Tag: ಮನೆಗಳ್ಳತನ

  • ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌

    ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌

    ರಾಯಚೂರು: ಬಿಸಿಲನಾಡು ರಾಯಚೂರು (Raichuru) ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

    ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿಕೊಳ್ಳಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಸಿಸಿಟಿವಿ ಕ್ಯಾಮರಾಗಳಲ್ಲಿ ಕಳ್ಳರ ಚಲನವಲನಗಳು ಸೆರೆಯಾಗುತ್ತಿವೆ ಹೊರತು ಕಳ್ಳತನ ಪ್ರಕರಣಗಳು ಕಡಿಮೆಯಾಗಿಲ್ಲ. ಬೇರೆ ಬೇರೆ ಗ್ಯಾಂಗ್‌ಗಳು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಆಕ್ಟಿವ್ ಆಗಿದ್ದು, ಕಳ್ಳತನಕ್ಕೆ ಯತ್ನಿಸುವ ದೃಶ್ಯಗಳು ಜನರನ್ನು ಭಯಭೀತರನ್ನಾಗಿಸಿವೆ.ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

    ಕೆಲವೆಡೆ ಕಳ್ಳರ ಗ್ಯಾಂಗ್ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ರೆ, ಇನ್ನೂ ಕೆಲವೆಡೆ ರಾಜಾರೋಷವಾಗಿ ಓಡಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದಾರೆ. ಬೆಳಗಿನ ಜಾವದಲ್ಲಿ ಕಳ್ಳರು ಓಡಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ರಕ್ಷಣೆಗಾಗಿ ಒತ್ತಾಯಿಸಿದ್ದಾರೆ. ರಾತ್ರಿ, ಬೆಳಗಿನ ಜಾವದಲ್ಲಿ ಹೆಚ್ಚು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ. ರೈಲು ನಿಲ್ದಾಣ, ರೈಲು ಹಳಿ ಅಕ್ಕಪಕ್ಕದ ಮನೆಗಳನ್ನ ಕಳ್ಳರು ಟಾರ್ಗೆಟ್ ಮಾಡುತ್ತಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.

    ರಾಯಚೂರು ನಗರ ಸೇರಿದಂತೆ ಹಲವೆಡೆ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳ ಕಳ್ಳರು ಪತ್ತೆಯಾಗಿಲ್ಲ. ಪಕ್ಕದ ಆಂಧ್ರಪ್ರದೇಶ, ತೆಲಂಗಾಣದಿಂದಲೂ ಕಳ್ಳರ ಕಾಟ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

  • ಮೈಸೂರು | ಮನೆ ಹಿಂಬಾಗಿಲಿನ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ

    ಮೈಸೂರು | ಮನೆ ಹಿಂಬಾಗಿಲಿನ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ

    ಮೈಸೂರು: ಮನೆಯ ಹಿಂಬಾಗಿಲಿನ ಬೀಗ ಮುರಿದು ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿರುವ ಘಟನೆ ಮೈಸೂರು (Mysuru) ತಾಲೂಕಿನ ನಾಗವಾಲದಲ್ಲಿ ನಡೆದಿದೆ.

    ನಾಗವಾಲದ (Nagwala) ನಿವಾಸಿ ರೇಣುಕಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ವೇಳೆ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಇದನ್ನೂ ಓದಿ: ಸುಶ್ಮಿತಾ ಸೇನ್ ಮಾಜಿ ಅತ್ತಿಗೆಗೆ ಆರ್ಥಿಕ ಸಂಕಷ್ಟ- ಆನ್‌ಲೈನ್‌ನಲ್ಲಿ ನಟಿ ಸೀರೆ ಮಾರಾಟ

    3,26,700 ರೂ., ನಗದು 276 ಗ್ರಾಂ ಚಿನ್ನ, 1,350 ಗ್ರಾಂ ಬೆಳ್ಳಿ ಸೇರಿ ಸುಮಾರು 22 ಲಕ್ಷ ಮೌಲ್ಯದ ವಸ್ತುಗಳನ್ನ ಖದೀಮರು ದೋಚಿದ್ದಾರೆ. ಸದ್ಯ ಇಲವಾಲ ಪೊಲೀಸರು (Ilavala Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!

  • ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು

    ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಗಡಿಯಲ್ಲಿರುವ ಕಾಗವಾಡ ತಾಲೂಕಿನ ಐನಾಪೂರ ಹಾಗೂ ಮೋಳೆ ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನವಾಗಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ಭಯದ ವಾತಾವರಣ ಉಂಟಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಐನಾಪುರ ಪಟ್ಟಣದ ಹೃದಯಭಾಗದಲ್ಲಿರುವ 13 ಮನೆಗಳ ಬೀಗ ಮುರಿದು ಏಕಕಾಲಕ್ಕೆ ಕಳ್ಳತನ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ, ನಗದು ಹಣ ಹೀಗೆ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ಆಭರಣ ಹಾಗೂ ನಗದು ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ಈ ಕೃತ್ಯ ಮಾಡಲಾಗಿದೆ. ಇದನ್ನೂ ಓದಿ: ಸಿಖ್, ಬೌದ್ಧರಂತೆ ಲಿಂಗಾಯತಕ್ಕೂ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು: ಎಸ್.ಎಂ.ಜಾಮದಾರ

    ಸಿದ್ದು ದಶರಥ ಜಾಧವ ಅವರ ಮನೆಯಲ್ಲಿ 7 ಗ್ರಾಂ ಚಿನ್ನಾಭರಣ, 10 ಗ್ರಾಂ ಬೆಳ್ಳಿ ಆಭರಣ ಮತ್ತು 20 ಸಾವಿರ ನಗದು, ಬಸಪ್ಪ ವಡಿಯರ ಮನೆಯಿಂದ 12 ಗ್ರಾಂ ಚಿನ್ನಾಭರಣ, 10 ಗ್ರಾಂ ಬೆಳ್ಳಿಯ ಆಭರಣ, 10 ಸಾವಿರ ನಗದು ಸೇರಿದಂತೆ 13 ಮನೆಗಳ ಬೀಗ ಮುರಿದು ಖದೀಮರು ಕಳ್ಳತನ ಮಾಡಿದ ಘಟನೆ ವರದಿಯಾಗಿದೆ.

    ಇಂದು ನಸುಕಿನ ಜಾವ ಮೋಳೆ ಗ್ರಾಮದಲ್ಲಿ ಐದಕ್ಕೂ ಹೆಚ್ಚು ಮನೆ ಕಳ್ಳತನವಾಗಿದೆ. ಮೋಳೆ ಗ್ರಾಮದ ಸೇವಂತ ರೂಪ ಅವರ ಮನೆಯಲ್ಲಿ 12 ಗ್ರಾಂ ಬಂಗಾರ, ಅರ್ಧ ಕೆಜಿ ಬೆಳ್ಳಿ ಹಾಗೂ 5,000 ನಗದು ಹಣ ಕಳ್ಳತನವಾಗಿದೆ. ಕಳ್ಳತನ ನಡೆದ ಸ್ಥಳಕ್ಕೆ ಅಥಣಿ ಡಿವೈಎಸ್‍ಪಿ ಎಸ್.ವಿ.ಗಿರೀಶ್, ಸಿಪಿಐ ಶಂಕರಗೌಡ ಪಾಟೀಲ್ ಹಾಗೂ ಅಥಣಿ ಪಿಐಬಿಎಂ ರಬಕವಿ ಭೇಟಿ ನೀಡಿ ಪರಶೀಲಿಸಿದ್ದು, ಮನೆಯವರಿಂದ ಕಳ್ಳತನ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

    ಗಡಿಭಾಗದಲ್ಲಿ ಹೀಗೆ ಕಳ್ಳರು ತಮ್ಮ ಕೈಚಳಕ ತೊರಿಸುತ್ತಿದ್ದು, ಈ ಕಳ್ಳರ ಗ್ಯಾಂಗ್ ದೊಡ್ಡ ಪ್ರಮಾಣದಲ್ಲಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಜನರು ರಾತ್ರಿ ಹೊತ್ತು ಸಂಚರಿಸಲು ಭಯಗೊಳ್ಳುತ್ತಿದ್ದಾರೆ. ಈ ಕಳ್ಳರ ಗ್ಯಾಂಗ್ ಅನ್ನು ಪೊಲೀಸ್ ಇಲಾಖೆ ಆದಷ್ಟು ಬೇಗ ಬಂಧಿಸಬೇಕಿದೆ. ಇದನ್ನೂ ಓದಿ: ಲೂಟಿಗೊಳಗಾದ ವೃದ್ಧನ ರಕ್ಷಣೆಗೆ ನಿಂತ ಹಿರಿಯ ಪೊಲೀಸ್ ಅಧಿಕಾರಿ

  • ರಾತ್ರೋ ರಾತ್ರಿ ಶ್ರೀಮಂತೆಯಾಗಲು ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ಳು

    ರಾತ್ರೋ ರಾತ್ರಿ ಶ್ರೀಮಂತೆಯಾಗಲು ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ಳು

    – ಚಾಲಕಿ ಕಳ್ಳಿಗೆ ಗೆಳೆಯನ ಸಾಥ್
    – ಐಷಾರಾಮಿ ಜೀವನದ ಕನಸು ಕಂಡವರು ಜೈಲು ಪಾಲು

    ಬೆಂಗಳೂರು: ಒಂದೇ ಮನೆಯಲ್ಲಿ ಒಂದು ಕೆ.ಜಿ ಚಿನ್ನಾಭರಣ ಕದ್ದು ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳರ ಟೀಂ ಮಾರತಹಳ್ಳಿ ಪೊಲೀಸ್ರ ಬಲೆಗೆ ಬಿದ್ದಿದ್ದಾರೆ.

    ಸುನೈನ, ಮೀನ್ ಹಾಜುದ್ದಿನ್, ಚಂದನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಅಸ್ಸಾಂ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಸುನೈನ ನಿತಿನ್ ಎಂಬವರ ಮನೆಯಲ್ಲಿ ಕೆಲಸಕ್ಕೆ ಹೋಗುತಿದ್ದಳು.

    ಆರೋಪಿ ಮನೆಯಲ್ಲಿರೋ ಬೆಲೆಬಾಳುವ ವಸ್ತುಗಳನ್ನ ಗಮನದಲ್ಲಿಟ್ಟುಕೊಂಡು ಬೆಡ್ ರೂಂನಲ್ಲಿರೋ ಲಾಕರ್ ಕೀ ಎಗ್ಗರಿಸಿರುತ್ತಾಳೆ. ಕದ್ದ ಲಾಕರ್ ಕೀಯನ್ನ ತನ್ನ ಸ್ನೇಹಿತ ಮೀನಾಹಾಜುದ್ದಿನ್ ಗೆ ಕೊಟ್ಟು ಕಳ್ಳತನ ಮಾಡಿಕೊಂಡು ಬರುವಂತೆ ಹೇಳಿದ್ದಾಳೆ. ಅದರಂತೆ ಆರೋಪಿ ಮೀನಾಹಾಜುದ್ದಿನ್ ಲಾಕರ್ ಒಪನ್ ಮಾಡಿ ಮನೆಯಲ್ಲಿರೋ 50 ಲಕ್ಷ ರೂ. ಬೆಲೆಬಾಳುವ ಒಂದು ಕೆ.ಜಿ ಚಿನ್ನಾಭರಣ ಹಾಗೂ ಬೆಳ್ಳಿ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

    ಕಳ್ಳತನದ ಬಗ್ಗೆ ಮನೆ ಮಾಲೀಕ ನಿತಿನ್ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಮನೆ ಕಳ್ಳತನದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡವನ್ನ ಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ತನಿಖೆಗೆ ಒಳಪಡಿಸಿದಾಗ ಕಳ್ಳತನದ ಸೂತ್ರ ದಾರಿ ಯಾರು ಅನ್ನೋದು ತಿಳಿದು ಬಂದಿದೆ. ಆರೋಪಿತೆ ರಾತ್ರೋ ರಾತ್ರಿ ಶ್ರೀಮಂತೆ ಆಗಿ ಐಷಾರಾಮಿ ಜೀವನ ನಡೆಸಲು ಸ್ನೇಹಿತನ ಸಹಾಯದಿಂದ ಕಳ್ಳತನ ಮಾಡಿಸಿದ್ಲು ಅನ್ನೋ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ.

    ಆರೋಪಿ ಕದ್ದ ಚಿನ್ನಾಭರಣವನ್ನ ಬೆಂಗಳೂರು ಮತ್ತು ಅಸ್ಸಾಂ ರಾಜ್ಯದಲ್ಲಿ ಮಾರಾಟ ಮಾಡಿಕೊಂಡಿದ್ರು. ಪೊಲೀಸ್ರು ಆರೋಪಿಗಳು ಕಳ್ಳತನ ಮಾಡಿದ್ದ ಒಂದು ಕೆ.ಜಿ ಚಿನ್ನಾಭರಣ ಬೆಳ್ಳಿ , 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಖತರ್ನಾಕ್ ಕಳ್ಳರು ಅರೆಸ್ಟ್ – 96 ಗ್ರಾಂ ಚಿನ್ನಾಭರಣ, 128 ಗ್ರಾಂ ಬೆಳ್ಳಿ ವಶ

    ಖತರ್ನಾಕ್ ಕಳ್ಳರು ಅರೆಸ್ಟ್ – 96 ಗ್ರಾಂ ಚಿನ್ನಾಭರಣ, 128 ಗ್ರಾಂ ಬೆಳ್ಳಿ ವಶ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಮನೆಯ ಬೀಗ ಮುರಿದು ಕಳವು ಮಾಡಿದ್ದ ಖತರ್ನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಸತೀಶ್ (32), ಕಿರಣ್ (23) ಚಂದ್ರಶೇಖರ್.ಕೆ (23) ಎಂದು ಗುರುತಿಸಲಾಗಿದೆ. ಬಂಧಿತರಿಂದ 3,64,800 ರೂ. ಮೌಲ್ಯದ 96 ಗ್ರಾಂ ಚಿನ್ನಾಭರಣ, 128 ಗ್ರಾಂ ತೂಕದ ಬೆಳ್ಳಿ, 1 ಮೊಬೈಲ್ ಹಾಗೂ ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಸ್ಪ್ಲೆಂಡರ್ ಬೈಕ್ ಹಾಗೂ ಮನೆ ಬೀಗ ಒಡೆಯಲು ಬಳಸಿದ್ದ 2 ಕಬ್ಬಿಣದ ರಾಡ್‍ನ್ನು ವಶಪಡಿಸಿಕೊಳ್ಳಲಾಗಿದೆ.

    ಆರೋಪಿಗಳು ಮೂರು ತಿಂಗಳ ಹಿಂದೆ ಬಿಳಿಗೇರಿ ಗ್ರಾಮದಲ್ಲಿ ಕೆಲಸದ ಸಲುವಾಗಿ ಮನೆಗೆ ಬೀಗ ಹಾಕಿ ತೆರಳಿದ್ದವರ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ್ದರು. ಈ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದವು. ಸದರಿ ಪ್ರಕರಣವನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಸೋಮವಾರಪೇಟೆ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು.

    ಈ ವಿಶೇಷ ತಂಡ ಸೋಮವಾರಪೇಟೆ ಪೊಲೀಸ್ ಅಧೀಕ್ಷಕರು ಹಾಗೂ ಉಪಾಧೀಕ್ಷಕರ ಸೂಚನೆ ಮೆರೆಗೆ ಕಾರ್ಯಪ್ರವೃತ್ತರಾಗಿ ಮೊಬೈಲ್ ಟ್ರ್ಯಾಕ್ ಮಾಡುವ ಮೂಲಕ ಆರೋಪಿಗಳನ್ನು ಬಿಳಿಗೇರಿ ಹಾಗೂ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ.

  • ಮನೆ ಕಳ್ಳನ ಬಂಧನ- ಬೆಳ್ಳಿ, ಬಂಗಾರ ಜಪ್ತಿ

    ಮನೆ ಕಳ್ಳನ ಬಂಧನ- ಬೆಳ್ಳಿ, ಬಂಗಾರ ಜಪ್ತಿ

    ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಅವಳಿ ನಗರದ ವಿವಿಧೆಡೆ ಮನೆಗಳ ಕಳ್ಳತನ ಮಾಡಿದ ಕಳ್ಳನನ್ನು ಬಂಧಿಸುವಲ್ಲಿ ಎಂಪಿಎಂಸಿ ಪೊಲೀಸರು ಯಶ್ವಸಿಯಾಗಿದ್ದಾರೆ.

    ಕೃಷ್ಣ್ ಲಚ್ಚಪ್ಪ ಲಮಾಣಿ ಬಂಧಿತ ಆರೋಪಿ. ಬಂಧಿತ ಮನೆಗಳ್ಳನಿಂದ 75 ಸಾವಿರ ರೂ. ಮೌಲ್ಯದ ಬೆಳ್ಳಿ ಬಂಗಾರವನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರ ಹಾಗೂ ಶಿವಾನಂದನಗರದಲ್ಲಿ ಆದ ಮನೆಗಳ್ಳತನ ಮಾಡಿದ ಆರೋಪಿಯಿಂದ 75 ಸಾವಿರ ಮೌಲ್ಯದ ಬೆಳ್ಳಿ ಬಂಗಾರದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಳೆದ ಹಲವಾರು ತಿಂಗಳುಗಳಿಂದ ಮನೆಗಳ್ಳತನ ಮಾಡಿ ಪೊಲೀಸರಿಗೆ ಕೈಗೆ ಸಿಗದೇ ಪರಾರಿಯಾಗುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೀಗಾಗಿ ಎಂಪಿಎಂಸಿ ಠಾಣೆಯ ಇನ್ಸಪೆಕ್ಟರ್ ಪ್ರಭು ಸೂರಿನ ಹಾಗೂ ಠಾಣೆಯ ಸಿಬ್ಬಂದಿ ಕಾರ್ಯವೈಖರಿ ಮೆಚ್ಚಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.