Tag: ಮಲೆ ಮಹದೇಶ್ವರ ಬೆಟ್ಟ

  • ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

    ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

    – ಅರಣ್ಯ, ವನ್ಯಜೀವಿ ರಕ್ಷಣೆಗೆ ಕಮಾಂಡ್ ಸೆಂಟರ್

    ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ (Male Mahadeshwara Hill) ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಲೆ ಮಹಾದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲ ಬಾಧ್ಯಸ್ಥರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

    ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯ ಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

    ಕೇಂದ್ರೀಕೃತ ಕಮಾಂಡ್ ಸೆಂಟರ್:
    ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿ.ಮೀ. ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ ಕಾವಲು ಕಾಯುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ವನ್ಯಜೀವಿಗಳ ಕಳ್ಳಬೇಟೆ ಮತ್ತು ಅರಣ್ಯ ಒತ್ತುವರಿ, ಮರಗಳ ಅಕ್ರಮ ಕಡಿತ ಆಗದಂತೆ ನಿಗ್ರಹಿಸಲು ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮೆರಾ, ಕಾಡಿನಂಚಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಎಲ್ಲ ಕ್ಯಾಮೆರಾಗಳ ದೃಶ್ಯಗಳ ಆಧಾರದಲ್ಲಿ ವನ್ಯಮೃಗ ಮತ್ತು ಕಳ್ಳಬೇಟೆಗಾರರ ಚಲನವಲನದ ಬಗ್ಗೆ ನಿಗಾ ಇಡಲು ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

    ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ:
    ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡಿ, ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲು ಮತ್ತು ತಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಮತ್ತು ವನ, ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ, ಉಪಕರಣಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

    ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅರಣ್ಯಾಧಿಕಾರಿಗಳು ಸೌಹಾರ್ದಯುತ ಸಂಬಂಧ ಹೊಂದಬೇಕು. ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು. ಕಾಡಿನಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು. ಕೌಶಲ್ಯ ತರಬೇತಿ ಕೊಡಿಸಬೇಕು. ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಜನರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

    5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

    ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ (Chakrapani) ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಶಿಫಾರಸು ಮಾಡಿದ್ದಾರೆ.

    ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

    ವೇತನ ಪಾವತಿಸದಿರುವುದೂ ಕರ್ತವ್ಯಲೋಪ
    ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖೆಯ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

    ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್‌ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೇ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಸುಮಾರು 11 ವರ್ಷದ ತಾಯಿ ಹುಲಿ ಮತ್ತು 10ರಿಂದ 11ತಿಂಗಳ 4 ಮರಿ ಹುಲಿಗಳ ಸಾವಿಗೆ ಹುಲಿ ದಾಳಿ ಮಾಡಿ ಕೊಂದ ಹಸುವಿನ ಮೃತದೇಹದ ಒಳಗೆ ಸೇಡು ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಸಂಯುಕ್ತ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಕಾರು ರೇಸ್‌ಗೆ ಕಿಚ್ಚ ಎಂಟ್ರಿ – ಬೆಂಗಳೂರು ತಂಡ ಖರೀದಿಸಿದ ಸುದೀಪ್‌

    ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ತಮ್ಮ ಮೂಲಭೂತ ಕರ್ತವ್ಯವಾದ ಅರಣ್ಯ ರಕ್ಷಣೆಯಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ತಿಳಿಸಿರುವ ಈಶ್ವರ್ ಖಂಡ್ರೆ, ಮೂರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖೆಯ ವಿಚಾರಣೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬೋಲ್ಡ್ ಫೋಟೋಗೆ ಬ್ಯಾಡ್ ಕಾಮೆಂಟ್, ಗೌರಮ್ಮನಾದ ಸಪ್ತಮಿ!

    ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ.ಶಶಿಧರ್ ಸದಸ್ಯರಾಗಿದ್ದರು. ಈ ಸಮಿತಿಗೆ ಅಂತಿಮ ವರದಿಯನ್ನು ಇದೇ ತಿಂಗಳ 10ರೊಳಗೆ ಸಲ್ಲಿಸುವಂತೆಯೂ ಸೂಚಿಸಿದ್ದಾರೆ.

  • 5 ಹುಲಿಗಳ ಸಾವು ಪ್ರಕರಣ – ಡಿಸಿಎಫ್, ಎಸಿಎಫ್‌ಗಳಿಗೆ ಕಡ್ಡಾಯ ರಜೆ ಮೇಲೆ ತೆರಳಲು ಸರ್ಕಾರ ಆದೇಶ

    5 ಹುಲಿಗಳ ಸಾವು ಪ್ರಕರಣ – ಡಿಸಿಎಫ್, ಎಸಿಎಫ್‌ಗಳಿಗೆ ಕಡ್ಡಾಯ ರಜೆ ಮೇಲೆ ತೆರಳಲು ಸರ್ಕಾರ ಆದೇಶ

    ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟ (MM Hills) ವನ್ಯಧಾಮದಲ್ಲಿ ಐದು ಹುಲಿಗಳಿಗೆ ವಿಷಪ್ರಾಶನ ಮಾಡಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

    ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗಳಿಗೆ ಕಡ್ಡಾಯ ರಜೆಯ ಮೇಲೆ ತೆರಳಲು ಆದೇಶಿಸಿದೆ. ತನಿಖಾ ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಸರ್ಕಾರಿ ಆದೇಶದಲ್ಲಿ ಏನಿದೆ?
    ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಇದನ್ನೂ ಓದಿ: ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?

    ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು ಹಾಗೂ ಕಳೆದ ಮೂರು ತಿಂಗಳಿನಿಂದ ಮಾಧ್ಯಮಗಳಲ್ಲಿ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿರುತ್ತದೆ. ಇದಕ್ಕೆ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದನ್ನೂ ಓದಿ: 5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

    ಈ ಕಾರಣದಿಂದ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ಏನಿದು ಪ್ರಕರಣ?
    ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ವಿಷ ಬೆರೆಸಿದ್ದ ಜಾನುವಾರುವಿನ ಕಳೇಬರ ತಿಂದು ದುರ್ಮರಣಕ್ಕೆ ಒಳಗಾಗಿವೆ. ಹುಲಿಗಳಿಗೆ ವಿಷಪ್ರಾಶನ ಮಾಡಿ ಕೊಂದಿರುವ ಆರೋಪದ ಮೇಲೆ ಹನೂರು ತಾಲ್ಲೂಕಿನ ಕೊಪ್ಪ ಗ್ರಾಮದ ಮೂವರು ಹಾಗೂ ಕೃತ್ಯಕ್ಕೆ ನೆರವು ನೀಡಿರುವ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಅರಣ್ಯದೊಳಗೆ ಮೇಯುತ್ತಿದ್ದ ಹಸುವನ್ನು ಹುಲಿ ಕೊಂದು ಹಾಕಿರುವ ಘಟನೆಗೆ ಪ್ರತೀಕಾರದ ರೂಪದಲ್ಲಿ ದುಷ್ಕೃತ್ಯ ನಡೆದಿದ್ದು, ಹುಲಿ ತಿಂದು ಉಳಿಸಿದ್ದ ಕಳೇಬರಕ್ಕೆ ವಿಷ ಹಾಕಲಾಗಿದೆ. ಆ ವಿಷಪೂರಿತ ಕಳೇಬರ ತಿಂದು ಐದು ಹುಲಿಗಳೂ ಪ್ರಾಣಬಿಟ್ಟಿವೆ.

    ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೆ ಮೂವರು (ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ) ಆರೋಪಿಗಳ ಕೈಗೆ ಖಾಕಿ ಕೋಳ ತೊಡಿಸಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿವೆ. ಹುಲಿಗಳ ಸಾವಿನ ಹಿಂದೆ ತಮಿಳುನಾಡಿನ ಜಾನುವಾರುಗಳ ಮಾಲೀಕರ ʻಸಗಣಿ ಮಾಫಿಯಾ’ದ ಪರೋಕ್ಷ ಪಾತ್ರ ಇರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನೂ ಪ್ರಕರಣದ ಬಗ್ಗೆ ಕೇಳಿದ್ದಕ್ಕೆ ಡಿಸಿಎಫ್‌ ಹಾರಿಕೆ ಉತ್ತರ ನೀಡಿದ್ದರು. ಆ ತರ ಯಾವುದೇ ಸಮಸ್ಯೆ ಇಲ್ವೆ ಇಲ್ಲ ನಮ್ಮ ಮೇಲೆ ಒತ್ತಡ ಕ್ರಿಯೆಟ್‌ ಮಾಡೋಕೆ ಕೆಲವರು ಈ ರೀತಿ ಮಾಡ್ತಾ ಇದ್ದಾರೆ ಎಂದು ಪಲಾಯನ ಮಾಡ್ತಿದ್ದರು. ಈ ಬೆನ್ನಲ್ಲೇ ಸರ್ಕಾರ ಶಿಸ್ತುಕ್ರಮ ಕೈಗೊಂಡಿದೆ.

