Tag: ಮಮತಾ

  • ಮತಾಂತರದ ಪಿಡುಗಿನ ಮಧ್ಯೆ ಯುವತಿ ಸಾಧನೆಯನ್ನು ಕೊಂಡಾಡಿದ ಗೂಳಿಹಟ್ಟಿ

    ಮತಾಂತರದ ಪಿಡುಗಿನ ಮಧ್ಯೆ ಯುವತಿ ಸಾಧನೆಯನ್ನು ಕೊಂಡಾಡಿದ ಗೂಳಿಹಟ್ಟಿ

    – UPSC ಪರೀಕ್ಷೆಯಲ್ಲಿ ಮಮತಾಗೆ 707ನೇ ರ‍್ಯಾಂಕ್

    ಚಿತ್ರದುರ್ಗ: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆಯಲ್ಲಿ 707ನೇ ರ‍್ಯಾಂಕ್ ಪಡೆದಿರುವ ಮಮತಾ ಅವರಿಗೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ಸಂತಸದ ಜೊತೆಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ. ನಮ್ಮ ಕ್ಷೇತ್ರಕ್ಕೆ ಅಂಟಿಕೊಂಡಿರುವ ಮತಾಂತರ ಪಿಡುಗಿನ ನಡುವೇ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೇವಪುರ ಭೋವಿಹಟ್ಟಿ ಗ್ರಾಮದ ಮಮತಾ ಜಿ. ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ 707ನೇ ರ‍್ಯಾಂಕ್ ಪಡೆದಿರೋದು ಶ್ಲಾಘನೀಯ ಎಂದಿದ್ದಾರೆ.

    ದೇವಪುರ ಭೋವಿಹಟ್ಟಿ ಗ್ರಾಮದ ಯುವತಿ ಜಿ.ಮಮತಾ ಖಾಸಗಿ ಶಾಲಾ ಶಿಕ್ಷಕರಾದಗೋವಿಂದಪ್ಪನವರ ಪುತ್ರಿ. ಇವರು ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇಂತಹ ವೇಳೆ ಯಾವುದಕ್ಕೂ ಎದೆಗುಂದದೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ ನನ್ನ ಕ್ಷೇತ್ರದ ಯುವತಿ ಸಾಧನೆ ನಮಗೆ ಅತೀವ ಸಂತೋಷ ತಂದಿದೆ. ಈ ಗ್ರಾಮದಲ್ಲಿ ಸುಮಾರು 20ಕ್ಕೂ ಅಧಿಕ ಕುಟುಂಬಗಳು ಮತಾಂತರ ಆಗಿವೆ. ಆದರೂ ಇದ್ಯಾವುದನ್ನು ಮನಸ್ಸಿಗೆ ತೆಗೆದುಕೊಳ್ಳದೇ ಶ್ರಮವಹಿಸಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಪಿಎಸ್‍ಸಿ ಅಂತಿಮ ಫಲಿತಾಂಶ ಪ್ರಕಟ- ರಾಜ್ಯದ 18 ಮಂದಿ ಉತ್ತೀರ್ಣ

    ಈ ಹಿಂದೆ ಅಧಿವೇಶನದಲ್ಲಿ ಮತಾಂತರದ ಬಗ್ಗೆ ಸ್ವತಃ ಶಾಸಕರೇ ಪ್ರಸ್ತಾಪ ಮಾಡಿದ್ದು, ಇದೊಂದೇ ಗ್ರಾಮದಲ್ಲಿ ಬಹುಸಂಖ್ಯೆಯ ಜನರು ಮತಾಂತರ ಆಗಿದ್ದಾರೆ. ಆದರೆ ಇಂತಹ ಗೊಂದಲದ ಮಧ್ಯೆ ತನ್ನ ಸಾಧನೆಯನ್ನು ಸಾಧಿಸಿರುವ ಮಮತಾ ಅವರಿಗೆ ಅಭಿನಂದನೆಗಳ ಪೂರ ಹರಿದುಬರುತ್ತಿವೆ ಎಂದರು. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

    ಸದ್ಯ ಮಮತಾ ಸಾಧನೆಯ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ಶಾಕರು ಸೇರಿದಂತೆ ಕೋಟೆನಾಡಿನ ಜನರು ವಾಟ್ಸಪ್ ಹಾಗೂ ಸೋಶಿಯಲ್ ಮೀಡಿಯಾ ಮುಖಪುಟದಲ್ಲಿ ಭಾವಚಿತ್ರ ಸಹಿತ ಬರೆದುಕೊಂಡು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

  • 2 ಕೋಟಿ ಬೆಲೆ ಬಾಳುವ ಕಾರು ಖರೀದಿಸಿದ ಗೂಳಿ ನಟಿ

    2 ಕೋಟಿ ಬೆಲೆ ಬಾಳುವ ಕಾರು ಖರೀದಿಸಿದ ಗೂಳಿ ನಟಿ

    ಬೆಂಗಳೂರು: ಗೂಳಿ ಸಿನಿಮಾ ನಟಿ ಮಮತಾ ಮೋಹನದಾಸ್ ಎರಡು ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿ ಮಾಡುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.

    ಕನಸು ಇಂದು ನನಸಾಗಿದೆ. ನಾನು ಇದಕ್ಕಾಗಿ ದಶಕದಿಂದ ಕಾಯುತ್ತಿದೆ. ನನ್ನ ಕುಟುಂಬದ ಹೊಸ ಮಗುವನ್ನು ಪರಿಚಯಿಸಲು ಖುಷಿಯಾಗುತ್ತಿದೆ. ಪೋರ್ಷಾ 911 ಕ್ಯಾರೆರಾ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದನ್ನೂ ಓದಿ:  ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!

    ಈ ಕಾರಿನ ಬೆಲೆ 1.80 ಕೋಟಿ ರೂಪಾಯಿ ಇದೆ. ಟ್ಯಾಕ್ಸ್ ಮೊತ್ತ ಸೇರಿದರೆ ಎರಡು ಕೋಟಿ ರೂಪಾಯಿ ದಾಟಲಿದೆ. ಇಷ್ಟೋಂದು ಬೆಲೆ ಬಾಳುವ ಕಾರಿನ ಒಡತಿಯಾಗುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.

    mamta

    ಮಮತಾ 2005ರಲ್ಲಿ ಚಿತ್ರರಂಗಕ್ಕೆ ಬಂದರು. ಮಯೂಖಮ್ ಅವರ ಮೊದಲ ಸಿನಿಮಾ. ಮಲಯಾಳಂನಲ್ಲಿ ಸಾಕಷ್ಟು ಚಿತ್ರ ಮಾಡಿದ ನಂತರ ಮಮತಾ ತಮಿಳು ಹಾಗೂ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟರು. 2008ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ಗೂಳಿ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಂಡರು ಮಮತಾ. ಈ ಚಿತ್ರವೇ ಮೊದಲು ಮತ್ತು ಕೊನೆ. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಮಮತಾ ವಿದ್ಯಾಭ್ಯಾಸ ಮಾಡಿದ್ದು ಬೆಂಗಳೂರಿನಲ್ಲಿ. ಮಮತಾಗೆ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 2014ರಿಂದ ಅಮೆರಿಕದ ಲಾಸ್ ಏಂಜಲೀಸ್‍ನಲ್ಲೇ ಅವರು ವಾಸವಾಗಿದ್ದಾರೆ. ಇದೀಗ ಬೆಲೆ ಬಾಳುವ ಹೊಸ ಕಾರನ್ನು ಖರೀದಿ ಮಾಡಿದ್ದಾರೆ.

    mamta

    ಮಮತಾ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಿಂದಿಯಲ್ಲಿ ತೆರೆಗೆ ಬಂದ ಅಂಧಾಧೂನ್ ಸಿನಿಮಾ ಇತ್ತೀಚೆಗೆ ತೆಲುಗಿಗೆ ರಿಮೇಕ್ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಈಗ ಮಲಯಾಳಂನಲ್ಲೂ ತೆರೆಗೆ ಬರುತ್ತಿದೆ. ಹಿಂದಿಯಲ್ಲಿ ಟಬು ಮಾಡಿದ ಪಾತ್ರವನ್ನು ಮಮತಾ ಮಲಯಾಳಂನಲ್ಲಿ ನಿರ್ವಹಿಸುತ್ತಿದ್ದಾರೆ.

  • ಕೊಳಗೇರಿಯಲ್ಲಿದ್ದು ಪದವಿ ಪಡೆದಿದ್ದ ಮಮತಾ ಈಗ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯೆ

    ಕೊಳಗೇರಿಯಲ್ಲಿದ್ದು ಪದವಿ ಪಡೆದಿದ್ದ ಮಮತಾ ಈಗ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯೆ

    – 10 ವರ್ಷ ಬೀದಿ ಬದಿ, ಶೌಚ ಕೊಠಡಿ, ಹಟ್ಟಿಯಲ್ಲೇ ಜೀವನ

    ಮಂಗಳೂರು: ಕಷ್ಟ, ನೋವುಗಳನ್ನು ದಿಟ್ಟವಾಗಿ ಎದುರಿಸಿ ಮೇಡಿಕಲ್ ಬಿಎಸ್‍ಸಿ ಪಡೆದು ತನ್ನ ಕರ್ಮಭೂಮಿಯಲ್ಲೇ ರಾಜಕೀಯ ಪ್ರವೇಶಿಸಿಸಿದ್ದ ಮಮತಾ ಇದೀಗ ಪಾವೂರು ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

    ಪಾವೂರಿನ ಜನತೆ ತಮ್ಮ ಕಣ್ಣೆದುರೇ ಕಷ್ಟ ಪಟ್ಟು ಬೆಳೆದ ಮಮತಾಳನ್ನು ಇಂದು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯೆಯನ್ನಾಗಿ ಆರಿಸಿದ್ದಾರೆ. ಕಳೆದ 3-4 ಚುನಾವಣೆಗಳಲ್ಲಿ ಈ ವಾರ್ಡ್‍ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳೇ ಜಯಗಳಿಸುತ್ತಿದ್ದರು. ಇದೇ ಮೊದಲ ಬಾರಿ ಬಿಜೆಪಿ ಬೆಂಬಲಿತ ಮಮತಾ ಅವರನ್ನು ತಮ್ಮ ಪ್ರತಿನಿಧಿಯಾಗಿ ಗ್ರಾ.ಪಂ.ಗೆ ಪಾವೂರಿನ ಜನತೆ ಮಹುಮತ ನೀಡಿ ಆಯ್ಕೆ ಮಾಡಿದ್ದಾರೆ.

    ಉಡುಪಿ ಮೂಲದವರಾದ ಇವರ ತಂದೆ ಕೃಷ್ಣಪ್ಪ, ತಾಯಿ ಪ್ರೇಮ ವಲಸೆ ಕಾರ್ಮಿಕರಾಗಿ ಊರುರು ಸುತ್ತಿ ಬೀದಿ ಬದಿ ಡೇರೆ ಹಾಕಿ ಜೀವನ ನಡೆಸುತ್ತಿದ್ದರು. 1995ರ ಸಮಯ ಏಕಾಏಕಿ ಕಾಣೆಯಾದ ತಂದೆಯ ನೆನಪಲ್ಲೇ ತಾಯಿ ಪ್ರೇಮ ಹಾಗೂ ಅವರ ಮೂವರು ಮಕ್ಕಳಾದ ಶಿವ, ಬೋಜ ಮತ್ತು ಮಮತಾ ಉಳ್ಳಾಲ ಸಮೀಪದ ಪಜೀರು ಹಾಗೂ ಪಾವೂರು, ಇನೋಳಿಯ ರಸ್ತೆ ಬದಿ, ಶೌಚ ಕೊಠಡಿ, ದನದ ಹಟ್ಟಿಯಲ್ಲಿ ವಾಸವಾಗಿದ್ದರು. ಶಿವ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಅನಾರೋಗ್ಯದಿಂದಿದ್ದರೆ, ಬೋಜ ಹಾಗೂ ಮಮತಾ ಅವರನ್ನು ಸ್ಥಳೀಯ ಶಿಕ್ಷಕ ಮಧು ಮೇಷ್ಟು ತಮ್ಮದೇ ಮುತುವರ್ಜಿಯಲ್ಲಿ ಮಲಾರ್ ಪದವಿ ಶಾಲೆಗೆ ಸೇರಿಸಿದ್ದರು.

    ಡೇರೆಯಲ್ಲೇ ವಾಸ
    ಪತಿ ನಾಪತ್ತೆಯಾದ ದುಃಖದ ನಡುವೆಯೂ ತಾಯಿ ಪ್ರೇಮ ಸ್ಥಳೀಯ ಕೋರೆ, ಮನೆ ಮನೆ ತೆರಳಿ ಕಾರ್ಮಿಕರಾಗಿ ದುಡಿದು ವಿದ್ಯಾಭ್ಯಾಸ ನಡೆಸುವ ಮಕ್ಕಳ ಜತೆ ಡೇರೆಯಲ್ಲೇ ದಿನ ಕಳೆದಿದ್ದರು. 2006ರಿಂದ ಮಮತಾ ಅವರು ಮಚ್ಚಿನ ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ದೇರಳಕಟ್ಟೆ ಮೊರಾರ್ಜಿ ದೇಸಾಯಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಿಯುಸಿ ಪಾಸಾಗಿದ್ದರು. ನಂತರ ಮಂಗಳೂರಿನ ಕೊಲಾಸೋ ವಿದ್ಯಾಸಂಸ್ಥೆಯಲ್ಲಿ ಲ್ಯಾಬ್ ಟೆಕ್ಟಿಷಿನ್ ಡಿಪ್ಲಮಾ ಪದವಿ ಪೂರೈಸಿದ್ದರು.

