ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿಯು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-19
ಮಂಗಳೂರು: 29-24
ಶಿವಮೊಗ್ಗ: 28-19
ಬೆಳಗಾವಿ: 26-20
ಮೈಸೂರು: 30-20
ನವದೆಹಲಿ: ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ (Insufficient Moisture) ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು (Cloud Seeding Trial) ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT Kanpur) ಪ್ರಕಟಣೆಯಲ್ಲಿ ತಿಳಿಸಿದೆ.
ಕೃತಕವಾಗಿ ಮಳೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿರುವ ಈ ಪ್ರಕ್ರಿಯೆಯು ಸರಿಯಾದ ಮೋಡ ಮತ್ತು ತೇವಾಂಶದ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ದೆಹಲಿ ಸರ್ಕಾರವು ಐಐಟಿ-ಕಾನ್ಪುರದ ಸಹಯೋಗದೊಂದಿಗೆ ಮಂಗಳವಾರ ಬುರಾರಿ, ಉತ್ತರ ಕರೋಲ್ ಬಾಗ್, ಮಯೂರ್ ವಿಹಾರ್ ಮತ್ತು ಬದ್ಲಿ ಸೇರಿದಂತೆ ಎರಡು ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಿತು. ದೆಹಲಿಯಲ್ಲಿ ಯಾವುದೇ ಮಳೆ ದಾಖಲಾಗಿಲ್ಲವಾದರೂ, ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಕೆಲವು ಭಾಗಗಳಲ್ಲಿ ಲಘು ಮಳೆಯಾಗಿದೆ. ಇದನ್ನೂ ಓದಿ: ಕಾರಿನ ಮಿರರ್‌ಗೆ ಟಚ್ ಆಯ್ತು ಅಂತ ಚೇಸ್ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ
ಪ್ರಯೋಗಗಳ ಸಮಯದಲ್ಲಿ ತೇವಾಂಶದ ಮಟ್ಟವು ಕೇವಲ 15-20 ಪ್ರತಿಶತದಷ್ಟಿತ್ತು, ಇದು ಮಳೆಯನ್ನು ಉಂಟುಮಾಡಲು ಸಾಕಾಗಲಿಲ್ಲ. ಮೋಡ ಬಿತ್ತನೆ ಬಳಿಕ ತೇವಾಂಶದ ಮಟ್ಟವು ಕೇವಲ 50-60 ಪ್ರತಿಶತದಷ್ಟಿರಬೇಕು. ಈ ಕಾರಣದಿಂದ ದೆಹಲಿಯಲ್ಲಿ ಮಳೆ ಸಾಧ್ಯವಾಗಿಲ್ಲ. ಹವಾಮಾನ ಪರಿಸ್ಥಿತಿಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಪ್ರಯತ್ನಿಸಲಾಗುವುದು ಎಂದು ಐಐಟಿ-ಕೆ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್ ಬರೆದು ಹೈಡ್ರಾಮಾ!
– ಕರಾವಳಿ ಪ್ರದೇಶದಲ್ಲಿರುವ ಜನರ ಸ್ಥಳಾಂತರ – ರೈಲು, ವಿಮಾನ ಸಂಚಾರಕ್ಕೆ ಚಂಡಮಾರುತ ಅಡ್ಡಿ
ನವದೆಹಲಿ: ಮೊಂಥಾ ಚಂಡಮಾರುತ (Cyclone Montha) ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದೆ. ಪರಿಣಾಮ ಆಂಧ್ರಪ್ರದೇಶ ಮತ್ತು ಒಡಿಶಾದ (Odisha) ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.
ಮಂಗಳವಾರ ಸಂಜೆ 7 ಗಂಟೆಗೆ ಮೊಂಥಾ ಆಂಧ್ರಪ್ರದೇಶದ ಕರಾವಳಿಯ ಭಾಗವಾದ ಮಚಲಿಪಟ್ಟಣ ಮತ್ತು ಮತ್ತು ಕಳಿಂಗಪಟ್ಟಣ ಮಧ್ಯೆ ಅಪ್ಪಳಿಸಿತು. ಗಂಟೆಗೆ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಕೊನಸೀಮಾ ಜಿಲ್ಲೆಯಲ್ಲಿ ಮರವೊಂದು ಮನೆಯ ಮೇಲೆ ಬಿದ್ದು ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯಾದ್ಯಂತ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 6 ಗಂಟೆಗಳಲ್ಲಿ ಅದರ ತೀವ್ರತೆಯನ್ನು ಕಾಯ್ದುಕೊಳ್ಳಲಿದೆ. 6 ಗಂಟೆಯ ನಂತರ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
(A) Severe Cyclonic Storm “Montha” [Pronunciation: Mon-Tha] weakened into a Cyclonic Storm over coastal Andhra Pradesh
The Severe Cyclonic Storm “Montha” [Pronunciation: Mon-Tha] over coastal Andhra Pradesh moved nearly northwestwards with a speed of 10 kmph during past six… pic.twitter.com/cDQmMDqdVm
— India Meteorological Department (@Indiametdept) October 28, 2025
ಮುಂದಿನ 36 ಗಂಟೆಗಳಲ್ಲಿ ಇದು ಪೂರ್ವ-ಮಧ್ಯ ಅರಬ್ಬೀ ಸಮುದ್ರದಾದ್ಯಂತ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಕರಾವಳಿ ವೀಕ್ಷಣಾಲಯಗಳು, ಸ್ವಯಂಚಾಲಿತ ಹವಾಮಾನ ಕೇಂದ್ರಗಳು (AWS) , ಹಡಗುಗಳು ಮತ್ತು ಬೋಯ್‌ಗಳು ಮತ್ತು ಉಪಗ್ರಹಗಳ ಜೊತೆಗೆ ಮಚಲಿಪಟ್ಟಣಂ ಮತ್ತು ವಿಶಾಖಪಟ್ಟಣದಲ್ಲಿರುವ ಡಾಪ್ಲರ್ ಹವಾಮಾನ ರಾಡಾರ್ (DWR) ಮೂಲಕ ಈ ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕಾಕಿನಾಡ, ಕೃಷ್ಣ, ಎಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಮತ್ತು ಚಿಂತೂರು ಮತ್ತು ರಾಮಪಚೋಡವರಂ ಭಾಗಗಳು ಚಂಡಮಾರುತದ ಗರಿಷ್ಠ ಪರಿಣಾಮವನ್ನು ಕಾಣುತ್ತಿವೆ.
ఈదురు గాలుల కారణంగా విద్యుత్ సరఫరా నిలిచిపోయిన చోట, వెంటనే పునరుద్ధరించేలా చర్యలు తీసుకోవాలని గౌరవ ముఖ్యమంత్రి శ్రీ నారా చంద్రబాబు నాయుడు ఆదేశించారు. తుఫాను ప్రభావం ఉన్న ప్రాంతాల్లోని గ్రామ-వార్డు సచివాలయాల సిబ్బందితో ఆర్టీజీఎస్ నుంచి టెలీ కాన్ఫరెన్స్ నిర్వహించారు. బాధితులకు… pic.twitter.com/ksCi6KPIhR
ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಈ ಏಳು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಮಾಹಿತಿ ನೀಡಿದ್ದು ನೆಲ್ಲೂರು ಜಿಲ್ಲೆಯಲ್ಲಿ ಇದುವರೆಗೆ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದ್ದಾರೆ.
ಮೊಂಥಾ ಎದುರಿಸಲು 22 ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ಮಾಡಲಾಗಿದ್ದು ಕರಾವಳಿ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗಿದೆ. 100ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಂಧ್ರ ಮತ್ತು ಒಡಿಶಾ ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
– ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ – ಆಂಧ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ
ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ (Bengaluru) ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.
ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.
ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 29ರವರೆಗೂ ರಾಜ್ಯದ ವಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 29ರವರೆಗೂ ರಾಜ್ಯದ ವಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
– ಉಡುಪಿ ಜಿಲ್ಲೆಗೆ ಹೈ ಅಲರ್ಟ್; ಮೀನುಗಾರಿಕೆಯ ತೆರಳಿದ್ದ ಬೋಟ್‌ಗಳೆಲ್ಲ ವಾಪಸ್
ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ (Udupi) ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್‌ನಲ್ಲಿ ಇರುವ ಬೋಟ್‌ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ
ಉಡುಪಿಯ ಬೋಟ್‌ಗಳು ಗೋವಾ, ಮಹಾರಾಷ್ಟ್ರ, ಗುಜರಾತ್ ಬಂದರು ಸೇರಿವೆ. ಮಲ್ಪೆ, ಗಂಗೊಳ್ಳಿ, ಕುಂದಾಪುರದ ಸಾವಿರಾರು ಬೋಟ್‌ಗಳು ವಾಪಸ್ ಆಗಿವೆ. ಚಂಡಮಾರುತವು ಕಡಲ ತೀರದಿಂದ ಸುಮಾರು 300 ಕಿಲೋಮೀಟರ್ ದೂರದಲ್ಲಿದೆ.
ಅರಬ್ಬೀ ಕಡಲ ತೀರದ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚರ ನೀಡಲಾಗಿದೆ. 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಳಸಮುದ್ರ, ಪರ್ಶಿಯನ್, ಟ್ರಾಲ್, ನಾಡದೋಣಿಗಳು ಲಂಗರು ಹಾಕಿವೆ. ಇದನ್ನೂ ಓದಿ: ಕರಾವಳಿಯಲ್ಲಿ ಅಬ್ಬರದ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ (Bay Of Bengal) ವಾಯಭಾರ ಕುಸಿತ ಹಿನ್ನೆಲೆ ಅ.27ರ ಹೊತ್ತಿಗೆ ಚಂಡಮಾರುತ (Cyclone) ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಹೀಗಾಗಿ ಮುಂದಿನ ಎರಡ್ಮೂರು ದಿನಗಳ ಕಾಲ ಚೈನ್ನೈನಲ್ಲಿ (Chennai) ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇಂದು ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ನಾಳೆ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.28ರವರೆಗೂ ಮಳೆ ಮುಂದುವರಿಯಲಿದೆ. ಇದನ್ನೂ ಓದಿ: ವಂಚಕರ ಪರವಾಗಿ ಪಿಎಸ್‌ಐಗೆ ಕರೆ – ಆಪ್ತನ ಕೇಸ್ ಕಾಂಪ್ರಮೈಸ್‌ಗೆ ಸಚಿವ ಜಮೀರ್ ಒತ್ತಡ ಹೇರಿದ್ರಾ?
ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್‌ನ ಮೊಂಥಾ (Montha Cyclone) ಎಂಬ ಹೆಸರು ಇಡಲಾಗಿದೆ. ಅ.27ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಾಲಿವುಡ್ ಹಾಸ್ಯ ನಟ ಸತೀಶ್ ಶಾ ನಿಧನ