Tag: ಮರುಪಾವತಿ

  • ಏರ್ ಇಂಡಿಯಾಗೆ 1,000 ಕೋಟಿ ಮರುಪಾವತಿ, ದಂಡ ಪಾವತಿಸಲು ಅಮೆರಿಕ ಆದೇಶ

    ಏರ್ ಇಂಡಿಯಾಗೆ 1,000 ಕೋಟಿ ಮರುಪಾವತಿ, ದಂಡ ಪಾವತಿಸಲು ಅಮೆರಿಕ ಆದೇಶ

    ವಾಷಿಂಗ್ಟನ್: ಟಾಟಾ ಗ್ರೂಪ್ಸ್ (Tata-Group) ಒಡೆತನದ ಏರ್ ಇಂಡಿಯಾಗೆ (Air India)  ಮರುಪಾತಿ (Refund) ಹಾಗೂ ದಂಡವಾಗಿ (Fine) ಅಮೆರಿಕ (America) 121.5 ಮಿಲಿಯನ್ ಡಾಲರ್ (ಸುಮಾರು 987 ಕೋಟಿ ರೂ.) ವಿಧಿಸಿದೆ. ಈ ಮೂಲಕ ಏರ್ ಇಂಡಿಯಾ ಭಾರೀ ನಷ್ಟ ಅನುಭವಿಸಲಿದೆ.

    ಕೋವಿಡ್ ಸಾಂಕ್ರಾಮಿಕ ವೇಳೆಯಲ್ಲಿ ಸಾಕಷ್ಟು ಬಾರಿ ವಿಮಾನ ರದ್ದತಿ ಹಾಗೂ ವಿಮಾನ ಬದಲಾವಣೆ ಮಾಡಿರುವ ಹಿನ್ನೆಲೆ ಏರ್ ಇಂಡಿಯಾ ಸೇರಿದಂತೆ ಒಟ್ಟು 6 ವಿಮಾನಯಾನ ಸಂಸ್ಥೆಗಳಿಗೆ ಅಮೆರಿಕ ಒಟ್ಟು 600 ಮಿಲಿಯನ್ ಡಾಲರ್ (ಸುಮಾರು 4 ಸಾವಿರ ಕೋಟಿ ರೂ.) ಮರುಪಾವತಿ ಮಾಡುವಂತೆ ಹೇಳಿದೆ.

    ವರದಿಗಳ ಪ್ರಕಾರ, ಏರ್ ಇಂಡಿಯಾ ರದ್ದುಗೊಳಿಸಿದ ಹಾಗೂ ವಿಮಾನಗಳನ್ನು ಬದಲಿಸಿದ ಕಾರಣಕ್ಕೆ ಸಲ್ಲಿಸಲಾದ 1,900 ಮರುಪಾವತಿ ದೂರುಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚಿನವುಗಳಿಗೆ ಪ್ರತಿಕ್ರಿಯಿಸಲು 100ಕ್ಕೂ ಹೆಚ್ಚು ದಿನಗಳನ್ನು ತೆಗೆದುಕೊಂಡಿದೆ.

    ಏರ್ ಇಂಡಿಯಾ ವಿಮಾನ ರದ್ದತಿ ಹಾಗೂ ವಿಳಂಬಗೊಳಿಸಿದ್ದಕ್ಕೆ ತಮ್ಮ ಗ್ರಾಹಕರಿಗೆ ಸಕಾಲದಲ್ಲಿ ಮರುಪಾವತಿಯನ್ನು ಮಾಡಿಲ್ಲ. ತಮ್ಮ ಗ್ರಾಹಕರಿಗೆ ಮರುಪಾವತಿ ಮಾಡುವಲ್ಲಿ ತೀವ್ರವಾದ ವಿಳಂಬ ಮಾಡಿರುವುದರಿಂದ ಅವರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಹೀಗಾಗಿ ಸಂಸ್ಥೆಗೆ ದಂಡ ವಿಧಿಸಿರುವುದಾಗಿ ಅಮೆರಿಕದ ಸಾರಿಗೆ ಇಲಾಖೆ ತಿಳಿಸಿದೆ.

