Tag: ಮರಣ ದಂಡನೆ

  • ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು

    ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು

    ಕೊಚ್ಚಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಭೀಕರವಾಗಿ ಹತ್ಯೆಗೈದಿದ್ದ ಪ್ರಕರಣದ ಅಪರಾಧಿಗೆ ಕೇರಳದ (Kerala) ವಿಶೇಷ ಪೋಕ್ಸೋ ನ್ಯಾಯಾಲಯ (POCSO Court) ಮರಣದಂಡನೆ (Death Sentence) ವಿಧಿಸಿದೆ.

    ಬಿಹಾರ ಮೂಲದ ಅಪರಾಧಿ ಅಶ್ವಕ್ ಆಲಂ 5 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿದ್ದ. ಆತನನ್ನು ಗಲ್ಲಿಗೇರಿಸುವಂತೆ ವಿಶೇಷ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಆದೇಶಿಸಿದ್ದಾರೆ.

    ಅಪರಾಧಿಗೆ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಅಡಿಯಲ್ಲಿ ಅತ್ಯಾಚಾರ ಮತ್ತು ತೀವ್ರತರವಾದ ಲೈಂಗಿಕ ದೌರ್ಜನ್ಯದ ವಿವಿಧ ಅಪರಾಧಗಳಿಗಾಗಿ ಐದು ಜೀವಾವಧಿ ಶಿಕ್ಷೆಯನ್ನು ನೀಡಲಾಗಿದೆ. ಜೀವಾವಧಿ ಶಿಕ್ಷೆ ಎಂದರೆ ಅಪರಾಧಿ ತನ್ನ ಸಹಜ ಜೀವನ ಪಯರ್ಂತ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ 6 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಮೇಲ್ ಮಾಡಿದ ಯುವ ನಟಿಯ ಬಂಧನ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಸಿಎಂ ಪಿಣರಾಯಿ ವಿಜಯನ್, ಮಕ್ಕಳ ದಿನದಂದು ಪ್ರಕರಣದಲ್ಲಿ ನೀಡಿದ ಶಿಕ್ಷೆಯನ್ನು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ಬಲವಾದ ಎಚ್ಚರಿಕೆಯಾಗಿದೆ. ಪಾಲಕರು ಅನುಭವಿಸಿದ ನೋವನ್ನು ಯಾವುದೂ ತುಂಬಲು ಸಾಧ್ಯವಿಲ್ಲ. ಸರ್ಕಾರವು ಅವರಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಒಂದೇ ತಿಂಗಳಲ್ಲಿ ತನಿಖೆ ಪೂರ್ಣಗೊಂಡಿದೆ. ಘಟನೆಯ ನಂತರ 100ನೇ ದಿನದಂದು ಆರೋಪಿಗೆ ಶಿಕ್ಷೆ ವಿಧಿಸಲಾಯಿತು. ಚಾರ್ಜ್ ಶೀಟ್‍ನಲ್ಲಿ ಎಲ್ಲಾ 16 ಅಪರಾಧಗಳಲ್ಲಿ ಆಲಂ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿದೆ. 16ರಲ್ಲಿ ಐದು ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತದೆ ಎಂದು ಪ್ರಾಸಿಕ್ಯೂಷನ್ ಈ ಹಿಂದೆ ಹೇಳಿತ್ತು.

    ಏನಿದು ಪ್ರಕರಣ?
    ಜುಲೈ 28 ರಂದು ಆಲುವಾ ಎಂಬಲ್ಲಿ ಮನೆಯಲ್ಲಿದ್ದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಬಳಿಕ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು. ನಂತರ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಬಾಲಕಿಯ ಶವವನ್ನು ಬಣವೆಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಅಪರಾಧಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ಬೆಂಕಿ ಹಚ್ಚಿ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ – ಇಬ್ಬರ ಬಂಧನ

  • ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ನವದೆಹಲಿ: ಕತಾರ್‌ನಲ್ಲಿ (Qatar) ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ (Former Navy Personnel) 8 ಮಂದಿ ಮಾಜಿ ಸಿಬ್ಬಂದಿ ಕುಟುಂಬಸ್ಥರನ್ನು ವಿದೇಶಾಂಗ ಸಚಿವ ಎಸ್.‌ ಜೈಶಂಕರ್‌ (Jaishankar) ಭೇಟಿಯಾದರು.

    ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್‌, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈಶಂಕರ್‌, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

    ಕತಾರ್‌ನಲ್ಲಿ 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಗುರುವಾರ ಕತಾರ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ. ಸಿಬ್ಬಂದಿ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿತ್ತು. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

    ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

    10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

    ಜೈಪುರ: 10 ವರ್ಷದ ಬಾಲಕಿಯ (Girl) ಮೇಲೆ ಅತ್ಯಾಚಾರವೆಸಗಿ ಅಮಾನುಷವಾಗಿ ಕೊಲೆ ಮಾಡಿದ್ದ ವ್ಯಕ್ತಿಗೆ ರಾಜಸ್ಥಾನದ (Rajasthan) ಪಾಲಿ ಜಿಲ್ಲೆಯ ನ್ಯಾಯಾಲಯ (Court) ಮರಣದಂಡನೆ ವಿಧಿಸಿದೆ.

    ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಉಮಾರ್ ಈ ತೀರ್ಪನ್ನು ನೀಡಿದ್ದಾರೆ. ಅತ್ಯಾಚಾರಿ ನರ್ಪತ್ ಸಿಂಗ್(22)ಗೆ ಮರಣದಂಡನೆ ಜೊತೆಗೆ 1 ಲಕ್ಷ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ.

    ಜನವರಿಯಲ್ಲಿ ನರ್ಪತ್ ಸಿಂಗ್ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕತ್ತು ಹಿಸುಕಿ, ಕೋಲಿನಿಂದ ಹೊಡೆದು ಕೊಂದಿದ್ದ. ಇದಾದ ಬಳಿಕ ಆಕೆಯ ಮೃತ ದೇಹವು ಬಾವಿಯಲ್ಲಿ ಪತ್ತೆಯಾಗಿತ್ತು. ಇದನ್ನೂ ಓದಿ: ಹಾವು ಹಿಡಿದು ಪ್ರದರ್ಶನ – ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು

    ಈ ಸಂಬಂಧ ಫೆಬ್ರವರಿಯಲ್ಲಿ ಆತನ ವಿರುದ್ಧ ಚಾರ್ಜ್‍ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಇದೀಗ ಪೋಕ್ಸೋ ಕಾಯ್ದೆಯಡಿಯಲ್ಲಿ ನ್ಯಾಯಾಲಯವು ನರ್ಪತ್ ಸಿಂಗ್‍ನನ್ನು ಅಪರಾಧಿ ಎಂದು ಘೋಷಿಸಿ, ಆತನಿಗೆ ಮರಣದಂಡನೆಯನ್ನು ವಿಧಿಸಿದೆ. ಇದನ್ನೂ ಓದಿ: ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ

    Live Tv
    [brid partner=56869869 player=32851 video=960834 autoplay=true]

  • ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ ಮಾಡಿದೆ.

    ಬುರ್ಹಾನ್‌ವಾನಿ ಎನ್‌ಕೌಂಟರ್ ಆದ 30 ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದ್ದರು ಹಾಗೂ ನಾನು ಅಪರಾಧಿ ಅಲ್ಲ ಎಂಬ ಕಾರಣಕ್ಕೆ ನನಗೆ ಹೇಳಿಕೆ ನೀಡಲು ಭಾರತ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,

    1994ರಲ್ಲಿ ನಾನು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೆ. ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

    ನಾನು ಈ ಹಿಂದೆ 7 ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ. ಕಳೆದ 24 ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆ ಅಥವಾ ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಭಾರತೀಯ ಗುಪ್ತಚರ ಇಲಾಖೆಗೆ ಸವಾಲು ಹಾಕಿದ್ದಾನೆ. ಇದನ್ನೂ ಓದಿ: ಶೂಟೌಟ್‍ಗೂ ಮೊದಲೇ ಇನ್‍ಸ್ಟಾಗ್ರಾಮ್‍ನಲ್ಲಿ ಗನ್‍ಗಳ ಚಿತ್ರ ಪೋಸ್ಟ್ ಮಾಡಿದ್ದ ಆರೋಪಿ

    ನಾನು ರಾಜಕೀಯದಿಂದ ನಿವೃತ್ತಿ ಹೊಂದಿ, ಮರಣದಂಡನೆಯನ್ನು ಸ್ವೀಕರಿಸುತ್ತೇನೆ ಎಂದು ಮಲಿಕ್ ಹೇಳಿದ್ದಾನೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆ ಎನ್‌ಐಎ ಕೋಟ್ ಅವರನ್ನು ದೋಷಿ ಎಂದು ಘೋಷಿಸಿದೆ. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು.

  • ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

    ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

    ಅಹ್ಮದಾಬಾದ್ : ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣ ದಂಡನೆ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಗೊತ್ತುಪಡಿಸಿದ ವಿಶೇಷ ನ್ಯಾಯಲಯ ಇಂದು ಈ ಆದೇಶ ನೀಡಿದೆ.

    ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕಾಯಿದೆ ( UAPA ) ಮತ್ತು ಭಾರತೀಯ ದಂಡ ಸಂಹಿತೆ 302ರ ಅಡಿಯಲ್ಲಿ ತೀರ್ಪು ಪ್ರಕಟಿಸಿದ ನ್ಯಾ. ಎ.ಆರ್ ಪಟೇಲ್, ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದರು. ಇನ್ನು ಸ್ಫೋಟದಲ್ಲಿ ಮೃತಪಟ್ಟವರಿಗೆ 1 ಲಕ್ಷ ರೂ. ಗಂಭೀರ ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ಅಪ್ರಾಪ್ತರಿಗೆ 25,000 ರೂಪಾಯಿ ಪರಿಹಾರವನ್ನು ನೀಡುವಂತೆ ಸೂಚಿಸಿದ್ದಾರೆ.

    ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಅಪರಾಧಿ ಮತ್ತು ಮರಣದಂಡನೆ ಶಿಕ್ಷೆಗೆ ಒಳಗಾದವರ ಪೈಕಿ ಉಸ್ಮಾನ್ ಅಗರಬತ್ತಿವಾಲಾನಿಗೆ ಹೆಚ್ಚುವರಿಯಾಗಿ ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಶಿಕ್ಷೆಗಾಗಿ ಒಂದು ವರ್ಷ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ

    ಐಪಿಸಿ, ಯುಎಪಿಎ, ಸ್ಫೋಟಕ ವಸ್ತುಗಳ ಕಾಯಿದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಪ್ರತಿ ಸೆಕ್ಷನ್ ಅಡಿಯಲ್ಲಿ 49 ಅಪರಾಧಿಗಳಲ್ಲಿ ಪ್ರತಿಯೊಬ್ಬರಿಗೂ ನೀಡಲಾದ ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ, ನ್ಯಾಯಾಲಯವು 48 ಅಪರಾಧಿಗಳಿಗೆ ತಲಾ 2.85 ಲಕ್ಷ ರೂ. ಅಗರಬತ್ತಿವಾಲಾಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಹೆಚ್ಚುವರಿ ಶಿಕ್ಷೆಯೊಂದಿಗೆ 2.88 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

    ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದನ್ನೂ ಓದಿ: ಹಿಜಬ್ ಬಳಿಕ ಸಿಂಧೂರ ವಿವಾದ – ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