Tag: ಮಸಾಲೆ ಜಯರಾಂ

  • ಲಾಕ್‍ಡೌನ್ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

    ಲಾಕ್‍ಡೌನ್ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

    ತುಮಕೂರು: ಲಾಕ್‍ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

    ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್‍ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

    ಶಾಸಕ ಮಸಾಲೆ ಜಯರಾಂ ಸಾಮಾಜಿಕ ಅಂತರ ಮರೆತು, ಮಾಸ್ಕ್ ಸಹ ಹಾಕಿಕೊಳ್ಳದೇ ಬೇಜವಾಬ್ದಾರಿತನ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಹುಟ್ಟುಹಬ್ಬ ನಿಮಿತ್ತ ಜನರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಹೀಗಾಗಿ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

    ಕೊರೊನಾ ಭೀತಿಯಿಂದ ಲಾಕ್‍ಡೌನ್ ಘೋಷಣೆ ಆಗಿರುವ ಹೊತ್ತಿನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಬಂಡತನ ಪ್ರದರ್ಶನ ತೋರಿಸ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಶಾಸಕ ವಿರುದ್ಧ ನೆಟ್ಟಿಗರು ಹಾಗೂ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ.

  • ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಬಿಜೆಪಿ ಶಾಸಕ

    ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಬಿಜೆಪಿ ಶಾಸಕ

    ತುಮಕೂರು: ಹೇಮಾವತಿ ನೀರಿಗಾಗಿ ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

    ಜಯರಾಂ ಅವರು ತನ್ನ ಕ್ಷೇತ್ರದ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಇಂದು ತುರುವೇಕೆರೆ ತಾಲೂಕಿನ ಅಡವನಹಳ್ಳಿ ಹೇಮಾವತಿ ನಾಲೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಸ್ತುವಾರಿ ಸಚಿವ ಡಿಸಿಎಂ ಡಾ ಜಿ.ಪರಮೇಶ್ವರ್ ಹೇಮಾವತಿ ನೀರು ಹರಿಸಲು ತಾರತಮ್ಯ ಮಾಡಿದ್ದು, ತನ್ನ ಕ್ಷೇತ್ರವನ್ನ ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು.

    ಒಂಭತ್ತು ಕ್ಷೇತ್ರವನ್ನು ಬರಗಾಲ ಎಂದು ಘೋಷಿಸಿದ್ದಾರೆ. ಆದರೆ ನಮ್ಮ ಕ್ಷೇತ್ರವನ್ನು ಘೋಷಣೆ ಮಾಡಿಲ್ಲ. ತಾನು ಬಿಜೆಪಿ ಶಾಸಕ ಎಂದು ತನ್ನ ಕ್ಷೇತ್ರ ಕಡೆಗಣಿಸಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಶಾಸಕರ ಕ್ಷೇತ್ರಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಸಮುದ್ರದ ಪಕ್ಕದಲ್ಲಿದ್ದರೂ ಕುಡಿಯಲು ನೀರು ಸಿಗುತ್ತಿಲ್ಲ ಅಂತಹ ಪರಿಸ್ಥಿತಿ ನನ್ನ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ. ತುರುವೇಕೆರೆ ತಾಲೂಕಿನ ಮೂಲಕ ಅನೇಕ ತಾಲೂಕಿಗೆ ನೀರು ಹರಿಯುತ್ತಿದೆ. ಆದರೆ ನನ್ನ ತಾಲೂಕಿಗೆ ನೀರು ಬರುತ್ತಿಲ್ಲ. ಇಂದು ಇಲ್ಲಿಗೆ ಬಂದಿರುವ ಜನರು ಊಟ ಮಾಡದೇ ಬಂದಿದ್ದಾರೆ. ಅವರ ಕಷ್ಟ ನಮಗೆ ಗೊತ್ತು ಎಂದು ಉಪವಾಸ ಸತ್ಯಾಗ್ರಹ ಆರಂಭಿಸಿ ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಶಾಸಕರು ಕಣ್ಣೀರಿಟ್ಟು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv