Tag: ಮನ್‍ಸುಖ್ ಮಾಂಡವಿಯಾ

  • ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    – ಬಿಸಿಸಿಐಗೂ ಕ್ರೀಡಾ ಮಸೂದೆ ಕಡ್ಡಾಯ

    ಮುಂಬೈ: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನದ (Ind vs Pak Match) ಜೊತೆಗೆ ದ್ವಿಪಕ್ಷೀಯ ಸರಣಿಯನ್ನಾಡುವುದಿಲ್ಲ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಹೇಳಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಇಂಡೋ ಪಾಕ್‌ ಸರಣಿ, ಬಿಸಿಸಿಐಗೆ (BCCI) ಕ್ರೀಡಾ ಮಸೂದೆ ಅನ್ವಯವಾಗುವ ವಿಷಯಗಳನ್ನ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಭಾರತ-ಪಾಕ್‌ ಪಂದ್ಯಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ನಾವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡುತ್ತಿಲ್ಲ. ಅಂತಾರಾಷ್ಟ್ರೀಯ ಸರಣಿಗಳಲ್ಲಿ ಮಾತ್ರವೇ ಆಡಲಾಗುತ್ತಿದೆ. ಏಕೆಂದ್ರೆ ಐಸಿಸಿ ನಿಯಮವನ್ನು ಗೌರವಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಮುಂದುವರಿದು.. ಕ್ರೀಡಾ ಮಸೂದೆ (Sports Bill) ಅಡಿಯಲ್ಲಿ ವೀಸಾಗಳನ್ನು ಸಕಾಲಿಕವಾಗಿ ನೀಡುವುದು ಮೂಲ ನಿಯಮವಾಗಿದೆ. ಹಾಗಾಗಿ ಯಾವುದೇ ದೇಶವು ಮತ್ತೊಂದು ರಾಷ್ಟ್ರದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಲು ಸಾಧ್ಯವಿಲ್ಲ. ಅಲ್ಲದೇ ವಿಶ್ವ ದರ್ಜೆಯ, ಎಲ್ಲಾ ಸೌಲಭ್ಯಗಳೊಂದಿಗೆ ಭಾರತವನ್ನ ಜಾಗತಿಕ ಕ್ರೀಡಾ ಕೇಂದ್ರವಾಗಿ ಸ್ಥಾಪಿಸುವುದು, ಇತರ ರಾಷ್ಟ್ರಗಳು ದೇಶದಲ್ಲಿ ಟೂರ್ನಿ ಆಯೋಜಿಸಲು ಪ್ರೋತ್ಸಾಹಿಸುವುದು ಸರ್ಕಾರ ಗುರಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

    ಇನ್ನೂ ಕ್ರೀಡಾ ಮಸೂದೆ ಕುರಿತು ಮಾತನಾಡಿ, ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಹೊಸದಾಗಿ ಪರಿಚಯಿಸಲಾದ ಕ್ರೀಡಾ ಮಸೂದೆಯು ಐತಿಹಾಸಿಕ ಮತ್ತು ಪರಿವರ್ತನಾತ್ಮಕ ಶಾಸನವಾಗಿದೆ. 1985 ರಿಂದ ಇಂತಹ ಮಸೂದೆಗೆ ಕರಡು ಅಸ್ತಿತ್ವದಲ್ಲಿದ್ದರೂ, ಇದು ಶಾಸನ ಆಗಿರಲಿಲ್ಲ. ಭಾರತವು ಮುಂದೆ ಒಲಿಂಪಿಕ್ಸ್‌ಗೆ ಬಿಡ್‌ ಮಾಡ್ತಿರೋದ್ರಿಂದ ಈ ಮಸೂದೆ ಐತಿಹಾಸಿಕ ಕೂಡ ಆಗಿದೆ ಎಂದು ತಿಳಿದ್ದಾರೆ. ಇದನ್ನೂ ಓದಿ: ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ಅಲ್ಲದೇ, ಹೊಸ ಕ್ರೀಡಾ ಮಸೂದೆ ಅಡಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೇರಿದಂತೆ ಎಲ್ಲಾ ಕ್ರೀಡಾ ಒಕ್ಕೂಟಗಳು ಹೊಸ ಕ್ರೀಡಾ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದರಲ್ಲದೇ ಭವಿಷ್ಯದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಅನ್ನು ಹೊಸ ಕ್ರೀಡಾ ಮಂಡಳಿಯಲ್ಲಿ ವಿಲೀನಗೊಳಿಸುವ ಯೋಜನೆಯನ್ನು ಸಹ ಪ್ರಸ್ತಾಪಿಸಿದ್ದಾರೆ.

  • ವಿನೇಶ್ ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ – ಮನ್ಸುಖ್ ಮಾಂಡವಿಯಾ ಮಾಹಿತಿ

    ವಿನೇಶ್ ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ – ಮನ್ಸುಖ್ ಮಾಂಡವಿಯಾ ಮಾಹಿತಿ

    – ವಿನೇಶ್ ಫೋಗಟ್ ಅನರ್ಹ; ಷಡ್ಯಂತ್ರ್ಯದ ಶಂಕೆ ವ್ಯಕ್ತಪಡಿಸಿದ ಕಾಂಗ್ರೆಸ್

    ಪ್ಯಾರಿಸ್: ವಿನೇಶ್ ಫೋಗಟ್ (Vinesh Phoga) ಅನರ್ಹತೆಯ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ನಡೆದಿದೆ. ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದ, ಬಿಜೆಪಿ ಮಾಜಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಕಾರಣಕ್ಕೆ ಈಗ ವಿನೇಶ್ ವಿರುದ್ಧ ಷಡ್ಯಂತ್ರ್ಯ ನಡೆದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಸಂಸದ ಬಲವಂತ್ ವಾಂಖೆಡೆ (Balwant Wankhede) ಆರೋಪ ಮಾಡಿದ್ದಾರೆ.

    ವಿನೇಶ್‌ ಫೋಗಟ್‌ ಅನರ್ಹತೆಯ ಹಿಂದೆ ಷಡ್ಯಂತ್ರ ಇರುವಂತಿದೆ. ಆಕೆ ದೆಹಲಿಯ (New Delhi) ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದನ್ನು ಇಡೀ ದೇಶ ನೋಡಿತ್ತು. ಆದರೆ, ಆಕೆಗೆ ಆಗ ನ್ಯಾಯ ಸಿಕ್ಕಿರಲಿಲ್ಲ. ಈಗ ವಿನೇಶ್ ಪದಕ (Olympic Medal) ಗೆದ್ದು ಬಂದ್ರೆ ಆಕೆಯನ್ನು ಸ್ವಾಗತಿಸಿ, ಗೌರವಿಸಬೇಕಾಗುತ್ತದೆ. ಇದು ಕೆಲವರಿಗೆ ಇಷ್ಟ ಇರಲಿಲ್ಲ ಎಂದು ಬಲ್ವಂತ್ ವಾಂಖೆಡೆ ಲೇವಡಿ ಮಾಡಿದ್ದಾರೆ.

    ಅಲ್ಲದೇ ವಿನೇಶ್ ಫೋಗಟ್ ಅನರ್ಹಗೊಳಿಸಿದ ವಿಚಾರವನ್ನು ಕ್ರೀಡಾಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಲೋಕಸಭೆಯಲ್ಲಿ (Lok Sabha) ಪ್ರಸ್ತಾಪಿಸಿದರು. ವಿನೇಶ್ ವಿಚಾರದಲ್ಲಿ ಏನೆಲ್ಲಾ ಬೆಳವಣಿಗೆ ನಡೆಯಿತು ಎಂಬುದರ ಬಗ್ಗೆ ಲೋಕಸಭೆಗೆ ವಿವರಿಸಿದ್ರು. ವಿನೇಶ್‌ಗೆ ತರಬೇತಿ ನೀಡುವ ವಿಚಾರದಲ್ಲಿ ಯಾವುದೇ ಲೋಪ ಆಗಿಲ್ಲ. ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್‌ ಪಾಟೀಲ್

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕರು ವಿನೇಶ್ ವಿಚಾರದಲ್ಲಿ ಕೇಂದ್ರದ ನಿಲುವು ಸರಿಯಿಲ್ಲ ಎಂದರು. ಬಳಿಕ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿ, ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: 20 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳ ಮೌಲ್ಯ ತಲುಪಿದ ಭಾರತದ ಮೊದಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್

    ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿನೇಶ್‌ ಅವರನ್ನು ಹೊರಗಿಡುವ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಮುಖ್ಯಸ್ಥೆ ಪಿ.ಟಿ ಉಷಾ ಅವರಿಗೆ ಸೂಚಿಸಿದ್ದರು. ಈ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದ ವಿನೇಶ್‌ ಅವರನ್ನು ಭೇಟಿಯಾದ ಪಿ.ಟಿ ಉಷಾ ಅವರು, ಎಲ್ಲ ರೀತಿಯಿಂದಲೂ ಅಗತ್ಯ ಸಹಕಾರ ನೀಡುವುದಾಗಿ ಧೈರ್ಯ ಹೇಳಿದ್ದರು. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌? 

