Tag: ಮನ್‍ಕಿ ಬಾತ್

  • ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಮಂಡ್ಯ: ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ (Modern Bhagirath) ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) (Kamegowda) ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

    ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. ಇದನ್ನೂ ಓದಿ: ಪರೇಶ್ ಮೇಸ್ತಾ ಕೇಸ್ ರೀ ಓಪನ್‍ಗೆ ಒತ್ತಡ – ಸರ್ಕಾರ ಸೈಲೆಂಟ್

    ಇವರ ಈ ಕಾರ್ಯವನ್ನು ಮೆಚ್ಚಿ ಪ್ರಧಾನ ಮಂತ್ರಿ ಅವರ ಜನಪ್ರಿಯ ಕಾರ್ಯಕ್ರಮವಾದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಕಾಮೇಗೌಡರನ್ನು ಆಹ್ವಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಮೇಗೌಡರ ಕಾರ್ಯವನ್ನು ಶ್ಲಾಘನೆ ಮಾಡಿ ಹೊಗಳಿದ್ದರು. ಕಾಮೇಗೌಡರ ಕೆಲಸವನ್ನು ಗುರುತಿಸಿ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ.

    ಕಳೆದ ರಾತ್ರಿ ಕಾಮೇಗೌಡ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ಬಳಿಕ ಮನೆಯಲ್ಲಿ ಕಾಮೇಗೌಡರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

    ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ ಕಾಮೇಗೌಡರು?
    ಕುರಿಗಾಹಿಯಾಗಿದ್ದ ಕಾಮೇಗೌಡರು ಸುಮಾರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

    ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

    ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

    ನವದೆಹಲಿ: ನೀರನ್ನು ಮಿತವಾಗಿ ಬಳಸುವ ಜೊತೆಗೆ ಅದನ್ನು ಉಳಿಸಲು ಮತ್ತು ಸಾಧ್ಯವಾದಲ್ಲೆಲ್ಲಾ ನೀರನ್ನು ಮರುಬಳಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

    ಮನ್‍ ಕಿ ಬಾತ್‍ನ 87ನೇ ಕಂತಿನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ನೀರಿನ ಮರುಬಳಕೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮನೆಯಲ್ಲಿ ಬಳಸುವ ನೀರನ್ನು ತೋಟಕ್ಕೆ ಬಳಸುವ ಮೂಲಕ ಮರುಬಳಕೆ ಮಾಡಬಹುದಾಗಿದೆ ಎಂದರು.

    ನೀರನ್ನು ಉಳಿಸುವ ಈ ಕಾರ್ಯದಲ್ಲಿ ಮಕ್ಕಳು ಹೆಚ್ಚು ಕೈಜೋಡಿಸಬೇಕು. ಜಲ ಸಂರಕ್ಷಣೆನ್ನೆ ತಮ್ಮ ಜೀವನ ಧ್ಯೇಯವನ್ನಾಗಿ ಮಾಡಿಕೊಂಡಿರುವವರು ನಮ್ಮ ದೇಶದಲ್ಲಿ ಹಲವಾರು ಜನರಿದ್ದಾರೆ ಎಂದರು.

    ನದಿ ಹಾಗೂ ಕೆರೆಗಳನ್ನು ಸ್ವಚ್ಛಗೊಳಿಸುವ ಅಭಿಯಾನವನ್ನು ನಡೆಸುತ್ತಿರುವ ಚೆನ್ನೈನ ಅರುಣ್ ಕೃಷ್ಣಮೂರ್ತಿ ಅವರನ್ನು ಎಂದು ಪ್ರಶಂಸಿದರು. ಕೃಷ್ಣಮೂರ್ತಿ ಅವರು 150ಕ್ಕೂ ಹೆಚ್ಚು ಕೆರೆಗಳನ್ನು ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು ವಹಿಸಿಕೊಂಡು ಯಶಸ್ಸನ್ನು ಪಡೆದಿದ್ದಾರೆ ಎಂದರು. ಇದನ್ನೂ ಓದಿ:  ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿ

    ಮಹಾರಾಷ್ಟ್ರದ ರೋಹನ್ ಕಾಳೆ, ತಮಿಳುನಾಡಿನ ಮುಪ್ಪಟಂ ನಾರಾಯಣ ಅವರ ಉದಾಹರಣೆಯನ್ನು ತೆಗೆದುಕೊಂಡರು. ಜೊತೆಗೆ ನೀರಿನ ಕೊರತೆಯಿರುವ ಗುಜರಾತ್‍ನಲ್ಲಿ ಜಲಮಂದಿರ್ ಯೋಜನೆ ಪ್ರಮುಖ ಪಾತ್ರ ವಹಿಸಿದ್ದು, ನೀರು ಸಾಕಷ್ಟು ಮಟ್ಟದಲ್ಲಿ ಹೆಚ್ಚಲು ಕಾರಣವಾಗಿದೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಇದೇ ರೀತಿ ಜಾಗೃತರಾದರೇ ಅಭಿಯಾನವನ್ನೇ ಪ್ರಾರಂಭಿಸಬಹುದು ಎಂದು ತಿಳಿಸಿದರು.

    ನೀರನ್ನು ಉಳಿಸಲು ಚೆಕ್ ಡ್ಯಾಂ ನಿರ್ಮಾಣ ಅಥವಾ ಮಳೆನೀರು, ಕೊಯ್ಲಿನಂತಹ ಪ್ರಯತ್ನಗಳು ಪ್ರಾಮುಖ್ಯತೆಯನ್ನು ಹೊಂದಿದೆ. ಇದರ ಜೊತೆಗೆ ಎಲ್ಲರೂ ಒಗ್ಗೂಡಿ ಪ್ರಯತ್ನಿಸುವುದು ಹಾಗೂ ವೈಯಕ್ತಿಕ ಪ್ರಯತ್ನಗಳು ಸಹ ಮುಖ್ಯವಾಗಿದೆ ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೆಹಬೂಬಾ ಮುಫ್ತಿ ಏನೇ ಹೇಳುತ್ತಿದ್ದರೂ ಅದಕ್ಕೆಲ್ಲಾ ಬಿಜೆಪಿಯೇ ಹೊಣೆ: ಸಂಜಯ್ ರಾವತ್