Tag: ಮಳೆ ಅವಾಂತರ

  • ರಾಜ್ಯದ ಹಲವೆಡೆ ವರುಣಾರ್ಭಟ – ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

    ರಾಜ್ಯದ ಹಲವೆಡೆ ವರುಣಾರ್ಭಟ – ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

    ರಾಜ್ಯದ ಹಲವೆಡೆ ಭಾನುವಾರ (ಅ.19) ಸುರಿದ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ರೈತರ ಜಮೀನುಗಳು ಜಲಾವೃತವಾಗಿವೆ. ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಮನೆಗಳು ಜಲಾವೃತವಾಗಿವೆ. ಗದ್ದೆಗಳು, ತೋಟಗಳಿಗೆ ನೀರು ನುಗ್ಗಿ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

    ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ (ಅ.19) ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಳೆನರಸೀಪುರ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಕೆರೆಕೋಡಿ ಬಿದ್ದಿದೆ. ಇದರಿಂದಾಗಿ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ನೂರಾರು ಎಕರೆ ಪ್ರದೇಶದ ರೈತರ ಜಮೀನು ಸಂಪೂರ್ಣ ಜಲಾವೃತಗೊಂಡಿದೆ. 150ಕ್ಕೂ ಹೆಚ್ಚು ಪ್ರದೇಶದಲ್ಲಿರುವ ಕೆರೆ ಇದಾಗಿದ್ದು, ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕೋಡಿ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಿಂದ ಆಚೆ ಬರಲಾರದ ಸ್ಥಿತಿ ನಿರ್ಮಾಣವಾಗಿದ್ದು ಅಡಿಕೆ, ತೆಂಗಿನ ತೋಟ, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತವಾಗಿದೆ.ಇದನ್ನೂ ಓದಿ: ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಅರಸೀಕೆರೆ ತಾಲ್ಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ವಸ್ತುಗಳು ನೀರಿನಲ್ಲಿ ತೇಲಿ ಬಂದಿವೆ. ಕಳೆದ ಎರಡು ದಿನಗಳಿಂದ ಶಂಕರಲಿಂಗಪ್ಪ ಎಂಬುವವರ ಮನೆಗೆ ನೀರು ನುಗ್ಗುತ್ತಿದ್ದು, ರಾತ್ರಿಯಿಡಿ ನೀರು ಹೊರಹಾಕಲು ಕುಟುಂಬಸ್ಥರು ಹರಸಾಹಸ ಪಟ್ಟಿದ್ದಾರೆ. ಹೊಳೆನರಸೀಪುರ ಪಟ್ಟಣದ ಕಾರ್ಖಾನೆ ಬೀದಿಯಲ್ಲೂ ಮಂಜು ಎಂಬುವವರ ಮನೆಗೂ ನೀರು ನುಗ್ಗಿದೆ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ನೀರು ಹೊರಹಾಕುವ ಕಾರ್ಯ ಮಾಡಿದರು.

    ಇನ್ನೂ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲೂ ವ್ಯಾಪಕ ಮಳೆಯಾಗಿದೆ. ಮಿಂಚು, ಗುಡುಗು, ಸಿಡಿಲು ಹಾಗೂ ಗಾಳಿಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳಗಳು, ಕೆರೆ ಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತೆಂಗು ಹಾಗೂ ಕೃಷಿ ಜಮೀನುಗಳು ಜಲಾವೃತವಾಗಿದೆ. ತಾಲೂಕಿನ ಬಹುತೇಕ ಕೆರೆಕಟ್ಟೆಗಳಲ್ಲಿ ಶೇ.50 ರಿಂದ 60ರಷ್ಟು ನೀರು ಸಂಗ್ರಹವಾಗಿದೆ. ಒಂದ್ಕಡೆ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ರೆ, ಮತ್ತೊಂದು ಕಡೆ ಉತ್ತಮ ಮಳೆಯಿಂದ ರೈತರಲ್ಲಿ ಸಂತಸ ಮನೆ ಮಾಡಿದೆ.

    ಚಿತ್ರದುರ್ಗ ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಸುತ್ತಮುತ್ತ ಭರ್ಜರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಅರಳೀಕೆರೆ ಸಮೀಪ ಹಳ್ಳತುಂಬಿ ಹರಿಯುತ್ತಿದೆ. ಹಳ್ಳದ ನೀರು ಹರಿದು ಟೊಮೆಟೊ, ಈರುಳ್ಳಿ ಬೆಳೆ ಜಲಾವೃತವಾಗಿದೆ. ಹಿರಿಯೂರು ತಾಲ್ಲೂಕಿನ ಅರಳೀಕೆರೆ ಗೊಲ್ಲರಹಟ್ಟಿಯ ಮುದ್ದಣ್ಣಗೆ ಸೇರಿದ ಎರಡು ಎಕರೆಯಲ್ಲಿ ಬೆಳೆದ ಟೊಮ್ಯಾಟೊ ಜಲಾವೃತದಿಂದ ರೈತರು ಕಂಗಾಲಾಗಿದ್ದಾರೆ. ಈರುಳ್ಳಿ ಮತ್ತು ದಾಳಿಂಬೆ ಬೆಳೆಗಾರರಿಗೂ ಸಂಕಷ್ಟ ಎದುರಾಗಿದೆ.ಇದನ್ನೂ ಓದಿ: ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

    ಮಂಡ್ಯದಲ್ಲಿ ಕಳೆದ ರಾತ್ರಿ ಹಲವೆಡೆ ಮಳೆಯಾಗಿದ್ದು, ನಾಗಮಂಗಲದ ಟಿಬಿ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆ ಕಟ್ಟಲು ವ್ಯಕ್ತಿಯೊಬ್ಬ ಚರಂಡಿಗೆ ಮಣ್ಣು ತುಂಬಿದ್ದರಿಂದ ಮಳೆ ನೀರು ಸರಾಗವಾಗಿ ಹರಿಯಲು ಜಾಗವಿಲ್ಲದೆ 7-8 ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಇಡೀ ನಿದ್ದೆ ಇಲ್ಲದೆ ಇಲ್ಲಿನ ಜನರು ಕಂಗಾಲಾಗಿದ್ರು. ಮನೆಯಲ್ಲಿದ್ದ ದವಸ-ಧಾನ್ಯಗಳು ನೀರು ಪಾಲಾಗಿದೆ. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮುಚ್ಚಿರುವ ಚರಂಡಿಯನ್ನು ಸರಿಪಡಿಸುವಂತೆ ಆಗ್ರಹಿಸಿದರು.

    ಕಾಫಿನಾಡು ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗಿದೆ. ಕಡೂರು ತಾಲೂಕಿನ ಎಸ್.ಮಾದಾಪುರ ಕೆರೆ ಸಂಪೂರ್ಣ ಭರ್ತಿಯಾಗಿದೆ. ಒಂದೇ ರಾತ್ರಿ ಸುರಿದ ಮಳೆಗೆ ಸುಮಾರು 15 ಎಕರೆ ವಿಸ್ತೀರ್ಣದ ಕೆರೆ ಭರ್ತಿಯಾಗಿದೆ. ಶಾಶ್ವತ ಬರಗಾಲಕ್ಕೆ ತುತ್ತಾದ ಕಡೂರು ತಾಲೂಕಿನಲ್ಲಿ ಕೆರೆ ಕೋಡಿ ಬಿದ್ದಿದ್ದನ್ನು ಕಂಡು ಸ್ಥಳೀಯರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಚಾಮರಾಜನಗರದಲ್ಲಿ ಸತತ ಮಳೆಯಿಂದಾಗಿ ತಮಿಳುನಾಡಿನ ದಿಂಬಂ ಘಾಟ್‌ನಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಕರ್ನಾಟಕ-ತಮಿಳುನಾಡಿಗೆ ಸಂಚಾರ ಮಾಡುವವರಿಗೆ ಸಂಕಷ್ಟ ಎದುರಾಗಿದೆ. ಮಣ್ಣು ರಸ್ತೆಗೆ ಬಿದ್ದಿರುವ ಹಿನ್ನಲೆ, ಟ್ರಾಫಿಕ್ ಜಾಮ್ ಉಂಟಾಗಿದೆ.

    ಇನ್ನೂ ಬೆಂಗಳೂರಿಗೆ ಇಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿಗಿಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯು ಗಂಟೆಗೆ 30-40ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

  • ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ಬೆಂಗಳೂರು: ಉತ್ತರ ಕರ್ನಾಟಕದ (Uttara Karnataka) ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ. ಸಿಎಂ ನಾಳೆ (ಸೆ.30) ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗೋ ಮುನ್ನ ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಹೋಗಲಿ. ಉತ್ತರ ಕರ್ನಾಟಕ ಪ್ರವಾಹ ಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ತುರ್ತಾಗಿ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಪ್ರತಿಯೊಂದಕ್ಕೂ ಕೇಂದ್ರಕ್ಕೆ ಕಾಯಬೇಡಿ, ನೀವೇನು ಕೊಡ್ತೀರಿ ಅದನ್ನು ಘೋಷಿಸಲಿ ಎಂದರು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದರು.

    ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆ.ಜಿ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ, ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಇನ್ನೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% ಕಮಿಶನ್ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು.

    ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನ ದಾಸ್ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್ ಅಂಟಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: ಸಿಂಪಲ್ ಸುನಿ ಗತವೈಭದ ಟೀಸರ್ ರಿಲೀಸ್

    ಬಿಡದಿಯಲ್ಲಿ ಅಭಿವೃದ್ಧಿಗಾಗಿ ಪಡೆದ ಜಮೀನನ್ನು ಹೆಚ್.ಡಿ.ಕುಮಾರಸ್ವಾಮಿ ಕೈ ಬಿಟ್ಟಿದ್ದರು. ನಾವು ಕೂಡ ಆ ಯೋಜನೆ ಕೈ ಬಿಟ್ಟಿದ್ದೆವು. ಈಗ ರಿಯಲ್ ಎಸ್ಟೇಟ್ ಮೂಲಕ ದುಡ್ಡು ಹೊಡೆಯಲು ಡಿ.ಕೆ.ಶಿವಕುಮಾರ್ ಈ ಯೋಜನೆ ಮತ್ತೆ ತಂದಿದ್ದಾರೆ. ಆನೇಕಲ್, ಯಲಹಂಕ ಮೊದಲಾದ ಭಾಗಗಳಲ್ಲಿ ನಿವೇಶನ ಮಾಡಿದ ನಂತರ ಬಿಡದಿಗೆ ಏಕೆ ಹೋಗುತ್ತಿದ್ದಾರೆ? ಈಗಾಗಲೇ ಅನೇಕ ನಿವೇಶನಗಳು ಖಾಲಿ ಇದೆ. ಬಿಡದಿಯಲ್ಲಿ ರೈತರ ಜಮೀನುಗಳಿವೆ. ಅಂತಹ ಫಲವತ್ತಾದ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಮಾಡಬಾರದು ಎಂದರು.

    ಜಾತಿ ಸಮೀಕ್ಷೆಯಲ್ಲಿ ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ ಹದಿನೈದು ದಿನಗಳಲ್ಲಿ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಸಾಕಷ್ಟು ಸಮಯ ಇಟ್ಟುಕೊಂಡು ಸಮೀಕ್ಷೆ ಮಾಡಬೇಕು. ಇದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಇಷ್ಟಪಡಿಸಲು ಮಾಡುತ್ತಿರುವ ಸಮೀಕ್ಷೆ ಎಂದರು.

    ಹಬ್ಬದ ಸಮಯದಲ್ಲಿ ಬಸ್ ದರ ಹೆಚ್ಚಳ ಮೂಲಕ ಸರ್ಕಾರ ಹಿಂದೂಗಳಿಗೆ ಬರೆ ಎಳೆದಿದೆ. ಇದು ಹಿಂದೂಗಳನ್ನು ಟಾರ್ಗೆಟ್ ಮಾಡುವ ಸರ್ಕಾರ. ಧರ್ಮಸ್ಥಳ, ಚಾಮುಂಡಿ ಬೆಟ್ಟವನ್ನು ಈಗಾಗಲೇ ಟಾರ್ಗೆಟ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರು ಮತಾಂತರದ ರಾಯಭಾರಿ ಎಂದರು.ಇದನ್ನೂ ಓದಿ: ಮಳೆಯಲ್ಲಿ ರೋಷನ್ ಜೊತೆಯಲಿ ಅನುಶ್ರೀ ಜಾಲಿ ಟ್ರಿಪ್

  • Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

    Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

    – ಉತ್ತರ ಕನ್ನಡದ 11 ತಾಲೂಕಿನಲ್ಲಿ ಶಾಲೆಗಳಿಗೆ ರಜೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ (Rain Alert) ನೀಡಲಾಗಿದೆ.

    ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ (Belagavi), ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

    ಶಿವಮೊಗ್ಗದಲ್ಲಿ ಮಳೆ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.

    ಕೊಡಗಿನಲ್ಲಿ ನಿರಂತರ ಮಳೆ
    ಇನ್ನೂ ಕೊಡಗು ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನಾನಾ ಭಾಗದಲ್ಲಿ ಅವಾಂತರ ಮುಂದುವರಿದಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು, ಧರಾಶಾಹಿಯಾಗಿವೆ.

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಬೀದರ್‌ನಲ್ಲೂ ಮಳೆಯ ಅವಾಂತರ
    ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಡಿ ಜಿಲ್ಲೆ ಬೀದರ್‌ನಲ್ಲಿ ಬಾರಿ ಅವಾಂತರಗಳು ಸೃಷ್ಟಿಯಾಗಿದೆ. ಜಿಲ್ಲೆಯ ಸಾವಿರಾರು ಎಕರೆಯಲ್ಲಿ ಬೆಳೆದ ವಿವಿಧ ಬೆಳೆಗಳು ಹಾಗೂ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಟ್ ಆಗಿದೆ. ಬೀದರ್ ತಾಲೂಕಿನ ಬುಧೇರಾ ಗ್ರಾಮದ ಸುತ್ತಮುತ್ತ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಕಬ್ಬು, ಉದ್ದು ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ನೀರು ಪಾಲಾಗಿದೆ. ಟಿ ಮಿರಜಾಪೂ ಟು ಬುಧೇರಾ ಗ್ರಾಮ ಸೇರಿದಂತೆ ಕಾಜಾನಗರ, ಚಟ್ನಳಿ, ಸಾತೋಳಿ, ಭರಿದಾಬಾದಿ, ಕಾಡವಾದಿ ಹಳ್ಳಿಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಟ್ ಆಗಿದೆ. ಪ್ರತಿ ಬಾರಿಯೂ ಮಳೆ ಬಂದಾಗ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತೆ.. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮಾಹಿತಿ ನೀಡಿದ್ರು ಸ್ಪಂದಿಸುತ್ತಿಲ್ಲ ಅಂತ ಜನರು ಹಿಡಿಶಾಪ ಹಾಕಿದ್ದಾರೆ.

    ಕಲಬುರಗಿ: ಬೆಣ್ಣೆತೋರಾ ಜಲಾಶಯ ಭರ್ತಿ
    ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತ ಮಳೆ ಹಿನ್ನೆಲೆ ಜಿಲ್ಲೆಯ ಬೆಣ್ಣೆತೋರಾ ಜಲಾಶಯ ಭರ್ತಿಯಾಗಿದ್ದು, ಇದರ ಪರಿಣಾಮ ಅಪಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನಲೆ ನದಿ ದಡದ ಜಮೀನುಗಳಲ್ಲಿನ ಬೆಳೆಗಳು ನೀರು ಪಾಲಾಗಿದೆ. ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣವಾಗಿ ಬುಡ ಸಮೇತ ನೆಲಕಚ್ಚಿದೆ. ಅದೇ ರೀತಿ ಎಳ್ಳು ಸಹ ಜಮೀನಿನಲ್ಲಿ ನೀರಿನ ರಭಸಕ್ಕೆ ಕಿತ್ತು ಹೋದ್ರೆ, ತೊಗರಿಯ ಬುಡದಲ್ಲಿ ನೀರು ನಿಂತು ನೆಟ್ಟೆ ರೋಗಕ್ಕೆ ತುತ್ತಾಗಿವೆ. ಹೀಗಿದ್ರು ಸಹ ಇಲ್ಲಿಯವರೆಗೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಅಂತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    weather

    ಹಾಸನದಲ್ಲೂ ವರಣನ ಆರ್ಭಟ ಜೋರು
    ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಸಕಲೇಶಪುರ ತಾಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ, ಮರಗಳು ಧರಾಶಾಹಿಯಾಗಿದ್ದು ಸ್ಥಳಕ್ಕೆ ಎಸಿ ರಾಜೇಶ್, ತಹಸೀಲ್ದಾರ್ ಸುಪ್ರಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೇ ಗುಡ್ಡ ಕುಸಿತದಿಂದ ಕಡಗರವಳ್ಳಿ, ಬಾಚೀಹಳ್ಳಿ, ವಳಲಹಳ್ಳಿ, ಹೊಂಗಡಹಳ್ಳ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ.

  • ರಾಜ್ಯದ ಹಲವೆಡೆ ವರುಣನ ಆರ್ಭಟ – ಮಳೆಗೆ 7 ಮಂದಿ ಬಲಿ, ಮನೆಗಳಿಗೆ ನುಗ್ಗಿದ ನೀರು

    ರಾಜ್ಯದ ಹಲವೆಡೆ ವರುಣನ ಆರ್ಭಟ – ಮಳೆಗೆ 7 ಮಂದಿ ಬಲಿ, ಮನೆಗಳಿಗೆ ನುಗ್ಗಿದ ನೀರು

    ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ (Rain) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ.

    ಹೌದು. ಮಂಗಳವಾರ (ಮೇ 14) ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಕ್ಕೆ 7 ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವೆಡೆ ಮನೆಗೆಳಿಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಠಿಯಾಗಿದೆ.

    ಬಳ್ಳಾರಿ (Ballari):
    ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾರಾವಿ ಗ್ರಾಮದ ಭೀರಪ್ಪ, ಸುನೀಲ ಮೃತ ದುರ್ದೈವಿಗಳಾಗಿದ್ದು, ವಿನೋದ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.

    ರಾಯಚೂರು (Raichur):
    ಜಿಲ್ಲೆಯಲ್ಲಿ ವಿವಿಧೆಡೆ ಗುಡುಗು ಸಹಿತ ಮಳೆ ಆಗಿದೆ. ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ರೈತ ಲಿಂಗಪ್ಪ ಮೃತಪಟ್ಟಿದ್ದಾರೆ.

    ಹಾವೇರಿ/ಕೊಪ್ಪಳ/ಚಿಕ್ಕಮಗಳೂರು:
    ಹಾವೇರಿಯ (Haveri) ರಟ್ಟಿಹಳ್ಳಿ ತಾಲ್ಲೂಕಿನ ಕುಡಪಲಿ ಗ್ರಾಮದಲ್ಲೂ ಸಿಡಿಲು ಬಡಿದು ರೈತ ಸುನೀಲ್ ಕಾಳೇರ್ ಸಾವನ್ನಪ್ಪಿದ್ದಾರೆ. ಇನ್ನೂ ಕೊಪ್ಪಳದಲ್ಲೂ ಕನಕಗಿರಿ ತಾಲೂಕಿನ ಹುಲಿಹೈದರದಲ್ಲಿ ಸಿಡಿಲು ಬಡಿದು ಯಂಕಪ್ಪ ಜಾಡಿ ಎಂಬ ರೈತ ಮೃತಪಟ್ಟಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಕಡೂರು ತಾಲೂಕಿನ ಗೆದ್ಲೆಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಯಿ ಲೋಕೇಶಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಹುಬ್ಬಳ್ಳಿ:
    ಹುಬ್ಬಳ್ಳಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಗಣೇಶ ನಗರ, ಆನಂದನಗರದಲ್ಲಿ ಮನೆಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಳೆ ನೀರಿನಲ್ಲಿ ಟೆಂಪೊ ಟ್ರಾವೆಲ್ ವಾಹನ ಮುಳುಗಿತ್ತು.

    ಬೆಳಗಾವಿ: ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ
    ಬೆಳಗಾವಿಯಲ್ಲಿ ವಿವಿಧ ಬಡಾವಣೆಗಳು ಜಲಾವೃತವಾಗಿದೆ. ನಿರಂತರ ಮಳೆಗೆ ಚರಂಡಿಯಲ್ಲಿ ಕಾಶಪ್ಪ ಶಿರಟ್ಟಿ ಎಂಬಾತ ಕೊಚ್ಚಿ ಹೋಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿರುವ ಚರಂಡಿಗಳಿಂದ ಅವಾಂತರವಾಗಿದೆ. ಜೊತೆಗೆ ಗೋಕಾಕ್ ನಗರದ ರೈಲ್ವೇ ನಿಲ್ದಾಣ ಬಳಿಯೂ ರಸ್ತೆಗಳು ಕೆರೆಯಂತೆ ಹರಿದಿವೆ.

    ಗದಗ: ಹಳ್ಳದ ನೀರಲ್ಲಿ ಕೊಚ್ಚಿಹೋದ ಬೈಕ್ ಸವಾರ
    ಗದಗ ಜಿಲ್ಲೆಯ ಹಲವೆಡೆಯೂ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆನಕೊಪ್ಪ ಗ್ರಾಮದ ಬಳಿ ಹಳ್ಳದಲ್ಲಿ ಬೈಕ್ ಸಮೇತ ಸವಾರ ಕೊಚ್ಚಿ ಹೋಗಿರುವ ಶಂಕೆ ಇದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಆತಂಕ ಮೂಡಿಸಿದೆ.

  • ಬೀದರ್‌ನಲ್ಲಿ ಮಳೆಯ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು

    ಬೀದರ್‌ನಲ್ಲಿ ಮಳೆಯ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು

    ಬೀದರ್: ರಾಜ್ಯದಲ್ಲಿ ಒಂದೆಡೆ ಬರ ಆವರಿಸಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ತಂದೊಡ್ಡಿದೆ. ಆದ್ರೆ ಬೀದರ್‌ (Bidar) ಜಿಲ್ಲೆಯಲ್ಲಿ ಮಳೆಯ (Rain) ಅಬ್ಬರಕ್ಕೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.

    ಗಡಿ‌ ಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಜಿಲ್ಲಾಧಿಕಾರಿ ಕಚೇರಿ ರಸ್ತೆ, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಎಸ್‌ಬಿಐ ಕಚೇರಿ ರಸ್ತೆಗಳು ಸಂಪೂರ್ಣ ಮುಳುಗಡೆಯಾಗಿವೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ಅರೆಬೆತ್ತಲಾಗಿ ಸಹಾಯಕ್ಕೆ ಅಂಗಲಾಚಿದ ಸಂತ್ರಸ್ತೆಗೆ ಬಿಡಿಗಾಸಿನ ನೆರವು – ಬಾಲಕಿ ಯಾತನೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಉಜ್ಜಯಿನಿ ಪೊಲೀಸ್

    ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಾ ಸಂಚಾರ‌‌ ಮಾಡುತ್ತಿದ್ದು, ನಗರದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೈದರಾಬಾದ್‌ ರಸ್ತೆ, ಹಾರಿಗೇರಿ ಕಮಾನ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ರಸ್ತೆ ಪಕ್ಕದಲ್ಲಿ ನಿಂತ್ತಿದ್ದ ಬೈಕ್‌ಗಳು ನೀರಿನಲ್ಲಿ ಮುಳುಗಿಹೋಗಿವೆ. ವರುಣನ ಅಬ್ಬರಕ್ಕೆ ಗಡಿ ಜಿಲ್ಲೆಯ ಜನರು ತತ್ತರಿಸಿದ್ದು ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]