Tag: ಮನೋಜ್ ಪಾಂಡೆ

  • ನಮ್ಮಿಂದ ಯಾವುದೇ ಭೂ ಪ್ರದೇಶಗಳನ್ನು ಚೀನಾ ಕಸಿದುಕೊಳ್ಳಲು ಬಿಡಲ್ಲ: ಮನೋಜ್ ಪಾಂಡೆ

    ನಮ್ಮಿಂದ ಯಾವುದೇ ಭೂ ಪ್ರದೇಶಗಳನ್ನು ಚೀನಾ ಕಸಿದುಕೊಳ್ಳಲು ಬಿಡಲ್ಲ: ಮನೋಜ್ ಪಾಂಡೆ

    ನವದೆಹಲಿ: ಭಾರತದ ಹೊಸ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಭಾನುವಾರ ಚೀನಾಗೆ ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಿದ್ದಾರೆ. ಭಾರತ-ಚೀನಾ ಗಡಿಯಲ್ಲಿರುವ ಯಾವುದೇ ಪ್ರದೇಶವನ್ನೂ ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಎಂದಿದ್ದಾರೆ.

    ಮನೋಜ್ ಪಾಂಡೆ ನೂತನ ಸೇನಾ ಮುಖ್ಯಸ್ಥರಾಗುತ್ತಿದ್ದಂತೆ ಸಂದರ್ಶನವೊಂದರಲ್ಲಿ ಮಾತನಾಡಿ, ಭಾರತ ಚೀನಾ ಗಡಿಯ ಭೂ ಪ್ರದೇಶ ಯಥಾಸ್ಥಿತಿಯಲ್ಲಿರುತ್ತದೆ. ಭಾರತದ ಭೂ ಪ್ರದೇಶದಲ್ಲಿ ಯಾವುದೇ ನಷ್ಟವಾಗಲು ನಾವು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

    ಪ್ರಸ್ತುತ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಎಸಿ) ಪರಿಸ್ಥಿತಿ ಸಾಮಾನ್ಯವಾಗಿದೆ. ನಮ್ಮ ಪಡೆಗಳು ಪ್ರಮುಖ ದೈಹಿಕ ಸ್ಥಾನಗಳನ್ನು ಹೊಂದಿದ್ದಾರೆ. ನಮ್ಮ ಎದುರಾಳಿಗಳು ನಡೆಸಿರುವ ಪ್ರಚೋದನಾಕಾರಿ ಕ್ರಮಗಳಿಗೆ ಸರಿಯಾದ ಪ್ರತಿಕ್ರಿಯೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ

    ಭಾರತ-ಚೀನಾ ಗಡಿಯಲ್ಲಿ ಹೆಚ್ಚುವರಿ ಉಪಕರಣ ಹಾಗೂ ಪಡೆಗಳನ್ನು ಸೇರಿಸಿದ್ದೇವೆ. ಮೂಲಸೌಕರ್ಯಗಳ ಅಭಿವೃದ್ಧಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸಲಾಗಿದೆ. ಕಳೆದ 2 ವರ್ಷಗಳಿಂದ ಇರುವ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯ ಇದೆ ಎಂದು ತಿಳಿಸಿದರು.

  • ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

    ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

    ನವದೆಹಲಿ: ಭಾರತೀಯ ಸೇನೆಯ 29ನೇ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕರಿಸಿದ್ದಾರೆ.

    ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋಜ್ ಮುಕುಂದ್ ನರವಾಣೆ ಇಂದು ನಿವೃತ್ತರಾದ ಬಳಿಕ ಮನೋಜ್ ಪಾಂಡೆ ಅಧಿಕಾರ ಸ್ವೀಕರಿಸಿದರು. ಈ ಮೊದಲು ಸೇನಾಪಡೆಯ ಉಪ ಮುಖ್ಯಸ್ಥರಾಗಿದ್ದ ಜನರಲ್ ಪಾಂಡೆಗೆ ನಿವೃತ್ತ ಜನರಲ್ ನರವಾಣೆ ಅಧಿಕಾರ ಹಸ್ತಾಂತರಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ 45 ಸಾವಿರ ಲೌಡ್‌ ಸ್ಪೀಕರ್‌ ತೆರವು

    1962ರ ಮೇ 6ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ 1982 ಡಿಸೆಂಬರ್ 24 ರಂದು ಭಾರತೀಯ ಸೇನೆಯ ಕಾರ್ಪ್ಸ್‌ ಆಫ್ ಇಂಜಿನಿಯರ್ ಆಗಿ ನೇಮಕಗೊಂಡರು. ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಜನರಲ್ ಪಾಂಡೆ ಅವರು ಸೇನಾಪಡೆಯ ಇಂಜಿನಿಯರ್ ಕಾಪ್ರ್ಸ್‍ನಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಶತಾಯ ಗತಾಯ ಕಮಲ ಅರಳಿಸಲು ಬಿಜೆಪಿ ಪ್ಲಾನ್ – ಲಕ್ಷ್ಮೀ ಅಶ್ವಿನ್ ಗೌಡಗೆ ಗಾಳ

    ಈ ಹಿಂದೆ ಪೂರ್ವ ಸೇನಾ ಕಮಾಂಡ್ ಮುಖ್ಯಸ್ಥರಾಗಿ ಚೀನಾ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ಗಡಿಯನ್ನು ನಿಭಾಯಿಸುತ್ತಿದ್ದರು. ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಪಾಂಡೆ 1982ರಲ್ಲಿ ಇಂಜಿನಿಯರ್ ಕಾಪ್ರ್ಸ್‍ಗೆ ನಿಯೋಜಿಸಲ್ಪಟ್ಟರು. ಆಪರೇಷನ್ ಪರಾಕ್ರಮ್ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಲ್ಲನ್ವಾಲಾ ಸೆಕ್ಟರ್‌ನಲ್ಲಿ 117 ಇಂಜಿನಿಯರ್ ರೆಜಿಮೆಂಟ್‍ಗೆ ಕಮಾಂಡ್ ಆಗಿ ಸೇವೆ ಸಲ್ಲಿಸಿದ್ದರು.