Tag: ಮರ್ಯಾದೆಗೇಡು ಹತ್ಯೆ

  • ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    – ವಿಜಯಪುರ ಜಿಲ್ಲಾ ಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದ ಕಲಬುರಗಿ ಹೈಕೋರ್ಟ್‌

    ವಿಜಯಪುರ: ಮರ್ಯಾದೆ ಹತ್ಯೆಗೈದ (Honor killing) ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಿ ಕಲಬುರಗಿ ಹೈಕೋರ್ಟ್ (Gulbarga High Court) ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

    ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್ (28) ಮರಣ ದಂಡನೆ ಶಿಕ್ಷೆಗೋಳಗದವರು. ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ದಲಿತ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಅಣ್ಣತಮ್ಮಂದಿರಿಬ್ಬರು ತಮ್ಮ ತಂಗಿಯನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದರು.

    ಸಾಯಿಬಣ್ಣ ಎನ್ನುವ ದಲಿತ ಯುವಕನ ಜೊತೆ ಬಾನು ಬೇಗಂ ಪ್ರೀತಿಸಿ ಮದುವೆಯಾಗಿದ್ದಳು. ಇದನ್ನ ಸಹಿಸದ ಸಹೋದರರು ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದ ಸಂರ್ಭದಲ್ಲಿ ಆಕೆಗೆ ಬೆಂಕಿ ಹಚ್ಚಿ ಸಜೀವವಾಗಿ ಕೊಂದು ಹಾಕಿದ್ದರು. ಇನ್ನು ಈ 2017 ರಲ್ಲಿ ವಿಜಯಪುರದಲ್ಲಿ ನಡೆದ ಕೊಲೆ ಪ್ರಕರಣ ನಡೆದಿತ್ತು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಈ ಮೊದಲು ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

  • ವಿಜಯಪುರದಲ್ಲಿ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ; ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ

    ವಿಜಯಪುರದಲ್ಲಿ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ; ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ

    ವಿಜಯಪುರ: ಗರ್ಭಿಣಿಯನ್ನು ಮರ್ಯಾದೆಗೇಡು ಹತ್ಯೆ (Indecent Killing) ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ (Vijayapura) ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಇಬ್ರಾಹಿಂಸಾಬ್ ಅತ್ತಾರ, ಅಕ್ಬರಸಾಬ್ ಅತ್ತಾರ ಗಲ್ಲು ಶಿಕ್ಷೆಗೆ ಒಳಗಾದವರು. ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ರಮಜಾನಭೀ ಅತ್ತಾರ, ದಾವಲಭೀ ಜಮಾದಾರ್, ಅಜಮಾ ದಖನಿ, ಜಿಲಾನಿ‌ ದಖನಿ, ಅಬ್ದುಲ್ ಖಾದರ್ ದಖನಿ, ದಾವಲಭಿ ಧನ್ನೂರಗೆ ಜೀವಾವಧಿ‌ ಶಿಕ್ಷೆಗೆ ಒಳಗಾದವರು. ಇವರಿಗೆ 4.19 ಲಕ್ಷ ರೂ. ದಂಡ ವಿಧಿಸಿ ನ್ಯಾಯಾದೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ

    ಕಳೆದ 2017 ರಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಾಳಾಗುಂಡಕನಾಳ ಗ್ರಾಮದಲ್ಲಿ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ನಡೆದಿತ್ತು. ಈ ಸುದ್ದಿಯನ್ನು ‘ಪಬ್ಲಿಕ್‌ ಟಿವಿ’ ಎಳೆ ಎಳೆಯಾಗಿ ಬಿತ್ತರಿಸಿತ್ತು. ಪಬ್ಲಿಕ್‌ ಟಿವಿ ವರದಿ ಬೆನ್ನಲ್ಲೇ ತಾಳಿಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ ತಾಳಿಕೋಟೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದರು.

    ಏನಿದು ಪ್ರಕರಣ?
    ಹಾಳಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಹಾಗೂ ಸಾಹೇಬಣ್ಣ ಕೊಣ್ಣೂರ ಎಂಬವರು 2017 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇದು ಬಾನುಬೇಗಂ ಮನೆಯವರ ಕೆಂಗಣ್ಣಿಗೆ ಗುರಿಯಾಗಿತ್ತು. ಮದುವೆಯಾದ ಬಳಿಕ ಬೇರೆ ನಗರದಲ್ಲಿ ಬಾನುಬೇಗಂ ಹಾಗೂ ಸಾಹೇಬಣ್ಣ ವಾಸವಿದ್ದರು. ಈ ವೇಳೆ ಬಾನುಬೇಗಂ ಗರ್ಭಿಣಿಯಾದ ಕಾರಣ ಹೆರಿಗೆಗಾಗಿ ಗಂಡನ ಮನೆಗೆ ಬಂದಿದ್ದಳು. ಇದನ್ನೇ ಕಾಯುತ್ತಿದ್ದ ಆಕೆಯ ಪೋಷಕರು ಬಾನುಬೇಗಂ ಹಾಗೂ ಸಾಹೇಬಣ್ಣರನ್ನ ಕೊಲೆ ಮಾಡಲು ಮುಂದಾಗಿದ್ದರು. ಇದನ್ನೂ ಓದಿ: ನಿಜ್ಜರ್‌ ಹತ್ಯೆ ಕೇಸ್‌ – ಬಂಧಿತ ಮೂವರು ಆರೋಪಿಗಳು ಭಾರತ ಮೂಲದವರು; ಫೋಟೋ ರಿಲೀಸ್‌

    ಪತಿ ಮತ್ತು ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾಗಿ ಬಾನುಬೇಗಂ ಮೂರ್ಚೆ ಹೋಗಿದ್ದಳು. ಮೂರ್ಚೆ ಹೋದ ಗರ್ಭಿಣಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು. ಈ ವೇಳೆ ಹಲ್ಲೆಕೋರರಿಂದ ಸಾಹೇಬಣ್ಣನನ್ನು ರಕ್ಷಣೆ ಮಾಡಲಾಗಿತ್ತು. ಬಾನುಬೇಗಂ ತಂದೆ-ತಾಯಿ ಹಾಗೂ ಅವರ ಸಂಬಂಧಿಕರು ಈ ಕೃತ್ಯ ಎಸಗಿದ್ದರು. ಈ ಪ್ರಕರಣ ಕುರಿತು ತನಿಖೆ ನಡೆಸಿ ತಾಳಿಕೋಟೆ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದರು. ಸುದೀರ್ಘವಾದ ವಿವಾದ ಆಲಿಸಿದ ನ್ಯಾಯಾಧೀಶ ಸತೀಶ್ ಎಲ್.ಪಿ ಅವರಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಎಸ್ ಲೋಕೂರ ವಾದ ಮಂಡಿಸಿದ್ದರು.

  • ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

    ನವದೆಹಲಿ: ಜಾತಿ ಪ್ರೇರಿತ ಹಿಂಸಾಚಾರದ ಘಟನೆಗಳು ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ತೋರಿಸುತ್ತಿವೆ. ನಾಗರಿಕ ಸಮಾಜವು, ಜಾತಿಯ ಹೆಸರಿನಲ್ಲಿ ನಡೆಯುವ ಘೋರ ಅಪರಾಧಗಳ ಬಗ್ಗೆ ಪ್ರತಿಕ್ರಿಯಿಸುವ ಹಾಗೂ ತೀವ್ರ ಖಂಡನೆ ವ್ಯಕ್ತಪಡಿಸುವ ಕಾಲ ಬಂದಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

    1991ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ (ಮಹಿಳೆ ಸೇರಿದಂತೆ ಮೂವರ ಹತ್ಯೆ) ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಮಾರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೆಲವು ನಿರ್ದೇಶಗಳನ್ನು ನೀಡಿದೆ. ಈ ನಿರ್ದೇಶನಗಳನ್ನು ಯಾವುದೇ ವಿಳಂಬವಿಲ್ಲದೇ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದೆ. ಇದನ್ನೂ ಓದಿ: ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್‌ ನೇತೃತ್ವದ ಪೀಠವು, ವಿಚಾರಣೆಗಳು ಕಳಂಕಿತವಾಗುವುದನ್ನು ತಪ್ಪಿಸಲು ಹಾಗೂ ಸತ್ಯವು ಬಲಿಪಶು ಆಗದಂತೆ ನೋಡಿಕೊಂಡು ಸಾಕ್ಷಿಗಳನ್ನು ರಕ್ಷಿಸುವಲ್ಲಿ ರಾಜ್ಯವು ನಿರ್ದಿಷ್ಟ ಪಾತ್ರವನ್ನು ವಹಿಸುತ್ತದೆ. ಕೆಲವು ಸೂಕ್ಷ್ಮ ಪ್ರಕರಣಗಳಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಹಣದ ಅಧಿಕಾರವು ನಡೆಯುವ ಸಂದರ್ಭಗಳಿರುತ್ತವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದೆ.

    ಇಂದಿಗೂ ಪ್ರಚಲಿತದಲ್ಲಿರುವ ಜಾತಿ ಆಧಾರಿತ ಆಚರಣೆಗಳಿಂದ ಮತಾಂಧತೆ ನಿರಂತರವಾಗಿದೆ. ಇಂತಹ ಪ್ರಕರಣಗಳು, ಎಲ್ಲಾ ನಾಗರಿಕರಿಗೂ ಸಮಾನತೆ ಕಲ್ಪಿಸುವ ಸಂವಿಧಾನದ ಉದ್ದೇಶಕ್ಕೆ ಅಡ್ಡಿಯಾಗುತ್ತವೆ ಎಂದು ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

    ಇಬ್ಬರು ಯುವಕರು ಮತ್ತು ಮಹಿಳೆ ಮೇಲೆ ಸುಮಾರು 12 ಗಂಟೆಗಳ ಕಾಲ ದೈಹಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ಈ ದೇಶದಲ್ಲಿ ನಡೆಯುತ್ತಿರುವ ಜಾತಿ ಪ್ರೇರಿತ ಹಿಂಸಾಚಾರದಂತಹ ಪ್ರಸಂಗಗಳು ನಿರೂಪಿಸುತ್ತಿವೆ ಎಂದು ನ್ಯಾಯಾಲಯ ವಿಷಾದಿಸಿದೆ.