ನವದೆಹಲಿ: ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪನವರು (SL Bhyrappa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್ ಕಿ ಬಾತ್ (Man Ki Baat) ಕಾರ್ಯಕ್ರಮದಲ್ಲಿ ಸ್ಮರಿಸಿದ್ದಾರೆ. ತಮ್ಮ 126ನೇ ಮನದ ಮಾತು ಕಾರ್ಯಕ್ರಮದಲ್ಲಿ ನೆನೆದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ನಾನು ಮತ್ತು ನನ್ನ ದೇಶ ಮಹಾನ್ ವಿಚಾರವಾದಿ, ಮಹಾನ್ ಚಿಂತಕರೊಬ್ಬರನ್ನ ಕಳೆದುಕೊಂಡಿದೆ. ನಾನು ಅವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭಗಳಲ್ಲಿ ಹಲವು ವಿಚಾರಗಳ ಮಂಥನ ನಡೆಸಿದ್ದೇವೆ. ಅವರ ಕೃತಿಗಳು ಯುವ ಪೀಳಿಗೆಗೆ ದಾರಿದೀಪ. ಅವರ ಅನೇಕ ಕೃತಿಗಳು ಹಲವು ಭಾಷೆಗಳಿಗೆ ಅನುವಾದವಾಗಿವೆ. ನಮ್ಮ ಮೂಲ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡಬೇಕು, ಗೌರವ ತೋರಿಸಬೇಕು ಎಂಬುದನ್ನ ಅವರು ನಮಗೆ ಕಲಿಸಿಕೊಟ್ಟಿದ್ದಾರೆ. ಅವರ ಅಗಲಿಕೆಗೆ ನಾನು ಭಾವುಕ ವಿದಾಯ ತಿಳಿಸುತ್ತೇನೆ ಎಂದು ಭಾವುಕರಾದರು.
ಭೈರಪ್ಪ ಅವರ ಜೊತೆಗಿನ ಒಡನಾಟ ಪ್ರೇರಣಾದಾಯಕ, ಅವರ ಪುಸ್ತಕಗಳು ಯುವಕರಿಗೆ ಪ್ರೇರಣೆ, ಅವ್ರ ಕೃತಿಗಳನ್ನ ಯುವಕರು ಹೆಚ್ಚು ಹೆಚ್ಚು ಓದಬೇಕು ಎಂದು ಕರೆ ನೀಡಿದರು.
ʻಪರ್ವʼತ ಅಸ್ತಂಗತ
ಈ ದೇಶಕಂಡ ಖ್ಯಾತ ಕಾದಂಬರಿಕಾರ, ಸರಸ್ವತಿ ಸನ್ಮಾನ್ ಪ್ರಶಸ್ತಿ ವಿಜೇತ ಕನ್ನಡ ಸಾಹಿತ್ಯ ಲೋಕದ ಪರ್ವ ಡಾ.ಎಸ್.ಎಲ್ ಭೈರಪ್ಪನವರ ಯುಗಾಂತ್ಯವಾಗಿದೆ. ತಮ್ಮ ಕಾದಂಬರಿಗಳಿಂದಲೇ ಮನೆಮನಗಳಲ್ಲಿ ಅಚ್ಚಳಿಯದೇ ಉಳಿದಿದ್ದ ಚೈತನ್ಯದ ಚಿಲುಮೆ ಡಾ.ಎಸ್.ಎಲ್ ಭೈರಪ್ಪನವರು ಬಾರದ ಲೋಕಕ್ಕೆ ತೆರಳಿದ್ದಾರೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪನವರು ನಿನ್ನೆ ವಿಧಿವಶರಾಗಿದ್ದಾರೆ. 94 ವರ್ಷದ ಡಾ.ಎಸ್.ಎಲ್ ಭೈರಪ್ಪನವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ನಿನ್ನೆ ಮಧ್ಯಾಹ್ನ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಇಡೀ ಕನ್ನಡ ನಾಡೇ ಕಂಬನಿ ಇಟ್ಟಿದೆ, ಇವರ ಸಾವಿನಿಂದ ಇಡೀ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
– ಗುಜರಾತ್‌ನ ಗಿರ್‌ನಲ್ಲಿ ಸಿಂಹಗಳ ಸಂಖ್ಯೆ ಏರಿಕೆ – ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಸಂತಸ
ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಇದು ನಮ್ಮ ದೃಢ ನಿಶ್ಚಯ, ಧೈರ್ಯ ಮತ್ತು ಪರಿವರ್ತನೆಗೊಳ್ಳುತ್ತಿರುವ ಭಾರತದ ಚಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಭಾನುವಾರ ಮನ್ ಕಿ ಬಾತ್‌ನ (Mann Ki Baat) 122ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಇಂದು ಇಡೀ ರಾಷ್ಟ್ರವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ. ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದು. ನಮ್ಮ ಪಡೆಗಳು ಗಡಿಯಾಚೆಗಿನ ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಿದೆ ಎಂದು ಸೇನೆಯ ಪರಾಕ್ರಮವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!