    ಏರ್ ಇಂಡಿಯಾದೊಂದಿಗೆ ಫ್ರಾಂಟಿಯರ್, ಟಿಎಪಿ ಪೋರ್ಚುಗಲ್, ಏರೋ ಮೆಕ್ಸಿಕೋ, ಇಐ ಎಐ ಮತ್ತು ಏವಿಯಾಂಕಾ ಸೇರಿದಂತೆ ಇತರ ವಿಮಾನಯಾನ ಸಂಸ್ಥೆಗಳಿಗೆ ದಂಡ ವಿಧಿಸಲಾಗಿದೆ. ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ 121.5 ಮಿಲಿಯನ್ ಡಾಲರ್ ಮರುಪಾವತಿಯೊಂದಿಗೆ 1.4 ಮಿಲಿಯನ್ ಡಾಲರ್ (11 ಕೋಟಿ ರೂ.) ದಂಡವನ್ನು ಪಾವತಿಸಲು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    ಧಾರವಾಡ: ಕೋವಿಡ್-19 ಸೋಂಕಿತರಾಗಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ಶುಲ್ಕವನ್ನು ಮರುಪಾವತಿಸಲು ಧಾರವಾಡ ಜಿಲ್ಲಾಧಿಕಾರಿ ನಿತೆಶ್ ಪಾಟೀಲ್ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

    ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ಶುಲ್ಕದ ಬಗ್ಗೆ ನಿತೇಶ್ ಪಾಟೀಲ್ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ವಿಚಾರಣೆ ನಡೆಸಿ, ವಿವಿಧ ಪ್ರಕರಣಗಳಲ್ಲಿ ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದಿದ್ದ 19 ಲಕ್ಷ ರೂ. ಅನ್ನು ಮರು ಪಾವತಿಸಲು ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಸಹಾಯವಾಣಿ ಕೇಂದ್ರ ಹಾಗೂ ಲಿಖಿತ ದೂರುಗಳ ಮೂಲಕ ದಾಖಲಾಗಿದ್ದ 80 ಪ್ರಕರಣಗಳನ್ನು ದೂರುದಾರರು ಹಾಗೂ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿ, ಈ ಆದೇಶ ನೀಡಿದರು. ಇದನ್ನೂ ಓದಿ: ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ

    ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಳ ಸಂದರ್ಭದಲ್ಲಿ ಚಿಕಿತ್ಸೆಗೆ ಸರ್ಕಾರ ನಿಗದಿ ಪಡಿಸಿದ ಪ್ರಮಾಣದಲ್ಲಿ ಶುಲ್ಕ ವಿಧಿಸಲು ಸೂಚಿಸಲಾಗಿತ್ತು. ಕೋವಿಡ್ ರೋಗಿ ದಾಖಲಾದ ಬಳಿಕ ಅವರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ನಿರ್ದೇಶನ ನೀಡಲಾಗಿತ್ತು. ಕೆಲವು ಆಸ್ಪತ್ರೆಗಳಲ್ಲಿ ಎರಡೂ ಕಡೆಗಳಿಂದಲೂ ಹಣ ಪಡೆಯಲಾಗಿದೆ. ಇದನ್ನೂ ಓದಿ: ಬ್ರಿಟಿಷ್ ಕೌನ್ಸಿಲ್ ಜೊತೆ 3 ವರ್ಷಗಳ ಒಪ್ಪಂದಕ್ಕೆ ಉನ್ನತ ಶಿಕ್ಷಣ ಇಲಾಖೆ ಅಂಕಿತ

