ಬೆಳಗಾವಿ: ಪ್ರಯಾಗ್‌ರಾಜ್ ಕಾಲ್ತುಳಿತದಲ್ಲಿ (Prayagraj Stampede) ಬೆಳಗಾವಿ ಮೂಲದ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ನಡೆಸದೇ ಡೆತ್ ಸರ್ಟಿಫಿಕೇಟ್ (Death Certificate) ನೀಡಿದ ಯುಪಿ ಸರ್ಕಾರ ಎನ್ನುವ ಪ್ರಶ್ನೆ ಮೂಡಿದೆ.
ಬೆಳಗಾವಿಯ ಮೃತ ನಾಲ್ವರ ಡೆತ್ ಸರ್ಟಿಫಿಕೇಟ್ ಲಭ್ಯವಾಗಿದೆ. ಬೆಳಗಾವಿಯ ಅರುಣ್ ಕೋಪರ್ಡೆ, ಮಹಾದೇವಿ, ಜ್ಯೋತಿ, ಮೇಘಾ ಮೃತಪಟ್ಟಿದ್ದರು.ಮೃತರ ಸಂಬಂಧಿಗಳ ವಾಟ್ಸಪ್ ಗೆ ಡೆತ್ ಸರ್ಟಿಫಿಕೇಟ್ ಬಂದಿದೆ.
ಸೆಂಟ್ರಲ್ ಹಾಸ್ಪಿಟಲ್ ಪ್ರಯಾಗ್‌ರಾಜ್ ಮಹಾಕುಂಭ ಹೆಸರಿನಲ್ಲಿ ಸರ್ಟಿಫಿಕೇಟ್ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸದೇ ಡೆತ್ ಸರ್ಟಿಫಿಕೇಟ್ ನೀಡಿತಾ ಯುಪಿ ಸರ್ಕಾರ ಎನ್ನುವ ಪ್ರಶ್ನೆ ಮೂಡಿದೆ.
ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. 4 ಜನರ ಮರಣೋತ್ತರ ಪರೀಕ್ಷೆ ನಡೆಸಿ ಬಳಿಮ ಶವ ಹಸ್ತಾಂತರವನ್ನ ಬೆಳಗಾವಿ ಜಿಲ್ಲಾಡಳಿತ ಮಾಡಿತ್ತು.
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ತಂಡದ ಕ್ರೌರ್ಯಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ (Renukaswamy) ನರಳಿ ನರಳಿ ಪ್ರಾಣ ಬಿಟ್ಟಿರುವುದಾಗಿ ಫಾರೆನ್ಸಿಕ್ ಪರೀಕ್ಷೆಯಲ್ಲಿ ಬಯಲಾಗಿದೆ.
ಭಾನುವಾರ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಇಂದು ಮೃತನ ಮರಣೋತ್ತರ ಪರೀಕ್ಷೆ ನಡೆಸಿದ್ದು, ಇದರ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ವರದಿಯಲಿ ಏನಿದೆ..?: ಮರಣೋತ್ತರ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ ಮೇಲೆ ಬರೋಬ್ಬರಿ 15 ಕಡೆ ಗಾಯಗಳಿರುವುದು ಬಯಲಾಗಿದೆ. ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ 15 ಕಡೆ ಗಾಯಾಗಳಾಗಿವೆ. ರಾಡ್ ಮತ್ತು ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಪರಿಣಾಮ ರೇಣುಕಾಸ್ವಾಮಿ ನರಳಿ ನರಳಿ ಸತ್ತಿರುವುದಾಗಿ ಫಾರೆನ್ಸಿಕ್ ವೈದ್ಯರು ಪಬ್ಲಿಕ್ ಟಿವಿಗೆ ಮಾಹಿತಿ ಕೊಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಅಂಬುಲೆನ್ಸ್ ಮೂಲಕ ಚಿತ್ರದುರ್ಗಕ್ಕೆ ರವಾನಿಸಲಾಗುತ್ತದೆ.
ಕಿಡ್ನಾಪ್ ಮಾಡಿದ್ದು ಹೇಗೆ?: ಪವಿತ್ರಾ ಗೌಡಗೆ (Pavithra Gowda) ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಜೊತೆ ಸಂಪರ್ಕ ಸಾಧಿಸಲು ಹುಡುಗಿ ಹೆಸರಿನಲ್ಲಿ ಫೇಕ್ ಖಾತೆಯನ್ನು ದರ್ಶನ್ ತಂಡ ತೆರೆದಿತ್ತು. ಈ ಖಾತೆಯ ಮೂಲಕ ರೇಣುಕಾಸ್ವಾಮಿಯ ಜೊತೆ ಸಂವಹನ ಮಾಡಲಾಗುತ್ತಿತ್ತು.
ಶನಿವಾರ ಮಾತನಾಡಲು ಇದೆ ಮನೆಯಿಂದ ಹೊರಗಡೆ ಬಾ ಎಂದು ಖಾತೆಯಿಂದ ಮಸೇಜ್ ಕಳುಹಿಸಲಾಗಿತ್ತು. ಈ ಮಸೇಜ್‌ಗೆ ಒಪ್ಪಿ ಆತನ ಮನೆಯಿಂದ ಹೊರಗೆ ಬಂದಿದ್ದ. ಚಿತ್ರದುರ್ಗದಲ್ಲಿರುವ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಸೇನಾ ಅಧ್ಯಕ್ಷ ರಘು ದರ್ಶನ್ ನೇತೃತ್ವದಲ್ಲಿ ಅಪಹರಣ ಮಾಡಿ ಬೆಂಗಳೂರಿಗೆ ಕರೆ ತರಲಾಗಿತ್ತು.
ಹಲ್ಲೆ ನಡೆಸುವ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು. ದರ್ಶನ್ ಹೊಡೆದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಉಳಿದ ಆರೋಪಿಗಳು ತಪ್ಪೊಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗ ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಬಂಧಿಸಿ ಕರೆ ತಂದಿದ್ದಾರೆ. ಇದನ್ನೂ ಓದಿ: ಏನಿದು ಹತ್ಯೆ ಪ್ರಕರಣ? ದರ್ಶನ್ ಅರೆಸ್ಟ್ ಆಗಿದ್ದು ಯಾಕೆ? ಇಲ್ಲಿದೆ ಪೂರ್ಣ ವಿವರ
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶವೊಂದು ಬಹಿರಂಗವಾಗಿದೆ.
ಹೌದು. ರೋಪಿ ಫಯಾಜ್, ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಹೃದಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ ಎಂಬ ವಿಚಾರ ಬಯಲಾಗಿದೆ. ಇದನ್ನೂ ಓದಿ: ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ
ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.
ಕನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಹಾಗೂ ನಿರ್ಮಾಪಕಿ ಸ್ಪಂದನಾ (Spandana) ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಈವರೆಗೂ ಅವರ ಮೃತದೇಹ ಭಾರತಕ್ಕೆ ತರಲಾಗಿಲ್ಲ. ಕಾರಣ, ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ (Postmortem) ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ. ಸಾವಿಗೆ ಕಾರಣ ಏನು ಎನ್ನುವುದು ಮೊದಲು ಗೊತ್ತಾಗುವುದು ಅಲ್ಲಿನ ಪೊಲೀಸ್ ವ್ಯವಸ್ಥೆಗೆ.
ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.
ಸ್ಪಂದನಾ ಬ್ಯಾಂಕಾಕ್ (Bangkok) ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.
ಈ ಸಮಯದಲ್ಲಿ ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.
ಏರ್‌ಪೋರ್ಟ್‌ಗೆ ಮೃತದೇಹ ತಂದ ತಕ್ಷಣವೇ ಅಲ್ಲೂ ಹಲವು ಪ್ರಕ್ರಿಯೆಗಳು ನಡೆಯಲಿವೆ. ಅಲ್ಲಿಯೂ ಕೂಡ ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ಆನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸ್ಪಂದನಾ ಅವರ ಮೃತ ದೇಹ ಬೆಂಗಳೂರಿಗೆ ತರಲು ತಡವಾಗುತ್ತಿದೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು (Dead Body) ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದಿದ್ದಾರೆ ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್. ಇಂದು ಮರಣೋತ್ತರ (Postmortem) ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ಪ್ರಕ್ರಿಯೆಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ.
‘ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ಪ್ರಕ್ರಿಯೆಗಳು ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ಪ್ರಕ್ರಿಯೆಗಳು ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ (Bangalore) ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದಿದ್ದಾರೆ ಹರಿಪ್ರಸಾದ್.
ಅಂತ್ಯಸಂಸ್ಕಾರ (Funeral) ಎಲ್ಲಿ ನಡೆಯಬೇಕು ಎನ್ನುವ ಕುರಿತು ಯಾವುದೇ ನಿರ್ಧಾರ ಈವರೆಗೂ ತೆಗೆದುಕೊಂಡಿಲ್ಲ ಎಂದಿರುವ ಹರಿಪ್ರಸಾದ್, ಯಾವ ಸ್ಥಳದಲ್ಲಿ ಮತ್ತು ಸಮಯದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕು ಎನ್ನುವುದನ್ನು ಚರ್ಚಿಸಿ ತಿಳಿಸುತ್ತೇವೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅದನ್ನು ಮಾಧ್ಯಮಗಳಿಗೆ ನೀಡುವ ಕುರಿತು ಮಾತನಾಡಿದ್ದಾರೆ.
ರಾಯಚೂರು: ತಾಲೂಕಿನ ವಡ್ಲೂರು ಗ್ರಾಮದಲ್ಲಿ ಮಗನಿಂದಲೇ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನಲ್ಲಿ ಹೂತಿಟ್ಟಿದ್ದ ಶವವನ್ನು 13 ದಿನಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆ (Postmortem) ಮಾಡಲಾಗಿದೆ. ಜಿಟಿ ಜಿಟಿ ಮಳೆಯಲ್ಲೇ ರಾಯಚೂರು (Raichur) ಎಸಿ ಮೆಹಬೂಬಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಜುಲೈ 7 ರಂದು ವಡ್ಲೂರು (Vadlur) ಗ್ರಾಮದಲ್ಲಿ 70 ವರ್ಷದ ಶಿವನಪ್ಪ ಕೊಲೆಯಾಗಿದ್ದು, ಪ್ರಕರಣದ ಆರೋಪಿ ಈರಣ್ಣ ಜುಲೈ 19 ರಂದು ಪೊಲೀಸರಿಗೆ ಶರಣಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಭಾರತ ಮಾಲಾ ಯೋಜನೆ ಹೈವೆಗೆ ಜಮೀನು ಹೋಗಿದ್ದು, ಭೂಸ್ವಾಧೀನ ಪರಿಹಾರ ಹಣಕ್ಕಾಗಿ ತಂದೆ-ಮಗನ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ತಂದೆಯ ಕೊಲೆ ಬಳಿಕ ವಡ್ಲೂರು ಗ್ರಾಮದ ಹೈವೆ ಪಕ್ಕದಲ್ಲಿ ಈರಣ್ಣ ತಾಯಿ ರಂಗಮ್ಮ ಜೊತೆಗೂಡಿ ಶವವನ್ನು ಹೂತಿಟ್ಟಿದ್ದ. ಬಳಿಕ ತಂದೆ ಕಾಣೆಯಾಗಿದ್ದಾರೆ ಎಂದು ಗ್ರಾಮದಲ್ಲಿ ಹೇಳಿಕೊಂಡು ಬಂದಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಕಾಣೆಯಾಗಿದ್ದಾರೆ ಎಂದು ದೂರು ಕೊಡಲು ಬಂದರೂ ಧೈರ್ಯ ಸಾಲದೆ ವಾಪಸ್ ತೆರಳಿದ್ದ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ – 4 ಮಂದಿ ಅರೆಸ್ಟ್
ಆದರೆ ಈರಣ್ಣನ ವರ್ತನೆ ಮೇಲೆ ಗ್ರಾಮಸ್ಥರು ಹಾಗೂ ಸಂಬಂಧಿಕರು ಅನುಮಾನಗೊಂಡಿದ್ದರು. ಇದಕ್ಕೆ ಹೆದರಿ ಆರೋಪಿ ಬುಧವಾರ ಪೊಲೀಸರಿಗೆ ಶರಣಾಗಿದ್ದಾನೆ. ಈ ಹಿನ್ನೆಲೆ ಮಳೆಯಲ್ಲೇ ಶವ ಹೊರತೆಗೆದು ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಳಿಕ ಮೃತನ ಕುಟುಂಬಸ್ಥರು ಅದೇ ಹೊಲದಲ್ಲಿ ಶಿವನಪ್ಪ ಅಂತ್ಯಸಂಸ್ಕಾರ ಮಾಡಿದ್ದಾರೆ.
ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ ಶನಿವಾರ ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಅವರ ತಲೆಯಲ್ಲಿ ಗಾಯದ ಗುರುತು ಮತ್ತು ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಪೊಲೀಸರು ಅಸಹಜ ಸಾವು ಎಂದು ಕೇಸು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಗೂ ವಾಣಿ ಅವರ ದೇಹವನ್ನು ರವಾನಿಸಲಾಗಿತ್ತು. ನಿನ್ನೆಯಷ್ಟೇ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಮರಣೋತ್ತರ ವರದಿಯಲ್ಲಿ ಯಾವುದೇ ಅನುಮಾನವನ್ನು ವ್ಯಕ್ತ ಪಡಿಸಿಲ್ಲ.