ಆಪರೇಷನ್ ಸಿಂಧೂರ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಪರಿವರ್ತನೆಗೊಳ್ಳುತ್ತಿರುವ ಭಾರತದ ಚಿತ್ರವಾಗಿದೆ. ಈ ಚಿತ್ರವು ಇಡೀ ದೇಶವನ್ನು ದೇಶಭಕ್ತಿಯ ಭಾವನೆಯಿಂದ ತುಂಬಿದೆ ಮತ್ತು ಅದನ್ನು ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಚಿತ್ರಿಸಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ನಮ್ಮ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಭಾರತೀಯನನ್ನು ಹೆಮ್ಮೆ ಪಡುವಂತೆ ಮಾಡಿದೆ ಎಂದು ಎಂದಿದ್ದಾರೆ. ಇದನ್ನೂ ಓದಿ: ಜಪಾನ್ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ
ಆಪರೇಷನ್ ಸಿಂಧೂರ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಆಪರೇಷನ್ ಸಿಂಧೂರ ದೇಶದ ಜನರ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದರೆ ಅನೇಕ ಕುಟುಂಬಗಳು ಆ ಹೆಸರನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡಿವೆ. ಬಿಹಾರದ ಕತಿಹಾರ್, ಉತ್ತರಪ್ರದೇಶದ ಖುಷಿನಗರ ಮತ್ತು ಇತರ ಹಲವು ನಗರಗಳಲ್ಲಿ ಆ ಅವಧಿಯಲ್ಲಿ ಜನಿಸಿದ ಮಕ್ಕಳಿಗೆ `ಸಿಂಧೂರ’ ಎಂದು ಹೆಸರಿಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್
ದೇಶದ ಅನೇಕ ನಗರಗಳು, ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ತಿರಂಗ ಯಾತ್ರೆಗಳನ್ನು ಆಯೋಜಿಸಿರುವುದನ್ನು ನೀವು ನೋಡಿರಬಹುದು. ಸಾವಿರಾರು ಜನರು ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ದೇಶದ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಲು ಬಂದರು. ಅನೇಕ ನಗರಗಳಲ್ಲಿ, ನಾಗರಿಕ ರಕ್ಷಣಾ ಸ್ವಯಂಸೇವಕರಾಗಲು ಹೆಚ್ಚಿನ ಸಂಖ್ಯೆಯ ಯುವಕರು ಜಮಾಯಿಸಿದರು. ಚಂಡೀಗಢದ ವೀಡಿಯೋಗಳು ವೈರಲ್ ಆಗಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.
ಇದೇ ವೇಳೆ, ಸಿಂಹಗಳಿಗೆ ಸಂಬಂಧಿಸಿದ ಒಂದು ಒಳ್ಳೆಯ ಸುದ್ದಿಯನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ. ಕಳೆದ 5 ವರ್ಷಗಳಲ್ಲಿ, ಗುಜರಾತ್‌ನ (Gujarat) ಗಿರ್‌ನಲ್ಲಿ ಸಿಂಹಗಳ (Lions) ಸಂಖ್ಯೆ 674ರಿಂದ 891ಕ್ಕೆ ಏರಿದೆ. ಸಿಂಹ ಗಣತಿಯ ನಂತರ ಈ ಸಿಂಹಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ಪ್ರಾಣಿ ಗಣತಿಯನ್ನು ಹೇಗೆ ನಡೆಸಲಾಗುತ್ತದೆ ಎಂದು ನಿಮ್ಮಲ್ಲಿ ಹಲವರು ಆಶ್ಚರ್ಯ ಪಡುತ್ತಿರಬೇಕು. ಇದು ತುಂಬಾ ದೊಡ್ಡ ಸವಾಲಿನ ಸಂಗತಿ. ಸಿಂಹ ಗಣತಿಯನ್ನು 11 ಜಿಲ್ಲೆಗಳಲ್ಲಿ, 35 ಸಾವಿರ ಚದರ ಕಿಲೋಮೀಟರ್ ಪ್ರದೇಶದಲ್ಲಿ ನಡೆಸಲಾಗಿದೆ. ಸಿಂಹಗಳ ಗಣತಿಗಾಗಿ ತಂಡಗಳು ಈ ಪ್ರದೇಶಗಳನ್ನು 24 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿದವು. 24 ಗಂಟೆಗಳ ಕಾಲ ಸಂಪೂರ್ಣ ಅಭಿಯಾನದೊಂದಿಗೆ ಪರಿಶೀಲನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ತೊಡೆದು ಹಾಕಲು ನಾವು ಸಿದ್ಧ: ಪಾಕ್ ವಿರುದ್ಧ ಅಮೆರಿಕದಲ್ಲಿ ಗುಡುಗಿದ ಶಶಿ ತರೂರ್
ಅಂತರರಾಷ್ಟ್ರೀಯ ಯೋಗ ದಿನ ಹತ್ತಿರ ಬರುತ್ತಿದೆ. ನೀವು ಇನ್ನೂ ಯೋಗದಿಂದ ದೂರವಿದ್ದರೆ, ಈಗಲೇ ಯೋಗಕ್ಕೆ ಸೇರಿಕೊಳ್ಳಬೇಕು. ಯೋಗವು ನಿಮ್ಮ ಜೀವನವನ್ನು ನಡೆಸುವ ವಿಧಾನವನ್ನು ಬದಲಾಯಿಸುತ್ತದೆ. ಜೂನ್ 21, 2015ರಂದು `ಯೋಗ ದಿನ’ ಪ್ರಾರಂಭವಾದಾಗಿನಿಂದ, ಅದರ ಕಡೆಗೆ ಆಕರ್ಷಣೆ ನಿರಂತರವಾಗಿ ಹೆಚ್ಚುತ್ತಿದೆ. ಹಲವಾರು ಸಂಸ್ಥೆಗಳು ಯೋಗ ದಿನಕ್ಕೆ ತಮ್ಮ ಸಿದ್ಧತೆಗಳನ್ನು ನಡೆಸುತ್ತಿವೆ. ಹಿಂದಿನ ವರ್ಷಗಳ ಯೋಗ ದಿನಾಚರಣೆಯ ಚಿತ್ರಗಳು ಬಹಳ ಸ್ಫೂರ್ತಿದಾಯಕವಾಗಿವೆ ಎಂದಿದ್ದಾರೆ.