  • 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಕಿರಾತಕರು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದೆ.

    ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೆ ಮೂವರು ಆರೋಪಿಗಳ ಕೈಗೆ ಖಾಕಿ ಕೋಳ ತೊಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

    ಹುಲಿ ಹಸುವನ್ನ ಬೇಟೆಯಾಡಿದಕ್ಕೆ ರೊಚ್ಚಿಗೆದ್ದ ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಮೃತ ಹಸುವಿನ ಕಳೆಬರದ ಮೇಲೆ ಮೃತದೇಹದ ಮೇಲೆ ಕ್ರಿಮಿನಾಶಕ ಸಿಂಪಡಿಸಿದ್ರು. ಕ್ರಿಮಿನಾಶಕ ಸೇವಿಸಿದ ಹುಲಿಗಳು ಸಾವನ್ನಪ್ಪಿದ್ವು ಯಾವಾಗ ಹುಲಿಗಳ ಮೃತದೇಹ ಕೊಳೆತು ವಾಸನೆ ಬರಲು ಶುರುವಾಯ್ತೊ ಬೀಟ್‌ಗೆ ಯಾವಾಗ ಫಾರೆಸ್ಟ್ ವಾಚರ್ಸ್ ಬೀಟ್‌ಗೆ ಬಂದ್ರೊ ಆಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಎಸ್ಕೇಪ್ ಆಗಿದ್ದ ಕಳಬೇದೊಡ್ಡಿ ಗ್ರಾಮದ ಕೋನಪ್ಪ, ಮಾದರಾಜು ಕೊಪ್ಪಗ್ರಾಮದ ನಾಗರಾಜ್ ರನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

    ಇನ್ನು ಹುಲಿಗಳ ಸಾವಿಗೆ ಪರೋಕ್ಷವಾಗಿ ಅರಣ್ಯಾಧಿಕಾರಿಗಳೇ ಕಾರಣ ಎಂಬುದು ಈಗ ರಿವೀಲ್ ಆಗ್ತಾಯಿದೆ. ಹಸುವನ್ನ ಹುಲಿ ಬೇಟೆಯಾಡಿದ್ದು ಅಂದೇ ರಾತ್ರಿ ಮಾದುರಾಜು ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಹೋಗಿ ಮೃತ ಹಸುವಿನ ದೇಹಕ್ಕೆ ವಿಷ ಸಿಂಪಡಿಸಿದ್ದರು. ಅಂದೇ ಫಾರೆಸ್ಟ್ ವಾಚರ್ಸ್ ಗಳೆಲ್ಲ ಮೂರ್ನಾಲ್ಕು ತಿಂಗಳಿನಿಂದ ವೇತನ ಆಗಿಲ್ಲವೆಂದು ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಭವನದಲ್ಲಿ ಪ್ರತಿಭಟನೆ ಮಾಡ್ತಾಯಿದ್ರು. ಒಂದು ವೇಳೆ ಅರಣ್ಯ ಸಿಬ್ಬಂದಿ ವೇತನ ಸರಿಯಾಗಿ ನೀಡಿದ್ರೆ. ವಾಚರ್ಸ್‌ಗಳು ಪ್ರತಿಭಟನೆ ಮಾಡದೇ ಬೀಟ್‌ಗೆ ಹೋಗಿದ್ರೆ ಇಂದು 5 ಹುಲಿಗಳು ಬದುಕಿ ಉಳಿತಾಯಿದ್ವು ಎಂಬುದು ಈಗ ಬೆಳಕಿಗೆ ಬಂದಿದೆ.