    ಕೊಳಗೇರಿಯಲ್ಲಿದ್ದು ಮೆಡಿಕಲ್ ಬಿಎಸ್‍ಸಿ ಪದವಿ
    ಉನ್ನತ ಶಿಕ್ಷಣ ಪಡೆಯಬೇಕೆಂಬ ಆಸೆಯಿಂದ ಸ್ಥಳೀಯ ಪತ್ರಕರ್ತರ ಹಾಗೂ ದಾನಿಗಳ ಸಹಕಾರದಿಂದ ಬೆಂಗಳೂರಿಗೆ ಆಗಮಿಸಿದ ಮಮತಾ 4 ವರ್ಷಗಳ ಕಾಲ ಬೆಂಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, 2020ರಲ್ಲಿ ಮೆಡಿಕಲ್ ವಿಭಾಗದಲ್ಲಿ ಬಿಎಸ್‍ಸಿ ಪದವಿಧರೆಯಾಗಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು. ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಶಿಕ್ಷಣ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಬೆಂಗಳೂರಿನ ಆನೆಪಾಳ್ಯ ಎಂಬ ಕೊಳೆಗೇರಿ ಪ್ರದೇಶದಲ್ಲೇ ವಾಸಿಸುತ್ತಲೇ ಮಮತಾ ಅವರು ಮೆಡಿಕಲ್ ಬಿಎಸ್‍ಸಿ ಪದವಿಧರೆಯಾಗಿದ್ದಾರೆ ಎಂಬುದೇ ವಿಶೇಷ.

    ನನ್ನ ಜೀವನ ನನಗೆ ಬದುಕುವ ಪಾಠ ಕಲಿಸಿದೆ. ದೇಶದ ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಸಂಪತ್ತಿನ ಸಮಾನ ಹಂಚಿಕೆ, ಬಳಕೆಯಾಗದಿರುವುದರಿಂದಲೇ ಹಳ್ಳಿಯ ಜನರು ಬಡತನದಲ್ಲೇ ಕಳೆಯುವಂತಾಗಿದೆ. ನನಗೆ ನನ್ನ ಜೀವನ ರೂಪಿಸುವಂತಹ ಶಿಕ್ಷಣ ದೊರಕಿದ್ದರೇನಂತೆ ಗ್ರಾಮೀಣ ಜನತೆ ಇನ್ನೂ ತಮ್ಮ ಸ್ಪಷ್ಟ ಜೀವನ ರೂಪಿಸುವಂತಹ ವ್ಯವಸ್ಥೆಯಾಗಿಲ್ಲ. ಈ ನಿಟ್ಟಿನಲ್ಲಿ ನಾನು ಓಡಾಡಿ ಬೆಳೆದ ಹಳ್ಳಿಗೆ ಮತ್ತೆ ಹಿಂತಿರುಗುವ ಯೋಜನೆ ಮಾಡಿದೆ. ಪ್ರಸ್ತುತ ನನ್ನ ಯೋಜನೆಗೆ ರಾಜಕೀಯ ಬೆಂಬಲವೂ ಸಿಕ್ಕಿದೆ. ನಾನು ನಡೆದು ಬಂದ ಅಲೆಮಾರಿ ಜೀವನ, ಕಷ್ಟದ ದಾರಿ ನನಗೆ ನೆನಪಿದೆ, ಅಂತಹ ಕಷ್ಟ ಮುಂದೆ ಯಾರಿಗೂ ಬರಬಾರದು ಎಂಬ ಆಸೆಯೊಂದಿಗೆ ರಾಜಕೀಯ ಪ್ರವೇಶಿಸಿದ್ದೇನೆ ಎಂದು ಪಾವೂರು ಗ್ರಾ.ಪಂ.ನ ನೂತನ ಸದಸ್ಯೆ ಮಮತಾ ತಮ್ಮ ಮನದಾಳ ಹಂಚಿಕೊಂಡಿದ್ದಾರೆ.

  • ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ: ತಹಶೀಲ್ದಾರ ಮಮತಾ

    ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ: ತಹಶೀಲ್ದಾರ ಮಮತಾ

    – ನಮ್ಮ ಸಿಬ್ಬಂದಿ ಮರ ಕಡಿದಿದ್ದು ತಪ್ಪು

    ತುಮಕೂರು: ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ. ಆದರೂ ನಮ್ಮ ಸಿಬ್ಬಂದಿ ಮರ ಕಡಿದು ತಪ್ಪು ಮಾಡಿದ್ದಾರೆ ಎಂದು ಗುಬ್ಬಿ ತಾಲೂಕಿನ ತಹಶೀಲ್ದಾರ್ ಮಮತಾ ಹೇಳಿದ್ದಾರೆ.

    ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರಿಗೆ ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನು ನೀಡಲಾಗಿತ್ತು. ಆದರೆ ಜಾತ್ರೆಗೆ ಜಾಗ ಬೇಕು ಎಂದು ಈ ಜಮೀನಿನಲ್ಲಿ ಬೆಳದಿದ್ದ ಅಡಕೆ, ತೆಂಗು ಮತ್ತು ಬಾಳೆಯನ್ನು ಕಡಿದು ಹಾಕಲಾಗಿತ್ತು. ಇದನ್ನು ಮಮತಾ ಅವರ ಆದೇಶ ಮೇರೆಗೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಈಗ ಈ ಆರೋಪವನ್ನು ತಳ್ಳಿ ಹಾಕಿರುವ ಮಮತಾ, ನಾನು ರೈತ ಮಹಿಳೆ ಸಿದ್ದಮ್ಮರ ಮರ ಕಡಿಯಲು ಅನುಮತಿ ನೀಡಿರಲಿಲ್ಲ. ಆದರೂ ನಮ್ಮ ಸಿಬ್ಬಂದಿ ಮರ ಕಡಿದು ತಪ್ಪು ಮಾಡಿದ್ದಾರೆ. ಗ್ರಾಮ ಲೆಕ್ಕಿಗ ಮುರುಳಿ ಸೇರಿದಂತೆ ಇತರ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಪ್ಪಿಗೆ ಕೊಟ್ಟ ಅರ್ಚಕರ ಮರವನ್ನು ಮಾತ್ರ ತೆರುಗೊಳಿಸಲು ಆದೇಶಿಸಲಾಗಿತ್ತು. ಆದರೆ ನಮ್ಮ ಸಿಬ್ಬಂದಿ ಅಲ್ಲಿಗೆ ಹೋದಾಗ ಅನುಮತಿ ಇಲ್ಲದಿದ್ದರು ಈ ಕೆಲಸ ಮಾಡಿದ್ದಾರೆ ಎಂದು ಮಮತಾ ಅವರು ತಿಳಿಸಿದ್ದಾರೆ.

    ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶೀಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿತ್ತು. ಅದರಂತೆ ಗ್ರಾಮ ಲೆಕ್ಕಿಗ ಮುರುಳಿ ಯಾವುದೇ ನೋಟಿಸ್ ನೀಡದೇ ಏಕಾಏಕಿ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ 300 ಅಡಿಕೆ, 30 ತೆಂಗು ಮತ್ತು ಬಾಳೆ ಗಿಡಗಳನ್ನು ಉರುಳಿಸಿದ್ದರು. ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮ ಕುಟುಂಬ ಉಡುಸಲಮ್ಮ ದೇವಸ್ಥಾನದ ಅರ್ಚಕರಾಗಿದ್ದಾರೆ. ಹೀಗಾಗಿ ಈ ಕುಟುಂಬಕ್ಕೆ ದೇವಸ್ಥಾನದಿಂದಲೇ ಜಮೀನು ಕೊಡುಗೆಯಾಗಿ ಕೊಟ್ಟಿದ್ದರು. ಅಲ್ಲದೆ ಜಮೀನು ಪೂರ್ಣ ಸ್ವಾಧೀನ ಕೋರಿ ಜಿಲ್ಲಾ ನ್ಯಾಯಾಲಯದಲ್ಲಿ ಮುನಿ ಕೆಂಪಯ್ಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಗಿಡಗಳನ್ನು ನಾಶ ಮಾಡಿದ್ದಾರೆ.

    ಈ ನಡುವೆ ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮರ ಮಧ್ಯೆಯೇ ಜಮೀನು ಹಂಚಿಕೆಯಲ್ಲಿ ವಿವಾದ ಉಂಟಾಗಿತ್ತು. ಇದರ ಲಾಭ ಪಡೆದುಕೊಂಡ ತಾಲೂಕು ಆಡಳಿತ ಏಕಾಏಕಿ ತೋಟವನ್ನು ಉರುಳಿಸಿದೆ. ಗುಬ್ಬಿ ಪೊಲೀಸರ ಸಮುಖದಲ್ಲೇ ಗ್ರಾಮ ಲೆಕ್ಕಿಗ ಮುರುಳಿ ಮರಗಳನ್ನು ಕಡಿದಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ.