Tag: ಮಮ್ಮುಟಿ

  • ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ (Mammootty), ದುಲ್ಕರ್ ಸಲ್ಮಾನ್ (Dulquer Salmaan), ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಚೆನ್ನೈನಲ್ಲಿರುವ (Chennai) ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬೀಗ| 2 ಸಾವಿರ ಉದ್ಯೋಗಿಗಳಿಗೆ ಸಮಸ್ಯೆ – ಇಂದು ಮಧ್ಯಾಹ್ನ ತುರ್ತು ಅರ್ಜಿ ವಿಚಾರಣೆ

    ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ ತಮಿಳು, ಮಲಯಾಳಂ ನಟರು ಹಾಗೂ ವಾಹನ ಮಾಲೀಕರು ಸೇರಿ 17 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಫೆಮಾ, 1999ರ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಸಿಂಡಿಕೇಟ್ ಅನ್ನು ಬಹಿರಂಗಪಡಿಸುವ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನಕಲಿ ದಾಖಲೆಗಳನ್ನು ಬಳಸಿ ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳ ವಾಹನ ನೋಂದಣಿ ಪಡೆದುಕೊಂಡು ಅಕ್ರಮವಾಗಿ ಸಿನಿಮಾ ನಟರಿಗೆ, ಉದ್ಯಮಿಗಳಿಗೆ ಕಾರು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

  • ಸಂಚಾರಿ ವಿಜಯ್ ‘ತಲೆದಂಡ’ ನೆನೆದ ಮಾಲಿವುಡ್ ಸೂಪರ್ ಸ್ಟಾರ್

    ಸಂಚಾರಿ ವಿಜಯ್ ‘ತಲೆದಂಡ’ ನೆನೆದ ಮಾಲಿವುಡ್ ಸೂಪರ್ ಸ್ಟಾರ್

    ಚಂದನವನದ ಸೂಕ್ಷ್ಮ ಮನಸ್ಸಿನ ವ್ಯಕ್ತಿ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಿನಿರಸಿಕರ ಮನಸ್ಸಿನಲ್ಲಿ ನೆಲೆಸಿದ್ದಾರೆ. ಅವರು ತಮ್ಮ ಮೊದಲ ಸಿನಿಮಾದಲ್ಲೇ ಸಾಮಾಜಿಕ ಕಳಕಳಿ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಗೆದ್ದುಬಂದಿದ್ದರು. ಈ ನಟ ಹೆಚ್ಚು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿದ್ದರಿಂದ ಅವರ ಬಗ್ಗೆ ಕನ್ನಡಿಗರಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ  ಅಭಿಮಾನಿಗಳು ಇದ್ದಾರೆ. ವಿಜಯ್ ಅವರು ದೈಹಿಕವಾಗಿ ಇಲ್ಲದಿದ್ದರೂ, ಅವರು ಮಾಡಿರುವ ಪಾತ್ರಗಳ ಬಗ್ಗೆ ಸಿನಿರಸಿಕರು ನೆನಪಿಸಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಮಾಲಿವುಡ್ ಸೂಪರ್ ಸ್ಟಾರ್ ಮಮ್ಮುಟಿ ಸಂಚಾರಿ ವಿಜಯ್ ಅವರ ‘ತಲೆತಂಡ’ ಸಿನಿಮಾವನ್ನು ನೆನೆದು, ಅವರನ್ನು ಹಾಡಿ ಹೊಗಲಿದ್ದಾರೆ.