    ಈ ಪ್ರಕರಣಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಹುಬ್ಬಳ್ಳಿಯ ರೋಗಿಯೊಬ್ಬರಿಗೆ 4 ಲಕ್ಷ ರೂ., ಸವದತ್ತಿಯ ವ್ಯಕ್ತಿಯೊಬ್ಬರಿಗೆ 92,125 ರೂ. ಹಾಗೂ ಮತ್ತೊಂದು ಪ್ರಕರಣದಲ್ಲಿ 25 ಸಾವಿರ ರೂ. ಅನ್ನು ಮರು ಪಾವತಿಸಲು ಸೂಚಿಸಿದರು. ಖಾಸಗಿ ಆಸ್ಪತ್ರೆಯೊಂದು ಸ್ವಯಂಪ್ರೇರಿತವಾಗಿ 43 ಪ್ರಕರಣಗಳಲ್ಲಿ 14 ಲಕ್ಷ ರೂ. ಪಾವತಿಸಿರುವುದಾಗಿ ಸಭೆಗೆ ಮಾಹಿತಿ ನೀಡಿದಾಗ ಜಿಲ್ಲಾಧಿಕಾರಿಗಳು ಅವರ ಕಾರ್ಯವನ್ನು ಅಭಿನಂದಿಸಿದರು.

  • 1,398 ರೈತರ ಸಾಲ ಪಾವತಿಸಿದ ಅಮಿತಾಭ್ ಬಚ್ಚನ್

    1,398 ರೈತರ ಸಾಲ ಪಾವತಿಸಿದ ಅಮಿತಾಭ್ ಬಚ್ಚನ್

    ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಉತ್ತರ ಪ್ರದೇಶದ 1,398 ರೈತರ 3.99 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಿದ್ದಾರೆ.

    76 ವರ್ಷದ ಅಮಿತಾಭ್ ಈ ಕುರಿತು ತಮ್ಮ ಬ್ಲಾಗ್‍ನಲ್ಲಿ ಮಾಹಿತಿ ನೀಡಿದ್ದು, ಆಯ್ದ 70 ರೈತರಿಗೆ ವೈಯಕ್ತಿಕವಾಗಿ ಬ್ಯಾಂಕ್ ಸಾಲಮರುಪಾವತಿ ಮಾಡಿರುವ ಪತ್ರಗಳನ್ನು ಹಸ್ತಾಂತರಿಸಲು ಮುಂಬೈಗೆ ಬರಲು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿ ಸಿಲುಕಿದ್ದ ಹಲವು ರೈತರಿಗೆ ಸಹಾಯ ನೀಡಿದ್ದು, ಜನ್ಮ ನೀಡಿದ ನೆಲದ ಋಣ ತೀರಿಸಲು ಮುಂದಾಗಿದ್ದಾರೆ.

    ಇದೇ ಮೊದಲಲ್ಲ: ಅಮಿತಾಭ್ ಬಚ್ಚನ್ ರೈತರ ಸಾಲ ಮರು ಪಾವತಿ ಮಾಡಿ ಅವರ ನೆರವಿಗೆ ಧಾವಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ 350 ರೈತರ ಸಾಲವನ್ನು ಪಾವತಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮಿತಾಬ್ ರೈತರ ಹೊರೆ ತಗ್ಗಿಸುವ ಆಸೆಯಿಂದ ಈ ಕೆಲಸಕ್ಕೆ ಮುಂದಾದೆ. ಕೆಲಸ ಪೂರ್ಣವಾದಾಗ ತುಂಬ ನೆಮ್ಮದಿ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದಾರೆ.

    ಇತ್ತ ಒನ್ ಟೈಮ್ ಪೇಮೆಂಟ್ ನೀಡಲು ಸಹಕಾರ ನೀಡಿದ ಬ್ಯಾಂಕ್‍ಗಳಿಗೂ ಅಮಿತಾಭ್ ಕೃತಜ್ಞತೆ ತಿಳಿಸಿದ್ದಾರೆ. ದೇಶದ ಶೇ.50 ರಷ್ಟು ಮಂದಿ ಕೃಷಿಯಲ್ಲಿ ತೊಡಗಿದ್ದು ದೇಶದ ಜಿಡಿಪಿಗೆ ಶೇ.18 ರಷ್ಟು ಕೊಡುಗೆ ನೀಡುತ್ತಿದ್ದಾರೆ. ಆದರೆ ಅವೈಜ್ಞಾನಿಕ ಬೆಲೆ, ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿದ್ದಾರೆ.

    ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಅನ್ವಯ 2011 ರಲ್ಲಿ 14,027, 2012 ರಲ್ಲಿ 13,754 2014ರಲ್ಲಿ 12,360, 2015ರಲ್ಲಿ 12,602 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv