Tag: ಮನಸಾರೆ ಜೋಡಿ

  • ದಿಗಂತ್ ಡಿಸ್ಚಾರ್ಜ್ ಬೆನ್ನಲ್ಲೇ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ ನಟಿ ಐಂದ್ರಿತಾ ರೇ

    ದಿಗಂತ್ ಡಿಸ್ಚಾರ್ಜ್ ಬೆನ್ನಲ್ಲೇ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ ನಟಿ ಐಂದ್ರಿತಾ ರೇ

    ಗೋವಾ ಟ್ರಿಪ್‌ಗೆ ಹೋಗಿ ಸೊಮರ್ ಸಾಲ್ಟ್‌ನಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ದ ದಿಗಂತ್ ಅವರ ಆರೋಗ್ಯದಲ್ಲಿ ಭಾರೀ ಚೇತರಿಕೆ ಕಾಣಿಸಿಕೊಂಡಿದೆ. ನಿನ್ನೆ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರನ್ನು ಐಸಿಯುನಲ್ಲಿ ಇಡಲಾಗಿತ್ತು. ನಿನ್ನೆ ರಾತ್ರಿ ನಟ ದಿಗಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾಜ್ ಮಾಡಿದ ಬೆನ್ನಲ್ಲೇ ನಟಿ ಐಂದ್ರಿತಾ ರೇ ಅಭಿಮಾನಿಗಳಿಗೆ, ಚಿತ್ರರಂಗದ ಸ್ನೇಹಿತರಿಗೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಕುಟುಂಬದ ಜತೆ ಗೋವಾ ಟ್ರಿಪ್‌ಗೆ ಹೋಗಿದ್ದ ನಟ ದಿಗಂತ್ ಸೊಮರ್ ಸಾಲ್ಟ್ ಮಾಡಲು ಹೋಗಿ ಕುತ್ತಿಗೆಗೆ ಪೆಟ್ಟು ಮಾಡಿಕೊಂಡಿದ್ದರು. ಬಳಿಕ ಏರ್‌ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಇದೀಗ ಆರೋಗ್ಯದಲ್ಲಿ ನಟ ದಿಗಂತ್ ಸ್ಥಿರವಿರುವ ಕಾರಣ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ. ಇದೀಗ ದಿಗಂತ್ ಆರೋಗ್ಯದ ಅಪ್‌ಡೇಟ್ ಕೊಡುವುದರ ಜತೆಗೆ ಅಭಿಮಾನಿಗಳಿಗೆ, ಹಿತೈಷಿಗಳಿಗೆ ನಟಿ ಐಂದ್ರಿತಾ ರೇ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ನಿನ್ನೆಯಷ್ಟೇ ದಿಗಂತ್ ಶಸ್ತ್ರ ಚಿಕಿತ್ಸೆ ನಡೆದಿದೆ. ಆರೋಗ್ಯದಲ್ಲಿ ಚೇತರಿಕೆಯಿದೆ ಎಂದು ಹೇಳಲು ಖುಷಿಯಾಗುತ್ತಿದೆ. ಮತ್ತಷ್ಟು ರಿಕವರಿ ಆಗುವ ಹಾದಿಯಲ್ಲಿದ್ದಾರೆ. ಈ ವೇಳೆ ನಮ್ಮ ಅಭಿಮಾನಿಗಳಿಗೆ, ಮಾಧ್ಯಮ ಸ್ನೇಹಿತರಿಗೆ ಮತ್ತು ಚಿತ್ರರಂಗದ ಹಿತೈಷಿಗಳಿಗೆ ನಿಮ್ಮ ಹಾರೈಕೆಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಇನ್ನು ದಿಗಂತ್ ಕೂಡ ಆದಷ್ಟು ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ.

    Live Tv