ನವದೆಹಲಿ: ಬಾಹ್ಯಾಕಾಶ ವಲಯದಲ್ಲಿ ನಮ್ಮ ಯಶಸ್ಸಿನ ಪಟ್ಟಿ ಹೆಚ್ಚು ಉದ್ದವಾಗಿದೆ. ಉಡಾವಣಾ ವಾಹನಗಳ ತಯಾರಿಕೆಯಾಗಿರಲಿ, ಚಂದ್ರಯಾನ, ಮಂಗಳಯಾನ, ಆದಿತ್ಯ ಎಲ್ -1ರ ಯಶಸ್ಸಾಗಿರಲಿ ಅಥವಾ ಒಂದೇ ರಾಕೆಟ್‌ನಿಂದ ಒಂದೇ ಬಾರಿಗೆ 104 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಅಭೂತಪೂರ್ವ ಧ್ಯೇಯವಾಗಿರಲಿ. ಇಸ್ರೋ (ISRO) ಯಶಸ್ಸಿನ ವ್ಯಾಪ್ತಿ ವಿಶಾಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದ್ದಾರೆ.
ಮನ್ ಕೀ ಬಾತ್‌ನಲ್ಲಿ (Mann Ki Baat) ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಸುಮಾರು 460 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇವುಗಳಲ್ಲಿ ಇತರ ದೇಶಗಳ ಅನೇಕ ಉಪಗ್ರಹಗಳು ಸಹ ಸೇರಿವೆ. ಕಳೆದ ತಿಂಗಳು ದೇಶವು ಇಸ್ರೋದ 100ನೇ ರಾಕೆಟ್ ಉಡಾವಣೆಗೆ ಸಾಕ್ಷಿಯಾಯಿತು. ಇದು ಕೇವಲ ಒಂದು ಸಂಖ್ಯೆಯಲ್ಲ. ಪ್ರತಿದಿನ ಬಾಹ್ಯಾಕಾಶ ವಿಜ್ಞಾನದಲ್ಲಿ ಹೊಸ ಎತ್ತರವನ್ನು ಮುಟ್ಟುವ ನಮ್ಮ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದರು.ಇದನ್ನೂ ಓದಿ: ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ ಅನುದಾನ
ಇತ್ತೀಚೆಗೆ ನಾನು ಎಐ ಕುರಿತ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ಯಾರಿಸ್‌ಗೆ ಹೋಗಿದ್ದೆ. ವಿಶ್ವವೇ ಭಾರತ ಎಐ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿರುವುದನ್ನು ಮೆಚ್ಚಿಕೊಂಡಿದೆ. ನಮ್ಮ ದೇಶದಲ್ಲಿ ಇಂದು ಜನರು ಎಐ ಅನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಉದಾಹರಣೆಗಳನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದರು.
ಮುಂದಿನ ತಿಂಗಳು ಮಾರ್ಚ್ 8ರಂದು `ಅಂತಾರಾಷ್ಟ್ರೀಯ ಮಹಿಳಾ ದಿನ’. ನಮ್ಮ ಮಹಿಳಾ ಶಕ್ತಿಗೆ ಗೌರವ ಸಲ್ಲಿಸಲು ಇದು ವಿಶೇಷ ಸಂದರ್ಭ. ವಿದ್ಯಾ: ಎಲ್ಲವೂ: ನೀವು ವಿಶಿಷ್ಟತೆಯ ದೇವತೆ: ಮಹಿಳೆಯರು: ಎಲ್ಲವೂ: ಇಡೀ ಪ್ರಪಂಚ. ಅಂದರೆ, ಎಲ್ಲಾ ಜ್ಞಾನವು ದೇವಿಯ ವಿವಿಧ ರೂಪಗಳ ಅಭಿವ್ಯಕ್ತಿಯಾಗಿದೆ. ಅವಳು ಜಗತ್ತಿನ ಎಲ್ಲಾ ಸ್ತ್ರೀ ಶಕ್ತಿಯಲ್ಲಿಯೂ ಪ್ರತಿಫಲಿಸುತ್ತಾಳೆ ಎಂದು ನಮ್ಮ ದೇವಿ ಮಹಾತ್ಮೆöಯಲ್ಲಿ ಹೇಳಲಾಗಿದೆ. ನಮ್ಮ ಸಂಸ್ಕೃತಿಯಲ್ಲಿ, ಹೆಣ್ಣುಮಕ್ಕಳಿಗೆ ಗೌರವ ನೀಡುವುದು ಅತ್ಯಂತ ಮುಖ್ಯ. ಈ ಬಾರಿ ಮಹಿಳಾ ದಿನದಂದು ನಾನು ನಮ್ಮ ಮಹಿಳಾ ಶಕ್ತಿಗೆ ಮೀಸಲಾಗಿರುವ ಉಪಕ್ರಮವನ್ನು ತೆಗೆದುಕೊಳ್ಳಲಿದ್ದೇನೆ. ಈ ವಿಶೇಷ ಸಂದರ್ಭದಲ್ಲಿ, ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಾದ ಎಕ್ಸ್, ಇನ್‌ಸ್ಟಾಗ್ರಾಮ್ ಅನ್ನು ದೇಶದ ಕೆಲವು ಸ್ಪೂರ್ತಿದಾಯಕ ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಹಸ್ತಾಂತರಿಸಲಿದ್ದೇನೆ. ಅವರು ಮಾರ್ಚ್ 8ರಂದು ತಮ್ಮ ಕೆಲಸ ಮತ್ತು ಅನುಭವಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದರು.
ಮುಂದಿನ ಕೆಲವು ದಿನಗಳಲ್ಲಿ ನಾವು `ರಾಷ್ಟ್ರೀಯ ವಿಜ್ಞಾನ ದಿನ’ವನ್ನು ಆಚರಿಸಲಿದ್ದೇವೆ. ನಮ್ಮ ಮಕ್ಕಳು ಹಾಗೂ ಯುವಕರು ವಿಜ್ಞಾನದಲ್ಲಿ ಆಸಕ್ತಿ, ಉತ್ಸಾಹ ಹೊಂದಿರುವುದು ಬಹಳ ಮುಖ್ಯ. ಇದರ ಬಗ್ಗೆ ನನಗೆ ಒಂದು ಕಲ್ಪನೆ ಇದೆ. ನೀವು `ಒಂದು ದಿನ ವಿಜ್ಞಾನಿಯಾಗಿ ಬದುಕಬಹುದು’ ಅಂದರೆ, ನೀವು ವಿಜ್ಞಾನಿಯಾಗಿ ಒಂದು ದಿನ ಕಳೆಯಲು ಪ್ರಯತ್ನಿಸಬಹುದು. ನಿಮ್ಮ ಅನುಕೂಲ ಮತ್ತು ಇಚ್ಛೆಗೆ ಅನುಗುಣವಾಗಿ ನೀವು ಯಾವುದೇ ದಿನವನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದರು.ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮ – ಚಾಲಕ ಪಾರು
ನವದೆಹಲಿ: ಗದಗ (Gadag) ಜಿಲ್ಲೆಯ ಕಾವೇಂಶ್ರೀ ಅವರು ಕಲಾ ಸಂಸ್ಕೃತಿಯ ಪೋಷಿಸಲು ಅವರು ಕೈಗೊಂಡ ಪ್ರಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದರು.
ಈ ವರ್ಷದ ಕೊನೆಯ ಮನ್ ಕೀ ಬಾತ್ (Mann ki Baat) ಪ್ರಸಾರದಲ್ಲಿ ಮಾತನಾಡಿದ ಅವರು, ಗದಗ ಮೂಲದ ಹೋಟೆಲ್ ಉದ್ಯಮಿ ಕಾವೇಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ) ಅವರು ಸಂಸ್ಕೃತಿ ಉಳಿಸಲು ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಬಗ್ಗೆ ತಿಳಿಸಿದರು.
ಕಾವೇಂಶ್ರೀ ಅವರು ಈ ಹಿಂದೆ ಗದಗ ರೆಸ್ಟೋರೆಂಟ್‍ನಲ್ಲಿ ಮ್ಯಾನೇಜರ್ ಆಗಿದ್ದರು. ಅದಾದ ಬಳಿಕ ಅವರು ಕಳೆದ 25 ವರ್ಷಗಳಿಂದ ಕರ್ನಾಟಕದ ಕಲೆ-ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಲ್ಲಿ ನಿರಂತರವಾಗಿ ತೊಡಗಿಸಿಕೊಂಡರು. ಅವರು ಸಂಸ್ಕøತಿ ಮತ್ತು ಸಂಪ್ರದಾಯದೊಂದಿಗಿನ ಅವರ ಬಾಂಧವ್ಯವು ಎಷ್ಟು ಆಳವಾಗಿದೆಯೆಂದರೆ, ಅದನ್ನು ತಮ್ಮ ಧ್ಯೇಯವನ್ನಾಗಿ ಮಾಡಿಕೊಂಡರು ಎಂದು ಹೇಳಿದರು.
ಅಷ್ಟೇ ಅಲ್ಲದೇ ಕಾವೇಂಶ್ರೀ ಅವರು, ಕಲಾ ಚೇತನ ಎಂಬ ಹೆಸರಿನಲ್ಲಿ ವೇದಿಕೆ ಸೃಷ್ಟಿಸಿದರು. ಈ ವೇದಿಕೆಯು ಇಂದು ಕರ್ನಾಟಕ, ಭಾರತ ಮತ್ತು ವಿದೇಶಗಳ ಕಲಾವಿದರಿಂದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಈ ವೇದಿಕೆಯಿಂದ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೆಡ್ಡಿ ಪಕ್ಷದಿಂದ ಬಿಜೆಪಿಗೆ ಸಂಕಷ್ಟ ಆಗುತ್ತಾ? – ಅಂಕಿ ಸಂಖ್ಯೆ ಏನು ಹೇಳುತ್ತೆ?
ಇದೇ ವೇಳೆ ಕೊರೊನಾ ಕುರಿತು ಮಾತನಾಡಿದ ಅವರು, ಅನೇಕ ದೇಶಗಳಲ್ಲಿ ಕೊರೊನಾ (Corona) ಸೋಂಕು ಹೆಚ್ಚುತ್ತಿರುವುದನ್ನು ಗಮನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಜನರು ಜಾಗರೂಕರಾಗಿರಿ ಜೊತೆಗೆ ಕೊರೊನಾ ವಿರುದ್ಧ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು.
ಕ್ರಿಸ್‍ಮಸ್ ಹಾಗೂ ಹೊಸವರ್ಷದ ಆಚರಣೆಗಾಗಿ ಬೇರೆ ಕಡೆ ಹೋಗಿ ಸಂಭ್ರಮಿಸುತ್ತಿರಿ. ಆದರೆ ಅಂತಹ ಸಂದರ್ಭದಲ್ಲಿ ಮಾಸ್ಕ್ ಹಾಗೂ ಸೆನಿಟೈಸರ್ ಹೀಗೆ ಅನೇಕ ಮಾರ್ಗಸೂಚಿಗಳನ್ನು ಅನುಸರಿಸಿ. ಇದರಿಂದಾಗಿ ಕೊರೊನಾ ವಿರುದ್ಧ ಹೋರಾಡಬಹುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ ಆಡಿದ ಶಾಸಕ ಶಿವಲಿಂಗೇಗೌಡ
Live Tv
[brid partner=56869869 player=32851 video=960834 autoplay=true]
ಚಂಡೀಗಢ: ಹರಿಯಾಣದ ಚಂಡೀಗಢ ವಿಮಾನ ನಿಲ್ದಾಣಕ್ಕೆ (Chandigarh airport) ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ (Bhagat Singh) ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ತಿಳಿಸಿದ್ದಾರೆ.
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಲಾನ್‍ನಲ್ಲಿ ಪಂಜಾಬ್ ಮುಖ್ಯಮಂತ್ರಿ (Punjab Chief Minister) ಭಗವತ್ ಮಾನ್ ಅವರು ಅದ್ದೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆ ಸಮಾರಂಭದ ನಿಮಿತ್ತ ಖಟ್ಕರ್ ಕಲಾನ್ ಹಳದಿಮಯವಾಗಿತ್ತು. ಇಲ್ಲಿ ಬಸಂತಿ ಅಥವಾ ಹಳದಿ ಬಣ್ಣ ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡ ಬಣ್ಣ, ಸ್ವಾತಂತ್ರ್ಯ ಹೋರಾಟಗಾರರು ಇದೇ ಬಣ್ಣವನ್ನು ಸಂಕೇತವಾಗಿ ಬಳಸುತ್ತಿದ್ದರು. ಭಗವತ್ ಮಾನ್ (Bhagwant Mann) ಅವರು ಕೂಡ ಸದಾ ಹಳದಿ ಬಣ್ಣದ ಪೇಟವನ್ನೇ ಧರಿಸುತ್ತಾರೆ.
ಕೇಂದ್ರಾಡಳಿತ ಪ್ರದೇಶದ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಪ್ರಸ್ತಾಪ ನಡೆದಿರುವುದು ಇದೇ ಮೊದಲಲ್ಲ. ಬಿಜೆಪಿ ನೇತೃತ್ವದ ಹರಿಯಾಣ ವಿಧಾನಸಭೆಯಲ್ಲಿ 2016ರ ಏಪ್ರಿಲ್‍ನಲ್ಲಿ ಅವಿರೋಧವಾಗಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಶೀಘ್ರದಲ್ಲೇ ಪತ್ರ ಬರೆದು ಮನವಿ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತು.
Live Tv
[brid partner=56869869 player=32851 video=960834 autoplay=true]
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಎಷ್ಟೋ ಮಂದಿಗೆ ಪ್ರೇರಣೆಯಾಗಿದೆ. ಮನ್ ಕೀ ಬಾತ್‍ನಿಂದಲೇ ಪ್ರೇರಣೆಗೊಂಡ ಚಾಮರಾಜನಗರದ ಎಂ.ಟೆಕ್ ಪದವೀಧರೆ ಮಹಿಳೆಯೊಬ್ಬರು ಕಸದಿಂದ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.
ರೈತರು ಬಾಳೆಗೊನೆ ಕೊಯ್ದ ನಂತರ ಬಾಳೆ ದಿಂಡು ಅನುಪಯುಕ್ತ ಎಂದು ಬಿಸಾಡುತ್ತಾರೆ. ಆದರೆ ಈ ಅನುಪಯುಕ್ತ ಬಾಳೆ ದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್‍ಗಳನ್ನು ತಯಾರಿಸಬಹುದು ಎಂಬುದನ್ನು ಚಾಮರಾಜನಗರದ ವರ್ಷಾ ತೋರಿಸಿಕೊಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕು ಆಲಹಳ್ಳಿಯ ವರ್ಷಾ ಎಂ.ಟೆಕ್ ಪದವೀಧರೆಯಾದರು ಯಾವುದೇ ಉದ್ಯೋಗಕ್ಕೆ ಸೇರಿರಲಿಲ್ಲ. ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದ ಅವರಿಗೆ ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟ ಇರಲಿಲ್ಲ. ಸ್ವ ಉದ್ಯೋಗ ಪ್ರಾರಂಭಿಸಬೇಕು, ಮಹಿಳೆಯರಿಗೆ ಉದ್ಯೋಗ ನೀಡಬೇಕು ಆ ಮೂಲಕ ಸ್ತ್ರೀ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದು ಕನಸು ಹೊತ್ತಿದ್ದ ವರ್ಷಾ ಅವರು ಯೂಟ್ಯೂಬ್‍ನಲ್ಲಿ ಸರ್ಚ್ ಮಾಡುತ್ತಿದ್ದಾಗ, ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್‍ನಲ್ಲಿ ಪ್ರಸ್ತಾಪಿಸಿದ್ದ ವಿಚಾರವೊಂದು ಗಮನ ಸೆಳೆದಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್
ಅನುಪಯುಕ್ತ ಬಾಳೆ ದಿಂಡಿನಿಂದ ಹಲವು ರೀತಿಯ ಉಪಯುಕ್ತ ವಸ್ತುಗಳನ್ನು ತಯಾರಿಸಬಹುದು ಉದಾಹರಣೆ ಸಹಿತ ಹೇಳಿದ್ದ ಮೋದಿ ಅವರ ಮಾತಿನಿಂದ ಪ್ರೇರಣೆಗೊಂಡ ವರ್ಷಾ, ತಾವೇಕೆ ಪ್ರಯತ್ನಿಸಿಸಬಾರದು ಎಂದುಕೊಂಡು ಮತ್ತೆ ಯೂಟ್ಯೂಬ್‍ನಲ್ಲಿ ಸರ್ಚ್ ಮಾಡಿದಾಗ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಳೆ ದಿಂಡಿನಿಂದ ಉತ್ಪನ್ನಗಳ ತಯಾರಿಕೆ ಮಾಡುತ್ತಿರುವ ದೃಶ್ಯಾವಳಿ ನೋಡಿದ್ದಾರೆ. ಬಳಿಕ ಕೊಯಮತ್ತೂರಿನಿಂದ 3 ಲಕ್ಷ ರೂಪಾಯಿಗಳಿಗೆ ಯಂತ್ರೋಪಕರಣಗಳನ್ನು ಖರೀದಿಸಿ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಬಾಳೆ ದಿಂಡು ಉತ್ಪನ್ನಗಳ ತಯಾರಿಕಾ ಉದ್ಯಮ ಆರಂಭಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!
ಈ ಘಟಕದಲ್ಲಿ ಐವರು ಮಹಿಳೆಯರಿಗೆ ಉದ್ಯೋಗ ನೀಡಿರುವ ವರ್ಷಾ ನಗರ ಪ್ರದೇಶಗಳಲ್ಲಿರುವ ಆರ್ಗ್ಯಾನಿಕ್ ಶಾಪ್, ಗೂಗಲ್, ಫ್ಲಿಪ್‍ಕಾರ್ಟ್, ಅಮೆಜಾನ್ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ. ಬಾಳೆ ದಿಂಡಿನಲ್ಲಿರುವ ರಸದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಅದನ್ನು ಬೀಸಾಡದೆ ರಾಸಾಯನಿಕ ಗೊಬ್ಬರದ ಬದಲು ಬಾಳೆ ದಿಂಡಿನ ರಸ ಹಾಗೂ ದಿಂಡಿನಿಂದ ನಾರು ತೆಗೆದ ನಂತರ ಉಳಿಯುವ ವೇಸ್ಟ್‌ನಿಂದ ಸಾವಯವ ಗೊಬ್ಬರ ತಯಾರಿಸಿ ತಮ್ಮ ಜಮೀನಿಗೆ ಬಳಸುತ್ತಿದ್ದಾರೆ. ಇವರು ತಯಾರಿಸುತ್ತಿರುವ ಬಾಳೆದಿಂಡಿನ ಚಾಪೆಗಳನ್ನು ಕೊಯಮತ್ತೂರಿನ ಕಂಪನಿಯೊಂದು ಖರೀದಿಸುತ್ತಿದ್ದು, ಬಾಳೆದಿಂಡಿನಿಂದ ತಯಾರಿಸಲಾದ ವಸ್ತುಗಳು ಪರಿಸರ ಸ್ನೇಹಿ ಆಗಿರುವುದರಿಂದ ಬೇಡಿಕೆ ಹೆಚ್ಚಾಗಬಹುದು ಎಂಬ ಆಶಯವನ್ನೂ ಅವರು ಹೊಂದಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಪ್ರೀತಿಸಿದವಳನ್ನೇ ಇಟ್ಟಿಗೆಯಿಂದ ಹೊಡೆದು ಕೊಂದ
ಮೈಸೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ವರ್ಷಾ ಅವರ ಪತಿ ಶ್ರೀಕಂಠಸ್ವಾಮಿ ಅವರು ರಜಾ ದಿನಗಳಲ್ಲಿ ಬಾಳೆ ದಿಂಡಿನ ಉತ್ಪನ್ನಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿ ತಮ್ಮ ಪತ್ನಿಯ ಕಾರ್ಯಕ್ಕೆ ಸಾಥ್ ನೀಡುತ್ತಿದ್ದಾರೆ. ಈ ದಂಪತಿ ಸುತ್ತಮುತ್ತಲಿನ ಜಮೀನಿಗಳಲ್ಲಿ ಬಾಳೆ ಬೆಳೆಯುವ ರೈತರನ್ನು ಸಂಪರ್ಕಿಸಿ ಬಾಳೆ ದಿಂಡು ಬಿಸಾಡದೆ ತಮಗೆ ನೀಡುವಂತೆ ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಒಂದು ಬಾಳೆ ದಿಂಡಿಗೆ 8 ರಿಂದ 10 ರೂಪಾಯಿಗೆ ಖರೀದಿಸಲು ಆಲೋಚಿಸಿದ್ದಾರೆ, ಇದರಿಂದ ಸುತ್ತಮುತ್ತಲಿನ ರೈತರಿಗೂ ಲಾಭವಾಗಲಿದೆ ಎಂಬುದು ಅವರ ಆಶಯವಾಗಿದೆ. ಒಟ್ಟಾರೆ ಮೋದಿ ಅವರ ಮನ್ ಕೀ ಬಾತ್ ವಿದ್ಯಾವಂತ ಮಹಿಳೆಯೊಬ್ಬರು ಯಶಸ್ವಿ ಉದ್ಯಮಿಯಾಗಲು ನಿಜಕ್ಕೂ ಪ್ರೇರಣೆ ನೀಡಿದೆ ಎಂದರೆ ತಪ್ಪಾಗಲಾರದು.
ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಮನ್ ಕಿ ಬಾತ್: ಕೋವಿಡ್ ಇನ್ನೂ ಹೋಗಿಲ್ಲ- ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ
ಸ್ಟಾರ್ಟಪ್ ಯುಗ: ಇದೇ ವೇಳೆ ಪ್ರಸ್ತುತದ ಯುಗವನ್ನು ಸ್ಟಾರ್ಟಪ್‍ಗಳಯುಗ ಎಂದು ಬಣ್ಣಿಸಿದ ಪ್ರಧಾನಿ ಮೋದಿ ಅವರು ಭಾರತದ 70ಕ್ಕಿಂತ ಹೆಚ್ಚು ಸ್ಟಾರ್ಟಪ್‍ಗಳು ಇಂದು 7500 ಕೋಟಿ ರು. ಮೌಲ್ಯದ ವಹಿವಾಟು ನಡೆಸುತ್ತಿವೆ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು
ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.
ನವದೆಹಲಿ: ಮೊದಲು ಲಸಿಕೆ ನೀಡಿ,ನಂತರ ಮನ್ ಕೀ ಬಾತ್‍ನಲ್ಲಿ ಮಾತಾಡಿ ಎಂದು ಕಾಂಗ್ರೆಸ್ ಸಂಸದ ರಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.
ಮೊದಲು ಈ ದೇಶದ ಪ್ರತಿಯೊಬ್ಬರಿಗೂ ಕೊರೊನಾ 19 ಲಸಿಕೆ ತಲುಪುವಂತೆ ಮಾಡಿ. ಬಳಿಕ ನಿಮ್ಮ ಮನ್ ಕೀ ಬಾತ್ ನಡೆಸಿ ಎಂದು ಹೇಳಿದ್ದಾರೆ. ಹಾಗೇ ಕೊರೊನಾ ಲಸಿಕೆ ಬಗೆಗಿನ ಸತ್ಯಗಳು ಎಂಬ, ಗ್ರಾಫ್ ಚಾರ್ಟ್‍ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಕೊರೊನಾ ಲಸಿಕೆ ನೀಡಿದ ಡಾಟಾ ಉಲ್ಲೇಖವಾಗಿರುವುದನ್ನು ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹುಟ್ಟಿದಾಗಿಂದಲೂ ಅಲ್ಲಿ ಸಿಎಂ ರೇಸ್ ಇದೆ: ಸಚಿವ ಸುಧಾಕರ್
ಮನ್ ಕೀ ಬಾತ್ ಪ್ರಧಾನಿ ಮೋದಿಯವರ ತಿಂಗಳ ರೇಡಿಯೋ ಕಾರ್ಯಕ್ರಮವಾಗಿದೆ. ಪ್ರತಿ ತಿಂಗಳ ಕೊನೇ ಭಾನುವಾರದಂದು ಈ ಕಾರ್ಯಕ್ರಮದ ಮೂಲಕ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ.
ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದೇ ಮೊದಲಿನಿಂದಲೂ ರಾಹುಲ್ ಗಾಂಧಿ ಹೇಳುತ್ತಾ ಬಂದಿದ್ದಾರೆ. ಎರಡನೇ ಅಲೆಯಲ್ಲಿ ಸೋಂಕು ನಿಯಂತ್ರಣದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಮೂರನೇ ಅಲೆ ಇನ್ನಷ್ಟು ಭೀಕರವಾಗಿರಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ನಲ್ಲಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿ ಸುರೇಖಾ ಮಾತನಾಡಿದ್ದಾರೆ. ಈ ಬಾರಿಯ ಮನ್ ಕೀ ಬಾತ್ ನಲ್ಲಿ ಪ್ರಧಾನಿಗಳು ಕೊರೊನಾ ವಾರಿಯರ್, ಗುಣಮುಖರಾದವರ ಜೊತೆ ಮಾತುಕತೆ ನಡೆಸಿದರು. ಇದರ ಜೊತೆಗೆ ಕೊರೊನಾ ಜಾಗೃತಿ ಮೂಡಿಸಿದರು.
ಮನ್ ಕೀ ಬಾತ್ ನಲ್ಲಿ ಮಾತನಾಡಿದ ಸುರೇಖಾ ಅವರು, ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ಪಡೆಯಬೇಕು. ಇದರಿಂದ ಸಾವಿನ ಸಂಖ್ಯೆ ಮತ್ತು ಹರಡುವಿಕೆ ಪ್ರಮಾಣ ತಡೆಯಬಹುದು. ಅನಗತ್ಯ ಜನರೊಂದಿಗೆ ಬೆರೆಯಬಾರದು. ಸಾಧ್ಯವಾದಷ್ಟು ಮನೆಯಲ್ಲಿ ಸುರಕ್ಷಿತವಾಗಿರಬೇಕು. ಪದೇ ಪದೇ ಮೂಗು, ಬಾಯಿ ಕಣ್ಣು ಮುಟ್ಟಿಕೊಳ್ಳಬಾರದು ಎಂದು ಹೇಳಿದರು.
ಇದೇ ವೇಳೆ ವ್ಯಾಕ್ಸಿನ್ ಸುರಕ್ಷಿತವಾಗಿದೆ ಎಲ್ಲರೂ ಪಡೆದುಕೊಳ್ಳಬೇಕು. ನಾನು ಈಗಾಗಲೇ ವ್ಯಾಕ್ಸಿನ್ ಪಡೆದಿದ್ದು ಯಾವುದೇ ಅಡ್ಡ ಪರಿಣಾಮಗಳು ಬೀರಿಲ್ಲ. ಈ ಎಲ್ಲ ಕ್ರಮಗಳಿಂದ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಬಹುದು ಎಂದು ಮನ್ ಕೀ ಬಾತ್ ನಲ್ಲಿ ಸುರೇಖಾ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿತಿಂಗಳು ನಡೆಸುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಟ್ವೀಟ್ ಮಾಡುವ ಮೂಲಕವಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮನದ ಮಾತು ಸರಣಿಯ 73ನೇ ಹಾಗೂ ಈ ವರ್ಷದ ಮೊದಲ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ್ದರು. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ನಾಲ್ವರು ಮಹಿಳಾ ಪೈಲಟ್‍ಗಳು, ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ಕ್ರಮಿಸಿ ಇತಿಹಾಸ ನಿರ್ಮಿಸಿದ್ದಾರೆ. ದೇಶದ ಪ್ರಮುಖ ವಿಚಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿರುವ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದರು.
“Be the change you wish to see in the world.”-Mahatma Gandhi
ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದರು. ಈ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಸಾಮಾಜಿಕಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಸಾಧನೆಗಳ ಬಿಂಬಿಸುವ ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತ ನಮ್ಮ ನಾರೀಯರ ಶಕ್ತಿಗೆ ನಮಿಸುತ್ತದೆ ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದರು.
ಪ್ರಧಾನಿಯವರು ಮಾಡಿರುವ ಈ ಟ್ವೀಟ್ ಅನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ರೀಟ್ವೀಟ್ ಮಾಡಿಕೊಂಡಿದ್ದಾರೆ. ನೀವು ಜಗತ್ತಿನಲ್ಲಿ ಕಾಣಬಯಸುವ ಬದಲಾವಣೆಯನ್ನು ನಿಮ್ಮಲ್ಲಿ ತಂದುಕೊಳ್ಳಿ ಎಂಬ ಮಹಾತ್ಮಾ ಗಾಂಧಿಯವರ ಮಾತನ್ನು ಉಲ್ಲೇಖಿಸಿ, ಈ ಪದಗಳು ಈ ಅಸಾಮಾನ್ಯ ಮಹಿಳೆಯರು ಮತ್ತು ಪ್ರಪಂಚದಾದ್ಯಂತ ಇರುವ ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ನಿಜವಾಗಲಾರವು ಎಂದು ಬರೆದುಕೊಂಡಿದ್ದಾರೆ.