Tag: ಮನಿಷ್ ಸಿಸೋಡಿಯ

  • ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

    ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

    ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಆನ್‌ಲೈನ್ ತರಗತಿಗಳನ್ನು ಪುನರಾರಂಭಿಸುವಂತೆ ತಜ್ಞರ ಸಮಿತಿ ಹೇಳಿದೆ ಎಂದು ವರದಿಯಾಗಿದೆ.

    ರಾಷ್ಟ್ರ ರಾಜಧಾನಿಯಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಚರ್ಚಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ನಿರ್ಣಾಯಕ ಸಭೆ ನಡೆಯಲಿ ಸಿದ್ಧತೆ ನಡೆಸಲಾಗುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕೋವಿಡ್ ಉಲ್ಬಣ – ಜೂನ್ 10ರ ವರೆಗೆ ನಿಷೇಧಾಜ್ಞೆ ಜಾರಿ

    COVID HIKE 2

    ಶಾಲೆಗಳಲ್ಲಿ ಶಿಕ್ಷಕರು ಹಾಗೂ ಬಹುತೇಕ ವಿದ್ಯಾರ್ಥಿಗಳಿಗೂ ಕೋವಿಡ್ ವ್ಯಾಪಿಸುತ್ತಿದೆ. ಆದ್ದರಿಂದ ಪೋಷಕರೂ ಸಹ ಶಾಲೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ತಜ್ಞರೂ ಸಹ ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

    ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 632 ಹೊಸ ಪ್ರಕರಣಗಳು ವರದಿಯಾಗಿದ್ದು, ಸತತ 3ನೇ ದಿನ 500ಕ್ಕಿಂತಲೂ ಹೆಚ್ಚಿನ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ. ಪಾಸಿಟಿವಿಟಿ ದರ ಶೇ.4ಕ್ಕೆ ಏರಿಕೆಯಾಗಿದೆ. ಆದಾಗ್ಯೂ ಇಲ್ಲಿವರೆಗೆ ಯಾವುದೇ ಸಾವು-ನೋವುಗಳಾಗಿಲ್ಲ ಎನ್ನುವುದು ಸಮಾಧಾನ ಎಂದು ತಜ್ಞರ ಸಮಿತಿ ಹೇಳುತ್ತಿದೆ. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ

    COVID school

    ತಜ್ಞರ ಸಲಹೆ ಏನಿದೆ?: ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ತಜ್ಞರ ಸಮಿತಿಯು, ದೆಹಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳ ಮೂಲಕ ಅಥವಾ ಆಫ್‌ಲೈನ್ ತರಗತಿಗಳ ಮೂಲಕ ತಮ್ಮ ಅಧ್ಯಯನ ಮುಂದುವರಿಸುವ ಆಯ್ಕೆ ಅನುಸರಿಸಬಹುದು. ಆದರೆ, ಆಫ್‌ಲೈನ್ ತರಗತಿಗಳನ್ನು ಅನುಸರಿಸಿದರೆ ಕ್ಯಾಂಪಸ್‌ನಲ್ಲಿ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಶಾಲಾ ಅಧಿಕಾರಿಗಳಿಗೆ ಅಥವಾ ಮೇಲ್ವಿಚಾರಕರಿಗೆ ನಿರ್ದೇಶನ ನೀಡಬೇಕಾಗುತ್ತದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮಾಸ್ಕ್ ಕಡೆಗಣನೆ- ದಂಡ ವಿಧಿಸುವ ಚಿಂತನೆಯಿಲ್ಲ: ಸದ್ಯಕ್ಕೆ ದೆಹಲಿಯಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಚಿಂತನೆಯನ್ನು ಸರ್ಕಾರ ಮಾಡಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯ ಹೇಳಿದ್ದಾರೆ.

  • ನಾಳೆಯಿಂದಲೇ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ

    ನಾಳೆಯಿಂದಲೇ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ

    ನವದೆಹಲಿ: ದೆಹಲಿ ಸರ್ಕಾರವು ನಾಳೆ (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

    School-Open

    ರಾಷ್ಟ್ರರಾಜಧಾನಿಯಲ್ಲಿ ಕೆಲವು ಶಾಲಾ ಮಕ್ಕಳಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದು ಈ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕೋವಿಡ್-19 ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿಲ್ಲ. ಆದ್ದರಿಂದ ಆತಂಕ ಪಡಬೇಕಿಲ್ಲ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಜನರೂ ಸಹ ಕೊರೊನಾದೊಂದಿಗೆ ಬದುಕುವುದನ್ನು ಕಲಿಯಬೇಕಿದೆ ಎಂದು ಅವರು ಹೇಳಿದ್ದಾರೆ.  ಇದನ್ನೂ ಓದಿ: ಬೆಂಗ್ಳೂರಲ್ಲಿ 75 ಸೇರಿ ರಾಜ್ಯದಲ್ಲಿ 93 ಹೊಸ ಪ್ರಕರಣ- ಕೋವಿಡ್‍ನಿಂದ ಓರ್ವ ಸಾವು

    ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಪ್ರಕಾರ, ಕೆಲ ದಿನಗಳಲ್ಲಿ ಶಾಲಾ ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದಾಗಿ ಪೋಷಕರು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿಯ ಶಾಲೆಗಳಿಗೆ ನಾಳೆಯಿಂದಲೇ ಹೊಸ ಮಾರ್ಗಸೂಚಿಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

    covid

    ದೆಹಲಿಯಲ್ಲಿ 299 ಹೊಸ ಕೋವಿಡ್ ಪ್ರಕರಣಗಳು ವರದಿಯಾದ ಬಳಿಕ ಪ್ರತಿಕ್ರಿಯಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕೊರೊನಾ ವೈರಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ. ಅಗತ್ಯಬಿದ್ದರೆ ಶಾಲೆಗಳಲ್ಲಿ ಎಸ್‌ಒಪಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಳಿಕೆಯತ್ತ ಕೋವಿಡ್‌ ಕೇಸ್‌ -ಇಂದಿನ ಪಾಸಿಟಿವಿಟಿ ರೇಟ್ ಶೇ.1.45

    ದೆಹಲಿಯಲ್ಲಿ ಶೇಕಡಾ 0.5 ರಷ್ಟಿದ್ದ ಪಾಸಿಟಿವಿಟಿ ದರವು ಕಳೆದ ಒಂದು ವಾರದಲ್ಲಿ 2.70ಕ್ಕೆ ಏರಿಕೆಯಾಗಿದೆ. ಆದರೆ, ವೈದ್ಯರು ಇದು ಆತಂಕದ ಬೆಳವಣಿಗೆಯಲ್ಲ ಎಂದು ಹೇಳಿದ್ದರು. ಇದರ ಹೊರತಾಗಿಯೂ ಶಾಲೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸುವುದಾಗಿ ಸಿಸೋಡಿಯಾ ಹೇಳಿದ್ದಾರೆ.