Tag: ಮಧ್ಯಪ್ರದೇಶದ

  • ಟ್ರಕ್, ಬಸ್ ನಡುವೆ ಅಪಘಾತ – 13 ಜನರ ಸಜೀವ ದಹನ

    ಟ್ರಕ್, ಬಸ್ ನಡುವೆ ಅಪಘಾತ – 13 ಜನರ ಸಜೀವ ದಹನ

    ಭೋಪಾಲ್: ಬಸ್ಸೊಂದು ಟ್ರಕ್‍ಗೆ ಡಿಕ್ಕಿಯಾಗಿ (Accident) ಹೊತ್ತಿ ಉರಿದ ಪರಿಣಾಮ 13 ಜನ ಸಾವಿಗೀಡಾದ ಘಟನೆ ಮಧ್ಯಪ್ರದೇಶದ (Madhya Pradesh) ಗುನ ಹಾಗೂ ಅರೋನ್ ನಡುವಿನ ರಸ್ತೆಯಲ್ಲಿ ನಡೆದಿದೆ.

    ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಸ್ ಗುನಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಅರೋನ್‍ಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಂಗಡಿ, ಮಾಲ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ – ಶೀಘ್ರವೇ ಸುಗ್ರೀವಾಜ್ಞೆ

    ಅಪಘಾತಕ್ಕೊಳಗಾದ ಬಸ್ ಬಿಜೆಪಿ (BJP) ಮುಖಂಡ ಧರ್ಮೇಂದ್ರ ಸಿಕರ್ವಾರ್ ಅವರ ಒಡೆತನದ್ದು ಎಂದು ತಿಳಿದು ಬಂದಿದೆ. ಬಸ್‍ನ ವಿಮೆ ಪ್ರಮಾಣಪತ್ರಗಳ ಅವಧಿ ಮುಗಿದಿದ್ದು, 2021 ರಿಂದ ರಸ್ತೆ ತೆರಿಗೆ ಸಹ ಪಾವತಿಸಿಲ್ಲ. ಬಸ್‍ನ ಸುರಕ್ಷತಾ ಪ್ರಮಾಣ ಪತ್ರದ ಅವಧಿ ಸಹ ಮುಗಿದಿತ್ತು ಎಂದು ವರದಿಯಾಗಿದೆ.

    ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ಘೋಷಣೆ ಮಾಡಲಾಗಿದೆ. ಅಪಘಾತಕ್ಕೆ ಕಾರಣ ಹಾಗೂ ಬಸ್‍ನ ದಾಖಲೆಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ದೇಶಕ ವರ್ಮಾ ಶಿರಚ್ಛೇದನ ವಿಚಾರ: ಟಿಡಿಪಿ ಮುಖಂಡನ ವಿರುದ್ಧ ದೂರು

  • 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ

    ಭೋಪಾಲ್: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಬಟ್ಟೆಯಿಂದ ಸುತ್ತಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಮನೆಯ ಮೇಲ್ಛಾವಣಿ ಮೇಲೆ ಪತ್ತೆಯಾಗಿದೆ ಎಂದು ಸೊಹಾಗ್‍ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

    ಭಾನುವಾರ ರಾತ್ರಿ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಯ ನೆರೆಮನೆಯಲ್ಲಿ ವಾಸಿಸುತ್ತಿರುವ ಸಂಶಯಾಸ್ಪದ ವ್ಯಕ್ತಿಯನ್ನು ಪೊಲೀಸರು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

    POLICE JEEP

    ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಆಕೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕಿ ಶವ ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಪತ್ತೆಯಾದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಸೆಕ್ಷನ್‍, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.