Tag: ಮರಳು ಕಲಾಕೃತಿ

  • ದಿ.ಲತಾ ಮಂಗೇಶ್ಕರ್‌ಗೆ ಮರಳು ಕಲಾಕೃತಿ ಅರ್ಪಿಸಿದ ಸುದರ್ಶನ್ ಪಟ್ನಾಯಕ್

    ದಿ.ಲತಾ ಮಂಗೇಶ್ಕರ್‌ಗೆ ಮರಳು ಕಲಾಕೃತಿ ಅರ್ಪಿಸಿದ ಸುದರ್ಶನ್ ಪಟ್ನಾಯಕ್

    ಮುಂಬೈ: ಖ್ಯಾತ ಮರಳು ಕಲಾಕೃತಿಗಾರ ಸುದರ್ಶನ್ ಪಟ್ನಾಯಕ್ ಅವರು ದಿವಂಗತ ಲತಾ ಮಂಗೇಶ್ಕರ್ ಅವರಿಗೆ ಸುಂದರವಾದ ಮರಳು ಕಲಾಕೃತಿಯನ್ನು ಅರ್ಪಿಸಿದ್ದಾರೆ.

    ಸಂಗೀತ ದಂತಕಥೆ ಲತಾ ಮಂಗೇಶ್ಕರ್ ಅವರ ಶಾಶ್ವತ ಸ್ಮರಣೆಯನ್ನು ಗೌರವಿಸಲು, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ದಿವಂಗತ ಗಾಯಕಿಯ ಸುಂದರವಾದ ಮರಳು ಕಲಾಕೃತಿಯನ್ನು ರಚಿಸಿದ್ದಾರೆ. ಕಲಾಕೃತಿಯಲ್ಲಿ ಲತಾ ಮಂಗೇಶ್ಕರ್‍ಗೆ ಪಟ್ನಾಯಕ್ ಅವರು ಬಿಳಿ ಸೀರೆಯನ್ನುಡಿಸಿ ಸೀರೆಯ ಬಾರ್ಡರ್‌ಗೆ ಚಿನ್ನದ ಬಣ್ಣವನ್ನು ಬಳಿದಿದ್ದಾರೆ. ಸಂಗೀತಕ್ಕೆ ಸಂಬಂಧಿಸಿದ ಅಕ್ಷರಗಳೊಂದಿಗೆ ಲತಾ ಅವರ ಮೇಲೆ ಭಾರತದ ಧ್ವಜವನ್ನು ಹಾರಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

    ಕಲಾಕೃತಿಯ ಜೊತೆಗೆ, ಸುದರ್ಶನ್ ಅವರು “ಮೇರಿ ಆವಾಜ್ ಹೈ ಪೆಹೆಚಾನ್ ಹೈ” ಎಂದು ಬರೆದಿದ್ದು, ಇದು ಲತಾ ಅವರ ಧ್ವನಿಯ ಶಕ್ತಿಯನ್ನು ಸಂಕೇತಿಸುತ್ತದೆ. ಸುದರ್ಶನ್ ಪಟ್ನಾಯಕ್ ಅವರು 16 ವರ್ಷಗಳಿಂದ ತಮ್ಮ ಮರಳು ಕಲೆಯನ್ನು ರಚಿಸುತ್ತಿದ್ದಾರೆ. ಅವರ ಅನೇಕ ಮರಳು ಶಿಲ್ಪಗಳು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್‍ನಲ್ಲಿ ಸ್ಥಾನ ಪಡೆದಿವೆ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

    ಭಾರತದ ಗಾನ ಕೋಗಿಲೆ ಎಂದೇ ಹೆಸರಾಗಿದ್ದ ಲತಾ ಮಂಗೇಶ್ಕರ್ ಅವರು ಜನವರಿಯಲ್ಲಿ ಕೋವಿಡ್ -19 ಮತ್ತು ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 8 ರಂದು, 92 ವರ್ಷ ವಯಸ್ಸಿನ ಗಾಯಕಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್‍ನಿಂದ ಚೇತರಿಸಿಕೊಂಡ ನಂತರವೂ, ಶನಿವಾರ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ನಿನ್ನೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೂಡ ಮುಂಬೈಗೆ ತೆರಳಿದ್ದರು.

  • ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಭುವನೇಶ್ವರ: ವಿಶ್ವದೆಲ್ಲೆಡೆ ಇಂದು ಕ್ರಿಸ್‌ಮಸ್‌ ಸಂಭ್ರಮ ಮನೆಮಾಡಿದೆ. ಈ ನಡುವೆ ಕಲಾವಿದರೊಬ್ಬರು ತಮ್ಮ ವಿಶಿಷ್ಟ ಕಲೆಯ ಮೂಲಕ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಶುಭಾಶಯ ತಿಳಿಸಿದ್ದಾರೆ.

    ಹೌದು, ಅಂತಾರಾಷ್ಟ್ರೀಯ ಮರಳು ಶಿಲ್ಪ ಕಲಾವಿದ ಸುದರ್ಶನ್‌ ಪಾಟ್ನಾಯಕ್‌ ಅವರು, ಪುರಿ ಕಡಲ ತೀರದಲ್ಲಿ ಸುಮಾರು 5,400 ಗುಲಾಬಿಗಳನ್ನು ಬಳಸಿ ಸಂತಾ ಕ್ಲಾಸ್‌ ಅವರ ಕಲಾಕೃತಿ ರೂಪಿಸಿ ಗಮನ ಸೆಳೆದಿದ್ದಾರೆ. ಆ ಮೂಲಕ ಕ್ರೈಸ್ತ ಬಾಂಧವರಿಗೆ ವಿಶಿಷ್ಟ ರೀತಿಯಲ್ಲಿ ಕ್ರಿಸ್‌ಮಸ್‌ ಶುಭಕೋರಿದ್ದಾರೆ. ಇದನ್ನೂ ಓದಿ: ಕೊರೊನಾ ಟೈಮ್ ನಲ್ಲಿ ನೀವು ಮಾಡಿದ ಕೆಲಸಕ್ಕೆ ಹ್ಯಾಂಡ್ ಸಾಫ್ ಎಂದ ರಚಿತಾ

    ಕೆಂಪು ಹಾಗೂ ಬಿಳಿ ಗುಲಾಬಿ ಹೂಗಳನ್ನು ಬಳಸಿಕೊಂಡು ಸಮುದ್ರ ತೀರದ ಮರಳಿನಲ್ಲಿ ಸಂತಾ ಕ್ಲಾಸ್‌ ಕಲಾಕೃತಿ ಮೂಡಿಸಿದ್ದಾರೆ. ಜೊತೆಗೆ ʼಕ್ರಿಸ್‌ಮಸ್‌ ಶುಭಾಶಯಗಳು, ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸಿʼ ಎಂಬ ಸಾಲುಗಳನ್ನು ಬರೆದು ವಿಶ್‌ ಮಾಡಿದ್ದಾರೆ.

    ಸುಮಾರು 28 ಅಡಿ ಅಗಲ ಮತ್ತು 50 ಅಡಿ ಉದ್ದದಲ್ಲಿ ಸಂತಾ ಕ್ಲಾಸ್‌ ಅವರ ಕಲಾಕೃತಿ ಮೂಡಿಬಂದಿದೆ. ಈ ಕಲಾಕೃತಿಯನ್ನು ರೂಪಿಸಲು ಸುದರ್ಶನ್‌ ಅವರು ಸುಮಾರು 8 ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಮರಳು ಶಿಲ್ಪ ಕಲಾಸಂಸ್ಥೆಯ ಸಹಕಾರವನ್ನೂ ಪಡೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಕೊರೊನಾ ಸಾಂಕ್ರಾಮಿಕ ಇಡೀ ವಿಶ್ವವನ್ನು ವ್ಯಾಪಿಸಿ ಸಂಕಷ್ಟ ಉಂಟುಮಾಡಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೂ ನಾವು ಹಬ್ಬ ಆಚರಣೆಗಳನ್ನು ಮಾಡುತ್ತಿದ್ದೇವೆ. ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸುವಂತೆ ಕಲಾಕೃತಿ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ. ಈ ಕಲಾಕೃತಿಯು ದಾಖಲೆ ಪುಸ್ತಕದಲ್ಲಿ ಹೆಸರಾಗುತ್ತದೆ ಎಂದು ಕಲಾವಿದ ಸುದರ್ಶನ್‌ ಪ್ರತಿಕ್ರಿಯಿಸಿದ್ದಾರೆ.

  • ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ.

    ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೊಂಕಿತರು ಹಾಗೂ ಪ್ರಾಥಮಿಕ ಹಂತದಕ್ಕೆ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೋರದು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ಕೋವಿಡ್-19 ರೋಗಿಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ ಪೌರಕಾರ್ಮಿಕರು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಇತರೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದಾರೆ. ಮಾಧ್ಯಮದವರು ಕೊರೊನಾ ವಿರುದ್ದ ಹೋರಾಟದಲ್ಲಿ ಸಕ್ರಿಯವಾಗಿವ ಭಾಗವಹಿಸಿ ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ
    ಕೇಂದ್ರ ಸರ್ಕಾರದ ನಿಯಮಗಳಂತೆ ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಹಾಗೂ ಅಗತ್ಯ ವಸ್ತುಗಳು ನಿರ್ಮಿಸುವ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರಿಣಾಮಗಳನ್ನು ಅವಲೋಕಿಸಿ ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದರು.

    ಹುಬ್ಬಳ್ಳಿ ಕಂಟ್ಯಾಮಿನೇಟೆಡ್ ಜೋನ್ ಹೊರತು ಪಡಿಸಿ ಬೇರೆ ಸ್ಥಳ ಹಾಗೂ ಧಾರವಾಡ ಬೇಲೂರಿನಲ್ಲಿ ಕೈಗಾರಿಕೆಗಳನ್ನು ತೆರೆದು ಆರ್ಥಿಕ ಚಟುವಟಿಕೆಗಳು ಪಾರಂಭವಾಗಲಿ ಎಂಬ ಆಶಯ ಸರ್ಕಾರಕ್ಕೆ ಇದೆ. ಕಂಟ್ಯಾಮಿನೇಟೆಡ್ ಜೋನ್‍ನ ಕೊವೀಡ್-19 ರೋಗಿಯ ವರದಿ ನೆಗೆಟಿವ್ ಬಂದರೆ ಅಲ್ಲಿಯೂ ಉದ್ಯಮೆಗಳನ್ನು ತೆರೆಯಬಹುದು ಎಂಬ ಆಶಯ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಅಬ್ಬಯ್ಯ ಪ್ರಸಾದ್, ಶ್ರೀನಿವಾಸ ಮಾನೆ, ಎಸ್.ವಿ ಸಂಕನೂರ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.