Tag: ಮಲ್ಲಿಕಾರ್ಜುನ್ ಖರ್ಗೆ

  • ನನಗೂ ವಯಸ್ಸಾಗ್ತಿದೆ, ಇದೇ ನನ್ನ ಕೊನೆಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

    ನನಗೂ ವಯಸ್ಸಾಗ್ತಿದೆ, ಇದೇ ನನ್ನ ಕೊನೆಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

    ಕಲಬುರಗಿ: ನನಗೂ ವಯಸ್ಸಾಗ್ತಿದೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

    ಸೇಡಂನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “9 ಬಾರಿ ಶಾಸಕನಾಗಿ, ಎರಡು ಬಾರಿ ಸಂಸದನಾಗಿ, ಸತತ 11 ಬಾರಿ ಜನ ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಗೆದ್ದರೆ ಒಂದು ಡಜನ್ ಬಾರಿ ಗೆದ್ದು ದಾಖಲೆ ಮಾಡಿದಂತಾಗುತ್ತದೆ” ಎಂದು ಹೇಳಿದ್ದಾರೆ.

    ಗುರುಮಿಠಕಲ್ ಕ್ಷೇತ್ರ ಬದಲಾವಣೆ ನಂತರವೂ ಜನ ನನ್ನ ಕೈ ಹಿಡಿದಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ.

    ಚುನಾವಣೆಯಲ್ಲಿ ಅನುಕಂಪದ ಆಧಾರದಲ್ಲಿ ಮತಗಳ ಸೆಳೆಯಲು ಖರ್ಗೆ ಅವರು ರಾಜಕೀಯ ನಿವೃತ್ತಿ ವಿಚಾರ ಮಾತನಾಡಿದ್ರಾ ಎನ್ನುವ ವಿಚಾರ ಈಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ಸುಳ್ಳು ಹೇಳಿದ್ರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ

    ಪ್ರಧಾನಿ ಮೋದಿ ಸುಳ್ಳು ಹೇಳಿದ್ರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ

    -ಕೆಲಸ ಮಾಡಿದವರಿಗೆ ವೋಟ್ ಹಾಕ್ತಿರೋ? ಸುಳ್ಳು ಹೇಳೋರಿಗೆ ಅವಕಾಶ ಕೊಡತಿರೋ?

    ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

    ಜಮಖಂಡಿ ವಿಧಾನಸಭಾ ಕ್ಷೇತ್ರದ ಸಾವಳಗಿ ಗ್ರಾಮದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಅವರು, ಉದ್ಯೋಗ ಕೊಡುತ್ತೇನೆ ಅಂತ ಹೇಳಿ, ಯುವಕರಿಗೆ ಮೋಸ ಮಾಡಿದರು. ವಿದೇಶದಲ್ಲಿರುವ ಕಪ್ಪು ಹಣ ತಂದು, ದೇಶದ ಸಾಮಾನ್ಯ ಜನತೆಯ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ಕೊಟ್ಟಿದ್ದರು. ಯಾರಿಗಾದರೂ ಹಣ ಹಾಕಿದ್ದಾರಾ? ಸಾವಳಗಿ ಜನರಿಗೆ ಏನಾದರು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿ ಲೇವಡಿ ಮಾಡಿದರು.

    ಬಿಜೆಪಿಯವರು ಸಂವಿಧಾನ ತಿದ್ದಪಡಿ ಮಾಡಬೇಕು. ತೆಗೆದುಹಾಕಬೇಕು ಅಂತಿದ್ದಾರೆ. ಅದು ಅವರಿಂದ ಸಾಧ್ಯವಿಲ್ಲ. ಬಿಜೆಪಿ ಆಡಳಿತದಿಂದಾಗಿ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕಷ್ಟದಲ್ಲಿವೆ ಎಂದ ಅವರು, ಕಾಂಗ್ರೆಸ್ ಸ್ವಾತಂತ್ರ್ಯ ತಂದುಕೊಟ್ಟಿದೆ. ಈ ವೇಳೆ ನಮ್ಮವರು ಪ್ರಾಣತ್ಯಾಗ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪ್ರಜಾಪ್ರಭುತ್ವ ಮತ್ತು ಸಮಾಜಕ್ಕಾಗಿ ಕಾಂಗ್ರೆಸ್ ಕೆಲಸ ಮಾಡಿದೆ. ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

    ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ, ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದೆ. ರೈತರನ್ನು ಉದ್ಧಾರ ಮಾಡುವವರು ಎಲ್ಲಿ ಹೋದರು? ಪ್ರಧಾನಿ ಮೋದಿ ಬಗ್ಗೆ ಪ್ರಚಾರ ಮಾಡುವ ಛೇಲಾಗಳು ಎಲ್ಲಿಗೆ ಹೋದರು ಎಂದು ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಕಿಡಿಕಾರಿದರು.

    ಕೆಲಸ ಮಾಡಿದವರಿಗೆ ವೋಟ್ ಹಾಕುತ್ತಿರಾ? ಅಥವಾ ಸುಳ್ಳು ಹೇಳುವವರಿಗೆ ಮತದಾನ ಮಾಡುತ್ತಿರಾ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ರಫೆಲ್ ಯುದ್ಧ ವಿಮಾನಗಳ ಖರೀದಿ ಹಗರಣವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಯಲಿಗೆಳೆದರು. ಜೊತೆಗೆ ಕೇಂದ್ರ ಮಾಜಿ ಸಚಿವ ಜಶವಂತ್ ಸಿನ್ಹಾ ಸೇರಿದಂತೆ ಕೆಲ ನಾಯಕರು ಸಿಬಿಐಗೆ ದೂರು ದಾಖಲಿಸಿದರು. ಹೀಗಾಗಿ ಬಿಜೆಪಿಯವರಿಗೆ ಪುಕು.. ಪುಕು.. ಶುರುವಾಯಿತು ಎಂದು ಲೇವಡಿ ಮಾಡಿದರು.

    ರಫೆಲ್ ಯುದ್ಧ ವಿಮಾನ ಹಗರಣ ತಮ್ಮ ಬುಡಕ್ಕೆ ಬರುತ್ತದೆ ಅಂತಾ ರಾತ್ರೋ ರಾತ್ರಿ ಸಿಬಿಐ ನಿರ್ದೇಶಕರನ್ನು ತೆಗೆದು ಹಾಕಿದರು ಎಂದು ಆರೋಪಿಸಿದ ಮಲ್ಲಿಕಾರ್ಜುನ ಖರ್ಗೆ, ಗೋವುಗಳ ಚರ್ಮ ಸುಲಿಯುವ ದಲಿತರಿಗೆ ಗೋವು ಕಳ್ಳರೆಂದು ಹಲ್ಲೆ ಮಾಡಿದರು. ಆದರೂ ಪ್ರಧಾನಿ ನರೇಂದ್ರ ಮೋದಿ ಒಂದು ಮಾತು ಆಡಲಿಲ್ಲ ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

    ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

    ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಮಲ್ಲಿಕಾರ್ಜುನ್ ಖರ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೋದಿಯವರು 43 ವರ್ಷಗಳ ಹಿಂದಿನ ದೇಶದ ತುರ್ತು ಪರಿಸ್ಥಿತಿಯ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ದೇಶದಲ್ಲಿನ ಅಘೋಷಿಯ ತುರ್ತು ಪರಿಸ್ಥಿತಿಯ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.

    ರೈತ ಬಾಂಧವರಿಗೆ ಕೇಂದ್ರ ಜಾರಿಗೆ ತಂದಿರುವ ಯೋಜನೆಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆಯೂ ಹೆಚ್ಚುತ್ತಿದೆ. ರೈತರಿಗೆ ಹೊಸ ಸಾಲಗಳು ಸಿಗುತ್ತಿಲ್ಲ. ಮಾರುಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗದಂತಾಗಿದೆ ಎಂದರು.

  • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಪರ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬ್ಯಾಟ್ ಬೀಸಿದ್ದಾರೆ.

    ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಹೈಕಮಾಂಡ್ ನಿರ್ಧಾರ ಗೊತ್ತಾಗುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ ಅವರು, ಅಧ್ಯಕ್ಷ ಸ್ಥಾನವನ್ನು ಎಚ್.ಕೆ.ಪಾಟೀಲ್ ಅವರಿಗೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಂತೆ ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಎಚ್.ಕೆ.ಪಾಟೀಲ್ ಅವರು ಸೂಕ್ತ ವ್ಯಕ್ತಿ, ಅವರನ್ನೇ ಅಧ್ಯಕ್ಷರನ್ನಾಗಿ ಮಾಡುವುದು ಉತ್ತಮ ಎಂದು ಹೈಕಮಾಂಡ್ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ ಲಾಬಿ ನಡೆಸಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿರುವ ಅವರು, ಮುನಿಸಿಕೊಂಡಿರುವ ಲಿಂಗಾಯತರು ಕಾಂಗ್ರೆಸ್ ಪರವೇ ನಿಲ್ಲುತ್ತಾರೆ. ಬೇರೆ ಎಲ್ಲಿಯೂ ಹೋಗಲ್ಲ. ಎಲ್ಲ ಅರ್ಹತೆ ಹೊಂದಿರುವ ಎಚ್.ಕೆ.ಪಾಟೀಲ್ ಅವರು ಅಧ್ಯಕ್ಷರಾದರೆ ಪಕ್ಷಕ್ಕೆ ಒಳಿತಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.

    ಮುಂದಿನ ರಾಜಕೀಯ ಪರಿಸ್ಥಿತಿಯ ಮೇಲೆ ನಿಯಂತ್ರಣ ಹೇರಲು ಮಲ್ಲಿಕಾರ್ಜುನ ಖರ್ಗೆ ಅವರು ಎಚ್.ಕೆ.ಪಾಟೀಲ್ ಅವರನ್ನು ಬೆಂಬಲಿಸುತ್ತಿದ್ದಾರೆ. ಇವರಿಬ್ಬರ ಮಧ್ಯೆ ಆತ್ಮೀಯ ಸಂಬಂಧವಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಸಿಗುವ ಅವಕಾಶವಿದ್ದರೆ ಎಚ್.ಕೆ.ಪಾಟೀಲರ ಮೂಲಕ ಪಡೆಯಬಹುದು ಎನ್ನುವ ಸೂತ್ರವನ್ನು ಮಲ್ಲಿಕಾರ್ಜುನ್ ಖರ್ಗೆ ಅವರು ಸಿದ್ಧ ಪಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

  • 11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

    11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

    ಬೀದರ್: ನಾನು 11 ಬಾರಿ ಶಾಸಕನಾಗಿ ಗೆಲುವು ಸಾಧಿಸಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ನನಗೆಷ್ಟು ನೋವು ಆಗಿರಬಹುದು ಎಂದು ಲೋಕಸಭೆಯ ಕಾಂಗ್ರೆಸ್ಸಿನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬೀದರ್ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಸಚಿವ ರಾಜಶೇಖರ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಸಿಗದ್ದಕ್ಕೆ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದರು.

    ಸಚಿವ ಸ್ಥಾನ ವಂಚಿತರಿಗೆ ಸಲಹೆ ನೀಡುತ್ತ ಮಾತನಾಡಿದ ಅವರು, ಕೆಲವರಿಗೆ ಸಮಯಾನುಸಾರ ಸಿಗುತ್ತದೆ, ಇನ್ನು ಕೆಲವೊಮ್ಮೆ ಸಿಗುವುದೇ ಇಲ್ಲ. ರಹೀಂಖಾನ್ ಹಾಗೂ ಈಶ್ವರ್ ಖಂಡ್ರೆಗೆ ಸಚಿವ ಸ್ಥಾನ ಸಿಗದೇ ಇದ್ದಿದ್ದಕ್ಕೆ ನಿಮಗೆ ಬೇಸರವಾಗಿರಬಹುದು. ಆದರೆ ನಾನು 11 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಒಮ್ಮೆಯೂ ನನಗೆ ಸಿಎಂ ಸ್ಥಾನ ಸಿಗಲಿಲ್ಲ. ನನಗೆ ಎಷ್ಟು ನೋವು ಆಗಿರಬಹುದು. ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಆಗಲಾದರೂ ಸಿಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ಹಾಗೂ ಆರ್ ಎಸ್‍ಎಸ್ ಧೋರಣೆಗಳನ್ನು ದೂರವಿಡಬೇಕು ಎನ್ನುವ ಆಲೋಚನೆಯಿಂದ ಮೈತ್ರಿ ಸರ್ಕಾರಕ್ಕೆ ಮುಂದಾಗಿದ್ದೇವೆಯೇ ಹೊರತು ನಮ್ಮ ಖುಷಿಗಾಗಿ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಣಾಳಿಕೆ ಪ್ರಕಾರ ಕೆಲಸ ಮಾಡಿದೆ. ಆದರೆ ಮತದಾರರು ಯಾಕೆ ಇಂತಹ ಶಿಕ್ಷೆ ಕೊಟ್ಟಿದ್ದಾರೆಂದು ಗೊತ್ತಾಗುತ್ತಿಲ್ಲ ಎಂದು ಅವರು ಹೇಳಿದರು.

    ಸಚಿವ ಸ್ಥಾನ ವಂಚಿತ ಶಾಸಕ ಈಶ್ವರ್ ಖಂಡ್ರೆ ಗೈರಾಗಿದ್ದರು. ಸಹಕಾರ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಅರಳಿ, ಡಾ. ಚಂದ್ರಶೇಖರ ಪಾಟೀಲ ಹಾಗೂ ವಿಜಯಸಿಂಗ್, ಬಸವಕಲ್ಯಾಣ ಶಾಸಕ ಬಿ.ನಾರಾಯಣ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ಮೂವರು ಘಟಾನುಘಟಿ ‘ಕೈ’ ನಾಯಕರ ನಡುವೆ ಪುತ್ರ-ಪುತ್ರಿ ವಾತ್ಸಲ್ಯದ ಬಿಗ್ ಫೈಟ್!

    ಮೂವರು ಘಟಾನುಘಟಿ ‘ಕೈ’ ನಾಯಕರ ನಡುವೆ ಪುತ್ರ-ಪುತ್ರಿ ವಾತ್ಸಲ್ಯದ ಬಿಗ್ ಫೈಟ್!

    ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ಆಯ್ತು, ಖಾತೆ ಹಂಚಿಕೆಯೂ ಆಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹಿರಿಯ ನಾಯಕರು ತಮ್ಮ ಮಕ್ಕಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಈ ಬಾರಿಯ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಕೋಲಾರ ಸಂಸದ ಮುನಿಯಪ್ಪರ ಪುತ್ರಿ ರೂಪಾ ಶಶಿಧರ್ ಅವರಿಗೆ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಂಸದ ಮುನಿಯಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮೇಲೆ ಮುನಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಕ್ಷದಲ್ಲಿ ಯಾರು ನಿರ್ಧಾರ ಕೈಗೊಳ್ಳುತ್ತಾರೋ ಅಂತಾ ತಿಳಿಯುತ್ತಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನಿಯಪ್ಪರ ಪುತ್ರಿ ಈ ಬಾರಿ ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ಮೊದಲ ಸಚಿವ ಸಂಪುಟದಲ್ಲಿ ಪುತ್ರಿಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಎರಡನೇ ಸುತ್ತಿನಲ್ಲಾದ್ರೂ ಮಗಳಿಗೆ ಸಚಿವ ಸ್ಥಾನ ನೀಡುವಂತೆ ಮುನಿಯಪ್ಪ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದಲಿತ ಎಡಗೈ ಕೋಟಾದಡಿ ಮಗಳನ್ನು ಸಚಿವರನ್ನಾಗಿ ಮಾಡಬೇಕೆಂದು ಮುನಿಯಪ್ಪ ಪಟ್ಟು ಹಿಡಿದಿದ್ದಾರೆ ಎಂದು ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ

    ನಿಮ್ಮ ಮಕ್ಕಳಿಗಾದ್ರೆ ಸಚಿವ ಸ್ಥಾನ ನೀಡ್ತಾರೆ, ಆದರೆ ನಮಗೆ ಏಕೆ ಕೊಡಲ್ಲ ಅಂತಾ ಪರೋಕ್ಷವಾಗಿ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಅಸಮಾಧಾನ ಹಾಕಿದ್ದಾರಂತೆ. ಇತ್ತ ಸಿದ್ದರಾಮಯ್ಯ ಎರಡನೇ ಸುತ್ತಿನಲ್ಲಿ ವರುಣಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಯತೀಂದ್ರರಿಗೆ ಸಚಿವ ಸ್ಥಾನ ಕೊಡಿಸುವ ಯತ್ನದಲ್ಲಿದ್ದೀರಾ ಎಂದು ಮುನಿಯಪ್ಪ ಅಸಮಾಧಾನ ಹೊರ ಹಾಕಿದ್ದಾರೆ.  ಇದನ್ನೂ ಓದಿ: ಎಂಬಿ ಪಾಟೀಲ್ ಬಣದಲ್ಲಿರೋ 19 ಶಾಸಕರು ಯಾರು? ಇಲ್ಲಿದೆ ಪಟ್ಟಿ

  • ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿಲ್ಲ: ಮಲ್ಲಿಕಾರ್ಜುನ್ ಖರ್ಗೆ

    ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿಲ್ಲ: ಮಲ್ಲಿಕಾರ್ಜುನ್ ಖರ್ಗೆ

    ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿವೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿಶೇಷ ಸಂದರ್ಶನ ನೀಡಿದ್ದು, ಅಧಿಕಾರಕ್ಕಾಗಿ ನಾವು ಒಂದಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿದೆ ಎಂಬುವುದು ನಮ್ಮ ವಿರೋಧಿಗಳ ಮಾತು. ಆದ್ರೆ ತತ್ವ ಸಿದ್ದಾತಗಳ ಅಡಿಯಲ್ಲಿ ಒಂದಾಗಿದ್ದೇವೆ. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನ ಬಾಹಿರ ಮತ್ತು ಅಕ್ರಮವಾಗಿ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ವಿರುದ್ಧ ಹೋರಾಟ ಮಾಡುವ ಸಲುವಾಗಿ ಎರಡೂ ಪಕ್ಷಗಳು ಒಂದಾಗಿವೆ ಅಂತಾ ತಿಳಿಸಿದ್ರು.

    ಈ ಹಿಂದೆ 5 ವರ್ಷಗಳಲ್ಲಿ ಕಾಂಗ್ರೆಸ್ ಹಲವು ಜನಪರ ಯೋಜನೆಗಳನ್ನು ತಂದಿದೆ. ನಮ್ಮ ಎಲ್ಲ ಕಾರ್ಯಕ್ರಮಗಳು ಸಹ ರಾಜ್ಯದ ಜನರಿಗೂ ತಲುಪಿವೆ. ಆದ್ರೂ ಚುನಾವಣೆಯಲ್ಲಿ ಅನಿರೀಕ್ಷಿತವಾದ ಫಲಿತಾಂಶ ಹೊರಬಂದಿದ್ದು, ನಾವು ಎಲ್ಲಿ ಎಡವಿದ್ದು, ನಮ್ಮ ನ್ಯೂನತೆಗಳು ಏನು ಎಂಬುದರ ಬಗ್ಗೆ ಗ್ರೌಂಡ್ ಲೆವಲ್‍ನಿಂದ ಮಾಹಿತಿ ಪಡೆದುಕೊಂಡು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಲಿದ್ದೇವೆ. ಇಂತಹ ಕಾರಣಗಳಿಗೆ ನಮಗೆ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಆಗಿಲ್ಲ ಎಂಬುದನ್ನು ಈ ಸಮಯದಲ್ಲಿ ಹೇಳಲು ಸಾಧ್ಯವಿಲ್ಲ ಅಂತಾ ಸ್ಪಷ್ಟಪಡಿಸಿದ್ರು.

    ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಎಲ್ಲಿಯೂ ಹಿನ್ನಡೆಯಾಗಿಲ್ಲ. ಶೇಕಡಾವಾರು ಮತಗಳನ್ನು ನೋಡಿದ್ರೆ ಹೆಚ್ಚಿನ ಮತಗಳು ಕಾಂಗ್ರೆಸ್‍ಗೆ ಲಭಿಸಿದ್ದು, ಜಾತ್ಯಾತೀತ ಪಕ್ಷಗಳು ಸಹ ನಮ್ಮೊಂದಿಗಿವೆ. ಬಿಜೆಪಿ ಅಧಿಕಾರದ ದುರಾಸೆಯಿಂದಾಗಿ ಯಡಿಯೂರಪ್ಪ ಅವರಿಗೆ ಪ್ರಮಾಣ ವಚನ ನೀಡುವಂತೆ ಮಾಡಿತು. ಆದ್ರೂ ವಿಶ್ವಾಸಮತ ಯಾಚನೆಗೂ ಮುನ್ನವೇ ಬಿಜೆಪಿ ಸೋಲೊಪ್ಪಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‍ಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಭವಿಷ್ಯವಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.

  • ಪ್ರತಿಭಟನೆ ಮಾಡ್ತೀರೋ ಉದ್ದೇಶ ತಿಳಿಸಿದ ಮಲ್ಲಿಕಾರ್ಜುನ್ ಖರ್ಗೆ

    ಪ್ರತಿಭಟನೆ ಮಾಡ್ತೀರೋ ಉದ್ದೇಶ ತಿಳಿಸಿದ ಮಲ್ಲಿಕಾರ್ಜುನ್ ಖರ್ಗೆ

    ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರುನಾಡಿನ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ವಿಕಾಸ ಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

    ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಪ್ರತಿಭಟನೆ ಮಾಡ್ತೀರೊ ಉದ್ದೇಶವನ್ನು ತಿಳಿಸಿದ್ರು. ನಮ್ಮ ಬಳಿ ಬಹುಮತದ ನಂಬರ್ ಇದ್ರೂ ಸರ್ಕಾರ ರಚನೆಗೆ ನಮಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಯಾವ ರಾಜ್ಯಪಾಲರು ಬಹುಮತ ಸಾಬೀತಿಗೆ 15 ದಿನದ ಅವಕಾಶ ನೀಡಿಲ್ಲ ಅಂತಾ ಆಕ್ರೋಶ ಹೊರ ಹಾಕಿದ್ರು.

    ಈ 15 ದಿನದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಹಾಗು ಜೆಡಿಎಸ್ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ್ದೇ ಕಾನೂನು ಬಾಹಿರ ಅಂತಾ ಖರ್ಗೆ ಗುಡುಗಿದರು.

  • ಪ್ರಧಾನಿ ಮೋದಿ ಬೇಕಾಬಿಟ್ಟಿಯಾಗಿ ಮಾತನಾಡೋದನ್ನ ಬಿಡ್ಬೇಕು: ಮಲ್ಲಿಕಾರ್ಜುನ್ ಖರ್ಗೆ

    ಪ್ರಧಾನಿ ಮೋದಿ ಬೇಕಾಬಿಟ್ಟಿಯಾಗಿ ಮಾತನಾಡೋದನ್ನ ಬಿಡ್ಬೇಕು: ಮಲ್ಲಿಕಾರ್ಜುನ್ ಖರ್ಗೆ

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಬೇಕಾಬಿಟ್ಟಿಯಾಗಿ ಮಾತನಾಡೋದನ್ನು ಬಿಡಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

    ಕಲಬುರಗಿ ಗಂಗಾ ನಗರದಲ್ಲಿ ದಕ್ಷಿಣ ಹಾಗೂ ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಖರ್ಗೆ, ಮೋದಿ ತಾವೊಬ್ಬರೇ ಬುದ್ಧಿವಂತ ಅಂತ ಅಂದುಕೊಂಡಿದ್ದಾರೆ. ಅವರಿಗಿಂತ ಬುದ್ಧಿವಂತರು ದೇಶದಲ್ಲಿ ಕೋಟ್ಯಾಂತರ ಜನರಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಮೋದಿ ಸಾಕಷ್ಟು ಕಲಿಯಬೇಕಾಗಿದೆ ಅಂತ ಸಲಹೆ ನೀಡಿದ್ರು.

    ಇದೇ ವೇಳೆ ಕಾಂಗ್ರೆಸ್ ಡೀಲ್ ಪಕ್ಷವೆಂಬ ಬಿಜೆಪಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, ವಿಜಯ್ ಮಲ್ಯ, ನೀರವ್ ಮೋದಿ ಅಂತವರು ದೇಶವನ್ನು ಕೊಳ್ಳೆ ಹೊಡೆದು ಹೋಗಿದ್ದಾರೆ. ದೇಶವನ್ನು ಲೂಟಿ ಮಾಡಿದವರಿಗೆಲ್ಲ ಮೋದಿ ಸಹಾಯ ಮಾಡಿದ್ದಾರೆ ಅಂತಾ ಆರೋಪಿಸಿದ್ರು.

  • ಕಲಘಟಗಿಯಲ್ಲಿ ಲಾಡ್‍ಗೆ ಮತ್ತೆ ತರಾಟೆ – ಮೈಸೂರಿನಲ್ಲಿ ಖರ್ಗೆಗೆ ಪ್ರಶ್ನೆಗಳ ಸುರಿಮಳೆ – ಸಿವಿ ರಾಮನ್‍ನಗರ ಶಾಸಕರಿಗೆ ಫುಲ್ ಕ್ಲಾಸ್

    ಕಲಘಟಗಿಯಲ್ಲಿ ಲಾಡ್‍ಗೆ ಮತ್ತೆ ತರಾಟೆ – ಮೈಸೂರಿನಲ್ಲಿ ಖರ್ಗೆಗೆ ಪ್ರಶ್ನೆಗಳ ಸುರಿಮಳೆ – ಸಿವಿ ರಾಮನ್‍ನಗರ ಶಾಸಕರಿಗೆ ಫುಲ್ ಕ್ಲಾಸ್

    ಮೋದಿ 15 ಲಕ್ಷ ಅಕೌಂಟ್‍ಗೆ ಹಾಕಿದ್ನಾ- ಏಕವಚನದಲ್ಲೇ ಗ್ರಾಮಸ್ಥರಿಂದ ಸಂತೋಷ್ ಲಾಡ್ ಗೆ ಪ್ರಶ್ನೆ

    ಬೆಂಗಳೂರು: ಸಚಿವ ಸಂತೋಷ್ ಲಾಡ್ ಕಲಘಟಗಿ ಕ್ಷೇತ್ರದ ಪ್ರಚಾರಕ್ಕೆ ಹೋದಾಗಲೆಲ್ಲಾ ತೀವ್ರ ಮುಖಭಂಗ ಅನುಭವಿಸ್ತಿದ್ದಾರೆ. ಗ್ರಾಮದ ಸಮಸ್ಯೆಗಳನ್ನ ಇತ್ಯಥ್ರ್ಯ ಮಾಡಿಲ್ಲ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಮೋದಿ ಮೋದಿ ಅಂತ ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಲಾಡ್, ಮೋದಿ 15 ಲಕ್ಷ ಅಕೌಂಟ್‍ಗೆ ಹಾಕಿದ್ನಾ ಎಂದು ಏಕವಚನದಲ್ಲೇ ಪ್ರಶ್ನಿಸಿದ್ರು. ಈ ವೇಳೆ ಲಾಡ್ ಹಾಗೂ ಗ್ರಾಮಸ್ಥರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

    ಮೈಸೂರಿನಲ್ಲಿ ರೋಡ್‍ಶೋ ನಡೆಸುತ್ತಿದ್ದ ಮಲ್ಲಿಕಾರ್ಜುನ್ ಖರ್ಗೆಗೆ ಸ್ಥಳೀಯ ದಲಿತ ಮುಖಂಡರು ಪ್ರಶ್ನೆಗಳ ಸುರಿಮಳೆಗೈದ್ರು. ಎಲ್ಲಾ ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್‍ಗೆ ವೋಟ್ ಹಾಕ್ತೀವಿ. ಆದ್ರೆ ಪರಮೇಶ್ವರ್ ಕ್ಷೇತ್ರದಲ್ಲಿ ಸಿಎಂ ಸಮುದಾಯದವರು ಯಾಕೆ ಕಾಂಗ್ರೆಸ್‍ಗೆ ವೋಟ್ ಹಾಕಲ್ಲ ಅಂತ ಪ್ರಶ್ನಿಸಿದ್ರು. ಅಶೋಕಪುರಂನಲ್ಲಿ ಖರ್ಗೆ ಪ್ರಚಾರ ವಾಹನ ತಡೆದ ಯುವಕನೊಬ್ಬ ದಲಿತ ಮುಖ್ಯಮಂತ್ರಿಗಾಗಿ ಆಗ್ರಹಿಸಿದ್ರು.

    ಇತ್ತ ಬೆಂಗಳೂರಿನ ಸಿವಿ ರಾಮನ್‍ನಗರದಲ್ಲಿ ವೋಟ್ ಕೇಳಲು ಹೋದ ಬಿಜೆಪಿ ಅಭ್ಯರ್ಥಿ, ಶಾಸಕ ರಘು ಅವರಿಗೆ ಜನ ಚಳಿ ಬಿಡಿಸಿದ್ರು. ಎಲೆಕ್ಷನ್ ಟೈಂನಲ್ಲಿ ಮನೆ ಹುಡ್ಕೊಂಡು ಬರ್ತೀರಾ, ಬೇರೆ ಟೈಂನಲ್ಲಿ ಕೈಗೆ ಸಿಗಲ್ಲ ಅಂತಾ ಜನ ಗರಂ ಆದ್ರು. ಈ ವೇಳೆ ಶಾಸಕರು ಬಾಯ್ತಪ್ಪಿ ವೋಟು ಬೇಡ ಹೋಗ್ರಿ ಅಂದಿದ್ದಾರೆ. ಕೊನೆಗೆ ಜನ್ರ ಆಕ್ರೋಶಕ್ಕೆ ಬೆದರಿದ ಶಾಸಕರು ಸ್ಥಳದಿಂದ ಕಾಲ್ಕಿತ್ತರು.