Tag: ಮರಗಳ್ಳರು

  • ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

    ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

    ಮಂಡ್ಯ: ಗಂಧದ ಮರ (Sandalwood) ಕಡಿಯುತ್ತಿದ್ದವರನ್ನು ಹಿಡಿಯಲು ಅರಣ್ಯಾಧಿಕಾರಿಗಳು (Forest Officer) ಗಾಳಿಯಲ್ಲಿ ಫೈರಿಂಗ್ (Firing) ಮಾಡಿದ್ದು, ಈ ವೇಳೆ ಗಂಧಚೋರರು ಅರಣ್ಯ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರದ ಎಚ್.ಎನ್ ಕಾವಲ್ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಬುಧವಾರ ಸಂಜೆ ನಾಗಮಂಗಲ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಾಸನ ಮೂಲದ ಗೋವಿಂದಪ್ಪ ಹಾಗೂ ಆತನ ಮಕ್ಕಳಾದ ಶಂಕರ್ ಮತ್ತು ಕುಮಾರ್ ಗಂಧದ ಮರ ಕಡಿಯಲು ಬಂದಿದ್ದಾರೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಇತಿಹಾಸದಲ್ಲೇ ಫಸ್ಟ್ ಟೈಮ್ ಎಸ್‍ಪಿ ರೋಡ್ ಬಂದ್ – ಡಿ.13ಕ್ಕೆ ವಿಧಾನಸೌಧಕ್ಕೆ ವರ್ತಕರ ಮೆರವಣಿಗೆ

    ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಮರಗಳ್ಳರನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸಾಕಯ್ಯ ಅವರ ಮೇಲೆ ಮರಗಳ್ಳರು ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳು ಮತ್ತೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

    ಈ ವೇಳೆ ಗೋವಿಂದಪ್ಪನಿಗೆ ಗುಂಡಿನ ಚೂರುಗಳು ತಗುಲಿ ಗಾಯಗಳಾಗಿವೆ. ಮತ್ತಿಬ್ಬರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಾಯಾಳುಗಳಾದ ಅರಣ್ಯ ಸಿಬ್ಬಂದಿ ಸಾಕಯ್ಯ ಹಾಗೂ ಗುಂಡಿನ ಚೂರುಗಳಿಂದ ಗಾಯಗೊಂಡ ಆರೋಪಿ ಗೋವಿಂದಪ್ಪನಿಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಭೀತಿಯ ನಡುವೆಯೂ ಮರಕಳ್ಳತನ – ಕಳ್ಳರಿಗೆ ಲಾಠಿ ಏಟು

    ಕೊರೊನಾ ಭೀತಿಯ ನಡುವೆಯೂ ಮರಕಳ್ಳತನ – ಕಳ್ಳರಿಗೆ ಲಾಠಿ ಏಟು

    ಶಿವಮೊಗ್ಗ: ಕೊರೊನಾ ವೈರಸ್ ಭೀತಿಗೆ ಈಡಿ ರಾಷ್ಟ್ರವೇ ತತ್ತರಿಸಿ ಹೋಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವೈರಸ್ ತಡೆಗಟ್ಟಲು 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

    ಪ್ರಧಾನಿ ಅವರ ಈ ಆದೇಶವನ್ನೇ ಬಂಡವಾಳ ಮಾಡಿಕೊಂಡ ಕೆಲ ಖದೀಮರು, ಲಾಕ್‍ಡೌನ್ ಇದೆ ಎಂದು ಕಾಡಿನತ್ತ ಯಾರೂ ಸಹ ತಲೆ ಹಾಕುವುದಿಲ್ಲ. ಇದೇ ಸಮಯದಲ್ಲಿ ಬೆಲೆ ಬಾಳುವ ಮರಗಳಿಗೆ ಕೊಡಲಿ ಹಾಕಿ ಮರಗಳ್ಳತನಕ್ಕೆ ಪ್ರಯತ್ನಿಸಿರುವ ಘಟನೆ ಶಿವಮೊಗ್ಗದ ಶೆಟ್ಟಿಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಈ ವೇಳೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ಅರಣ್ಯ ರಕ್ಷಕನ ಮೇಲೆ ಮರಗಳ್ಳರಾದ ರಾಜೇಂದ್ರ, ಮುರುಗೇಶ, ವಿರೇಂದ್ರ ಹಾಗೂ ಬಲರಾಮ್ ಸೇರಿ ಹಲ್ಲೆಗೆ ಮುಂದಾಗಿದ್ದಾರೆ. ಈ ಖದೀಮರು ಲಕ್ಷಾಂತರ ರೂ. ಬೆಲೆ ಬಾಳುವ ಮರಗಳಾದ ಸಾಗುವಾನಿ, ಬೀಟೆ ಸೇರಿದಂತೆ ಇತರೆ ಮರಗಳನ್ನು ಕಳ್ಳತನ ಮಾಡಿ ಶಿವಮೊಗ್ಗ ಮೂಲದ ಹಬೀಬ್ ಎಂಬುವನಿಗೆ ಮಾರಾಟಕ್ಕೆ ಯತ್ನಿಸಿದ್ದರು.

    ಸದ್ಯ ಮೂವರು ಮರಗಳ್ಳರನ್ನು ವಶಕ್ಕೆ ಪಡೆದ ಅರಣ್ಯ ಸಿಬ್ಬಂದಿ ಬಂಧಿತರನ್ನು ಶಿವಮೊಗ್ಗ ವನ್ಯಜೀವಿ ವಲಯದ ಡಿಎಫ್‍ಒ ನಾಗರಾಜ್ ಮುಂದೆ ನಿಲ್ಲಿಸಿದ್ದಾರೆ. ಡಿಎಫ್‍ಒ ನಾಗರಾಜ್ ಮರಗಳ್ಳರಿಗೆ ಕರ್ಫ್ಯೂ ಇದ್ದರೂ ಮನೆಯಿಂದ ಹೊರ ಬಂದು ಮರಗಳ್ಳತನ ಮಾಡುತ್ತೀರಾ ಎಂದು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೂವರಿಗೂ ಲಾಠಿ ರುಚಿ ತೋರಿಸಿದ್ದಾರೆ. ಅಲ್ಲದೇ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊರ್ವ ಪರಾರಿಯಾಗಿದ್ದು, ಆತನ ಪತ್ತೆಗೂ ಬಲೆ ಬೀಸಿದ್ದಾರೆ.