Tag: ಮಧ್ಯಂತರ ಬಜೆಟ್

  • ಇದು ವಿಕಸಿತ ಭಾರತ ಅಲ್ಲ `ವಿನಾಶಕಾರಿ ಭಾರತ’ದ ಬಜೆಟ್ – ಸಿದ್ದರಾಮಯ್ಯ ವಾಗ್ದಾಳಿ

    ಇದು ವಿಕಸಿತ ಭಾರತ ಅಲ್ಲ `ವಿನಾಶಕಾರಿ ಭಾರತ’ದ ಬಜೆಟ್ – ಸಿದ್ದರಾಮಯ್ಯ ವಾಗ್ದಾಳಿ

    ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿ ಅವರು ನಿರ್ಮಿಸಿರುವ ʻವಿನಾಶಕಾರಿ ಭಾರತʼದ ವಾಸ್ತವವನ್ನು ಬಚ್ಚಿಟ್ಟು ʻವಿಕಸಿತ ಭಾರತʼ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

    ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೊಳಗೊಂಡ ನಾಲ್ಕು ‘ಜಾತಿ’ಗಳ ಅಭಿವೃದ್ದಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನೆ ʻವಿಕಸಿತ ಭಾರತʼದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ. ನರೇಂದ್ರ ಮೋದಿಯವರ (Narendra Modi) 10 ವರ್ಷಗಳ ಆಡಳಿತದಲ್ಲಿ ಕಷ್ಟ, ನಷ್ಟ, ದಮನ, ದೌರ್ಜನ್ಯಕ್ಕೀಡಾಗಿರುವುದು ಇದೇ ಬಡವರು, ಮಹಿಳೆಯರು, ಯುವಕರು ಮತ್ತು ರೈತರು. ಈ ಸಮುದಾಯಗಳ ಪಾಲಿಗೆ ಮೋದಿಯವರ 10 ವರ್ಷಗಳ ಆಡಳಿತ ʻವಿಕಸಿತ ಭಾರತʼ ಅಲ್ಲ ಅದು ʻವಿನಾಶಕಾರಿ ಭಾರತʼ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 6 ಬಜೆಟ್‌, 6 ಸೀರೆ – ಪ್ರತಿ ಬಜೆಟ್‌ನಲ್ಲೂ ಸೀರೆಯಿಂದ್ಲೆ ಸುದ್ದಿಯಾಗ್ತಾರೆ ಕೇಂದ್ರ ಸಚಿವೆ

    16 ಲಕ್ಷ ಕೋಟಿ ಸಾಲ ಮಾಡಿದ್ದಾರೆ:
    ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್, ನಿರಾಶದಾಯಕ ಬಜೆಟ್. ಚುನಾವಣೆ ಇರೋದ್ರಿಂದ ಪೂರ್ತಿ ಬಜೆಟ್ ಮಂಡನೆ ಮಾಡಿಲ್ಲ. 47 ಲಕ್ಷ ಕೋಟಿ ರೂ. ಬಜೆಟ್ ಗಾತ್ರ ಇದು. ಕಳೆದ ವರ್ಷ 45 ಲಕ್ಷ ಕೋಟಿ ಗಾತ್ರ ಇತ್ತು. ಈ ವರ್ಷ 2 ಲಕ್ಷ ಕೋಟಿ ಹೆಚ್ಚಾಗಿದೆ. ಕಳೆದ ವರ್ಷಕ್ಕಿಂತ ಬಜೆಟ್‌ ಗಾತ್ರ 5.8% ಜಾಸ್ತಿ ಆಗಿದೆ. 47 ಲಕ್ಷ ಕೋಟಿ ಬಜೆಟ್ ನಲ್ಲಿ ಸುಮಾರು 16 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಸದ್ಯ 196 ಲಕ್ಷ ಕೋಟಿ ರೂ. ಸಾಲ ಇದೆ. ಈ ಬಜೆಟ್‌ನಲ್ಲಿ ಬಡ್ಡಿಗೆ 11 ಲಕ್ಷದ 91 ಸಾವಿರ ಕೋಟಿ ಕೊಡ್ತಿದ್ದಾರೆ. ಚುನಾವಣೆ ಬಜೆಟ್ ಆಗಿರೋದ್ರೀಂದ ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಲೆಕ್ಷನ್ ಬಜೆಟ್‌ನಲ್ಲಿ ಪುಕ್ಕಟೆ ಯೋಜನೆಗಳಿಲ್ಲ – ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ? ಕಳೆದ ವರ್ಷ ಎಷ್ಟಿತ್ತು?

    ಬಜೆಟ್‌ನಲ್ಲಿ ಜನರ ಮುಂದೆ ಬಿಚ್ಚಿಟ್ಟಿರೋದಕ್ಕಿಂತ ಜನರಿಗೆ ಮುಚ್ಚಿಟ್ಡಿರೋದೇ ಜಾಸ್ತಿ. ಬೆಲೆ ಏರಿಕೆ, ಬರ, ನಿರುದ್ಯೋಗದ ಬಗ್ಗೆ ಹೇಳಿಲ್ಲ. ಸಾಲದ ಬಗ್ಗೆ ಹೇಳಿಲ್ಲ. 2004-14ರ ವರೆಗೆ ಮನಮೋಹನ್ ಸಿಂಗ್ ಪಿಎಂ ಆಗಿದ್ರು. ಆಗ ಬಜೆಟ್ ವಾರ್ಷಿಕ ಸರಾಸರಿ 13.79% ಇತ್ತು. 2014-24 ವರೆಗೆ ಈಗ 9.6% ಆಗಿದೆ. ವಿಕಸಿತ ಆಗಿದೆ ಅಂತ ಇವರು ಹೇಳ್ತಾರೆ. ಆದರೆ 9.6% ಆಗಿದೆ, ಮನಮೋಹನ್‌ ಸಿಂಗ್ ಅವರಿಗೆ ಹೋಲಿಸಿದ್ರೆ ಬಜೆಟ್‌ ಗಾತ್ರ 4.19% ಕಡಿಮೆ ಆಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ಕನ ಆಭರಣಗಳ ಮೇಲೆ ತಂಗಿ ಕಣ್ಣು – ರೈಲಿನಲ್ಲೇ ಕೈಚಳಕ ತೋರಿ ಜೈಲು ಪಾಲು!

  • ವಿಕಸಿತ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ

    ವಿಕಸಿತ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ

    ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಮಧ್ಯಂತರ ಬಜೆಟ್‍ನ್ನು (Interim Budget) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ವಿನೂತನ ಬಜೆಟ್ ಎಂದು ಕರೆದಿದ್ದಾರೆ. ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

    ಬಜೆಟ್‍ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ

    ಆದಾಯ ತೆರಿಗೆ ವಿನಾಯಿತಿಯಿಂದ ಮಧ್ಯಮ ವರ್ಗದ ಸುಮಾರು 1 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಈ ಬಜೆಟ್‍ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸಲು ಬಜೆಟ್ ಒತ್ತು ನೀಡುತ್ತದೆ. ಬಡವರಿಗೆ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಸಿಗಲಿದೆ ಎಂದಿದ್ದಾರೆ.

    ಈ ಬಜೆಟ್‍ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಬಜೆಟ್‌ ಮಂಡನೆ ಮಾಡಲಾಗಿದೆ. ಅರ್ಥಶಾಸ್ತ್ರಜ್ಞರ ಭಾಷೆಯಲ್ಲಿ ಹೇಳುವುದಾದರೆ ಇದೊಂದು ಸ್ವೀಟ್ ಸ್ಪಾಟ್ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

  • ಮಹತ್ವದ ಘೋಷಣೆ, ಉಚಿತ ಭರವಸೆಗಳಿಗೆ ಬ್ರೇಕ್‌ –  ಅಧಿಕಾರಿಗಳಿಗೆ ಮೋದಿ ಸೂಚಿಸಿದ್ದೇನು?

    ಮಹತ್ವದ ಘೋಷಣೆ, ಉಚಿತ ಭರವಸೆಗಳಿಗೆ ಬ್ರೇಕ್‌ – ಅಧಿಕಾರಿಗಳಿಗೆ ಮೋದಿ ಸೂಚಿಸಿದ್ದೇನು?

    ನವದೆಹಲಿ: ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್‌ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.

    ಬಜೆಟ್‌ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.  ಇದನ್ನೂ ಓದಿ: Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ

     

    ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ.  ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್‌ ಸಿದ್ಧಪಡಿಸಿ ಎಂದು ಹೇಳಿದ್ದರು. ಇದನ್ನೂ ಓದಿ: ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

     

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

     

  • ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

    ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

    ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಮಧ್ಯಂತರ ಬಜೆಟ್‍ನಲ್ಲಿ (Interim Budget) ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ (Pradhan Mantri Suryoday Yojna) ವಿಶೇಷ ಒತ್ತು ನೀಡಲಾಗಿದೆ. ಮನೆಗಳಿಗೆ ಸೋಲಾರ್ ಮೇಲ್ಛಾವಣಿ (Rooftop Solar Scheme) ಅಳವಡಿಸುವ ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.

    ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ

    ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ. ಜ.22 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಯಿಂದ ಹಿಂದಿರುಗಿದ ನಂತರ ಒಂದು ಕೋಟಿ ಮನೆಗಳಲ್ಲಿ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು.

    ಈ ಯೋಜನೆಯು ಈಗಾಗಲೇ ಜಾರಿಯಲ್ಲಿದೆ, ಇದು ಹೊಸ ಮಾರ್ಗಸೂಚಿಗಳು ಮತ್ತು ಪ್ರೋತ್ಸಾಹಗಳೊಂದಿಗೆ ಜಾರಿಯಾಗಲಿದೆ. ಇದನ್ನೂ ಓದಿ: ಮಧ್ಯಂತರ ಬಜೆಟ್‌ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು

  • ಕೇಂದ್ರದ ಮಧ್ಯಂತರ ಬಜೆಟ್-ರೈಲ್ವೆ ಇಲಾಖೆಗೆ ಸಿಕ್ಕಿದ್ದೇನು?

    ಕೇಂದ್ರದ ಮಧ್ಯಂತರ ಬಜೆಟ್-ರೈಲ್ವೆ ಇಲಾಖೆಗೆ ಸಿಕ್ಕಿದ್ದೇನು?

    ನವದೆಹಲಿ: ಕೇಂದ್ರ ಹಣಕಾಸು ಮತ್ತು ರೈಲ್ವೆ ಸಚಿವರಾಗಿರುವ ಪಿಯೂಶ್ ಗೋಯಲ್ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಕಾರ್ಮಿಕ, ಮಧ್ಯಮ ವರ್ಗಕ್ಕೆ ಭರಪೂರ ಯೋಜನೆಗಳನ್ನು ಮಂಡನೆ ಮಾಡಲಾಗಿದೆ. ಇದೇ ವೇಳೆ ರೈಲ್ವೆ ಇಲಾಖೆಗೆ ಅನುದಾನವನ್ನು ಘೋಷಿಸಲಾಯ್ತು.

    1. ರೈಲ್ವೆ ಅಭಿವೃದ್ಧಿಗಾಗಿ 1.58 ಲಕ್ಷ ಕೋಟಿ ಅನುದಾನ ಮೀಸಲಿರಿಸಿದೆ. 2018ರ ಬಜೆಟ್ ನಲ್ಲಿ ಸರ್ಕಾರ 1.48 ಲಕ್ಷ ಕೋಟಿ ಅನುದಾನವನ್ನು ಬಿಡುಗಡೆ ಮಾಡಿತ್ತು.
    2. ಬ್ರಾಡ್‍ಗೇಜ್ ಮಾರ್ಗದಲ್ಲಿ ಮಾನವ ರಹಿತ ಕ್ರಾಸಿಂಗ್ ತೆಗೆದು ಹಾಕಲಾಗಿದ್ದು ಈಗ ಮಾನವ ಸಹಿತ ಕ್ರಾಸಿಂಗ್ ಇದೆ.

