Tag: ಮರಾಠ

  • ಬಿಜೆಪಿ, ಕಾಂಗ್ರೆಸ್‍ಗೆ ಮರಾಠಿಗರ ಖಡಕ್ ವಾರ್ನಿಂಗ್

    ಬಿಜೆಪಿ, ಕಾಂಗ್ರೆಸ್‍ಗೆ ಮರಾಠಿಗರ ಖಡಕ್ ವಾರ್ನಿಂಗ್

    ಬೀದರ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಮರಾಠಿಗರಿಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಮರಾಠ ಮುಖಂಡರು (Marathi leadears) ಬೀದರ್‌ನಲ್ಲಿ  (Bidar) ಎರಡೂ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗೋಷ್ಠಿ ನಡೆಸಿದ ಮರಾಠ ಮುಖಂಡರು, ಬಿದರ್‌ನಲ್ಲಿ 2.5 ಲಕ್ಷ ಮತದಾರರಿದ್ದಾರೆ. ಕರ್ನಾಟಕದಲ್ಲಿ 50 ಲಕ್ಷ ಅಧಿಕ ಮರಾಠ ಮತದಾರರಿದ್ದಾರೆ. ಆದ್ದರಿಂದ ಭಾಲ್ಕಿ ಮತ್ತು ಬಸವಕಲ್ಯಾಣದಲ್ಲಿ ಮರಾಠ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ಮರಾಠಿಗೆ ಟಿಕೆಟ್ ನೀಡದಿದ್ದರೆ ಸ್ವಾತಂತ್ರ್ಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬರುವುದೇ ಗ್ಯಾರಂಟಿಯಿಲ್ಲ, ಇನ್ನು ಗ್ಯಾರಂಟಿ ಕಾರ್ಡ್‌ನಿಂದ ಏನು ಉಪಯೋಗ?-ಆರ್.ಅಶೋಕ್

    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B.S.Yediyurappa), ಮರಾಠಿಗರಿಗೆ 2ಎ ಮೀಸಲಾತಿ ಕೊಡುತ್ತೇವೆ ಎಂದಿದ್ದರು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಬಂದರೂ ಮೀಸಲಾತಿ ಸಿಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ

  • ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

    ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

    ಬೆಳಗಾವಿ: ಮರಾಠಾ (Marathas) ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ (Kannadigas) ಮರೆತರಾ ಬೆಳಗಾವಿ (Belagavi) ರಾಜಕಾರಣಿಗಳು ಎಂಬುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ ಶುರುವಾಗಿದೆ. ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರನ್ನು ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಬೆಳಗಾವಿ ತಾಲೂಕಿನ 3 ಕ್ಷೇತ್ರದಲ್ಲಿ ಮರಾಠಾ ಮತಗಳ ಓಲೈಕೆಗೆ ‘ಪ್ರತಿಮೆ’ ಪಾಲಿಟಿಕ್ಸ್ ನಡೆಯುತ್ತಿದೆ. ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಾ ಮತಗಳನ್ನು ಸೆಳೆಯಲು ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ನಾನಾ ಕಸರತ್ತು ನಡೆಸಿದ್ದಾರೆ. ಬಿಜೆಪಿ-ಕಾಂಗ್ರೆಸ್ ಮಧ್ಯೆ ಮರಾಠಾ ಮತಗಳ ಓಲೈಕೆಗೆ ಪೈಪೋಟಿ ನಡೆಯುತ್ತಿದ್ದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಗೆ ಪೈಪೋಟಿ ನಡೆಯುತ್ತಿದೆ.

    ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಮಧ್ಯೆ ಕ್ರೆಡಿಟ್ ಫೈಟ್ ಜೋರಾಗಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಇತ್ತಿಚೆಗೆ ಬಿಜೆಪಿ ಶಾಸಕ ಅನಿಲ್ ಬೆನಕೆ ಸಂಭಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಿದ್ದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಿವಚರಿತ್ರೆ ಉದ್ಘಾಟನೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ತಯಾರಿ ಮಾಡಿಕೊಂಡಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಕಲಾಕೃತಿ ಮೂಲಕ ಪರಿಚಯಿಸುವ ಧ್ವನಿ ಬೆಳಕಿನ ಕಾರ್ಯಕ್ರಮ ಶಿವಚರಿತ್ರೆ ಉದ್ದೇಶವನ್ನು ಶಾಸಕ ಅಭಯ್ ಪಾಟೀಲ್ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

    ಪೀರನವಾಡಿಯಲ್ಲಿ ಹೋರಾಟ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ವರ್ಷಗಳೇ ಕಳೆದು ಹೋದವು. ಇತ್ತ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಮೂರ್ತಿಯನ್ನು ಕಳೆದ 2008ರಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ವಿಶ್ವಗುರು ಬಸವಣ್ಣ ಪುತ್ಥಳಿ ಅಧಿಕೃತವಾಗಿ ಲೋಕಾರ್ಪಣೆ ಕಂಡಿಲ್ಲ. 2008ರಲ್ಲಿ ಅಭಯ್ ಪಾಟೀಲ್ ಶಾಸಕರಾಗಿದ್ದಾಗ ಸ್ವಂತ ಖರ್ಚಿನಲ್ಲಿ ಬಸವಣ್ಣ ಮೂರ್ತಿ ಪ್ರತಿಷ್ಠಾನೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿ 4, ರಾಜ್ಯಹೆದ್ದಾರಿ ಮಧ್ಯೆ ವೃತ್ತದಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ಲೋಕಾರ್ಪಣೆಗೊಂಡಿಲ್ಲ.