    ಇನ್ನು ಈ ಕುರಿತು ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್‌ಗೆ ಕೇಳಿದ್ರೆ ಹಾರಿಕೆ ಉತ್ತರ ಕೊಡ್ತಾರೆ. ಆ ತರ ಯಾವುದೇ ಸಮಸ್ಯೆ ಇಲ್ವೆ ಇಲ್ಲ ನಮ್ಮ ಮೇಲೆ ಒತ್ತಡ ಕ್ರಿಯೆಟ್‌ ಮಾಡೋಕೆ ಕೆಲವರು ಈ ರೀತಿ ಮಾಡ್ತಾ ಇದ್ದಾರೆ ಎಂದು ಪಲಾಯನ ಮಾಡ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

    ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
    ವಿಷವಿಕ್ಕಿ ಹುಲಿ ಹತ್ಯೆ ಮಾಡಿದ ಆರೋಪಿಗಳು ಜೂನ್ 30ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಮೂವರು ಆರೋಪಿಗಳು ಕೊಳ್ಳೇಗಾಲ ಪ್ರಧಾನ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ತಡವಾದ ಕಾರಣ ನ್ಯಾಯಾಧೀಶರಾದ ಎಂ‌‌.ಕಾವ್ಯಶ್ರೀ ನಿವಾಸಕ್ಕೆ ಆರೋಪಿಗಳನ್ನು ಕರೆತಂದು ಅರಣ್ಯಾಧಿಕಾರಿಗಳು ಹಾಜರು ಪಡಿಸಿದ್ದಾರೆ. ನ್ಯಾಯಧೀಶರ ಮುಂದೆ ಕರೆತರುವ ಮುನ್ನ ಕೊಳ್ಳೇಗಾಲ ತಾಲೂಕು ಆಸ್ಪತ್ರೆಯಲ್ಲಿ ಅರಣ್ಯ ಸಿಬ್ಬಂದಿ ಮೆಡಿಕಲ್ ಮಾಡಿಸಿದ್ದರು. ಕಸ್ಟಡಿಗೆ ಕೊಡುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದರು. ಇದೀಗಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಜೂನ್ 30 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಸೂಚಿಸಲಾಯಿತು.

  • 5 ಹುಲಿಗಳ ಸಾವು ಕೇಸ್ – ಮೃತ ಹಸು ಮಾಲೀಕ ಸೇರಿ ಮೂವರ ಬಂಧನ

    5 ಹುಲಿಗಳ ಸಾವು ಕೇಸ್ – ಮೃತ ಹಸು ಮಾಲೀಕ ಸೇರಿ ಮೂವರ ಬಂಧನ

    ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ (Tigers Death Case) ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಮೃತ ಹಸುವಿನ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಹಸುವಿನ ಮಾಲೀಕ ಕಳ್ಳಬೇದೊಡ್ಡಿಯ ಕೋನಪ್ಪ ಹಾಗೂ ಮಾದುರಾಜ್, ಕೊಪ್ಪ ಗ್ರಾಮದ ನಾಗರಾಜು ಮೂವರ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?

    ನಿನ್ನೆ ಹಸು ಯಾರದೆಂಬ ಪತ್ತೆಗೆ ದನಗಾಹಿಗಳನ್ನು ಸ್ಥಳಕ್ಕೆ ಕರೆತಂದು ಅರಣ್ಯ ಸಿಬ್ಬಂದಿ ವಿಚಾರಣೆ ನಡೆಸಿದ್ದರು. ಈ ವೇಳೆ ಹಸುವಿನ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದರು. ಹಸುವಿನ ಮಾಲೀಕ ಕೋನಪ್ಪ ಮತ್ತು ನಾಗರಾಜು ಇಬ್ಬರೂ ಅಮಾಯಕರಂತೆ ವರ್ತಿಸಿದ್ದರು. ಹಸುವನ್ನು ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದರು. ನಂತರ ಅರಣ್ಯ ಇಲಾಖೆ ಹಾಗೂ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ.

    ಹುಲಿಗಳ ಸಾವು ಪ್ರಕರಣದವನ್ನು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ತನಿಖೆ ನಡೆಸುತ್ತಿವೆ. ಕೊಳ್ಳೇಗಾಲ ವಿಜಿಲೆನ್ಸ್ ತಂಡ ಹಾಗೂ ಅರಣ್ಯ ಇಲಾಖೆಯ ಎಸಿಎಫ್ ಗಜಾನನ ಹೆಗಡೆ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದೆ. ನಿನ್ನೆ ಮೀಣ್ಯಂ, ಗಾಜನೂರು, ಕಳಬಾಯಿ ದೊಡ್ಡಿ, ಕೊಪ್ಪ ಗ್ರಾಮದ ಕೆಲ ಶಂಕಿತರನ್ನು ತಂಡ ವಿಚಾರಣೆ ನಡೆಸಿತ್ತು. ರಾತ್ರಿ ವಿಚಾರಣೆ ವೇಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿತು. ಇದನ್ನೂ ಓದಿ: 5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

    ನಿನ್ನೆ ಕಳ್ಳಬೇದೊಡ್ಡಿಯ ಶಿವಣ್ಣ ಎಂಬಾತನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದರು. ತಡರಾತ್ರಿ ಶಿವಣ್ಣ ಪುತ್ರ ಮಾದರಾಜು ಅರಣ್ಯ ಇಲಾಖೆ ವಶಕ್ಕೆ ಸಿಕ್ಕಿದ್ದಾನೆ. ಈತ ಕೊಪ್ಪ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ.

  • ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ದಾರುಣ ಸಾವು – ಸ್ಫೋಟಕ ರಹಸ್ಯ ಬಿಚ್ಚಿಟ್ಟ ಆ ಪತ್ರ

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ದಾರುಣ ಸಾವು – ಸ್ಫೋಟಕ ರಹಸ್ಯ ಬಿಚ್ಚಿಟ್ಟ ಆ ಪತ್ರ

    -ಜೂ.6ರಂದೇ ಚಾಮರಾಜನಗರ ಪೊಲೀಸರಿಂದ ಅರಣ್ಯ ಇಲಾಖೆಗೆ ಬಂದಿದ್ದ ಪತ್ರ

    ಚಾಮರಾಜನಗರ: ಮಲೆ ಮಹದೇಶ್ವರನ ಬೆಟ್ಟದಲ್ಲಿ (Male Mahadeshwar Hills) ವಿಷಪ್ರಾಶನದಿಂದಾಗಿ ಐದು ಹುಲಿಗಳು ದಾರುಣವಾಗಿ ಸಾವನ್ನಪ್ಪಿವೆ. ಇದೀಗ 20 ದಿನಗಳ ಹಿಂದೆಯೇ ಅರಣ್ಯ ಇಲಾಖೆಗೆ (Forest Department) ಬಂದಿದ್ದ ಪತ್ರವೊಂದು ಸಾವಿನ ರಹಸ್ಯವನ್ನು ಬಿಚ್ಚಿಡುತ್ತಿದೆ.

    ಹೌದು, ಹುಲಿಸಂರಕ್ಷಿತ ತಾಣವಾದ ಕರ್ನಾಟಕದಲ್ಲೇ ಈ ರೀತಿ ನಡೆದಿದ್ದು ಘೋರ ಅನ್ಯಾಯ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳು ಸಾವನ್ನಪ್ಪಿದ 20 ದಿನಗಳ ಮುಂಚೆಯೇ ಚಾಮರಾಜನಗರ ಪೊಲೀಸರು (Chamarajanagar Police) ಅರಣ್ಯ ಇಲಾಖೆಗೆ ಪತ್ರವೊಂದನ್ನು ಬರೆದಿದ್ದರು. ಈ ಪತ್ರವನ್ನು ಅರಣ್ಯ ಇಲಾಖೆ ಮುಂಚೆಯೇ ಓದಿ ಅಲರ್ಟ್ ಆಗಿದ್ದರೆ ಈ ಐದು ಹುಲಿಗಳ ಸಾವನ್ನು ತಡೆಯಬಹುದಿತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.ಇದನ್ನೂ ಓದಿ: 5 ಹುಲಿಗಳ ನಿಗೂಢ ಸಾವು – ವಿಷ ಹಾಕಿದ್ದ ದುಷ್ಕರ್ಮಿ ಸೇರಿ ಐವರು ವಶಕ್ಕೆ

    ಪತ್ರದಲ್ಲಿ ಏನಿದೆ?
    ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳ್ಳಬೇಟೆಗಾರರ ಹಾವಳಿ ಹೆಚ್ಚಾಗಿದೆ ಎಂದು ಅರಣ್ಯ ಇಲಾಖೆಗೆ ಚಾಮರಾಜನಗರ ಪೊಲೀಸರು ತಿಳಿಸಿದ್ದರು. ತಮಿಳುನಾಡು (Tamilnadu) ರಾಜ್ಯದ ಸೇಲಂ, ಕೃಷ್ಣ ಗಿರಿ, ಧರ್ಮಪುರಿ ಸೇರಿದಂತೆ ಮೂರು ಜಿಲ್ಲೆಯ ಗಡಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸೇರಿಕೊಂಡಿದೆ. ಹೀಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಓಡಾಡುವ ಅನುಮಾನಾಸ್ಪದ ವ್ಯಕ್ತಿಗಳು, ಹಾದುಹೋಗುವ ವಾಹನಗಳ ಪರಿಶೀಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಳ್ಳಬೇಟೆಗಾರರ ಬಗ್ಗೆ ನಿಗಾ ಇಡಲು ಗೋಪಿನಾಥಮ್ ಮತ್ತು ಪಾಲರ್ ಕೂಡುವ ಜಾಗದಲ್ಲಿ ಪ್ರತ್ಯೇಕ ಚೆಕ್‌ಪೋಸ್ಟ್ಗಾಗಿ ಅನುಮತಿ ಕೋರಿ ಪ್ರಧಾನ ಅರಣ್ಯ ಸಂರಕ್ಷಣಾ ಅಧಿಕಾರಿಯ ಘಟಕಕ್ಕೆ ಜೂ.6ರಂದು ಪತ್ರ ಬರೆದಿದ್ದರು.

    ಸದ್ಯ ಪತ್ರವನ್ನು ಓದಿ ಕಳ್ಳಭೇಟೆಗಾರರ ನಿಗಾಕ್ಕೆ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಿದ್ದರೆ ಅಥವಾ ಅರಣ್ಯ ಅಧಿಕಾರಿಗಳು ಕೊಂಚ ಅಲರ್ಟ್ ಆಗಿದ್ದರೆ ಈ ಅನಾಹುತ ತಪ್ಪಿಸಬಹುದಾಗಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ. ಜೊತೆಗೆ ಅನುಮಾನಾಸ್ಪವಾಗಿ ಓಡಾಡುತ್ತಿರುವ ಬಗ್ಗೆ ನಿಗಾವಹಿಸಿದರೆ ಈ ರೀತಿ ಅನಾಹುತ ಸಂಭವಿಸುತ್ತಿರಲಿಲ್ಲ ಎನ್ನುವುದು ಈ ಪತ್ರದ ಮೂಲಕ ಖಚಿತವಾಗಿದೆ.ಇದನ್ನೂ ಓದಿ: ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

  • ಚಾ.ನಗರ| ಹುಲಿಗಳು ಸತ್ತ 10 ಹೆಜ್ಜೆ ದೂರದಲ್ಲಿಯೇ ಹಸು ಕಳೇಬರ ಪತ್ತೆ- ವಿಷಪ್ರಾಶನ ಶಂಕೆ

    ಚಾ.ನಗರ| ಹುಲಿಗಳು ಸತ್ತ 10 ಹೆಜ್ಜೆ ದೂರದಲ್ಲಿಯೇ ಹಸು ಕಳೇಬರ ಪತ್ತೆ- ವಿಷಪ್ರಾಶನ ಶಂಕೆ

    ಚಾಮರಾಜನಗರ: ಹುಲಿಗಳ ನಾಡು ಚಾಮರಾಜನಗರದಲ್ಲಿ (Chamarajanagara) ಬರೋಬ್ಬರಿ ಐದು ಹುಲಿಗಳು ಮೃತಪಟ್ಟಿವೆ. ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಐದು ಹುಲಿಗಳನ್ನು ವಿಷವಿಕ್ಕಿ ಕೊಂದಿರುವುದು ಆಘಾತಕಾರಿಯಾಗಿದೆ.

    ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ (MM Hills) ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳ ಅಸಹಜ ಸಾವು ತಲ್ಲಣ ಉಂಟುಮಾಡಿದೆ. ಹೂಗ್ಯಂ ಅರಣ್ಯ ವಲಯದ ಮೀಣ್ಯಂ ಸಮೀಪ ಮಹದೇಶ್ವರ ಗುಡಿ ಬಯಲಿನಲ್ಲಿ ಈ ಐದೂ ಹುಲಿಗಳು ಸತ್ತುಬಿದ್ದಿವೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಐದು ಹುಲಿಗಳ ಮೃತದೇಹ ಪತ್ತೆಯಾಗಿದ್ದು, ಅನತಿ ದೂರದಲ್ಲಿ ಹಸುವೊಂದರ ಮೃತದೇಹವೂ ಕಂಡು ಬಂದಿದೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

    ವನ್ಯಪ್ರಾಣಿಯ ದಾಳಿಯಿಂದ ಹಸು ಸಾವನ್ನಪ್ಪಿದ್ದು, ಇದರ ಅರ್ಧಂಬರ್ಧ ದೇಹವನ್ನು ವನ್ಯಪ್ರಾಣಿಗಳು ತಿಂದು ಹೋಗಿವೆ. ಉಳಿದ ಮಾಂಸ ತಿನ್ನಲು ವನ್ಯಪ್ರಾಣಿ ಬರಬಹುದು ಎಂಬ ಕಾರಣಕ್ಕೆ ಅದನ್ನು ಕೊಲ್ಲಲು ಹಸುವಿನ ಮಾಂಸಕ್ಕೆ ಯಾರೋ ವಿಷ ಸಿಂಪಡಣೆ ಮಾಡಿರಬಹುದು ಎಂಬ ಗುಮಾನಿ ಇದೆ. ವಿಷ ಮಿಶ್ರಿತ ಹಸುವಿನ ಮಾಂಸ ತಿಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

    ಐದು ಹುಲಿಗಳು ಒಮ್ಮೆಲೆ ಮೃತಪಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ದಿಗ್ಭçಮೆ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಗೆ ಪಿಸಿಸಿಎಫ್ ನೇತೃತ್ವದಲ್ಲಿ ಉನ್ನತ ಮಟ್ಟದ ತಂಡ ರಚಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿಷಪ್ರಾಶನದಿಂದ ಮೃತಪಟ್ಟಿದ್ದರೆ ಅದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದಾರೆ. ಸದ್ಯ ಆರು ಮಂದಿ ತನಿಖಾ ತಂಡಲಿದ್ದಾರೆ. ಪಿಸಿಸಿಎಫ್ ರವಿ, ಎಪಿಸಿಸಿಎಫ್ ಶ್ರೀನಿವಾಸಲು, ಸಿಎಫ್ ಹೀರಾಲಾಲ್, ಎನ್‌ಟಿಸಿಎ ಪ್ರತಿನಿಧಿ ಮಲ್ಲೇಶಪ್ಪ, ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹಾಗೂ ಮೈಸೂರು ಮೃಗಾಲಯದ ಪಶು ವೈದ್ಯಾಧಿಕಾರಿಕಾರಿ ಈ ತಂಡದಲ್ಲಿದ್ದಾರೆ. 14 ದಿನಗಳ ಒಳಗೆ ತನಿಖಾ ತಂಡದ ವರದಿ ಕೊಡಲೂ ಸೂಚಿಸಲಾಗಿದೆ. ಇದನ್ನೂ ಓದಿ: ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

    ಸಂತಾನೋತ್ಪತ್ತಿ ಮಾಡುವ ಹೆಣ್ಣು ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾಯುವುದು ದೊಡ್ಡ ಆಘಾತಕಾರಿ ವಿಷಯವಾಗಿದೆ ಎಂದು ವನ್ಯಜೀವಿ ತಜ್ಞರು ಬೇಸರ ಆಘಾತ ವ್ಯಕ್ತಪಡಿಸಿದ್ದಾರೆ. ಹುಲಿಗಳು ಕಡಿಮೆ ಸಾಂದ್ರತೆಯಿರುವ ಮಲೆ ಮಹದೇಶ್ವರಬೆಟ್ಟದಲ್ಲಿ ಹೀಗಾಗಿರುವುದು ಅತ್ಯಂತ ಖಂಡನೀಯವಾಗಿದ್ದು, ಈ ವಿಚಾರದಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

  • ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

    ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

    ಬೆಂಗಳೂರು: ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ (Congress Government) ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R. Ashoka) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre), ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಬೆನ್ನಲ್ಲೇ ಹುಲಿಗಳ ಸಾವಿನ ಪ್ರಕರಣ ಕುರಿತು ಆರ್‌. ಅಶೋಕ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

    ಸಾಂದರ್ಭಿಕ ಚಿತ್ರ

    ಅಶೋಕ್‌ ಎಕ್ಸ್‌ನಲ್ಲಿ ಏನಿದೆ?
    ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ. ಇದನ್ನೂ ಓದಿ: ಬೀಡಾಡಿ ಬೆಕ್ಕಿಗೊಂದು ಸುಂದರ ಮನೆ – ಮಂಗಳೂರಿನ ಮಾಲ್‌ಗೆ ಬರೋರ ಕಣ್ಮಣಿಯಾದ ವೈಟ್ ಕ್ಯಾಟ್

    ಮಲೆ ಮಹದೇಶ್ವರ ಕಾಡು ಹುಲಿ ಸಂತತಿ (Tiger offspring) ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ, ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ. ಇದನ್ನೂ ಓದಿ: Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

  • ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

    ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

    ಬೆಂಗಳೂರು/ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ (Male Mahadeshwar Hills) ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಆದೇಶ ಹೊರಡಿಸಿದ್ದಾರೆ.

    ಈ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.ಇದನ್ನೂ ಓದಿ: ಮುಸ್ಲಿಂ ಮಹಿಳೆಯರು ಖುಲಾ ಮೂಲಕ ವಿಚ್ಛೇದನ ಪಡೆಯಲು ಪತಿಯ ಒಪ್ಪಿಗೆ ಅಗತ್ಯವಿಲ್ಲ – ತೆಲಂಗಾಣ ಹೈಕೋರ್ಟ್

    ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

    ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕ್ರಮ ವಹಿಸುವಂತೆ ಸೂಚಿಸಿದ್ದಾರೆ ಹಾಗೂ 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.ಇದನ್ನೂ ಓದಿ: Mandya | ಕೆಆರ್‌ಎಸ್‌ ಡ್ಯಾಂನಿಂದ ಕಾವೇರಿ ನದಿಗೆ 45,000 ಕ್ಯೂಸೆಕ್ ನೀರು

  • ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

    ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

    -ಇ-ಹುಂಡಿ ಮೂಲಕ 6.6 ಲಕ್ಷ ಸಂಗ್ರಹ

    ಚಾಮರಾಜನಗರ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, 15 ವಿದೇಶಿ ಕರೆನ್ಸಿಗಳು ಸೇರಿ 2.6 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು (ಜೂ.19) ಹುಂಡಿ ಹಣ ಎಣಿಕೆ ಮಾಡಲಾಯಿತು. ಈ ಬಾರಿ ಕೇವಲ 34 ದಿನಗಳಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ.ಇದನ್ನೂ ಓದಿ: ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್

    ಸರ್ಕಾರಿ ರಜಾ ದಿನ, ಅಮಾವಾಸ್ಯೆ ಸೇರಿದಂತೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ 2,65,04,712 ರೂ. ನಗದು, 58 ಗ್ರಾಂ ಚಿನ್ನ ಹಾಗೂ 2.7 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಇದಲ್ಲದೇ ಇ-ಹುಂಡಿಯಿಂದ 6,66,104 ರೂ. ಹಾಗೂ 15 ವಿದೇಶಿ ಕರೆನ್ಸಿಗಳು ಬಂದಿವೆ.

    ಇದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಸಾಲೂರು ಶ್ರೀಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಮಾಡಲಾಗಿತ್ತು. ಆ ವೇಳೆ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿತ್ತು. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿತ್ತು. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಹುಂಡಿಯಲ್ಲಿ ಸಿಕ್ಕಿದ್ದವು. ಇದನ್ನೂ ಓದಿ: ಮುನೀರ್‌ಗೆ ಟ್ರಂಪ್‌ ಡಿನ್ನರ್‌ – ಪಾಕ್‌ ನೆಲದಿಂದ ಅಮೆರಿಕ ಇರಾನ್‌ ಮೇಲೆ ದಾಳಿ ಮಾಡುತ್ತಾ?