎಂದು ಪ್ರಶ್ನಿಸಿದರು.

    ನನ್ನ ಮಗ ಆಕಾಶ್ ಸ್ನೇಹಿತರೊಂದಿಗೆ ಮದ್ಯ ಸೇವಿಸುವ ಅಭ್ಯಾಸವನ್ನು ಬೆಳೆಸಿದ್ದ. ಈ ವಿಚಾರ ತಿಳಿದು ಆತನನ್ನು ಮದ್ಯ ವರ್ಜನ ಶಿಬಿರಕ್ಕೆ ಸೇರಿಸಲಾಯಿತು. ಅವನು ಕೆಟ್ಟ ಚಟವನ್ನು ಬಿಟ್ಟಿರಬಹುದು ಎಂದು ಭಾವಿಸಿ ಆರು ತಿಂಗಳ ಬಳಿಕ ಮದುವೆ ಮಾಡಿಸಿದ್ದೆವು. ಆದರೆ ಅವನು ಮತ್ತೆ ಕುಡಿಯಲು ಪ್ರಾರಂಭಿಸಿದ್ದ. ಅಂತಿಮವಾಗಿ ಅವನ ಸಾವಿಗೆ ಮದ್ಯವೇ ಕಾರಣವಾಯಿತು. ಎರಡು ವರ್ಷಗಳ ಹಿಂದೆ ಅಕ್ಟೋಬರ್ 19 ರಂದು ಆಕಾಶ್ ಮೃತಪಟ್ಟಾಗ ಆತನ ಮಗನಿಗೆ ಕೇವಲ ಎರಡು ವರ್ಷ ವಯಸ್ಸಾಗಿತ್ತು ಎಂದು ತಮ್ಮ ನೋವಿನ ಕಥೆಯನ್ನು ವಿವರಿಸಿದರು. ಇದನ್ನೂ ಓದಿ: 2022ರಲ್ಲಿ ದಾಖಲೆಯ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು

    ನನ್ನ ಮಗನನ್ನು ಉಳಿಸಲು ನನಗೆ ಸಾಧ್ಯವಾಗಲಿಲ್ಲ. ಮಗ ಮೃತಪಟ್ಟಿದ್ದರಿಂದ ಹೆಂಡತಿ ವಿಧವೆಯಾದಳು. ಈ ಕಾರಣಕ್ಕೆ ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ನೀವು ರಕ್ಷಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.

    ಸ್ವಾತಂತ್ರ್ಯ ಚಳವಳಿಯ 90 ವರ್ಷಗಳ ಅವಧಿಯಲ್ಲಿ 6.32 ಲಕ್ಷ ಜನರು ಬ್ರಿಟಿಷರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಆದರೆ ವ್ಯಸನದಿಂದಾಗಿ ಪ್ರತಿ ವರ್ಷ ದೇಶದಲ್ಲಿ ಸುಮಾರು 20 ಲಕ್ಷ ಜನರು ಸಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರವನ್ನು ತಿಳಿಸಿದರು.

    ಜಿಲ್ಲೆಯನ್ನು ವ್ಯಸನಮುಕ್ತಗೊಳಿಸಲು ಎಲ್ಲಾ ಶಾಲೆಗಳಿಗೆ ವ್ಯಸನಮುಕ್ತ ಅಭಿಯಾನವನ್ನು ಕೊಂಡೊಯ್ಯಬೇಕು ಮತ್ತು ಬೆಳಗ್ಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವರು ಹೇಳಿದರು.

    Live Tv
    [brid partner=56869869 player=32851 video=960834 autoplay=true]