ವಾಣಿ ಅವರು ಮಲಗಿದ್ದ ಪಕ್ಕದಲ್ಲೇ ಕಟ್ಟಿಗೆ ಟೇಬಲ್ ಇದ್ದು, ಅದರ ಮೇಲೆ ವಾಣಿ ಬಿದ್ದಿದ್ದಾರೆ. ಹಾಗಾಗಿ ತಲೆಗೆ ಗಾಯವಾಗಿದೆ. ರಕ್ತಸ್ರಾವವಾಗಿದೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನು ಗಮನಿಸಿರುವ ಪೊಲೀಸರು, ಅಲ್ಲಿ ಯಾರ ಸುಳಿವೂ ದೊರೆತಿಲ್ಲ. ಮತ್ತು ಅವರ ಮನೆಗೆ ಯಾರೂ ಪ್ರವೇಶ ಮಾಡಿಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದೆ. ಹಾಗಾಗಿ ಈ ಸಾವನ್ನು ಅವರು ಅನುಮಾನದಿಂದ ನೋಡಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್
ವಾಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು.
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.
Live Tv
[brid partner=56869869 player=32851 video=960834 autoplay=true]
ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಖ್ಯಾತ ಗಾಯಕಿ ವಾಣಿ ಜಯರಾಂ ಸಾವು, ಅನೇಕ ಅನುಮಾನಗಳನ್ನು ಮೂಡಿಸಿತ್ತು. ತಾವು ವಾಸಿಸುತ್ತಿದ್ದ ಮನೆಯಲ್ಲಿ ಶವವಾಗಿ ಪತ್ತೆಯಾದ ಕಾರಣದಿಂದಾಗಿ ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರವಷ್ಟೇ ಅವರ ಸಾವಿನ ನಿಗೂಢ ಬಹಿರಂಗವಾಗಲಿದೆ. ಸ್ಥಳೀಯರ ಪ್ರಕಾರ ವಾಣಿ ಒಬ್ಬರೇ ಮನೆಯಲ್ಲಿ ವಾಸವಿದ್ದರಂತೆ. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಅನುಮಾನಗಳಿಗೆ ಮರಣೋತ್ತರ ಪರೀಕ್ಷೆಯ ವರದಿಯೇ ಉತ್ತರವಾಗಲಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ:ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು
Live Tv
[brid partner=56869869 player=32851 video=960834 autoplay=true]
ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ಬಾಯ್ ಫ್ರೆಂಡ್ ಶಿಜಾನ್ ಪೊಲೀಸರ ಎದುರು ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾನೆ. ತುನಿಷಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ನಮ್ಮಿಬ್ಬರ ಮಧ್ಯ ಸಣ್ಣಪುಟ್ಟ ಗಲಾಟೆ ನಡೆಯುತ್ತಲೇ ಇತ್ತು. ಧರ್ಮದ ಕಾರಣಕ್ಕಾಗಿಯೂ ಜಗಳ ನಡೆದಿತ್ತು. ಇದರಿಂದ ಬೇಸತ್ತ ಅವರು ಹಿಂದೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು. ನಾನು ಅವರನ್ನು ಬದುಕಿಸಿದೆ ಎಂದು ಹೇಳಿದ್ದಾನೆ ಎನ್ನಲಾಗುತ್ತಿದೆ.
ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿದ್ದವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಬೇರೆ ಏನೋ ಇದೆ ಎಂದು ತುನಿಷಾ ತಾಯಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು. ಇನ್ನೂ ಕೆಲವರು ಇದೊಂದು ಲವ್ ಜಿಹಾದ್. ಹಾಗಾಗಿಯೇ ಸತ್ತಿದ್ದಾಳೆ ಎಂದೂ ಹೇಳಲಾಗಿತ್ತು. ತುನಿಷಾ ಆತ್ಮೀಯರು ಆಕೆ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅನುಮಾನಗಳಿಗೂ ಉತ್ತರ ಸಿಕ್ಕಿದೆ.
ನಟಿಯ ಮರಣೋತ್ತರ ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ತುನಿಷಾ ಸಾವು ಆತ್ಮಹತ್ಯೆಯಿಂದ ಆಗಿದ್ದು ಎಂದು ದೃಢಪಡಿಸಿದ್ದಾರೆ.
ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ ಕಾರಣ ಎಂದು ಆರೋಪಿಸಲಾಗಿದೆ. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ಆತ್ಮಹತ್ಯೆ ಪ್ರಕರಣಕ್ಕೆ ಲವ್ ಜಿಹಾದ್ ಕಳಂಕ ಅಂಟಿಕೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ
ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಈ ಕುರಿತು ಮಾತನಾಡಿದ್ದು, ಮೃತ ತುನಿಷಾ ಮತ್ತು ಶಿಜಾನ್ ನಡುವೆ ಪ್ರೇಮವಿತ್ತು. ಪರಸ್ಪರ ಗಲಾಟೆ ಮಾಡಿಕೊಂಡು ಅವರು ದೂರವಾಗಿದ್ದರು. ಆ ನೋವಿನಲ್ಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ಲವ್ ಜಿಹಾದ್ ಅನಿಸುತ್ತಿದೆ. ಕೂಡಲೇ ಈ ದಿಕ್ಕಿನಲ್ಲಿ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಲಿ ಬಾಬಾ ದಸ್ತಾನ್ ಇ –ಕಾಬೂಲ್’ ಶೋನಲ್ಲಿ ತುನಿಷಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಶೋ ಶೂಟಿಂಗ್ ಗಾಗಿ ಹೋದವರು ಶವವಾಗಿ ಮನೆಗೆ ಬಂದಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಅವರಿಗೆ ಲವ್ ಬ್ರೇಕ್ ಅಪ್ ಆಗಿತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ (Tunisha Sharma) ಆತ್ಮಹತ್ಯೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿದ್ದವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಬೇರೆ ಏನೋ ಇದೆ ಎಂದು ತುನಿಷಾ ತಾಯಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು. ಇನ್ನೂ ಕೆಲವರು ಇದೊಂದು ಲವ್ ಜಿಹಾದ್. ಹಾಗಾಗಿಯೇ ಸತ್ತಿದ್ದಾಳೆ ಎಂದೂ ಹೇಳಲಾಗಿತ್ತು. ತುನಿಷಾ ಆತ್ಮೀಯರು ಆಕೆ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿದ್ದರು.ಇದೀಗ ಈ ಎಲ್ಲ ಅನುಮಾನಗಳಿಗೂ ಉತ್ತರ ಸಿಕ್ಕಿದೆ.
ನಟಿಯ ಮರಣೋತ್ತರ (Postmortem) ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ತುನಿಷಾ ಸಾವು ಆತ್ಮಹತ್ಯೆಯಿಂದ ಆಗಿದ್ದು ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳ ಎಂಟ್ರಿ: ಕಾದಿದೆ ಮತ್ತೊಂದು ಶಾಕ್
ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ (Shijan) ಕಾರಣ ಎಂದು ಆರೋಪಿಸಲಾಗಿದೆ. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ಆತ್ಮಹತ್ಯೆ ಪ್ರಕರಣಕ್ಕೆ ಲವ್ ಜಿಹಾದ್ ಕಳಂಕ ಅಂಟಿಕೊಂಡಿದೆ.
ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಈ ಕುರಿತು ಮಾತನಾಡಿದ್ದು, ಮೃತ ತುನಿಷಾ ಮತ್ತು ಶಿಜಾನ್ ನಡುವೆ ಪ್ರೇಮವಿತ್ತು. ಪರಸ್ಪರ ಗಲಾಟೆ ಮಾಡಿಕೊಂಡು ಅವರು ದೂರವಾಗಿದ್ದರು. ಆ ನೋವಿನಲ್ಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ಲವ್ ಜಿಹಾದ್ ಅನಿಸುತ್ತಿದೆ. ಕೂಡಲೇ ಈ ದಿಕ್ಕಿನಲ್ಲಿ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಲಿ ಬಾಬಾ ದಸ್ತಾನ್ ಇ –ಕಾಬೂಲ್’ ಶೋನಲ್ಲಿ ತುನಿಷಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಶೋ ಶೂಟಿಂಗ್ ಗಾಗಿ ಹೋದವರು ಶವವಾಗಿ ಮನೆಗೆ ಬಂದಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಅವರಿಗೆ ಲವ್ ಬ್ರೇಕ್ ಅಪ್ ಆಗಿತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]