    ಹೀರೋ ಎಂದರೆ ಕಮರ್ಷಿಯಲ್ ಸಿನಿಮಾಗಳನ್ನೆ ಹೆಚ್ಚು ಮಾಡಬೇಕು ಎನ್ನುವ ಕಾಸ್ಸೆಪ್ಟ್ ಇಟ್ಟುಕೊಳ್ಳದೆ ಸಮಾಜಕ್ಕೆ  ಸಂದೇಶ ಸಾರುವ ಪಾತ್ರಗಳನ್ನೆ ವಿಜಯ್ ಹೆಚ್ಚು ಮಾಡಿದ್ದಾರೆ. ಭಿನ್ನ ವ್ಯಕ್ತಿತ್ವ ಹೊಂದಿದ್ದ ಸಂಚಾರಿ ವಿಜಯ್ ಮೂಲತಃ ರಂಗಭೂಮಿ ಕಲಾವಿದ. ಶಿಸ್ತಿನ ಮಾತು, ನಡೆ, ನುಡಿಯಿಂದ ಚಿತ್ರರಂಗದಲ್ಲಿ ಭಿನ್ನ ಛಾಪು ಮೂಡಿಸಿದ ನಟ ಇವರು. ಈ ಹಿನ್ನೆಲೆ ಅವರು ಮಾಡಿದ್ದು ಕಡಿಮೆ ಸಿನಿಮಾವಾಗಿದ್ದರೂ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಹಿನ್ನೆಲೆ ವಿಜಯ್ ಕುರಿತು ಮಮ್ಮುಟ್ಟಿ ಮೆಚ್ಚುಗೆಯ ಮಾತುಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ಪೋಸ್ಟ್‌ನಲ್ಲಿ ಅವರು ‘ತಲೆತಂಡ’ ಸಿನಿಮಾ ಪೋಸ್ಟರ್ ಪೋಸ್ಟ್ ಮಾಡಿದ್ದು, ನಾನು ಸಂಚಾರಿ ವಿಜಯ್ ಅವರ ನೆನಪುಗಳನ್ನು ಮೆಲುಕು ಹಾಕುತ್ತಾ ಇದ್ದೆ. ಅವರು ಪ್ರಸ್ತುತ ನಮ್ಮ ಜೊತೆ ಇಲ್ಲ ಎಂಬುದನ್ನು ನಾನು ನಂಬುವುದಿಲ್ಲ. ನಾವಿಬ್ಬರು ಹೈದರಾಬಾದ್‍ನಲ್ಲಿ ನಡೆದ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿ ಮಾಡಿದ್ದೆವು. ಈ ವೇಳೆ ಅವರು ನಾನು ನಿಮ್ಮ ದೊಡ್ಡ ಅಭಿಮಾನಿ ಎಂದು ಹೇಳಿದ್ದರು. ಅದನ್ನು ಕೇಳಿಸಿಕೊಂಡು ನಾನು ಧನ್ಯವಾಗಿದ್ದೆ. ಈ ವೇಳೆ ಅವರು ನನಗೆ ‘ತಲೆದಂಡ’ ಸಿನಿಮಾ ನೋಡಿ ಅಭಿಪ್ರಾಯ ತಿಳಿಸಿ ಎಂದಿದ್ದರು. ಆದರೆ ಇದೇ ಅವರ ಕೊನೆ ಸಿನಿಮಾವಾಗುತ್ತೆ ಎಂದು ಯಾರಿಗೆ ಗೊತ್ತಿತ್ತು ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ತಮ್ಮ ಮನೆಯ ಮುದ್ದು ಸದಸ್ಯನನ್ನು ಪರಿಚಯ ಮಾಡಿಸಿದ ಹರಿಪ್ರಿಯಾ

    ಚಿತ್ರಮಂದಿರದಲ್ಲಿ ವಿಜಯ್ ಅವರ ಸಿನಿಮಾ ನೋಡುವುದರ ಮೂಲಕ ಸವಿ ನೆನಪುಗಳನ್ನು ಸಂಭ್ರಮಿಸೋಣ. ಅವರ ಹಾರ್ಡ್ ವರ್ಕ್ ಹಾಗೂ ಪ್ರತಿಭೆಯನ್ನು ನಾವೆಷ್ಟು ಪ್ರೀತಿಸಿದ್ದೇವೆ ಎನ್ನುವುದನ್ನು ತಿಳಿಯಲು ಅವರು ಕಾಯುತ್ತಿರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

  • ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೊರೊನಾ ಪಾಸಿಟಿವ್

    ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೊರೊನಾ ಪಾಸಿಟಿವ್

    ತಿರುವನಂತಪುರಂ: ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    Dulquer Salmaan

    ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕೆಲವು ದಿನಗಳಲ್ಲಿ ಅವರ ಮಗ ದುಲ್ಖರ್ ಸಲ್ಮಾನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ದುಲ್ಖರ್ ಸಲ್ಮಾನ್ ಅವರು ತಮಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ ಮತ್ತು ಮನೆಯಲ್ಲಿಯೇ ಐಸೋಲೇಶನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

    mammutty

    ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಜ್ವರ, ಸೌಮ್ಯ ರೋಗ ಗುಣಲಕ್ಷಣಗಳನ್ನು ಹೊಂದಿದ್ದೇನೆ. ಆದರೆ ಚೆನ್ನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕ್ವರಂಟೈನ್‍ನಲ್ಲಿರಿ ಮತ್ತು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶಾಲೆಯ ಮೇಲ್ಚಾವಣಿ ಕುಸಿತ – 10 ಮಂದಿ ಕಾರ್ಮಿಕರಿಗೆ ಗಾಯ

    70 ವರ್ಷ ವಯಸ್ಸಿನ ಮಮ್ಮುಟಿ ಅವರಿಗೆ ತಮ್ಮ ಮುಂದಿನ ಸಿನಿಮಾ ಸಿಬಿಐ 5 ಶೂಟಿಂಗ್ ವೇಳೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಅವರು ಸಹ ತಮ್ಮ ಟ್ವಿಟ್ಟರ್‌ನಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನನಗೆ ಕೊರೊನಾ ದೃಢಪಟ್ಟಿದೆ. ಸ್ವಲ್ಪ ಜ್ವರದ ಇದೆ. ಆದರೂ ಚೆನ್ನಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ನಾನು ಮನೆಯಲ್ಲಿಯೇ ಕ್ವಾರಂಟೈನ್‍ಗೊಂಡಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸಿ ಮತ್ತು ನಿಮ್ಮ ಮೇಲೆ ಕಾಳಜಿ ವಹಿಸಿ ಎಂದು ಬರೆದುಕೊಂಡಿದ್ದಾರೆ.

    ಗುರುವಾರ ಭಾರತದಲ್ಲಿ 3,17,532 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಒಟ್ಟು ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 3,82,18,773 ಆಗಿದ್ದು, ಇದರಲ್ಲಿ 9,287 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