Tag: ಮಲ್ಲಿಕಾರ್ಜುನ ಸ್ವಾಮಿ

  • MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ  ಸಿಎಂ ಬಾಮೈದ!

    MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಮೈಸೂರು: ರಾತ್ರೋರಾತ್ರಿ ನೋಟಿಸ್‌ ಇಲ್ಲದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA Scam) ಸೈಟ್‌ ಹಂಚಿಕೆ ಅಕ್ರಮದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಪಿ (Lokayukta SP) ಟಿ.ಜೆ.ಉದೇಶ್ ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಭಾಮೈದ ಮಲ್ಲಿಕಾರ್ಜುನ ಸ್ವಾಮಿ (Mallikarjuna Swamy) ಭೇಟಿ ಮಾಡಿದ್ದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

    ಹೌದು. ಮಂಗಳವಾರ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್‌ (DB Natesh) ಲೋಕಾಯುಕ್ತ ಎಸ್‌ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ನಟೇಶ್‌ ವಿಚಾರಣೆ ಮುಗಿದ ಅರ್ಧಗಂಟೆಯ ಬಳಿಕ ಮಲ್ಲಿಕಾರ್ಜುನ ಸ್ವಾಮಿ ಅವರು ಉದೇಶ್ ಅವರನ್ನು ಭೇಟಿಯಾಗಿದ್ದಾರೆ.

    ಮಲ್ಲಿಕಾರ್ಜುನ ಸ್ವಾಮಿ ಸಿಎಂ ಪತ್ನಿ ಸೈಟ್ ಪಡೆದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ. ರಾತ್ರಿ 7:30ಕ್ಕೆ ಲೋಕಾಯುಕ್ತ ಕಚೇರಿಗೆ ದಿಢೀರ್‌ ಎಂಟ್ರಿ ನೀಡಿದ ಅವರು 8 ಗಂಟೆಯವರೆಗೆ ಕಚೇರಿ ಒಳಗಡೆಯೇ ಇದ್ದರು.

    ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತರಿಂದ ನೋಟಿಸ್‌ ನೀಡಿದ್ದರೆ ಸಾಧಾರಣವಾಗಿ ಆರೋಪಿಗಳು ಬೆಳಗ್ಗೆ ಅಥವಾ ಮಧ್ಯಾಹ್ನದ ನಂತರ ಹಾಜರಾಗುತ್ತಾರೆ. ಆದರೆ ಇಲ್ಲಿ ವಿಚಾರಣೆಯೂ ಇಲ್ಲ, ನೋಟಿಸ್‌ ಇಲ್ಲದೇ ಇದ್ದರೂ ರಾತ್ರಿ ವೇಳೆ ತನಿಖಾಧಿಕಾರಿಯನ್ನು ಆರೋಪಿ ಭೇಟಿ ಮಾಡಿದ್ದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿದೆ.

    ಮಲ್ಲಿಕಾರ್ಜುನಸ್ವಾಮಿ ಅವರ‌ನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನ.18 ರಂದು ವಿಚಾರಣೆಗೆ ಒಳಪಡಿಸಿದ್ದರು. ಇದನ್ನೂ ಓದಿ: ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ

    ಎದ್ದಿದೆ ಹಲವು ಪ್ರಶ್ನೆಗಳು
    – ರಾತ್ರೋರಾತ್ರಿ ತನಿಖಾಧಿಕಾರಿ ಭೇಟಿ ಮಾಡುವ ಅನಿವಾರ್ಯತೆ ಆರೋಪಿಗೆ ಏನಿತ್ತು?
    – ಮಾಜಿ ಆಯುಕ್ತ ವಿಚಾರಣೆ ಮುಗಿದ ಕೂಡಲೇ ವಿಚಾರಣಾಧಿಕಾರಿಯನ್ನು ಆರೋಪಿ ಭೇಟಿ ಮಾಡಿದ್ದು ಯಾಕೆ?
    – ರಾತ್ರಿ ವೇಳೆ ಲೋಕಾಯುಕ್ತ ಕಚೇರಿಗೆ ಬರಲು ಆರೋಪಿಗೆ ಅವಕಾಶ ಕೊಟ್ಟಿದ್ದು ಯಾರು?

  • ನಿರ್ಬಂಧಿತ ಬೆಟ್ಟದಲ್ಲಿ ಭಕ್ತನಿಂದ ರಾತ್ರೋರಾತ್ರಿ ರಸ್ತೆ ನಿರ್ಮಾಣ

    ನಿರ್ಬಂಧಿತ ಬೆಟ್ಟದಲ್ಲಿ ಭಕ್ತನಿಂದ ರಾತ್ರೋರಾತ್ರಿ ರಸ್ತೆ ನಿರ್ಮಾಣ

    ರಾಯಚೂರು: ಮಸ್ಕಿ ಪಟ್ಟಣದಲ್ಲಿ ರಾತ್ರೋ ರಾತ್ರಿ ನಿರ್ಬಂಧಿತ ಐತಿಹಾಸಿಕ ಬೆಟ್ಟ ಅಗೆದು ರಸ್ತೆ ನಿರ್ಮಾಣ ಮಾಡಲಾಗಿದೆ.

    ಪುರಾತತ್ವ ಇಲಾಖೆಗೆ ಸೇರಿದ ಬೆಟ್ಟದಲ್ಲಿ ಸುಮಾರು 6 ಕಿಮೀ ಅಕ್ರಮವಾಗಿ ರಸ್ತೆ ನಿರ್ಮಾಣವಾಗಿದೆ. ಇಲ್ಲಿನ ಐತಿಹಾಸಿಕ ಮಲ್ಲಿಕಾರ್ಜುನ ದೇವಸ್ಥಾನದ ಪಕ್ಕದಲ್ಲೆ ಬೆಟ್ಟ ಅಗೆದು ಅಪರಿಚಿತರು ರಸ್ತೆ ನಿರ್ಮಿಸಿದ್ದಾರೆ.

    ಪರವಾನಿಗೆ ಇಲ್ಲದೇ ರಾತ್ರಿ ವೇಳೆ ಹಿಟಾಚಿ, ಲಾರಿ ತಂದು ಬೆಟ್ಟ ಕೊರೆದಿದ್ದಾರೆ. ವಿಷಯ ತಿಳಿದು ಸ್ಥಳೀಯರು ಬೆಟ್ಟಕ್ಕೆ ಬಂದಾಗ ಜೆ.ಸಿ.ಬಿ ಹಾಗೂ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಅಲ್ಲಿದ್ದವರು ಪರಾರಿಯಾಗಿದ್ದಾರೆ. ಸುಮಾರು ಆರು ಕಿ.ಮೀ ರಸ್ತೆ ನಿರ್ಮಾಣವಾದರೂ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ಥಳೀಯರ ದೂರಿನ ಮೇರೆಗೆ ಮಸ್ಕಿ ತಹಶೀಲ್ದಾರ್ ಬಲರಾಮ ಕಟ್ಟೀಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂಧನೂರು ಮೂಲದ ಮಲ್ಲಿಕಾರ್ಜುನ ಸ್ವಾಮಿ ಭಕ್ತನೋರ್ವ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದ ಎನ್ನಲಾಗಿದೆ. ಆದರೆ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದವರ ವಿರುದ್ಧ ಇನ್ನೂ ಯಾವುದೇ ಕ್ರಮ ಜರುಗಿಸಿಲ್ಲ.

    ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.