Tag: ಮಸಿ

  • ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ ಎಂದು ಲೋಕಸಭೆ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಗುರುವಾರ ಕೆಲವು ಕೆಲ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್‌ ಮಾಡಲಾಗುತ್ತಿದೆ. ಈ ಬಗ್ಗೆ ದೆಹಲಿ ಪೊಲೀಸ್‌ ಅಧಿಕಾರಿಗಳನ್ನು ಕೇಳಿದರೆ ಅವರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಎಂದರು.

     

     

    ಎಕ್ಸ್ ಪೋಸ್ಟ್‌ಗೆ ಗೃಹ ಸಚಿವ ಅಮಿತ್ ಶಾ (Amitshah) ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರನ್ನು ಓವೈಸಿ ಟ್ಯಾಗ್ ಮಾಡಿದ್ದಾರೆ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನಾನು ಹೆದರಲ್ಲ: ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ ಓವೈಸಿ, ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ. ನಾನು ಯಾವುದಕ್ಕೂ ಹೆದರಲ್ಲ ಎಂದು ಸಂಸದರು ಹೇಳಿದ್ದಾರೆ.

    ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.

    ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022 ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.

  • ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

    ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

    ಬೆಂಗಳೂರು: ರಾಜ್ಯಕ್ಕೆ ತೆರಿಗೆ (Tax) ಅನ್ಯಾಯ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕಚೇರಿಗೆ ಮಸಿ ಬಳಿದಿದ್ದಾರೆ.

    ಬೆಂಗಳೂರಿನ (Bengaluru) ಮಿಲ್ಲರ್ಸ್ ರಸ್ತೆಯಲ್ಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ (Office) ಮಸಿ  ಬಳಿಯಲಾಗಿದೆ. ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಕಚೇರಿಯಲ್ಲಿರುವ ನಿರ್ಮಲಾ ಸೀತಾರಾಮನ್ ಅವರ ನಾಮಫಲಕಕ್ಕೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (NSUI) ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಮಸಿ ಬಳಿದ ಹಿನ್ನೆಲೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ

    ವಿಧಾನಸೌಧ ಪೊಲೀಸರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸೂರಜ್, ಲಕ್ಷ್ಯರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

    ಕಾರವಾರ: ಗಡಿಜಿಲ್ಲೆ ಉತ್ತರ ಕನ್ನಡಕ್ಕೂ (Uttara Kannada) ಭಾಷಾ ವಿವಾದದ (Language Controversy) ಕಿಡಿ ಹೊತ್ತಿಕೊಂಡಿದ್ದು, ಕನ್ನಡ ಸಿನಿಮಾ ಪ್ರದರ್ಶನದ ಬದಲು ಮಾರಾಠಿ ಸಿನಿಮಾ (Marathi Cinema) ಪ್ರದರ್ಶನ ಮಾಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಮರಾಠಿ ಪೋಸ್ಟರ್‌ಗಳಿಗೆ ಮಸಿ (Ink) ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾರವಾರ (Karwar) ನಗರದ ಕಾಜುಬಾಗ್‌ನ ಅರ್ಜುನ ಸಿನಿಮಾ ಮಂದಿರದಲ್ಲಿ ಕನ್ನಡ ಸಿನಿಮಾ ಬದಲು ಮರಾಠಿ ಸಿನಿಮಾ ಪ್ರದರ್ಶನ ಮಾಡಲಾಗುತ್ತಿತ್ತು. ಮಾತ್ರವಲ್ಲದೇ ಕನ್ನಡ ಸಿನಿಮಾ ಪೋಸ್ಟರ್‌ಗಳನ್ನು ಕೆಳಭಾಗದಲ್ಲಿ ಹಾಕಿ, ಮೇಲ್ಭಾಗದಲ್ಲಿ ಮರಾಠಿ ಸಿನಿಮಾ ಪೋಸ್ಟರ್ ಅಳವಡಿಸಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ತಂದೆಯ ಆತ್ಮ ವಿಲವಿಲ ಅಂತ ಒದ್ದಾಡುತ್ತಿರಬಹುದು : ಸಿ.ಟಿ.ರವಿ