  • ತೀವ್ರ ಕೋವಿಡ್‌ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ ಬಿಡಿ: ಮನ್ಸುಖ್ ಮಾಂಡವಿಯಾ

    ತೀವ್ರ ಕೋವಿಡ್‌ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ ಬಿಡಿ: ಮನ್ಸುಖ್ ಮಾಂಡವಿಯಾ

    ಗಾಂಧಿನಗರ: ಕೋವಿಡ್‌-19 ಸೋಂಕಿಗೆ ತುತ್ತಾಗಿ ತೀವ್ರ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ (Heart Attack) ಪಾರಾಗಲು ಕನಿಷ್ಠ ಒಂದರಿಂದ ಎರಡು ವರ್ಷಗಳ ಕಾಲ ಕಠಿಣ ವ್ಯಾಯಾಮ ಹಾಗೂ ಅತಿಯಾದ ಶ್ರಮದ ಕೆಲಸಗಳಲ್ಲಿ ತೊಡಗದಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಸಲಹೆ ನೀಡಿದ್ದಾರೆ.

    ನವರಾತ್ರಿ ಹಬ್ಬದ ಆಚರಣೆ ವೇಳೆ ಗರ್ಬಾ ನೃತ್ಯದಲ್ಲಿ ತೊಡಗಿದ್ದಾಗ 10 ಮಂದಿ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತೀವ್ರವಾಗಿ ಕಾಡಿದ್ದ ಕೋವಿಡ್-19ನ (COVID-19) ಪ್ರಭಾವ ಕಡಿಮೆಯಾಗಿ ಇನ್ನೂ ಸಾಕಷ್ಟು ನಮಯ ಕಳೆದಿಲ್ಲ. ಹೀಗಿರುವಾಗ ನಾವು ನಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗಿದೆ- ಖರ್ಗೆ ಆಪ್ತ ಶಾಸಕನಿಂದ ಹೊಸ ಬಾಂಬ್

    ಐಸಿಎಂಆರ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ಕೋವಿಡ್‌ ಸಂತ್ರಸ್ತರು ಹೃದಯಾಘಾತವನ್ನು ತಪ್ಪಿಸಲು ಕನಿಷ್ಠ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಅತಿಯಾದ ಆಯಾಸವಾಗುವಂತಹ ಕೆಲಸ, ಓಟ ಹಾಗೂ ಕಠಿಣ ವ್ಯಾಯಾಮದಲ್ಲಿ ತೊಡಗದಂತೆ ಉಲ್ಲೇಖಿಸಿದೆ. ಈ ಕಾರಣದಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಕೋವಿಡ್ ಸಮಸ್ಯೆಯಿಂದ ಬಳಲಿ ಗುಣಮುಖರಾದವರು ಈ ಬಗ್ಗೆ ಮತ್ತಷ್ಟು ಜಾಗ್ರತೆ ವಹಿಸಬೇಕು. ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಇದು ಸರಿಯಾದ ಮಾರ್ಗ ಎಂದು ಅವರು ಹೇಳಿದ್ದಾರೆ.

    ಇತ್ತೀಚೆಗೆ ಗುಜರಾತಿನ ಗಾರ್ಬಾ ನೃತ್ಯದಲ್ಲಿ ತೊಡಗಿದ್ದ ಹತ್ತಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ಸುಪ್ರೀಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

    ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

    ಬೆಂಗಳೂರು: ಸಿಲಿಕಾನ್‌ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

    ಬೆಂಗಳೂರಿನ (Bengaluru) ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಎಂದು ತಿಳಿದಿದೆ. ನೂರು ರೂ.ಗಳೂ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧಿ ಕಂಪನಿಗಳ ದರ ದಕ್ಕೆ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು, ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ, ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.

    ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ. ಬುದ್ಧಿವಂತಿಕೆ ಹಾಗೂ ಬುದ್ಧಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ ಅಸಾಧ್ಯವಾದುದ್ದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ, ಹಾಗೂ ಬದ್ಧತೆ ಎಂದರು.

    ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಸ್ಮರಿಸಿದರು.

    ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧಿ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದರು. ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆ.ಎಸ್.ಆರ್.ಟಿ.ಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.