Tag: ಮರಳು ಸಾಗಣೆ

  • ಮನೆ ಮುಂದೆ ಮಲಗಿದ್ದವನ ಮೇಲೆ ಹರಿದ ಟಿಪ್ಪರ್: ಯುವಕ ಸ್ಥಳದಲ್ಲೇ ಸಾವು

    ಮನೆ ಮುಂದೆ ಮಲಗಿದ್ದವನ ಮೇಲೆ ಹರಿದ ಟಿಪ್ಪರ್: ಯುವಕ ಸ್ಥಳದಲ್ಲೇ ಸಾವು

    ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ಮರಳು ಸಾಗಣೆ ಟಿಪ್ಪರ್ ಹರಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಮಾರುತಿ (19) ಮೃತ ಯುವಕ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂಭಾಗದಲ್ಲಿ ಮಲಗಿದ್ದ ಮಾರುತಿ ಟಿಪ್ಪರ್‌ಗೆ ಬಲಿಯಾಗಿದ್ದಾನೆ. ಹೊಲದಲ್ಲೆ ಮನೆ ಮಾಡಿಕೊಂಡು ಮಾರುತಿ ಕುಟುಂಬ ಕೃಷಿ ಕೆಲಸ ಮಾಡಿಕೊಂಡಿತ್ತು. ಇವರ ಮನೆ ಎದುರೇ ಮರಳು ಸಂಗ್ರಹಣೆ ಅಡ್ಡಾ ಇದ್ದು, ಹಗಲು ರಾತ್ರಿ ಮರಳು ಸಾಗಣೆ ನಡೆಯುತ್ತದೆ. ನಿನ್ನೆ ರಾತ್ರಿ ಮರಳು ಲೋಡ್ ಬಂದಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟ

    ಮಂಜುನಾಥ್ ಹಾಗೂ ಹನುಮಂತ್ ಎನ್ನುವವರು ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಹೊರಗಡೆ ಮಲಗಿದ್ದ ಮಾರುತಿ ಮೇಲೆ ರಾತ್ರಿ ಬಂದ ಟಿಪ್ಪರ್ ಹರಿದು ದುರ್ಘಟನೆ ನಡೆದಿದೆ. ಮಾರುತಿ ಸಾವು ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಮಗಿನ್ನೂ ಅವಕಾಶವಿದೆ: ಹಿಜಬ್‌ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿ

  • ಅಕ್ರಮ ಮರಳು ಸಾಗಾಣಿಕೆ ಪ್ರಕರಣ- ಚಾಮರಾಜನಗರ ಡಿವೈಎಸ್‍ಪಿ ಮೋಹನ್ ಅಮಾನತು

    ಅಕ್ರಮ ಮರಳು ಸಾಗಾಣಿಕೆ ಪ್ರಕರಣ- ಚಾಮರಾಜನಗರ ಡಿವೈಎಸ್‍ಪಿ ಮೋಹನ್ ಅಮಾನತು

    ಚಾಮರಾಜನಗರ: ಅಕ್ರಮವಾಗಿ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್‍ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಡಿವೈಎಸ್‍ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆಎಸ್‍ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ.ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

    ಮೇ 15ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೂಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ತಿಳಿದು ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್‍ಸ್ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ, ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.

    ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಧಿಕಾರಿಗಳಿಗೆ ತಿಳಿದರೆ ತೊಂದರೆಯಾಗುತ್ತದೆ ಎಂದು ಟಿಪ್ಪರ್‍ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ.ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್‍ಸ್ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್‍ಸ್ಪೆಕ್ಟರ್ ಎಸ್.ಪಿ.ಸುನೀಲ್ ಹಾಗೂ ಹೆಡ್ ಕಾನ್‍ಸ್ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.

    ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಮೇ 25ರಂದು ವರದಿ ಸಲ್ಲಿಸಿದ್ದರು. ಈ ವರದಿ ಅನುಸಾರ ಇದೀಗ ಡಿವೈಎಸ್‍ಪಿ ಜೆ.ಮೋಹನ್ ಅವರನ್ನು ಅಮನತುಪಡಿಸಲಾಗಿದೆ.