    ಬೆಳಗಾವಿ ರಾಜಕಾರಣಿಗಳ ನಡೆಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ‘ಜಾನಿ ಜಾನಿ ಎಸ್ ಪಪ್ಪಾ.. ಬೆಳಗಾವಿ ಅಭಿವೃದ್ಧಿ ನೋ ಪಪ್ಪಾ.. ಇಲ್ಲಿ ಬರೀ ಮರಾಠಿಗರ ಓಲೈಕೆ ಹಾ.. ಹಾ..’ ಎಂದು ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇದೆ. ಆದರೆ ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಹಾರಾಷ್ಟ್ರದಿಂದ 10 ಕೋಟಿ, ಮರಾಠಿ ದ್ವೇಷ ಬಿಡಿ – ಯತ್ನಾಳ್‌

    ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಹಾರಾಷ್ಟ್ರದಿಂದ 10 ಕೋಟಿ, ಮರಾಠಿ ದ್ವೇಷ ಬಿಡಿ – ಯತ್ನಾಳ್‌

    ಬೆಂಗಳೂರು: ಮುಂಬೈ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

    ಈ ಸಂಬಂಧ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ. ಏಕೆಂದರೆ ಶೃಂಗೇರಿ ಮಠವನ್ನು ಟಿಪ್ಪು ಸುಲ್ತಾನನ ಅತಿಕ್ರಮಣದಿಂದ ಕಾಪಾಡಿದ್ದು ಮರಾಠರು. ಶ್ರೀರಂಗಪಟ್ಟಣಕ್ಕೆ ಟಿಪ್ಪು ಸುಲ್ತಾನ್ ಲೂಟಿ ಮಾಡಿ ಅಲ್ಲಿ ಇದ್ದ ಜನರನ್ನು ನಿರ್ದಯವಾಗಿ ಹತ್ಯೆ ಮಾಡುತ್ತಿದ್ದಾಗ ಆಗ ಮರಾಠರು ಬಂದು ಶ್ರೀರಂಗಪಟ್ಟಣವನ್ನು ಕಾಪಾಡಿದರು.

    ಹೈದರಾಲಿ ಚಿತ್ರದುರ್ಗಕ್ಕೆ ಮುತ್ತಿಗೆ ಹಾಕಿದಾಗ ಆಗ ಮರಾಠರು ಬಂದು ಮದಕರಿ ನಾಯಕನಿಗೆ ಸಹಾಯಕ್ಕೆ ಧಾವಿಸುವಾಗ ಮಾರ್ಗ ಮಧ್ಯದಲ್ಲಿ ಹೈದರಾಲಿ ಸೈನಿಕರು ಮರಾಠ ಸೈನಿಕರನ್ನು ತಡೆದಿದ್ದಾರೆ ಹಾಗೂ ಮದಕರಿ ನಾಯಕನ ಸೇನೆಯಲ್ಲಿ ಇದ್ದ ಮುಸಲ್ಮಾನರು ಹೈದರಾಲಿ ಕಡೆಗೆ ಬಂದಿದ್ದಕ್ಕೆ ಅಲ್ಲಿ ಮೋಸ ಆಯಿತು.

    ಹೈದರಾಲಿ ಕುತಂತ್ರದಿಂದ ಜೈಲು ಪಾಲಾದ ರಾಜಮಾತೆಗೆ ಸಹಾಯ ಮಾಡಿದ್ದು ಮರಾಠರು ಹಾಗೂ ಮೈಸೂರು ರಾಜಮನೆತನಕ್ಕೆ ಮತ್ತೆ ಅಧಿಕಾರ ಸಿಗುವಂತೆ ಸಹಾಯ ಮಾಡಿದ್ದು ಮರಾಠರು.

    ಟಿಪ್ಪು ಸುಲ್ತಾನ್ ಬೆಂಗಳೂರಿನಲ್ಲಿ ಪಾಳೆಯಗಾರರನ್ನು ಹತ್ಯೆ ಮಾಡುತ್ತಿದ್ದಾಗ ಆಗ ಮರಾಠರು ಬಂದು ಕಾಪಾಡಿದರು. ಧಾರವಾಡಕ್ಕೆ ಟಿಪ್ಪು ಸುಲ್ತಾನ್ ಮುತ್ತಿಗೆ ಹಾಕಿ ಅಲ್ಲಿ ಇದ್ದಬದ್ದ ಜನರನ್ನು ನಿರ್ದಯವಾಗಿ ಹತ್ಯೆ ಮಾಡುತ್ತಿದ್ದಾಗ ಆಗ ಮರಾಠರು ಬಂದು ಕಾಪಾಡಿದರು.

    ಟಿಪ್ಪು ಸುಲ್ತಾನ್ ಮದಕರಿ ನಾಯಕರು ಕಟ್ಟಿಸಿದ ಚಿತ್ರದುರ್ಗದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಠಕ್ಕೆ ಮುತ್ತಿಗೆ ಹಾಕಿ ಆ ದೇವಸ್ಥಾನದ ಆವರಣದಲ್ಲಿ ಇರುವ ಒಂದು ವಿಗ್ರಹವನ್ನು ಧ್ವಂಸ ಮಾಡಿದ್ದಾನೆ ಹಾಗೂ ಮದಕರಿ ನಾಯಕ ನಿರ್ಮಿಸಿದ ನಾಯಕನಹಟ್ಟಿ ಕೆರೆಗೆ ವಿಷ ಹಾಕಿ ಅಲ್ಲಿ ಇದ್ದಬದ್ದ ಜನರನ್ನು ನಿರ್ದಯವಾಗಿ ಹತ್ಯೆ ಮಾಡುತ್ತಿದ್ದನು. ಆದರೆ ಈ ಸತ್ಯ ಬಹಳ ಜನರಿಗೆ ಗೊತ್ತಿರಲಿಕ್ಕಿಲ್ಲ. ಏಕೆಂದರೆ ಇತಿಹಾಸವನ್ನು ತಿರುಚಿ ಬರೆದ ಸುಳ್ಳು ಇತಿಹಾಸವನ್ನು ನಮ್ಮ ಜನರು ನಂಬಿದ್ದಾರೆ. ಇದು ನಮ್ಮ ದುರಂತ.

    ಮುಂಬೈ ನ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಅದಕ್ಕೆ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ.

  • ಮಹಾರಾಷ್ಟ್ರದ ಮರಾಠ ಮೀಸಲು ಹೋರಾಟಕ್ಕೆ ಬೆಂಬಲ ಸೂಚಿಸಿ ವ್ಯಕ್ತಿ ಆತ್ಮಹತ್ಯೆ

    ಮಹಾರಾಷ್ಟ್ರದ ಮರಾಠ ಮೀಸಲು ಹೋರಾಟಕ್ಕೆ ಬೆಂಬಲ ಸೂಚಿಸಿ ವ್ಯಕ್ತಿ ಆತ್ಮಹತ್ಯೆ

    ಮುಂಬೈ: ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ.

    ಪ್ರಮೋದ್ ಜೈಸಿಂಗ್ ಹೋರೆ (35) ಆತ್ಯಹತ್ಯೆ ಮಾಡಿಕೊಂಡ ವ್ಯಕ್ತಿ. ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿಗಾಗಿ ಒತ್ತಾಯಿಸಿ, ಪ್ರಮೋದ್ ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಭಾನುವಾರವಷ್ಟೇ ಮೃತ ಪ್ರಮೋದ್, ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒತ್ತಾಯಿಸಿ ಬೆಂಬಲ ಸೂಚಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ಫೇಸ್‍ಬುಕ್ ಮತ್ತು ವಾಟ್ಸಪ್ ನಲ್ಲಿ ಬರೆದುಕೊಂಡಿದ್ದ ಎಂದು ಮುಕುಂಗ್‍ವಾಡಿ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನಾಥಾ ಜಾಧವ್ ತಿಳಿಸಿದ್ದಾರೆ.

    ಭಾನುವಾರ ರಾತ್ರಿ ಮುಕುಂದವಾಡಿ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಮೋದ್ ಮಹಾರಾಷ್ಟ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಮೋದ್ ಆತ್ಮಹತ್ಯೆಗೂ ಮುನ್ನ ತನ್ನ ಫೇಸ್‍ಬುಕ್ ಹಾಗೂ ವಾಟ್ಸಪ್ ಗಳಲ್ಲಿ “ಇಂದು ಮರಾಠ ಸಮುದಾಯದ ಒಬ್ಬರು ಹೋಗುತ್ತಿದ್ದಾರೆ. ಮರಾಠ ಸಮುದಾಯಕ್ಕೆ ಮೀಸಲಾತಿ ಕೊಡಿ. ಮರಾಠ ಮೀಸಲಾತಿ ಒಂದು ಜೀವವನ್ನು ತೆಗೆದುಕೊಳ್ಳುತ್ತದೆ” ಎಂದು ಬರೆದುಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಈ ಪೋಸ್ಟ್ ನೋಡಿ ಹಲವಾರು ಸ್ನೇಹಿತರು ಪ್ರಮೋದ್ ಬಳಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಮರುದಿನ ಪ್ರಮೋದ್ ಶವ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.