Tag: ಮಲೆ ಮಹದೇಶ್ವರ ಬೆಟ್ಟ

  • ಆರ್‌ಸಿಬಿ ಕಪ್ ಗೆಲ್ಲಲೆಂದು ಮಾದಪ್ಪನಿಗೆ ಮುಡಿ ಕೊಟ್ಟ ಅಭಿಮಾನಿ

    ಆರ್‌ಸಿಬಿ ಕಪ್ ಗೆಲ್ಲಲೆಂದು ಮಾದಪ್ಪನಿಗೆ ಮುಡಿ ಕೊಟ್ಟ ಅಭಿಮಾನಿ

    ಚಾಮರಾಜನಗರ: ಐಪಿಎಲ್ (IPL 2025) ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಆರ್‌ಸಿಬಿ (RCB) ಕಪ್‌ ಗೆಲ್ಲಲೆಂದು ಅಭಿಮಾನಿಗಳು ವಿಶೇಷ, ವಿಭಿನ್ನವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    ಅಭಿಮಾನಿಯೊಬ್ಬ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಮುಡಿ ಕೊಟ್ಟು ಆರ್‌ಸಿಬಿ ಜಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾನು ಬೆಂಗಳೂರಿನ ಅಳಿಯ, ಗೆದ್ದು ಬಾ ಆರ್‌ಸಿಬಿ: ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್‌ ವಿಶ್‌

    ಮೈಸೂರಿನ ಶಶಿಕುಮಾರ್ ಎಂಬವರು ಮಹದೇಶ್ವರನಿಗೆ ಮುಡಿ ಕೊಟ್ಟಿದ್ದು, ಆರ್‌ಸಿಬಿ ಜೆರ್ಸಿ ಹಿಡಿದು ಮಹದೇಶ್ವರನಿಗೆ ಇಡುಗಾಯಿ ಒಡೆದಿದ್ದಾರೆ. ಅಯ್ಯಪ್ಪನ ದೇಗುಲಕ್ಕೆ 18 ಮೆಟ್ಟಿಲು, ಈ ಬಾರಿ ಸೀಸನ್ 18 ಹಾಗೂ ವಿರಾಟ್ ಜೆರ್ಸಿ ನಂಬರ್ ಕೂಡ 18. ಅದೇ ರೀತಿ 18 ರ ಕಪ್ ಕೂಡ ನಮ್ಮದೇ ಎಂದು ಶಶಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದು ಟ್ರೈಲರ್ ಅಷ್ಟೇ, ಆರ್‌ಸಿಬಿ ಗೆದ್ದರೆ ಹೋಮ-ಹವನ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ.

    ಅಹಮದಾಬಾದ್‌ನಲ್ಲಿ ಇಂದು ಐಪಿಎಲ್‌ 2025ರ ಟ್ರೋಫಿಗಾಗಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಸೆಣಸಲಿದೆ. ಐಪಿಎಲ್‌ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ ಒಂದೇ ಒಂದು ಕಪ್‌ ಗೆದ್ದಿಲ್ಲ. ಈ ದಿನದ ಪಂದ್ಯ ಇಬ್ಬರಿಗೂ ಐತಿಹಾಸಿಕ ಮ್ಯಾಚ್‌ ಆಗಿದೆ. ಇದನ್ನೂ ಓದಿ: ಆರ್‌ಸಿಬಿ ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ

  • ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

    ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ (Salur Mutt) ಹಿರಿಯ ಶ್ರೀ ಗುರುಸ್ವಾಮೀಜಿ (70) ಲಿಂಗೈಕ್ಯರಾಗಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀಜಿ (Sri Guru Swamiji) ಸಾಲೂರು ಮಠದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಸ್ವಾಮೀಜಿ ಇಂದು ಕೊನೆಯುಸಿರೆಳೆದಿದ್ದಾರೆ. ಸಂಜೆ 5:30 ಕ್ಕೆ ಸಾಲೂರು ಮಠದಲ್ಲಿ ಅಂತ್ಯಕ್ರಿಯೆ ನೆರವೇರಿತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಅಂತ್ಯಕ್ರಿಯೆಗೂ ಮುನ್ನ ಮಹದೇಶ್ವರ ಬೆಟ್ಟದಲ್ಲಿ ಸ್ವಾಮೀಜಿಯ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಅಪಾರ ಭಕ್ತ ವೃಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಸ್ವಾಮೀಜಿಗಳಿಗೆ ನಮಿಸಿತು.

    ಕಾಡಂಚಿನ ಮಕ್ಕಳ ಶಿಕ್ಷಣಕ್ಕೆ ಶ್ರಮಿಸಿದವರು ಶ್ರೀ ಗುರುಸ್ವಾಮೀಜಿ. ಸಾಲೂರು ಮಠದ 17ನೇ ಪೀಠಾಧಿಪತಿಯಾಗಿ ಸೇವೆ ಸಲ್ಲಿಸಿದ್ದರು. ಕಾಡಂಚಿನ ಮಕ್ಕಳನ್ನು ಸಾಲೂರು ಮಠಕ್ಕೆ ಕರೆತಂದು ಶಿಕ್ಷಣ ನೀಡಿದ್ದರು. ಇದನ್ನೂ ಓದಿ: ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

    ಸುತ್ತಮುತ್ತಲ ಗ್ರಾಮಗಳಲ್ಲಿ ಭಿಕ್ಷೆ ಮಾಡಿ ಮಕ್ಕಳಿಗೆ ಉಚಿತ ಊಟ, ವಸತಿ ವ್ಯವಸ್ಥೆ ಮಾಡಿಸಿದ್ದರು. ಗುಡ್ಡಗಾಡು ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪೊನ್ನಾಚಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆದಿದ್ದರು.

  • ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಮಲೆ ಮಹದೇಶ್ವರ ವನ್ಯಧಾಮದ ಸುಂಕದ ಕಟ್ಟೆಯಲ್ಲಿ ಹುಲಿ ದರ್ಶನ

    ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಮಲೆ ಮಹದೇಶ್ವರ ವನ್ಯಧಾಮದ ಸುಂಕದ ಕಟ್ಟೆಯಲ್ಲಿ ಹುಲಿ ದರ್ಶನ

    ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು, ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ.

    ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿತ್ತು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: 2ನೇ ದಿನ ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಭರ್ಜರಿ ಪ್ರತಿಕ್ರಿಯೆ – ಮುಗಿಯುವ ಮುನ್ನ ಭಾಗಿಯಾಗಿ

    ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣಸಿಗುತ್ತಿವೆ. ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರ 2024ರ ಅಕ್ಟೋಬರ್ 2 ರಂದು ಪ್ರಾರಂಭಿಸಲಾಗಿತ್ತು. ಆದರೆ, ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.

    ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ, ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಶನಿವಾರ ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜನಿವಾರ ವಾರ್‌ | ಭೌತಶಾಸ್ತ್ರ, ರಸಾಯನಶಾಸ್ತ್ರ ಸರಾಸರಿ ಅಂಕ ಪರಿಗಣಿಸಿ ಗಣಿತಕ್ಕೆ ಮಾರ್ಕ್ಸ್‌ ನೀಡಿ

  • ಮಾದಪ್ಪ ಮತ್ತೆ ಕೋಟಿ ಒಡೆಯ – 35 ದಿನಗಳಲ್ಲಿ 3.26 ಕೋಟಿ ಕಾಣಿಕೆ ಸಂಗ್ರಹ

    ಮಾದಪ್ಪ ಮತ್ತೆ ಕೋಟಿ ಒಡೆಯ – 35 ದಿನಗಳಲ್ಲಿ 3.26 ಕೋಟಿ ಕಾಣಿಕೆ ಸಂಗ್ರಹ

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪ ಕೋಟಿ ಒಡೆಯನಾಗಿದ್ದಾನೆ.

    ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ

    ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಕಂಡುಬಂದಿವೆ. ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆಯಿತು.  ಇದನ್ನೂ ಓದಿ: ಏ.25 ರಂದು ಬೆಂಗಳೂರಿನಲ್ಲಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ

  • Chamarajanagar | ಕೌಟುಂಬಿಕ ಕಲಹ – 2 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    Chamarajanagar | ಕೌಟುಂಬಿಕ ಕಲಹ – 2 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ಚಾಮರಾಜನಗರ: ಕೌಟುಂಬಿಕ ಕಲಹದಿಂದ (Family Feud) ಬೇಸತ್ತು ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು (Hanur) ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ನಡೆದಿದೆ.

    ಸುಶೀಲ (30), ಆಕೆಯ ಮಕ್ಕಳಾದ ಚಂದ್ರು (8), ದಿವ್ಯ (11) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾವಿಯ ದಡದಲ್ಲಿ ಚಪ್ಪಲಿ ಹಾಗೂ ತಾಳಿ ಇಟ್ಟು ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ನೀರು ತರಲು ಬಾವಿಯ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಕಾಂಗ್ರೆಸ್ ಭಾರತರತ್ನ ಕೊಟ್ಟಿಲ್ಲ, ಬಿಜೆಪಿ ಬೆಂಬಲಿತ ಸರ್ಕಾರದಿಂದ ಗೌರವ: ವಿಜಯೇಂದ್ರ

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ

    ಚಾಮರಾಜನಗರ: ನಾಡಿನ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬೆಳಗ್ಗೆ 8 ರಿಂದ 9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನಡೆಯಿತು.

    ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೇ, ತಮಿಳುನಾಡನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

    ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

    ಇದಕ್ಕೂ ಮುನ್ನ ಉತ್ಸವ ಮೂರ್ತಿ ಇರಿಸಿ ಬೂದು ಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ ಹಾಗೂ ಬೇಡಗಂಪಣ ಸಮುದಾಯದ ಹೆಣ್ಣುಮಕ್ಕಳಿಂದ ಬೆಲ್ಲದ ಆರತಿ ಬೆಳಗಿದ ಬಳಿಕವಷ್ಟೇ ಮಹಾ ರಥೋತ್ಸವ ಆರಂಭಗೊಂಡಿತು.

    ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು.

    ಕಳೆದ ಮೂರು‌ ದಿನಗಳಿಂದ ನಡೆಯುತ್ತಿದ್ದ ಜಾತ್ರೆಗೆ ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಪ್ರಾಧಿಕಾರದ ವತಿಯಿಂದ ನಿರಂತರ ಪ್ರಸಾದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಮೂಲಸೌಕರ್ಯ ಕಲ್ಪಿಸಿತ್ತು. ಜೊತೆಗೆ, ಯಾವುದೇ ಅಹಿತಕರ ಘಟನೆ ಆಗದಂತೆ ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು.

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ – 3 ದಿನ ಬೆಟ್ಟಕ್ಕೆ ವಾಹನ ನಿಷೇಧ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ – 3 ದಿನ ಬೆಟ್ಟಕ್ಕೆ ವಾಹನ ನಿಷೇಧ

    ಚಾಮರಾಜನಗರ: ಜಿಲ್ಲೆಯ ಹನೂರು (Hanuru) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ಯುಗಾದಿ ಜಾತ್ರೆ ಹಿನ್ನಲೆಯಲ್ಲಿ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ.

    ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಮಾ. 29ರಿಂದ ಮಾ. 31ರವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭೂಕಂಪ – 144ಕ್ಕೇರಿದ ಸಾವಿನ ಸಂಖ್ಯೆ; ತುರ್ತು ಪರಿಸ್ಥಿತಿ ಘೋಷಣೆ

    ಹನೂರು ತಾಲೂಕಿನ ಕೌದಳ್ಳಿ (Cowdalli) ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಅಮಾವಾಸ್ಯೆ ಪೂಜೆ ಹಾಗೂ ಭಾನುವಾರ ಯುಗಾದಿ ರಥೋತ್ಸವ ಹಿನ್ನಲೆ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಧೋನಿಗೆ ಏಜ್‌ ಆಗಿದೆ ಅಂದವರ್ಯಾರು? – ಮತ್ತೆ ರಾಕೆಟ್‌ ಸ್ಪೀಡ್‌ನಲ್ಲಿ ಸ್ಟಂಪ್‌, ಸಾಲ್ಟ್‌ ಸ್ಟನ್‌!

  • ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶಾಂಪೂ ಬಳಕೆಗೆ ನಿಷೇಧ

    ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶಾಂಪೂ ಬಳಕೆಗೆ ನಿಷೇಧ

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶಾಂಪೂ ಬಳಕೆಗೆ ನಿಷೇಧ ವಿಧಿಸಲಾಗಿದೆ.

    ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶಾಂಪೂ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ.

    ಅಂತರಗಂಗೆಯಲ್ಲಿ ನಿತ್ಯ ನೂರಾರು ಭಕ್ತರು ಸ್ನಾನ ಮಾಡುತ್ತಾರೆ. ಸೋಪು, ಶಾಂಪೂ ಬಳಕೆಯಿಂದ ಮಲಿನಗೊಳ್ಳುತ್ತಿದೆ. ಅಂತರಗಂಗೆಯ ಶುಚಿತ್ವ, ಪಾವಿತ್ರ್ಯತೆ ಕಾಪಾಡಲು ಪ್ರಾಧಿಕಾರ ಮುಂದಾಗಿದೆ.

    ಈ ಸಂಬಂಧ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

  • ವಯಸ್ಸಾಯ್ತು ಮದುವೆಗೆ ಹುಡುಗಿ ಸಿಗ್ತಿಲ್ಲ, ಕಂಕಣಭಾಗ್ಯ ಕರುಣಿಸು – 40 ಜನರಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ

    ವಯಸ್ಸಾಯ್ತು ಮದುವೆಗೆ ಹುಡುಗಿ ಸಿಗ್ತಿಲ್ಲ, ಕಂಕಣಭಾಗ್ಯ ಕರುಣಿಸು – 40 ಜನರಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ

    ಮಂಡ್ಯ: ವಯಸ್ಸು 40 ಆಯ್ತು ಮದುವೆಗೆ ಹುಡುಗಿ ಸಿಗ್ತಿಲ್ಲ, ಕಂಕಣಭಾಗ್ಯ ಕರುಣಿಸು ಎಂದು ಜಿಲ್ಲೆಯ 40 ಜನ ಅವಿವಾಹಿತರು ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwar Hill) ಪಾದಯಾತ್ರೆಗೆ ತೆರಳಿದ್ದಾರೆ.

    ಮಂಡ್ಯ ಜಿಲ್ಲೆಯ ಅವ್ವೇರಹಳ್ಳಿಯ ಅವಿವಾಹಿತ ರೈತರಿಗೆ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಈ ಸಮಸ್ಯೆಯಿಂದ ರೋಸಿ ಹೋದ ಜನ ಮಾದಪ್ಪನ ಮೊರೆ ಹೋಗಿದ್ದಾರೆ.ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL

    ಪ್ರತಿ ಊರಿನಲ್ಲಿಯೂ 7-8 ಜನ ಸೇರಿ ಮಂಡ್ಯ ಜಿಲ್ಲೆಯಾದ್ಯಂತ ಸಾವಿರಾರು ಅವಿವಾಹಿತರಿಗೆ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಹುಡುಗಿ ನೋಡಲು ಹೋದರೆ ಬೆಂಗಳೂರಿನಲ್ಲಿ ಇದ್ದೀಯಾ? ಇಂಜಿನಿಯರ್? ಡಾಕ್ಟರ್? ಅಥವಾ ಸರ್ಕಾರಿ ಉದ್ಯೋಗ ಇದ್ಯಾ? ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ಮದುವೆಯಾಗಲು ಹೆಣ್ಣು ಸಿಗದೇ ವಯಸ್ಸು 40 ದಾಟುತ್ತಿದೆ.

    ಈ ಸಮಸ್ಯೆಯಿಂದ ಬೇಸತ್ತು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಎಷ್ಟೇ ಹುಡುಗಿ ನೋಡಿದರೂ ಮದುವೆಯಾಗಲು ಹುಡುಗಿಯರು ಹಾಗೂ ಪೋಷಕರು ಒಪ್ಪುತ್ತಿಲ್ಲ. ಇನ್ನೂ ಕೆಲವರು ರೈತ ಎಂದರೆ ಹುಡುಗಿಯನ್ನು ತೋರಿಸುವುದಿಲ್ಲ ಎಂದು ಅವಿವಾಹಿತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸದ್ಯ ಮಾದಪ್ಪ ಆದಷ್ಟು ಬೇಗ ಕಂಕಣ ಭಾಗ್ಯ ಕೊಡಿಸಪ್ಪ ಎಂದು ಪಾದಯಾತ್ರೆ ಮೂಲಕ ಮಾದಪ್ಪನಲ್ಲಿ ಕೇಳಿಕೊಂಡಿದ್ದಾರೆ.ಇದನ್ನೂ ಓದಿ: ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

  • ಮಲೆ ಮಹದೇಶ್ವರನಿಗೆ ಭರಪೂರ ಆದಾಯ; 20 ದಿನದಲ್ಲಿ 2.85 ಕೋಟಿ ಕಾಣಿಕೆ

    ಮಲೆ ಮಹದೇಶ್ವರನಿಗೆ ಭರಪೂರ ಆದಾಯ; 20 ದಿನದಲ್ಲಿ 2.85 ಕೋಟಿ ಕಾಣಿಕೆ

    ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 20 ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ನಿನ್ನೆ ರಾತ್ರಿ ಮುಕ್ತಾಯವಾಯಿತು.

    ಅಮಾವಾಸ್ಯೆ ಸರ್ಕಾರಿ ರಜಾ ದಿನ, ಪಾದಯಾತ್ರಿಗಳು, ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,85, 60,937 ರೂ. ನಗದು, 27 ಗ್ರಾಂ ಚಿನ್ನ ಹಾಗೂ 1,800 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

    ಇದಲ್ಲದೇ, ಇ-ಹುಂಡಿಯಿಂದ 2,75,204, ವಿದೇಶಿ 31 ನೋಟುಗಳ ಜೊತೆಗೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 1 ನೋಟನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.