    ಇದರಿಂದ ಆಕ್ರೋಶಕ್ಕೊಳಗಾದ ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಮರಾಠಿ ಪೋಸ್ಟರ್‌ಗಳನ್ನು ತೆಗೆಸಿ ನಂತರ ಪೋಸ್ಟರ್‌ಗೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಕನ್ನಡ ಸಿನಿಮಾ ಪ್ರದರ್ಶನ ಮಾಡುವಂತೆ ಚಿತ್ರಮಂದಿರದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ಒಬ್ಬ ಕೃತಜ್ಞತೆ ಇಲ್ಲದ ಕೃತಘ್ನ; ಮೆದುಳು, ನಾಲಿಗೆಗೆ ಕಂಟ್ರೋಲ್ ತಪ್ಪಿದೆ: ಕೆ.ಜಿ ಬೋಪಯ್ಯ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸಚಿವರ ಮುಖಕ್ಕೆ ಮಸಿ ಬಳಿದ ಪ್ರಕರಣ – 10 ಪೊಲೀಸರು ಅಮಾನತು

    ಮಹಾರಾಷ್ಟ್ರ ಸಚಿವರ ಮುಖಕ್ಕೆ ಮಸಿ ಬಳಿದ ಪ್ರಕರಣ – 10 ಪೊಲೀಸರು ಅಮಾನತು

    ಮುಂಬೈ: ಮಹಾರಾಷ್ಟ್ರದ ಸಚಿವ (Maharashtra Ministers) ಮತ್ತು ಭಾರತೀಯ ಜನತಾ ಪಕ್ಷದ (BJP) ನಾಯಕ ಚಂದ್ರಕಾಂತ್ ಪಾಟೀಲ್ (Chandrakant Patil) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಮಸಿ ಬಳಿದಿರುವ (Ink Attack) ಘಟನೆಗೆ ಸಂಬಂಧಿಸಿದಂತೆ ಭದ್ರತಾ ಲೋಪದ ಆರೋಪದ ಮೇಲೆ 10 ಪೊಲೀಸ್ ಸಿಬ್ಬಂದಿಯನ್ನು (Police Pfficials) ಅಮಾನತುಗೊಳಿಸಲಾಗಿದೆ.

    ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಜ್ಯೋತಿಬಾ ಪುಲೆ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಕ್ಕಾಗಿ ಶನಿವಾರ ಸಂಜೆ ಪುಣೆಯಲ್ಲಿ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಎರಚಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಈ ಘಟನೆಯ ಬಳಿಕ ಚಂದ್ರಕಾಂತ್ ಪಾಟೀಲ್ ಅವರ ಭದ್ರತೆಗೆ ನಿಯೋಜಿಸಲಾಗಿದ್ದ 10 ಪೊಲೀಸರನ್ನು ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಆಯುಕ್ತ ಅಂಕುಶ್ ಶಿಂಧೆ ಅಮಾನತುಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾವು 7 ಪೊಲೀಸ್ ಸಿಬ್ಬಂದಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ಅವರೆಲ್ಲರೂ ಸಚಿವರ ಭೇಟಿಯ ಸಮಯದಲ್ಲಿ ಅವರ ಭದ್ರತೆಯ ಭಾಗವಾಗಿದ್ದರು ಎಂದು ಅಂಕುಶ್ ಶಿಂಧೆ ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಆಪ್‌ಗೆ ಹಿನ್ನಡೆ – ಬಿಜೆಪಿ ಸಂಪರ್ಕದಲ್ಲಿದ್ದಾರೆ ಐವರು ಶಾಸಕರು

    ಪಾಟೀಲ್ ವಿವಾದಿತ ಹೇಳಿಕೆಯೇನು?
    ಶುಕ್ರವಾರ ಔರಂಗಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವರು ಮಾತನಾಡಿ, ಅಂಬೇಡ್ಕರ್ ಮತ್ತು ಪುಲೆ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸರ್ಕಾರದ ಅನುದಾನವನ್ನು ಕೇಳಲಿಲ್ಲ. ಅವರು ಶಾಲೆ ಮತ್ತು ಕಾಲೇಜುಗಳನ್ನು ಪ್ರಾರಂಭಿಸಲು ಹಣವನ್ನು ಸಂಗ್ರಹಿಸಲು ಜನರಲ್ಲಿ ಭಿಕ್ಷೆ ಕೇಳಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿವಾದವನ್ನು ಎಬ್ಬಿಸಿತು.

    ಪಾಟೀಲ್ ಅವರ ಹೇಳಿಕೆಯ ವಿರುದ್ಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಬಳಿಕ ಚಂದ್ರಕಾಂತ್ ಕ್ಷಮೆಯನ್ನೂ ಯಾಚಿಸಿದ್ದರು. ಇದನ್ನೂ ಓದಿ: ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

    Live Tv
    [brid partner=56869869 player=32851 video=960834 autoplay=true]

  • ಕಳ್ಳತನದ ಆರೋಪ- ವ್ಯಕ್ತಿಗೆ ಮಸಿ ಹಚ್ಚಿ, ತಲೆ ಬೋಳಿಸಿ ಸ್ಥಳೀಯರಿಂದಲೇ ಶಿಕ್ಷೆ

    ಕಳ್ಳತನದ ಆರೋಪ- ವ್ಯಕ್ತಿಗೆ ಮಸಿ ಹಚ್ಚಿ, ತಲೆ ಬೋಳಿಸಿ ಸ್ಥಳೀಯರಿಂದಲೇ ಶಿಕ್ಷೆ

    ಲಕ್ನೋ: ಟಾಯ್ಲೆಟ್ ಸೀಟ್ ಕದ್ದ ಆರೋಪದ ಮೇಲೆ ದಲಿತ ವ್ಯಕ್ತಿಯೊಬ್ಬನನ್ನು (Dalit) ಸ್ಥಳೀಯರೇ ಥಳಿಸಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ ನಡೆದಿದೆ.

    ದಿನಗೂಲಿ ಕೆಲಸ ಮಡುತ್ತಿದ್ದ ರಾಜೇಶ್ ಕುಮಾರ್ ಜಿಲ್ಲೆಯ ಹಾರ್ಡಿ ಪ್ರದೇಶದಲ್ಲಿ ಮನೆಯೊಂದರಲ್ಲಿ ಶೌಚಾಲಯದ ಸೀಟ್ ಕದ್ದಿದ್ದಾನೆ ಎಂದು ಆರೋಪಿಸಿ, ಸ್ಥಳೀಯ ಬಿಜೆಪಿ (BJP) ನಾಯಕ ರಾಧೇಶ್ಯಾಮ್ ಮಿಶ್ರಾ ಹಾಗೂ ಅವರ ಇಬ್ಬರು ಸಹಾಯಕರು ರಾಜೇಶ್ ಕುಮಾರ್‌ನನ್ನು ಕಂಬಕ್ಕೆ ಕಟ್ಟಿ, ಆತನ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದಿದ್ದಾರೆ. ಇದರ ವೀಡಿಯೋ ಸಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

    ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸರು ರಾಧೇಶ್ಯಾಮ್ ಮಿಶ್ರಾನ ಇಬ್ಬರು ಸಹಾಯಕರನ್ನು ಬಂಧಿಸಿದ್ದಾರೆ. ಆದರೆ ಮಿಶ್ರಾ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯ ಬಿಜೆಪಿ ನಾಯಕ ಹಾಗೂ ಬೆಂಬಲಿಗರು ಜಾತಿವಾದಿ ಟೀಕೆಗಳನ್ನು ಮಾಡಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ- ಬೆಂಗಳೂರಿನ ದೇಗುಲಗಳು ಬಂದ್

    ರಾಜೇಶ್ ಕುಮಾರ್ ಮೇಲೆ ಕಳ್ಳತನದ ಆರೋಪ ಹೊರಿಸಿದ್ದು, ಅವರನ್ನು ಪೊಲೀಸರ ಕೈಗೆ ಒಪ್ಪಿಸಬೇಕಿತ್ತು. ಆದರೆ ಸ್ಥಳೀಯರು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದೀಗ ಆರೋಪಿಗಳ ವಿರುದ್ಧ ಹಲ್ಲೆ, ಕ್ರಿಮಿನಲ್ ಬೆದರಿಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ಅಪರಾಧಗಳನ್ನು ಶಿಕ್ಷಿಸಲು ಕಠಿಣ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ಮಸಿ ಬಳಿದ ದುಷ್ಕರ್ಮಿಗಳು!

    ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ಮಸಿ ಬಳಿದ ದುಷ್ಕರ್ಮಿಗಳು!

    ನವದೆಹಲಿ: ರಾಜಸ್ಥಾನದ ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ ಮೇಲೆ ದೆಹಲಿಯ ರಸ್ತೆಯಲ್ಲಿ ಮಸಿ ಬಳಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಂತ್ರಸ್ತೆ ತನ್ನ ತಾಯಿಯೊಂದಿಗೆ ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಶಾಯಿಯ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

    ಕೃತ್ಯ ನಡೆದ ತಕ್ಷಣ ಆಕೆಯನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದುಕೊಂಡು ಹೋಗಲಾಯಿತು. ಮೇಲ್ನೋಟಕ್ಕೆ ದುಷ್ಕರ್ಮಿಗಳು ನೀಲಿ ಬಣ್ಣದ ಶಾಯಿಯನ್ನು ಎರಚಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅದರ ಬಗ್ಗೆ ಕೂಲಂಕಷವಾಗಿ ಪರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು ನಗರಸಭೆ ಕಲುಷಿತ ನೀರಿನಿಂದ ಸರಣಿ ಸಾವು – ಘೋಷಣೆಗೆ ಸೀಮಿತವಾದ ಪರಿಹಾರ

    ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಹಿಳೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಲು ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

    ಹಿನ್ನೆಲೆ ಏನು?
    ಕಳೆದ ವರ್ಷ ಜನವರಿ 8 ರಿಂದ ಈ ವರ್ಷ ಏಪ್ರಿಲ್ 17 ರ ವರೆಗೆ ರಾಜಸ್ಥಾನದ ಸಚಿವ ಮಹೇಶ್ ಜೋಶಿಯ ಪುತ್ರ ರೋಹಿತ್ ಜೋಶಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಮದುವೆಯಾಗುವುದಾಗಿ ಭರವಸೆಯನ್ನೂ ನೀಡಿದ್ದ. ಹಲವು ಬಾರಿ ಅಪಹರಣ ಹಾಗೂ ಬ್ಲ್ಯಾಕ್‌ಮೇಲ್ ಮಾಡಿರುವುದಾಗಿಯೂ ಸಂತ್ರಸ್ತೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ

    ಈ ಬಗ್ಗೆ ದೆಹಲಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ತಿಂಗಳು ಪೊಲೀಸರ ತಂಡ ರೋಹಿತ್ ಜೋಶಿಯನ್ನು ಬಂಧಿಸಲು ಜೈಪುರಕ್ಕೆ ತೆರಳಿತ್ತು. ಆದರೆ ಸಚಿವರ ಪುತ್ರ ತಮ್ಮ ಮನೆಯಲ್ಲಿ ಪತ್ತೆಯಾಗಿರಲಿಲ್ಲ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಸಚಿವರ ಮಗನನ್ನು ಉಳಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

  • ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಭುವನೇಶ್ವರ್: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಎರಚಿದ ಘಟನೆ ಒಡಿಶಾದಲ್ಲಿ ನಡೆದಿದೆ.

    ಒಡಿಶಾದ ಪುರಿಯ ಮಾರ್ಕೆಟ್ ಸ್ಕ್ವೇರ್ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕೇಂದ್ರ ಸಚಿವರು ನಗರದ ಶ್ರೀಮಂದಿರದಲ್ಲಿ ತ್ರಿಮೂರ್ತಿಗಳ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಈ ವೇಳೆ ಪೆಟ್ರೋಲ್, ಡೀಸೆಲ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದನ್ನು ಖಂಡಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯುಐ) ಕಾರ್ಯಕರ್ತರು ಅವರ ವಾಹನಕ್ಕೆ ಕಪ್ಪು ಮಸಿ ಎಸೆದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಈ ಕುರಿತು ಎನ್‍ಎಸ್‍ಯುಐ ಒಡಿಶಾ ಅಧ್ಯಕ್ಷ ಯಾಶೀರ್ ನವಾಜ್ ಮಾತನಾಡಿ, ಪ್ರತಿಯೊಂದು ಕುಟುಂಬವು ಹಣದುಬ್ಬರ ಮತ್ತು ಎಲ್‍ಪಿಜಿ ಸಿಲಿಂಡರ್‌ಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೊಚ್ಚಿಗೆದ್ದಿವೆ. ಕುಟುಂಬ ನಿರ್ವಹಣೆಯ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವಾಗ ಆದಾಯವು ಕುಂಠಿತವಾಗಿದೆ. ಬಿಜೆಪಿ ಇತರ ಸಂಬಂಧವಿಲ್ಲದ ವಿಷಯಗಳ ಮೂಲಕ ಜನಸಾಮಾನ್ಯರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

    ಎನ್‍ಎಸ್‍ಯುಐ ಕಾರ್ಯಕರ್ತರು ಒಡಿಶಾಗೆ ಭೇಟಿ ನೀಡುವ ಯಾವುದೇ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡಿದ್ದಾರೆ. ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ವಿರುದ್ಧ ಪ್ರತಿಭಟಿಸುತ್ತಾರೆ ಎಂದು ಹೇಳಿದರು.

    ಇದಕ್ಕೂ ಮುನ್ನ, ಏರುತ್ತಿರುವ ಹಣದುಬ್ಬರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರ ಮೇಲೆಯೂ ಸಹ ಕಾಂಗ್ರೆಸ್‍ನ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಕಪ್ಪು ಮಸಿ ಎಸೆದು, ಕಪ್ಪು ಬಾವುಟವನ್ನು ಎಸೆದಿದ್ದರು.

  • ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

    ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

    ಬೆಂಗಳೂರು: ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿ ಸ್ವಾಮಿಗೆ ಗುಂಪೊಂದು ಏಕಾಏಕಿ ಮಸಿ ಬಳಿದಿರುವ ಘಟನೆ ನಡೆದಿದೆ.

    ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಪೂಜೆ ಮುಗಿಸಿ ಕಾಳಿ ಸ್ವಾಮಿ ಹೊರಬರುತ್ತಿದ್ದರು. ಈ ವೇಳೆ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ. ಇದನ್ನೂ ಓದಿ: ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಕಾಳಿ ಸ್ವಾಮಿ ಸ್ಪಷ್ಟನೆ
    ಗಂಗಮ್ಮ ದೇವಾಲಯದಲ್ಲಿ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು, ನನಗೆ ಬಹಳ ಖುಷಿಯೂ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು, `ನೀವು ಕುವೆಂಪು ಅವರನ್ನು ಮತ್ತು ಕನ್ನಡಪಡೆಗಳನ್ನು ನಿಂದಿಸಿದ್ದೀರಾ’ ಎಂದು ನನ್ನ ಬಳಿ ಜಗಳ ತೆಗೆದರು. ನಂತರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕುವೆಂಪು ಅವರು ಮತ್ತು ಕನ್ನಡಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ದರೆ ಅದನ್ನು ತೋರಿಸಬೇಕು. ಅದನ್ನು ಬಿಟ್ಟು ಏಕಾಏಕಿ ಕಪ್ಪು ಮಸಿ ಬಳಿದರೆ? ನಾನು ನನ್ನನ್ನು ಕನ್ನಡಿಯಲ್ಲಿ ನೋಡಿಕೊಂಡಾಗ ಬಹಳ ಖುಷಿ ಆಯ್ತು. ನೀವು ಮಸಿ ಬಳಿಯುವ ಮೂಲಕ ಕಾಳಿಯ ರುದ್ರಾವತಾರ ತೋರಿಸಿದ್ದೀರಿ. ಕಾಳಿ ಇರೋದೆ ಕಪ್ಪು, ಅದನ್ನು ನೀವು ನನಗೆ ಹಾಕಿದ್ದೀರಾ ಅಷ್ಟೇ ಎಂದು ಕೃತ್ಯ ಎಸಗಿದವರಿಗೆ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಬಿರುಗಾಳಿ ಎಬ್ಬಿಸಿದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ: ತೆಲಂಗಾಣದಲ್ಲಿ ಟಿಆರ್‌ಎಸ್ ಭರ್ಜರಿ ಪ್ರಚಾರ

    ಇದನ್ನು ನಾನು ಮಸಿ ಎಂದು ತಿಳಿದುಕೊಳ್ಳುತ್ತಿಲ್ಲ. ಇದನ್ನು ಒಂದು ಮೆಟ್ಟಿಲು ಎಂದು ತಿಳಿದುಕೊಳ್ಳುತ್ತೇನೆ. ನಮ್ಮ ಹೋರಾಟದ ದಿಕ್ಕು ವೇಗವಾಗಿ ನುಗ್ಗಿದ್ದರಿಂದ ನಿಮಗೆಲ್ಲ ಆತಂಕವಾಗಿದೆ. ಖುಷಿ ಆಗಿದೆಯಾ ನಿಮಗೆಲ್ಲ? ಮಸಿ ಬಳಿದವರು ಯಾರೋ ಹಿಂದೂಗಳಂತೆ. ಈಗ ಖುಷಿ ಮುಸ್ಲಿಮರಿಗೆ ಅಲ್ವ? ಮಸಿ ಹಾಕಿರೋ ಎಡಚರು ಖುಷಿ ಪಡಬೇಡಿ. ಇದರಿಂದ ನನಗೂ ಖುಷಿ ಆಗಿದೆ. ನೀವು ನನ್ನ ಮೇಲೆ ಮಸಿ ಹಾಕ್ತಿದ್ದೀರಾ ಅಂದರೆ, ನಿಮ್ಮನ್ಮು ನಾನು ತಲುಪಿದ್ದೀನಿ ಎಂದರ್ಥ ಎಂದು ತಿಳಿಸಿದ್ದಾರೆ.

    ಕೈಯಲ್ಲಿ ಆಗದೆ ಮಸಿ ಬಳಿಯುತ್ತೀರಾ? ನಿಮಗೆ ಧಮ್ ಇದ್ರೆ ನಾನು ಕುವೆಂಪು ಅವರನ್ನು, ಕನ್ನಡಪಡೆಗಳನ್ನು ನಿಂದಿಸಿದ್ದನ್ನು ನ್ಯಾಯಾಲಯದಲ್ಲಿ ಸಾಬೀತು ಮಾಡಿ. ನೀವು ಗಂಡಸರಾಗಿದ್ರೆ ಎಂದು ಸವಾಲು ಹಾಕಿದ್ದಾರೆ.

  • ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

    ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

    ಬೆಳಗಾವಿ: ಚಳಿಗಾಲದ ಅಧಿವೇಶನದ ಬೆನ್ನಲ್ಲೇ ನಗರದಲ್ಲಿ ಮಹಾಮೇಳಾವ ನಡೆಸಲು ಯತ್ನಿಸಿದ ಎಂಇಎಸ್‍ಗೆ ಕನ್ನಡ ಕಾರ್ಯಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

    ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕರ್ನಾಟಕ ನವನಿರ್ಮಾಣ ಸೇನೆ ಯುವ ಘಟಕದ ಅಧ್ಯಕ್ಷ ಸಂತಪ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!

    ಘಟನೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿಗೆ ಯತ್ನಿಸಿದರು. ಇದೇ ವೇಳೆ ಪೊಲೀಸರು ಹಾಗೂ ಎಂಇಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

    ಎಂಇಎಸ್ ಮುಖಂಡನ ಮೇಲೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ , ಘಟನೆ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುತ್ತೇವೆ. ಮಸಿ ಬಳಿದ ಯುವಕನನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ.  

  • ಭಗವಾನ್ ಮುಖಕ್ಕೆ ಮಸಿ ಪ್ರಕರಣ- ಮೀರಾಗೆ ಜಾಮೀನು ನೀಡಲು ಮುಂದಾದ ಬಿಜೆಪಿ ಕಾರ್ಯಕರ್ತ

    ಭಗವಾನ್ ಮುಖಕ್ಕೆ ಮಸಿ ಪ್ರಕರಣ- ಮೀರಾಗೆ ಜಾಮೀನು ನೀಡಲು ಮುಂದಾದ ಬಿಜೆಪಿ ಕಾರ್ಯಕರ್ತ

    ಮಂಡ್ಯ: ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಜಾಮೀನು ನೀಡಲು ಬಿಜೆಪಿ ಕಾರ್ಯಕರ್ತರೊಬ್ಬರು ಮುಂದಾಗಿದ್ದಾರೆ.

    ಶಿವಕುಮಾರ್ ಆರಾಧ್ಯ, ಜಾಮೀನು ನೀಡಲು ಮುಂದಾದ ಬಿಜೆಪಿ ಕಾರ್ಯಕರ್ತ. ಪದೇ ಪದೇ ಪ್ರೊ.ಕೆ.ಎಸ್.ಭಗವಾನ್ ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಲೆ ಬರುತ್ತಿದ್ದಾರೆ. ಇದುವರೆಗೂ ಭಗವಾನ್ ಅವರಿಗೆ ಯಾರು ಕೂಡ ತಕ್ಕ ಶಾಸ್ತಿ ಮಾಡಿರಲಿಲ್ಲ. ಇದೀಗ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿಯುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ಶಿವಕುಮಾರ್ ಆರಾಧ್ಯ ಹೇಳಿದ್ದಾರೆ.

    ಭಗವಾನ್‍ಗೆ ಮಸಿ ಬಳಿದಿರುವ ಕಾರಣದಿಂದ ಪೊಲೀಸ್ ಠಾಣೆಯಲ್ಲಿ ಮೀರಾ ರಾಘವೇಂದ್ರ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹೀಗಾಗಿ ನಾನು ಮೀರಾ ರಾಘವೇಂದ್ರ ಅವರಿಗೆ ನನ್ನ ಸ್ವತಃ ಜಮೀನಿನ ಆರ್‍ಟಿಸಿಯನ್ನು ನೀಡುವ ಮೂಲಕ ಜಾಮೀನು ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಹಿಂದೂ ಧರ್ಮವೆಂಬುದೆ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್ 10 ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್ ಕೇಸ್ ಹೂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭಗವಾನ್‍ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.

    ಗುರುವಾರ ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್ ಕೋರ್ಟಿಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಇಷ್ಟು ವಯಸ್ಸು ಆಗಿದೆ. ಇನ್ನು ನಾಚಿಕೆಯಾಗಲ್ವಾ? ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾನಾಡ್ತೀರಾ ಅಂತಾ ಮಸಿ ಬಳಿದು ಮೀರಾ ಅವಾಜ್ ಹಾಕಿದ್ದಾರೆ. ನಾನು ಏನೇ ಬಂದ್ರೂ ಎದುರಿಸಲು ರೆಡಿ ಎಂದು ಮೀರಾ ಹೇಳಿದ್ದರು.

    ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಮೀರಾ ರಾಘವೇಂದ್ರ ಟ್ವೀಟ್ ಮಾಡಿ ವೀಡಿಯೋ ಅಪ್ಲೋಡ್ ಮಾಡಿದ್ದರು.

    ಇತ್ತ ಘಟನೆ ಸಂಬಂಧ ಮೀರಾ ವಿರುದ್ಧ ಸಾಹಿತಿ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‍ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 341(ಅಕ್ರಮವಾಗಿ ತಡೆಯವುದು), 504(ಅವಾಚ್ಯವಾಗಿ ನಿಂದನೆ)ಅಡಿ ಪ್ರಕರಣ ದಾಖಲಾಗಿದೆ.