Tag: ಮನೆಯೂಟ

  • ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿ

    ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿ

    ಬೆಂಗಳೂರು: ಮನೆ ಊಟ (Home Food) ಕೋರಿ ದರ್ಶನ್‌ (Darshan) ಸಲ್ಲಿಸಲಾಗಿರುವ ಮನವಿಯ ಅರ್ಜಿಯನ್ನು ಹೈಕೋರ್ಟ್‌ (High Court) ಸೆ.5ಕ್ಕೆ ಮುಂದೂಡಿದೆ.

    ಇಂದು ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಾಲಯಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು. ಇದನ್ನೂ ಓದಿ: ದರ್ಶನ್‌ಗೆ ಸಂಕಷ್ಟ ತಂದೊಡ್ಡುತ್ತಾ ಹೈದರಾಬಾದ್‌ ಎಫ್‌ಎಸ್‌ಎಲ್‌ ವರದಿ?

     

    ಮನೆಯೂಟಕ್ಕೆ ಅವಕಾಶ ನೀಡುವಂತೆ ದರ್ಶನ್‌ ಮಾಡಿದ್ದ ಮನವಿಯನ್ನು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ತಿರಸ್ಕರಿಸಿದ್ದಾರೆ. ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಅವಕಾಶ ಕೋರಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ನಾವದಗಿ ಮನವಿ ಪುರಸ್ಕರಿಸಿದ ಕೋರ್ಟ್‌ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ದರ್ಶನ್ ಆರೋಗ್ಯ ಸ್ಥಿರವಾಗಿದೆ. ದರ್ಶನ್‌ ಅವರಿಗೆ ಮನೆಯೂಟ, ಹಾಸಿಗೆ, ಬಟ್ಟೆ ನೀಡಲು ಸಾಧ್ಯವಿಲ್ಲ. ಆರೋಪಿ ದರ್ಶನ್‌ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮನೆಯೂಟ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದು ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಮನೆಯೂಟ ನಿರಾಕರಿಸಿ ಆದೇಶ ಹೊರಡಿಸಿದ್ದರು.

     

  • ಮೂಳೆ ಶಸ್ತ್ರಚಿಕಿತ್ಸೆಯಾಗಿದೆ ಮನೆ ಊಟ ಕೊಡಿ – ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರ ಬರೆದ ದರ್ಶನ್‌!

    ಮೂಳೆ ಶಸ್ತ್ರಚಿಕಿತ್ಸೆಯಾಗಿದೆ ಮನೆ ಊಟ ಕೊಡಿ – ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರ ಬರೆದ ದರ್ಶನ್‌!

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲೂಟ ಸೇವಿಸುತ್ತಿರುವ ನಟ ದರ್ಶನ್‌ (Darshan) ಮತ್ತೆ ಮೆನಯೂಟ ಕೋರಿ ಜೈಲಾಧಿಕಾರಿಗಳು ಹಾಗೂ ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರಗಳನ್ನ ಬರೆದಿದ್ದಾರೆ. ಸ್ವತಃ ಕೈ ಬರಹದ ಮೂಲಕ ಜೈಲಾಧಿಕಾರಿಗೆ, ಜೈಲಿನ‌ ಮಹಾನಿರ್ದೇಶಕರಿಗೆ, ವೈದ್ಯಾಧಿಕಾರಿಗೆ, ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರ ʻಪಬ್ಲಿಕ ಟಿವಿʼಗೆ ಲಭ್ಯವಾಗಿದೆ.

    ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್‌ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ದರ್ಶನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದ ನಿತೀಶ್‌ಗೆ ಹಿನ್ನಡೆ – ಹೈಕೋರ್ಟ್‌ ಆದೇಶಕ್ಕೆ ತಡೆ ನೀಡದ ಸುಪ್ರೀಂ

    ಇತ್ತೀಚೆಗಷ್ಟೇ ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಸಲ್ಲಿಸಿದ್ದ ಮೆಮೋ ಅರ್ಜಿಯನ್ನು ವಿಚಾರಣೆಗೆ ಬರುತ್ತಿದ್ದಂತೆ ದರ್ಶನ್‌ ಪರ ವಕೀಲರು ಹಿಂದಕ್ಕೆ ಪಡೆದಿದ್ದರು. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದರು. ಅರ್ಜಿ ವಾಪಸ್‌ ಪಡೆದ ಕಾರಣ ದರ್ಶನ್‌ ಜೈಲೂಟವನ್ನೇ ಸೇವಿಸಬೇಕಿದೆ.

    ಇದಕ್ಕೂ ಮುನ್ನ ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ

    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ 

  • ದರ್ಶನ್‌ಗೆ ಜೈಲೂಟ – ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

    ದರ್ಶನ್‌ಗೆ ಜೈಲೂಟ – ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

    ಬೆಂಗಳೂರು: ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (Darshan) ಪರ ವಕೀಲರು ಹಿಂದಕ್ಕೆ ಪಡೆದಿದ್ದಾರೆ. ಅರ್ಜಿ ವಾಪಸ್‌ ಪಡೆದ ಕಾರಣ ದರ್ಶನ್‌ ಜೈಲೂಟವನ್ನೇ ಸೇವಿಸಬೇಕಿದೆ.

    ಇಂದು ವಿಚಾರಣೆಗೆ ಬರುತ್ತಿದ್ದಂತೆ ಮೆಮೋ‌ ಸಲ್ಲಿಸಿ ಅರ್ಜಿಯನ್ನು ಹಿಂದಕ್ಕೆ ಪಡೆಯಲಾಗಿದೆ. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದು ಮತ್ತೆ ಹೊಸ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

    ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.

    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

  • ನನಗೆ ಮನೆಯೂಟ ಬೇಕು – ಇಂದು ಹೈಕೋರ್ಟ್‌ನಲ್ಲಿ ದರ್ಶನ್‌ ಅರ್ಜಿ ವಿಚಾರಣೆ

    ನನಗೆ ಮನೆಯೂಟ ಬೇಕು – ಇಂದು ಹೈಕೋರ್ಟ್‌ನಲ್ಲಿ ದರ್ಶನ್‌ ಅರ್ಜಿ ವಿಚಾರಣೆ

    ಬೆಂಗಳೂರು: ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ನಟ ದರ್ಶನ್‌ (Darshan) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ (High Court)  ನಡೆಯಲಿದೆ.

    ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ (High Court) ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು.

    ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಹೇಳಿದ್ದೇನು?
    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.

    ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಇದನ್ನೂ ಓದಿ:  ಮೆಟ್ಟೂರು ಡ್ಯಾಂ ಭರ್ತಿ, ನೀರು ಬಿಡುವಂತೆ ಸೂಚನೆ – ಕರ್ನಾಟಕದಿಂದ ತಮಿಳುನಾಡಿಗೆ ಎಷ್ಟು ನೀರು ಹೋಗಿದೆ?

    ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ (Health) ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಬೇರೇನೂ ಹೇಳಿಲ್ಲ. ಪ್ರೋಟಿನ್ ಡಯಟ್ ಕೊಡಬೇಕೆಂದು ವೈದ್ಯರು ಹೇಳಿಲ್ಲ.

    ವಿಶೇಷ ಡಯಟ್ ಆಹಾರ ನೀಡಬೇಕಾದ್ರೆ ಜೈಲು ವೈದ್ಯರ ಒಪ್ಪಿಗೆ ಬೇಕಾಗುತ್ತದೆ. ದರ್ಶನ್ ವಿಚಾರದಲ್ಲಿ ವೈದ್ಯರು ವಿಶೇಷ ಆಹಾರಕ್ಕೆ ಶಿಫಾರಸು ಮಾಡಿಲ್ಲ. ದರ್ಶನ್ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಬೆಡ್ ರೆಸ್ಟ್‌ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ಬೇರೆ ಸಮಸ್ಯೆಗಳಿಲ್ಲ.

    ವ್ಯಕ್ತಿ ಸಮಾಜದ ಉನ್ನತ ಸ್ಥಾನದಲ್ಲಿದ್ದರೂ ಜೈಲಿನಲ್ಲಿ ತಾರತಮ್ಯ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲರೂ ಸಮಾನರೇ. ಜಾತಿ ಧರ್ಮ ಅಸ್ತಿ ಅಂತಸ್ತು ಲೆಕ್ಕಕ್ಕೆ ಬರುವುದಿಲ್ಲ.

     

  • ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

    ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

    ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.

    ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.  ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ್ದು, ದರ್ಶನ್‌ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಧನ ವಿಚಾರದಲ್ಲಿ ರಾಜ್ಯಗಳಿಗೆ ಬಹುದೊಡ್ಡ ಜಯ – ಸುಪ್ರೀಂ ಕೋರ್ಟ್ ಹೇಳಿದ್ದೇನು?

    ದರ್ಶನ್‌ ಅರ್ಜಿ ವಜಾಗೊಂಡಿದ್ದು ಯಾಕೆ?
    Karnataka Prisons and Correctional Services Manual 2021 ರ ಸೆಕ್ಷನ್‌ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ.

    ದರ್ಶನ್‌ ಪರ ವಕೀಲರ ವಾದ ಏನಿತ್ತು?
    ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ.

    ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.

    ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.

    ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.

    ಪೊಲೀಸರ ಪರ ವಾದ ಏನಿತ್ತು?
    ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ.

    ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

    ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.

    ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.