    3. ಪೂರ್ವ ರಾಜ್ಯಗಳಲ್ಲಿ ರೈಲ್ವೆ ವಿಸ್ತಾರ ಹೆಚ್ಚಾಗುತ್ತಿದೆ. ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯಗಳಲ್ಲಿ ಮೊದಲ ಬಾರಿಗೆ ರೈಲ್ವೆ ಸೇವೆಯನ್ನು ವಿಸ್ತರಿಸಲಾಗುತ್ತಿದೆ.

    4. ಮೇಕ್ ಇನ್ ಇಂಡಿಯಾದ ಅಡಿಯಲ್ಲಿ ವಂದೇ ಭಾರತ್ ಹೆಸರಿನ ಹೈ ಸ್ಪೀಡ್ ರೈಲು ನಿರ್ಮಿಸಲಾಗಿದ್ದು, ವಿದೇಶಿ ರೈಲುಗಳ ಅನುಭವವನ್ನು ಪ್ರಯಾಣಿಕರಿಗೆ ನೀಡಲಿದೆ. ಈ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರ ಹೊರತಾಗಿ ಟಿಕೆಟ್ ದರ ಹೆಚ್ಚಳ ಸೇರಿದಂತೆ ಸರ್ಕಾರ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ನವದೆಹಲಿ: ಕೇಂದ್ರ ಸರ್ಕಾರವು ಫೆ. 1ರಂದು ಮಂಡನೆ ಮಾಡಲಿರುವ ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ಘೋಷಿಸುವ ಸಾಧ್ಯತೆ ಇದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಘೋಷಿಸಲಿದೆ. ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆ ಇದ್ದು, ಈ ಮೂಲಕ ಉದ್ಯೋಗಸ್ಥ ಮಹಿಳೆಯರ ಬೆಂಬಲ ಗಳಿಸಲು ಬಿಜೆಪಿ ಮುಂದಾಗಿದೆ. ಕಾರ್ವಿಕ ಸಚಿವಾಲಯ ಸಲ್ಲಿಸಿರುವ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ಮಧ್ಯಮವೊಂದು ವರದಿ ಪ್ರಕಟಿಸಿದೆ.

    ಹೆರಿಗೆ ಸೌಲಭ್ಯ ಕಾಯ್ದೆಯನ್ನು 2017ರಲ್ಲಿ ಸರ್ಕಾರ ತಿದ್ದುಪಡಿ ಮಾಡಿತ್ತು. ಆಗ ಉದ್ಯೋಗಸ್ಥ ಮಹಿಳೆಯರಿಗೆ ಕೊಡುವ ಸಂಬಳ ಸಹಿತ ಹೆರಿಗೆ ರಜೆಯನ್ನು 12 ವಾರದಿಂದ 26 ವಾರಕ್ಕೆ ಏರಿಸಿತ್ತು. ಈ ಹಿಂದೆ ಕಾರ್ವಿಕ ಸಚಿವಾಲಯವು ಕಡಿಮೆ ಸಂಬಳ ಪಡೆಯುವ ಮಹಿಳೆಯರಿಗೂ ಕೂಡ 26 ವಾರಗಳ ಹೆರಿಗೆ ರಜೆ ಸಿಗುವಂತೆ ಮಾಡಲು ಕೆಲವು ಕ್ರಮಗಳ ಬಗ್ಗೆ ಸರ್ಕಾರದ ಬಳಿ ಪ್ರಸ್ತಾವನೆ ಇಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv