Tag: ಮಸ್ಕಿ ಜಲಾಶಯ

  • ರಾಯಚೂರಿನಲ್ಲಿ ನಿರಂತರ ಮಳೆ – ಮಸ್ಕಿ ನಾಲಾ ಜಲಾಶಯದಿಂದ ನೀರು ಬಿಡುಗಡೆ

    ರಾಯಚೂರಿನಲ್ಲಿ ನಿರಂತರ ಮಳೆ – ಮಸ್ಕಿ ನಾಲಾ ಜಲಾಶಯದಿಂದ ನೀರು ಬಿಡುಗಡೆ

    ರಾಯಚೂರು: ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಮಸ್ಕಿ ಜಲಾಶಯ ಭರ್ತಿಯಾಗಿದೆ. ಜಲಾನಯನ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಮಸ್ಕಿ ನಾಲಾ ಜಲಾಶಯದಿಂದ ನೀರು ಹೊರಬಿಡಲಾಗಿದೆ.

    ಹಳ್ಳಕ್ಕೆ ಭಾರೀ ಪ್ರಮಾಣದ ನೀರು ಹರಿಸುವ ಸಾಧ್ಯತೆ ಹಿನ್ನೆಲೆ ಸುತ್ತಲಿನ ಗ್ರಾಮಸ್ಥರು ಪ್ರವಾಹದ ಭೀತಿಯಲ್ಲಿದ್ದಾರೆ. ಒಟ್ಟು ಮಸ್ಕಿ ಜಲಾಶಯದ ಮಟ್ಟ 472.12 ಮೀಟರ್‌ ಇದ್ದು, ಈಗ  471.80 ಮೀಟರ್ ನೀರು ಸಂಗ್ರಹವಿದೆ. ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಅಧಿಕಾರಿಗಳು ಮಸ್ಕಿ ಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದು, ಹಳ್ಳದ ಬಳಿ ಸುಳಿಯದಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್‌ ದೆಹಲಿಗೆ ಹೊರಟ ಸಿಎಂ

    Maski Nala Dam

    ರಾಯಚೂರು, ಕೊಪ್ಪಳ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಸಿಂಧನೂರು ತಾಲೂಕಿನ ಚಿರತನಾಳ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳ ತುಂಬಿ ಹರಿಯುತ್ತಿರುವುದರಿಂದ ಹತ್ತಾರು ಹಳ್ಳಿಗಳ ಸಂಪರ್ಕ ಕಡಿತವಾಗಿದೆ. ಗ್ರಾಮದ ಜನ ತುಂಬಿ ಹರಿಯುವ ಹಳ್ಳದಲ್ಲಿಯೇ ತಡೆಗೋಡೆಗೆ ಸಿಲುಕಿದ ಕಸಕಡ್ಡಿ ತೆಗೆದು ನೀರು ಮುಂದೆ ಸರಾಗವಾಗಿ ಹೋಗುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಸ್ತೆಮಾರ್ಗ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

  • ರಾಯಚೂರು ಜಿಲ್ಲೆಯಾದ್ಯಂತ ಉತ್ತಮ ಮಳೆ: ಮಸ್ಕಿ ಜಲಾಶಯದಿಂದ ನೀರು ಬಿಡುಗಡೆ

    ರಾಯಚೂರು ಜಿಲ್ಲೆಯಾದ್ಯಂತ ಉತ್ತಮ ಮಳೆ: ಮಸ್ಕಿ ಜಲಾಶಯದಿಂದ ನೀರು ಬಿಡುಗಡೆ

    ರಾಯಚೂರು: ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿರುವುದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಸ್ಕಿ ಕಿರು ಜಲಾಶಯದಿಂದ 300 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿ ಬಳಿ ಇರುವ ಮಸ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ ಹಿನ್ನೆಲೆ ನೀರು ಹೊರ ಬಿಡಲಾಗುತ್ತಿದೆ.

    0.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ದ ಕಿರು ಜಲಾಶಯ 29 ಅಡಿ ಎತ್ತರವಿದೆ. 7500 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಜಲಾಶಯದ ಎರಡು ಗೇಟ್ ಗಳ ಮೂಲಕ 300 ಕ್ಯೂಸೆಕ್ ನೀರನ್ನ ಬಿಡಲಾಗುತ್ತಿದೆ. ಮಸ್ಕಿ ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಮಸ್ಕಿ ನಾಲಾ ಯೋಜನೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ರಾತ್ರಿಯಿಡೀ ಸುರಿದ ಮಳೆಗೆ ರಾಯಚೂರಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಸಿಯತಲಾಬ್ ನಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿ ತುಂಬಿದ ನೀರು ತೆಗೆಯಲು ನಿವಾಸಿಗಳ ಪರದಾಡ ಬೇಕಾಯಿತು. ತಗ್ಗುಪ್ರದೇಶದ ಜನ ರಾತ್ರಿಯಿಡಿ ನಿದ್ದೆಗೆಟ್ಟು ನೀರು ಹೊರ ಹಾಕಿದ್ದಾರೆ. ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣ ಮುಂದುವರಿದಿದ್ದು, ನಗರದಲ್ಲಿ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ.